ಕೆಎಸ್ಆರ್ ಟಿ ಸಿ : ಸಾರಿಗೆ ಕ್ಷೇತ್ರದಲ್ಲಿ ಭರ್ಜರಿ ಅವಕಾಶ! ನೇರ ಚಾಲನಾ ಪರೀಕ್ಷೆ ಮೂಲಕ ಚಾಲಕರಾಗುವ ಸುವರ್ಣಾವಕಾಶ

ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಉನ್ನತ ಶಿಕ್ಷಣವನ್ನು ಹೊಂದಿದ್ದರೂ ಕೂಡ ಉದ್ಯೋಗಾವಕಾಶವನ್ನು ಪಡೆದುಕೊಳ್ಳುವುದು ದೊಡ್ಡ ಸವಾಲಾಗಿರುತ್ತದೆ. ಯಾವುದೇ ಸರ್ಕಾರಿ ಅಥವಾ ಖಾಸಗಿ ಕ್ಷೇತ್ರದಲ್ಲಿ ಅಭ್ಯರ್ಥಿಗಳು ಉದ್ಯೋಗವನ್ನು ಪಡೆದುಕೊಳ್ಳಬೇಕಾದರೆ ತಮ್ಮ ಕೌಶಲ್ಯವನ್ನು, ಅರ್ಹತೆಯನ್ನು ಹಾಗೂ ಸಾಮರ್ಥ್ಯವನ್ನು ಸಾಬೀತು ಪಡಿಸಿಕೊಳ್ಳುವುದು ಅನಿವಾರಿಯಾಗಿರುತ್ತದೆ.

KSRTC Driver Recruitment 2026


ಈ ಹಿನ್ನಲೆಯಲ್ಲಿ ವಿವಿಧ ಸರ್ಕಾರಿ ಹಾಗೂ ಖಾಸಗಿ ಇಲಾಖೆಗಳ ಹಾಗೂ ಸಂಸ್ಥೆಗಳು ಈಗಿನ ಯುವಜನತೆಗೆ ಉದ್ಯೋಗಾವಕಾಶವನ್ನು ಕಲ್ಪಿಸುವ ನಿಟ್ಟಿನಲ್ಲಿ ಅತ್ಯುತ್ತಮ ಯೋಜನೆಗಳನ್ನು ಜಾರಿಗೆ ತರುತ್ತದೆ. ಅದರಂತೆಯೇ ವಿಸ್ಡಂ ಗ್ರೂಪ್ಸ್ ಬೆಂಗಳೂರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಯಲ್ಲಿನ ವಿವಿಧ ವಿಭಾಗಗಳಾದ ತುಮಕೂರು, ಬೆಂಗಳೂರು, ಚಿಕ್ಕಬಳ್ಳಾಪುರ ಹಾಗೂ ಕೋಲಾರ ವಿಭಾಗಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳಿಂದ ವಾಹನ ಚಾಲನಾ ಪರೀಕ್ಷೆಯನ್ನು ಆಯೋಜಿಸಿದೆ.

ಸಾರಿಗೆ ವಲಯದಲ್ಲಿ ವೃತ್ತಿಜೀವನವನ್ನು ಪ್ರರಂಭಿಸಬೇಕೆಂದಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶವಾಗಿದ್ದು, ಈ ಒಂದು ಚಾಲನಾ ಪರೀಕ್ಷೆಗೆ ಹಾಜರಾಗಲು ಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 30-06-2026 ರ ಬೆಳಿಗ್ಗೆ 8:30 ರ ಒಳಗೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಕೊನೆಯ ಅವಕಾಶವನ್ನು ಕಲ್ಪಿಸಲಾಗಿದೆ.

ಅರ್ಹ ಅಭ್ಯರ್ಥಿಗಳು ಪ್ರಸ್ತುತ ಲೇಖನದಲ್ಲಿ ನೀಡಲಾಗಿರುವ KSRTC ಸಂಸ್ಥೆಯ ಚಾಲನಾ ಪರೀಕ್ಷೆಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಓದಿಕೊಂಡು ನಂತರ ಸಂಬಂಧಪಟ್ಟ ಸಂಸ್ಥೆಗೆ ಸಂಸ್ಥೆಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ.

KSRTC

ಹುದ್ದೆಯ ಅವಲೋಕನ:

ಸಂಸ್ಥೆಯ ಹೆಸರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ
ಸಹಯೋಗಿ ಸಂಸ್ಥೆ ವಿಸ್ಡಮ್ ಗ್ರೂಪ್ ಬೆಂಗಳೂರು
ನೇಮಕಾತಿ ಪ್ರಕಾರ ಹೊರಗುತ್ತಿಗೆ ಆಧಾರದ ಮೇಲೆ
ಅನ್ವಹಿಸುವ ವಿಭಾಗಗಳು ಬೆಂಗಳೂರು, ತುಮಕೂರು, ಚಿಕ್ಕಬಳ್ಳಾಪುರ ಹಾಗೂ ಕೋಲಾರ
ಮುಖ್ಯ ಪ್ರಕ್ರಿಯೆ ಉಚಿತ ಚಾಲನಾ ತರಬೇತಿ ಮತ್ತು ಚಾಲನಾ ಪರೀಕ್ಷೆ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30-06-2026 ಬೆಳಿಗ್ಗೆ 8:30
ಅರ್ಜಿ ಸಲ್ಲಿಸುವ ವಿಧಾನ ಆಫ್ಲೈನ್ ಮೂಲಕ

ಹುದ್ದೆಯ ಬಗ್ಗೆ ಮಾಹಿತಿ:

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಬೆಂಗಳೂರು, ತುಮಕೂರು, ಚಿಕ್ಕಬಳ್ಳಾಪುರ ಹಾಗೂ ಕೋಲಾರ ವಿಭಾಗಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಚಾಲನಾ ಪರೀಕ್ಷೆಯನ್ನು ನಡೆಸಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ KSRTCಯಲ್ಲಿ ಚಾಲಕರಾಗಿ ಸೇವೆ ಸಲ್ಲಿಸಲು ಅವಕಾಶ ಕಲ್ಪಿಸಲಾಗುತ್ತಿದೆ.

ಕೇವಲ 8ನೇ ತರಗತಿ ಅಥವಾ SSLC ಉತ್ತೀರ್ಣರಾಗಿರುವ ಅಭ್ಯರ್ಥಿಗಳೂ ಅರ್ಜಿ ಸಲ್ಲಿಸಬಹುದು. ಜೊತೆಗೆ ಮಾನ್ಯ ಚಾಲನಾ ಪರವಾನಗಿ ಹೊಂದಿದ್ದು, 18 ರಿಂದ 50 ವರ್ಷದೊಳಗಿನ ವಯಸ್ಸಿನವರು ಈ ಚಾಲನಾ ಪರೀಕ್ಷೆಯಲ್ಲಿ ಭಾಗವಹಿಸಲು ಅರ್ಹರಾಗಿದ್ದಾರೆ.

ಹುದ್ದೆಯ ಸಂಕ್ಷಿಪ್ತ ವಿವರ:

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಹೊರಗುತ್ತಿಗೆ ಆಧಾರದ ಮೇಲೆ ಚಾಲನಾ ಪರೀಕ್ಷೆಯನ್ನು ನಡೆಸುವ ವಿವಿಧ ವಿಭಾಗಗಳು:

ಈ ಚಾಲನಾ ಪರೀಕ್ಷೆ ಮುಖ್ಯವಾಗಿ ಕೆಳಕಂಡ ವಿಭಾಗಗಳ ಅಭ್ಯರ್ಥಿಗಳಿಗಾಗಿ ಆಯೋಜಿಸಲಾಗಿದೆ.

  • ಬೆಂಗಳೂರು
  • ತುಮಕೂರು
  • ಚಿಕ್ಕಬಳ್ಳಾಪುರ
  • ಕೋಲಾರ

ಈ ವಿಭಾಗಗಳಲ್ಲಿ ಬಸ್ ಚಾಲಕರ ಅಗತ್ಯವನ್ನು ಗಮನದಲ್ಲಿಟ್ಟುಕೊಂಡು ಅರ್ಹ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.

ಶೈಕ್ಷಣಿಕ ಅರ್ಹತೆ:

ಅಭ್ಯರ್ಥಿಗಳು ಕನಿಷ್ಠ 8ನೇ ತರಗತಿ ಅಥವಾ SSLC ಉತ್ತೀರ್ಣರಾಗಿರಬೇಕು. ಹೆಚ್ಚಿನ ವಿದ್ಯಾಭ್ಯಾಸ ಹೊಂದಿದವರೂ ಅರ್ಜಿ ಸಲ್ಲಿಸಬಹುದು. ಇದರ ಜೊತೆಗೆ ಭಾರೀ ವಾಹನ ಅಥವಾ ಸಾರಿಗೆ ವಾಹನ ಚಾಲನೆಗೆ ಮಾನ್ಯವಾದ ಚಾಲನಾ ಪರವಾನಗಿ ಹೊಂದಿರುವುದು ಕಡ್ಡಾಯವಾಗಿದೆ.

ವಯೋಮಿತಿ ವಿವರ:

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ನಡೆಸುವ ಚಾಲನಾ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಈ ಕೆಳಗಿನ ವಯೋಮಿತಿಯನ್ನು ಹೊಂದಿರಬೇಕು.

  • ಕನಿಷ್ಠ ವಯೋಮಿತಿ 18 ವರ್ಷ ಹಾಗೂ
  • ಗರಿಷ್ಟ ವಯೋಮಿತಿ 50 ವರ್ಷ

ಅರ್ಜಿ ಶುಲ್ಕ:

KSRTC ಹೊರಗುತ್ತಿಗೆ ಆಧಾರದ ಚಾಲನಾ ಪರೀಕ್ಷೆ ಕುರಿತ ನೇಮಕಾತಿ ಅಧಿಸೂಚನೆಯಲ್ಲಿ ಅರ್ಜಿ ಶುಲ್ಕದ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ನೀಡಲಾಗಿಲ್ಲ. ಹೆಚ್ಚಿನ ಮಾಹಿತಿಗಾಗಿ ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಳ್ಳಿ.

ವೇತನ ಶ್ರೇಣಿ:

ಚಾಲನಾ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಗಳಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಹೊರಗುತ್ತಿಗೆ ಸಂಸ್ಥೆಯ ನಿಯಮಗಳು ಹಾಗೂ ಒಪ್ಪಂದದ ಷರತ್ತುಗಳಿಗೆ ಅನುಗುಣವಾಗಿ ವೇತನ ನೀಡಲಾಗುತ್ತದೆ. ನಿಖರ ವೇತನ, ಭತ್ಯೆಗಳು ಹಾಗೂ ಇತರ ಸೌಲಭ್ಯಗಳ ವಿವರಗಳನ್ನು ಅಧಿಕೃತ ನೇಮಕಾತಿ ಪ್ರಕಟಣೆಯಲ್ಲಿ ಪರಿಶೀಲಿಸಬೇಕು.

ಅರ್ಜಿ ಸಲ್ಲಿಸಲು ಅಗತ್ಯವಾದ ದಾಖಲೆಗಳು:

  • ಆಧಾರ್ ಕಾರ್ಡ್
  • 8ನೇ ತರಗತಿ ಅಥವಾ SSLC ಅಂಕಪಟ್ಟಿ
  • ಮಾನ್ಯ ಚಾಲನಾ ಪರವಾನಗಿ ಜೊತೆಗೆ ಬ್ಯಾಡ್ಜ್ ಪ್ರತಿ
  • 3 ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ
  • ವಿಳಾಸದ ದಾಖಲೆ
  • ಜಾತಿ ಪ್ರಮಾಣಪತ್ರ
  • ಪ್ರಚಲಿತ ಜಿಲ್ಲಾ ವೈದ್ಯಕೀಯ ಪ್ರಮಾಣಪತ್ರ
  • ಇತರೆ ಅಗತ್ಯ ದಾಖಲೆಗಳು

ಅರ್ಜಿ ಸಲ್ಲಿಸುವ ವಿಧಾನ:

  • KSRTC ಯ ವಿವಿಧ ವಿಭಾಗಗಳಲ್ಲಿ ನಡೆಯುವ ಚಾಲನಾ ಪರೀಕ್ಷೆಗೆ ಹಾಜರಾಗಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅಗತ್ಯವಿರುವ ಶೈಕ್ಷಣಿಕ ಪ್ರಮಾಣಪತ್ರ, ಪಾಸ್ ಪೋರ್ಟ್ ಅಳತೆಯ ಫೋಟೋ, ಜಾತಿ ಪ್ರಮಾಣಪತ್ರ, ಡ್ರೈವಿಂಗ್ ಲೈಸನ್ಸ್ ಹಾಗೂ ಇನ್ನಿತರ ಅಗತ್ಯ ದಾಖಲೆಗಳನ್ನು ಒಳಗೊಂಡ 2 ಜೆರಾಕ್ಸ್ ಪ್ರತಿಯನ್ನು ಸಿದ್ಧಪಡಿಸಿಕೊಂಡು ನಿಗದಿತ ದಿನಾಂಕದೊಳಗಾಗಿ ಖುದ್ದಾಗಿ ಈ ಕೆಳಗೆ ತಿಳಿಸುವ ವಿಳಾಸಕ್ಕೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಿ ಚಾಲನಾ ಪರೀಕ್ಷೆಗೆ ಹಾಜರಾಗಬಹುದಾಗಿದೆ.
ಅರ್ಜಿ ಸಲ್ಲಿಸುವ ವಿಳಾಸ:

ತೇಗೂರು,

KSRTC ತರಬೇತಿ ಕೇಂದ್ರ,

ಚಿಕ್ಕಮಗಳೂರು

ಚಾಲನಾ ಪರೀಕ್ಷೆಯಲ್ಲಿ ಪರಿಶೀಲಿಸುವ ಕೌಶಲ್ಯಗಳು:

  • ವಾಹನವನ್ನು ಸುರಕ್ಷಿತವಾಗಿ ಚಾಲನೆ ಮಾಡುವ ಸಾಮರ್ಥ್ಯ
  • ಗೇರ್ ಮತ್ತು ಕ್ಲಚ್ ನಿಯಂತ್ರಣ
  • ಬ್ರೇಕ್ ಬಳಕೆಯ ನಿಖರತೆ
  • ತಿರುವು ಹಾಗೂ ರಿವರ್ಸ್ ಚಾಲನೆ
  • ಏರು-ಇಳಿಜಾರಿನಲ್ಲಿ ವಾಹನ ನಿಯಂತ್ರಣ
  • ಟ್ರಾಫಿಕ್ ನಿಯಮಗಳ ಪಾಲನೆ
  • ಪ್ರಯಾಣಿಕರ ಸುರಕ್ಷತೆಯ ಬಗ್ಗೆ ಜಾಗೃತಿ

ಆಯ್ಕೆ ಪ್ರಕ್ರಿಯೆ:

  • ದಾಖಲೆಗಳ ಪರಿಶೀಲನೆ
  • ಚಾಲನಾ ಪರೀಕ್ಷೆ
  • ವಾಹನ ನಿಯಂತ್ರಣ ಸಾಮರ್ಥ್ಯದ ಪರೀಕ್ಷೆ
  • ರಸ್ತೆ ಸುರಕ್ಷತಾ ನಿಯಮಗಳ ಅರಿವು
  • ಅಂತಿಮ ಆಯ್ಕೆ

ಪ್ರಮುಖ ದಿನಾಂಕಗಳು:

ಪ್ರಮುಖ ಈವೆಂಟ್ ದಿನಾಂಕ
ಅರ್ಜಿ ಸಲ್ಲಿಸುವ ದಿನಾಂಕ 30-06-2026
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಸಮಯ ಬೆಳಿಗ್ಗೆ 7:30 ರಿಂದ 8:30 ರ ವರೆಗೆ

ಅಂತಿಮ ತೀರ್ಮಾನ:

ಬೆಂಗಳೂರು, ತುಮಕೂರು, ಚಿಕ್ಕಬಳ್ಳಾಪುರ ಹಾಗೂ ಕೋಲಾರ KSRTC ವಿಭಾಗಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಆಯೋಜಿಸಿರುವ ಚಾಲನಾ ಪರೀಕ್ಷೆ ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶವಾಗಿದೆ. ಚಾಲನಾ ಪರೀಕ್ಷೆಯಲ್ಲಿ ಉತ್ತಮ ಪ್ರದರ್ಶನ ನೀಡುವ ಅಭ್ಯರ್ಥಿಗಳಿಗೆ KSRTCಯಲ್ಲಿ ಕೆಲಸ ಮಾಡುವ ಅವಕಾಶ ಸಿಗಲಿದೆ. ಸಾರ್ವಜನಿಕ ಸಾರಿಗೆ ಕ್ಷೇತ್ರದಲ್ಲಿ ತಮ್ಮ ವೃತ್ತಿಜೀವನವನ್ನು ಆರಂಭಿಸಲು ಅಥವಾ ಮುಂದುವರಿಸಲು ಬಯಸುವವರಿಗೆ ಇದು ಒಂದು ಮಹತ್ವದ ಹೆಜ್ಜೆಯಾಗಬಹುದು. ಅರ್ಹ ಅಭ್ಯರ್ಥಿಗಳು ಸಂಸ್ಥೆಯು ನಡೆಸುವ ಈ ಒಂದು ಚಾಲನಾ ಪರೀಕ್ಷೆಗೆ ಹಾಜರಾಗಿ KSRTC ಸಂಸ್ಥೆಯಲ್ಲಿ ಉದ್ಯೋಗವನ್ನು ಪಡೆದುಕೊಳ್ಳಿ.


ಪ್ರಮುಖ ಲಿಂಕುಗಳು:

Whatsapp Group Link Click Here
Telegram Group Link Click Here
Instagram Link Click Here

ಇತರೆ ಪ್ರಮುಖ ಲಿಂಕುಗಳು:

Leave a Comment