NMPA: ₹2 ಲಕ್ಷ ವೇತನ! ನವ ಮಂಗಳೂರು ಬಂದರು ನೇಮಕಾತಿ 2026 | ಮೇ 4 ಕೊನೆಯ ದಿನ

ನಮಸ್ಕಾರ ಸ್ನೇಹಿತರೆ, ಕರ್ನಾಟಕದ ಪ್ರಮುಖ ಬಂದರುಗಳಲ್ಲಿ ಒಂದಾದ ನವ ಮಂಗಳೂರು ಬಂದರು ಪ್ರಾಧಿಕಾರವು ಇದೀಗ 2026 ನೇ ಸಾಲಿನಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಇದೀಗ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಕೇಂದ್ರ ಸರ್ಕಾರದ ಅಡಿಯಲ್ಲಿ ಉದ್ಯೋಗ ಮಾಡಲು ಆಸಕ್ತಿ ಹೊಂದಿರುವ ಅಭ್ಯರ್ಥಿಗೆಳಿಗೆ ಇದೊಂದು ಸುವರ್ಣಾವಕಾಶವಾಗಿದೆ.

NMPA Recruitment in Kannada

ನವ ಮಂಗಳೂರು ಬಂದರು ಪ್ರಾಧಿಕಾರವು ಮೆರಿನ್ ಇಂಜಿನಿಯರ್, ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಇಂಜಿನಿಯರ್, ಅಕೌಂಟ್ಸ್ ಆಫಿಸರ್ ಹುದ್ದೆಗಳ ಭರ್ತಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ದಿನಾಂಕ 14-04-2026 ರಿಂದಲೇ ಆರಂಭಗೊಂಡಿದ್ದು, ದಿನಾಂಕ 04-05-2026 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

ನವ ಮಂಗಳೂರು ಬಂದರು ಪ್ರಾಧಿಕಾರದ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ, ವಯೋಮಿತಿ ವಿವರ, ವೇತನ ಶ್ರೇಣಿ, ಆಯ್ಕೆ ಪ್ರಕ್ರಿಯೆ ಹಾಗೂ ಇನ್ನಿತರ ಸಂಪೂರ್ಣ ಮಾಹಿತಿಯನ್ನು ಪ್ರಸ್ತುತ ಈ ಒಂದು ಲೇಖನದ ಮೂಲಕ ತಿಳಿದುಕೊಳ್ಳಬಹುದಾಗಿದೆ.

NMPA

ಹುದ್ದೆಯ ಕಿರು ವಿಮರ್ಶೆ:

ನೇಮಕಾತಿ ಸಂಸ್ಥೆಗಳ ಹೆಸರು ನವ ಮಂಗಳೂರು ಬಂದರು ಪ್ರಾಧಿಕಾರ
ಹುದ್ದೆಗಳ ಹೆಸರು ಮೆರೀನ್ ಇಂಜಿನಿಯರ್, ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಇಂಜಿನೀರ್, ಅಕೌಂಟ್ಸ್ ಆಫೀಸರ್ ಹಾಗೂ ಇನ್ನು ವಿವಿಧ ಹುದ್ದೆಗಳು
ಹುದ್ದೆಗಳ ಸಂಖ್ಯೆ 19 ಹುದ್ದೆಗಳು
ಉದ್ಯೋಗ ಸ್ಥಳ ಪಣಂಬೂರು – ಮಂಗಳೂರು
ನೇಮಕಾತಿ ವಿಧಾನ ಆನ್ಲೈನ್

ಹುದ್ದೆಯ ವಿವರ:

ನವ ಮಂಗಳೂರು ಬಂದರು ಪ್ರಾಧಿಕಾರವು ನೇಮಕಾತಿ ಅಧಿಸೂಚನೆಯಲ್ಲಿ ಒಟ್ಟು 19 ಕ್ಲಾಸ್- 1 ಹಾಗೂ ಕ್ಲಾಸ್ – 2 ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಅವುಗಳ ವಿವರ ಈ ಕೆಳಕಂಡಂತಿದೆ.

ಹುದ್ದೆಗಳ ವಿವರ ಹುದ್ದೆಗಳ ಸಂಖ್ಯೆ
ಮೆರೀನ್ ಇಂಜಿನಿಯರ್ 1 ಹುದ್ದೆ
ಡೆಪ್ಯೂಟಿ ಡೈರೆಕ್ಟರ್1 ಹುದ್ದೆ
ಡೆಪ್ಯೂಟಿ ಮೆರಿನ್ ಇಂಜಿನಿಯರ್ 2 ಹುದ್ದೆಗಳು
ಅಕೌಂಟ್ ಆಫೀಸರ್ ಗ್ರೇಡ್ 1 (ಕ್ಲಾಸ್ 1)1 ಹುದ್ದೆ
ಅಸಿಸ್ಟೆಂಟ್ ಸೆಕ್ರೆಟರಿ ಗ್ರೇಡ್ 1 (ಕ್ಲಾಸ್ 1)1 ಹುದ್ದೆ
ಅಸಿಸ್ಟೆಂಟ್ ಇಂಜಿನಿಯರ್ (ಸಿವಿಲ್ ಕ್ಲಾಸ್ 2)1 ಹುದ್ದೆ
ಅಸಿಸ್ಟೆಂಟ್ ಇಂಜಿನಿಯರ್ (ಎಲೆಕ್ಟ್ರಿಕಲ್ ಕ್ಲಾಸ್ 2)1 ಹುದ್ದೆ
ಅಸಿಸ್ಟೆಂಟ್ ಅಕೌಂಟ್ಸ್ ಆಫೀಸರ್ (ಕ್ಲಾಸ್ 2)1 ಹುದ್ದೆ
ಜೂನಿಯರ್ ಡೈರೆಕ್ಟರ್ ಕ್ಲಾಸ್ 2)1 ಹುದ್ದೆ
ಜೂನಿಯರ್ ಡೈರೆಕ್ಟರ್ (ಕ್ಲಾಸ್ 2)1 ಹುದ್ದೆ
ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಇಂಜಿನಿಯರ್ (ಸಿವಿಲ್)3 ಹುದ್ದೆಗಳು
ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಇಂಜಿನಿಯರ್ (ಮೆಕ್ಯಾನಿಕಲ್)2 ಹುದ್ದೆಗಳು
ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಇಂಜಿನಿಯರ್ (ಎಲೆಕ್ಟ್ರಿಕಲ್)1 ಹುದ್ದೆ
ಮಾಸ್ಟರ್ ಗ್ರೇಡ್ – 21 ಹುದ್ದೆ
ಪರ್ಸನಲ್ ಸೆಕ್ರೆಟರಿ / ಪರ್ಸನಲ್ ಅಸಿಸ್ಟೆಂಟ್ 2 ಹುದ್ದೆಗಳು

ಶೈಕ್ಷಣಿಕ ಅರ್ಹತೆ:

  • ಮೆರಿನ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಮರ್ಚೆಂಟ್ ಶಿಪ್ಪಿಂಗ್ ಆಕ್ಟ್ ಅಡಿಯಲ್ಲಿ MOT ಫಸ್ಟ್ ಕ್ಲಾಸ್ ಅಥವಾ ಸೆಕೆಂಡ್ ಕ್ಲಾಸ್ ಮೋಟರ್ ಸರ್ಟಿಫಿಕೇಟ್ ಹೊಂದಿರಬೇಕು ಹಾಗೂ ಹಡಗಿನಲ್ಲಿ ಕೆಲಸ ಮಾಡಿದ ಅನುಭವ ಹೊಂದಿರಬೇಕು.
  • ಡೆಪ್ಯುಟಿ ಡೈರಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಂಪ್ಯೂಟರ್ ಇಂಜಿನಿಯರಿಂಗ್ಅಥವಾ ಸೈನ್ಸ್ ಇಲ್ಲವೇ ಗಣಿತ ಅಥವಾ ಸಾಂಖಿತ್ಯ ಶಾಸ್ತ್ರದಲ್ಲಿ ಪದವಿ ಜೊತೆಗೆ ಕಂಪ್ಯೂಟರ್ ಅಪ್ಲಿಕೇಶನ್ ಅಲ್ಲಿ ಡಿಪ್ಲೊಮಾ ಪೂರ್ಣಗೊಳಿಸಿರಬೇಕು.
  • ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಇಂಜಿನಿಯರ್ (ಸಿವಿಲ್, ಮೆಕ್ಯಾನಿಕಲ್, ಎಲೆಕ್ಟ್ರಿಕಲ್ಸ್) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಿತ ವಿಭಾಗದಲ್ಲಿ ಇಂಜಿನಿಯರಿಂಗ್ ಪದವಿ ಪಡೆದಿರಬೇಕು. ಕನಿಷ್ಠ ಎರಡು ವರ್ಷಗಳ ಕೆಲಸದ ಅನುಭವ ಹೊಂದಿರಬೇಕು.
  • ಪರ್ಸನಲ್ ಸೆಕ್ರೆಟರಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಶಾರ್ಟ್ ಹ್ಯಾಂಡ್, ಟೈಪ್ ರೈಟಿಂಗ್ ವೇಗ ಹಾಗೂ 10 ವರ್ಷಗಳ ಕೆಲಸದ ಅನುಭವವನ್ನು ಹೊಂದಿರಬೇಕು.
  • ಅಸಿಸ್ಟೆಂಟ್ ಸೆಕ್ರೆಟರಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ಹೊಂದಿರಬೇಕು.
  • ಅಕೌಂಟ್ ಆಫೀಸರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ICAI ಅಥವಾ ICWA ಸದಸ್ಯರಾಗಿರಬೇಕು.

ವಯೋಮಿತಿ ವಿವರ:

ನವ ಮಂಗಳೂರು ಬಂದರು ಪ್ರಾಧಿಕಾರದ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿಯನ್ನು 01-04-2026 ಕ್ಕೆ ಅನ್ವಯವಾಗುವಂತೆ ಲೆಕ್ಕ ಹಾಕಲಾಗುತ್ತದೆ.

  • ಹುದ್ದೆಗಳಿಗೆ ಅನುಗುಣವಾಗಿ ಅಭ್ಯರ್ಥಿಗಳು ಗರಿಷ್ಟ 28 ರಿಂದ 45 ವರ್ಷ ವಯೋಮಿತಿಯನ್ನು ಹೊಂದಿರಬೇಕು.

ವಯೋಮಿತಿ ಸಡಿಲಿಕೆ ವಿವರ:

  • ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ – 3 ವರ್ಷ
  • ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭ್ಯರ್ಥಿಗಳಿಗೆ – 5 ವರ್ಷ
  • ಮಾಜಿ ಸೈನಿಕ ಅಭ್ಯರ್ಥಿಗಳಿಗೆ – 5 ವರ್ಷ
  • PwBD (ಸಾಮಾನ್ಯ) – 10 ವರ್ಷ
  • PwBD (OBC) – 13 ವರ್ಷ
  • PwBD (SC/ST) – 15 ವರ್ಷ
  • ಮೇಜರ್ ಪೋರ್ಟ್ ಉದ್ಯೋಗಿಗಳಿಗೆ: 55 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ:

SC, ST, PwBD, ಪೋರ್ಟ್ ಉದ್ಯೋಗಿಗಳಿಗೆ ಅರ್ಜಿ ಶುಲ್ಕದಲ್ಲಿ ವಿನಾಯಿತಿ ನೀಡಲಾಗುತ್ತದೆ.

ಸಾಮಾನ್ಯ, ಒಬಿಸಿ ಹಾಗೂ ಇತರೆ ಅಭ್ಯರ್ಥಿಗಳಿಗೆ ರೂ . 475 + GST

ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ಹಾಗೂ ನೆಟ್ ಬ್ಯಾಂಕಿಂಗ್ ಬಳಸಿ ಪಾವತಿಸಬೇಕಾಗುತ್ತದೆ.

ವೇತನ ಶ್ರೇಣಿ:

ನವ ಮಂಗಳೂರು ಬಂದರು ಪ್ರಾಧಿಕಾರದ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ವೇತನವನ್ನು ನೀಡಲಾಗುತ್ತದೆ.

  • ಕ್ಲಾಸ್ 1 ಹುದ್ದೆಗಳಿಗೆ ಅನುಗುಣವಾಗಿ ರೂ. 70,000 ದಿಂದ 200000 ವರೆಗೆ ಮೂಲ ವೇತನ ಇರುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ಅಂದಾಜು ರೂ. 130000 ವೇತನವನ್ನು ನೀಡಲಾಗುತ್ತದೆ.
  • ಕ್ಲಾಸ್ 1 ಹುದ್ದೆಗಳಿಗೆ ಅನುಗುಣವಾಗಿ ರೂ. 50,000 ದಿಂದ 1,60000 ವರೆಗೆ ಮೂಲ ವೇತನ ಇರುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ಅಂದಾಜು ರೂ. 91,000 ವೇತನವನ್ನು ನೀಡಲಾಗುತ್ತದೆ.
  • ಕ್ಲಾಸ್ 2 ಹುದ್ದೆಗಳಿಗೆ ಅನುಗುಣವಾಗಿ ರೂ. 40,000 ದಿಂದ 140000 ವರೆಗೆ ಮೂಲ ವೇತನ ಇರುತ್ತದೆ. ಆಯ್ಕೆಯಾದ ಅಭ್ಯರ್ಥಿಗೆಳಿಗೆ ಮಾಸಿಕ ಅಂದಾಜು ರೂ. 73,000 ವೇತನವನ್ನು ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:

  • ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಮೊದಲು ನವ ಮಂಗಳೂರು ಬಂದರು ಪ್ರಾಧಿಕಾರದ ಅಧಿಕೃತ ವೆಬ್ಸೈಟ್ ಗೆ ಭೇಟಿ.
  • ಕ್ಲಿಕ್ ಹಿಯರ್ ಫಾರ್ ನ್ಯೂ ರಿಜಿಸ್ಟ್ರೇಷನ್ ಮೇಲೆ ಕ್ಲಿಕ್ ಮಾಡಿ ಅಗತ್ಯ ವಿವರಗಳೊಂದಿಗೆ ರಿಜಿಸ್ಟ್ರೇಷನ್ ಪ್ರಕ್ರಿಯೆ ಪೂರ್ಣಗೊಳಿಸಿ.
  • ರಿಜಿಸ್ಟ್ರೇಷನ್ ಪ್ರಕ್ರಿಯೆ ಪೂರ್ಣಗೊಂಡ ನಂತರ ರಿಜಿಸ್ಟ್ರೇಷನ್ ನಂಬರ್ ಹಾಗೂ ಪಾಸ್ ವರ್ಡ್ ಬಳಸಿ ಲಾಗಿನ್ ಆಗಿ.
  • ಅಲ್ಲಿ ಕೇಳಲಾದ ಎಲ್ಲಾ ವೈಯಕ್ತಿಕ ವಿವರಗಳು ಹಾಗೂ ಶೈಕ್ಷಣಿಕ ವಿವರಗಳು ಹಾಗೂ ಇನ್ನಿತರ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ.
  • ಶೈಕ್ಷಣಿಕ ಪ್ರಮಾಣಪತ್ರ, ಅನುಭವ ಪ್ರಮಾಣಪತ್ರ, ವಯಸ್ಸಿನ ಪುರಾವೆ, ಪಾಸ್ಪೋರ್ಟ್ ಅಳತೆಯ ಫೋಟೋ, ಅಭ್ಯರ್ಥಿಗಳ ಸಹಿ, ಎಡಗೈ ಹೆಬ್ಬೆರಳ ಗುರುತು ಹಾಗೂ ಇನ್ನಿತರ ಅಗತ್ಯ ದಾಖಲೆಗಳನ್ನು ನಿಗದಿತ ಸೈಜ್ ಗಳಲ್ಲಿ ಅಪ್ಲೋಡ್ ಮಾಡಿ.
  • ಎಲ್ಲ ವಿವರಗಳು ಸರಿ ಇದೆಯೇ ಎಂದು ಪರಿಶೀಲಿಸಿ ನಂತರ ಕಂಪ್ಲೀಟ್ ರೆಜಿಸ್ಟ್ರೇಷನ್ ಬಟನ್ ಅನ್ನು ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.
  • ನಿಮ್ಮ ವರ್ಗಕ್ಕೆ ಸಂಬಂಧಿಸಿದ ಅರ್ಜಿ ಶುಲ್ಕವನ್ನು ಪಾವತಿಸಿ.

ಆಯ್ಕೆ ಪ್ರಕ್ರಿಯೆ:

ಆಯ್ಕೆ ಪರೀಕ್ಷೆಯು ಆನ್ಲೈನ್ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನದ ಮೂಲಕ ನಡೆಯಲಿದ್ದು, ಆನ್ಲೈನ್ ಪರೀಕ್ಷೆಯು ಒಟ್ಟು 160 ಅಂಕಗಳನ್ನು ಒಳಗೊಂಡಿದ್ದು, ಒಂದು ತಪ್ಪು ಉತ್ತರಕ್ಕೆ 0.25 ನೆಗೆಟಿವ್ ಮಾರ್ಕ್ಸ್ ಇರುತ್ತದೆ.

ಅಂತಿಮವಾಗಿ ಅಭ್ಯರ್ಥಿಗಳು ಆನ್ಲೈನ್ ಪರೀಕ್ಷೆಯಲ್ಲಿ ಹಾಗೂ ವೈಯಕ್ತಿಕ ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ. ಮೆರಿಟ್ ಪಟ್ಟಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳು ಕಡ್ಡಾಯವಾಗಿ ಫಿಟ್ನೆಸ್ ಪರೀಕ್ಷೆಗೆ ಒಳಗಾಗುವುದು ಕಡ್ಡಾಯವಾಗಿ.

ಪ್ರಮುಖ ದಿನಾಂಕಗಳು:

ಪ್ರಮುಖ ಈವೆಂಟ್ ದಿನಾಂಕ
ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ 14-04-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 04-05-2026
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ 04-05-2026

ಪ್ರಮುಖ ಲಿಂಕುಗಳು:

ಅಧಿಕೃತ ವೆಬ್‌ಸೈಟ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಅಧಿಸೂಚನೆ ಪಿಡಿಎಫ್ ಲಿಂಕ್ ಇಲ್ಲಿ ಕ್ಲಿಕ್ ಮಾಡಿ
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ

ಅಂತಿಮ ಮಾತು:

ನವ ಮಂಗಳೂರು ಬಂದರು ಪ್ರಾಧಿಕಾರವು ಮೆರೀನ್ ಇಂಜಿನಿಯರ್, ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಇಂಜಿನೀರ್, ಅಕೌಂಟ್ಸ್ ಆಫೀಸರ್ ಸೇರಿದಂತೆ ಇನ್ನು ವಿವಿಧ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ನೀವೇನಾದರೂ ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಲು ಅಗತ್ಯವಾದ ಅರ್ಹತಾ ಮಾನದಂಡಗಳನ್ನು ಪೂರೈಸಿದರೆ, ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ಹುದ್ದೆಯನ್ನು ತಮ್ಮದಾಗಿಸಿಕೊಳ್ಳಿ.


ಇತರೆ ಪ್ರಮುಖ ಲಿಂಕುಗಳು:

Leave a Comment