KRCS: ವಿಜಯಪುರದ ಪ್ರತಿಷ್ಠಿತ ಸಂಸ್ಥೆಯಲ್ಲಿ ನೇರ ನೇಮಕಾತಿ 2026! ಯಾವುದೇ ಲಿಖಿತ ಪರೀಕ್ಷೆ + ಅರ್ಜಿ ಶುಲ್ಕ ಇಲ್ಲ । ಜುಲೈ 10 ಕೊನೆಯ ದಿನಾಂಕ

ನಮಸ್ಕಾರ ಸ್ನೇಹಿತರೆ, ನೀವೇನಾದರೂ ವಾಣಿಜ್ಯ ಪದವಿ ಅಥವಾ ಯಾವುದೇ ಪದವಿ ಪೂರ್ಣಗೊಳಿಸಿ, ಉತ್ತಮ ಉದ್ಯೋಗವನ್ನು ಹುಡುಕುತ್ತಿದ್ದಿರಾ? ಹಾಗಿದ್ದರೆ ನಿಮಗೊಂದು ಗುಡ್ ನ್ಯೂಸ್! ವಿಜಯಪುರದ ಪ್ರತಿಷ್ಠಿತ ಕಿತ್ತೂರು ರಾಣಿ ಚನ್ನಮ್ಮ ಸಂಸ್ಥೆಯು ಪ್ರಸ್ತುತ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

KRCS Recruitment 2026


ವಿಶೇಷವಾಗಿ ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸಂಬಂಧಿಸಿದ ನೇಮಕಾತಿ ಪ್ರಕ್ರಿಯೆಯಲ್ಲಿ ಅಭ್ಯರ್ಥಿಗಳಿಗೆ ಯಾವುದೇ ಲಿಖಿತ ಪರೀಕ್ಷೆಯನ್ನು ನಡೆಸುವುದಿಲ್ಲ. ಬದಲಾಗಿ ನೇರ ಸಂದರ್ಶನ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಪ್ರಸ್ತುತ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಆಡಳಿತ ಅಧಿಕಾರಿ ಹಾಗೂ ಅಕೌಂಟೆಂಟ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 10-07-2026 ವರೆಗೂ ಅವಕಾಶ ನೀಡಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಪ್ರಸ್ತುತ ಲೇಖನದಲ್ಲಿ ನೀಡಿರುವ ಹುದ್ದೆಗಳಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಓದಿಕೊಂಡು ನಂತರ ಅರ್ಜಿ ಸಲ್ಲಿಸಿ.

KRCS

ಹುದ್ದೆಯ ಕಿರು ವಿಮರ್ಶೆ:

ನೇಮಕಾತಿ ಸಂಸ್ಥೆಕಿತ್ತೂರು ರಾಣಿ ಚನ್ನಮ್ಮ ಸಂಸ್ಥೆ, ವಿಜಯಪುರ
ಹುದ್ದೆಯ ಹೆಸರು ಆಡಳಿತ ಅಧಿಕಾರಿ ಮತ್ತು ಅಕೌಂಟೆಂಟ್
ಹುದ್ದೆಯ ಸಂಖ್ಯೆ ಒಟ್ಟು 5 ಹುದ್ದೆಗಳು
ಉದ್ಯೋಗ ಸ್ಥಳ ವಿಜಯಪುರ – ಕರ್ನಾಟಕ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 10-07-2026
ಅರ್ಜಿ ಸಲ್ಲಿಸುವ ವಿಧಾನಆಫ್ಲೈನ್ ಮೂಲಕ

ಹುದ್ದೆಯ ಸಂಕ್ಷಿಪ್ತ ಮಾಹಿತಿ:

ವಿಜಯಪುರ ಜಿಲ್ಲೆಯ ಕಿತ್ತೂರು ರಾಣಿ ಚನ್ನಮ್ಮ ಸಂಸ್ಥೆಯು ಪ್ರಸ್ತುತ ಸಾಲಿನಲ್ಲಿ ಆಡಳಿತಾಧಿಕಾರಿ ಹಾಗೂ ಅಕೌಂಟೆಂಟ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಆಡಳಿತ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಎಂಬಿಎ ಅಥವಾ ಯಾವುದೇ ಪದವಿ ಪೂರ್ಣಗೊಳಿಸಿರಬೇಕು ಹಾಗೂ ಅಕೌಂಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಕಾಂ ಅಥವಾ ಎಂಕಾಂ ಪದವಿ ಪೂರ್ಣಗೊಳಿಸಿರಬೇಕು. ಇದರ ಜೊತೆಗೆ ಸಂಬಂಧಿತ ಕ್ಷೇತ್ರದಲ್ಲಿ ಕೆಲಸದ ಅನುಭವವನ್ನು ಹೊಂದಿರಬೇಕು.

ಹುದ್ದೆಯ ವಿವರ:

ಕಿತ್ತೂರು ರಾಣಿ ಚನ್ನಮ್ಮ ಸಂಸ್ಥೆ, ವಿಜಯಪುರ ಪ್ರಸ್ತುತ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಹುದ್ದೆಗಳ ವಿವರ ಈ ಕೆಳಕಂಡಂತಿದೆ.

ಹುದ್ದೆಗಳ ವಿವರ ಹುದ್ದೆಗಳ ಸಂಖ್ಯೆ
ಆಡಳಿತ ಅಧಿಕಾರಿ 2 ಹುದ್ದೆಗಳು
ಅಕೌಂಟೆಂಟ್ 3 ಹುದ್ದೆಗಳು

ಅರ್ಹತಾ ಮಾನದಂಡಗಳು:

ವಿಜಯಪುರದ ಪ್ರತಿಷ್ಠಿತ ಕಿತ್ತೂರು ರಾಣಿ ಚನ್ನಮ್ಮ ಸಂಸ್ಥೆಯಲ್ಲಿ ಖಾಲಿ ಇರುವ ಆಡಳಿತ ಅಧಿಕಾರಿ ಹಾಗೂ ಅಕೌಂಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಕೆಳಗೆ ತಿಳಿಸಿರುವ ಶೈಕ್ಷಣಿಕ ಅರ್ಹತೆ ಹಾಗೂ ವೃತ್ತಿಪರ ಅನುಭವವನ್ನು ಹೊಂದಿರಬೇಕು.

ಆಡಳಿತ ಅಧಿಕಾರಿ:

  • ಶೈಕ್ಷಣಿಕ ಅರ್ಹತೆ:
    • ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಎಂಬಿಎ ಅಥವಾ ಯಾವುದೇ ಪದವಿ ಪೂರ್ಣಗೊಳಿಸಿರಬೇಕು.
  • ಅನುಭವ:
    • ಜೊತೆಗೆ ಸಂಬಂಧಿತ ಕ್ಷೇತ್ರದಲ್ಲಿ ಕನಿಷ್ಠ 3 ವರ್ಷಗಳ ವೃತ್ತಿಪರ ಅನುಭವವನ್ನು ಹೊಂದಿರಬೇಕು.

ಅಕೌಂಟೆಂಟ್:

  • ಶೈಕ್ಷಣಿಕ ಅರ್ಹತೆ:
    • ಅಕೌಂಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಎಂಕಾಂ ಅಥವಾ ಬಿಕಾಂ ಪದವಿ ಪೂರ್ಣಗೊಳಿಸಿರಬೇಕು ಹಾಗೂ ಇದರೊಂದಿಗೆ ಟ್ಯಾಲಿ ಸಾಫ್ಟ್ವೇರ್ ಜ್ಞಾನವನ್ನು ಹೊಂದಿರಬೇಕು.
  • ಅನುಭವ:

ಅಕೌಂಟಿಂಗ್ ಕ್ಷೇತ್ರದಲ್ಲಿ ಕನಿಷ್ಠ 2 ವರ್ಷದಿಂದ 3 ವರ್ಷಗಳ ಅನುಭವವನ್ನು ಹೊಂದಿರಬೇಕು.

ವಯೋಮಿತಿ ವಿವರ:

ಕಿತ್ತೂರು ರಾಣಿ ಚನ್ನಮ್ಮ ಸಂಸ್ಥೆಯ ನಿಯಮಾವಳಿಗಳ ಪ್ರಕಾರ, ಆಡಳಿತ ಅಧಿಕಾರಿ ಹಾಗೂ ಅಕೌಂಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು. ಗರಿಷ್ಟ ವಯೋಮಿತಿಯನ್ನು ಸಂಸ್ಥೆಯ ನಿಯಮಾವಳಿಗಳ ಪ್ರಕಾರ ನಿಗದಿಪಡಿಸಲಾಗುತ್ತದೆ.

ವಯೋಮಿತಿ ಸಡಿಲಿಕೆ ವಿವರ:

ಸರ್ಕಾರದ ನಿಯಮಾವಳಿಗಳ ಪ್ರಕಾರ ಹಾಗೂ ಸಂಸ್ಥೆಯ ನಿಯಮಾವಳಿಗಳ ಪ್ರಕಾರ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ:

ಕಿತ್ತೂರು ರಾಣಿ ಚನ್ನಮ್ಮ ಸಂಸ್ಥೆಯ ಆಡಳಿತ ಅಧಿಕಾರಿ ಹಾಗೂ ಅಕೌಂಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವನ್ನು ನಿಗದಿಪಡಿಸಿಲ್ಲ. ಹಾಗಾಗಿ ಅಭ್ಯರ್ಥಿಗಳು ಉಚಿತವಾಗಿ ಸಂಬಂಧಿತ ಕಚೇರಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.

ವೇತನ ಶ್ರೇಣಿ:

ಆಡಳಿತ ಅಧಿಕಾರಿ ಹಾಗೂ ಅಕೌಂಟೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಿತ್ತೂರು ರಾಣಿ ಚನ್ನಮ್ಮ ಸಂಸ್ಥೆಯ ವೇತನ ಶ್ರೇಣಿಯ ನಿಯಮಗಳ ಪ್ರಕಾರ ಮಾಸಿಕ ವೇತನವನ್ನು ನಿಗದಿಪಡಿಸಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:

  • ಅರ್ಹ ಅಭ್ಯರ್ಥಿಗಳು ತಮ್ಮ ಎಲ್ಲ ವಿವರಗಳನ್ನು ಒಳಗೊಂಡಿರುವಂತಹ ರೆಸೂಮ್ ಅನ್ನು ಸಿದ್ಧಪಡಿಸಿಕೊಂಡು ಅದಕ್ಕೆ ನಿಮ್ಮ ಇತ್ತೀಚಿನ ಪಾಸ್ ಪೋರ್ಟ್ ಅಳತೆಯ ಫೋಟೋವನ್ನು ಅಂಟಿಸಿ.
  • ನಂತರ ರೆಸೂಮ್ ನೊಂದಿಗೆ ಈ ಕೆಳಗೆ ತಿಳಿಸಲಾದ ದಾಖಲೆಗಳನ್ನು ಕಡ್ಡಾಯವಾಗಿ ಲಗತ್ತಿಸಿ.
    • ಶೈಕ್ಷಣಿಕ ಪ್ರಮಾಣಪತ್ರ, ಆಧಾರ್ ಕಾರ್ಡ್, ಅನುಭವ ಪ್ರಮಾಣಪತ್ರ, ಶೈಕ್ಷಣಿಕ ಅಂಕಪಟ್ಟಿ ಹಾಗೂ ಇನ್ನಿತರ ಅಗತ್ಯ ದಾಖಲೆಗಳು.
  • ನಂತರ ಸಿದ್ದಪಡಿಸಿದ ರೆಸೂಮ್ ಹಾಗೂ ಅಗತ್ಯ ದಾಖಲೆಗಳನ್ನು ಈ ಕೆಳಗೆ ತಿಳಿಸಿರುವ ವಿಳಾಸಕ್ಕೆ ನಿಗದಿ ಪಡಿಸಿದ ಕೊನೆಯ ದಿನಾಂಕದೊಳಗೆ ಅರ್ಜಿಯನ್ನು ಸಲ್ಲಿಸಿ.
ಅರ್ಜಿ ಸಲ್ಲಿಸುವ ವಿಳಾಸ:

ಅಧ್ಯಕ್ಷರು,

ಕಿತ್ತೂರು ರಾಣಿ ಚನ್ನಮ್ಮ ಸಂಸ್ಥೆ,

ಆಶ್ರಮ ರಸ್ತೆ, ಐಶ್ವರ್ಯ ನಗರ,

ವಿಜಯಪುರ – 586103

ಆಯ್ಕೆ ಪ್ರಕ್ರಿಯೆ:

ಆಡಳಿತ ಅಧಿಕಾರಿ ಅಥವಾ ಅಕೌಂಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಹೊಂದಿರುವ ಶೈಕ್ಷಣಿಕ ಅರ್ಹತೆ ಹಾಗೂ ಅನುಭವಗಳ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಅನ್ನು ಸಿದ್ಧಪಡಿಸಲಾಗುತ್ತದೆ.

ನಂತರ ಶಾರ್ಟ್ ಲಿಸ್ಟ್ ನಲ್ಲಿ ಆಯ್ಕೆಯಾದ ಅಭ್ಯರ್ಥಿಗಳನ್ನು ದಿನಾಂಕ 12/07/2026 ರಂದು ಸಂಸ್ಥೆಯ ಕಚೇರಿ ವಿಳಾಸದಲ್ಲಿ ನೇರ ಸಂದರ್ಶನಕ್ಕೆ ಕರೆಯಲಾಗುತ್ತದೆ. ಸಂದರ್ಶನದಲ್ಲಿ ಅಭ್ಯರ್ಥಿಗಳ ಕಾರ್ಯಕ್ಷಮತೆ ಆಧಾರದ ಮೇಲೆ ಅಂತಿಮವಾಗಿ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಪ್ರಮುಖ ದಿನಾಂಕಗಳು:

ಪ್ರಮುಖ ಈವೆಂಟ್ ದಿನಾಂಕ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 10-07-2026
ನೇರ ಸಂದರ್ಶನ ನಡೆಯುವ ದಿನಾಂಕ 12-07-2026

ಅಂತಿಮ ತೀರ್ಮಾನ:

ವಿಜಯಪುರದ ಕಿತ್ತೂರು ರಾಣಿ ಚನ್ನಮ್ಮ ಸಂಸ್ಥೆಯ ಆಡಳಿತ ಅಧಿಕಾರಿ ಹಾಗೂ ಅಕೌಂಟೆಂಟ್ ಹುದ್ದೆಗಳಿಗೆ ಸಂಬಂಧಿಸಿದ ನೇಮಕಾತಿ ಪ್ರಕ್ರಿಯೆಯು ಯಾವುದೇ ಪದವೀಧರರಿಗೆ, ವಿಶೇಷವಾಗಿ ವಾಣಿಜ್ಯ ಮತ್ತು ಮ್ಯಾನೇಜ್ಮೆಂಟ್ ಹಿನ್ನಲೆ ಇರುವವರಿಗೆ ಉತ್ತಮ ಅವಕಾಶವಾಗಿದೆ. ಯಾವುದೇ ಲಿಖಿತ ಪರೀಕ್ಷೆಗಳಿಲ್ಲದೆ ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳುವುದರಿಂದ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಿ, ನಿಗದಿತ ದಿನಾಂಕದಂದು ಸಂದರ್ಶನಕ್ಕೆ ಭಾಗವಹಿಸಿ ಈ ಹುದ್ದೆಯನ್ನು ತಮ್ಮದಾಗಿಸಿಕೊಳ್ಳಿ.


ಪ್ರಮುಖ ಲಿಂಕುಗಳು:

Whatsapp Group Link Click Here
Telegram Group Link Click Here
Instagram Link Click Here

ಇತರೆ ಪ್ರಮುಖ ಲಿಂಕುಗಳು

Leave a Comment