Land Loan: ₹25 ಲಕ್ಷ ಸಹಾಯಧನ! ಸ್ವಂತ ಜಮೀನು ಖರೀದಿಗೆ ಸರ್ಕಾರದಿಂದ ಬಿಗ್ ಗಿಫ್ಟ್

Land Loan: ಎಷ್ಟೇ ಪಿತ್ರಾರ್ಜಿತ ಆಸ್ತಿಗಳಿದ್ದರೂ ಕೂಡ ಪ್ರತಿಯೊಬ್ಬರಿಗೂ ತಮ್ಮ ಹೆಸರಿನಲ್ಲಿ ಸ್ವಂತ ಜಮೀನನ್ನು ಖರೀದಿಸಬೇಕೆನ್ನುವ ಕನಸನ್ನು ಕಾಣುತ್ತಿರುತ್ತಾರೆ. ಆದರೆ ಈ ಎಲ್ಲಾ ಕನಸುಗಳನ್ನು ನನಸು ಮಾಡಿಕೊಳ್ಳಲು ಹಣಕಾಸಿನ ಕೊರತೆ ಅಡ್ಡಿಯಾಗುತ್ತದೆ. ಈ ಎಲ್ಲ ಸಮಸ್ಯೆಗಳನ್ನು ಸರಿಪಡಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರವು ಭೂ ಒಡೆತನ ಯೋಜನೆ ಎನ್ನುವ ಒಂದೊಳ್ಳೆಯ ಯೋಜನೆಯನ್ನು ಜಾರಿಗೊಳಿಸಿದ್ದು, ಸ್ವಂತ ಭೂಮಿಯನ್ನು ಖರೀದಿಸುವ ಫಲಾನುಭವಿಗಳಿಗೆ ಆರ್ಥಿಕ ನೆರವನ್ನು ಒದಗಿಸಲಾಗುತ್ತಿದೆ.

ಭೂ ರಹಿತ ಕುಟುಂಬಗಳಿಗೆ ಸ್ವಂತ ಜಮೀನನ್ನು ಒದಗಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಭೂ ಒಡೆತನ ಯೋಜನೆಯಡಿಯಲ್ಲಿ ಪ್ರತಿ ಜಿಲ್ಲೆಯ ಅರ್ಹ ಫಲಾನುಭವಿಗಳಿಗೆ ವಿಭಿನ್ನವಾಗಿ ಆರ್ಥಿಕ ನೆರವನ್ನು ಒದಗಿಸಲಾಗುತ್ತದೆ.

ವಿಶೇಷವಾಗಿ, ಪರಿಶಿಷ್ಟ ಜಾತಿ ಹಾಗೂ ಪಂಗಡಕ್ಕೆ ಸೇರಿದ ಮಹಿಳಾ ಕೃಷಿ ಕಾರ್ಮಿಕರಿಗೆ ಈ ಯೋಜನೆಯಡಿಯಲ್ಲಿ ಮೊದಲ ಆದ್ಯತೆ ನೀಡಲಾಗುತ್ತದೆ. ಸರ್ಕಾರ ಜಾರಿಗೊಳಿಸಿದ ಭೂ ಒಡೆತನ ಯೋಜನೆಯಡಿಯಲ್ಲಿ ಯಾವ ಜಿಲ್ಲೆಯ ಫಲಾನುಭವಿಗಳಿಗೆ ಎಷ್ಟೆಷ್ಟು ಆರ್ಥಿಕ ನೆರವು ಸಿಗಲಿದೆ? ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ? ಅರ್ಹ ಫಲಾನುಭವಿಗಳು ಯಾರು? ಹಾಗೂ ಇನ್ನಿತರ ಮಾಹಿತಿಯನ್ನು ಪ್ರಸ್ತುತ ಈ ಒಂದು ಲೇಖನದ ಮೂಲಕ ನೀಡಲಾಗಿದೆ. ಅರ್ಹ ಫಲಾನುಭವಿಗಳು ಈ ಎಲ್ಲ ಮಾಹಿತಿಯನ್ನು ಸಂಪೂರ್ಣವಾಗಿ ಓದಿಕೊಂಡು ನಂತರ ಅರ್ಜಿ ಸಲ್ಲಿಸಿ.

Land Loan

ಯೋಜನೆಯ ಅವಲೋಕನ:

ಯೋಜನೆಯನ್ನು ಜಾರಿಗೊಳಿಸಿದ ಸರ್ಕಾರ ಕರ್ನಾಟಕ ಸರ್ಕಾರ
ಯೋಜನೆಯ ಹೆಸರು ಭೂ ಒಡೆತನ ಯೋಜನೆ
ಅರ್ಹ ಫಲಾನುಭವಿಗಳು ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮಹಿಳೆಯರು
ಯೋಜನೆಯ ಉದ್ದೇಶ ಭೂ ರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಸ್ವಂತ ಜಮೀನನ್ನು ಒದಗಿಸುವುದು
ಸಹಾಯಧನದ ಮೊತ್ತ ರೂ. 20 ಲಕ್ಷದಿಂದ ರೂ. 25 ಲಕ್ಷದ ವರೆಗೆ
ಅರ್ಜಿ ಸಲ್ಲಿಸುವ ವಿಧಾನ ಆನ್ಲೈನ್ ಅಥವಾ ಆಫ್ಲೈನ್ ಮೂಲಕ

ಏನಿದು ಭೂ ಒಡೆತನ ಯೋಜನೆ?

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಕಲ್ಯಾಣ ಯೋಜನೆಗಳಲ್ಲಿ ಒಂದಾದ ಭೂ ಒಡೆತನ ಯೋಜನೆಯು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಮಹಿಳಾ ಕೃಷಿ ಕಾರ್ಮಿಕರಿಗೆ ಸ್ವಂತ ಜಮೀನನ್ನು ಖರೀದಿಸಲು ಆರ್ಥಿಕ ನೆರವನ್ನು ಒದಗಿಸುವುದಾಗಿದೆ. ಈ ಯೋಜನೆಯಡಿಯಲ್ಲಿ ವಿವಿಧ ಜಿಲ್ಲೆಗಳಿಗೆ ಅನುಗುಣವಾಗಿ ರೂ. 20 ಲಕ್ಷದಿಂದ ರೂ. 25 ಲಕ್ಷದ ವರೆಗೆ ಆರ್ಥಿಕ ನೆರವನ್ನು ನೀಡಲಿದ್ದು, ಈ ಒಟ್ಟು ಸಹಾಯಧನದಲ್ಲಿ 50% ಸಹಾಯಧನವನ್ನು ಸಬ್ಸಿಡಿ ರೂಪದಲ್ಲಿ ನೀಡಲಾಗುತ್ತದೆ ಉಳಿದ ಹಣವನ್ನು ಕೇವಲ 6% ಬಡ್ಡಿದರದಲ್ಲಿ ಹಿಂದಿರುಗಿಸಬೇಕಾಗುತ್ತದೆ.

ಯೋಜನೆಯ ಉದ್ದೇಶ:

  • ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವುದು:

ಗ್ರಾಮೀಣ ಭಾಗದಲ್ಲಿ ಭೂ ಒಡೆತನ ಯೋಜನೆಯಡಿಯಲ್ಲಿ ಮಹಿಳೆಯರಿಗೆ ತಮ್ಮ ಹೆಸರಿನಲ್ಲಿ ಸ್ವಂತ ಜಮೀನನ್ನು ಖರೀದಿಸಲು ಅವಕಾಶ ಕಲ್ಪಿಸುವ ಮೂಲಕ ಅವರಿಗೆ ಸಮಾಜದಲ್ಲಿ ಹಾಗೂ ತಮ್ಮ ಕುಟುಂಬದಲ್ಲಿ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆಯನ್ನು ಒದಗಿಸುವುದು.

  • ಭೂಹೀನರ ಸಂಖ್ಯೆಯನ್ನು ಕಡಿಮೆ ಮಾಡುವುದು:

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಭೂ ರಹಿತ ಕೃಷಿ ಕಾರ್ಮಿಕರಿಗೆ ಜಮೀನಿನ ಮಾಲೀಕರನ್ನಗಿ ಮಾಡಿ ತಮ್ಮ ಜಮೀನಿನಲ್ಲೇ ಸ್ವಂತವಾಗಿ ವ್ಯವಸಾಯವನ್ನು ಮಾಡಲು ಅವಕಾಶ ಕಲ್ಪಿಸಿ ಸ್ವಾವಲಂಬಿ ಜೀವನವನ್ನು ನಡೆಸಲು ಅವಕಾಶ ಕಲ್ಪಿಸುವುದು.

  • ಸ್ಥಿರವಾದ ಆದಾಯವನ್ನು ಗಳಿಸಲು ಅವಕಾಶ ಕಲ್ಪಿಸುವುದು:

ಬೇರೊಬ್ಬರ ಕೈ ಕೆಳಗೆ ಕೆಲಸ ಮಾಡುತ್ತಿದ್ದ ಕಾರ್ಮಿಕರಿಗೆ ಸ್ವಂತ ಜಮೀನನ್ನು ಒದಗಿಸುವ ಮೂಲಕ ತಮ್ಮ ಕೃಷಿ ಭೂಮಿಯಲ್ಲಿ ನಿರಂತರವಾಗಿ ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವಂತೆ ಮಾಡಿ ಕುಟುಂಬದ ವಾರ್ಷಿಕ ಆದಾಯವನ್ನು ಹೆಚ್ಚಿಸುವ ಮೂಲಕ ಅವರನ್ನು ಬಡತನ ರೇಖೆಗಿಂತ ಮೇಲಕ್ಕೆ ತರುವುದು.

ಈ ಯೋಜನೆಯಡಿಯಲ್ಲಿ ಎಷ್ಟು ಪ್ರಮಾಣದ ಜಮೀನನ್ನು ಖರೀದಿಸಬಹುದು?

ಭೂ ಒಡೆತನ ಯೋಜನೆಯಡಿಯಲ್ಲಿ ಫಲಾನುಭವಿಗಳು ಸಹಾಯಧನವನ್ನು ಪಡೆದುಕೊಳ್ಳಬೇಕಾದರೆ ಖರೀದಿಸಬೇಕಾದ ಜಮೀನಿನ ವಿವರ ಈ ಕೆಳಕಂಡಂತಿದೆ.

  • ಒಣ ಬೇಸಾಯ ಮಾಡಲು ಋಷ್ಕಿ ಜಮೀನನ್ನು ಖರೀದಿಸುವ ಫಲಾನುಭವಿಗಳು ಕನಿಷ್ಠ 2 ಎಕ್ಕರೆ ಭೂಮಿಯನ್ನು ಖರೀದಿಸಲು ಅವಕಾಶ ಕಲ್ಪಿಸಲಾಗಿದೆ.
  • ನೀರಾವರಿ ಸೌಲಭ್ಯಗಳಿರುವ ತರಿ ಭೂಮಿಯನ್ನು ಖರೀದಿಸುವ ಫಲಾನುಭವಿಗಳು ಕನಿಷ್ಠ 1 ಎಕ್ಕರೆ ಜಮೀನನ್ನು ಖರೀದಿಸಲು ಅವಕಾಶ ಕಲ್ಪಿಸಲಾಗಿದೆ.
  • ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ಯೋಗ್ಯವಾದ ಜಮೀನನ್ನು ಖರೀದಿಸುವ ಫಲಾನುಭವಿಗಳು ಕನಿಷ್ಠ 20 ಗುಂಟೆ ಜಮೀನನ್ನು ಖರೀದಿಸಲು ಅವಕಾಶ ಕಲ್ಪಿಸಲಾಗಿದೆ.

ಯೋಜನೆಯಡಿಯಲ್ಲಿ ದೊರೆಯುವ ಸಹಾಯಧನದ ವಿವರ:

ಕರ್ನಾಟಕ ಸರ್ಕಾರವು ಭೂ ಒಡೆತನ ಯೋಜನೆಯಡಿಯಲ್ಲಿ ಸಿಗುವ ಸಹಾಯಧನವನ್ನು ಜಿಲ್ಲಾವಾರು ವಿಭಿನ್ನ ರೀತಿಯಲ್ಲಿ ಹಂಚಿಕೆ ಹಂಚಿಕೆ ಮಾಡಿದ್ದು, ಅವುಗಳ ವಿವರ ಈ ಕೆಳಕಂಡಂತಿದೆ.

  • ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ ಹಾಗೂ ಜಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಜಾಮೀನು ಖರೀದಿಸುವ ಫಲಾನುಭವಿಗಳಿಗೆ ರೂ. 25 ಲಕ್ಷ ಆರ್ಥಿಕ ನೆರವನ್ನು ಒದಗಿಸಲಾಗುತ್ತದೆ. ಇದರಲ್ಲಿ 50% ಹಣವನ್ನು ಅಂದರೆ ರೂ. 12.5 ಲಕ್ಷ ಹಣವನ್ನು ಸಹಾಯಧನವಾಗಿ ಪಡೆದುಕೊಳ್ಳಬಹುದು. ಹಾಗೂ ಉಳಿದ 50% ಹಣವನ್ನು ಸಾಲದ ರೂಪದಲ್ಲಿ ಮರು ಪಾವತಿಸಬೇಕಾಗುತ್ತದೆ.
  • ಈ ಮೇಲೆ ನೀಡಲಾದ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದೆಲ್ಲ ಜಿಲ್ಲೆಗಳಲ್ಲಿ ಜಾಮೀನು ಖರೀದಿಸುವ ಫಲಾನುಭವಿಗಳಿಗೆ ಒಟ್ಟು ರೂ. 20 ಲಕ್ಷ ಆರ್ಥಿಕ ನೆರವನ್ನು ನೀಡಲಾಗುತ್ತದೆ. ಇದರಲ್ಲಿ 50% ಹಣವನ್ನು ಅಂದರೆ ರೂ. 10 ಲಕ್ಷ ಹಣವನ್ನು ಸರ್ಕಾರವು ಸಹಾಯಧನವಾಗಿ ನೀಡಿದರೆ ಉಳಿದ ರೂ. 10 ಲಕ್ಷ ಹಣವನ್ನು ಸಾಲದ ರೂಪದಲ್ಲಿ ಮರುಪಾವತಿಸಬೇಕಾಗುತ್ತದೆ.

50% ಹಣವನ್ನು ಸಾಲದ ರೂಪದಲ್ಲಿ ಮರುಪಾವತಿಸುವುದು ಹೇಗೆ?

  • ಸರ್ಕಾರವು ಭೂ ಒಡೆತನ ಯೋಜನೆಯಡಿಯಲ್ಲಿ ನೀಡುವ 50% ಹಣವನ್ನು ಸಾಲದ ರೂಪದಲ್ಲಿ ಮರುಪಾವತಿಸಬೇಕಿದ್ದು, ಈ ಸಾಲದ ಹಣವನ್ನು ಪ್ರತಿ ವರ್ಷಕ್ಕೆ ಕೇವಲ 6% ಬಡ್ಡಿ ದರದಲ್ಲಿ ಮರುಪಾವತಿಸಬೇಕಾಗುತ್ತದೆ.
  • ಸರ್ಕಾರವು ನೀಡಿರುವ ಈ ಸಾಲವನ್ನು ಫಲಾನುಭವಿಗಳು ಒಮ್ಮೆಲೇ ಪಾವತಿಸುವ ಅಗತ್ಯವಿಲ್ಲ. ಪ್ರತಿ ಅರ್ಧ ವಾರ್ಷಿಕ ಕಂತುಗಳಲ್ಲಿ ಅಂದರೆ ಪ್ರತಿ ಆರು ತಿಂಗಳಿಗೆ ಒಮ್ಮೆ ಒಟ್ಟು 10 ವರ್ಷಗಳ ವರೆಗೆ ಸಾಲವನ್ನು ಮರುಪಾವತಿಸಲು ಅವಕಾಶ ಕಲ್ಪಿಸಲಾಗಿದೆ.

ಯೋಜನೆಗೆ ಸಂಬಂಧಿಸಿದ ಅರ್ಹತಾ ಮಾನದಂಡಗಳು:

  • ಅರ್ಜಿದಾರರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಮಹಿಳೆಯರಾಗಿರಬೇಕು.
  • ಅರ್ಜಿದಾರರು ಭೂ ರಹಿತ ಕೃಷಿ ಕಾರ್ಮಿಕರಾಗಿರಬೇಕು.
  • ಫಲಾನುಭವಿಗಳು ಕನಿಷ್ಠ 21 ವರ್ಷದಿಂದ ಗರಿಷ್ಟ 50 ವರ್ಷ ವಯೋಮಿತಿಯನ್ನು ಹೊಂದಿರಬೇಕು.
  • ಕುಟುಂಬದ ವಾರ್ಷಿಕ ಆದಾಯವು ನಿರ್ದಿಷ್ಟ ಮಿತಿಯನ್ನು ಮೀರಿರಬಾರದು
  • ಇದೇ ರೀತಿಯ ಇನ್ನೊಂದು ಯೋಜನೆಯಡಿಯಲ್ಲಿ ಜಮೀನನ್ನು ಖರೀದಿಸಲು ಸಹಾಯಧನ ಪಡೆದಿದ್ದರೆ ಈ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹರಲ್ಲ.

ಅರ್ಜಿ ಸಲ್ಲಿಸಲು ಅಗತ್ಯವಾದ ದಾಖಲೆಗಳು:

  • ಆಧಾರ್ ಕಾರ್ಡ್
  • ಆದಾಯ ಪ್ರಮಾಣಪತ್ರ
  • ಜಾತಿ ಪ್ರಮಾಣಪತ್ರ
  • ರೇಷನ್ ಕಾರ್ಡ್
  • ಭೂಹೀನ ಕೃಷಿ ಕಾರ್ಮಿಕ ದೃಢೀಕರಣ ಪತ್ರ
  • ಜಮೀನಿನ ದಾಖಲೆಗಳು
  • ಇತ್ತೀಚಿನ ಪಾಸ್ ಪೋರ್ಟ್ ಅಳತೆಯ ಫೋಟೋ
  • ಬ್ಯಾಂಕ್ ಪಾಸ್ ಬುಕ್ ವಿವರ

ಅರ್ಜಿ ಸಲ್ಲಿಸುವ ವಿಧಾನ:

ಅರ್ಹ ಫಲಾನುಭವಿಗಳು ಭೂ ಒಡೆತನ ಯೋಜನೆಯಡಿಯಲ್ಲಿ ಲಾಭವನ್ನು ಪಡೆಯಲು ಆನ್ಲೈನ್ ಅಥವಾ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಈ ಕೆಳಗಿನ ಹಂತಗಳನ್ನು ಅನುಸರಿಸುವ ಮೂಲಕ ಅರ್ಜಿಯನ್ನ ಸಲ್ಲಿಸಿ.

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ:
  • ಫಲಾನುಭವಿಗಳು ಮೊದಲು ಸೇವಾ ಸಿಂಧೂ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ.
  • ಹೊಸ ಬಳಕೆದಾರರಾಗಿದ್ದರೆ ಮೂಲ ವಿವರಗಳನ್ನು ಬಳಸಿಕೊಂಡು ರಿಜಿಸ್ಟ್ರೇಷನ್ ಪ್ರಕ್ರಿಯೆ ಪೂರ್ಣಗೊಳಿಸಿ.
  • ನಂತರ ಲಾಗಿನ್ ಐಡಿ ಹಾಗೂ ಪಾಸ್ವರ್ಡ್ ಬಳಸಿ ಲಾಗಿನ್ ಆಗಿ.
  • ನಂತರ ಇಲಾಖೆಗಳು ಮತ್ತು ಸೇವೆಗಳು ವಿಭಾಗಕ್ಕೆ ಭೇಟಿ ನೀಡಿ.
  • ಸರ್ಚ್ ಬಾಕ್ಸ್ ನಲ್ಲಿ ಭೂ ಒಡೆತನ ಯೋಜನೆ ಎಂದು ಟೈಪ್ ಮಾಡಿ ಅಪ್ಲೈ ಬಟನ್ ಕ್ಲಿಕ್ ಮಾಡಿ.
  • ನಂತರ ಅಪ್ಲಿಕೇಶನ್ ಫಾರ್ಮ್ ನಲ್ಲಿ ಕೇಳಲಾದ ವೈಯಕ್ತಿಕ ವಿವರ, ಆಧಾರ್ ಸಂಖ್ಯೆ, ಹಾಗೂ ಇನ್ನಿತರ ಅಗತ್ಯ ವಿವರಗಳನ್ನು ಭರ್ತಿ ಮಾಡಿ.
  • ಮೇಲೆ ನೀಡಲಾದ ಎಲ್ಲಾ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ ವಿವರಗಳನ್ನು ಇನ್ನೊಮ್ಮೆ ಪರಿಶೀಲಿಸಿ ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.
ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ:
  • ಅರ್ಹ ಫಲಾನುಭವಿಗಳು ತಮ್ಮ ಹತ್ತಿರದ ಕರ್ನಾಟಕ ಒನ್, ಗ್ರಾಂ ಒನ್, ಬೆಂಗಳೂರು ಒನ್ ಸೇವಾ ಕೇಂದ್ರಕ್ಕೆ ಭೇಟಿ ನೀಡಿ.
  • ಭೂ ಒಡೆತನ ಯೋಜನೆಗೆ ಸಂಬಂಧಿಸಿದ ಅಪ್ಲಿಕೇಶನ್ ಫಾರ್ಮ್ ಅನ್ನು ಕೇಳಿ ಪಡೆದು.
  • ಅಪ್ಲಿಕೇಶನ್ ಫಾರ್ಮ್ ನಲ್ಲಿ ಕೇಳಲಾದ ಹೆಸರು, ವಿಳಾಸ, ಆಧಾರ್ ಸಂಖ್ಯೆ ಹಾಗೂ ಇನ್ನಿತರ ಅಗತ್ಯ ವಿವರಗಳನ್ನು ಭರ್ತಿಮಾಡಿ.
  • ಮೇಲೆ ನೀಡಲಾದ ಅಗತ್ಯ ದಾಖಲೆಗಳನ್ನು ಅಪ್ಲಿಕೇಶನ್ ಫಾರ್ಮ್ ನೊಂದಿಗೆ ಲಗತ್ತಿಸಿ ಕಚೇರಿಗೆ ಸಲ್ಲಿಸಿ.

ಅಂತಿಮ ತೀರ್ಮಾನ:

ಕರ್ನಾಟಕ ಸರ್ಕಾರವು ಸ್ವಂತ ಭೂಮಿ ಇಲ್ಲದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಮಹಿಳಾ ಕೃಷಿ ಕಾರ್ಮಿಕರಿಗೆ ಸ್ವಂತ ಜಮೀನಿನ ಮಾಲೀಕರನ್ನಾಗಿ ಮಾಡುವ ಉದ್ದೇಶದಿಂದ ಭೂ ಒಡೆತನ ಯೋಜನೆಯನ್ನು ಜಾರಿಗೊಳಿಸಿದ್ದು, ನೀವು ಈ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದರೆ, ನಿಮಗೆ ಸ್ವಂತ ಜಮೀನನ್ನು ಹೊಂದಬೇಕೆನ್ನುವ ಬಯಕೆಗಳಿದ್ದರೆ ಇಂದೇ ಆನ್ಲೈನ್ ಅಥವಾ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ಯೋಜನೆಯ ಲಾಭವನ್ನು ಪಡೆದುಕೊಳ್ಳಿ.


ಇತರೆ ಪ್ರಮುಖ ಲಿಂಕುಗಳು:

Leave a Comment