ನಮಸ್ಕಾರ ಸ್ನೇಹಿತರೆ, ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 2026-27ನೇ ಸಾಲಿನಲ್ಲಿ ಹೊಚ್ಚ ಹೊಸ ನೇಮಕಾತಿಯನ್ನು ಹೊರಡಿಸಿದ್ದು, ಸೆಕೆಂಡ್ ಡಿವಿಷನ್ ಅಸಿಸ್ಟೆಂಟ್, ಹಾಗೂ ಫಸ್ಟ್ ಡಿವಿಷನ್ ಅಸಿಸ್ಟೆಂಟ್ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಲಾಗಿದೆ.
KEA Recruitment 2026
ಇಲ್ಲಿ ಒಟ್ಟು 6 SDA ಹಾಗೂ FDA ಹುದ್ದೆಗಳು ಖಾಲಿ ಇದ್ದು, PUC ಅಥವಾ ಯಾವುದೇ ವಿಷಯದಲ್ಲಿ ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಸರ್ಕಾರಿ ಉದ್ಯೋಗದ ನೀರಿಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶವಾಗಿದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಇಂದಿನಿಂದ ಅಂದರೆ ದಿನಾಂಕ 20-05-2026 ರಿಂದ ಆರಂಭಗೊಂಡು 03-06-2026 ಕ್ಕೆ ಕೊನೆಗೊಳ್ಳುತ್ತದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಖಾಲಿ ಇರುವ SDA ಹಾಗೂ FDA ಹುದ್ದೆಗಳನ್ನು ವಿವಿಧ ವರ್ಗಗಳಿಗೆ ಅನುಗುಣವಾಗಿ ಹಂಚಿಕೆ ಮಾಡಿದ್ದು, ಇವುಗಳ ಕುರಿತು ಸಂಪೂರ್ಣ ಮಾಹಿತಿಗಾಗಿ ಈ ಒಂದು ಲೇಖನವನ್ನು ಸಂಪೂರ್ಣವಾಗಿ ಓದಿಕೊಳ್ಳಿ.

ಹುದ್ದೆಯ ವಿವರಣಾತ್ಮಕ ನೋಟ:
| ಸಂಸ್ಥೆಯ ಹೆಸರು | ಕರ್ನಾಟಕ ಪರೀಕ್ಷಾ ಪ್ರಾಧಿಕಾರ |
| ಹುದ್ದೆಗಳ ಹೆಸರು | ಸೆಕೆಂಡ್ ಡಿವಿಷನ್ ಅಸಿಸ್ಟೆಂಟ್ ಹಾಗೂ ಫಸ್ಟ್ ಡಿವಿಷನ್ ಅಸಿಸ್ಟೆಂಟ್ |
| ಹುದ್ದೆಗಳ ಸಂಖ್ಯೆ | ಒಟ್ಟು 6 ಹುದ್ದೆಗಳು |
| ಅರ್ಜಿ ಸಲ್ಲಿಸುವ ವಿಧಾನ | ಆನ್ಲೈನ್ ಮೂಲಕ |
| ಉದ್ಯೋಗ ಸ್ಥಳ | ಕರ್ನಾಟಕ |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 03-06-2026 |
ಹುದ್ದೆಯ ಸಂಕ್ಷಿಪ್ತ ವಿವರ:
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪ್ರಸ್ತುತ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಹುದ್ದೆಗಳ ವಿವರ ಈ ಕೆಳಕಂಡಂತಿದೆ.
| ಹುದ್ದೆಗಳ ಹೆಸರು | ಹುದ್ದೆಗಳ ಸಂಖ್ಯೆ |
| ಫಸ್ಟ್ ಡಿವಿಷನ್ ಅಸಿಸ್ಟೆಂಟ್ | 02 ಹುದ್ದೆಗಳು |
| ಸೆಕೆಂಡ್ ಡಿವಿಷನ್ ಅಸಿಸ್ಟೆಂಟ್ | 04 ಹುದ್ದೆಗಳು |
- ಪ್ರಥಮ ದರ್ಜೆ ಸಹಾಯಕ ಒಟ್ಟು 2 ಹುದ್ದೆಗಳಲ್ಲಿ 1 ಹುದ್ದೆಯನ್ನು ಪರಿಶಿಷ್ಟ ಜಾತಿಗೆ ಸೇರಿದ ಅಭ್ಯರ್ಥಿಗಳಿಗೆ ಹಂಚಿಕೆ ಮಾಡಿದರೆ ಇನ್ನು 1 ಹುದ್ದೆಗಳನ್ನು ಸಾಮಾನ್ಯ ಅಭ್ಯರ್ಥಿಗಳಿಗೆ ಹಂಚಿಕೆ ಮಾಡಲಾಗಿದೆ.
- ದ್ವಿತೀಯ ದರ್ಜೆ ಸಹಾಯಕ ಒಟ್ಟು 4 ಹುದ್ದೆಗಳಲ್ಲಿ 1 ಹುದ್ದೆಯನ್ನು ಪರಿಶಿಷ್ಟ ಜಾತಿಗೆ ಸೇರಿದ ಅಭ್ಯರ್ಥಿಗಳಿಗೆ, 1 ಹುದ್ದೆಗಳನ್ನು ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ ಹಾಗೂ 2 ಹುದ್ದೆಗಳನ್ನು ಸಾಮಾನ್ಯ ಅಭ್ಯರ್ಥಿಗಳಿಗೆ ಹಂಚಿಕೆ ಮಾಡಲಾಗಿದೆ.
ಶೈಕ್ಷಣಿಕ ಅರ್ಹತೆ:
- ಫಸ್ಟ್ ಡಿವಿಷನ್ ಅಸಿಸ್ಟೆಂಟ್:
ಫಸ್ಟ್ ಡಿವಿಷನ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪೂರ್ಣಗೊಳಿಸಿರಬೇಕು ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
- ಸೆಕೆಂಡ್ ಡಿವಿಷನ್ ಅಸಿಸ್ಟೆಂಟ್:
ಸೆಕೆಂಡ್ ಡಿವಿಷನ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಮಂಡಳಿಯಿಂದ PUC ಪೂರ್ಣಗೊಳಿಸಿರಬೇಕು ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು.
ವಯೋಮಿತಿ ವಿವರ:
ಫಸ್ಟ್ ಡಿವಿಷನ್ ಅಸಿಸ್ಟೆಂಟ್ ಹಾಗೂ ಸೆಕೆಂಡ್ ಡಿವಿಷನ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 03-06-2026 ಕ್ಕೆ ಅನ್ವಯವಾಗುವಂತೆ ಕನಿಷ್ಠ 18 ವರ್ಷ ಹಾಗೂ ಗರಿಷ್ಟ 40 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.
ವಯೋಮಿತಿ ಸಡಿಲಿಕೆ ವಿವರ:
ಸರ್ಕಾರದ ನಿಯಮಗಳ ಪ್ರಕಾರ ಮೀಸಲಾತಿ ವರ್ಗಗಳ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ. ಅವುಗಳ ವಿವರ ಹೀಗಿದೆ.
- ಒಬಿಸಿ ಪ್ರವರ್ಗ 2A, 2B, 3A, 3B ಅಭ್ಯರ್ಥಿಗಳಿಗೆ: 3 ವರ್ಷ
- SC/ ST ಹಾಗೂ ಪ್ರವರ್ಗ 1 ಅಭ್ಯರ್ಥಿಗಳಿಗೆ: 5 ವರ್ಷ
- ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಸೇವಾ ಅವಧಿಯ ಜೊತೆಗೆ ಹೆಚ್ಚುವರಿ 3 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಅರ್ಜಿ ಶುಲ್ಕ:
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಮಾಜಿ ಸೈನಿಕ ಮತ್ತು ತೃತೀಯ ಲಿಂಗಿ ಅಭ್ಯರ್ಥಿಗಳಿಗೆ ರೂ. 500/-
- ಸಾಮಾನ್ಯ ವರ್ಗ, ಇತರೆ ಹಿಂದುಳಿದ ವರ್ಗಗಳಾದ ಪ್ರವರ್ಗ 2A, 2B, 3A, 3B ಅಭ್ಯರ್ಥಿಗಳಿಗೆ ರೂ. 750/-
- ವಿಶೇಷ ಚೇತನ ಅಭ್ಯರ್ಥಿಗಳಿಗೆ: ರೂ. 250/-
ಅಭ್ಯರ್ಥಿಗಳು ತಮ್ಮ ವರ್ಗಕ್ಕೆ ಸಂಬಂಧಿಸಿದ ಅರ್ಜಿ ಶುಲ್ಕವನ್ನು ಆನ್ಲೈನ್ ಪಾವತಿ ವಿಧಾನಗಳ ಮೂಲಕ ಪಾವತಿಸಬೇಕಾಗುತ್ತದೆ.
ವೇತನ ಶ್ರೇಣಿ:
- ಫಸ್ಟ್ ಡಿವಿಷನ್ ಅಸಿಸ್ಟೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ. 44,425/- ರೂ. 83,700/-
- ಸೆಕೆಂಡ್ ಡಿವಿಷನ್ ಅಸಿಸ್ಟೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ. 34,100/- ರೂ. 67,600/-
ಅಗತ್ಯ ದಾಖಲೆಗಳು:
- ಪದವಿ ಅಂಕಪಟ್ಟಿ
- PUC ಅಂಕಪಟ್ಟಿ
- ಪದವಿ ಪ್ರಮಾಣಪತ್ರ
- ನಿವಾಸ ಪ್ರಮಾಣಪತ್ರ
- ಪಾಸ್ ಪೋರ್ಟ್ ಅಳತೆಯ ಫೋಟೋ
- ಅಭ್ಯರ್ಥಿಗಳ ಸಹಿ
- ಆಧಾರ್ ಕಾರ್ಡ್
- ಪ್ಯಾನ್ ಕಾರ್ಡ್
- ಹಾಗೂ ಇನ್ನಿತರ ಅಗತ್ಯ ದಾಖಲೆಗಳು
ಅರ್ಜಿ ಸಲ್ಲಿಸುವ ವಿಧಾನ:
- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ.
- ಮುಖಪುಟದಲ್ಲಿರುವ ನೇಮಕಾತಿ ವಿಭಾಗವನ್ನು ಕ್ಲಿಕ್ ಮಾಡಿ SDA- FDA ನೇಮಕಾತಿ ವಿಭಾಗವನ್ನು ಆಯ್ಕೆ ಮಾಡಿಕೊಳ್ಳಿ.
- ಹೊಸ ಬಳಕೆದಾರರಾಗಿದ್ದರೆ, ನ್ಯೂ ರಿಜಿಸ್ಟ್ರೇಷನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಮೂಲ ವಿವರಗಳನ್ನು ನಮೂದಿಸಿ ರಿಜಿಸ್ಟ್ರೇಷನ್ ಪ್ರಕ್ರಿಯೆ ಪೂರ್ಣಗೊಳಿಸಿ.
- ನಂತರ ಯೂಸರ್ ಐಡಿ ಹಾಗೂ ಪಾಸ್ವರ್ಡ್ ಬಳಸಿ ಲಾಗಿನ್ ಆಗಿ.
- ನಂತರ ಅಪ್ಲಿಕೇಶನ್ ಫಾರ್ಮ್ ನಲ್ಲಿ ಕೇಳಲಾದ ಎಲ್ಲಾ ವೈಯಕ್ತಿಕ ವಿವರ, ಶೈಕ್ಷಣಿಕ ವಿವರ ಹಾಗೂ ಇನ್ನಿತರ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ.
- ಅಭ್ಯರ್ಥಿಗಳ ಆಧಾರ್ ಕಾರ್ಡ್, ಶೈಕ್ಷಣಿಕ ಪ್ರಮಾಣಪತ್ರ, ಅಭ್ಯರ್ಥಿಗಳ ಸಹಿ, ಇತ್ತೀಚಿನ ಪಾಸ್ ಪೋರ್ಟ್ ಅಳತೆಯ ಫೋಟೋ ಸೇರಿದಂತೆ ಇನ್ನಿತರ ಎಲ್ಲಾ ದಾಖಲೆಗಳನ್ನು ಅಪ್ಲೋಡ್ ಮಾಡಿ.
- ಭರ್ತಿ ಮಾಡಿರುವ ಎಲ್ಲಾ ವಿವರಗಳು ಸರಿ ಇದೆಯೇ ಎಂದು ಖಚಿತಪಡಿಸಿಕೊಂಡು ನಿಮ್ಮ ವರ್ಗಕ್ಕೆ ಸಂಬಂಧಿಸಿದ ಅರ್ಜಿ ಶುಲ್ಕವನ್ನು ಪಾವತಿಸಿ ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.
ಆಯ್ಕೆ ಪ್ರಕ್ರಿಯೆ:
- ಸ್ಪರ್ಧಾತ್ಮಕ ಪರೀಕ್ಷೆ:
SDA ಹಾಗೂ FDA ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಮೊದಲ ಹಂತದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗುತ್ತದೆ. ಈ ಒಂದು ಪರೀಕ್ಷೆಯನ್ನು ಬೆಂಗಳೂರು, ಧಾರವಾಡ ಹಾಗೂ ಕಲಬುರಗಿ ಕೇಂದ್ರಗಳಲ್ಲಿ ನಡೆಸಲಾಗುತ್ತದೆ. ಈ ಒಂದು ಪರೀಕ್ಷೆಯಲ್ಲಿ ಪ್ರತಿ ತಪ್ಪು ಉತ್ತರಕ್ಕೆ 0.25 ಅಂಕಗಳನ್ನು ಕಳೆಯಲಾಗುತ್ತದೆ.
- ಕನ್ನಡ ಭಾಷಾ ಪರೀಕ್ಷೆ:
ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಿದ ನಂತರ ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆಯನ್ನು ನಡೆಸಲಾಗುತ್ತದೆ. ಅಭ್ಯರ್ಥಿಗಳು SSLC, PUC ಯಲ್ಲಿ ಕನ್ನಡ ವಿಷಯವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಆಯ್ಕೆಮಾಡಿಕೊಂಡಿದ್ದರೆ ಇಂತಹ ಅಭ್ಯರ್ಥಿಗಳಿಗೆ ಈ ಹಂತದಲ್ಲಿ ವಿನಾಯಿತಿ ನೀಡಲಾಗುತ್ತದೆ.
ಪ್ರಮುಖ ದಿನಾಂಕಗಳು:
| ಪ್ರಮುಖ ಈವೆಂಟ್ | ದಿನಾಂಕ |
|---|---|
| ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ | 20-05-2026 |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 03-06-2026 |
| ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ | 04-06-2026 ಸಂಜೆ 4 ಗೆಂಟೆಯ ಒಳಗೆ |
ಪ್ರಮುಖ ಲಿಂಕುಗಳು:
| ಅಧಿಕೃತ ವೆಬ್ಸೈಟ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ಅಧಿಸೂಚನೆ ಪಿಡಿಎಫ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಅಂತಿಮ ತೀರ್ಮಾನ:
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಉಳಿಕೆ ಮೂಲ ವೃಂದಗಳಲ್ಲಿ ಖಾಲಿ ಇರುವ ಫಸ್ಟ್ ಡಿವಿಷನ್ ಅಸಿಸ್ಟೆಂಟ್ ಹಾಗೂ ಸೆಕೆಂಡ್ ಡಿವಿಷನ್ ಅಸಿಸ್ಟೆಂಟ್ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಅರ್ಹ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ನಿಮಗೇನಾದರೂ ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಇದ್ದರೆ, ಇಂದೇ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಿ.
ಇತರೆ ಪ್ರಮುಖ ಲಿಂಕುಗಳು:
- BOB: 5,000 ಹುದ್ದೆಗಳು! ಬ್ಯಾಂಕಿಂಗ್ ಕ್ಷೇತ್ರದಲ್ಲಿ ಭರ್ಜರಿ ಉದ್ಯೋಗಾವಕಾಶ । ಪದವೀಧರರಿಗೆ ಗೋಲ್ಡನ್ ಚಾನ್ಸ್
- NHAI: ಭಾರತೀಯ ರಾಷ್ಟೀಯ ಹೆದ್ದಾರಿ ಪ್ರಾಧಿಕಾರದಲ್ಲಿ ಬೃಹತ್ ನೇಮಕಾತಿ 2026 | ಕೊನೆಯ ದಿನಾಂಕ ಜೂನ್ 15
- KSP: ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಭರ್ಜರಿ ಉದ್ಯೋಗಾವಕಾಶ! । ಕೊನೆಯ ದಿನಾಂಕ ಮೇ 24
- KRCL: ರೂ. 47,220/- ವೇತನ! ಕೊಂಕಣ ರೈಲ್ವೆಯಲ್ಲಿ ಬೃಹತ್ ನೇಮಕಾತಿ 2026 । ಯಾವುದೇ ಲಿಖಿತ ಪರೀಕ್ಷೆ + ಅರ್ಜಿ ಶುಲ್ಕವಿಲ್ಲ
- IIT Dharwad: ಭಾರತೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ಭರ್ಜರಿ ಉದ್ಯೋಗಾವಕಾಶ! ಯಾವುದೇ ಅರ್ಜಿ ಶುಲ್ಕವಿಲ್ಲ । ಮೇ 31 ಕೊನೆಯ ದಿನಾಂಕ