IFFCO: ₹65,000 ವೇತನ! ಗ್ರಾಜುಯೇಟ್ ಇಂಜಿನಿಯರ್ ಟ್ರೈನಿ ಹುದ್ದೆಗಳ ಭರ್ಜರಿ ನೇಮಕಾತಿ । ಏಪ್ರಿಲ್ 30 ಕೊನೆಯ ದಿನಾಂಕ

ನಮಸ್ಕಾರ ಸ್ನೇಹಿತರೆ, ಭಾರತೀಯ ರೈತರ ರಸಗೊಬ್ಬರ ಸಹಕಾರ ನಿಯಮಿತವು 2025-26 ನೇ ಸಾಲಿನ ನೇಮಕಾತಿ ಅಧಿಸೂಚನೆಯಲ್ಲಿ ಗ್ರಾಜುಯೇಟ್ ಇಂಜಿನಿಯರ್ ಟ್ರೈನಿ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

IFFCO Recruitment in Kannada

ಇಂಜಿನಿಯರಿಂಗ್ ಪದವಿ ಮುಗಿಸಿ ಅತ್ಯಾಕರ್ಷಕ ವೇತನ, ಸ್ಥಿರ ಉದ್ಯೋಗ, ಉಜ್ವಲ ಭವಿಷ್ಯದ ಕನಸ್ಸು ಕಾಣುತ್ತಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶವಾಗಿದೆ. ಗ್ರ್ಯಾಜುಯೆಟ್ ಇಂಜಿನಿಯರ್ ಟ್ರೈನಿ ಹುದ್ದೆಗಳಿಗೆ ಒಂದು ವರ್ಷದ ಅವಧಿಗೆ ಅಭ್ಯರ್ಥಿಗಳನ್ನು ನೇಮಕಮಾಡಿಕೊಳ್ಳಲಾಗುತ್ತದೆ.

ಈ ಹುದ್ದೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಈಗಾಗಲೇ ಆರಂಭಗೊಂಡಿದ್ದು, ಅರ್ಜಿ ಸಲ್ಲಿಸಲು ಏಪ್ರಿಲ್ 30 ಕೊನೆಯ ದಿನಾಂಕವಾಗಿದೆ. ಪ್ರಸ್ತುತ ಈ ಒಂದು ಲೇಖನದಲ್ಲಿ, ನೇಮಕಾತಿಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ, ವಯೋಮಿತಿ ವಿವರ, ವೇತನ ಶ್ರೇಣಿ, ಹಾಗೂ ಇನ್ನಿತರ ಸಂಪೂರ್ಣ ಮಾಹಿತಿಯನ್ನು ಪ್ರಸ್ತುತ ಈ ಒಂದು ಲೇಖನದ ಮೂಲಕ ತಿಳಿದುಕೊಳ್ಳಬಹುದಾಗಿದೆ.

IFFCO

ಹುದ್ದೆಯ ವಿವರಣಾತ್ಮಕ ನೋಟ:

ನೇಮಕಾತಿ ಸಂಸ್ಥೆಗಳ ಹೆಸರು ಭಾರತೀಯ ರೈತರ ರಸಗೊಬ್ಬರ ಸಹಕಾರ ನಿಯಮಿತ
ಹುದ್ದೆಗಳ ಹೆಸರು ಗ್ರ್ಯಾಜುಯೆಟ್ ಇಂಜಿನಿಯರ್ ಟ್ರೈನಿ
ಹುದ್ದೆಗಳ ಸಂಖ್ಯೆ ವಿವಿಧ ಹುದ್ದೆಗಳು
ಉದ್ಯೋಗ ಸ್ಥಳ ಅಖಿಲ ಭಾರತ
ನೇಮಕಾತಿ ವಿಧಾನ ಆನ್ಲೈನ್

ಹುದ್ದೆಯ ವಿವರ:

ಭಾರತೀಯ ರೈತರ ರಸಗೊಬ್ಬರ ಸಹಕಾರ ನಿಯಮಿತ ವಿವಿಧ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದ್ದು, ಅವುಗಳ ವಿವರ ಈ ಕೆಳಕಂಡಂತಿದೆ.

  • ನಾಗರೀಕ ಇಂಜಿನಿಯರಿಂಗ್
  • ರಾಸಾಯನಿಕ ಇಂಜಿನಿಯರಿಂಗ್
  • ವಿದ್ಯುತ್ ಇಂಜಿನಿಯರಿಂಗ್
  • ಯಾಂತ್ರಿಕ ಇಂಜಿನಿಯರಿಂಗ್
  • ಇನ್ಸ್ಟ್ರುಮೆಂಟೇಶನ್ ಮತ್ತು ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್
  • ಕೃತಕ ಬುದ್ದಿಮತ್ತೆ
  • ಮಾಹಿತಿ ತಂತ್ರಜ್ಞಾನ
  • ಕಂಪ್ಯೂಟರ್ ವಿಜ್ಞಾನ

ಶೈಕ್ಷಣಿಕ ಅರ್ಹತೆ:

  • ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಅಥವಾ ಶಿಕ್ಷಣ ಸಂಸ್ಥೆಯಲ್ಲಿ ಇಂಜಿನಿಯರ್ ಅಥವಾ ಬಿ.ಟೆಕ್ ಪದವಿ ಹೊಂದಿರಬೇಕು.
  • ಶೈಕ್ಷಣಿಕ ವರ್ಷಗಳ ಮಾನದಂಡಗಳ ಪ್ರಕಾರ, 2023 ರಲ್ಲಿ ಅಥವಾ ನಂತರ ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
  • ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭ್ಯರ್ಥಿಗಳು ಇಂಜಿನಿಯರಿಂಗ್ ನಲ್ಲಿ ಕನಿಷ್ಠ 55% ಅಂಕವನ್ನು ಗಳಿಸಿರಬೇಕು ಹಾಗೂ ಸಾಮಾನ್ಯ ಹಾಗೂ ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು 60% ಅಂಕವನ್ನು ಗಳಿಸಿರಬೇಕು.

ವಯೋಮಿತಿ ವಿವರ:

ಏಪ್ರಿಲ್ 30, 2026 ಕ್ಕೆ ಅನ್ವಯವಾಗುವಂತೆ ಅಭ್ಯರ್ಥಿಗಳ ವಯೋಮಿತಿಯನ್ನು ಲೆಕ್ಕ ಹಾಕಲಾಗುತ್ತದೆ.

  • ಗ್ರ್ಯಾಜುಯೆಟ್ ಇಂಜಿನಿಯರ್ ಟ್ರೈನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಟ 30 ವರ್ಷ ವಯೋಮಿತಿಯನ್ನು ಹೊಂದಿರಬೇಕು.

ವಯೋಮಿತಿ ಸಡಿಲಿಕೆ ವಿವರ:

  • ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ – 3 ವರ್ಷ
  • ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭ್ಯರ್ಥಿಗಳಿಗೆ – 5 ವರ್ಷ

ಅರ್ಜಿ ಶುಲ್ಕ:

ಭಾರತೀಯ ರೈತರ ರಸಗೊಬ್ಬರ ಸಹಕಾರ ನಿಯಮಿತ ಗ್ರ್ಯಾಜುಯೆಟ್ ಇಂಜಿನಿಯರ್ ಟ್ರೈನಿ ಹುದ್ದೆಗಳಿಗೆ ಸಂಬಂಧಿಸಿದಂತೆ ಹೊರಡಿಸಿದ ನೇಮಕಾತಿ ಅಧಿಸೂಚನೆಯಲ್ಲಿ ಯಾವುದೇ ಅರ್ಜಿ ಶುಲ್ಕದ ಬಗ್ಗೆ ನಿಗದಿಪಡಿಸಿಲ್ಲ. ಹಾಗಾಗಿ ಯಾವುದೇ ವರ್ಗಗಳ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿಸದೆ ಉಚಿತವಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ವೇತನ ಶ್ರೇಣಿ:

ಗ್ರ್ಯಾಜುಯೆಟ್ ಇಂಜಿನಿಯರ್ ಟ್ರೈನಿ ಹುದ್ದೆಯು ಒಂದು ವರ್ಷದ ತರಬೇತಿ ಅವಧಿಗೆ ಮಾತ್ರ ಸೀಮಿತವಾಗಿದ್ದು, ಈ ಒಂದು ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಒಂದು ವರ್ಷದ ಅವಧಿಯಲ್ಲಿ ಪ್ರತಿ ತಿಂಗಳು ರೂ. 65,000/- ವರೆಗೆ ಅತ್ಯಾಕರ್ಷಕ ಸ್ಟೈಫಂಡ್ ನೀಡಲಾಗುತ್ತದೆ.

ಇವುಗಳ ಜೊತೆಗೆ, ಮನೆ ಬಾಡಿಗೆಯ ಭತ್ಯೆ, ವಾಷಿಂಗ್ ಅಲೋವನ್ಸ್, PF ಸೇರಿದಂತೆ ಇನ್ನಿತರ ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ. ಈ ಒಂದು ವರ್ಷದ ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಅಭ್ಯರ್ಥಿಗಳನ್ನು ಸಂಸ್ಥೆಯ ನಿಯಮಗಳ ಪ್ರಕಾರ ಖಾಯಂ ಹುದ್ದೆಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:

  • ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಮೊದಲು ಭಾರತೀಯ ರೈತ ರಸಗೊಬ್ಬರ ಸಹಕಾರ ನಿಯಮಿತದ ಅಧಿಕೃತ ವೆಬ್ಸೈಟ್ ಗೆ ಭೇಟಿ.
  • ಅಲ್ಲಿ ಕಾಣುವ ಗ್ರ್ಯಾಜುಯೆಟ್ ಇಂಜಿನಿಯರ್ ಟ್ರೈನಿ ನೇಮಕಾತಿ ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ನಿಮ್ಮ ಇಮೇಲ್ ಐಡಿ ಹಾಗೂ ಮೊಬೈಲ್ ನಂಬರ್ ಬಳಸಿ ರಿಜಿಸ್ಟ್ರೇಷನ್ ಪ್ರಕ್ರಿಯೆ ಪೂರ್ಣಗೊಳಿಸಿ.
  • ರಿಜಿಸ್ಟ್ರೇಷನ್ ಪ್ರಕ್ರಿಯೆ ಪೂರ್ಣಗೊಂಡ ನಂತರ ರಿಜಿಸ್ಟ್ರೇಷನ್ ನಂಬರ್ ಹಾಗೂ ಪಾಸ್ ವರ್ಡ್ ಬಳಸಿ ಲಾಗಿನ್ ಆಗಿ.
  • ಅಲ್ಲಿ ಕೇಳಲಾದ ಎಲ್ಲಾ ವೈಯಕ್ತಿಕ ವಿವರಗಳು ಹಾಗೂ ಶೈಕ್ಷಣಿಕ ವಿವರಗಳು ಹಾಗೂ ಇನ್ನಿತರ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ.
  • ಶೈಕ್ಷಣಿಕ ಪ್ರಮಾಣಪತ್ರ, ವಯಸ್ಸಿನ ಪುರಾವೆ, ಪಾಸ್ಪೋರ್ಟ್ ಅಳತೆಯ ಫೋಟೋ, ಅಭ್ಯರ್ಥಿಗಳ ಸಹಿ, ಹಾಗೂ ಇನ್ನಿತರ ಅಗತ್ಯ ದಾಖಲೆಗಳನ್ನು ನಿಗದಿತ ಸೈಜ್ ಗಳಲ್ಲಿ ಅಪ್ಲೋಡ್ ಮಾಡಿ.
  • ಎಲ್ಲ ವಿವರಗಳು ಸರಿ ಇದೆಯೇ ಎಂದು ಪರಿಶೀಲಿಸಿ ನಂತರ ಸಬ್ಮೀಟ್ ಬಟನ್ ಅನ್ನು ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.

ಆಯ್ಕೆ ಪ್ರಕ್ರಿಯೆ:

  • ಪೂರ್ವಭಾವಿ ಆನ್ಲೈನ್ ಪರೀಕ್ಷೆ

ಅಭ್ಯರ್ಥಿಗಳಿಗೆ ಮೊದಲ ಹಂತದಲ್ಲಿ ಪೂರ್ವಭಾವಿ ಕಂಪ್ಯೂಟರ್ ಆಧಾರಿತ ಆನ್ಲೈನ್ ಪರೀಕ್ಷೆಯನ್ನು ನಡೆಸಲಾಗುತ್ತದೆ. ಅಭ್ಯರ್ಥಿಗಳು ತಮ್ಮದೇ ಮೊಬೈಲ್ ಫೋನ್ ಅಥವಾ ಲ್ಯಾಪ್ಟಾಪ್ ಬಳಸಿ ಪರಿಕ್ಷೆಯನ್ನು ಎದುರಿಸಬಹುದಾಗಿದೆ.

  • ಅಂತಿಮ ಆನ್ಲೈನ್ ಪರೀಕ್ಷೆ

ಪೂರ್ವಭಾವಿ ಪರೀಕ್ಷೆಯಲ್ಲಿ ನಿಗದಿತ ಅಂಕಗಳನ್ನು ಗಳಿಸಿ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳನ್ನು ಈ ಒಂದು ಪರೀಕ್ಷೆಗೆ ಕರೆಯಲಾಗುತ್ತದೆ. ಈ ಪರೀಕ್ಷೆಯನ್ನು ಭಾರತೀಯ ರೈತರ ರಸಗೊಬ್ಬರ ಸಹಕಾರ ನಿಯಮಿತ ನಿಗದಿಪಡಿಸಿದ ನಿರ್ದಿಷ್ಟ ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗುತ್ತದೆ.

  • ವೈಯಕ್ತಿಕ ಸಂದರ್ಶನ

ಅಂತಿಮ ಆನ್ಲೈನ್ ಪರೀಕ್ಷೆಯಲ್ಲಿ ಅಭ್ಯರ್ಥಿಗಳ ಕಾರ್ಯಕ್ಷಮತೆಗೆ ಅನುಗುಣವಾಗಿ ಶಾರ್ಟ್ ಲಿಸ್ಟ್ ಗಳನ್ನು ಸಿದ್ದಪಡಿಸಿ, ಶಾರ್ಟ್ ಲಿಸ್ಟ್ ನಲ್ಲಿ ಆಯ್ಕೆಯಾದ ಅಭ್ಯರ್ಥಿಗಳನ್ನು ವೈಯಕ್ತಿಕ ಸಂದರ್ಶನಕ್ಕೆ ಕರೆಯಲಾಗುತ್ತದೆ.

  • ವೈದ್ಯಕೀಯ ಪರೀಕ್ಷೆ

ವೈಯಕ್ತಿಕ ಸಂದರ್ಶನದದಲ್ಲಿ ಅಭ್ಯರ್ಥಿಗಳ ಭಾಗವಿಸುವಿಕೆಗೆ ಅನುಗುಣವಾಗಿ ಶಾರ್ಟ್ ಲಿಸ್ಟ್ ಸಿದ್ಧಪಡಿಸಿ, ಅಭ್ಯರ್ಥಿಗಳನ್ನು ಅಂತಿಮವಾಗಿ ಆಯ್ಕೆ ಮಾಡುವ ಮೊದಲು IFFCO ಸಂಸ್ಥೆಯ ವೈದ್ಯಕೀಯ ಮಾನದಂಡಗಳ ಪ್ರಕಾರ ತಪಾಸಣೆಗೆ ಒಳಗಾಗುವುದು ಕಡ್ಡಾಯವಾಗಿದೆ.

ಪ್ರಮುಖ ದಿನಾಂಕಗಳು:

ಪ್ರಮುಖ ಈವೆಂಟ್ ದಿನಾಂಕ
ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ ಈಗಾಗಲೇ ಆರಂಭಗೊಂಡಿದೆ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30-04-2026

ಪ್ರಮುಖ ಲಿಂಕುಗಳು:

ಅಧಿಕೃತ ವೆಬ್‌ಸೈಟ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಅಧಿಸೂಚನೆ ಪಿಡಿಎಫ್ ಲಿಂಕ್ ಇಲ್ಲಿ ಕ್ಲಿಕ್ ಮಾಡಿ
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ

ಅಂತಿಮ ಮಾತು:

ಭಾರತೀಯ ರೈತ ರಸಗೊಬ್ಬರ ಸಹಕಾರ ನಿಯಮಿತ ವಿವಿಧ ಗ್ರ್ಯಾಜುಯೆಟ್ ಇಂಜಿನಿಯರ್ ಟ್ರೈನಿ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದ್ದು, ಇಂಜಿನಿಯರಿಂಗ್ ಪದವಿ ಮುಗಿಸಿ ವೃತ್ತಿಜೀವನವನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಒಂದು ವರ್ಷಗಳ ವೃತ್ತಿಪರ ತರಬೇತಿಯನ್ನು ಪಡೆದುಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ.


ಇತರೆ ಪ್ರಮುಖ ಲಿಂಕುಗಳು:

Leave a Comment