ನಮಸ್ಕಾರ ಸ್ನೇಹಿತರೆ, ನೀವೇನಾದರೂ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿದ್ದೀರಾ? ಮೈಸೂರಿನಲ್ಲಿ ವೃತ್ತಿ ಜೀವನ ಪ್ರಾರಂಭಿಸಬೇಕು ಎನ್ನುವುದು ನಿಮ್ಮ ಬಹು ವರ್ಷದ ಕನಸೇ? ಹಾಗಿದ್ದರೆ ನಿಮಗೊಂದು ಹ್ಯಾಪಿ ನ್ಯೂಸ್! ಮೈಸೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ವಿವಿಧ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
Mysore Court Recruitment 2026 in Kannada
ಮೈಸೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಒಟ್ಟು 93 ವಿವಿಧ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, SSLC ಹಾಗೂ PUC ಅಲ್ಲಿ ಪಾಸ್ ಆಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ದಿನಾಂಕ 28-04-2026 ರಿಂದ ಆರಂಭಗೊಂಡು 31-05-2026 ರಂದು ಕೊನೆಗೊಳ್ಳುತ್ತದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ, ವಯೋಮಿತಿ ವಿವರ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಇನ್ನಿತರ ಮಾಹಿತಿಯನ್ನು ಪ್ರಸ್ತುತ ಈ ಒಂದು ಲೇಖನದ ಮೂಲಕ ತಿಳಿದುಕೊಳ್ಳಬಹುದಾಗಿದೆ. ಇದೇ ರೀತಿಯ ಇನ್ನಷ್ಟು ಹುದ್ದೆಗಳ ಕುರಿತು ಮಾಹಿತಿಗಾಗಿ ನಮ್ಮ ವೆಬ್ಸೈಟ್ ಪಬ್ಲಿಕ್.ಸಲಹೆ.ಇನ್ ಗೆ ಭೇಟಿ ನೀಡಿ.

ಹುದ್ದೆಯ ಅವಲೋಕನ:
| ನೇಮಕಾತಿ ಸಂಸ್ಥೆಗಳ ಹೆಸರು | ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಮೈಸೂರು |
| ಹುದ್ದೆಗಳ ಹೆಸರು | ಸ್ಟೈನೋಗ್ರಾಫರ್ ಗ್ರೇಡ್- 3, ಕಾಪಿಸ್ಟ್, ಪ್ರೋಸೆಸ್ ಸರ್ವರ್, ಪ್ಯೂನ್ |
| ಹುದ್ದೆಗಳ ಸಂಖ್ಯೆ | 93 ಹುದ್ದೆಗಳು |
| ಉದ್ಯೋಗ ಸ್ಥಳ | ಮೈಸೂರು – ಕರ್ನಾಟಕ |
| ಅರ್ಜಿ ಸಲ್ಲಿಸುವ ವಿಧಾನ | ಆನ್ಲೈನ್ |
ಹುದ್ದೆಯ ವಿವರ:
ಮೈಸೂರು ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಹುದ್ದೆಗಳ ವರ್ಗಿಕರಣ ಈ ಕೆಳಕಂಡಂತಿದೆ.
| ಹುದ್ದೆಗಳ ಹೆಸರು | ಹುದ್ದೆಗಳ ಸಂಖ್ಯೆ |
| ಕಾಪಿಸ್ಟ್ | 3 ಹುದ್ದೆಗಳು |
| ಸ್ಟೈನೋಗ್ರಾಫರ್ ಗ್ರೇಡ್ -3 | 4 ಹುದ್ದೆಗಳು |
| ಪ್ರೋಸೆಸ್ ಸರ್ವರ್ | 11 ಹುದ್ದೆಗಳು |
| ಪ್ಯೂನ್ | 75 ಹುದ್ದೆಗಳು |
ಶೈಕ್ಷಣಿಕ ಅರ್ಹತೆ:
ಕಾಪಿಸ್ಟ್:
- ಕಾಪಿಸ್ಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದ್ವಿತೀಯ PUC ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
- ಜೊತೆಗೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯವರು ನಡೆಸುವ ಕನ್ನಡ ಮತ್ತು ಇಂಗ್ಲೀಷ ಭಾಷೆಯ ಕಿರಿಯ ಶ್ರೇಣಿ ಬೆರಳಚ್ಚು ಪರೀಕ್ಷೆಯಲ್ಲಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ಸ್ಟೈನೋಗ್ರಾಫರ್ ಗ್ರೇಡ್ -3:
- ಸ್ಟೈನೋಗ್ರಾಫರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸುವ ದ್ವಿತೀಯ PUC ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
- ಅಥವಾ ಡಿಪ್ಲೊಮಾ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
- ಇವುಗಳ ಜೊತೆಗೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯವರು ನಡೆಸುವ ಕನ್ನಡ ಮತ್ತು ಇಂಗ್ಲೀಷ ಭಾಷೆಗಳ ಹಿರಿಯ ಶ್ರೇಣಿ ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಹಾಗೂ ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳ ಹಿರಿಯ ಶ್ರೇಣಿ ಸ್ಟೈನೋಗ್ರಫಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ಪ್ರೋಸೆಸ್ ಸರ್ವರ್:
- ಪ್ರೋಸೆಸ್ ಸರ್ವರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು SSLC ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ಪ್ಯೂನ್:
- ಪ್ಯೂನ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10 ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ವಯೋಮಿತಿ ವಿವರ:
ಮೈಸೂರು ಜಿಲ್ಲಾ ಹಾಗೂ ಸತ್ರ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷದಿಂದ ಗರಿಷ್ಟ 40 ವರ್ಷ ವಯೋಮಿತಿ ಹೊಂದಿರಬೇಕು.
ವಯೋಮಿತಿ ಸಡಿಲಿಕೆ ವಿವರ:
- ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಪ್ರವರ್ಗ 1 ಅಭ್ಯರ್ಥಿಗಳಿಗೆ: 5 ವರ್ಷ
- ಪ್ರವರ್ಗ 2A, 2B, 3A, 3B ಅಭ್ಯರ್ಥಿಗಳಿಗೆ: 3 ವರ್ಷ
- ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಸೇವಾ ಅವಧಿಗೆ ಹುಚ್ಚುವರಿಯಾಗಿ 3 ವರ್ಷ
- ವಿಧವೆ, ಜೀತ ಕಾರ್ಮಿಕ, ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ
ಅರ್ಜಿ ಶುಲ್ಕ:
ಹುದ್ದೆಗಳಿಗೆ ಅನುಗುಣವಾಗಿ ಹಾಗೂ ವರ್ಗಗಳಿಗೆ ಅನುಗುಣವಾಗಿ ಅರ್ಜಿ ಶುಲ್ಕವನ್ನು ನಿಗದಿಪಡಿಸಿದ್ದು, ಅವುಗಳ ವಿವರ ಈ ಕೆಳಕಂಡಂತಿದೆ.
ಪ್ಯೂನ್ ಹುದ್ದೆಗಳಿಗೆ:
- ಸಾಮಾನ್ಯ ವರ್ಗಗಳ ಅಭ್ಯರ್ಥಿಗಳಿಗೆ : 200/-
- ಪ್ರವರ್ಗ 2A, 2B, 3A, 3B ಅಭ್ಯರ್ಥಿಗಳಿಗೆ: 100/-
- ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಪ್ರವರ್ಗ 1 ಅಭ್ಯರ್ಥಿಗಳಿಗೆ: ಯಾವುದೇ ಅರ್ಜಿ ಶುಲ್ಕವಿಲ್ಲ
ಕಾಪಿಸ್ಟ್, ಸ್ಟೈನೋಗ್ರಾಫರ್, ಪ್ರೋಸೆಸ್ ಸರ್ವರ್ ಹುದ್ದೆಗಳಿಗೆ:
- ಸಾಮಾನ್ಯ ವರ್ಗಗಳ ಅಭ್ಯರ್ಥಿಗಳಿಗೆ : 300/-
- ಪ್ರವರ್ಗ 2A, 2B, 3A, 3B ಅಭ್ಯರ್ಥಿಗಳಿಗೆ: 150/-
- ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಪ್ರವರ್ಗ 1 ಅಭ್ಯರ್ಥಿಗಳಿಗೆ: ಯಾವುದೇ ಅರ್ಜಿ ಶುಲ್ಕವಿಲ್ಲ
ವೇತನ ಶ್ರೇಣಿ:
ಕರ್ನಾಟಕ ಸರ್ಕಾರದ ವೇತನ ಶ್ರೇಣಿಯ ಅನ್ವಯ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗೆ ಅನುಗುಣವಾಗಿ ವೇತನವನ್ನು ನೀಡಲಾಗುತ್ತದೆ.
- ಕಾಪಿಸ್ಟ್: ₹34,100/- ದಿಂದ ₹67,600/-
- ಸ್ಟೈನೋಗ್ರಾಫರ್ ಗ್ರೇಡ್: -3: ₹44,425/- ದಿಂದ ₹83,700/-
- ಪ್ರೋಸೆಸ್ ಸರ್ವರ್: ₹31,775/- ದಿಂದ ₹61,300/-
- ಪ್ಯೂನ್: ₹27,000/- ದಿಂದ ₹46,675/-
ಅಭ್ಯರ್ಥಿಗಳಿಗೆ ಮಾಸಿಕ ವೇತನದ ಜೊತೆಗೆ ಇತರೆ ಭತ್ಯೆಗಳು ಹಾಗೂ ಪಿಂಚಣಿ ಯೋಜನೆಗಳು ಸಿಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:
- ಆಸಕ್ತ ಅಭ್ಯರ್ಥಿಗಳು ಮೊದಲು ಮೈಸೂರು ಜಿಲ್ಲಾ ನ್ಯಾಯಾಲಯದ ಅಧಿಕೃತ ವೆಬ್ಸೈಟ್ ಗೆ ಭೇಟಿ.
- ರಿಕ್ರೂಟ್ಮೆಂಟ್ ವಿಭಾಗವನ್ನು ಆಯ್ಕೆ ಮಾಡಿಕೊಂಡು ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಳ್ಳಿ.
- ನಂತರ ಅಪ್ಲೈ ಆನ್ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ.
- ನಂತರ ಅಲ್ಲಿ ಕೇಳಲಾದ ಎಲ್ಲ ವೈಯಕ್ತಿಕ ವಿವರ, ಶೈಕ್ಷಣಿಕ ವಿವರ, ಹಾಗೂ ಇನ್ನಿತರ ಅಗತ್ಯ ವಿವರಗಳನ್ನು ಭರ್ತಿ ಮಾಡಿ.
- ಅಭ್ಯರ್ಥಿಗಳ ಸಹಿ, ಫೋಟೋ, ಶೈಕ್ಷಣಿಕ ಪ್ರಮಾಣಪತ್ರ ಹಾಗೂ ಇನ್ನಿತರ ಅಗತ್ಯ ದಾಖಲೆಗಳನ್ನು ನಿಗದಿತ ಸೈಜ್ ಗಳಲ್ಲಿ ಅಪ್ಲೋಡ್ ಮಾಡಿ.
- ನಿನ್ನ ವರ್ಗಕ್ಕೆ ಸಂಬಂಧಿಸಿದ ಅರ್ಜಿ ಶುಲ್ಕವನ್ನು ಪಾವತಿಸಿ ನಂತರ ಭರ್ತಿ ಮಾಡಿದ ವಿವಿರಗಳನ್ನು ಇನ್ನೊಮ್ಮೆ ಪರಿಶೀಲಿಸಿ.
- ನಂತರ ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಪ್ರತಿಯನ್ನು ಭವಿಷ್ಯದ ಉಲ್ಲೇಖಕ್ಕಾಗಿ ಪ್ರಿಂಟ್ ತೆಗೆದುಕೊಳ್ಳಿ.
ಆಯ್ಕೆ ಪ್ರಕ್ರಿಯೆ:
- ಶಾರ್ಟ್ ಲಿಸ್ಟ್:
ಅಭ್ಯರ್ಥಿಗಳು ಆಯ್ಕೆ ಮಾಡಿಕೊಳ್ಳುವ ಹುದ್ದೆಗಳಿಗೆ ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅರ್ಹತಾ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ.
- ಕೌಶಲ್ಯ ಪರೀಕ್ಷೆ:
- ಕಾಪಿಸ್ಟ್ ಹುದ್ದೆಗಳಿಗೆ ಕನಿಷ್ಠ 15 ನಿಮಿಷಗಳ ಬೆರಳಚ್ಚು ಪರೀಕ್ಷೆ ಇರುತ್ತದೆ.
- ಸ್ಟೈನೋಗ್ರಾಫರ್ ಹುದ್ದೆಗಳಿಗೆ ಶೀಘ್ರ ಲಿಪಿ ಉಕ್ತಲೇಖನ ಹಾಗೂ ಕಂಪ್ಯೂಟರ್ ಅನುಲಿಪಿ ಪರೀಕ್ಷೆ ನಡೆಸಲಾಗುತ್ತದೆ.
- ವೈಯಕ್ತಿಕ ಸಂದರ್ಶನ:
ಅರ್ಹತಾ ಪರೀಕ್ಷೆಯಲ್ಲಿ ಆಯ್ಕೆಯ ಅಭ್ಯರ್ಥಿಗಳಲ್ಲಿ 1:10 ಅಥವಾ 1:25 ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುತ್ತದೆ. ಟೈನೊಗ್ರಾಫರ್ ಹಾಗೂ ಕಾಪಿಸ್ಟ್ ಹುದ್ದೆಗಳಿಗೆ ಗರಿಷ್ಟ ಅಂಕಗಳ 5% ಅಂಕಗಳು ಸಂದರ್ಶನಕ್ಕೆ ಇರುತ್ತದೆ. ಪ್ರೋಸೆಸ್ ಸರ್ವರ್, ಪ್ಯೂನ್ ಹುದ್ದೆಗಳಿಗೆ ಸಂದರ್ಶನವು 10 ಅಂಕಗಳನ್ನು ಒಳಗೊಂಡಿರುತ್ತದೆ.
- ಅಂತಿಮ ಆಯ್ಕೆ:
ಅಭ್ಯರ್ಥಿಗಳು ಹೊಂದಿರುವ ಶೈಕ್ಷಣಿಕ ಅರ್ಹತೆ, ಕೌಶಲ್ಯ ಪರೀಕ್ಷೆ, ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಮೀಸಲಾತಿ ಅನ್ವಯ ಅಂತಿಮವಾಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಪ್ರಮುಖ ದಿನಾಂಕಗಳು:
| ಪ್ರಮುಖ ಈವೆಂಟ್ | ದಿನಾಂಕ |
|---|---|
| ನೇಮಕಾತಿ ಅಧಿಸೂಚನೆ ಹೊರಡಿಸಿದ ದಿನಾಂಕ | 24-04-2026 |
| ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ | 28-04-2026 |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 31-05-2026 |
| ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ | 02-06-2026 |
ಪ್ರಮುಖ ಲಿಂಕುಗಳು:
| ಅಧಿಕೃತ ವೆಬ್ಸೈಟ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ಅಧಿಸೂಚನೆ ಪಿಡಿಎಫ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಅಂತಿಮ ಮಾತು:
ಮೈಸೂರು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಖಾಲಿ ಇರುವ ಸ್ಟೈನೋಗ್ರಾಫರ್, ಪ್ರೋಸೆಸ್ ಸರ್ವರ್, ಪ್ಯೂನ್ ಹಾಗೂ ಪ್ಯೂನ್ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ತಾವು ಆಯ್ಕೆ ಮಾಡಿಕೊಂಡ ಹುದ್ದೆಗೆ ಸಂಬಂಧಿಸಿದ ಅರ್ಹತಾ ಮಾನದಂಡಗಳನ್ನು ಪೂರೈಸುತ್ತೇವೆಯೇ ಎಂದು ಖಚಿತಪಡಿಸಿಕೊಂಡು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಇತರೆ ಪ್ರಮುಖ ಲಿಂಕುಗಳು:
- HLL: SSLC ಪಾಸ್ ಆದವರಿಗೆ ಸರ್ಕಾರಿ ಡ್ರೈವರ್ ಜಾಬ್! ಮೇ 06 ಕೊನೆಯ ದಿನಾಂಕ । ಇಂದೇ ಅಪ್ಲೈ ಮಾಡಿ
- SBTSSN: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗಾವಕಾಶ! ಯಾವುದೇ ಅರ್ಜಿ ಶುಲ್ಕ + ಲಿಖಿತ ಪರೀಕ್ಷೆ ಇಲ್ಲ । ಏಪ್ರಿಲ್ 30 ಕೊನೆಯ ದಿನಾಂಕ
- Court Job : ₹69,100/- ವೇತನ! SSLC ಪಾಸ್ ಅಭ್ಯರ್ಥಿಗಳಿಗೆ ಸರ್ಕಾರಿ ಉದ್ಯೋಗಾವಕಾಶ । ಇಂದೇ ಅಪ್ಲೈ ಮಾಡಿ
- IFFCO: ₹65,000 ವೇತನ! ಗ್ರಾಜುಯೇಟ್ ಇಂಜಿನಿಯರ್ ಟ್ರೈನಿ ಹುದ್ದೆಗಳ ಭರ್ಜರಿ ನೇಮಕಾತಿ । ಏಪ್ರಿಲ್ 30 ಕೊನೆಯ ದಿನಾಂಕ
- NMPA: ₹2 ಲಕ್ಷ ವೇತನ! ನವ ಮಂಗಳೂರು ಬಂದರು ನೇಮಕಾತಿ 2026 | ಮೇ 4 ಕೊನೆಯ ದಿನ