ಕರ್ನಾಟಕ ಸರ್ಕಾರಿ ವಲಯದಲ್ಲಿ ಉದ್ಯೋಗ ಮಾಡಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್! ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳಿ ನಿಯಮಿತ ಸಂಸ್ಥೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿವಮೊಗ್ಗ, ದಾವಣಗೆರೆ ಹಾಗೂ ಚಿತ್ರದುರ್ಗ ಜಿಲ್ಲಾ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ ಸಂಸ್ಥೆಯು ಪ್ರಸ್ತುತ ಸಾಲಿನಲ್ಲಿ ಹೊಚ್ಚ ಹೊಸ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
KMF SHIMUL Recruitment 2026
ಇಲ್ಲಿ ಜೂನಿಯರ್ ಟೆಕ್ನಿಷಿಯನ್, ಅಸಿಸ್ಟೆಂಟ್ ಮ್ಯಾನೇಜರ್ ಸೇರಿದಂತೆ ಒಟ್ಟು 194 ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, 10 ನೇ ತರಗತಿ ಜೊತೆಗೆ ಯಾವುದೇ ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ದಿನಾಂಕ 14-06-2026 ರಿಂದ ಆರಂಭಗೊಂಡು 14-07-2026 ಕ್ಕೆ ಕೊನೆಗೊಳ್ಳುತ್ತದೆ.
ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗದಲ್ಲಿ ವೃತ್ತಿಜೀವನವನ್ನು ಪ್ರಾರಂಭಿಸಬೇಕೆಂದಿರುವ ಅಭ್ಯರ್ಥಿಗಳಿಗೆ ಇದು ಸುವರ್ಣಾವಕಾಶವಾಗಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಪ್ರಸ್ತುತ ಲೇಖನದಲ್ಲಿ ನೀಡಲಾದ ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ವಿಧಾನ, ಆಯ್ಕೆ ಪ್ರಕ್ರಿಯೆ ಹಾಗೂ ವೇತನ ಶ್ರೇಣಿ ಸೇರಿದಂತೆ ಹುದ್ದೆಗೆ ಸಂಬಂಧಿಸಿದ ಎಲ್ಲ ವಿವರಗಳನ್ನು ಸಂಪೂರ್ಣವಾಗಿ ಓದಿಕೊಂಡು KMF ಶಿಮುಲ್ ನ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ.

ಹುದ್ದೆಯ ಕಿರು ವಿಮರ್ಶೆ:
| ನೇಮಕಾತಿ ಸಂಸ್ಥೆ | ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ, |
| ಹುದ್ದೆಯ ಹೆಸರು | ಅಸಿಸ್ಟೆಂಟ್ ಮ್ಯಾನೇಜರ್, ಜೂನಿಯರ್ ಟೆಕ್ನಿಷಿಯನ್, ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್ಸ್, ಕೆಮಿಸ್ಟ್ ಹಾಗೂ ವಿವಿಧ ಹುದ್ದೆಗಳು |
| ಹುದ್ದೆಯ ಸಂಖ್ಯೆ | 194 ಹುದ್ದೆಗಳು |
| ಉದ್ಯೋಗ ಸ್ಥಳ | ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ – ಕರ್ನಾಟಕ |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 14-07-2026 |
| ಅರ್ಜಿ ಸಲ್ಲಿಸುವ ವಿಧಾನ | ಆನ್ಲೈನ್ ಮೂಲಕ |
ಹುದ್ದೆಯ ವಿವರ:
ಕೆಎಂಎಫ್ ಶಿಮುಲ್ ಸಂಸ್ಥೆಯು ಒಟ್ಟು 194 ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಹುದ್ದೆಗಳ ವಿವರ ಈ ಕೆಳಕಂಡಂತಿದೆ.
| ಹುದ್ದೆಗಳ ವಿವರ | ಹುದ್ದೆಗಳ ಸಂಖ್ಯೆ |
| ಜೂನಿಯರ್ ಟೆಕ್ನಿಷಿಯನ್ | 50 ಹುದ್ದೆಗಳು |
| ಕೆಮಿಸ್ಟ್ ಗ್ರೇಡ್ -II | 28 ಹುದ್ದೆಗಳು |
| ಎಸ್ಟೆಂಷನ್ ಆಫೀಸರ್ ಗ್ರೇಡ್ -III | 17 ಹುದ್ದೆಗಳು |
| ಅಸಿಸ್ಟೆಂಟ್ ಮ್ಯಾನೇಜರ್ (AH/ AI) | 17 ಹುದ್ದೆಗಳು |
| ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್ ಗ್ರೇಡ್ -II | 17 ಹುದ್ದೆಗಳು |
| ಟೆಕ್ನಿಕಲ್ ಆಫೀಸರ್ (DT) | 14 ಹುದ್ದೆಗಳು |
| ಜೂನಿಯರ್ ಸಿಸ್ಟಮ್ ಆಪರೇಟರ್ | 13 ಹುದ್ದೆಗಳು |
| ಅಕೌಂಟ್ಸ್ ಅಸಿಸ್ಟೆಂಟ್ ಗ್ರೇಡ್ -II | 12 ಹುದ್ದೆಗಳು |
| ಮಾರ್ಕೆಟಿಂಗ್ ಅಸಿಸ್ಟೆಂಟ್ ಗ್ರೇಡ್ -II | 10 ಹುದ್ದೆಗಳು |
| ಕೆಮಿಸ್ಟ್ ಗ್ರೇಡ್ -I | 04 ಹುದ್ದೆಗಳು |
| ಅಸಿಸ್ಟೆಂಟ್ ಮ್ಯಾನೇಜರ್ (ಎಫ್/ ಎಫ್) | 03 ಹುದ್ದೆಗಳು |
| ಟೆಕ್ನಿಕಲ್ ಆಫೀಸರ್ (ಇಂಜಿನಿಯರ್) | 02 ಹುದ್ದೆಗಳು |
| ಟೆಕ್ನಿಕಲ್ ಆಫೀಸರ್ (ಕ್ವಾಲಿಟಿ ಕಂಟ್ರೋಲ್) | 02 ಹುದ್ದೆಗಳು |
| ಮಾರ್ಕೆಟಿಂಗ್ ಆಫೀಸರ್ | 02 ಹುದ್ದೆಗಳು |
| ಅಸಿಸ್ಟೆಂಟ್ ಮ್ಯಾನೇಜರ್ (ಆಡಳಿತ) | 01 ಹುದ್ದೆ |
| ಎಂಐಎಸ್/ ಸಿಸ್ಟಮ್ ಆಫೀಸರ್ | 01 ಹುದ್ದೆ |
| ಸ್ಟೈನೋಗ್ರಾಫರ್ ಗ್ರೇಡ್ -II | 01 ಹುದ್ದೆ |
ಶೈಕ್ಷಣಿಕ ಅರ್ಹತೆ:
- ಜೂನಿಯರ್ ಟೆಕ್ನಿಷಿಯನ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ ಅಥವಾ ಐಟಿಐ ಪೂರ್ಣಗೊಳಿಸಿರಬೇಕು.
- ಕೆಮಿಸ್ಟ್ ಗ್ರೇಡ್ -I, ಕೆಮಿಸ್ಟ್ ಗ್ರೇಡ್ -II, ಅಸಿಸ್ಟೆಂಟ್ ಮ್ಯಾನೇಜರ್ (ಎಫ್/ ಎಫ್) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಎಸ್ಸಿ ಪದವಿ ಪೂರ್ಣಗೊಳಿಸಿರಬೇಕು.
- ಎಸ್ಟೆಂಷನ್ ಆಫೀಸರ್ ಗ್ರೇಡ್ -III, ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್ ಗ್ರೇಡ್ -II, ಸ್ಟೈನೋಗ್ರಾಫರ್ ಗ್ರೇಡ್ -II ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಪದವಿ ಪೂರ್ಣಗೊಳಿಸಿರಬೇಕು.
- ಅಸಿಸ್ಟೆಂಟ್ ಮ್ಯಾನೇಜರ್ (AH/ AI) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿವಿಎಸ್ಸಿ ಅಂಡ್ ಎಹೆಚ್ ಪದವಿ ಪೂರ್ಣಗೊಳಿಸಿರಬೇಕು.
- ಟೆಕ್ನಿಕಲ್ ಆಫೀಸರ್ (ಇಂಜಿನಿಯರ್), ಟೆಕ್ನಿಕಲ್ ಆಫೀಸರ್ (DT), ಎಂಐಎಸ್/ ಸಿಸ್ಟಮ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಿತ ವಿಷಯದಲ್ಲಿ ಬಿಇ, ಬಿಟೆಕ್ ಪದವಿ ಪೂರ್ಣಗೊಳಿಸಿರಬೇಕು.
- ಜೂನಿಯರ್ ಸಿಸ್ಟಮ್ ಆಪರೇಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ ಅಥವಾ ಡಿಪ್ಲೊಮಾ ಪೂರ್ಣಗೊಳಿಸಿರಬೇಕು.
- ಅಕೌಂಟ್ಸ್ ಅಸಿಸ್ಟೆಂಟ್ ಗ್ರೇಡ್ -II ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಕಾಂ ಪದವಿ ಪೂರ್ಣಗೊಳಿಸಿರಬೇಕು.
- ಮಾರ್ಕೆಟಿಂಗ್ ಆಫೀಸರ್, ಮಾರ್ಕೆಟಿಂಗ್ ಅಸಿಸ್ಟೆಂಟ್ ಗ್ರೇಡ್ -II ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಬಿಎಂ, ಬಿಕಾಂ, ಬಿಎಸ್ಸಿ ಪದವಿ ಪೂರ್ಣಗೊಳಿಸಿರಬೇಕು.
- ಅಸಿಸ್ಟೆಂಟ್ ಮ್ಯಾನೇಜರ್ (ಆಡಳಿತ) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಂಬಿಎ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ ವಿವರ:
- ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷದಿಂದ ಗರಿಷ್ಟ 35 ವರ್ಷ ವಯೋಮಿತಿಯನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ ವಿವರ:
ಸರ್ಕಾರದ ನಿಯಮಗಳ ಪ್ರಕಾರ ಮೀಸಲಾತಿ ವರ್ಗಗಳ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗಿದ್ದು ಅವುಗಳ ವಿವರ ಈ ಕೆಳಕಂಡಂತಿದೆ.
- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಹಾಗೂ ಪ್ರವರ್ಗ -I ಅಭ್ಯರ್ಥಿಗಳಿಗೆ: 5 ವರ್ಷ
- ಇತರೆ ಹಿಂದುಳಿದ 2A, 2B, 3A, 3B ವರ್ಗಗಳ ಅಭ್ಯರ್ಥಿಗಳಿಗೆ: 3 ವರ್ಷ
ಅರ್ಜಿ ಶುಲ್ಕ:
- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಹಾಗೂ ಪ್ರವರ್ಗ -I ಅಭ್ಯರ್ಥಿಗಳಿಗೆ: ರೂ. 500/-
- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, PwBD ಹಾಗೂ ಪ್ರವರ್ಗ -I ಅಭ್ಯರ್ಥಿಗಳನ್ನು ಹೊರತುಪಡಿಸಿ ಉಳಿದ ಎಲ್ಲ ವರ್ಗಗಳ ಅಭ್ಯರ್ಥಿಗಳಿಗೆ: ರೂ. 1000/-
ವೇತನ ಶ್ರೇಣಿ:
- ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 83,700/- ದಿಂದ ರೂ. 1,55,200/- ವೇತನವನ್ನು ನೀಡಲಾಗುತ್ತದೆ.
- ಟೆಕ್ನಿಕಲ್ ಆಫೀಸರ್, ಎಂಐಎಸ್/ ಸಿಸ್ಟಮ್ ಆಫೀಸರ್, ಮಾರ್ಕೆಟಿಂಗ್ ಆಫೀಸರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 69,250/- ದಿಂದ ರೂ. 1,34,200/- ವೇತನವನ್ನು ನೀಡಲಾಗುತ್ತದೆ.
- ಕೆಮಿಸ್ಟ್, ಎಸ್ಟೆಂಷನ್ ಆಫೀಸರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 54,175/- ದಿಂದ ರೂ. 99,400/- ವೇತನವನ್ನು ನೀಡಲಾಗುತ್ತದೆ.
- ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್, ಅಕೌಂಟ್ಸ್ ಅಸಿಸ್ಟೆಂಟ್, ಮಾರ್ಕೆಟಿಂಗ್ ಅಸಿಸ್ಟೆಂಟ್, ಕೆಮಿಸ್ಟ್ ಗ್ರೇಡ್ -II, ಜೂನಿಯರ್ ಸಿಸ್ಟಮ್ ಆಪರೇಟರ್, ಸ್ಟೈನೋಗ್ರಾಫರ್ ಗ್ರೇಡ್ -II ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 44,425/- ದಿಂದ ರೂ. 83,700/- ವೇತನವನ್ನು ನೀಡಲಾಗುತ್ತದೆ.
- ಜೂನಿಯರ್ ಟೆಕ್ನಿಷಿಯನ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 34,100/- ದಿಂದ ರೂ. 67,600/- ವೇತನವನ್ನು ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:
- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು KMF ಶಿಮುಲ್ ನ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ.
- ಮುಖಪುಟದಲ್ಲಿ ಕಾಣುವ ನೇಮಕಾತಿ 2026 ಲಿಂಕ್ ಮೇಲೆ ಕ್ಲಿಕ್ ಮಾಡಿ ನ್ಯೂ ರಿಜಿಸ್ಟ್ರೇಷನ್ ಲಿಂಕ್ ಅನ್ನು ಕ್ಲಿಕ್ ಮಾಡಿ. ನಿಮ್ಮ ಇಮೇಲ್ ಐಡಿ ಹಾಗೂ ಫೋನ್ ನಂಬರ್ ಬಳಸಿ ರಿಜಿಸ್ಟ್ರೇಷನ್ ಪ್ರಕ್ರಿಯೆ ಪೂರ್ಣಗೊಳಿಸಿ.
- ನಂತರ ಯೂಸರ್ ಹಾಗೂ ಪಾಸ್ವರ್ಡ್ ಬಳಸಿ ಲಾಗಿನ್ ಆಗಿ.
- ನಂತರ ನೀವು ಯಾವ ಹುದ್ದೆಗೆ ಅರ್ಜಿ ಸಲ್ಲಿಸುತ್ತೀರಾ? ಆ ಲಿಂಕ್ ಮೇಲೆ ಕ್ಲಿಕ್ ಮಾಡಿ.
- ಅಪ್ಲಿಕೇಶನ್ ಫಾರ್ಮ್ ನಲ್ಲಿ ಕೇಳಲಾದ ಎಲ್ಲ ವೈಯಕ್ತಿಕ ವಿವರ, ಶೈಕ್ಷಣಿಕ ವಿವರ, ಹಾಗೂ ಇನ್ನಿತರ ಅಗತ್ಯ ವಿವರಗಳನ್ನು ಭರ್ತಿ ಮಾಡಿ.
- ಶೈಕ್ಷಣಿಕ ಪ್ರಮಾಣಪತ್ರ, ಅಂಕಪಟ್ಟಿ, ಪಾಸ್ ಪೋರ್ಟ್ ಅಳತೆಯ ಫೋಟೋ, ಅಭ್ಯರ್ಥಿಗಳ ಸಹಿ, ಐಡಿ ಪ್ರೂಫ್ ಸೇರಿದಂತೆ ಇನ್ನಿತರ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ
- ನಿಮ್ಮ ವರ್ಗಕ್ಕೆ ಸಂಬಂಧಿಸಿದ ಅರ್ಜಿ ಶುಲ್ಕವನ್ನು ನೆಟ್ ಬ್ಯಾಂಕಿಂಗ್,ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ಬಳಸಿ ಆನ್ಲೈನ್ ಪಾವತಿ ವಿಧಾನಗಳ ಮೂಲಕ ಪಾವತಿಸಿ ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.
ಆಯ್ಕೆ ಪ್ರಕ್ರಿಯೆ:
- ಲಿಖಿತ ಪರೀಕ್ಷೆ
- ಮೌಖಿಕ ಸಂದರ್ಶನ
- ದಾಖಲಾತಿ ಪರಿಶೀಲನೆ
ಪ್ರಮುಖ ದಿನಾಂಕಗಳು:
| ಪ್ರಮುಖ ಈವೆಂಟ್ | ದಿನಾಂಕ |
|---|---|
| ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ | 14-06-2026 |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 14-07-2026 |
ಪ್ರಮುಖ ಲಿಂಕುಗಳು:
| ಅಧಿಕೃತ ವೆಬ್ಸೈಟ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಹುದ್ದೆಗೆ ಸಂಬಂಧಿಸಿದ ಅಧಿಸೂಚನೆ ಪಿಡಿಎಫ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಹುದ್ದೆಗೆ ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಅಂತಿಮ ತೀರ್ಮಾನ:
KMF ಶಿಮುಲ್ ಸಂಸ್ಥೆಯು ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆಯಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಮ್ಯಾನೇಜರ್, ಅಡ್ಮಿನಿಸ್ಟ್ರೇಟಿವ್ ಆಫೀಸರ್, ಜೂನಿಯರ್ ಟೆಕ್ನಿಷಿಯನ್ ಸೇರಿದಂತೆ ಇನ್ನಿತರ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ನೀವೇನಾದರೂ ಈ ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆಯನ್ನು ಹೊಂದಿದ್ದರೆ ಇಂದೇ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ಹುದ್ದೆಯನ್ನು ತಮ್ಮದಾಗಿಸಿಕೊಳ್ಳಿ.
ಪ್ರಮುಖ ಲಿಂಕುಗಳು:
| Whatsapp Group Link | Click Here |
| Telegram Group Link | Click Here |
| Instagram Link | Click Here |
ಇತರೆ ಪ್ರಮುಖ ಲಿಂಕುಗಳು
- DC Office: ಹಾವೇರಿ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಸರ್ಕಾರಿ ಉದ್ಯೋಗವಕಾಶ! ಯಾವುದೇ ಅರ್ಜಿ ಶುಲ್ಕ + ಲಿಖಿತ ಪರೀಕ್ಷೆ ಇಲ್ಲ
- Central Bank : ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 2026: 4,500 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ!
- Paramedical : ರೂ. 92,300/- ವೇತನ! ಪ್ಯಾರಾ ಮೆಡಿಕಲ್ ಸ್ಟಾಫ್ ಹುದ್ದೆಗಳ ನೇಮಕಾತಿ 2026 । ಜುಲೈ 7 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
- KPCL: ರೂ. 65,000/- ವೇತನ! ಕರ್ನಾಟಕ ವಿದ್ಯುತ್ ನಿಗಮ ನಿಯಮಿತದಲ್ಲಿ ಭರ್ಜರಿ ನೇಮಕಾತಿ 2026 । ಜೂನ್ 22 ಕೊನೆಯ ದಿನಾಂಕ