IIMB: ರೂ. 14.72 ಲಕ್ಷ ವಾರ್ಷಿಕ ವೇತನ! ಅಸಿಸ್ಟೆಂಟ್ ಲೈಬ್ರರಿಯನ್ ಹುದ್ದೆಗಳ ಬೃಹತ್ ನೇಮಕಾತಿ 2026 | ಜೂನ್ 10 ಕೊನೆಯ ದಿನಾಂಕ

ದೇಶದ ಪ್ರತಿಷ್ಠಿತ ಮ್ಯಾನೇಜ್ಮೆಂಟ್ ಸಂಸ್ಥೆಗಳಲ್ಲಿ ಒಂದಾದ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು ತಮ್ಮ ಆಡಳಿತ ವಿಭಾಗವನ್ನು ಬಲಪಡಿಸುವ ಉದ್ದೇಶದಿಂದ, ಇಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ.


IIMB Recruitment 2026

ಇಲ್ಲಿ ಅಸಿಸ್ಟೆಂಟ್ ಲೈಬ್ರರಿಯನ್ ಹುದ್ದೆಗಳು ಖಾಲಿಯಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಅತ್ಯಾಕರ್ಷಕ ವೇತನವನ್ನು ನೀಡಲಾಗುತ್ತದೆ. ಲೈಬ್ರರಿ ಸೈನ್ಸ್ ಕ್ಷೇತ್ರದಲ್ಲಿ ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಬಯಸುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶವಾಗಿದೆ.

ಅಸಿಸ್ಟೆಂಟ್ ಲೈಬ್ರರಿಯನ್ ಹುದ್ದೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಈಗಾಗಲೇ ಆರಂಭಗೊಂಡಿದ್ದು, ಅರ್ಜಿ ಸಲ್ಲಿಸಲು ಜೂನ್ 10 ಕೊನೆಯ ದಿನಾಂಕವಾಗಿರುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಇಲ್ಲಿ ಖಾಲಿಯಿರುವ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಈ ಹುದ್ದೆಗೆ ಅರ್ಜಿ ಸಲ್ಲಿಸುವುದು ಹೇಗೆ? ಅರ್ಜಿ ಸಲ್ಲಿಸಲು ಅಗತ್ಯವಾದ ದಾಖಲೆಗಳು ಯಾವುವು? ಅಭ್ಯರ್ಥಿಗಳು ಹೊಂದಿರುವ ಶೈಕ್ಷಣಿಕ ಅರ್ಹತೆಗಳೇನು? ಹಾಗೂ ಇನ್ನಿತರ ಮಾಹಿತಿಯನ್ನು ಪ್ರಸ್ತುತ ಲೇಖನದಲ್ಲಿ ತಿಳಿದುಕೊಳ್ಳಬಹುದಾಗಿದೆ.

IIMB

ಹುದ್ದೆಯ ಕಿರು ವಿಮರ್ಶೆ:

ನೇಮಕಾತಿ ಸಂಸ್ಥೆಯ ಹೆಸರು ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್, ಬೆಂಗಳೂರು
ಹುದ್ದೆಗಳ ಹೆಸರು ಅಸಿಸ್ಟೆಂಟ್ ಲೈಬ್ರರಿಯನ್
ಹುದ್ದೆಗಳ ಸಂಖ್ಯೆ ವಿವಿಧ ಹುದ್ದೆಗಳು
ಉದ್ಯೋಗ ಸ್ಥಳ ಬೆಂಗಳೂರು
ಅರ್ಜಿ ಸಲ್ಲಿಸುವ ವಿಧಾನ ಆನ್ಲೈನ್ ಮೂಲಕ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 11-06-2026

ಹುದ್ದೆಯ ಸಂಕ್ಷಿಪ್ತ ಮಾಹಿತಿ:

ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್, ಬೆಂಗಳೂರು ಪ್ರಸ್ತುತ ನೇಮಕಾತಿಯ ಅಧಿಸೂಚನೆಯಲ್ಲಿ ಅಸಿಸ್ಟೆಂಟ್ ಲೈಬ್ರರಿಯನ್ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಯಾವುದೇ ವಿಷಯದಲ್ಲಿ ಪದವಿ ಪಡೆದಿರುವ ಹಾಗೂ ಲೈಬ್ರರಿ ಸೈನ್ಸ್, ಇನ್ಫರ್ಮೇಷನ್ ಸೈನ್ಸ್ ಹಾಗೂ ಡಾಕ್ಯುಮೆಂಟೇಶನ್ ವಿಷಯದಲ್ಲಿ ನಿರ್ದಿಷ್ಟ ಅಂಕಗಳೊಂದಿಗೆ ಸ್ನಾತಕೋತ್ತರ ಪದವಿ ಪಡೆದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಯ ವಿವರ:

ಈ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಸಂಸ್ಥೆಯಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಲೈಬ್ರರಿಯನ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಕಾಂಟ್ರಾಕ್ಟ್ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತದೆ. ಅಂದರೆ 3 ವರ್ಷಗಳ ಅವಧಿಗೆ ನೇಮಕ ಮಾಡಿಕೊಳ್ಳಲಾಗುತ್ತದೆ. ಅವರ ಕಾರ್ಯಕ್ಷಮತೆ ಆಧಾರದ ಮೇಲೆ ಅವಧಿಯನ್ನು ವಿಸ್ತರಿಸಲಾಗುತ್ತದೆ.

ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ:

ಅಸಿಸ್ಟೆಂಟ್ ಲೈಬ್ರರಿಯನ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಕೆಳಗೆ ತಿಳಿಸಲಾದ ಶೈಕ್ಷಣಿಕ ಅರ್ಹತೆ ಹಾಗೂ ಅನುಭವವನ್ನು ಹೊಂದಿರಬೇಕು.

  • ಹುದ್ದೆಗೆ ಅರ್ಜಿ ಸಲ್ಲಿಸವ ಅಭ್ಯರ್ಥಿಗಳು ಯಾವುದೇ ವಿಷಯದಲ್ಲಿ ಪದವಿಯನ್ನು ಪೂರ್ಣಗೊಳಿಸಿರಬೇಕು ಹಾಗೂ ಲೈಬ್ರರಿ ಸೈನ್ಸ್, ಇನ್ಫರ್ಮೇಷನ್ ಸೈನ್ಸ್, ಡಾಕ್ಯುಮೆಂಟೇಶನ್ ವಿಷಯದಲ್ಲಿ ಕನಿಷ್ಠ 55% ಅಂಕಗಳೊಂದಿಗೆ ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕಾಗುತ್ತದೆ.
  • ಜೊತೆಗೆ ಸಂಬಂಧಿತ ವಿಷಯದಲ್ಲಿ ಪಿಹೆಚ್.ಡಿ ಪದವಿಯನ್ನು ಹೊಂದಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.
  • ಅಭ್ಯರ್ಥಿಗಳು ಯುಜಿಸಿ ನಡೆಸುವ ರಾಷ್ಟೀಯ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಆದರೆ Ph.D ಪದವಿ ಪಡೆದಿರುವ ಅಭ್ಯರ್ಥಿಗಳಿಗೆ ರಾಷ್ಟೀಯ ಅರ್ಹತಾ ಪರೀಕ್ಷೆಯಲ್ಲಿ ವಿನಾಯಿತಿ ನೀಡಲಾಗುತ್ತದೆ.

ಅನುಭವ:

  • ಅಭ್ಯರ್ಥಿಗಳು ಕನಿಷ್ಠ 10 ವರ್ಷಗಳ ವೃತ್ತಿಪರ ಅನುಭವವನ್ನು ಹೊಂದಿರಬೇಕು. ಇದರಲ್ಲಿ ಐದು ವರ್ಷಗಳ ಕಾಲ ಸೀನಿಯರ್ ಪ್ರೊಫೆಷನಲ್ ಅಸಿಸ್ಟೆಂಟ್ ಹಾಗೂ ಇನ್ನಿ ಐದು ವರ್ಷಗಳ ಕಾಲ ಜೂನಿಯರ್ ಪ್ರೊಫೆಷನಲ್ ಅಸಿಸ್ಟೆಂಟ್ ಆಗಿ ಕಾರ್ಯ ನಿರ್ವಹಿಸಿದ ಅನುಭವವನ್ನು ಹೊಂದಿರಬೇಕು.

ವಯೋಮಿತಿ ವಿವರ:

ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು ಸಂಸ್ಥೆಗಳ ನಿಯಮಾವಳಿಗಳ ಪ್ರಕಾರ, ಅಸಿಸ್ಟೆಂಟ್ ಲೈಬ್ರರಿಯನ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವಯೋಮಿತಿಯನ್ನು ನಿಗದಿಪಡಿಸಲಾಗುತ್ತದೆ.

ವಯೋಮಿತಿ ಸಡಿಲಿಕೆ:

ಸರ್ಕಾರದ ನಿಯಮಗಳ ಪ್ರಕಾರ ಹಾಗೂ ಸಂಸ್ಥೆಯ ನಿಯಮಾವಳಿಗಳ ಪ್ರಕಾರ ಮೀಸಲಾತಿ ವರ್ಗಗಳ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗುತ್ತದೆ. ಇವುಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ನೇಮಕಾತಿ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಳ್ಳಿ.

ಅರ್ಜಿ ಶುಲ್ಕ:

ಅಸಿಸ್ಟೆಂಟ್ ಲೈಬ್ರರಿಯನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಗಳ ಪ್ರಕಾರ ಅರ್ಜಿ ಶುಲ್ಕವನ್ನು ನಿಗದಿಪಡಿಸಿದ್ದು, ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಂಡು ನಿಮ್ಮ ವರ್ಗಕ್ಕೆ ಸಂಬಂಧಿಸಿದ ಅರ್ಜಿ ಶುಲ್ಕವನ್ನು ಪಾವತಿಸಿ.

ವೇತನ ಶ್ರೇಣಿ:

ಅಸಿಸ್ಟೆಂಟ್ ಲೈಬ್ರರಿಯನ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಸಂಸ್ಥೆಯ ನಿಯಮಾವಳಿಗಳ ಅತ್ಯಾಕರ್ಷಕ ವೇತನವನ್ನು ನೀಡಲಾಗುತ್ತದೆ. ಅರ್ಹ ಅಭ್ಯರ್ಥಿಗಳಿಗೆ ವಾರ್ಷಿಕ ಅಂದಾಜು ರೂ. 14.72 ಲಕ್ಷ ವೇತನವನ್ನು ನೀಡಲಾಗುತ್ತದೆ. ಇವುಗಳ ಜೊತೆಗೆ ಸಂಸ್ಥೆಯ ನಿಯಮಾವಳಿಗಳ ಪ್ರಕಾರ ಇತರೆ ಭತ್ಯೆಗಳನ್ನು ಸಹ ನೀಡಲಾಗುತ್ತದೆ.

ಅಗತ್ಯ ದಾಖಲೆಗಳು:

  • 10 ನೇ ತರಗತಿ ಅಂಕಪಟ್ಟಿ
  • 12 ನೇ ತರಗತಿ ಅಂಕಪಟ್ಟಿ
  • ಪದವಿ ಪ್ರಮಾಣಪತ್ರ
  • ಸ್ನಾತಕೋತ್ತರ ಪದವಿ ಪ್ರಮಾಣಪತ್ರ
  • ಅನುಭವ ಪ್ರಮಾಣಪತ್ರ
  • ಕೊನೆಯ ಮೂರು ತಿಂಗಳ ವೇತನ ಚೀಟಿ
  • ಹಾಗೂ ಇನ್ನಿತರ ಅಗತ್ಯ ದಾಖಲೆಗಳು

ಅರ್ಜಿ ಸಲ್ಲಿಸುವ ವಿಧಾನ:

  • ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು IIMB ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ, ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಳ್ಳಿ.
  • ನಂತರ ಹುದ್ದೆಗೆ ಸಂಬಂಧಿಸಿದ ಅಫ್ಲಿಕೇಷನ್ ಫಾರ್ಮ್ ನಲ್ಲಿ ಶೈಕ್ಷಣಿಕ ವಿವರ, ವಯೋಮಿತಿ ವಿವರ, ಹಾಗೂ ಇನ್ನಿತರ ಅಗತ್ಯ ವಿವರಗಳನ್ನು ಭರ್ತಿ ಮಾಡಿ.
  • ನಂತರ ಅಭ್ಯರ್ಥಿಗಳ ಆಧಾರ್ ಕಾರ್ಡ್, ಶೈಕ್ಷಣಿಕ ಪ್ರಮಾಣಪತ್ರ, ಅಭ್ಯರ್ಥಿಗಳ ಸಹಿ, ಇತ್ತೀಚಿನ ಪಾಸ್ ಪೋರ್ಟ್ ಅಳತೆಯ ಫೋಟೋ ಸೇರಿದಂತೆ ಇನ್ನಿತರ ಎಲ್ಲಾ ದಾಖಲೆಗಳನ್ನು ಅಪ್ಲೋಡ್ ಮಾಡಿ.
  • ಭರ್ತಿ ಮಾಡಿರುವ ಎಲ್ಲಾ ವಿವರಗಳು ಸರಿ ಇದೆಯೇ ಎಂದು ಖಚಿತಪಡಿಸಿಕೊಂಡು ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.

ಆಯ್ಕೆ ಪ್ರಕ್ರಿಯೆ:

  • ಶಾರ್ಟ್ ಲಿಸ್ಟ್

ಅಭ್ಯರ್ಥಿಗಳು ಹೊಂದಿರುವ ಶೈಕ್ಷಣಿಕ ಅರ್ಹತೆ ಹಾಗೂ ಅನುಭವಗಳ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಅನ್ನು ಸಿದ್ಧಪಡಿಸಲಾಗುತ್ತದೆ.

  • ಸಂದರ್ಶನ:

ಶಾರ್ಟ್ ಲಿಸ್ಟ್ ನಲ್ಲಿ ಆಯ್ಕೆಯಾದ ಅಭ್ಯರ್ಥಿಗಳನ್ನು ಮಾತ್ರ ಸಂದರ್ಶನಕ್ಕೆ ಕರೆಯಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಇಮೇಲ್ ಮೂಲಕ ಮಾಹಿತಿಯನ್ನು ನೀಡಲಾಗುತ್ತದೆ.

ಪ್ರಮುಖ ದಿನಾಂಕಗಳು:

ಪ್ರಮುಖ ಈವೆಂಟ್ ದಿನಾಂಕ
ನೇಮಕಾತಿ ಅಧಿಸೂಚನೆ ಪ್ರಕಟಿಸಿದ ದಿನಾಂಕ 29-05-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 10-06-2026

ಪ್ರಮುಖ ಲಿಂಕುಗಳು:

ಅಧಿಕೃತ ವೆಬ್‌ಸೈಟ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಅಧಿಸೂಚನೆ ಪಿಡಿಎಫ್ ಲಿಂಕ್ ಇಲ್ಲಿ ಕ್ಲಿಕ್ ಮಾಡಿ
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ

ಅಂತಿಮ ತೀರ್ಮಾನ:

ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಪ್ರಸ್ತುತ ನೇಮಕಾತಿ ಅಧಿಸೂಚನೆಯಲ್ಲಿ ಅಸಿಸ್ಟೆಂಟ್ ಲೈಬ್ರರಿಯನ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ನೀವೇನಾದರೂ ಈ ಹುದ್ದೆಗೆ ಸಂಬಂಧಿಸಿದ ಅರ್ಹತಾ ಮಾನದಂಡಗಳನ್ನು ಪೂರೈಸುದಾದರೆ ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಿ.


ಪ್ರಮುಖ ಲಿಂಕುಗಳು:

Whatsapp Group Link Click Here
Telegram Group Link Click Here
Instagram Link Click Here

ಇತರೆ ಪ್ರಮುಖ ಲಿಂಕುಗಳು:

Leave a Comment