ದೇಶಸೇವೆಯ ಜೊತೆಗೆ ಉತ್ತಮ ವೃತ್ತಿಜೀವನವನ್ನು ರೂಪಿಸುಕೊಳ್ಳಲು ಕನಸು ಕಾಣುತ್ತಿರುವ ಅಭ್ಯರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್! ಭಾರತೀಯ ನೌಕಾಪಡೆಯು 2026 ನೇ ಸಾಲಿನಲ್ಲಿ 275 ಶಾರ್ಟ್ ಸರ್ವಿಸ್ ಕಮಿಷನ್ ಆಫೀಸರ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
Indian Navy Recruitment 2026
ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಬಿಇ, ಬಿಟೆಕ್, ಎಂಇ ಎಂಟೆಕ್, ಎಂಬಿಎ, ಎಂಎಸ್ಸಿ ಪದವಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಹುದ್ದೆಗೆ ಸಂಬಂಧಿಸಿದ ನೇಮಕಾತಿ ಪ್ರಕ್ರಿಯೆಯು ಸಂದರ್ಶನ, ವೈದ್ಯಕೀಯ ಪರೀಕ್ಷೆ ಹಾಗೂ ಮೆರಿಟ್ ಆಧಾರದಲ್ಲಿ ನಡೆಯಲಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 1.2 ಲಕ್ಷದ ವೆರೆಗೆ ವೇತನವನ್ನು ಸಹ ನೀಡಲಾಗುತ್ತದೆ.
ಶಾರ್ಟ್ ಸರ್ವಿಸ್ ಕಮಿಷನ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಈಗಾಗಲೇ ಆರಂಭಗೊಂಡಿದ್ದು, ಅರ್ಜಿ ಸಲ್ಲಿಸಲು ಜುಲೈ 27, 2026 ರ ವರೆಗೆ ಅವಕಾಶ ಕಲ್ಪಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಭಾರತೀಯ ನೌಕಾಪಡೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ.

ಹುದ್ದೆಯ ಅವಲೋಕನ:
| ನೇಮಕಾತಿ ಸಂಸ್ಥೆ ಹೆಸರು | ಭಾರತೀಯ ನೌಕಾಪಡೆ |
| ಹುದ್ದೆಗಳ ಹೆಸರು | ಶಾರ್ಟ್ ಸರ್ವಿಸ್ ಕಮಿಷನ್ ಆಫೀಸರ್ |
| ಹುದ್ದೆಗಳ ಸಂಖ್ಯೆ | 275 ಹುದ್ದೆಗಳು |
| ಅರ್ಜಿ ಸಲ್ಲಿಸುವ ವಿಧಾನ | ಆನ್ಲೈನ್ ಮೂಲಕ |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 27-07-2026 |
ಹುದ್ದೆಯ ಸಂಕ್ಷಿಪ್ತ ವಿವರ:
ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ಶಾರ್ಟ್ ಸರ್ವಿಸ್ ಕಮಿಷನ್ ಆಫೀಸರ್ ಹುದ್ದೆಗಳನ್ನು ವಿವಿಧ ಶಾಖೆಗಳಿಗೆ ಅನುಗುಣವಾಗಿ ಹಂಚಿಕೆ ಮಾಡಿರುವ ವಿವರ ಈ ಕೆಳಕಂಡಂತಿದೆ.
| ವಿವಿಧ ಶಾಖೆಗಳು | ಹುದ್ದೆಗಳ ಸಂಖ್ಯೆ |
| ಎಜುಕೇಶನ್ | 05 ಹುದ್ದೆಗಳು |
| ಸಬ್ ಮರೀನ್ ಟೆಕ್ ಎಲೆಕ್ಟ್ರಿಕಲ್ | 08 ಹುದ್ದೆಗಳು |
| ಸಬ್ ಮೆರೀನ್ ಟೆಕ್ ಇಂಜಿನಿಯರಿಂಗ್ | 08 ಹುದ್ದೆಗಳು |
| ಎಜುಕೇಶನ್ | 08 ಹುದ್ದೆಗಳು |
| ಲಾಜಿಸ್ಟಿಕ್ಸ್ | 10 ಹುದ್ದೆಗಳು |
| ನೌಕಾ ಶಸ್ತ್ರಾಸ್ತ್ರ ಪರಿವೀಕ್ಷಣಾ ಕೇಡರ್ | 14 ಹುದ್ದೆಗಳು |
| ಏರ್ ಟ್ರಾಫಿಕ್ ಕಂಟ್ರೋಲರ್ | 15 ಹುದ್ದೆಗಳು |
| ನೌಕಾ ವಾಯು ಕಾರ್ಯಾಚರಣಾ ಅಧಿಕಾರಿ | 18 ಹುದ್ದೆಗಳು |
| SSC ಪೈಲೆಟ್ | 25 ಹುದ್ದೆಗಳು |
| ಇಂಜಿನಿಯರಿಂಗ್ ಶಾಖೆ ಸಾಮಾನ್ಯ ಸೇವೆ | 24 ಹುದ್ದೆಗಳು |
| ವಿದ್ಯುತ್ ಶಾಖೆ ಸಾಮಾನ್ಯ ಸೇವೆ | 32 ಹುದ್ದೆಗಳು |
| ನೌಕಾ ನಿರ್ಮಾಣಕಾರ | 18 ಹುದ್ದೆಗಳು |
| SSC ಸಾಮಾನ್ಯ ಸೇವೆ (ಜಿಎಸ್/ ಎಕ್ಸ್) | 90 ಹುದ್ದೆಗಳು |
ಶೈಕ್ಷಣಿಕ ಅರ್ಹತೆ:
ಶಾರ್ಟ್ ಸರ್ವಿಸ್ ಕಮಿಷನ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ ಅಥವಾ ವಿಶ್ವವಿದ್ಯಾಲಯದಿಂದ ಕನಿಷ್ಠ 60% ಅಂಕೆಗಳೊಂದಿಗೆ ಬಿಇ, ಬಿಟೆಕ್, ಎಂಇ, ಎಂಟೆಕ್, ಪಿಜಿ ಡಿಪ್ಲೊಮಾ, ಎಂಬಿಎ, ಎಂಎಸ್ಸಿ, ಎಂಸಿಎ ಕೋರ್ಸ್ ಗಳನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ ವಿವರ:
ಭಾರತೀಯ ನೌಕಾಪಡೆಯ ಶಾರ್ಟ್ ಸರ್ವಿಸ್ ಕಮಿಷನ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದಿನಾಂಕ 2-07-2002 ಹಾಗೂ 1-07-2008 ರ ನಡುವೆ ಜನಿಸಿರಬೇಕು ಅಂದರೆ,
ಅಭ್ಯರ್ಥಿಗಳು ಕನಿಷ್ಠ 19 ವರ್ಷದಿಂದ ಗರಿಷ್ಟ 25 ವರ್ಷ ವಯೋಮಿತಿಯನ್ನು ಹೊಂದಿರಬೇಕು.
ಅರ್ಜಿ ಶುಲ್ಕ:
ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ಶಾರ್ಟ್ ಸರ್ವಿಸ್ ಕಮಿಷನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವನ್ನು ನಿಗದಿಪಡಿಸಿಲ್ಲ. ಹಾಗಾಗಿ ಅಭ್ಯರ್ಥಿಗಳು ಉಚಿತವಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ವೇತನ ಶ್ರೇಣಿ:
ಭಾರತೀಯ ನೌಕಾಪಡೆಯಲ್ಲಿನ ಶಾರ್ಟ್ ಸರ್ವಿಸ್ ಕಮಿಷನ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 1.20 ಲಕ್ಷದ ವರೆಗೆ ವೇತನವನ್ನು ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:
- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಭಾರತೀಯ ನೌಕಾಪಡೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ.
- ಹೊಸ ಬಳಕೆದಾರರಾಗಿದ್ದರೆ, ಇಮೇಲ್ ಐಡಿ ಹಾಗೂ ಆಧಾರ್ ಕಾರ್ಡ್ ಬಳಸಿ ರಿಜಿಸ್ಟ್ರೇಷನ್ ಪ್ರಕ್ರಿಯೆ ಪೂರ್ಣಗೊಳಿಸಿ.
- ನಂತರ ಇಮೇಲ್ ಐಡಿ ಹಾಗೂ ಪಾಸ್ ವರ್ಡ್ ಬಳಸಿ ಲಾಗಿನ್ ಆಗಿ.
- ನಂತರ ಅಪ್ಲಿಕೇಶನ್ ಫಾರ್ಮ್ ನಲ್ಲಿ ಎಲ್ಲ ವೈಯಕ್ತಿಕ ವಿವರ, ಶೈಕ್ಷಣಿಕ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ.
- ಅಗತ್ಯವಿರುವ ಶೈಕ್ಷಣಿಕ ಪ್ರಮಾಣಪತ್ರ, ಪಾಸ್ ಪೋರ್ಟ್ ಅಳತೆಯ ಫೋಟೋ, ಐಡಿ ಪ್ರೂಫ್ ಹಾಗೂ ಇನ್ನಿತರ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.
- ಕರೆಂಟ್ ಅಪರ್ಚುನಿಟಿಸ್ ವಿಭಾಗದಲ್ಲಿ SSC ಆಫೀಸರ್ ಲಿಂಕ್ ಮೇಲೆ ಕ್ಲಿಕ್ ಮಾಡಿ ನಿಮ್ಮ ಆಯ್ಕೆಯ ವಿಭಾಗವನ್ನು ಆಯ್ಕೆ ಮಾಡಿಕೊಳ್ಳಿ.
- ಭರ್ತಿ ಮಾಡಿರುವ ವಿವರಗಳು ಸರಿ ಇದಿಯೇ ಎಂದು ಖಚಿತಪಡಿಸಿಕೊಂಡು ನಂತರ ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.
ಆಯ್ಕೆ ಪ್ರಕ್ರಿಯೆ:
- SSB ಸಂದರ್ಶನ
- ವೈದ್ಯಕೀಯ ಪರೀಕ್ಷೆ
- ಅಂತಿಮ ಮೆರಿಟ್ ಪಟ್ಟಿ
ಪ್ರಮುಖ ದಿನಾಂಕಗಳು:
| ಪ್ರಮುಖ ಈವೆಂಟ್ | ದಿನಾಂಕ |
|---|---|
| ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ | 25-06-2026 |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 27-07-2026 |
ಪ್ರಮುಖ ಲಿಂಕುಗಳು:
| ಅಧಿಕೃತ ವೆಬ್ಸೈಟ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ನೇಮಕಾತಿ ಅಧಿಸೂಚನೆ ಪಿಡಿಎಫ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಅಂತಿಮ ತೀರ್ಮಾನ:
ಭಾರತೀಯ ನೌಕಾಪಡೆಯು ಪ್ರಸ್ತುತ ಸಾಲಿನಲ್ಲಿ ಒಟ್ಟು 275 ಶಾರ್ಟ್ ಸರ್ವಿಸ್ ಕಮಿಷನ್ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದ್ದು, ಈ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಹುದ್ದೆಗೆ ಸಂಬಂಧಿಸಿದ ಅರ್ಹತಾ ಮಾನದಂಗಳನ್ನು ಪೂರೈಸುತ್ತೇವೆಯೋ? ಇಲ್ಲವೋ? ಎಂದು ಖಚಿತಪಡಿಸಿಕೊಂಡು ನಂತರ ನಿಗದಿತ ದಿನಾಂಕದೊಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಿ.
ಪ್ರಮುಖ ಲಿಂಕುಗಳು:
| Whatsapp Group Link | Click Here |
| Telegram Group Link | Click Here |
| Instagram Link | Click Here |
ಇತರೆ ಪ್ರಮುಖ ಲಿಂಕುಗಳು:
- NFSU: ರೂ. 90,000 ವೇತನ! ಧಾರವಾಡದ ವಿಧಿವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಭರ್ಜರಿ ನೇಮಕಾತಿ! ಜುಲೈ 9 ಕೊನೆಯ ದಿನಾಂಕ
- Post Office: ರೂ. 63,200 ವೇತನ! ಭಾರತೀಯ ಅಂಚೆ ಇಲಾಖೆಯಲ್ಲಿ ಹೊಸ ನೇಮಕಾತಿ । 18 ಜುಲೈ ಕೊನೆಯ ದಿನಾಂಕ
- KSRTC: ಸಾರಿಗೆ ಕ್ಷೇತ್ರದಲ್ಲಿ ಭರ್ಜರಿ ಅವಕಾಶ! ನೇರ ಚಾಲನಾ ಪರೀಕ್ಷೆ ಮೂಲಕ ಚಾಲಕರಾಗುವ ಸುವರ್ಣಾವಕಾಶ
- Civil Court: ರೂ. 83,700/- ವೇತನ! ಬೆಂಗಳೂರು ಸಿವಿಲ್ ನ್ಯಾಯಾಲಯದಲ್ಲಿ ಭರ್ಜರಿ ನೇಮಕಾತಿ! SSLC & PUC ಪಾಸ್ ಅಭ್ಯರ್ಥಿಗಳಿಗೆ ಸುವರ್ಣಾವಕಾಶ!
- KSP 60 ಹಳೆಯ ಪ್ರಶ್ನೆ ಪತ್ರಿಕೆ PDF – Civil Police Constable / CAR / DAR ಪರೀಕ್ಷೆಗೆ ಅತ್ಯಂತ ಉಪಯುಕ್ತ!