Panchayat Application: ರಾಯಚೂರು ಜಿಲ್ಲಾ ಪಂಚಾಯತ್‌ನಲ್ಲಿ ಗ್ರಂಥಾಲಯ ಮೇಲ್ವಿಚಾರಕರ ನೇಮಕಾತಿ! ಜುಲೈ 29 ಕೊನೆಯ ದಿನಾಂಕ

ನಮಸ್ಕಾರ ಸ್ನೇಹಿತರೆ, ನೀವೇನಾದರೂ ದ್ವಿತೀಯ PUC ಪಾಸ್ ಆಗಿ ಅತ್ಯುತ್ತಮ ಉದ್ಯೋಗವನ್ನು ಹುಡುಕುತ್ತಿದ್ದೀರಾ? ಹಾಗಿದ್ದರೆ ನಿಮಗೊಂದು ಗುಡ್ ನ್ಯೂಸ್! ರಾಯಚೂರು ಜಿಲ್ಲಾವ್ಯಾಪ್ತಿಯಲ್ಲಿನ ಗ್ರಾಮ ಪಂಚಾಯತಿಯ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳ ಭರ್ತಿಗೆ ಹೊಚ್ಚ ಹೊಸ ನೇಮಕಾತಿ ಅಧಿಸೂಚನೆಯನ್ನು ಪ್ರಕಟ ಮಾಡಲಾಗಿದೆ.

Raichur Zilla Panchayat Recruitment 2026


ಮಾನ್ಯತೆ ಪಡೆದ ಮಂಡಳಿಯಿಂದ ದ್ವಿತೀಯ PUC ಪೂರ್ಣಗೊಳಿದ ತತ್ಸಮಾನ ಶೈಕ್ಷಣಿಕ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಹಾಗೂ ಲೈಬ್ರರಿ ಸೈನ್ಸ್ ಸರ್ಟಿಫಿಕೇಷನ್ ಕೋರ್ಸ್ ಪೂರ್ಣಗೊಳಿಸಿದ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರುವ ಸ್ಥಳೀಯ ಅಭ್ಯರ್ಥಿಗಳಿಗೆ ಈ ಒಂದು ನೇಮಕಾತಿಯಲ್ಲಿ ವಿಶೇಷ ಆದ್ಯತೆಯನ್ನು ನೀಡಲಾಗುತ್ತದೆ.

ಗ್ರಾಮ ಪಂಚಾಯಿತಿಯ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳಲ್ಲಿನ ಗ್ರಂಥಾಲಯ ಮೇಲ್ವಿಚಾಕರ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ದಿನಾಂಕ 15-07-2026 ರಿಂದ 29-07-2026 ರ ವರೆಗೆ ಕಾಲಾವಕಾಶ ನೀಡಲಾಗಿದೆ. ಆಸಕ್ತ ಅಭ್ಯರ್ಥಿಗಳು ರಾಯಚೂರು ಜಿಲ್ಲಾ ಪಂಚಾಯಿತಿಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.

Panchayat Application

ಹುದ್ದೆಯ ವಿವರಣಾತ್ಮಕ ನೋಟ:

ನೇಮಕಾತಿ ಸಂಸ್ಥೆ ರಾಯಚೂರು ಜಿಲ್ಲಾ ಪಂಚಾಯತ್
ಹುದ್ದೆಯ ಹೆಸರು ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕ ಹುದ್ದೆಗಳು
ಹುದ್ದೆಯ ಸಂಖ್ಯೆ 5 ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ ಆನ್ಲೈನ್ ಮೂಲಕ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 29-07-2026
ಅಧಿಕೃತ ವೆಬ್ಸೈಟ್ ಲಿಂಕ್ https://zpraichur.karnataka.gov.in/en
ಉದ್ಯೋಗ ಸ್ಥಳ ರಾಯಚೂರು ಜಿಲ್ಲೆಯ ಮಸರಕಲ್, ಭೋಗಾವತಿ, ಮಾರ್ಚಟಾಳ, ಗಣದಿನ್ನಿ, ಜೇರಬಂಡಿ ಗ್ರಾಮ ಪಂಚಾಯಿತಿಗಳು.

ಹುದ್ದೆಯ ಸಂಕ್ಷಿಪ್ತ ಮಾಹಿತಿ:

ರಾಯಚೂರು ಜಿಲ್ಲಾ ಪಂಚಾಯಿತಿಯು ತಮ್ಮ ವ್ಯಾಪ್ತಿಯಲ್ಲಿನ ವಿವಿಧ ಗ್ರಾಮ ಪಂಚಾಯಿತಿಗಳ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳಲ್ಲಿ ಖಾಲಿ ಇರುವ 5 ಗ್ರಂಥಾಲಯ ಮೇಲ್ವಿಚಾಕರ ಹುದ್ದೆಗಳ ಭರ್ತಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆಯನ್ನು ಹೊಂದಿರುವ ಹಾಗೂ ಲೈಬ್ರರಿ ಸೈನ್ಸ್ ನಲ್ಲಿ ಸರ್ಟಿಫಿಕೇಷನ್ ಕೋರ್ಸ್ ಪೂರ್ಣಗೊಳಿಸಿದ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಯ ವಿವರ:

ಹುದ್ದೆಯ ವಿವರ ಹುದ್ದೆಗಳ ಸಂಖ್ಯೆ
ಮಸರಕಲ್ ಗ್ರಾಮ ಪಂಚಾಯತಿ 1 ಹುದ್ದೆ
ಭೋಗಾವತಿ ಗ್ರಾಮ ಪಂಚಾಯತಿ 1 ಹುದ್ದೆ
ಮಾರ್ಚಟಾಳ ಗ್ರಾಮ ಪಂಚಾಯತಿ 1 ಹುದ್ದೆ
ಗಣದಿನ್ನಿ ಗ್ರಾಮ ಪಂಚಾಯತಿ 1 ಹುದ್ದೆ
ಜೇರಬಂಡಿ ಗ್ರಾಮ ಪಂಚಾಯತಿ 1 ಹುದ್ದೆ

ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ:

ಗ್ರಂಥಾಲಯ ಮೇಲ್ವಿಚಾರಕ:

  • ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ ದ್ವಿತೀಯ ಪಿಯುಸಿ ಪೂರ್ಣಗೊಳಿಸಿದ ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ನಿಗದಿಪಡಿಸಿದ ಕೊನೆಯ ದಿನಾಂಕದಂದು ಫಲಿತಾಂಶಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಲ್ಲ.
  • ಅಭ್ಯರ್ಥಿಗಳು ಲೈಬ್ರರಿ ಸೈನ್ಸ್ ನಲ್ಲಿ ಸರ್ಟಿಫಿಕೇಷನ್ ಕೋರ್ಸ್ ಪ್ರಮಾಣಪತ್ರವನ್ನು ಹೊಂದಿರಬೇಕು.
  • ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಸಂಸ್ಥೆಯಿಂದ 3 ತಿಂಗಳ ಕಂಪ್ಯೂಟರ್ ಕೋರ್ಸ್ ಪೂರ್ಣಗೊಳಿಸಿ ಪ್ರಮಾಣಪತ್ರವನ್ನು ಹೊಂದಿರಬೇಕು.

ವಯೋಮಿತಿ ವಿವರ:

ಪ್ರಸ್ತುತ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ, ಗ್ರಂಥಾಲಯ ಮೇಲ್ವಿಚಾಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿಯನ್ನು ದಿನಾಂಕ 10-06-2026 ಕ್ಕೆ ಅನ್ವಯವಾಗುವಂತೆ ಲೆಕ್ಕ ಹಾಕಲಾಗುತ್ತದೆ.

ಇದರಂತೆ ಎಲ್ಲ ವರ್ಗಗಳ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಈ ಕೆಳಗೆ ತಿಳಿಸಿರುವಂತೆ ಗರಿಷ್ಟ ವಯೋಮಿತಿಯನ್ನು ಹೊಂದಿರಬೇಕು.

  • ಸಾಮಾನ್ಯ ವರ್ಗಗಳ ಅಭ್ಯರ್ಥಿಗಳು ಗರಿಷ್ಟ 40 ವರ್ಷ
  • ಇತರೆ ಹಿಂದುಳಿದ ವರ್ಗಗಳ (2A, 2B, 3A, 3B) ಅಭ್ಯರ್ಥಿಗಳು ಗರಿಷ್ಟ 43 ವರ್ಷ
  • ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ -I ಅಭ್ಯರ್ಥಿಗಳು ಗರಿಷ್ಟ 45 ವರ್ಷ ವಯೋಮಿತಿಯನ್ನು ಹೊಂದಿರಬೇಕು.

ವಯೋಮಿತಿ ಸಡಿಲಿಕೆ ವಿವರ:

  • ಮಾಜಿ ಸೈನಿಕ ಅಭ್ಯರ್ಥಿಗಳಿಗೆ: 3 ವರ್ಷ
  • ವಿಶೇಷ ಚೇತನ ಅಭ್ಯರ್ಥಿಗಳಿಗೆ: 10 ವರ್ಷ
  • ವಿಧವಾ ಅಭ್ಯರ್ಥಿಗಳಿಗೆ: 10 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ:

  • ಸಾಮಾನ್ಯ ವರ್ಗಗಳ ಅಭ್ಯರ್ಥಿಗಳು: ರೂ. 500/-
  • ಇತರೆ ಹಿಂದುಳಿದ ವರ್ಗಗಳ (2A, 2B, 3A, 3B) ಅಭ್ಯರ್ಥಿಗಳು: ರೂ. 300/-
  • ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ -I ಅಭ್ಯರ್ಥಿಗಳು: ರೂ. 200/-
  • ವಿಶೇಷ ಚೇತನ ಅಭ್ಯರ್ಥಿಗಳು: ರೂ. 100/- ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.

ಅಗತ್ಯ ದಾಖಲೆಗಳು:

  • ಆಧಾರ್ ಕಾರ್ಡ್
  • PUC ಪ್ರಮಾಣಪತ್ರ
  • SSLC ಹಾಗೂ PUC ಅಂಕಪಟ್ಟಿ
  • ಕಂಪ್ಯೂಟರ್ ಪ್ರಮಾಣಪತ್ರ \
  • ಲೈಬ್ರರಿ ಸೈನ್ಸ್ ಸರ್ಟಿಫಿಕೇಷನ್ ಕೋರ್ಸ್
  • ಪಾಸ್ ಪೋರ್ಟ್ ಅಳತೆಯ ಫೋಟೋ
  • ಸಹಿ
  • ಸ್ಥಳೀಯ ನಿವಾಸಿ ಪ್ರಮಾಣಪತ್ರ
  • ಜಾತಿ ಪ್ರಮಾಣಪತ್ರ
  • ಹಾಗೂ ಇತರೆ ಅಗತ್ಯ ದಾಖಲೆಗಳು

ಅರ್ಜಿ ಸಲ್ಲಿಸುವ ವಿಧಾನ:

  • ಅರ್ಹ ಅಭ್ಯರ್ಥಿಗಳು ಮೊದಲು ರಾಯಚೂರು ಜಿಲ್ಲಾ ಪಂಚಾಯಿತಿಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ.
  • ಹುದ್ದೆಗೆ ಸಂಬಂಧಿಸಿದ ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಳ್ಳಿ.
  • ನಂತರ ನಿಗದಿಪಡಿಸಲಾದ SBI ಖಾತೆಗೆ ಬ್ಯಾಂಕ್ ಮೂಲಕ ಶುಲ್ಕ ಪಾವತಿಸಿ ರಶೀದಿ ಪಡೆದುಕೊಳ್ಳಿ.
  • ನಂತರ ಅಧಿಕೃತ ವೆಬ್ಸೈಟ್ ನಲ್ಲಿ ನೀಡಲಾದ ಹುದ್ದೆಗೆ ಸಂಬಂಧಿಸಿದ ಅಪ್ಲಿಕೇಶನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ವೈಯಕ್ತಿಕ ವಿವರ, ಶೈಕ್ಷಣಿಕ ವಿವರ, ಸಂಪರ್ಕ ವಿವರ ಹಾಗೂ ಇನ್ನಿತರ ಅಗತ್ಯ ವಿವರಗಳನ್ನು ಭರ್ತಿ ಮಾಡಿ.
  • ಈ ಮೇಲೆ ನೀಡಲಾದ ಎಲ್ಲ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.
  • ಭರ್ತಿ ಮಾಡಿರುವ ವಿವರಗಳು ಸರಿ ಇದೆಯೇ ಎಂದು ಖಚಿತಪಡಿಸಿಕೊಂಡು ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.

ಆಯ್ಕೆ ಪ್ರಕ್ರಿಯೆ:

  • ಅಭ್ಯರ್ಥಿಗಳು ದ್ವಿತೀಯ ಪಿಯುಸಿಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿಯನ್ನು ಸಿದ್ದಪಡಿಸಿ, ಇವುಗಳ ಜೊತೆಗೆ ಲೈಬ್ರರಿ ಸೈನ್ಸ್ ಸರ್ಟಿಫಿಕೇಷನ್ ಕೋರ್ಸ್ ಪೂರ್ಣಗೊಳಿಸಿದ ಹಾಗೂ ಕಂಪ್ಯೂಟರ್ ಜ್ಞಾನವನ್ನು ಹೊಂದಿರುವ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.
  • ಒಂದು ವೇಳೆ ಸ್ಥಳೀಯ ಗ್ರಾಮ ಪಂಚಾಯತಿಯಲ್ಲಿ ಅರ್ಹ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದರೆ, ಅದೇ ತಾಲ್ಲೂಕಿನ ಬೇರೆ ಗ್ರಾಮ ಪಂಚಾಯಿತಿಯ ಅರ್ಹ ಅಭ್ಯರ್ಥಿಗಳಿಗೆ ಎರಡನೇ ಆದ್ಯತೆ ನೀಡಲಾಗುತ್ತದೆ. ವಿವಿಧ ತಾಲ್ಲೂಕುಗಳಲ್ಲಿ ಸೂಕ್ತ ಅಭ್ಯರ್ಥಿಗಳು ಸಿಗದಿದ್ದರೆ, ಸ್ಥಳೀಯ ಗ್ರಾಮ ಪಂಚಾಯತಿಯಲ್ಲಿ ಪಿಯುಸಿ ಅಲ್ಲಿ ಹೆಚ್ಚು ಅಂಕಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಪ್ರಮುಖ ದಿನಾಂಕಗಳು:

ಪ್ರಮುಖ ಈವೆಂಟ್ ದಿನಾಂಕ
ನೇಮಕಾತಿ ಅಧಿಸೂಚನೆ ಹೊರಡಿಸಿದ ದಿನಾಂಕ 13-07-2026
ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ 15-07-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 29-07-2026

ಇತರೆ ಪ್ರಮುಖ ಲಿಂಕುಗಳು:

ಅಧಿಕೃತ ವೆಬ್‌ಸೈಟ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಅಧಿಸೂಚನೆ ಪಿಡಿಎಫ್ ಲಿಂಕ್ ಇಲ್ಲಿ ಕ್ಲಿಕ್ ಮಾಡಿ
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ

ಅಂತಿಮ ತೀರ್ಮಾನ:

ರಾಯಚೂರು ಜಿಲ್ಲಾ ಪಂಚಾಯತಿಯ ವಿವಿಧ ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ ಲೈಬ್ರರಿ ಸೂಪರ್ವೈಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಆಸಕ್ತಿ ಹೊಂದಿರುವ ಸ್ಥಳೀಯ ಅಭ್ಯರ್ಥಿಗಳು ಹುದ್ದೆಗೆ ಸಂಬಂಧಿಸಿದ ಅರ್ಹತಾ ಮಾನದಂಡಗಳನ್ನು ಖಚಿತಪಡಿಸಿಕೊಂಡು ನಂತರ ನಿಗದಿತ ದಿನಾಂಕದೊಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಿ.


ಪ್ರಮುಖ ಲಿಂಕುಗಳು:

Whatsapp Group Link Click Here
Telegram Group Link Click Here
Instagram Link Click Here

ಇತರೆ ಪ್ರಮುಖ ಲಿಂಕುಗಳು:

Leave a Comment