NIMHANS: ರೂ. 80,000/- ವೇತನ! ಪ್ರಾಜೆಕ್ಟ್ ರಿಸರ್ಚ್ ಸೈಂಟಿಸ್ಟ್, ಟೆಕ್ನಿಕಲ್ ಸಪೋರ್ಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ನಮಸ್ಕಾರ ಸ್ನೇಹಿತರೆ, ರಾಷ್ಟೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯು ಪ್ರಾಜೆಕ್ಟ್ ರಿಸರ್ಚ್ ಸೈಂಟಿಸ್ಟ್, ಪ್ರಾಜೆಕ್ಟ್ ಟೆಕ್ನಿಕಲ್ ಸಪೋರ್ಟ್ (ಸೋಶಿಯಲ್ ವರ್ಕ್) ಹಾಗೂ ಪ್ರಾಜೆಕ್ಟ್ ಟೆಕ್ನಿಕಲ್ ಸಪೋರ್ಟ್ (ಯೋಗ ತೆರಪಿಸ್ಟ್) ಸೇರಿದಂತೆ ಇನ್ನಿತರ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.


NIMHANS Recruitment 2026

ವಿಜ್ಞಾನ ವಿಷಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಮುಗಿಸಿದ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಈ ಹುದ್ದೆಗೆ ಸಂಬಂಧಿಸಿದ ನೇಮಕಾತಿ ಅಧಿಸೂಚನೆಯನ್ನು ಮೇ 26 ಕ್ಕೆ ಹೊರಡಿಸಿದ್ದು, ಜೂನ್ 11, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

ರಾಷ್ಟೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಯಾವುದೇ ಲಿಖಿತ ಪರೀಕ್ಷೆ ಇಲ್ಲದೆ ವಾಕ್ – ಇನ್ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು NIMHANS ನ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.

NIMHANS

ಹುದ್ದೆಯ ಅವಲೋಕನ:

ನೇಮಕಾತಿ ಸಂಸ್ಥೆಯ ಹೆಸರು ರಾಷ್ಟೀಯ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ, ಬೆಂಗಳೂರು
ಹುದ್ದೆಗಳ ಹೆಸರು ಪ್ರಾಜೆಕ್ಟ್ ರಿಸರ್ಚ್ ಸೈಂಟಿಸ್ಟ್, ಪ್ರಾಜೆಕ್ಟ್ ಟೆಕ್ನಿಕಲ್ ಸಪೋರ್ಟ್(ಯೋಗ ತೆರಪಿಸ್ಟ್) ಹಾಗೂ ಪ್ರಾಜೆಕ್ಟ್ ಟೆಕ್ನಿಕಲ್ ಸಪೋರ್ಟ್ (ಸೋಶಿಯಲ್ ವರ್ಕ್) ಹುದ್ದೆಗಳು
ಹುದ್ದೆಗಳ ಸಂಖ್ಯೆ 3 ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ ಆಫ್ಲೈನ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 11-06-2026

ಹುದ್ದೆಯ ಸಂಕ್ಷಿಪ್ತ ಮಾಹಿತಿ:

ರಾಷ್ಟೀಯ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯು ಪ್ರಸ್ತುತ ನೇಮಕಾತಿ ಅಧಿಸೂಚನೆಯಲ್ಲಿ ಪ್ರಾಜೆಕ್ಟ್ ರಿಸರ್ಚ್ ಸೈಂಟಿಸ್ಟ್, ಪ್ರಾಜೆಕ್ಟ್ ಟೆಕ್ನಿಕಲ್ ಸಪೋರ್ಟ್(ಸೋಶಿಯಲ್ ವರ್ಕ್) ಹಾಗೂ ಪ್ರಾಜೆಕ್ಟ್ ಟೆಕ್ನಿಕಲ್ ಸಪೋರ್ಟ್ (ಯೋಗ ತೆರಪಿಸ್ಟ್) ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ವಿಜ್ಞಾನ ವಿಷಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದ ಗರಿಷ್ಟ 40 ವರ್ಷದೊಳಗಿನ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಯ ವಿವರ:

ಹುದ್ದೆಯ ವಿವರ ಹುದ್ದೆಯ ಸಂಖ್ಯೆ
ಪ್ರಾಜೆಕ್ಟ್ ರಿಸರ್ಚ್ ಸೈಂಟಿಸ್ಟ್ 1 ಹುದ್ದೆ
ಪ್ರಾಜೆಕ್ಟ್ ಟೆಕ್ನಿಕಲ್ ಸಪೋರ್ಟ್ (ಸೋಶಿಯಲ್ ವರ್ಕ್)1 ಹುದ್ದೆ
ಪ್ರಾಜೆಕ್ಟ್ ಟೆಕ್ನಿಕಲ್ ಸಪೋರ್ಟ್ (ಯೋಗ ತೆರಪಿಸ್ಟ್)1 ಹುದ್ದೆ

ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ:

  • ಪ್ರಾಜೆಕ್ಟ್ ರಿಸರ್ಚ್ ಸೈಂಟಿಸ್ಟ್:
    • ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಕೆಳಗೆ ತಿಳಿಸಲಾದ ಯಾವುದೇ ಅರ್ಹತೆಯನ್ನು ಹೊಂದಿರಬೇಕು.
      • ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ MBBS ಪದವಿ ಪೂರ್ಣಗೊಳಿಸಿ, ಮಾನಸಿಕ ಆರೋಗ್ಯ ಕ್ಷೇತ್ರದಲ್ಲಿ ಕನಿಷ್ಠ 3 ವರ್ಷಗಳ ಕೆಲಸದ ಅನುಭವವನ್ನು ಹೊಂದಿರಬೇಕು.
      • ಅಥವಾ, MBBS ಪದವಿ ಜೊತೆಗೆ ಮನೋವೈದ್ಯಶಾಸ್ತ್ರದಲ್ಲಿ MD ಅಥವಾ DNB ಪದವಿ ಪಡೆದಿರಬೇಕು.
      • ಅಥವಾ, MBBS ಪದವಿ ಜೊತೆಗೆ ಮನೋವೈದ್ಯಶಾಸ್ತ್ರದಲ್ಲಿ Ph.D ಪದವಿ ಪೂರ್ಣಗೊಳಿಸಿರಬೇಕು.
  • ಪ್ರಾಜೆಕ್ಟ್ ಟೆಕ್ನಿಕಲ್ ಸಪೋರ್ಟ್ (ಸೋಶಿಯಲ್ ವರ್ಕ್):
    • ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಮಾಜ ಕಾರ್ಯದಲ್ಲಿ ಪದವಿ ಮುಗಿಸಿರಬೇಕು ಹಾಗೂ ಮಾನಸಿಕ ಆರೋಗ್ಯ ಕ್ಷೇತ್ರದಲ್ಲಿ ಕನಿಷ್ಠ 3 ವರ್ಷಗಳ ಕೆಲಸದ ಅನುಭವವನ್ನು ಹೊಂದಿರಬೇಕು.
    • ಅಥವಾ, ಮೆಡಿಕಲ್ ಅಂಡ್ ಸೈಕ್ಯಾಟ್ರಿಕ್ ಸೋಶಿಯಲ್ ವರ್ಕ್ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
  • ಪ್ರಾಜೆಕ್ಟ್ ಟೆಕ್ನಿಕಲ್ ಸಪೋರ್ಟ್ (ಯೋಗ ತೆರಪಿಸ್ಟ್):
    • ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ ಬಿಎಸ್ಸಿ ಯೋಗ ಅಥವಾ ಯೋಗದಲ್ಲಿ ಪಿಜಿ ಡಿಪ್ಲೊಮಾ ಮುಗಿಸಿದ ನಂತರ ಕನಿಷ್ಠ 3 ವರ್ಷಗಳ ಕೆಲಸದ ಅನುಭವ ಹೊಂದಿರಬೇಕು.
    • ಅಥವಾ, ಯೋಗ ವಿಷಯದಲ್ಲಿಯೇ ಸ್ನಾತಕೋತ್ತರ ಪದವಿ ಮುಗಿಸಿರಬೇಕು.

ವಯೋಮಿತಿ ವಿವರ:

  • ಪ್ರಾಜೆಕ್ಟ್ ರಿಸರ್ಚ್ ಸೈಂಟಿಸ್ಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಟ 40 ವರ್ಷ ವಯೋಮಿತಿಯನ್ನು ಹೊಂದಿರಬೇಕು.
  • ಪ್ರಾಜೆಕ್ಟ್ ಟೆಕ್ನಿಕಲ್ ಸಪೋರ್ಟ್ (ಸೋಶಿಯಲ್ ವರ್ಕ್) ಹಾಗೂ ಪ್ರಾಜೆಕ್ಟ್ ಟೆಕ್ನಿಕಲ್ ಸಪೋರ್ಟ್ (ಯೋಗ ತೆರಪಿಸ್ಟ್) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಟ 35 ವರ್ಷ ವಯೋಮಿತಿಯನ್ನು ಹೊಂದಿರಬೇಕು.

ಅರ್ಜಿ ಶುಲ್ಕ:

ರಾಷ್ಟೀಯ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯು ಪ್ರಸ್ತುತ ನೇಮಕಾತಿ ಅಧಿಸೂಚನೆಯಲ್ಲಿ ಯಾವುದೇ ಅರ್ಜಿ ಶುಲ್ಕವನ್ನು ನಿಗದಿಪಡಿಸಿಲ್ಲ. ಹಾಗಾಗಿ ಅಭ್ಯರ್ಥಿಗಳು ಉಚಿತವಾಗಿ ನಿಗದಿತ ಸ್ಥಳಕ್ಕೆ ಭೇಟಿ ನೀಡಿ ನೇರ ಸಂದರ್ಶನಕ್ಕೆ ಭಾಗವಹಿಸಬಹುದಾಗಿದೆ.

ವೇತನ ಶ್ರೇಣಿ:

ನಿಮ್ಹಾನ್ಸ್ ಸಂಸ್ಥೆಯು ವಿವಿಧ ಹುದ್ದೆಗಳಿಗೆ ಅನುಗುಣವಾಗಿ ಅರ್ಜಿ ಶುಲ್ಕವನ್ನು ನಿಗದಿಪಡಿಸಿದ್ದು, ಅವುಗಳ ವಿವರ ಈ ಕೆಳಕಂಡಂತಿದೆ.

ಹುದ್ದೆಯ ಹೆಸರು ವೇತನ ಶ್ರೇಣಿ
ಪ್ರಾಜೆಕ್ಟ್ ರಿಸರ್ಚ್ ಸೈಂಟಿಸ್ಟ್ ರೂ. 80,000/- + 30% HRA
ಪ್ರಾಜೆಕ್ಟ್ ಟೆಕ್ನಿಕಲ್ ಸಪೋರ್ಟ್ (ಸೋಶಿಯಲ್ ವರ್ಕ್)ರೂ. 28,000/- + 30% HRA
ಪ್ರಾಜೆಕ್ಟ್ ಟೆಕ್ನಿಕಲ್ ಸಪೋರ್ಟ್ (ಯೋಗ ತೆರಪಿಸ್ಟ್)ರೂ. 28,000/- + 30% HRA

ಅರ್ಜಿ ಸಲ್ಲಿಸುವ ವಿಧಾನ:

  • ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಮ್ಹಾನ್ಸ್ ನ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ, ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಂಡು ಹುದ್ದೆಗೆ ಸಂಬಂದಿಸಿದ ಅರ್ಹತಾ ಮಾನದಂಡಗಳನ್ನು ಪೂರೈಸುತ್ತೆವೆಯೋ? ಇಲ್ಲವೋ? ಎಂದು ಖಚಿತಪಡಿಸಿಕೊಳ್ಳಿ.
  • ಅರ್ಹತಾ ಮಾನದಂಡಗಳನ್ನು ಪೂರೈಸುವುದಾದರೆ, ನಿಮ್ಮ ಐಡಿ ಫ್ರೂಫ್, ಶೈಕ್ಷಣಿಕ ಪ್ರಮಾಣಪತ್ರ, ಅನುಭವ ಪ್ರಮಾಣಪತ್ರ, ಪಾಸ್ ಪೋರ್ಟ್ ಅಳತೆಯ ಫೋಟೋ ಹಾಗೂ ಇನ್ನಿತರ ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಂಡು, ಸಂದರ್ಶನಕ್ಕೆ ಭಾಗವಹಿಸುವಾಗ ಈ ಎಲ್ಲ ದಾಖಲೆಗಳನ್ನು ತಗೆದುಕೊಂಡು ಹೋಗಿ. ಸಂದರ್ಶನ ನಡೆಯುವ 30 ನಿಮಿಷ ಮುಂಚಿತವಾಗಿ ನಿಮ್ಮ ಹೆಸರನ್ನು ನೊಂದಾಯಿಸಿಕೊಳ್ಳಿ.
  • ಸಂದರ್ಶನ ನಡೆಯುವ ಸ್ಥಳ: “ಲೆಕ್ಚರ್ ಹಾಲ್- 1, 1 ನೇ ಮಹಡಿ, ನ್ಯೂರೋಪಿಸಿಯಾಲಜಿ ವಿಭಾಗದ ಪಕ್ಕ, ಹಳೆಯ ಆಡಳಿತ ಕಟ್ಟಡ, ನಿಮ್ಹಾನ್ಸ್, ಬೆಂಗಳೂರು- 560029

ಆಯ್ಕೆ ಪ್ರಕ್ರಿಯೆ:

  • ನೇರ ಸಂದರ್ಶನ ಹಾಗೂ ಲಿಖಿತ ಪರೀಕ್ಷೆ
  • ದಾಖಲಾತಿ ಪರಿಶೀಲನೆ

ಪ್ರಮುಖ ದಿನಾಂಕಗಳು:

ಪ್ರಮುಖ ಈವೆಂಟ್ ದಿನಾಂಕ
ನೇಮಕಾತಿ ಅಧಿಸೂಚನೆ ಪ್ರಕಟಿಸಿದ ದಿನಾಂಕ 26-05-2026
ವಾಕ್ ಇನ್ ಸಂದರ್ಶನ ನಡೆಯುವ ದಿನಾಂಕ 11-06-2026
ಸಂದರ್ಶನ ನಡೆಯುವ ಸಮಯ ಬೆಳಿಗ್ಗೆ 10:30

ಪ್ರಮುಖ ಲಿಂಕುಗಳು:

ಅಧಿಕೃತ ವೆಬ್‌ಸೈಟ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಅಧಿಸೂಚನೆ ಪಿಡಿಎಫ್ ಲಿಂಕ್ ಇಲ್ಲಿ ಕ್ಲಿಕ್ ಮಾಡಿ

ಅಂತಿಮ ತೀರ್ಮಾನ:

ರಾಷ್ಟೀಯ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯು ಪ್ರಸ್ತುತ ನೇಮಕಾತಿ ಅಧಿಸೂಚನೆಯಲ್ಲಿ ಪ್ರಾಜೆಕ್ಟ್ ರಿಸರ್ಚ್ ಸೈಂಟಿಸ್ಟ್, ಪ್ರಾಜೆಕ್ಟ್ ಟೆಕ್ನಿಕಲ್ ಸಪೋರ್ಟ್ ಹುದ್ದೆಗಳು ಸೇರಿದಂತೆ ಒಟ್ಟು 3 ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಇಲ್ಲಿ ಖಾಲಿ ಇರುವ ಹುದ್ದೆಗಳನ್ನು ತಮ್ಮದಾಗಿಸಿಕೊಳ್ಳಬೇಕೆಂದಿರುವ ಅಭ್ಯರ್ಥಿಗಳು ದಿನಾಂಕ 11-06-2026 ಕ್ಕೆ ನಿಗದಿಪಡಿಸಿದ ಸ್ಥಳಕ್ಕೆ ಭೇಟಿ ನೀಡಿ ವಾಕ್ ಇನ್ ಸಂದರ್ಶನಕ್ಕೆ ಹಾಗೂ ಲಿಖಿತ ಪರೀಕ್ಷೆಗೆ ಭಾಗವಹಿಸಿ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಿ.


ಪ್ರಮುಖ ಲಿಂಕುಗಳು:

Whatsapp Group Link Click Here
Telegram Group Link Click Here
Instagram Link Click Here

ಇತರೆ ಪ್ರಮುಖ ಲಿಂಕುಗಳು:

Leave a Comment