KSP Application: ರೂ. 76,100/- ವೇತನ! ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ 3991 ಹುದ್ದೆಗಳ ಬೃಹತ್ ನೇಮಕಾತಿ । ಜುಲೈ 3 ಕೊನೆಯ ದಿನಾಂಕ

ನಮಸ್ಕಾರ ಸ್ನೇಹಿತರೆ, ನೀವೇನಾದರೂ ದೇಶಸೇವೆಯ ಜೊತೆಗೆ ವೃತ್ತಿಜೀವನವನ್ನು ಪ್ರಾರಂಭಿಸಬೇಕೆಂದು ಕನಸು ಕಾಣುತ್ತಿದ್ದೀರಾ? ಹಾಗಿದ್ದಿರೆ ನಿಮ್ಮ ಈ ಒಂದು ಕನಸ್ಸನ್ನು ನನಸು ಮಾಡಿಕೊಳ್ಳಲು ಅತ್ಯದ್ಭುತ ಅವಕಾಶ ನಿಮ್ಮ ಮುಂದಿದೆ.

KSP Civil Recruitment 2026


ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು 2026 ನೇ ಸಾಲಿನಲ್ಲಿ ಖಾಲಿ ಇರುವ ಪೊಲೀಸ್ ಕಾನ್ಸ್ಟೇಬಲ್ (ಸಿವಿಲ್) ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಇಲ್ಲಿ ಒಟ್ಟು 3991 ಹುದ್ದೆಗಳು ಖಾಲಿ ಇದ್ದು, ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶವಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ದಿನಾಂಕ 08-06-2026 ರಿಂದ ಆರಂಭಗೊಳ್ಳಲಿದ್ದು 03-07-2026 ಕ್ಕೆ ಕೊನೆಗೊಳ್ಳುತ್ತದೆ.

ಪ್ರಸ್ತುತ ಲೇಖನದಲ್ಲಿ ನೇಮಕಾತಿಗೆ ಸಂಬಂಧಿಸಿದ ಅರ್ಜಿ ಸಲ್ಲಿಸುವ ವಿಧಾನ, ಉದ್ಯೋಗ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಿತಿ ವಿವರ ಹಾಗೂ ಅರ್ಜಿ ಶುಲ್ಕಗಳ ಬಗ್ಗೆ ನಿಖರವಾದ ಮಾಹಿತಿಯನ್ನು ನೀಡಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಎಲ್ಲ ಮಾಹಿತಿಯನ್ನು ಸಂಪೂರ್ಣವಾಗಿ ಒಂದಿಕೊಂಡು ನಂತರ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ.

KSP Application

ಹುದ್ದೆಯ ಕಿರು ವಿಮರ್ಶೆ:

ನೇಮಕಾತಿ ಸಂಸ್ಥೆಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ
ಹುದ್ದೆಗಳ ಹೆಸರು ಪೊಲೀಸ್ ಕಾನ್ಸ್ಟೇಬಲ್ (ಸಿವಿಲ್)
ಹುದ್ದೆಗಳ ಸಂಖ್ಯೆ ಒಟ್ಟು 3991 ಹುದ್ದೆಗಳು
ಉದ್ಯೋಗ ಸ್ಥಳ ಕರ್ನಾಟಕ
ಅರ್ಜಿ ಸಲ್ಲಿಸುವ ವಿಧಾನ ಆನ್ಲೈನ್ ಮೂಲಕ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 03-07-2026

ಹುದ್ದೆಯ ಸಂಕ್ಷಿಪ್ತ ಮಾಹಿತಿ:

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಪ್ರಸ್ತುತ ನೇಮಕಾತಿ ಅಧಿಸೂಚನೆಯಲ್ಲಿ ಒಟ್ಟು 3991 ಪೊಲೀಸ್ ಕಾನ್ಸ್ಟೇಬಲ್ (ಸಿವಿಲ್) ಹುದ್ದೆಗಳ ಭರ್ತಿಗೆ ನೇಮಕಾತಿಯ ಅಧಿಸೂಚನೆಯನ್ನು ಹೊರಡಿಸಿದ್ದು, ಈ ಹುದ್ದೆಗಳನ್ನು ಕಲ್ಯಾಣ ಕರ್ನಾಟಕ ವೃಂದ ಹಾಗೂ ಉಳಿಕೆ ಮೂಲ ವೃಂದಗಳ ಅಡಿಯಲ್ಲಿ ಹಂಚಿಕೆ ಮಾಡಲಾಗಿದೆ. ಪಿಯುಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಹಾಗೂ ಕನಿಷ್ಠ 18 ಮೇಲ್ಪಟ್ಟ ಎಲ್ಲ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಯ ವಿವರ:

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಪೊಲೀಸ್ ಕಾನ್ಸ್ಟೇಬಲ್ (ಸಿವಿಲ್) ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಈ ಹುದ್ದೆಗಳನ್ನು ಈ ಕೆಳಗೆ ತಿಳಿಸಿರುವಂತೆ ಹಂಚಿಕೆ ಮಾಡಲಾಗಿದೆ.

ಹುದ್ದೆಯ ವಿವರಹುದ್ದೆಗಳ ಸಂಖ್ಯೆ
ಪೊಲೀಸ್ ಕಾನ್ಸ್ಟೇಬಲ್ ಸಿವಿಲ್ ಹುದ್ದೆಗಳು (ಕಲ್ಯಾಣ ಕರ್ನಾಟಕ ವೃಂದ) 596 ಹುದ್ದೆಗಳು
ಪೊಲೀಸ್ ಕಾನ್ಸ್ಟೇಬಲ್ ಸಿವಿಲ್ ಹುದ್ದೆಗಳು (ಉಳಿಕೆ ಮೂಲ ವೃಂದ) 3395 ಹುದ್ದೆಗಳು

ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ:

  • ಪೊಲೀಸ್ ಕಾನ್ಸ್ಟೇಬಲ್ ಸಿವಿಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪಿಯುಸಿ ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು.
  • ಸಿಬಿಎಸ್ಇ ಅಥವಾ ಐಎಸ್ಸಿ ಮಂಡಳಿ ನಡೆಸುವ 12 ಕ್ಲಾಸ್ ಪರೀಕ್ಷೆಯು ಪಿಯುಸಿ ಪರೀಕ್ಷೆಗೆ ತತ್ಸಮಾನವಾಗಿರಬೇಕು.
  • ಎರಡು ವರ್ಷಗಳ ಐಟಿಐ ಕೋರ್ಸ್ ಮುಗಿಸಿ ಅಥವಾ ಮೂರು ವರ್ಷಗಳ ಡಿಪ್ಲೊಮಾ ಕೋರ್ಸ್ ಮುಗಿಸಿ ನಿಗದಿತ ಭಾಷಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಗಮನಿಸಿ: “ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದ ವರೆಗೂ ಕೂಡ ಫಲಿತಾಂಶಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅನರ್ಹರಾಗಿರುತ್ತಾರೆ.”

ವಯೋಮಿತಿ ವಿವರ:

  • ಪೊಲೀಸ್ ಕಾನ್ಸ್ಟೇಬಲ್ ಸಿವಿಲ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು.
  • ಅಭ್ಯರ್ಥಿಗಳು ಈ ಕೆಳಗೆ ತಿಳಿಸಿರುವಂತೆ ಗರಿಷ್ಠ ವಯೋಮಿತಿಯನ್ನು ಹೊಂದಿರಬೇಕು.
ನೇರ ಅಭ್ಯರ್ಥಿಗಳು ಗರಿಷ್ಟ ವಯೋಮಿತಿ
ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ 33 ವರ್ಷ
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1, ಪ್ರವರ್ಗ 2A, 2B, 3A, 3B ಅಭ್ಯರ್ಥಿಗಳಿಗೆ 35 ವರ್ಷ
ಕರ್ನಾಟಕದ ಅರಣ್ಯ ಪ್ರದೇಶದಲ್ಲಿ ವಾಸಿಸುತ್ತಿರುವ ಬುಡಕಟ್ಟು ಜನಾಂಗದ ಅಭ್ಯರ್ಥಿಗಳಿಗೆ 38 ವರ್ಷ
ಸೇವಾನಿರತ ಅಭ್ಯರ್ಥಿಗಳುಗರಿಷ್ಟ ವಯೋಮಿತಿ
ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ 38 ವರ್ಷ
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1, ಪ್ರವರ್ಗ 2A, 2B, 3A, 3B ಅಭ್ಯರ್ಥಿಗಳಿಗೆ 40 ವರ್ಷ

ವಯೋಮಿತಿ ಸಡಿಲಿಕೆ:

  • ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಸೇವಾ ಅವಧಿಯ ಜೊತೆಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
  • ಸರ್ಕಾರದ ನಿಯಮಗಳ ಪ್ರಕಾರ ಒಂದು ಬಾರಿಗೆ ಅನ್ವಯವಾಗುವಂತೆ ಗರಿಷ್ಟ ವಯೋಮಿತಿಯಲ್ಲಿ 5 ವರ್ಷಗಳ ಸಡಿಲಿಕೆಯನ್ನು ನೀಡಲಾಗುತ್ತದೆ.

ಅರ್ಜಿ ಶುಲ್ಕ:

  • ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಮಾಜಿ ಸೈನಿಕ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ: ₹500/-
  • ಸಾಮಾನ್ಯ ಅರ್ಹತೆ ಹಾಗೂ ಹಿಂದುಳಿದ ವರ್ಗಗಳ (ಪ್ರವರ್ಗ 2A, 2B, 3A, 3B) ಅಭ್ಯರ್ಥಿಗಳಿಗೆ: ₹750/-

ಅಭ್ಯರ್ಥಿಗಳು ತಮ್ಮ ವರ್ಗಕ್ಕೆ ಸಂಬಂಧಿಸಿದ ಅರ್ಜಿ ಶುಲ್ಕವನ್ನು ಆನ್ಲೈನ್ ಪಾವತಿ ವಿಧಾನಗಳ ಮೂಲಕ ಪಾವತಿಸಬೇಕಾಗುತ್ತದೆ. ಒಂದು ಬಾರಿಗೆ ಪಾವತಿಸಿದ ಅರ್ಜಿ ಶುಲ್ಕವನ್ನು ಯಾವುದೇ ಸಂದರ್ಭದಲ್ಲೂ ಹೊಂದಿರುಗಿಸುವುದಿಲ್ಲ.

ವೇತನ ಶ್ರೇಣಿ:

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಕಾನ್ಸ್ಟೇಬಲ್ ಸಿವಿಲ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. ₹37,500/- ರಿಂದ ₹76,100/- ವರೆಗೆ ವೇತನವನ್ನು ನೀಡಲಾಗುತ್ತದೆ.

ಅಗತ್ಯ ದಾಖಲೆಗಳು:

  • ಆಧಾರ್ ಕಾರ್ಡ್
  • ಪಾಸ್ಪೋರ್ಟ್ ಅಳತೆಯ ಫೋಟೋ
  • ಜಾತಿ ಪ್ರಮಾಣಪತ್ರ
  • ಡ್ರೈವಿಂಗ್ ಲೈಸನ್ಸ್
  • ಪ್ಯಾನ್ ಕಾರ್ಡ್
  • ಶೈಕ್ಷಣಿಕ ಪ್ರಮಾಣಪತ್ರ
  • ಬ್ಯಾಂಕ್ ಪಾಸ್ ಬುಕ್
  • ಮಾಜಿ ಸೈನಿಕ ಅಭ್ಯರ್ಥಿಗಳಿಗೆ ವಿತರಿಸುವ ಪಿಂಚಣಿ ಪುಸ್ತಕ
  • ಮತದಾರದ ಗುರುತಿನ ಚೀಟಿ
  • ಹಾಗೂ ಇನ್ನಿತರ ಅಗತ್ಯ ದಾಖಲೆಗಳು

ಅರ್ಜಿ ಸಲ್ಲಿಸುವ ವಿಧಾನ:

  • ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಮೊದಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ, ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಳ್ಳಿ.
  • ನಂತರ ಅಲ್ಲಿ ಕಾಣುವ ಪೊಲೀಸ್ ಕಾನ್ಸ್ಟೇಬಲ್ ಸಿವಿಲ್ ನೇಮಕಾತಿ ಲಿಂಕ್ ಅನ್ನು ಕ್ಲಿಕ್ ಮಾಡಿ.
  • ನಂತರ ಆನ್ಲೈನ್ ಅಫ್ಲಿಕೇಷನ್ ಫಾರ್ಮ್ ನಲ್ಲಿ ಶೈಕ್ಷಣಿಕ ವಿವರ, ವಯೋಮಿತಿ ವಿವರ, ಹಾಗೂ ಇನ್ನಿತರ ಅಗತ್ಯ ವಿವರಗಳನ್ನು ಭರ್ತಿ ಮಾಡಿ.
  • ನಂತರ ಅಭ್ಯರ್ಥಿಗಳ ಆಧಾರ್ ಕಾರ್ಡ್, ಶೈಕ್ಷಣಿಕ ಪ್ರಮಾಣಪತ್ರ, ಅಭ್ಯರ್ಥಿಗಳ ಸಹಿ, ಇತ್ತೀಚಿನ ಪಾಸ್ ಪೋರ್ಟ್ ಅಳತೆಯ ಫೋಟೋ ಸೇರಿದಂತೆ ಇನ್ನಿತರ ಎಲ್ಲಾ ದಾಖಲೆಗಳನ್ನು ಅಪ್ಲೋಡ್ ಮಾಡಿ.
  • ಭರ್ತಿ ಮಾಡಿರುವ ಎಲ್ಲಾ ವಿವರಗಳು ಸರಿ ಇದೆಯೇ ಎಂದು ಖಚಿತಪಡಿಸಿಕೊಂಡು ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.
  • ನಂತರ ನಿಮ್ಮ ವರ್ಗಕ್ಕೆ ಸಂಬಂಧಿಸಿದ ಅರ್ಜಿ ಶುಲ್ಕವನ್ನು ಆನ್ಲೈನ್ ಪಾವತಿ ವಿಧಾನಗಳ ಮೂಲಕ ಪಾವತಿಸಿ.

ಆಯ್ಕೆ ಪ್ರಕ್ರಿಯೆ:

  • ಲಿಖಿತ ಪರೀಕ್ಷೆ:

ಅಭ್ಯರ್ಥಿಗಳಿಗೆ ಮೊದಲು ಆಫ್ಲೈನ್ ಮೂಲಕ 100 ಅಂಕಗಳ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗುತ್ತದೆ. ಪ್ರತಿ ತಪ್ಪು ಉತ್ತರಕ್ಕೆ 0.25 ಅಂಕಗಳನ್ನು ಕಡಿತ ಗೊಳಿಸಲಾಗುತ್ತದೆ. ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಕನಿಷ್ಠ 30 ಅಂಕಗಳನ್ನು ಗಳಿಸುವುದು ಕಡ್ಡಾಯವಾಗಿದೆ.

  • ದೇಹದಾರ್ಢ್ಯತೆ ಹಾಗೂ ಸಹಿಷ್ಣುತೆ ಪರೀಕ್ಷೆ:

ಲಿಖಿತ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳನ್ನು 1:5 ಅನುಪಾತದಲ್ಲಿ ದೈಹಿಕ ಪರೀಕ್ಷೆಗೆ ಕರೆಯಾಗಲಾಗುತ್ತದೆ. ಇಲಾಖೆ ತಿಳಿಸಿರುವಂತೆ ಅಭ್ಯರ್ಥಿಗಳು ಎತ್ತರವನ್ನು ಹೊಂದಿರುವುದು ಕಡ್ಡಾಯವಾಗಿರುತ್ತದೆ ಹಾಗೂ ಇವುಗಳ ಜೊತೆಗೆ ಓಟ, ಉದ್ದ ಜಿಗಿತ, ಎತ್ತರ ಜಿಗಿತ, ಗುಂಡು ಎಸೆತ ಪರೀಕ್ಷೆಗಳನ್ನು ಸಹ ನಡೆಸಲಾಗುತ್ತದೆ.

  • ವೈದ್ಯಕೀಯ ಪರೀಕ್ಷೆ:

ದೈಹಿಕ ಪರೀಕ್ಷೆಯಲ್ಲಿ ಅರ್ಹತೆ ಹೊಂದಿರುವ ಅಭ್ಯರ್ಥಿಗಳನ್ನು 1:2 ಅನುಪಾತದಲ್ಲಿ ವೈದ್ಯಕೀಯ ಪರೀಕ್ಷೆಗೆ ಕರೆಯಲಾಗುತ್ತದೆ.

  • ದಾಖಲಾತಿ ಪರಿಶೀಲನೆ:

ಅಭ್ಯರ್ಥಿಗಳ ವೈದ್ಯಕೀಯ ಪರೀಕ್ಷೆ ಮುಗಿದ ನಂತರ ಅವರು ಸಲ್ಲಿಸಿದ ದಾಖಲೆಗಳನ್ನು ಪರಿಶೀಲಿಸಿ ಅಂತಿಮವಾಗಿ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಪ್ರಮುಖ ದಿನಾಂಕಗಳು:

ಪ್ರಮುಖ ಈವೆಂಟ್ ದಿನಾಂಕ
ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ 08-06-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 03-07-2026
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ 04-07-2026
ಪೊಲೀಸ್ ಕಾನ್ಸ್ಟೇಬಲ್ ಸಿವಿಲ್ ಲಿಖಿತ ಪರೀಕ್ಷೆ ನಡೆಯುವ ದಿನಾಂಕ02-08-2026

ಪ್ರಮುಖ ಲಿಂಕುಗಳು:

ಅಧಿಕೃತ ವೆಬ್‌ಸೈಟ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಅಧಿಸೂಚನೆ ಪಿಡಿಎಫ್ ಲಿಂಕ್ (KK)ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಅಧಿಸೂಚನೆ ಪಿಡಿಎಫ್ ಲಿಂಕ್ (RPC)ಇಲ್ಲಿ ಕ್ಲಿಕ್ ಮಾಡಿ
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ

ಅಂತಿಮ ತೀರ್ಮಾನ:

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಹುದ್ದೆಗೆ ಸಂಬಂದಿಸಿದ ಅರ್ಹತಾ ಮಾನದಂಡಗಳನ್ನು ಪೂರೈಸುತ್ತೇವೆಯೋ? ಇಲ್ಲವೋ? ಎಂದು ಖಚಿತಪಡಿಸಿಕೊಂಡು ನಂತರ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ಸರ್ಕಾರಿ ಉದ್ಯೋಗವನ್ನು ತಮ್ಮದಾಗಿಸಿಕೊಳ್ಳಿ.


ಪ್ರಮುಖ ಲಿಂಕುಗಳು:

Whatsapp Group Link Click Here
Telegram Group Link Click Here
Instagram Link Click Here

ಇತರೆ ಪ್ರಮುಖ ಲಿಂಕುಗಳು:

Leave a Comment