List: ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್! ಗೃಹಲಕ್ಷ್ಮಿ 30ನೇ ಕಂತು ಬಿಡುಗಡೆ! ಖಾತೆಗೆ ₹2000 ಜಮಾ

ಗೃಹಲಕ್ಷ್ಮಿ ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್! ಕರ್ನಾಟಕ ಸರ್ಕಾರದ ಐದು ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ ರಾಜ್ಯದ ಲಕ್ಷಾಂತರ ಮಹಿಳೆಯರ ಬ್ಯಾಂಕ್ ಖಾತೆಗೆ 30 ನೇ ಕಂತಿನ ಗೃಹಲಕ್ಷ್ಮಿ ಹಣವನ್ನು ಜಮಾ ಮಾಡುವ ಪ್ರಕ್ರಿಯೆ ಆರಂಭಗೊಂಡಿದೆ. ಈ ಯೋಜನೆಯಡಿಯಲ್ಲಿ ಪ್ರತಿ ತಿಂಗಳು ಅರ್ಹ ಮಹಿಳೆಯರ ಬ್ಯಾಂಕ್ ಖಾತೆಗೆ ರೂ. 2000 ಹಣವನ್ನು ಜಮಾ ಮಾಡುತ್ತಿದ್ದು, ರಾಜ್ಯದ ಲಕ್ಷಾಂತರ ಮನೆಯ ಯಜಮಾನಿಯರು ಈ ಯೋಜನೆಯ ಲಾಭವನ್ನು ಪಡೆದುಕೊಳ್ಳುತ್ತಿದ್ದಾರೆ.

ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಅವರು ನೀಡಿರುವ ಅಧಿಕೃತ ಮಾಹಿತಿ ಪ್ರಕಾರ, ತಾಂತ್ರಿಕ ಹಾಗೂ ಆಡಳಿತಾತ್ಮಕ ಕಾರಣಗಳಿಂದಾಗಿ ವಿಳಂಬವಾಗಿರುವ ಮಾರ್ಚ್ ಹಾಗೂ ಏಪ್ರಿಲ್ ಕಂತಿನ ಹಣವನ್ನು ಹಂತ ಹಂತವಾಗಿ ಮಹಿಳೆಯರ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗುತ್ತಿದೆ.

ಈ ಹಿಂದೆಯೂ ಕೂಡ ತಾಂತ್ರಿಕ ಕಾರಣಗಳಿಂದ 27, 28, 29 ನೇ ಕಂತಿನ ಗೃಹಲಕ್ಷ್ಮಿ ಹಣವನ್ನು ಬಿಡುಗಡೆ ಮಾಡುವುದು ವಿಳಂಬವಾಗಿದ್ದು, ಹಂತ ಹಂತವಾಗಿ ಈ ಎಲ್ಲ ಬಾಕಿ ಹಣವನ್ನು ಈಗಾಗಲೇ ಬಿಡುಗಡೆ ಮಾಡಿದ್ದಾರೆ ಹಾಗೆಯೇ ಪ್ರಸ್ತುತ 30 ನೇ ಕಂತಿನ ಹಣವನ್ನು ಕೂಡ ಬಿಡುಗಡೆ ಮಾಡುವ ಪ್ರಕ್ರಿಯೆ ಆರಂಭಗೊಂಡಿದೆ.

30 ನೇ ಕಂತಿನ ಗೃಹಲಕ್ಷ್ಮಿ ಹಣವನ್ನು ಯಾವಾಗ ಬಿಡುಗಡೆ ಮಾಡಲಾಗಿದೆ? ಹಣ ಜಮಾ ಆಗಿರುವ ಸ್ಟೇಟಸ್ ಚೆಕ್ ಮಾಡುವುದು ಹೇಗೆ? ಯೋಜನೆಯ ಉದ್ದೇಶವೇನು? ಹಾಗೂ ಇನ್ನಿತರ ಸಂಪೂರ್ಣ ಮಾಹಿತಿಯನ್ನು ಪ್ರಸ್ತುತ ಲೇಖನದಲ್ಲಿ ತಿಳಿದುಕೊಳ್ಳೋಣ.

List

ಯೋಜನೆಯ ಕಿರು ಚಿತ್ರಣ:

ಯೋಜನೆಯನ್ನು ಜಾರಿಗೊಳಿಸಿದ ಸರ್ಕಾರ ಕರ್ನಾಟಕ ಸರ್ಕಾರ
ಯೋಜನೆಯ ಹೆಸರು ಗೃಹಲಕ್ಷ್ಮಿ ಯೋಜನೆ
ಅರ್ಹ ಫಲಾನುಭವಿಗಳು ಪ್ರತಿ ಮನೆಯ ಯಜಮಾನಿಯರು
ಸಿಗುವ ಗೌರವಧನ ಪ್ರತಿ ತಿಂಗಳು ರೂ. 2000/-

ಯೋಜನೆಯ ಹಿನ್ನೆಲೆ:

ಕರ್ನಾಟಕ ಸರ್ಕಾರವು ಜಾರಿಗೊಳಿಸಿದ ಪ್ರಮುಖ ಐದು ಗ್ಯಾರಂಟಿ ಯೋಜನೆಯಲ್ಲಿ ಮಹತ್ವಾಕಾಂಕ್ಷೆಯ ಯೋಜನೆಯೇ ಗೃಹಲಕ್ಷ್ಮಿ ಯೋಜನೆಯಾಗಿದ್ದು, ಮಹಿಳಾ ಸಬಲೀಕರಣ ಹಾಗೂ ಲಿಂಗ ಸಮಾನತೆಯ ಉದ್ದೇಶದಿಂದಾಗಿ ಈ ಯೋಜನೆಯನ್ನು ಸರ್ಕಾರವು 2023 ರಲ್ಲಿ ಚಾಲನೆಗೆ ತಂದಿದೆ. ಈ ಯೋಜನೆಯಡಿಯಲ್ಲಿ ಪ್ರತಿ ತಿಂಗಳು ಅರ್ಹ ಮಹಿಳೆಯರ ಬ್ಯಾಂಕ್ ಖಾತೆಗೆ ರೂ. 2000/- ಹಣವನ್ನು ವರ್ಗಾವಣೆ ಮಾಡಲಾಗುತ್ತಿದ್ದು, ಬಿಪಿಎಲ್ ಕಾರ್ಡ್ ಹಾಗೂ ಅಂತ್ಯೋದಯ ಕಾರ್ಡ್ ಹೊಂದಿರುವ ಕುಟುಂಬದ ಯಜಮಾನಿಯರು ಈ ಯೋಜನೆಯ ಲಾಭವನ್ನು ಪಡೆದುಕೊಳ್ಳಬಹುದಾಗಿದೆ.

ಯೋಜನೆಯ ಉದ್ದೇಶ:

  • ಬಡತನ ನಿರ್ಮೂಲನೆಗೆ ಉತ್ತೇಜನ:

ನಾವೆಲ್ಲ ನೋಡುತ್ತಿರುವ ಹಾಗೆ ಈಗ ಪ್ರತಿ ವಸ್ತುಗಳ ಬೆಲೆಯೂ ಕೂಡ ದುಬಾರಿಯಾಗುತ್ತಿದ್ದು, ಇದರಿಂದಾಗಿ ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳು ತಮ್ಮ ಮನೆಗೆ ಅಗತ್ಯವಾದ ದಿನಸಿ ಸಾಮಗ್ರಿಗಳನ್ನು ಹಾಗೂ ಇನ್ನಿತರ ಅಗತ್ಯ ಸಾಮಗ್ರಿಗಳನ್ನು ಖರೀದಿಸಲು ಕಷ್ಟ ಪಡುತ್ತಿದ್ದಾರೆ. ಇಂತಹ ಕುಟುಂಬದ ಯಜಮಾನಿಯರಿಗೆ ಪ್ರತಿ ತಿಂಗಳು ರೂ. 2000/- ಹಣವನ್ನು ನೀಡುವ ಮೂಲಕ ಮಾಸಿಕ ಸ್ಥಿರ ಆದಾಯವನ್ನು ಒದಗಿಸಿ ಕುಟುಂಬದ ಮಾಸಿಕ ಖರ್ಚನ್ನು ಸಮರ್ಥವಾಗಿ ನಿಭಾಯಿಸಲು ಸಹಾಯ ಮಾಡುವುದು.

  • ಮಹಿಳಾ ಸಬಲೀಕರಣ:

ಪ್ರತಿ ಕುಟುಂಬದಲ್ಲೂ ಕೂಡ ನಿರ್ಧಾರ ತೆಗೆದುಕೊಳ್ಳುವಲ್ಲಿ ಮಹಿಳೆಯರ ಪ್ರಾತ್ರವನ್ನು ಹೆಚ್ಚಿಸಿ ಕುಟುಂಬದಲ್ಲಿ ಅವಳ ಗೌರವವನ್ನು ಹಾಗೂ ಘನತೆಯನ್ನು ಹೆಚ್ಚಿಸುವುದು. ಹಾಗೂ ಮಾಸಿಕ ನಿರ್ದಿಷ್ಟ ಆರ್ಥಿಕ ನೆರವನ್ನು ಒದಗಿಸುವ ಮೂಲಕ ಅವರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದು.

  • ನೇರವಾಗಿ ಆರ್ಥಿಕ ನೆರವನ್ನು ಒದಗಿಸುವುದು:

ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ ಅರ್ಜಿ ಮಹಿಳೆಯರಿಗೆ ಪ್ರತಿ ತಿಂಗಳು ರೂ. 2000 ದಂತೆ ಪ್ರತಿ ವರ್ಷ ರೂ. 24000 ದ ವರೆಗಿನ ಆರ್ಥಿಕ ನೆರವನ್ನು ಯಾವುದೇ ಮಧ್ಯವರ್ತಿಗಳ ಹಾವಳಿ ಇಲ್ಲದಂತೆ ನೇರವಾಗಿ ಮಹಿಳೆಯರ ಬ್ಯಾಂಕ್ ಖಾತೆಗೆ ವಿವಿಧ ಹಂತುಗಳನ್ನು ಹಣವನ್ನು ಜಮಾ ಮಾಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.

ಯೋಜನೆಯಿಂದ ಮಹಿಳೆಯರಿಗಾಗಿರುವ ಲಾಭಗಳು:

ಪ್ರತಿ ತಿಂಗಳು ಮಹಿಳೆಯರ ಬ್ಯಾಂಕ್ ಖಾತೆಗೆ ಸ್ಥಿರವಾಗಿ ರೂ. 2000 ಹಣ ಜಮಾ ಆಗುವುದರಿಂದ ಅವರ ಸ್ವಂತ ಖರ್ಚುಗಳನ್ನು ನಿಭಾಯಿಸಿಕೊಳ್ಳಲು, ಮನೆಗೆ ಅಗತ್ಯವಾಗುವ ಸಾಮಗ್ರಿಗಳನ್ನು ಖರೀದಿಸಲು ಹಾಗೂ ತಮ್ಮ ಮಕ್ಕಳ ಶೈಕ್ಷಣಿಕ ಖರ್ಚುಗಳನ್ನು ನಿಭಾಯಿಸಲು ನೆರವಾಗಿದೆ.

ಹಾಗೆಯೇ ಇನ್ನು ಕೆಲವು ಮಹಿಳೆಯರು ಪ್ರತಿ ಕಂತಿನ ಗೃಹಲಕ್ಷ್ಮಿ ಹಣವನ್ನು ಕೂಡಿಟ್ಟು ಸ್ವಂತವಾಗಿ ಉದ್ಯೋಗವನ್ನು ಪ್ರಾರಂಭಿಸುತ್ತಿದ್ದಾರೆ ಹಾಗೂ ಮನೆಗೆ ಅಗತ್ಯವಾದ ವಸ್ತುಗಳನ್ನು ಖರೀದಿಸುತ್ತಿದ್ದಾರೆ. ಜೊತೆಗೆ ಸಮಾಜದಲ್ಲಿ ಮಹಿಳೆಯರ ಆರ್ಥಿಕ ಸ್ವತಂತ್ರ ಹಾಗೂ ಗೌರವವು ಹೆಚ್ಚುತ್ತದೆ.

ಯೋಜನೆಯ ಲಾಭವನ್ನು ಪಡೆಯಲು ಅರ್ಹ ಅಭ್ಯರ್ಥಿಗಳು ಯಾರು?

  • ಅರ್ಜಿದಾರರು ಕರ್ನಾಟಕದ ಕಾಯಂ ನಿವಾಸಿ ಆಗಿರಬೇಕು.
  • ಕುಟುಂಬದ ಮಹಿಳೆಯರು ಮುಖ್ಯಸ್ಥರಾಗಿರಬೇಕು.
  • ಬಿಪಿಎಲ್ ಅಥವಾ ಅಂತ್ಯೋದಯ ಪಡಿತರ ಚೀಟಿಯನ್ನು ಹೊಂದಿರಬೇಕು.
  • ಪ್ರತಿ ಕುಟುಂಬದ ಒಬ್ಬ ಮಹಿಳಾ ಸದಸ್ಯರು ಮಾತ್ರ ಈ ಯೋಜನೆಯ ಲಾಭವನ್ನು ಪಡೆದುಕೊಳ್ಳಬಹುದು.

30 ನೇ ಕಂತಿನ ಹಣ ಜಮಾ ಆಗಿದೆಯೇ ಎಂದು ಚೆಕ್ ಮಾಡುವುದು ಹೇಗೆ?

  • ಅರ್ಹ ಫಲಾನುಭವಿಗಳು ಮೊದಲು ಗೂಗಲ್ ಪ್ಲೇಸ್ಟೋರ್ ಗೆ ಹೋಗಿ DBT ಕರ್ನಾಟಕ ಆಪ್ ಅನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಆಧಾರ್ ಸಂಖ್ಯೆ ಹಾಗೂ ಒಟಿಪಿ ಬಳಸಿ ಲಾಗಿನ್ ಆಗಿ ಪೇಮೆಂಟ್ ಸ್ಟೇಟಸ್ ವಿಭಾಗದಲ್ಲಿ 30 ನೇ ಕಂತಿನ ಹಣ ಜಮಾ ಆಗಿದೆಯೇ ಎಂದು ಪರಿಶೀಲಿಸಿ.
  • ಅಥವಾ ಸೇವಾ ಸಿಂಧೂ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ, ನಿಮ್ಮ ರೇಷನ್ ಕಾರ್ಡ್ ಸಂಖ್ಯೆಯನ್ನು ನಮೂದಿಸಿ ನೇರವಾಗಿ ಹಣ ಜಮಾ ಆಗಿರುವ ಸ್ಟೇಟಸ್ ಅನ್ನು ಪರಿಶೀಲಿಸಿ.
  • ಅಥವಾ ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಗೆ ನಿಮ್ಮ ರೇಷನ್ ಕಾರ್ಡ್ ನಂಬರ್ ಅನ್ನು SMS ಮಾಡುವ ಮೂಲಕ ಸ್ಟೇಟಸ್ ಅನ್ನು ಪರಿಶೀಲಿಸಬಹುದಾಗಿದೆ.
  • ಅಥವಾ ನಿಮ್ಮ ಬ್ಯಾಂಕ್ ಶಾಖೆಗೆ ಭೇಟಿ ನೀಡಿ ಬ್ಯಾಂಕ್ ಪಾಸ್ ಬುಕ್ ಅನ್ನು ಎಂಟ್ರಿ ಮಾಡುವ ಮೂಲಕ ಹಣ ಜಮಾ ಆಗಿದೆಯೇ ಎಂದು ಪರಿಶೀಲಿಸಿ.

30 ನೇ ಕಂತಿನ ಹಣ ಜಮಾ ಆಗದಿದ್ದರೆ ಏನು ಮಾಡಬೇಕು?

ಗೃಹಲಕ್ಷ್ಮಿಯ 30 ನೇ ಕಂತಿನ ಹಣವನ್ನು ಮೇ ತಿಂಗಳ ಮೊದಲ ವಾರದಲ್ಲಿಯೇ ಕೆಲವು ಅರ್ಹ ಮಹಿಳೆಯರ ಬ್ಯಾಂಕ್ ಖಾತೆಗೆ ಜಮಾ ಮಾಡಿದ್ದು, ಇನ್ನು ಕೆಲವು ಅರ್ಹ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಜಮಾ ಮಾಡುವ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಮುಂದಿನ ಒಂದು ವಾರದ ಒಳಗೆ ಎಲ್ಲ ಅರ್ಹ ಮಹಿಳೆಯರ ಬ್ಯಾಂಕ್ ಕತೆಗೆ ಹಣ ಜಮಾ ಆಗುತ್ತದೆ. ಇದಾಗಿಯೂ ಹಣ ಜಮಾ ಆಗದಿದ್ದರೆ ಈ ಕೆಳಗಿನ ಕಾರಣಗಳಿಂದ ಹಣ ಜಮಾ ಆಗುವುದು ವಿಳಂಬವಾಗಿರಬಹುದು.

  • ಆಧಾರ್ ಬ್ಯಾಂಕ್ ಖಾತೆಗೆ ಲೈಕ್ ಆಗದೆ ಇರುವುದು.
  • APCI ಮ್ಯಾಪಿಂಗ್ ಸಮಸ್ಯೆ ಆಗಿರಬಹುದು.
  • ತಪ್ಪಾದ ದಾಖಲೆಗಳನ್ನು ನೀಡಿರಬಹುದು
  • ಬ್ಯಾಂಕ್ ಖಾತೆಗೆ ನಿಷ್ಕ್ರಿಯವಾಗಿರಬಹುದು.

ಈ ಎಲ್ಲ ಸಮಸ್ಯೆಗಳನ್ನು ಸರಿಪಡಿಸಿಕೊಂಡು ನಂತರವೇ ನಿಮ್ಮ ಬ್ಯಾಂಕ್ ಖಾತೆಗೆ ಗೃಹಲಕ್ಷ್ಮಿ ಹಣ ಜಮಾ ಆಗುತ್ತದೆ.

ಈ ಎಲ್ಲ ಸಮಸ್ಯೆಗಳನ್ನು ಸರಿಪಡಿಸಿಕೊಳ್ಳುವುದು ಹೇಗೆ?

ಗೃಹಲಕ್ಷ್ಮಿಯ ವಿವಿಧ ಕಂತಿನ ಹಣ ಜಮಾ ಆಗುವುದು ವಿಳಂಬವಾಗಿದ್ದರೆ ಅಥವಾ ತಾಂತ್ರಿಕ ಕಾರಣಗಳಿಂದ ಹಾಗೂ ಇನ್ನಿತರ ಕಾರಣಗಳಿಂದ ನಿಮ್ಮ ಬ್ಯಾಂಕ್ ಖಾತೆಗೆ ಗೃಹಲಕ್ಷ್ಮಿ ಹಣ ಜಮಾ ಆಗದಿದ್ದರೆ ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಅಥವಾ ಬ್ಯಾಂಕ್ ಶಾಖೆಗೆ ಭೇಟಿ ನೀಡಿ ಎಲ್ಲಾ ತಾಂತ್ರಿಕ ಸಮಸ್ಯೆಗಳನ್ನು ಸರಿಪಡಿಸಿಕೊಳ್ಳಿ.

ಅಂತಿಮ ತೀರ್ಮಾನ:

ಕರ್ನಾಟಕ ಸರ್ಕಾರವು ಈಗಾಗಲೇ ಯಶಸ್ವಿಯಾಗಿ 29ನೇ ಕಂತಿನ ಗೃಹಲಕ್ಷ್ಮಿ ಹಣವನ್ನು ಅರ್ಹ ಮಹಿಳೆಯರ ಬ್ಯಾಂಕ್ ಖಾತೆಗೆ ಜಮಾ ಮಾಡಿದ್ದು, 30 ನೇ ಕಂತಿನ ಹಣವನ್ನು ಸಹ ಕೆಲವು ಅರ್ಹ ಮಹಿಳೆಯರ ಬ್ಯಾಂಕ್ ಖಾತೆಗೆ ಹಂತ ಹಂತವಾಗಿ ಬಿಡುಗಡೆ ಮಾಡುತ್ತಿದ್ದಾರೆ. ಮೇ ತಿಂಗಳ ಕೊನೆಯ ವಾರದ ಒಳಗೆ ಎಲ್ಲ ಫಲಾನುಭವಿಗಳ ಖಾತೆಗೆ ಹಣ ಜಮಾ ಆಗುತ್ತದೆ ಎಂದು ತಿಳಿದಿದ್ದು, ನಿನ್ನ ಕೂಡ ಕಳೆದ ಕಂತುಗಳ ಹಣವನ್ನು ಪಡೆಯದ ಫಲಾನುಭವಿಗಳು ಹಣ ಜಮಾ ಆಗದಿರಲು ಕಾರಣವೇನು ಎನ್ನುವುದನ್ನು ಪರಿಶೀಲಿಸಿ ಕೂಡಲೇ ಸಮಸ್ಯೆಯನ್ನು ಸರಿಪಡಿಸಿಕೊಂಡು ಸರ್ಕಾರದ ಆರ್ಥಿಕ ನೆರವನ್ನು ಪಡೆದುಕೊಳ್ಳಿ.


ಇತರೆ ಪ್ರಮುಖ ಲಿಂಕುಗಳು:

Leave a Comment