ನಮಸ್ಕಾರ ಸ್ನೇಹಿತರೆ, ನೀವೇನಾದರೂ ಇಂಜಿನಿಯರಿಂಗ್ ಪದವಿ ಪೂರ್ಣಗೊಳಿಸಿ ಸರ್ಕಾರಿ ಕೆಲಸದ ಹುಡುಕಾಟದಲ್ಲಿದ್ದೀರಾ? ಹಾಗಿದ್ದರೆ ನಿಮಗೊಂದು ಮುಖ್ಯ ಮಾಹಿತಿ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನಿಯಮಿತ ಹಾಗೂ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ ಖಾಲಿ ಇರುವ ವಿವಿಧ ಇಂಜಿನಿಯರಿಂಗ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
KEA Recruitment 2026
ಸಿವಿಲ್, ಮೆಕ್ಯಾನಿಕಲ್ ಹಾಗೂ ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ ಇಂಜಿನಿಯರಿಂಗ್ ಪದವಿ ಪೂರ್ಣಗೊಳಿಸಿ, ಸರ್ಕಾರಿ ವಲಯದಲ್ಲಿ ವೃತ್ತಿಜೀವನವನ್ನು ಪ್ರಾರಂಭಿಸಬೇಕೆಂದಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶವಾಗಿದೆ. ಇಲ್ಲಿ ಒಟ್ಟು 23 ಹುದ್ದೆಗಳು ಖಾಲಿ ಇದ್ದು, ಈ ಹುದ್ದೆಗಳನ್ನು ಉಳಿಕೆ ಮೂಲ ವೃಂದ ಹಾಗೂ ಕಲ್ಯಾಣ ಕರ್ನಾಟಕ ವೃಂದಗಳಿಗೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಇಲ್ಲಿ ಖಾಲಿ ಇರುವ ವಿವಿಧ ಇಂಜಿನಿಯರಿಂಗ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು 04-06-2026 ರಂದು ಕೊನೆಗೊಳ್ಳಲಿದ್ದು, ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಹುದ್ದೆಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಪಡೆದುಕೊಳ್ಳಲು ಪ್ರಸ್ತುತ ಲೇಖನವನ್ನು ಓದಿಕೊಳ್ಳಿ.

ಹುದ್ದೆಯ ಅವಲೋಕನ:
| ನೇಮಕಾತಿ ಸಂಸ್ಥೆಯ ಹೆಸರು | ಕರ್ನಾಟಕ ಪರೀಕ್ಷಾ ಪ್ರಾಧಿಕಾರ |
| ಹುದ್ದೆಗಳ ಹೆಸರು | ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಇಂಜಿನಿಯರ್ ಮತ್ತು ಅಸಿಸ್ಟೆಂಟ್ ಇಂಜಿನಿಯರ್ |
| ಹುದ್ದೆಗಳ ಸಂಖ್ಯೆ | ಒಟ್ಟು 30 ಹುದ್ದೆಗಳು |
| ಉದ್ಯೋಗ ಸ್ಥಳ | ಕರ್ನಾಟಕ |
| ಅರ್ಜಿ ಸಲ್ಲಿಸುವ ವಿಧಾನ | ಆನ್ಲೈನ್ ಮೂಲಕ |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 04-06-2026 |
ಹುದ್ದೆಯ ವಿವರ:
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕಲ್ಯಾಣ ಕರ್ನಾಟಕ ವೃಂದ ಹಾಗೂ ಉಳಿಕೆ ಮೂಲ ವೃಂದದಲ್ಲಿ ಖಾಲಿ ಇರುವ ಹುದ್ದೆಗಳನ್ನು ಈ ಕೆಳಗೆ ನೀಡಿರುವಂತೆ ಹಂಚಿಕೆ ಮಾಡಲಾಗಿದೆ.
ಕಲ್ಯಾಣ ಕರ್ನಾಟಕ ವೃಂದ:
ಇಲ್ಲಿ ಖಾಲಿ ಇರುವ ಹುದ್ದೆಗಳನ್ನು ವಿವರ ಇಲಾಖೆಯ ಅಡಿಯಲ್ಲಿ ಹಂಚಿಕೆ ಮಾಡಲಾಗಿದೆ. ಅವುಗಳ ವಿವರ ಹೀಗಿದೆ,
- ಬೆಂಗಳೂರು ನಗರ ನೀರು ಸರಬರಾಜು ಒಳಚರಂಡಿ ಮಂಡಳಿ:
ಅಸಿಸ್ಟೆಂಟ್ ಇಂಜಿನಿಯರ್ (ಸಿವಿಲ್): ಒಟ್ಟು 5 ಹುದ್ದೆಗಳು
ಅಸಿಸ್ಟೆಂಟ್ ಇಂಜಿನಿಯರ್ (ಮೆಕ್ಯಾನಿಕಲ್): 1 ಹುದ್ದೆ
- ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನಿಯಮಿತ:
ಅಸಿಸ್ಟೆಂಟ್ ಇಂಜಿನಿಯರ್ (ಸಿವಿಲ್): 1 ಹುದ್ದೆ
ಉಳಿಕೆ ಮೂಲ ವೃಂದ:
ಇಲ್ಲಿ ಖಾಲಿ ಇರುವ ಹುದ್ದೆಗಳನ್ನು ವಿವರ ಇಲಾಖೆಯ ಅಡಿಯಲ್ಲಿ ಹಂಚಿಕೆ ಮಾಡಲಾಗಿದೆ. ಅವುಗಳ ವಿವರ ಹೀಗಿದೆ,
- ಬೆಂಗಳೂರು ನಗರ ನೀರು ಸರಬರಾಜು ಒಳಚರಂಡಿ ಮಂಡಳಿ:
ಅಸಿಸ್ಟೆಂಟ್ ಇಂಜಿನಿಯರ್ (ಸಿವಿಲ್): ಒಟ್ಟು 13 ಹುದ್ದೆಗಳು
ಅಸಿಸ್ಟೆಂಟ್ ಇಂಜಿನಿಯರ್ (ಮೆಕ್ಯಾನಿಕಲ್): 2 ಹುದ್ದೆ
ಅಸಿಸ್ಟೆಂಟ್ ಇಂಜಿನಿಯರ್ (ಕಂಪ್ಯೂಟರ್ ಸೈನ್ಸ್): 1 ಹುದ್ದೆ
- ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನಿಯಮಿತ
ಅಸಿಸ್ಟೆಂಟ್ ಇಂಜಿನಿಯರ್ (ಸಿವಿಲ್): ಒಟ್ಟು 3 ಹುದ್ದೆಗಳು
ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಇಂಜಿನಿಯರ್ (ಸಿವಿಲ್): ಒಟ್ಟು 1 ಹುದ್ದೆಗಳು
- ಕೃಷಿ ಮಾರುಕಟ್ಟೆ ಇಲಾಖೆ:
ಅಸಿಸ್ಟೆಂಟ್ ಇಂಜಿನಿಯರ್ (ಸಿವಿಲ್): 10 ಹುದ್ದೆ
ಶೈಕ್ಷಣಿಕ ಅರ್ಹತೆ:
ಬೆಂಗಳೂರು ನಗರ ನೀರು ಸರಬರಾಜು ಒಳಚರಂಡಿ ಮಂಡಳಿ:
- ಅಸಿಸ್ಟೆಂಟ್ ಇಂಜಿನಿಯರ್ (ಸಿವಿಲ್):
ಅಭ್ಯರ್ಥಿಗಳು ಸಿವಿಲ್ ಟೆಕ್ನಾಲಜಿ ಅಥವಾ ಸಿವಿಲ್ ಇಂಜಿನಿಯರಿಂಗ್ ಪದವಿಯನ್ನು ಹೊಂದಿರಬೇಕು ಹಾಗೂ 6 ತಿಂಗಳಲ್ಲಿ ಕಂಪ್ಯೂಟರ್ ಬೇಸಿಕ್ ಕೋರ್ಸ್ ಮುಗಿಸಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
- ಅಸಿಸ್ಟೆಂಟ್ ಇಂಜಿನಿಯರ್ (ಮೆಕ್ಯಾನಿಕಲ್):
ಅಭ್ಯರ್ಥಿಗಳು ಮೆಕ್ಯಾನಿಕಲ್ ಟೆಕ್ನಾಲಜಿ ಅಥವಾ ಮೆಕ್ಯಾನಿಕಲ್ ಇಂಜಿನಿಯರಿಂಗ್ ಪದವಿಯನ್ನು ಹೊಂದಿರಬೇಕು ಹಾಗೂ 6 ತಿಂಗಳಲ್ಲಿ ಕಂಪ್ಯೂಟರ್ ಬೇಸಿಕ್ ಕೋರ್ಸ್ ಮುಗಿಸಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
- ಅಸಿಸ್ಟೆಂಟ್ ಇಂಜಿನಿಯರ್ (ಕಂಪ್ಯೂಟರ್ ಸೈನ್ಸ್)
ಅಭ್ಯರ್ಥಿಗಳು ಕಂಪ್ಯೂಟರ್ ಸೈನ್ಸ್ ಟೆಕ್ನಾಲಜಿ ಅಥವಾ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ಪದವಿಯನ್ನು ಹೊಂದಿರಬೇಕು ಹಾಗೂ 6 ತಿಂಗಳಲ್ಲಿ ಕಂಪ್ಯೂಟರ್ ಬೇಸಿಕ್ ಕೋರ್ಸ್ ಮುಗಿಸಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನಿಯಮಿತ:
- ಅಸಿಸ್ಟೆಂಟ್ ಇಂಜಿನಿಯರ್ (ಸಿವಿಲ್):
ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಿವಿಲ್ ಇಂಜಿನಿಯರಿಂಗ್ ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು.
- ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಇಂಜಿನಿಯರ್ (ಸಿವಿಲ್):
ಅಭ್ಯರ್ಥಿಗಳು ಸಿವಿಲ್ ಇಂಜಿನಿಯರಿಂಗ್ ಪದವಿಯನ್ನು ಹೊಂದಿರುವುದರ ಜೊತೆಗೆ ಸಂಬಂಧಿತ ಕ್ಷೇತ್ರದಲ್ಲಿ 3 ವರ್ಷಗಳ ಸೇವಾ ಅನುಭವವನ್ನು ಹೊಂದಿರಬೇಕು.
ಕೃಷಿ ಮಾರುಕಟ್ಟೆ ಇಲಾಖೆ:
- ಅಸಿಸ್ಟೆಂಟ್ ಇಂಜಿನಿಯರ್ (ಸಿವಿಲ್):
ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಿವಿಲ್ ಇಂಜಿನಿಯರಿಂಗ್ ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು.
ವಯೋಮಿತಿ ವಿವರ:
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗಾಗಿ ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಟ 40 ವರ್ಷ ವಯೋಮಿತಿಯನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ ವಿವರ:
- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಹಾಗೂ ಪ್ರವರ್ಗ-1ಅಭ್ಯರ್ಥಿಗಳಿಗೆ 5 ವರ್ಷ
- ಪ್ರವರ್ಗ 2A, 2B, 3A, 3B ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
- ವಿಧವೆಯರಿಗೆ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.
ಅರ್ಜಿ ಶುಲ್ಕ:
- ಸಾಮಾನ್ಯ ಹಾಗೂ ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ. 750/-
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮಾಜಿ ಸೈನಿಕ, ತೃತೀಯ ಲಿಂಗಿ ಹಾಗೂ ಪ್ರವರ್ಗ -1 ಅಭ್ಯರ್ಥಿಗಳಿಗೆ ರೂ. 500/-
- ವಿಕಲಚೇತನ ಅಭ್ಯರ್ಥಿಗಳಿಗೆ ರೂ. 250/-
ವೇತನ ಶ್ರೇಣಿ:
- ಬೆಂಗಳೂರು ನಗರ ನೀರು ಸರಬರಾಜು ಒಳಚರಂಡಿ ಮಂಡಳಿಯ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಇಂಜಿನಿಯರ್ (ಗ್ರೂಪ್ ಬಿ) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ₹53,250 ೯ ದಿಂದ ₹1,15,460 ವರೆಗೆ ವೇತನವನ್ನು ನೀಡಲಾಗುತ್ತದೆ.
- ಕೃಷಿ ಮಾರುಕಟ್ಟೆ ಇಲಾಖೆ ಮತ್ತು ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನಿಯಮಿತದಲ್ಲಿರುವ ಅಸಿಸ್ಟೆಂಟ್ ಇಂಜಿನಿಯರ್ (ಸಿವಿಲ್) (ಗ್ರೂಪ್ ಬಿ) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ₹69,250 ದಿಂದ ₹1,34,200 ವರೆಗೆ ವೇತನವನ್ನು ನೀಡಲಾಗುತ್ತದೆ.
- ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಇಂಜಿನಿಯರ್ (ಸಿವಿಲ್) (ಗ್ರೂಪ್ ಎ) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ₹83,700 ದಿಂದ ₹1,55,200 ವರೆಗೆ ವೇತನವನ್ನು ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:
- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಳ್ಳಿ.
- ಮುಖಪುಟದಲ್ಲಿರುವ ನೇಮಕಾತಿ ವಿಭಾಗವನ್ನು ಆಯ್ಕೆ ಮಾಡಿಕೊಂಡು ಅಪ್ಲೈ ಆನ್ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ.
- ನಂತರ ಹುದ್ದೆಗೆ ಸಂಬಂಧಿಸಿದ ಅಪ್ಲಿಕೇಶನ್ ಫಾರ್ಮ್ ನಲ್ಲಿ ಅಗತ್ಯ ವಿವರಗಳನ್ನು ಭರ್ತಿ ಮಾಡಿ, ಅಭ್ಯರ್ಥಿಗಳ ಆಧಾರ್ ಕಾರ್ಡ್, ಶೈಕ್ಷಣಿಕ ಪ್ರಮಾಣಪತ್ರ, ಅಭ್ಯರ್ಥಿಗಳ ಸಹಿ, ಇತ್ತೀಚಿನ ಪಾಸ್ ಪೋರ್ಟ್ ಅಳತೆಯ ಫೋಟೋ ಸೇರಿದಂತೆ ಇನ್ನಿತರ ಎಲ್ಲಾ ದಾಖಲೆಗಳನ್ನು ಅಪ್ಲೋಡ್ ಮಾಡಿ.
- ಭರ್ತಿ ಮಾಡಿರುವ ಎಲ್ಲಾ ವಿವರಗಳು ಸರಿ ಇದೆಯೇ ಎಂದು ಖಚಿತಪಡಿಸಿಕೊಂಡು ನಿಮ್ಮ ವರ್ಗಕ್ಕೆ ಸಂಬಂಧಿಸಿದ ಅರ್ಜಿ ಶುಲ್ಕವನ್ನು ಪಾವತಿಸಿ ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.
ಆಯ್ಕೆ ಪ್ರಕ್ರಿಯೆ:
- ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ
- ಕನ್ನಡ ಭಾಷಾ ಪರೀಕ್ಷೆ (ಅನ್ವಹಿಸಿದರೆ)
- ದಾಖಲೆಗಳ ಪರಿಶೀಲನೆ
ಪ್ರಮುಖ ದಿನಾಂಕಗಳು:
| ಪ್ರಮುಖ ಈವೆಂಟ್ | ದಿನಾಂಕ |
|---|---|
| ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ | 21-05-2026 |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 04-06-2026 |
| ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ | 05-06-2026 |
| ಸ್ಪರ್ಧಾತ್ಮಕ ಪರೀಕ್ಷೆ ನಡೆಯುವ ದಿನಾಂಕ | ಶೀಘ್ರದಲ್ಲಿ ಪ್ರಕಟಿಸಲಾಗುತ್ತದೆ |
ಪ್ರಮುಖ ಲಿಂಕುಗಳು:
| ಅಧಿಕೃತ ವೆಬ್ಸೈಟ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ಅಧಿಸೂಚನೆ PDF ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಅಂತಿಮ ತೀರ್ಮಾನ:
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕೃಷಿ ಮಾರಾಟ ಇಲಾಖೆ, ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನಿಯಮಿತ ಹಾಗೂ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಇಂಜಿನಿಯರ್ ಹಾಗೂ ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಇಂಜಿನಿಯರ್ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ತಾಂತ್ರಿಕ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶವಾಗಿದೆ. ಅರ್ಹ ಅಭ್ಯರ್ಥಿಗಳು ನಿಗದಿತ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಿ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಿ.
ಇತರೆ ಪ್ರಮುಖ ಲಿಂಕುಗಳು:
- KVAFSU: ಕರ್ನಾಟಕ ವೆಟರ್ನರಿ ಯೂನಿವರ್ಸಿಟಿಯಲ್ಲಿ ಪ್ರೊಫೆಸರ್ ಹುದ್ದೆಗಳ ಭರ್ಜರಿ ನೇಮಕಾತಿ! ಜೂನ್ 6 ಕೊನೆಯ ದಿನಾಂಕ
- Udupi CSL: ಉಡುಪಿ ಕೊಚ್ಚಿನ್ ಶಿಪ್ಯಾರ್ಡ್ ನೇಮಕಾತಿ 2026! ITI, Diploma ಅಭ್ಯರ್ಥಿಗಳಿಗೆ ಭರ್ಜರಿ ಅವಕಾಶ
- SSC CGL: ರೂ. 1,51,100/- ವೇತನ! ಸ್ಟಾಫ್ ಸೆಲೆಕ್ಷನ್ ಕಮಿಷನ್ ಅಲ್ಲಿ 12,256 ಹುದ್ದೆಗಳ ಬೃಹತ್ ನೇಮಕಾತಿ । ಜೂನ್ 22 ಕೊನೆಯ ದಿನಾಂಕ
- KEA: ರೂ. 1,55,200/- ವೇತನ! ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಭರ್ಜರಿ ನೇಮಕಾತಿ । ಜೂನ್ 04 ಕೊನೆಯ ದಿನಾಂಕ
- UPSC: ರೂ. 2,25,000/- ವೇತನ! ಭಾರತೀಯ ರಕ್ಷಣಾ ಇಲಾಖೆಯಲ್ಲಿ ಬೃಹತ್ ನೇಮಕಾತಿ 2026! ಜೂನ್ 9 ಕೊನೆಯ ದಿನಾಂಕ