IPPB: ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ನೇಮಕಾತಿ 2026 | ಮೇ 21 ಕೊನೆಯ ದಿನಾಂಕ

ನಮಸ್ಕಾರ ಸ್ನೇಹಿತರೆ, ನೀವೇನಾದರೂ ಪದವಿ ಪೂರ್ಣಗೊಳಿಸಿ ಉದ್ಯೋಗ ಹುಡುಕುತ್ತಿದ್ದೀರಾ? ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ನಿಮಗೊಂದು ಸುವರ್ಣಾವಕಾಶ ಕಲ್ಪಿಸಿದೆ. ಭಾರತೀಯ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ ತಂದಿರುವ ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ತಮ್ಮ ತನ್ನ ಆಡಳಿತ ಮಂಡಳಿಯನ್ನು ಬಲಪಡಿಸಲು ಮುಂದಾಗಿದೆ. ಈ ಹಿನ್ನಲೆಯಲ್ಲಿ ಬ್ಯಾಂಕ್ 2026 ನೇ ಸಾಲಿನ ನೇಮಕಾತಿ ಅಧಿಸೂಚನೆಯಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

IPPB Recruitment 2026

ಬ್ಯಾಂಕಿಂಗ್ ಹಾಗೂ ಹಣಕಾಸು ಕ್ಷೇತ್ರಗಳಲ್ಲಿ ಅನುಭವ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ದೆಹಲಿ, ನವ ದೆಹಲಿ, ಅಖಿಲ ಭಾರತ ಸರ್ಕಾರದಲ್ಲಿ ವೃತ್ತಿಜೀವನ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶವಾಗಿದೆ.

ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ಚೀಫ್ ಆಪರೇಷನ್ ಆಫೀಸರ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದ್ದು, ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ದಿನಾಂಕ 1-05-2026 ರಿಂದ ಆರಂಭಗೊಂಡು ದಿನಾಂಕ 21-05-2026 ಕೊನೆಯ ದಿನಾಂಕವಾಗಿದೆ. ಈ ಹುದ್ದೆಗಳಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಪ್ರಸ್ತುತ ಈ ಒಂದು ಲೇಖನದ ಮೂಲಕ ತಿಳಿದುಕೊಳ್ಳಬಹುದಾಗಿದೆ.

IPPB

ಹುದ್ದೆಯ ಅವಲೋಕನ:

ನೇಮಕಾತಿ ಸಂಸ್ಥೆಗಳ ಹೆಸರು ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್
ಹುದ್ದೆಗಳ ಹೆಸರು ಚೀಫ್ ಆಪರೇಟಿಂಗ್ ಆಫೀಸರ್
ಹುದ್ದೆಗಳ ಸಂಖ್ಯೆ 01 ಹುದ್ದೆ
ಉದ್ಯೋಗ ಸ್ಥಳ ದೆಹಲಿ, ನವದೆಹಲಿ, ಅಖಿಲ ಭಾರತ
ಅರ್ಜಿ ಸಲ್ಲಿಸುವ ವಿಧಾನ ಆನ್ಲೈನ್ ಮೂಲಕ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 06-05-2026

ಹುದ್ದೆಯ ವಿವರ:

ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ 2026 ನೇ ಸಾಲಿನ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಹುದ್ದೆಯ ವಿವರ ಈ ಕೆಳಕಂಡಂತಿದೆ.

ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ
ಚೀಫ್ ಆಪರೇಟಿಂಗ್ ಆಫೀಸರ್ 1 ಹುದ್ದೆ

ಈ ಹುದ್ದೆ ಅರ್ಹ ಅಭ್ಯರ್ಥಿಗಳನ್ನು ಒಪ್ಪಂದದ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಅಭ್ಯರ್ಥಿಗಳನ್ನು 3 ವರ್ಷಗಳ ಅವಧಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಈ ಹುದ್ದೆಗಳಲ್ಲಿ ಅಭ್ಯರ್ಥಿಗಳ ಕಾರ್ಯಕ್ಷಮತೆ ಅನುಗುಣವಾಗಿ ಇನ್ನು ಎರಡು ವರ್ಷಗಳನ್ನು ವಿಸ್ತರಿಸಲಾಗುತ್ತದೆ.

ಶೈಕ್ಷಣಿಕ ಅರ್ಹತೆ:

ಚೀಫ್ ಆಪರೇಷನ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹೊಂದಿರಬೇಕಾದ ಶೈಕ್ಷಣಿಕ ಅರ್ಹತೆ ಈ ಕೆಳಕಂಡಂತಿದೆ.

  • ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕನಿಷ್ಠ 55% ಅಂಕಗಳೊಂದಿಗೆ ಪೂರ್ಣ ಸಮಯದ ಪದವಿ ಹೊಂದಿರಬೇಕು.
  • ಎಂಬಿಎ, ಸ್ಟ್ಯಾಟಿಸ್ಟಿಕ್ಸ್ ಅಥವಾ ಫೈನಾನ್ಸ್ ವಿಷಯಗಳಲ್ಲಿ ಸ್ನಾತಕೋತ್ತರ ಪದವಿ ಹೊಂದಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.
  • ಐಐಟಿ, ಅಥವಾ ಇತರೆ ಸಂಸ್ಥೆಗಳಲ್ಲಿ ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ವಿಶೇಷ ಆದ್ಯತೆ ನೀಡಲಾಗುತ್ತದೆ.
  • ಅಭ್ಯರ್ಥಿಗಳು ಬ್ಯಾಂಕಿಂಗ್ ಅಥವಾ ಹಣಕಾಸು ಸಂಸ್ಥೆಯಲ್ಲಿ ಕನಿಷ್ಠ 18 ವರ್ಷಗಳ ಕೆಲಸದ ಅನುಭವ ಹೊಂದಿರಬೇಕು. ಈ ಅನುಭವಗಳಲ್ಲಿ ಕನಿಷ್ಠ 10 ವರ್ಷಗಳ ಕಾಲ ಬ್ಯಾಂಕಿಂಗ್ ಕಾರ್ಯನಿರ್ವಹಣೆ, ವ್ಯವಹಾರ ಪ್ರಕ್ರಿಯೆಗಳನ್ನು ನಿರ್ವಹಿಸಿರಬೇಕು.
  • ಕಳೆದ ಐದು ವರ್ಷಗಳಲ್ಲಿ ಕನಿಷ್ಠ ಎರಡು ವರ್ಷಗಳ ಕಾಲ ಸಾರ್ವಜನಿಕ ಅಥವಾ ಖಾಸಗಿ ವಲಯದ ಬ್ಯಾಂಕುಗಳಲ್ಲಿ ಎಂಡಿ ಅಥವಾ ಸಿಇಒಗಿಂತ ಎರಡು ಹಂತಗಳ ಕೆಳಗಿನ ಹುದ್ದೆಗಳಲ್ಲಿ ಕೆಲಸ ಮಾಡಿರಬೇಕು.

ವಯೋಮಿತಿ ವಿವರ:

ಚೀಫ್ ಆಪರೇಟಿಂಗ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿಯನ್ನು 1-04-2026 ಕ್ಕೆ ಅನ್ವಯವಾಗುವಂತೆ ಲೆಕ್ಕ ಹಾಕಲಾಗುತ್ತದೆ.

ಅಭ್ಯರ್ಥಿಗಳು ಕನಿಷ್ಠ 40 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೆಯೆ ಗರಿಷ್ಟ 55 ವರ್ಷ ವಯೋಮಿತಿಯನ್ನು ಮೀರಿರಬಾರದು.

ವಯೋಮಿತಿ ಸಡಿಲಿಕೆ ವಿವರ:

ಚೀಫ್ ಆಪರೇಟಿಂಗ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವಿಶೇಷ ವಯೋಮಿತಿ ಸಡಿಲಿಕೆಗಳು ಅನ್ವಹಿಸುವುದಿಲ್ಲ.

ಅರ್ಜಿ ಶುಲ್ಕ:

ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ನ ಚೀಫ್ ಆಪರೇಟಿಂಗ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ರೂ. 750/- ಅರ್ಜಿ ಶುಲ್ಕವನ್ನು ನಿಗದಿಪಡಿಸಿದ್ದು, ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಇಂಟರ್ನೆಟ್ ಬ್ಯಾಂಕಿಂಗ್, ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ಉಪಿಐ ಬಳಸಿ ಪಾವತಿಸಬೇಕಾಗುತ್ತದೆ.

ವೇತನ ಶ್ರೇಣಿ:

ಚೀಫ್ ಆಪರೇಟಿಂಗ್ ಆಫೀಸರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಅಭ್ಯರ್ಥಿಗಳು ಹೊಂದಿರುವ ಶೈಕ್ಷಣಿಕ ಅರ್ಹತೆ, ಅನುಭವ, ಪ್ರಸ್ತುತ ಅವರು ಪಡೆಯುತ್ತಿರುವ ವೇತನಗಳ ಅನ್ವಯ ವೇತನವನ್ನು ನಿಗದಿಪಡಿಸಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:

  • ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಮೊದಲು ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ನ ಅಧಿಕೃತ ವೆಬ್ಸೈಟ್ ಗೆ ಭೇಟಿ.
  • ಅಲ್ಲಿ ಕರೆಂಟ್ ಓಪನಿಂಗ್ ವಿಭಾಗಕ್ಕೆ ಭೇಟಿ ನೀಡಿ ಚೀಫ್ ಆಪರೇಟಿಂಗ್ ಆಫೀಸರ್ ಹುದ್ದೆಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ನಂತರ ಅಪ್ಲೈ ಆನ್ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ನ್ಯೂ ರಿಜಿಸ್ಟ್ರೇಷನ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ.
  • ನಂತರ ನಿಗದಿತ ಅರ್ಜಿ ಫಾರ್ಮ್ ನಲ್ಲಿ ನಿಮ್ಮ ವೈಯಕ್ತಿಕ ವಿವರ, ಶೈಕ್ಷಣಿಕ ವಿವರ ಮತ್ತು ಅನುಭವದ ಬಗ್ಗೆ ಸ್ಪಷ್ಟ ಮಾಹಿತಿಯನ್ನು ಭರ್ತಿ ಮಾಡಿ.
  • ಅಭ್ಯರ್ಥಿಗಳ ಪಾಸ್ ಪೋರ್ಟ್ ಅಳತೆಯ ಫೋಟೋ, ಸಹಿ ಹಾಗೂ ಎಡಗೈ ಹೆಬ್ಬೆರಳ ಗುರುತು ಹಾಗೂ ನಿಗದಿತ ಹಸ್ತ ಪ್ರತಿಗಳ ಘೋಷಣೆಯನ್ನು ಅಪ್ಲೋಡ್ ಮಾಡಿ.
  • ಭರ್ತಿ ಮಾಡಿರುವ ಎಲ್ಲಾ ವಿವರಗಳು ಸರಿ ಇದೆಯೇ ಎಂದು ಖಚಿತಪಡಿಸಿಕೊಂಡು ನಿಮ್ಮ ವರ್ಗಕ್ಕೆ ಸಂಬಂಧಿಸಿದ ಅರ್ಜಿ ಶುಲ್ಕವನ್ನು ಪಾವತಿಸಿ ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.

ಆಯ್ಕೆ ಪ್ರಕ್ರಿಯೆ:

  • ಶಾರ್ಟ್ ಲಿಸ್ಟ್:

ಅಭ್ಯರ್ಥಿಗಳು ಹೊಂದಿರುವ ಶೈಕ್ಷಣಿಕ ಅರ್ಹತೆ ಹಾಗೂ ಅನುಭವದ ಆಧಾರದ ಮೇಲೆ ಬ್ಯಾಂಕ್ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಲಾಗುತ್ತದೆ.

  • ಸೈಕೋಮೆಟ್ರಿಕ್ ಟೆಸ್ಟ್:

ಶಾರ್ಟ್ ಲಿಸ್ಟ್ ನಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಸೈಕೋಮೆಟ್ರಿಕ್ ಪರೀಕ್ಷೆಯನ್ನು ನಡೆಸಲಾಗುತ್ತದೆ. ಈ ಒಂದು ಹಂತದಲ್ಲಿ ಅಭ್ಯರ್ಥಿಗಳ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯ ಹಾಗೂ ಅಭ್ಯರ್ಥಿಗಳ ನಾಯಕತ್ವ ಗುಣವನ್ನು ಅಳೆಯಲಾಗುತ್ತದೆ.

  • ಸಂದರ್ಶನ:

ನಂತರ ಅಭ್ಯರ್ಥಿಗಳಿಗೆ 100 ಅಂಕಗಳ ವೈಯಕ್ತಿಕ ಸಂದರ್ಶನವನ್ನು ನಡೆಸಲಾಗುತ್ತದೆ.

  • ಅಂತಿಮ ಮೆರಿಟ್ ಪಟ್ಟಿ:

ಸೈಕೋಮೆಟ್ರಿಕ್ ಟೆಸ್ಟ್ ಗೆ 25% ಹಾಗೂ ಸಂದರ್ಶನಕ್ಕೆ 75% ವೈಟೇಜ್ ನೀಡಿ ಅಂತಿಮ ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ.

  • ವೇತನ ಮಾತುಕತೆ:

ಮೆರಿಟ್ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದ ಅಭ್ಯರ್ಥಿಗಳಿಗೆ ಸಿಟಿಸಿ ಮಾತುಕತೆ ನಡೆಸಲಾಗುತ್ತದೆ. ಈ ಮಾತುಕತೆಗೆ ಅವರು ಒಪ್ಪದಿದ್ದರೆ ಬೇರೆ ಅಭ್ಯರ್ಥಿಗಳಿಗೆ ಅವಕಾಶ ನೀಡಲಾಗುತ್ತದೆ.

ಪ್ರಮುಖ ದಿನಾಂಕಗಳು:

ಪ್ರಮುಖ ಈವೆಂಟ್ ದಿನಾಂಕ
ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ 01-05-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 21-05-2026
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ 21-05-2026

ಪ್ರಮುಖ ಲಿಂಕುಗಳು:

ಅಧಿಕೃತ ವೆಬ್‌ಸೈಟ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಅಧಿಸೂಚನೆ ಪಿಡಿಎಫ್ ಲಿಂಕ್ ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ

ಅಂತಿಮ ಮಾತು:

ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ಚೀಫ್ ಆಪರೇಷನ್ ಆಫೀಸರ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನೀವು ಆಸಕ್ತಿ ಹೊಂದಿದ್ದರೆ ಹುದ್ದೆಗೆ ಸಂಬಂಧಿಸಿದ ಅರ್ಹತಾ ಮಾನದಂಡಗಳಲ್ಲೂ ಪೂರೈಸುತ್ತೇವೆಯೋ ಇಲ್ಲವೋ ಎಂದು ಖಚಿತಪಡಿಸಿಕೊಂಡು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ಹುದ್ದೆಯನ್ನು ತಮ್ಮದಾಗಿಸಿಕೊಳ್ಳಿ.


ಇತರೆ ಪ್ರಮುಖ ಲಿಂಕುಗಳು:

Leave a Comment