IIT Dharwad: ಭಾರತೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ಭರ್ಜರಿ ಉದ್ಯೋಗಾವಕಾಶ! ಯಾವುದೇ ಅರ್ಜಿ ಶುಲ್ಕವಿಲ್ಲ । ಮೇ 31 ಕೊನೆಯ ದಿನಾಂಕ

ಧಾರವಾಡದ ಪ್ರತಿಷ್ಠಿತ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಧಾರವಾಡದಲ್ಲಿ ಉದ್ಯೋಗ ಮಾಡಲು ಕನಸ್ಸು ಕಾಣುತ್ತಿರುವ ಅಭ್ಯರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್! ಧಾರವಾಡದ ಈ ಒಂದು ಪ್ರತಿಷ್ಠಿತ ಸಂಸ್ಥೆಯು ಪ್ರಸ್ತುತ 2026-27 ನೇ ಸಾಲಿನಲ್ಲಿ ಲೈಬ್ರರಿ ಟ್ರೈನಿ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

IIT Dharwad Recruitment 2026

ಸಂಬಂಧಿತ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಗ್ರಂಥಾಲಯ ಹಾಗೂ ಮಾಹಿತಿ ವಿಜ್ಞಾನ ವಿಭಾಗದಲ್ಲಿ ವೃತ್ತಿಜೀವನವನ್ನು ಆರಂಭಿಸಲು ಬಯಸುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶವಾಗಿದೆ.

ಪ್ರಸ್ತುತ ಲೇಖನದಲ್ಲಿ ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ, ವಯೋಮಿತಿ ವಿವರ, ಅರ್ಜಿ ಶುಲ್ಕ, ವೇತನ ಶ್ರೇಣಿ, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಸಂಪೂರ್ಣ ಮಾಹಿತಿಯನ್ನು ಪ್ರಸ್ತುತ ಈ ಒಂದು ಲೇಖನದ ಮೂಲಕ ತಿಳಿದುಕೊಳ್ಳಬಹುದಾಗಿದೆ. ಇದೇ ರೀತಿಯ ಇನ್ನಷ್ಟು ಹುದ್ದೆಗಳ ಕುರಿತು ಮಾಹಿತಿಗಾಗಿ ನಮ್ಮ ವೆಬ್ಸೈಟ್ ಪಬ್ಲಿಕ್.ಸಲಹೆ.ಇನ್ ಗೆ ಭೇಟಿ ನೀಡಿ.

IIT Dharwad

ಹುದ್ದೆಯ ವಿಶ್ಲೇಷಣೆ:

ನೇಮಕಾತಿ ಸಂಸ್ಥೆಯ ಹೆಸರು ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ
ಹುದ್ದೆಯ ಹೆಸರು ಲೈಬ್ರರಿ ಟ್ರೈನಿ
ಹುದ್ದೆಯ ಸಂಖ್ಯೆ ಒಟ್ಟು 2 ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ ಆನ್ಲೈನ್ ಮೂಲಕ
ಉದ್ಯೋಗ ಸ್ಥಳ ಧಾರವಾಡ – ಕರ್ನಾಟಕ

ಹುದ್ದೆಯ ಸಂಕ್ಷಿಪ್ತ ವಿವರ:

ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಧಾರವಾಡ ಪ್ರಸ್ತುತ ನೇಮಕಾತಿ ಅಧಿಸೂಚನೆಯಲ್ಲಿ ಒಟ್ಟು ಎರಡು ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಅವುಗಳ ವಿವರ ಈ ಕೆಳಕಂಡಂತಿದೆ.

ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ
ಲೈಬ್ರರಿ ಟ್ರೈನಿ 2 ಹುದ್ದೆಗಳು

ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ:

ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಧಾರವಾಡದಲ್ಲಿ ಖಾಲಿ ಇರುವ ಲೈಬ್ರರಿ ಟ್ರೈನಿ ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ ಈ ಕೆಳಕಂಡಂತಿದೆ.

ಲೈಬ್ರರಿ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗ್ರಂಥಾಲಯ ಅಥವಾ ಮಾಹಿತಿ ವಿಜ್ಞಾನ ವಿಷಯದಲ್ಲಿ ಅಥವಾ ತತ್ಸಮಾನ ವಿಷಯದಲ್ಲಿ ಕನಿಷ್ಠ 65% ಅಂಕಗಳೊಂದಿಗೆ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ ವಿವರ:

ಪ್ರಸ್ತುತ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ, ಲೈಬ್ರರಿ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಟ 26 ವರ್ಷ ವಯೋಮಿತಿಯನ್ನು ಹೊಂದಿರಬೇಕು. ಅಭ್ಯರ್ಥಿಗಳ ವಯೋಮಿತಿಯನ್ನು ದಿನಾಂಕ 14-05-2026 ಕ್ಕೆ ಅನ್ವಯವಾಗುವಂತೆ ಲೆಕ್ಕಹಾಕಲಾಗುತ್ತದೆ.

ವಯೋಮಿತಿ ಸಡಿಲಿಕೆ ವಿವರ:

ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಸಂಸ್ಥೆ ಹಾಗೂ ಸರ್ಕಾರದ ಕೆಲವು ನಿಯಮಗಳ ಪ್ರಕಾರ ಮೀಸಲಾತಿ ವರ್ಗಗಳ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಳ್ಳಿ.

ಅರ್ಜಿ ಶುಲ್ಕ:

ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಸಂಸ್ಥೆಯಲ್ಲಿ ಖಾಲಿ ಇರುವ ಲೈಬ್ರರಿ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವನ್ನು ನಿಗದಿಪಡಿಸಿಲ್ಲ. ಹಾಗಾಗಿ ಅಭ್ಯರ್ಥಿಗಳು ಉಚಿತವಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ವೇತನ ಶ್ರೇಣಿ:

ಲೈಬ್ರರಿ ಟ್ರೈನಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 25,000/- ವೇತನವನ್ನು ನೀಡಲಾಗುತ್ತದೆ.

ಅಗತ್ಯ ದಾಖಲೆಗಳು:

  • ಜನ್ಮ ದಿನಾಂಕ ಪ್ರಮಾಣಪತ್ರ
  • ಸ್ನಾತಕೋತ್ತರ ಪದವಿ ಪ್ರಮಾಣಪತ್ರ
  • ನಿವಾಸ ಪ್ರಮಾಣಪತ್ರ
  • ಐಡಿ ಪ್ರೂಫ್
  • ಪದವಿ ಅಂಕಪಟ್ಟಿ
  • ಪಾಸ್ ಪೋರ್ಟ್ ಅಳತೆಯ ಫೋಟೋ
  • ಅಭ್ಯರ್ಥಿಗಳ ಸಹಿ
  • ಆಧಾರ್ ಕಾರ್ಡ್
  • ಹಾಗೂ ಇನ್ನಿತರ ಅಗತ್ಯ ದಾಖಲೆಗಳು

ಅರ್ಜಿ ಸಲ್ಲಿಸುವ ವಿಧಾನ:

  • ಆಸಕ್ತ ಅಭ್ಯರ್ಥಿಗಳು ಮೊದಲು ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಾ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಳ್ಳಿ.
  • ಅಭ್ಯರ್ಥಿಗಳು ಮೊದಲು ತಮ್ಮ ಇಮೇಲ್ ಐಡಿ ಹಾಗೂ ಪಾಸ್ ವರ್ಡ್ ಟೈಪ್ ಮಾಡಿ ಲಾಗಿನ್ ಆಗಿ.
  • ನಂತರ ಕೆರಿಯರ್ ವಿಭಾಗದಲ್ಲಿ ಲೈಬ್ರರಿ ಟ್ರೈನಿ ಹುದ್ದೆಗಳಿಗೆ ಸಂಬಂಧಿಸಿದ ಅಪ್ಲಿಕೇಶನ್ ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ನಂತರ ಅಪ್ಲಿಕೇಶನ್ ಫಾರ್ಮ್ ನಲ್ಲಿ ಕೇಳಲಾದ ಎಲ್ಲಾ ವೈಯಕ್ತಿಕ ವಿವರ, ಶೈಕ್ಷಣಿಕ ವಿವರ ಹಾಗೂ ಇನ್ನಿತರ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ.
  • ಅಭ್ಯರ್ಥಿಗಳ ಆಧಾರ್ ಕಾರ್ಡ್, ಶೈಕ್ಷಣಿಕ ಪ್ರಮಾಣಪತ್ರ, ಅಭ್ಯರ್ಥಿಗಳ ಸಹಿ, ಇತ್ತೀಚಿನ ಪಾಸ್ ಪೋರ್ಟ್ ಅಳತೆಯ ಫೋಟೋ ಸೇರಿದಂತೆ ಇನ್ನಿತರ ಎಲ್ಲಾ ದಾಖಲೆಗಳನ್ನು ಅಪ್ಲೋಡ್ ಮಾಡಿ.
  • ಭರ್ತಿ ಮಾಡಿರುವ ಎಲ್ಲಾ ವಿವರಗಳು ಸರಿ ಇದೆಯೇ ಎಂದು ಖಚಿತಪಡಿಸಿಕೊಂಡು ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.

ಆಯ್ಕೆ ಪ್ರಕ್ರಿಯೆ:

  • ಶಾರ್ಟ್ ಲಿಸ್ಟ್:

ಮೊದಲ ಹಂತದಲ್ಲಿ ಅಭ್ಯರ್ಥಿಗಳು ಹೊಂದಿರುವ ಶೈಕ್ಷಣಿಕ ಅರ್ಹತೆಗೆ ಸಂಬಂಧಿಸಿದಂತೆ ಶಾರ್ಟ್ ಲಿಸ್ಟ್ ಅನ್ನು ಸಿದ್ಧಪಡಿಸಲಾಗುತ್ತದೆ.

  • ಲಿಖಿತ ಪರೀಕ್ಷೆ:

ಶಾರ್ಟ್ ಲಿಸ್ಟ್ ನಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಗೆ ಕರೆಯಲಾಗುತ್ತದೆ.

  • ವೈಯಕ್ತಿಕ ಸಂದರ್ಶನ:

ಲಿಖಿತ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಗಳಿಸಿದ ಅಭ್ಯರ್ಥಿಗಳನ್ನು ವೈಯಕ್ತಿಕ ಸಂದರ್ಶನಕ್ಕೆ ಕರೆಯಲಾಗುತ್ತದೆ. ಕೊನೆಯ ಹಂತದಲ್ಲಿ ಅಭ್ಯರ್ಥಿಗಳು ಲಿಖಿತ ಪರೀಕ್ಷೆ ಹಾಗೂ ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಪ್ರಮುಖ ದಿನಾಂಕಗಳು:

ಪ್ರಮುಖ ಈವೆಂಟ್ ದಿನಾಂಕ
ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ07-05-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ31-05-2026

ಪ್ರಮುಖ ಲಿಂಕುಗಳು:

ಅಧಿಕೃತ ವೆಬ್‌ಸೈಟ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಅಧಿಸೂಚನೆ ಪಿಡಿಎಫ್ ಲಿಂಕ್ ಇಲ್ಲಿ ಕ್ಲಿಕ್ ಮಾಡಿ
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ

ಅಂತಿಮ ತೀರ್ಮಾನ:

ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಪ್ರಸ್ತುತ ಸಾಲಿನಲ್ಲಿ ಲೈಬ್ರರಿ ಟ್ರೈನ್ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಪ್ರತಿಷ್ಠಿತ ಸಂಸ್ಥೆಯಲ್ಲಿ ಕೆಲಸ ಮಾಡಿದ ಅನುಭವದ ಜೊತೆಗೆ ವೃತ್ತಿಜೀವನದಲ್ಲಿ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕೆಂದಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಅರ್ಹ ಅಭ್ಯರ್ಥಿಗಳು ನಿಗದಿತ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಿ ಪ್ರತಿಷ್ಠಿತ ಐಐಟಿ ಸಂಸ್ಥೆಯಲ್ಲಿ ವೃತ್ತಿಜೀವನವನ್ನು ಪ್ರಾರಂಭಿಸುವ ಕನಸ್ಸನ್ನು ನನಸ್ಸು ಮಾಡಿಕೊಳ್ಳಿ.


ಇತರೆ ಪ್ರಮುಖ ಲಿಂಕುಗಳು:

Leave a Comment