ಭಾರತೀಯ ಬ್ಯಾಂಕಿಂಗ್ ವಲಯದಲ್ಲಿ ವೃತ್ತಿಜೀವನವನ್ನು ಪ್ರಾರಂಭಿಸಬೇಕೆಂದು ಕನಸು ಕಾಣುತ್ತಿರುವ ಸಾವಿರಾರು ಉದ್ಯೋಗಾಕಾಂಕ್ಷಿಗಳಿಗೆ ಮುಖ್ಯ ಮಾಹಿತಿ. ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ ದೇಶದ ಪ್ರಮುಖ 11 ಸಾರ್ವಜನಿಕ ವಲಯದ ಬ್ಯಾಂಕ್ ಗಳಲ್ಲಿ ಖಾಲಿ ಇರುವ 6715 ಪ್ರೊಬೆಷನರಿ ಆಫೀಸರ್ ಹಾಗೂ ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
IBPS PO Recruitment 2026
ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ದಿನಾಂಕ 1-07-2026 ರಿಂದ ಆರಂಭ ಗೊಂಡಿದ್ದು 21-07-2026 ಕ್ಕೆ ಕೊನೆಗೊಳ್ಳುತ್ತದೆ.
ಪ್ರೊಬೆಷನರಿ ಆಫೀಸರ್ ಹಾಗೂ ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಕೇಂದ್ರ ಸರ್ಕಾರದ ನಿಯಮಾವಳಿಗಳ ಪ್ರಕಾರ ಅತ್ಯಾಕರ್ಷಕ ವೇತನವನ್ನು ನೀಡಲಾಗುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಪ್ರಸ್ತುತ ಲೇಖನದಲ್ಲಿ ನೀಡಲಾದ ಹುದ್ದೆಗೆ ಸಂಬಂಧಿಸಿದ ಎಲ್ಲ ಮಾಹಿತಿಯನ್ನು ಸಂಪೂರ್ಣವಾಗಿ ಓದಿಕೊಂಡು ನಂತರ IBPS ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ.

ಹುದ್ದೆಯ ವಿವರಣಾತ್ಮಕ ನೋಟ:
| ನೇಮಕಾತಿ ಸಂಸ್ಥೆಯ ಹೆಸರು | ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ |
| ಹುದ್ದೆಗಳ ಹೆಸರು | ಪ್ರೊಬೇಷನರಿ ಆಫೀಸರ್ ಹಾಗೂ ಮ್ಯಾನೇಜ್ಮೆಂಟ್ ಟ್ರೈನಿ |
| ಹುದ್ದೆಗಳ ಸಂಖ್ಯೆ | 6715 ಹುದ್ದೆಗಳು |
| ಅರ್ಜಿ ಸಲ್ಲಿಸುವ ವಿಧಾನ | ಆನ್ಲೈನ್ ಮೂಲಕ |
| ಉದ್ಯೋಗ ಸ್ಥಳ | ಅಖಿಲ ಭಾರತ |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 21-07-2026 |
ಹುದ್ದೆಯ ಸಂಕ್ಷಿಪ್ತ ವಿವರ:
ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ ಪ್ರಸ್ತುತ ನೇಮಾಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ದೇಶದ ವಿವಿಧ ಸಾರ್ವಜನಿಕ ವಲಯಗಳ ಬ್ಯಾಂಕ್ ಗಳಲ್ಲಿ ಖಾಲಿ ಇರುವ ಪ್ರೊಬೇಷನರಿ ಆಫೀಸರ್ ಹಾಗೂ ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳ ವಿವರ ಈ ಕೆಳಕಂಡಂತಿದೆ.
| ವಿವಿಧ ಸಾರ್ವಜನಿಕ ವಲಯಗಳ ಬಾಂಕ್ ಗಳು | ಹುದ್ದೆಗಳ ಸಂಖ್ಯೆ |
| ಪಂಜಾಬ್ ಅಂಡ್ ಸಿಂಧ್ ಬ್ಯಾಂಕ್ | 161 ಹುದ್ದೆಗಳು |
| ಬ್ಯಾಂಕ್ ಆಫ್ ಇಂಡಿಯಾ | 500 ಹುದ್ದೆಗಳು |
| ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ | 500 ಹುದ್ದೆಗಳು |
| ಪಂಜಾಬ್ ನ್ಯಾಷನಲ್ ಬ್ಯಾಂಕ್ | 504 ಹುದ್ದೆಗಳು |
| ಇಂಡಿಯನ್ ಓವರ್ ಸೀಸ್ ಬ್ಯಾಂಕ್ | 550 ಹುದ್ದೆಗಳು |
| ಬ್ಯಾಂಕ್ ಆಫ್ ಮಹಾರಾಷ್ಟ್ರ | 1100 ಹುದ್ದೆಗಳು |
| ಕೆನರಾ ಬ್ಯಾಂಕ್ | 1500 ಹುದ್ದೆಗಳು |
| ಬ್ಯಾಂಕ್ ಆಫ್ ಬರೋಡ | 1900 ಹುದ್ದೆಗಳು |
ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪೂರ್ಣಗೊಳಿಸಿರಬೇಕು ಹಾಗೂ ದಿನಾಂಕ 21-07-2026 ರ ವೇಳೆಗೆ ಅಭ್ಯರ್ಥಿಗಳು ಪದವಿ ಪಾಸ್ ಆಗಿರುವ ಅಂಕಪಟ್ಟಿಯನ್ನು ಹೊಂದಿರಬೇಕು.
ವಯೋಮಿತಿ ವಿವರ:
IBPS ನಿಯಮಾವಳಿಗಳ ಪ್ರಕಾರ, ವಿವಿಧ ಸಾರ್ವಜನಿಕ ವಲಯಗಳ ಬ್ಯಾಂಕ್ ಗಳಲ್ಲಿ ಖಾಲಿ ಇರುವ ಪ್ರೊಬೇಷನರಿ ಆಫೀಸರ್ ಹಾಗೂ ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 20 ವರ್ಷದಿಂದ ಗರಿಷ್ಟ 30 ವರ್ಷ ವಯೋಮಿತಿಯನ್ನು ಹೊಂದಿರಬೇಕು. ಅಂದರೆ ಅಭ್ಯರ್ಥಿಗಳು 2-07-1996 ಕ್ಕಿಂತ ಮುಂಚಿತವಾಗಿ ಹಾಗೂ 1-07-2006 ಕ್ಕಿಂತ ತಡವಾಗಿ ಜನಿಸಿರಬೇಕು.
ವಯೋಮಿತಿ ಸಡಿಲಿಕೆ:
ಸರ್ಕಾರದ ನಿಯಮಾವಳಿಗಳ ಪ್ರಕಾರ, ವಿವಿಧ ವರ್ಗಗಳ ಅಭ್ಯರ್ಥಿಗಳಿಗೆ ಈ ಕೆಳಗೆ ತಿಳಿಸಿರುವಂತೆ ವಯೋಮಿತಿ ಸಡಿಲಿಕೆ ಇರುತ್ತದೆ.
- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ: 5 ವರ್ಷ
- ಒಬಿಸಿ ಅಭ್ಯರ್ಥಿಗಳಿಗೆ: 3 ವರ್ಷ
- PwBDಅಭ್ಯರ್ಥಿಗಳಿಗೆ: 10 ವರ್ಷ
- ಮಾಜಿ ಸೈನಿಕ ಹಾಗೂ ಕಮಿಷನ್ಡ್ ಆಫೀಸರ್ ಗಳಿಗೆ: 5 ವರ್ಷ
ಅರ್ಜಿ ಶುಲ್ಕ:
ವಿವಿಧ ಬ್ಯಾಂಕ್ ಗಳಲ್ಲಿ ಖಾಲಿ ಇರುವ ಪ್ರೊಬೇಷನರಿ ಆಫೀಸರ್ ಹಾಗೂ ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಈ ಕೆಳಗೆ ತಿಳಿಸಿರುವಂತೆ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದ್ದು, ಅಭ್ಯರ್ಥಿಗಳು ತಮ್ಮ ವರ್ಗಕ್ಕೆ ಸಂಬಂಧಿಸಿದ ಅರ್ಜಿ ಶುಲ್ಕವನ್ನು ಆನ್ಲೈನ್ ಪಾವತಿ ವಿಧಾನಗಳಾದ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ಇಂಟರ್ನೆಟ್ ಬ್ಯಾಂಕಿಂಗ್, ಮೊಬೈಲ್ ವಾಲೆಟ್ ಅಥವಾ UPI ಮೂಲಕ ಪಾವತಿಸಬಹುದಾಗಿದೆ.
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ರೂ. 175/- ಅರ್ಜಿ ಶುಲ್ಕವನ್ನು ನೀಡಲಾಗಿದೆ.
- ಇತರೆ ಎಲ್ಲ ವರ್ಗಗಳ ಅಭ್ಯರ್ಥಿಗಳಿಗೆ ರೂ. 850/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ವೇತನ ಶ್ರೇಣಿ:
ವಿವಿಧ ಸಾರ್ವಜನಿಕ ವಲಯಗಳ ಬ್ಯಾಂಕ್ ಗಳಲ್ಲಿ ಖಾಲಿ ಇರುವ ಪ್ರೊಬೇಷನರಿ ಆಫೀಸರ್ ಹಾಗೂ ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 48,480 ರಿಂದ 85,920 ವರೆಗೆ ವೇತನವನ್ನು ನೀಡಲಾಗುತ್ತದೆ. ಹಾಗೂ ಇದರೊಂದಿಗೆ ಆಯಾ ಬ್ಯಾಂಕುಗಳ ನಿಯಮಾವಳಿಗಳ ಪ್ರಕಾರ ಇತರೆ ಭತ್ಯೆಗಳು ಹಾಗೂ ಸೌಲಭ್ಯಗಳು ಸಹ ಲಭ್ಯವಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:
- ಅಭ್ಯರ್ಥಿಗಳು ಐಬಿಪಿಎಸ್ ನ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ.
- ಮುಖಪುಟದಲ್ಲಿ ಕಾಣುವ CRP PO/MT- XVI ಲಿಂಕ್ ಮೇಲೆ ಕ್ಲಿಕ್ ಮಾಡಿ.
- ನಂತರ ಕ್ಲಿಕ್ ಹಿಯರ್ ಟು ನ್ಯೂ ರಿಜಿಸ್ಟ್ರೇಷನ್ ಲಿಂಕ್ ಮೇಲೆ ಕ್ಲಿಕ್ ಮಾಡಿ.
- ನಿಮ್ಮ ಮೂಲ ವಿವಿರಗಳನ್ನು ನಮೂದಿಸಿ ಸುಭ್ಮಿತ್ ಬಟನ್ ಕ್ಲಿಕ್ ಮಾಡಿ ರಜಿಸ್ಟರ್ ನಂಬರ್ ಹಾಗೂ ಪಾಸ್ ವರ್ಡ್ ಬಳಸಿ ಲಾಗಿನ್ ಆಗಿ.
- ಅಪ್ಲಿಕೇಶನ್ ಫಾರ್ಮ್ ನಲ್ಲಿ ಎಲ್ಲ ವೈಯಕ್ತಿಕ ವಿವರ, ಶೈಕ್ಷಣಿಕ ವಿವರಗಳನ್ನು ಹಾಗೂ ಇನ್ನಿತರ ಅಗತ್ಯ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ ಹಾಗೂ 11 ಸಾರ್ವಜನಿಕ ವಲಯಗಳ ಬ್ಯಾಂಕ್ ಗಳಲ್ಲಿ ನಿಮ್ಮ ಮೊದಲ ಆಯ್ಕೆಯ ಬ್ಯಾಂಕುಗಳನ್ನು ಕ್ರಮವಾಗಿ ಆಯ್ಕೆ ಮಾಡಿಕೊಳ್ಳಿ.
- ಅಭ್ಯರ್ಥಿಗಳ ಪಾಸ್ ಪೋರ್ಟ್ ಅಳತೆಯ ಫೋಟೋ ಹಾಗೂ ಕಪ್ಪು ಶಾಹಿಯಲ್ಲಿ ಮಾಡಿದ ಸಹಿಯನ್ನು, ಎಡಗೈ ಹೆಬ್ಬೆರಳಿನ ಗುರುತು, ಕೈ ಬರಹದ ಘೋಷಣಾ ಪತ್ರವನ್ನು ಅಪ್ಲೋಡ್ ಮಾಡಿ.
- ಭರ್ತಿ ಮಾಡಿರುವ ವಿವರಗಳು ಸರಿ ಇದಿಯೇ ಎಂದು ಖಚಿತಪಡಿಸಿಕೊಂಡು ಪೇಮೆಂಟ್ ಆಯ್ಕೆಗೆ ಹೋಗಿ ತಮ್ಮ ವರ್ಗಕ್ಕೆ ಸಂಬಂಧಿಸಿದ ಅರ್ಜಿ ಶುಲ್ಕವನ್ನು ಪಾವತಿಸಿ ನಂತರ ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.
ಆಯ್ಕೆ ಪ್ರಕ್ರಿಯೆ:
- ಪೂರ್ವಭಾವಿ ಪರೀಕ್ಷೆ:
ಮೊದಲ ಹಂತದಲ್ಲಿ ಅಭ್ಯರ್ಥಿಗಳಿಗೆ 100 ಅಂಕಗಳ ವಸ್ತುನಿಷ್ಠ ಆನ್ಲೈನ್ ಪರೀಕ್ಷೆಯನ್ನು ನಡೆಸಲಾಗುತ್ತದೆ. ಈ ಪರೀಕ್ಷೆಯಲ್ಲಿ ಕ್ವಾಂಟಿಟೇಟಿವ್ ಆಪ್ಟಿಟ್ಯೂಟ್, ರೀಸನಿಂಗ್ ಎಬಿಲಿಟಿ ಹಾಗೂ ಇಂಗ್ಲಿಷ್ ಭಾಷೆಗಳ ಕುರಿತು ಪ್ರಶ್ನೆಗಳನ್ನು ಕೇಳಲಾಗುತ್ತದೆ.
- ಮುಖ್ಯ ಪರೀಕ್ಷೆ
ಪೂರ್ವಭಾವಿ ಪರೀಕ್ಷೆಯಲ್ಲಿ ನಿಗದಿತ ಅಂಕಗಳನ್ನು ಗಳಿಸಿ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ ಮುಖ್ಯ ಪರೀಕ್ಷೆಯನ್ನು ನಡೆಸಲಾಗುತ್ತದೆ. ಈ ಹಂತದಲ್ಲಿ ಅಭ್ಯರ್ಥಿಗಳಿಗೆ 200 ಅಂಕಗಳನ್ನು ವಸ್ತುನಿಷ್ಠ ಹಾಗೂ 25 ಅಂಕಗಳ ವಿವರಣಾತ್ಮಕ ಪರೀಕ್ಷೆಯನ್ನು ನಡೆಸಲಾಗುತ್ತದೆ.
- ವ್ಯಕ್ತಿತ್ವ ಪರೀಕ್ಷೆ ಮತ್ತು ಸಂದರ್ಶನ:
ಮುಖ್ಯ ಪರೀಕ್ಷೆಯಲ್ಲಿ ನಿಗದಿತ ಅಂಕಗಳನ್ನು ಗಳಿಸಿ ಅರ್ಹತೆ ಪಡೆದಿರುವ ಅಭ್ಯರ್ಥಿಗಳನ್ನು ವ್ಯಕ್ತಿತ್ವ ಪರೀಕ್ಷೆ ಹಾಗೂ ಸಂದರ್ಶನಕ್ಕೆ ಕರೆಯಲಾಗುತ್ತದೆ. ಅಂತಿಮವಾಗಿ ಮುಖ್ಯ ಪರೀಕ್ಷೆ ಹಾಗೂ ಸಂದರ್ಶನದಲ್ಲಿ ಗಳಿಸಿದ ಅಂಕಗಳ ಅಂಕಗಳ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಪ್ರಮುಖ ದಿನಾಂಕಗಳು:
| ಪ್ರಮುಖ ಈವೆಂಟ್ | ದಿನಾಂಕ |
|---|---|
| ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ | 01-07-2026 |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 21-07-2026 |
| ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ | 21-07-2026 |
| ಆನ್ಲೈನ್ ಪೂರ್ವಭಾವಿ ಪರೀಕ್ಷೆ ನಡೆಯುವ ಸಮಯ | ಆಗಸ್ಟ್ 2026 |
| ಮುಖ್ಯ ಪರೀಕ್ಷೆ ನಡೆಯುವ ಸಮಯ | ಅಕ್ಟೋಬರ್ 2026 |
ಪ್ರಮುಖ ಲಿಂಕುಗಳು:
| ಅಧಿಕೃತ ವೆಬ್ಸೈಟ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ನೇಮಕಾತಿ ಅಧಿಸೂಚನೆ ಪಿಡಿಎಫ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಅಂತಿಮ ತೀರ್ಮಾನ:
ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ ದೇಶದ ವಿವಿಧ ಸಾರ್ವಜನಿಕ ವಲಯಗಳ ಬ್ಯಾಂಕುಗಳಲ್ಲಿ ಖಾಲಿ ಇರುವ ಬರೋಬ್ಬರಿ 6715 ಪ್ರೊಬೇಷನರಿ ಆಫೀಸರ್ ಹಾಗೂ ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಬ್ಯಾಂಕಿಂಗ್ ವಲಯದಲ್ಲಿ ವೃತ್ತಿಜೀವನವನ್ನು ಪ್ರಾರಂಭಿಸಬೇಕೆಂದು ಕನಸು ಕಾಣುತ್ತಿರುವ ಅಭ್ಯರ್ಥಿಗಳಿಗೆ ಇದೊಂದು ಉತ್ತಮ ಅವಕಾಶವಾಗಿದೆ. ಆಸಕ್ತ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಿ.
ಪ್ರಮುಖ ಲಿಂಕುಗಳು:
| Whatsapp Group Link | Click Here |
| Telegram Group Link | Click Here |
| Instagram Link | Click Here |
ಇತರೆ ಪ್ರಮುಖ ಲಿಂಕುಗಳು:
- Zilla Panchayat: ಬೆಳಗಾವಿ ಜಿಲ್ಲಾ ಪಂಚಾಯಿತಿಯಲ್ಲಿ ಸೂಪರ್ವೈಸರ್ ಹಾಗೂ ಮ್ಯಾನೇಜರ್ ಹುದ್ದೆಗಳ ಭರ್ಜರಿ ನೇಮಕಾತಿ! ಜುಲೈ 15 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
- UPSC: ಕೇಂದ್ರ ಲೋಕಸೇವಾ ಆಯೋಗದಲ್ಲಿ ಹುದ್ದೆಗಳ ಭರ್ಜರಿ ನೇಮಕಾತಿ 2026! ಡ್ರಗ್ ಇನ್ಸ್ಪೆಕ್ಟರ್, ಲೀಗಲ್ ಆಫೀಸರ್ ಹುದ್ದೆಗಳು । ಕೊನೆಯ ದಿನಾಂಕ 17-07-2026
- VMC: ವಿಜಯಪುರ ಮಹಾನಗರ ಪಾಲಿಕೆಯಲ್ಲಿ ಸರ್ಕಾರಿ ಉದ್ಯೋಗಾವಕಾಶ! ಯಾವುದೇ ಲಿಖಿತ ಪರೀಕ್ಷೆ ಇಲ್ಲ । ಜುಲೈ 15 ಕೊನೆಯ ದಿನಾಂಕ
- Indian Navy: ₹1.20 ಲಕ್ಷ ವೇತನ! ಭಾರತೀಯ ನೌಕಾಪಡೆಯಲ್ಲಿ SSC ಆಫೀಸರ್ ಹುದ್ದೆಗಳ ನೇಮಕಾತಿ । ಜುಲೈ 27 ಕೊನೆಯ ದಿನಾಂಕ
- NFSU: ರೂ. 90,000 ವೇತನ! ಧಾರವಾಡದ ವಿಧಿವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಭರ್ಜರಿ ನೇಮಕಾತಿ! ಜುಲೈ 9 ಕೊನೆಯ ದಿನಾಂಕ