Nurse Application: ನರ್ಸಿಂಗ್ ಮುಗಿಸಿ ಸರ್ಕಾರಿ ವಲಯದಲ್ಲಿ ಸೇವೆ ಸಲ್ಲಿಸಲು ಇಚ್ಛಿಸುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದೆ. ರಾಜ್ಯದ ಸಾರ್ವಜನಿಕ ಆಸ್ಪತ್ರೆಯನ್ನು ಬಲಪಡಿಸುವ ಹಾಗೂ ಸಾರ್ವಜನಿಕರಿಗೆ ಉತ್ತಮ ಚಿಕೆತ್ಸೆಯನ್ನು ನೀಡುವ ನಿಟ್ಟಿನಲ್ಲಿ ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಖಾಲಿ ಇರುವ ಒಟ್ಟು 400 ನರ್ಸಿಂಗ್ ಆಫೀಸರ್ ಹುದ್ದೆಗಳ ಭರ್ತಿಗೆ ಗ್ರೀನ್ ಸಿಂಗಲ್ ನೀಡಿದೆ.
ಮಾನ್ಯತೆ ಪಡೆದ ಮಂಡಳಿಯಿಂದ ಬಿಎಸ್ಸಿ ನರ್ಸಿಂಗ್ ಅಥವಾ GNM ಪೂರ್ಣಗೊಳಿಸಿದ ಅಭ್ಯರ್ಥಿಗಳು ಹಾಗೂ ಕರ್ನಾಟಕ ನರ್ಸಿಂಗ್ ಕೌಂಸಿಲ್ ನಲ್ಲಿ ಕಡ್ಡಾಯವಾಗಿ ನೋಂದಣಿ ಆಗಿರುವ ಅಭ್ಯರ್ಥಿಗಳು ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಹ ಅಭ್ಯರ್ಥಿಗಳನ್ನು ಒಂದು ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಪ್ರಸ್ತುತ ಲೇಖನದಲ್ಲಿ ಒಟ್ಟು ಎಷ್ಟು ನರ್ಸಿಂಗ್ ಆಫೀಸರ್ ಹುದ್ದೆಗಳು ಖಾಲಿ ಇದೆ? ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ ಏನು? ವೇತನ ಶ್ರೇಣಿ ಎಷ್ಟು? ಅರ್ಜಿ ಸಲ್ಲಿಸುವುದು ಹೇಗೆ? ಎನ್ನುವ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ.

ಹುದ್ದೆಯ ವಿವರಣಾತ್ಮಕ ನೋಟ:
| ನೇಮಕಾತಿ ಸಂಸ್ಥೆಯ ಹೆಸರು | ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ಸರ್ಕಾರ |
| ಹುದ್ದೆಯ ಹೆಸರು | ನರ್ಸಿಂಗ್ ಆಫೀಸರ್ |
| ಹುದ್ದೆಗಳ ಸಂಖ್ಯೆ | ಒಟ್ಟು 400 ಹುದ್ದೆಗಳು |
| ಅರ್ಜಿ ಸಲ್ಲಿಸುವ ವಿಧಾನ | ಆನ್ಲೈನ್ ಮೂಲಕ |
| ಉದ್ಯೋಗ ಸ್ಥಳ | ಕರ್ನಾಟಕ |
| ಉದ್ಯೋಗ ಪ್ರಕಾರ | ಗುತ್ತಿಗೆ ಆಧಾರಿತ |
ಹುದ್ದೆಯ ಸಂಕ್ಷಿಪ್ತ ಮಾಹಿತಿ:
ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ನರ್ಸಿಂಗ್ ಆಫೀಸರ್ ಹುದ್ದೆಗಳ ಭರ್ತಿಗೆ ಹಸಿರು ನಿಶಾನೆ ತೋರಿದ್ದು, ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹಾಗೂ ಮಂಡಳಿಯಿಂದ ಬಿಎಸ್ಸಿ ನರ್ಸಿಂಗ್ ಹಾಗೂ GNM ಡಿಪ್ಲೊಮಾ ಪೂರ್ಣಗೊಳಿಸಿದ 18 ವರ್ಷದಿಂದ 40 ವರ್ಷ ಪೂರ್ಣಗೊಳಿಸಿದ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಯ ವಿವರ:
| ಹುದ್ದೆಗಳ ವಿವರ | ಹುದ್ದೆಗಳ ಸಂಖ್ಯೆ |
| ನರ್ಸಿಂಗ್ ಆಫೀಸರ್ | 400 ಹುದ್ದೆಗಳು |
ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಸದ್ಯದಲ್ಲಿ ಒಟ್ಟು 400 ನರ್ಸಿಂಗ್ ಆಫೀಸರ್ ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್ ನೀಡಿದ್ದು, ಶೀಘ್ರದಲ್ಲೇ ಯಾವ ಯಾವ ಜಿಲ್ಲೆಗಳಿಗೆ ಎಷ್ಟೆಷ್ಟು ಹುದ್ದೆಗಳನ್ನು ಹಂಚಿಕೆ ಮಾಡಲಾಗುತ್ತದೆ ಎನ್ನುವುದರ ಕುರಿತು ನೇಮಕಾತಿ ಅಧಿಸೂಚನೆ ಹೊರಬೀಳಲಿದೆ.
ಶೈಕ್ಷಣಿಕ ಅರ್ಹತೆ:
ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ನರ್ಸಿಂಗ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಬಿಎಸ್ಸಿ ನರ್ಸಿಂಗ್ ಪದವಿಯನ್ನು ಪೂರ್ಣಗೊಳಿಸಿರಬೇಕು. ಹಾಗೂ GNM ಡಿಪ್ಲೊಮಾ ಕೋರ್ಸ್ ಪೂರ್ಣಗೊಳಿಸಿರಬೇಕು.
ಇವುಗಳ ಜೊತೆಗೆ ಅಭ್ಯರ್ಥಿಗಳ ಕರ್ನಾಟಕ ನರ್ಸಿಂಗ್ ಕೌಂಸಿಲ್ ನಲ್ಲಿ ಕಡ್ಡಾಯವಾಗಿ ನೋಂದಣಿಯಾಗಿರಬೇಕು ಹಾಗೂ ಅದು ಚಾಲ್ತಿಯಲ್ಲಿರಬೇಕು.
ವಯೋಮಿತಿ ವಿವರ:
ಸರ್ಕಾರದ ನಿಯಮಾನುಸಾರ, ನರ್ಸಿಂಗ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ
- ಸಾಮಾನ್ಯ ವರ್ಗಗಳ ಅಭ್ಯರ್ಥಿಗಳು: 35 ವರ್ಷ
- ಇತರ ಹಿಂದುಳಿದ ವರ್ಗಗಳ (2A, 2B, 3A, 3B) ಅಭ್ಯರ್ಥಿಗಳು: 38 ವರ್ಷ
- ಪ್ರವರ್ಗ -I ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳು: 40 ವರ್ಷ
ಅರ್ಜಿ ಶುಲ್ಕ:
ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಖಾಲಿ ಇರುವ ನರ್ಸಿಂಗ್ ಆಫೀಸರ್ ಹುದ್ದೆಗಳಿಗೆ ಸಂಬಂಧಿಸಿದಂತೆ, ಜಿಲ್ಲಾವರು ಹುದ್ದೆಗಳ ವಿವರ ಹಾಗೂ ಅರ್ಜಿ ಶುಲ್ಕಗಳ ಬಗ್ಗೆ ಅಧಿಕೃತ ಪ್ರಕಟಣೆ ನೀಡಿಲ್ಲ, ಹುದ್ದೆಗೆ ಸಂಬಂಧಿಸಿದ ನೇಮಕಾತಿ ಅಧಿಸೂಚನೆ ಹೊರಬಿದ್ದ ನಂತರ ಅರ್ಜಿ ಶುಲ್ಕದ ಬಗ್ಗೆ ನಿಖರವಾದ ಮಾಹಿತಿ ಲಭ್ಯವಾಗುತ್ತದೆ.
ವೇತನ ಶ್ರೇಣಿ:
ನರ್ಸಿಂಗ್ ಆಫೀಸರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 17,435/- ಮೂಲ ವೇತನ ಜೊತೆಗೆ ಸರ್ಕಾರದ ನಿಯಮಾವಳಿಗಳ ಪ್ರಕಾರ ESI, EPF ಸೌಲಭ್ಯಗಳು ಸೇರಿ ಮಾಸಿಕ ರೂ. 24,395/- ವರೆಗೆ ವೇತನವನ್ನು ಪಡೆದುಕೊಳ್ಳಬಹುದಾಗಿದೆ.
ಅರ್ಜಿ ಸಲ್ಲಿಸುವ ವಿಧಾನ:
ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಜಿಲ್ಲಾವಾರು ಹದ್ದೆಗಳ ಹಂಚಿಕೆಯ ನೋಟಿಫಿಕೇಶನ್ ರಿಲೀಸ್ ಮಾಡಿದ ನಂತರ ಈ ಹುದ್ದೆಗೆ ಅರ್ಜಿ ಸಲ್ಲಿಸುವ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಕೆಳಗೆ ತಿಳಿಸಿರುವ ಹಂತಗಳನ್ನು ಅನುಸರಿಸಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
- ಅಭ್ಯರ್ಥಿಗಳು ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಅಥವಾ ಆಯಾ ಜಿಲ್ಲೆಯ DHFWS ಅಧಿಕೃತ ಪುಟಕ್ಕೆ ಭೇಟಿ ನೀಡಿ.
- ಮುಖಪುಟದಲ್ಲಿ ಕಾಣುವ ನರ್ಸಿಂಗ್ ಆಫೀಸರ್ ನೇಮಕಾತಿ ಲಿಂಕ್ ಮೇಲೆ ಕ್ಲಿಕ್ ಮಾಡಿ.
- ನಂತರ ನ್ಯೂ ರಿಜಿಸ್ಟ್ರೇಷನ್ ಬಟನ್ ಮೇಲೆ ಕ್ಲಿಕ್ ಮಾಡಿ ಮೂಲ ವಿವರಗಳನ್ನು ಬಳಸಿ ರಿಜಿಸ್ಟ್ರೇಷನ್ ಪ್ರಕ್ರಿಯೆ ಪೂರ್ಣಗೊಳಿಸಿ ಲಾಗಿನ್ ಆಗಿ.
- ನಂತರ ಅಲ್ಲಿ ಕೇಳಲಾಗುವ ವೈಯಕ್ತಿಕ ವಿವರ, ಶೈಕ್ಷಣಿಕ ವಿವರ, ಕರ್ನಾಟಕ ನರ್ಸಿಂಗ್ ಕೌನ್ಸಿಲ್ ನೋಂದಣಿ ಸಂಖ್ಯೆಯನ್ನು ಭರ್ತಿ ಮಾಡಿ.
- ಇತ್ತೀಚಿನ ಪಾಸ್ ಪೋರ್ಟ್ ಅಳತೆಯ ಫೋಟೋ, ಶೈಕ್ಷಣಿಕ ಪ್ರಮಾಣಪತ್ರ, ಅನುಭವ ಪ್ರಮಾಣಪತ್ರ, ಸಹಿ ಹಾಗೂ ಇನ್ನಿತರ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.
- ಭರ್ತಿ ಮಾಡಿರುವ ಎಲ್ಲ ವಿವರಗಳು ಸರಿ ಇದೆಯೇ ಎಂದು ಖಚಿತಪಡಿಸಿಕೊಂಡು ಅರ್ಜಿ ಶುಲ್ಕವನ್ನು ನಿಗದಿಪಡಿಸಿದ್ದರೆ, ನಿಮ್ಮ ವರ್ಗಕ್ಕೆ ಸಂಬಂಧಿಸಿದ ಅರ್ಜಿ ಶುಲ್ಕವನ್ನು ಪಾವತಿಸಿ ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳು ಬಿಎಸ್ಸಿ ನರ್ಸಿಂಗ್ ಹಾಗೂ GNM ಡಿಪ್ಲೋಮ ಕೋರ್ಸ್ ಗಳಲ್ಲಿ ಪ್ರತಿ ವರ್ಷ ಗಳಿಸಿದ ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿಯನ್ನು ಸಿದ್ದಪಡಿಸಿ ಮೀಸಲಾತಿ ನಿಯಮಗಳ ಪ್ರಕಾರ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ. ಈ ಹಂತ ಮುಗಿದ ನಂತರ ಆಯ್ಕೆಯಾದ ಅಭ್ಯರ್ಥಿಗಳಿಗೆ ದಾಖಲೆಗಳ ಪರಿಶೀಲನೆಗೆ ಕರೆಯಲಾಗುತ್ತದೆ. ನಂತರ ದಾಖಲೆ ಪರಿಶೀಲನೆ ಯಶಸ್ವಿಯಾಗಿ ಮುಗಿದ ನಂತರ ಇಲಾಖೆಯು ಅಂತಿಮ ಆಯ್ಕೆಯ ಪಟ್ಟಿಯನ್ನು ಸಿದ್ದಪಡಿಸಿ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಪ್ರಮುಖ ದಿನಾಂಕಗಳು:
| ಪ್ರಮುಖ ಈವೆಂಟ್ | ದಿನಾಂಕ |
|---|---|
| ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ | ಶೀಘ್ರದಲ್ಲೇ ಪ್ರಕಟಗೊಳ್ಳಲಿದೆ |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | ಶೀಘ್ರದಲ್ಲೇ ಪ್ರಕಾರಗೊಳ್ಳಲಿದೆ |
ಪ್ರಮುಖ ಲಿಂಕುಗಳು:
| ಅಧಿಕೃತ ವೆಬ್ಸೈಟ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಅಂತಿಮ ತೀರ್ಮಾನ:
ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ರಾಜ್ಯದ ವಿವಿಧ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಖಾಲಿ ನರ್ಸಿಂಗ್ ಆಫೀಸರ್ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಿಕೊಳ್ಳುವುದುಕ್ಕೆ ಗ್ರೀನ್ ಸಿಗ್ನಲ್ ನೀಡಿದ್ದು, ಆರೋಗ್ಯ ಇಲಾಖೆಯಲ್ಲಿ ವೃತ್ತಿಜೀವನವನ್ನು ಪ್ರಾರಂಭಿಸಬೇಕಂದು ಹಂಬಲವಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಜಿಲ್ಲಾವಾರು ಹುದ್ದೆಗಳ ಭರ್ತಿಗೆ ಇಲಾಖೆಯಿಂದ ನೇಮಕಾತಿ ಅಧಿಸೂಚನೆ ಪ್ರಕಟಗೊಂಡ ನಂತರ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಿ.
ಪ್ರಮುಖ ಲಿಂಕುಗಳು:
| Whatsapp Group Link | Click Here |
| Telegram Group Link | Click Here |
| Instagram Link | Click Here |
ಇತರೆ ಪ್ರಮುಖ ಲಿಂಕುಗಳು
- Clerk Application: ಕರ್ನಾಟಕ ಲೋಕಾಯುಕ್ತ ನೇಮಕಾತಿ 2026: ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ – PUC ಪಾಸ್ ಅಭ್ಯರ್ಥಿಗಳಿಗೆ ಸರ್ಕಾರಿ ಉದ್ಯೋಗದ ಸುವರ್ಣಾವಕಾಶ!
- SPC: ಬೆಂಗಳೂರಿನ ಪ್ರತಿಷ್ಠಿತ ಕಂಪನಿಯಲ್ಲಿ 1000 ಹುದ್ದೆಗಳ ನೇರ ನೇಮಕಾತಿ! ITI, ಡಿಪ್ಲೊಮಾ ಅಭ್ಯರ್ಥಿಗಳಿಗೆ ಸುವರ್ಣಾವಕಾಶ
- Open Rally: ಭಾರತೀಯ ಸೇನೆಯಲ್ಲಿ ಸಿವಿಲಿಯನ್ ಪೋರ್ಟರ್ ಹುದ್ದೆಗಳ ನೇಮಕಾತಿ! SSLC/ITI ಅಭ್ಯರ್ಥಿಗಳಿಗೆ ಭರ್ಜರಿ ಅವಕಾಶ
- AVNL: ರೂ. 1,20,000/- ವೇತನ! ರಕ್ಷಣಾ ಸಚಿವಾಲಯದಲ್ಲಿ 1213 ಹುದ್ದೆಗಳ ಬೃಹತ್ ನೇಮಕಾತಿ! ಕೊನೆಯ ದಿನಾಂಕ ಜುಲೈ 25
- Teachers: ರೂ. 99,400/- ವೇತನ! ಕರ್ನಾಟಕ ವಸತಿ ಶಾಲೆಗಳಲ್ಲಿ 1087 ಶಿಕ್ಷಕರ ನೇಮಕಾತಿ 2026 | ಆಗಸ್ಟ್ 13 ಕೊನೆಯ ದಿನಾಂಕ