ಕೆಪಿಟಿಸಿಎಲ್: ಕರ್ನಾಟಕ ವಿದ್ಯುತ್ ಇಲಾಖೆಯಲ್ಲಿ ಅಸಿಸ್ಟೆಂಟ್ ಲೈನ್ಮೆನ್ ಹುದ್ದೆಗಳ ನೇಮಕಾತಿ! SSLC ಪಾಸ್ ಅಭ್ಯರ್ಥಿಗಳಿಗೆ ಭರ್ಜರಿ ಅವಕಾಶ

ನಮಸ್ಕಾರ ಸ್ನೇಹಿತರೆ, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ವ್ಯಾಪ್ತಿಯ ಶಿವಮೊಗ್ಗ ಹಾಗೂ ಚಿಕ್ಕಮಗಳೂರು ವ್ಯಾಪ್ತಿಯಲ್ಲಿ ಖಾಲಿ ಇರುವ 33 ಅಸಿಸ್ಟೆಂಟ್ ಲೈನ್ಮೆನ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

KPTCL Recruitment 2026


ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಲೈನ್ಮೆನ್ ಹುದ್ದೆಗಳನ್ನು ಮೀಸಲಾತಿ ಅನ್ವಯ ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಜಸ್ಟ್ SSLC ಪಾಸ್ ಆಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಪ್ರಸ್ತುತ ಲೇಖನದಲ್ಲಿ ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ, ವಯೋಮಿತಿ ವಿವರ, ಅರ್ಜಿ ಶುಲ್ಕ, ವೇತನ ಶ್ರೇಣಿ, ಅರ್ಜಿ ಸಲ್ಲಿಸುವ ವಿಧಾನ, ಆಯ್ಕೆ ಪ್ರಕ್ರಿಯೆ ಸೇರಿದಂತೆ ಇನ್ನಿತರ ಎಲ್ಲ ಮಾಹಿತಿಯನ್ನು ನೀಡಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಎಲ್ಲ ಮಾಹಿತಿಯನ್ನು ಸಂಪೂರ್ಣವಾಗಿ ಓದಿಕೊಂಡು ನಂತರ ಸಂಬಂಧಿತ ಕಚೇರಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ.

KPTCL

ಹುದ್ದೆಯ ಕಿರು ವಿಮರ್ಶೆ:

ನೇಮಕಾತಿ ಸಂಸ್ಥೆ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ
ಹುದ್ದೆಗಳ ಹೆಸರು ಅಸಿಸ್ಟೆಂಟ್ ಲೈನ್ಮೆನ್
ಹುದ್ದೆಗಳ ಸಂಖ್ಯೆ ಒಟ್ಟು 33 ಹುದ್ದೆಗಳು
ಉದ್ಯೋಗ ಸ್ಥಳ ಶಿವಮೊಗ್ಗ ಮತ್ತು ಚಿಕ್ಕಮಗಳೂರು ವಿಭಾಗದ ವಿದ್ಯುತ್ ಉಪಕೇಂದ್ರಗಳು
ಉದ್ಯೋಗದ ಸ್ವರೂಪ ಹೊರಗುತ್ತಿಗೆ ಆಧಾರಿತ
ಅರ್ಜಿ ಸಲ್ಲಿಸುವ ವಿಧಾನ ಆಫ್ಲೈನ್ ಮೂಲಕ

ಹುದ್ದೆಯ ಸಂಕ್ಷಿಪ್ತ ಮಾಹಿತಿ:

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಪ್ರಸ್ತುತ ಸಾಲಿನಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ವ್ಯಾಪ್ತಿಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಅರ್ಹ ಅಭ್ಯರ್ಥಿಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತಿದೆ. ಮಾನ್ಯತೆ ಪಡೆದ ಮಂಡಳಿಯಿಂದ SSLC ಉತ್ತೀರ್ಣರಾಗಿರುವ ಕನಿಷ್ಠ 18 ವರ್ಷದಿಂದ ಗರಿಷ್ಟ 35 ವರ್ಷ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಹುದ್ದೆಯ ವಿವರ:

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಪ್ರಸ್ತುತ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಇಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಲೈನ್ಮೆನ್ ಹುದ್ದೆಗಳನ್ನು ಮೀಸಲಾತಿ ಅನ್ವಯ ಹಂಚಿಕೆ ಮಾಡಲಾಗಿದೆ ಅವುಗಳ ವಿವರ ಈ ಕೆಳಕಂಡಂತಿದೆ.

ವಿವಿಧ ವರ್ಗಗಳು ಹುದ್ದೆಗಳ ಸಂಖ್ಯೆ
ಪ್ರವರ್ಗ I 3 ಹುದ್ದೆಗಳು
ಪ್ರವರ್ಗ II (A)10 ಹುದ್ದೆಗಳು
ಪ್ರವರ್ಗ II (B)3 ಹುದ್ದೆಗಳು
ಪ್ರವರ್ಗ III (A)2 ಹುದ್ದೆಗಳು
ಪ್ರವರ್ಗ III (B)3 ಹುದ್ದೆಗಳು
ಪರಿಶಿಷ್ಟ ಜಾತಿ ಪ್ರವರ್ಗ ಎ 4 ಹುದ್ದೆಗಳು
ಪರಿಶಿಷ್ಟ ಜಾತಿ ಪ್ರವರ್ಗ ಬಿ 4 ಹುದ್ದೆಗಳು
ಪರಿಶಿಷ್ಟ ಜಾತಿ ಪ್ರವರ್ಗ ಸಿ 3 ಹುದ್ದೆಗಳು
ಪರಿಶಿಷ್ಟ ಪಂಗಡ 2 ಹುದ್ದೆಗಳು

ಶೈಕ್ಷಣಿಕ ಅರ್ಹತೆ:

ಅಸಿಸ್ಟೆಂಟ್ ಲೈನ್ಮೆನ್:

  • ಅಸಿಸ್ಟೆಂಟ್ ಲೈನ್ಮೆನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ SSLC ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ ವಿವರ:

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಲೈನ್ಮೆನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷದಿಂದ ಗರಿಷ್ಟ 35 ವರ್ಷ ವಯೋಮಿತಿಯನ್ನು ಹೊಂದಿರಬೇಕು.

ವಯೋಮಿತಿ ಸಡಿಲಿಕೆ ವಿವರ:

ಸರ್ಕಾರದ ನಿಯಮಗಳ ಪ್ರಕಾರ ಮೀಸಲಾತಿ ವರ್ಗಗಳ ಅಭ್ಯರ್ಥಿಗಳಿಗೆ ಈ ಕೆಳಗೆ ತಿಳಿಸಿರುವಂತೆ ವಯೋಮಿತಿ ಸಡಿಲಿಕೆ ಇರುತ್ತದೆ.

  • ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ: 3 ವರ್ಷ
  • ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ: 5 ವರ್ಷ

ಅರ್ಜಿ ಶುಲ್ಕ:

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಲೈನ್ಮೆನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಯಾವುದೇ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವನ್ನು ನಿಗದಿಪಡಿಸಿಲ್ಲ ಹಾಗಾಗಿ ಅಭ್ಯರ್ಥಿಗಳು ಸಂಬಂಧಿತ ಕಚೇರಿಗೆ ಭೇಟಿ ನೀಡಿ ಉಚಿತವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ವೇತನ ಶ್ರೇಣಿ:

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಲೈನ್ಮೆನ್ ಹುದ್ದೆಗಳನ್ನುಏಜೆನ್ಸಿ ಮುಖಾಂತರ ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳುತ್ತಿರುವುದರಿಂದ, KPTCL ನ ವಿವಿಧ ಶಾಖೆಗಳಿಗೆ ಅನುಗುಣವಾಗಿ ವೇತನವನ್ನು ನಿಗದಿಪಡಿಸಲಾಗಿದೆ. ಅವುಗಳ ವಿವರ ಈ ಕೆಳಕಂಡಂತಿದೆ.

  • ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ ಶಿವಮೊಗ್ಗ 1 ಮತ್ತು 2 ಹಾಗೂ ಚಿಕ್ಕಮಗಳೂರು ಶಾಖೆಗಳಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಲೈನ್ಮೆನ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 24,407/- ವೇತನವನ್ನು ನೀಡಲಾಗುತ್ತದೆ ಜೊತೆಗೆ ಸಂಸ್ಥೆಯ ನಿಯಮಾವಳಿಗಳ ಪ್ರಕಾರ ಇಎಸ್ಐ ಮತ್ತು ಇಪಿಎಫ್ ಸೌಲಭ್ಯಗಳು ಲಭ್ಯವಿರುತ್ತದೆ.
  • KPTCL ನ ಸಾಗರ, ಜೋಗ್, ತರೀಕೆರೆ, ಬೀರೂರು, ತೀರ್ಥಹಳ್ಳಿ ಶಾಖೆಗಳಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಲೈನ್ಮೆನ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 22,282/- ವೇತನವನ್ನು ನೀಡಲಾಗುತ್ತದೆ ಜೊತೆಗೆ ಸಂಸ್ಥೆಯ ನಿಯಮಾವಳಿಗಳ ಪ್ರಕಾರ ಇಎಸ್ಐ ಮತ್ತು ಇಪಿಎಫ್ ಸೌಲಭ್ಯಗಳು ಲಭ್ಯವಿರುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:

  • ಅರ್ಹ ಅಭ್ಯರ್ಥಿಗಳು ತಮ್ಮ ಎಲ್ಲ ವಿವರಗಳನ್ನು ಒಳಗೊಂಡಿರುವಂತಹ ರೆಸೂಮ್ ಅನ್ನು ಸಿದ್ಧಪಡಿಸಿಕೊಂಡು ಅದಕ್ಕೆ ನಿಮ್ಮ ಇತ್ತೀಚಿನ ಪಾಸ್ ಪೋರ್ಟ್ ಅಳತೆಯ ಫೋಟೋವನ್ನು ಅಂಟಿಸಿ.
  • ನಂತರ ರೆಸೂಮ್ ನೊಂದಿಗೆ ಈ ಕೆಳಗೆ ತಿಳಿಸಲಾದ ದಾಖಲೆಗಳನ್ನು ಕಡ್ಡಾಯವಾಗಿ ಲಗತ್ತಿಸಿ.
    • ಶೈಕ್ಷಣಿಕ ಪ್ರಮಾಣಪತ್ರ, ಆಧಾರ್ ಕಾರ್ಡ್, ಶೈಕ್ಷಣಿಕ ಅಂಕಪಟ್ಟಿ ಹಾಗೂ ಇನ್ನಿತರ ಅಗತ್ಯ ದಾಖಲೆಗಳು.
  • ನಂತರ ಸಿದ್ದಪಡಿಸಿದ ರೆಸೂಮ್ ಹಾಗೂ ಅಗತ್ಯ ದಾಖಲೆಗಳನ್ನು ಈ ಕೆಳಗೆ ತಿಳಿಸಿರುವ ವಿಳಾಸಕ್ಕೆ ಖುದ್ದಾಗಿ ಭೇಟಿ ನೀಡಿ ಅಥವಾ ಅಂಚೆ ಮೂಲಕ ಸಲ್ಲಿಸಿ.

ಅರ್ಜಿ ಸಲ್ಲಿಸುವ ವಿಳಾಸ:

ಕೆ.ಎಸ್.ಎಫ್ 9, ಕಾರ್ಪೊರೇಟ್ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್, ಎಂ, ಆರ್ ಮ್ಯಾನ್ಷನ್, ನಂ. 26, 34/4, ಜ್ಞಾನಜ್ಯೋತಿ ನಗರ, ಮಲ್ಲತ್ತಹಳ್ಳಿ ಬಸ್ ಸ್ಟಾಂಡ್, ರಿಂಗ್ ರಸ್ತೆ, ಹೆಚ್.ಪಿ ಪೆಟ್ರೋಲ್ ಬಂಕ್ ಹತ್ತಿರ, ಬೆಂಗಳೂರು- 560056

ಆಯ್ಕೆ ಪ್ರಕ್ರಿಯೆ:

  • ಮೆರಿಟ್ ಪಟ್ಟಿ:

ಅಸಿಸ್ಟೆಂಟ್ ಲೈನ್ಮೆನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು SSLC ಅಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿಯನ್ನು ಸಿದ್ದಪಡಿಸಲಾಗುತ್ತದೆ.

  • ದೈಹಿಕ ಸಾಮರ್ಥ್ಯ ಪರೀಕ್ಷೆ:

ಮೆರಿಟ್ ಪಟ್ಟಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳನ್ನು ಹುದ್ದೆಗೆ ಅಗತ್ಯವಿರುವ ದೈಹಿಕ ಫಿಟ್ನೆಸ್ ಪರೀಕ್ಷೆಯನ್ನು ನಡೆಸಲಾಗುತ್ತದೆ.

  • ದಾಖಲಾತಿ ಪರಿಶೀಲನೆ:

ಅಂತಿಮವಾಗಿ ಅಭ್ಯರ್ಥಿಗಳ ದಾಖಲೆಗಳನ್ನು ಪರಿಶೀಲಿಸಿ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಪ್ರಮುಖ ದಿನಾಂಕಗಳು:

ಪ್ರಮುಖ ಈವೆಂಟ್ ದಿನಾಂಕ
ನೇಮಕಾತಿ ಅಧಿಸೂಚನೆ ಬಿಡುಗಡೆಗೊಂಡ ದಿನಾಂಕ 25-06-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನೇಮಕಾತಿ ಅಧಿಸೂಚನೆ ಹೊರಡಿಸಿದ 15 ರಿಂದ 21 ದಿನಗಳ ಒಳಗೆ

ಅಂತಿಮ ತೀರ್ಮಾನ:

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತವು ಶಿವಮೊಗ್ಗ ಹಾಗೂ ಚಿಕ್ಕಮಗಳೂರು ವಿಭಾಗದಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಲೈನ್ಮೆನ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಈ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಏಜೆನ್ಸಿ ಮುಕಾಂತರ ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ನೀವೇನಾದರೂ ಜಸ್ಟ್ SSLC ಪಾಸ್ ಆಗಿ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿದ್ದರೆ, ಈ ಮೇಲೆ ತಿಳಿಸಲಾಗಿರುವ ವಿಳಾಸಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಿ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಿ.


ಪ್ರಮುಖ ಲಿಂಕುಗಳು:

Whatsapp Group Link Click Here
Telegram Group Link Click Here
Instagram Link Click Here

ಇತರೆ ಪ್ರಮುಖ ಲಿಂಕುಗಳು:

Leave a Comment