PM YASASVI: ₹20,000 ಸ್ಕಾಲರ್ಶಿಪ್! ಕೇಂದ್ರ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್! ಇಂದೇ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ ಕಡೆಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್! ಪೋಸ್ಟ್ ಮೆಟ್ರಿಕ್ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೆ ಪಿಎಂ ಯಶಸ್ವಿ ಯೋಜನೆಯಡಿಯಲ್ಲಿ ಬರೋಬ್ಬರಿ 20000/- ಸ್ಕಾಲರ್ಷಿಪ್ ಗಳನ್ನು ನೀಡಲು ಸರ್ಕಾರವು ಮುಂದಾಗಿದೆ.

PM YASASVI Scholarship for Students


ಪ್ರತಿ ಕೋರ್ಸ್ ಗೆ ಅನುಗುಣವಾಗಿ ವಿದ್ಯಾರ್ಥಿ ವೇತನವನ್ನು ನಿಗದಿಪಡಿಸಿದ್ದು, ಯಾವ ಯಾವ ಕೋರ್ಸ್ ಗಳಿಗೆ ಎಷ್ಟೆಷ್ಟು ವಿದ್ಯಾರ್ಥಿವೇತನವನ್ನು ನಿಗದಿಪಡಿಸಲಾಗಿದೆ ಎನ್ನುವುದನ್ನು ಕೆಳಗಿನ ಹಂತದಲ್ಲಿ ತಿಳಿದುಕೊಳ್ಳೋಣ.

ಇಂದಿನ ಕಾಲದಲ್ಲಿ ಉನ್ನತ ಶಿಕ್ಷಣದ ವೆಚ್ಚವು ದಿನೇ ದಿನೇ ಹೆಚ್ಚುತ್ತಿದ್ದು, ವಿದ್ಯಾರ್ಥಿಗಳಿಗೆ ಈ ಒಂದು ವಿದ್ಯಾರ್ಥಿವೇತನ ವಿದ್ಯಾರ್ಥಿಗಳ ಕಾಲೇಜು ಶುಲ್ಕ, ಪುಸ್ತಕಗಳು, ಪ್ರಯಾಣ ವೆಚ್ಚ ಸೇರಿದಂತೆ ಇನ್ನಿತರ ಶೈಕ್ಷಣಿಕ ವೆಚ್ಚವನ್ನು ಭರಿಸಲು ನೆರವಾಗುತ್ತದೆ.

PM YASASVI

ಯೋಜನೆಯ ಅವಲೋಕನ:

ಯೋಜನೆ ಹೆಸರು ಪ್ರಧಾನ ಮಂತ್ರಿ ಯೂಥ್ ಅಚಿವೆಮೆಂಟ್ಸ್ ಸ್ಕಾಲರ್ಷಿಪ್ ಅವಾರ್ಡ್ ಸ್ಕೀಮ್ ಫಾರ್ ವೈಬ್ರೆನ್ಟ್ ಇಂಡಿಯಾ (PM – YASASVI)
ಯೋಜನೆಯನ್ನು ಅನುಷ್ಠಾನ ಗೊಳಿಸಿದ ಸಚಿವಾಲಯ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ, ಭಾರತ ಸರ್ಕಾರ
ಅರ್ಹ ಫಲಾನುಭವಿಗಳು ಮೆಟ್ರಿಕ್ ನಂತರದ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು
ವಿದ್ಯಾರ್ಥಿವೇತನದ ಒಟ್ಟು ಮೊತ್ತ ಕೋರ್ಸ್ ಆಧಾರದ ಮೇಲೆ ರೂ. 5000 ದಿಂದ ರೂ. 20,000
ಅರ್ಜಿ ಸಲ್ಲಿಸುವ ವಿಧಾನ ಆನ್ಲೈನ್ ಮೂಲಕ

ಪಿಎಂ ಯಶಸ್ವಿ ಯೋಜನೆಯ ಪರಿಚಯ

ಪ್ರಧಾನಮಂತ್ರಿ ಯಂಗ್ ಅಚೀವರ್ಸ್ ಸ್ಕಾಲರ್‌ಶಿಪ್ ಅವಾರ್ಡ್ ಸ್ಕೀಮ್ ಫಾರ್ ವೈಬ್ರಂಟ್ ಇಂಡಿಯಾ (PM-YASASVI) ಎಂಬುದು ಹಿಂದುಳಿದ ಸಮುದಾಯಗಳ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯನ್ನು ಉತ್ತೇಜಿಸಲು ರೂಪಿಸಲಾದ ವಿಶೇಷ ಯೋಜನೆಯಾಗಿದೆ. ಸಮಾಜದ ವಿವಿಧ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗದಂತೆ ನೋಡಿಕೊಳ್ಳುವುದು ಇದರ ಪ್ರಮುಖ ಉದ್ದೇಶವಾಗಿದೆ.

ಈ ಯೋಜನೆಯ ಮೂಲಕ ವಿದ್ಯಾರ್ಥಿಗಳಿಗೆ ಶಾಲಾ ಶಿಕ್ಷಣದಿಂದ ಹಿಡಿದು ಉನ್ನತ ಶಿಕ್ಷಣದವರೆಗೆ ವಿವಿಧ ಹಂತಗಳಲ್ಲಿ ನೆರವು ಒದಗಿಸಲಾಗುತ್ತದೆ. ವಿಶೇಷವಾಗಿ ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿವೇತನವು ಉನ್ನತ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಅತ್ಯಂತ ಉಪಯುಕ್ತವಾಗಿದೆ.

ಯೋಜನೆಯ ಉದ್ದೇಶ:

  • ಉನ್ನತ ಶಿಕ್ಷಣಕ್ಕೆ ಸಮಾನ ಅವಕಾಶಗಳನ್ನು ಒದಗಿಸುವುದು.
  • ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಶೈಕ್ಷಣಿಕ ಮಟ್ಟವನ್ನು ಸುಧಾರಿಸುವುದು.
  • ಶಿಕ್ಷಣ ತೊರೆಯುವ ವಿದ್ಯಾರ್ಥಿಗಳ ಸಂಖ್ಯೆಯನ್ನು ಕಡಿಮೆ ಮಾಡುವುದು.
  • ವೃತ್ತಿಪರ ಹಾಗೂ ತಾಂತ್ರಿಕ ಶಿಕ್ಷಣಕ್ಕೆ ಉತ್ತೇಜನ ನೀಡುವುದು.
  • ಆರ್ಥಿಕ ಅಸಮಾನತೆಯನ್ನು ಕಡಿಮೆ ಮಾಡುವುದು.
  • ಯುವಜನತೆಯ ಪ್ರತಿಭೆಯನ್ನು ದೇಶದ ಅಭಿವೃದ್ಧಿಗೆ ಬಳಸಿಕೊಳ್ಳುವುದು.

ಯೋಜನೆಯ ಪ್ರಯೋಜನ:

  • ಶಿಕ್ಷಣದ ನಿರಂತರತೆಗೆ ಸಹಾಯ:

ಆರ್ಥಿಕ ಸಮಸ್ಯೆಗಳ ಕಾರಣದಿಂದ ಶಿಕ್ಷಣವನ್ನು ಅರ್ಧದಲ್ಲೇ ನಿಲ್ಲಿಸುವ ಪರಿಸ್ಥಿತಿಯನ್ನು ಈ ಯೋಜನೆ ತಡೆಯುತ್ತದೆ. ವಿದ್ಯಾರ್ಥಿಗಳು ಯಾವುದೇ ಅಡಚಣೆಯಿಲ್ಲದೆ ತಮ್ಮ ವಿದ್ಯಾಭ್ಯಾಸವನ್ನು ಮುಂದುವರಿಸಬಹುದು.

  • ಶೈಕ್ಷಣಿಕ ವೆಚ್ಚಗಳ ನಿರ್ವಹಣೆ:

ಕಾಲೇಜು ಶುಲ್ಕ, ಪುಸ್ತಕಗಳ ಖರೀದಿ, ಅಧ್ಯಯನ ಸಾಮಗ್ರಿಗಳು ಮತ್ತು ಇತರ ಶಿಕ್ಷಣ ಸಂಬಂಧಿತ ಖರ್ಚುಗಳನ್ನು ನಿರ್ವಹಿಸಲು ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ದೊರೆಯುತ್ತದೆ.

  • ಪ್ರತಿಭೆಗೆ ಪ್ರೋತ್ಸಾಹ:

ಸಾಮರ್ಥ್ಯ ಮತ್ತು ಪ್ರತಿಭೆ ಹೊಂದಿರುವ ವಿದ್ಯಾರ್ಥಿಗಳು ಹಣಕಾಸಿನ ಕೊರತೆಯಿಂದ ಹಿಂದೆ ಉಳಿಯದೆ ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸಲು ಅವಕಾಶ ಪಡೆಯುತ್ತಾರೆ.

  • ಉನ್ನತ ಹಾಗೂ ವೃತ್ತಿಪರ ಶಿಕ್ಷಣಕ್ಕೆ ಅವಕಾಶ:

ವೈದ್ಯಕೀಯ, ಎಂಜಿನಿಯರಿಂಗ್, ಕಾನೂನು, ನಿರ್ವಹಣೆ ಮತ್ತು ಇತರ ವಿಶೇಷ ಕೋರ್ಸ್‌ಗಳಲ್ಲಿ ಪ್ರವೇಶ ಪಡೆಯಲು ವಿದ್ಯಾರ್ಥಿಗಳಿಗೆ ಹೆಚ್ಚಿನ ಉತ್ತೇಜನ ದೊರೆಯುತ್ತದೆ.

  • ಹಿಂದುಳಿದ ವರ್ಗಗಳ ಸಬಲೀಕರಣ:

ಸಮಾಜದ ಹಿಂದುಳಿದ ಸಮುದಾಯಗಳಿಗೆ ಸೇರಿದ ವಿದ್ಯಾರ್ಥಿಗಳು ಶಿಕ್ಷಣದ ಮೂಲಕ ತಮ್ಮ ಜೀವನಮಟ್ಟವನ್ನು ಸುಧಾರಿಸಿಕೊಳ್ಳಲು ಈ ಯೋಜನೆ ನೆರವಾಗುತ್ತದೆ.

  • ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ನೆರವು:

ಗ್ರಾಮೀಣ ಭಾಗಗಳ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯುವ ಮೂಲಕ ತಮ್ಮ ಪ್ರದೇಶದ ಸಾಮಾಜಿಕ ಹಾಗೂ ಆರ್ಥಿಕ ಅಭಿವೃದ್ಧಿಗೆ ಕೊಡುಗೆ ನೀಡುವ ಸಾಮರ್ಥ್ಯವನ್ನು ಬೆಳೆಸಿಕೊಳ್ಳುತ್ತಾರೆ.

ಕೋರ್ಸ್ ವಾರು ಸ್ಕಾಲರ್ಶಿಪ್ ವಿವರ:

  • ಹತ್ತನೇ ತರಗತಿ ನಂತರದ ಎಲ್ಲ ಪದವಿ ರಹಿತ ವಿದ್ಯಾರ್ಥಿಗಳಿಗೆ: ₹5000/-
  • ಸಾಮಾನ್ಯ ಬಿಎ, ಬಿಕಾಂ, ಬಿಎಸ್ಸಿ, ಎಂಕಾಂ, ಎಂಎ ಪದವಿಗಳಿಗೆ: ₹8000/-
  • ವೃತ್ತಿಪರ ಪದವಿ, ಡಿಪ್ಲೊಮಾ ಹಾಗೂ ಸರ್ಟಿಫಿಕೇಟ್ ಕೋರ್ಸ್ ಗಳಿಗೆ: ₹13,000/-
  • ಇಂಜಿನೀರಿಂಗ್, ವೈದ್ಯಕೀಯ, ಮ್ಯಾನೇಜ್ಮೆಂಟ್ ಹಾಗೂ ಇನ್ನಿತರ ವೃತ್ತಿಪರ ಪದವಿ ಹಾಗೂ ಸ್ನಾತಕೋತ್ತರ ಪದವಿ ಕೋರ್ಸ್ ಗಳಿಗೆ: ₹20,000/-

ಅರ್ಹ ವಿದ್ಯಾರ್ಥಿಗಳು ಯಾರು?

  • OBC ವಿದ್ಯಾರ್ಥಿಗಳು:

ಇತರೆ ಹಿಂದುಳಿದ ವರ್ಗಗಳಿಗೆ ಸೇರಿದ ವಿದ್ಯಾರ್ಥಿಗಳು ಈ ಯೋಜನೆಯ ಪ್ರಮುಖ ಫಲಾನುಭವಿಗಳಾಗಿದ್ದಾರೆ. ಆರ್ಥಿಕವಾಗಿ ದುರ್ಬಲ ಪರಿಸ್ಥಿತಿಯಲ್ಲಿ ಇರುವ OBC ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಮುಂದುವರಿಸಲು ಈ ವಿದ್ಯಾರ್ಥಿವೇತನ ದೊಡ್ಡ ಸಹಾಯವಾಗುತ್ತದೆ.

  • ಆರ್ಥಿಕವಾಗಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು:

ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಸೇರಿದ, ಆದರೆ ಇತರ ಮೀಸಲಾತಿ ವರ್ಗಗಳಲ್ಲಿ ಸೇರದ ವಿದ್ಯಾರ್ಥಿಗಳು ಸಹ ಈ ಯೋಜನೆಯ ಮೂಲಕ ಆರ್ಥಿಕ ನೆರವು ಪಡೆಯಲು ಅರ್ಹರಾಗಿರುತ್ತಾರೆ. ಇದು ಅವರಿಗೆ ಶಿಕ್ಷಣದಲ್ಲಿ ಸಮಾನ ಅವಕಾಶ ನೀಡುತ್ತದೆ.

  • ಬುಡಕಟ್ಟು ಜನಾಂಗಕ್ಕೆ ಸೇರಿದ ವಿದ್ಯಾರ್ಥಿಗಳು:

ಡಿನೋಟಿಫೈಡ್, ಅಲೆಮಾರಿ ಮತ್ತು ಅರೆ-ಅಲೆಮಾರಿ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳು ಈ ಯೋಜನೆಯ ವಿಶೇಷ ಫಲಾನುಭವಿಗಳಾಗಿದ್ದಾರೆ. ಸಮಾಜದ ಅತೀ ಹಿಂದುಳಿದ ಸಮುದಾಯಗಳಿಗೆ ಶಿಕ್ಷಣದ ಅವಕಾಶ ನೀಡುವುದು ಇದರ ಮುಖ್ಯ ಉದ್ದೇಶವಾಗಿದೆ.

  • ಕಡಿಮೆ ಆದಾಯದ ಕುಟುಂಬಗಳ ವಿದ್ಯಾರ್ಥಿಗಳು:

ವಾರ್ಷಿಕ ಕುಟುಂಬ ಆದಾಯ ಸರ್ಕಾರ ನಿಗದಿಪಡಿಸಿರುವ ಮಿತಿಯೊಳಗೆ (ಸಾಮಾನ್ಯವಾಗಿ ₹2.5 ಲಕ್ಷದ ಒಳಗೆ) ಇರುವ ವಿದ್ಯಾರ್ಥಿಗಳು ಈ ಯೋಜನೆಗೆ ಅರ್ಹರಾಗಿರುತ್ತಾರೆ. ಆರ್ಥಿಕ ದುರ್ಬಲತೆ ಇದ್ದರೂ ಶಿಕ್ಷಣ ಮುಂದುವರಿಸಲು ಇದು ನೆರವಾಗುತ್ತದೆ.

  • ಪೋಸ್ಟ್ ಮೆಟ್ರಿಕ್ ಹಂತದ ವಿದ್ಯಾರ್ಥಿಗಳು:

10ನೇ ತರಗತಿ ನಂತರ ಪಿಯುಸಿ, ಡಿಪ್ಲೊಮಾ, ಪದವಿ ಅಥವಾ ಇತರ ಉನ್ನತ ಶಿಕ್ಷಣ ಕೋರ್ಸ್‌ಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಈ ಯೋಜನೆಗೆ ಅರ್ಹರಾಗಿರುತ್ತಾರೆ. ಇದು ಉನ್ನತ ಶಿಕ್ಷಣವನ್ನು ಉತ್ತೇಜಿಸಲು ಸಹಾಯ ಮಾಡುತ್ತದೆ.

  • ಭಾರತೀಯ ನಾಗರಿಕ ವಿದ್ಯಾರ್ಥಿಗಳು:

ಭಾರತದ ನಾಗರಿಕರಾಗಿದ್ದು, ಮಾನ್ಯ ಶಿಕ್ಷಣ ಸಂಸ್ಥೆಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಮಾತ್ರ ಈ ಯೋಜನೆಯ ಪ್ರಯೋಜನ ಪಡೆಯಲು ಅರ್ಹರಾಗಿರುತ್ತಾರೆ. ಇದರಿಂದ ನಿಜವಾದ ಅಗತ್ಯವಿರುವ ವಿದ್ಯಾರ್ಥಿಗಳಿಗೆ ಮಾತ್ರ ಸಹಾಯ ತಲುಪುತ್ತದೆ.

ಅರ್ಜಿ ಸಲ್ಲಿಸಲು ಅಗತ್ಯವಾದ ದಾಖಲೆಗಳು:

  • ವಿದ್ಯಾರ್ಥಿಗಳ ಆಧಾರ್ ಕಾರ್ಡ್
  • ರೇಷನ್ ಕಾರ್ಡ್
  • ಚಾಲ್ತಿಯಲ್ಲಿರುವ ಆದಾಯ ಮತ್ತು ಜಾತಿ ಪ್ರಮಾಣಪತ್ರ
  • ಪಾಸ್ಪೋರ್ಟ್ ಅಳತೆಯ ಫೋಟೋ
  • ಹಿಂದಿನ ಶೈಕ್ಷಣಿಕ ವರ್ಷದ ಅಂಕಪಟ್ಟಿ
  • ದಾಖಲಾತಿ ಪ್ರಮಾಣಪತ್ರ
  • ವಾಸಸ್ಥಳ ದೃಢೀಕರಣ ಪತ್ರ
  • ಬ್ಯಾಂಕ್ ಪಾಸ್ ಬುಕ್ ವಿವರ
  • ಇತರೆ ದಾಖಲೆಗಳು

ಅರ್ಜಿ ಸಲ್ಲಿಸುವ ವಿಧಾನ:

ವಿದ್ಯಾರ್ಥಿಗಳು ಪಿಎಂ ಯಶಸ್ವಿ ವಿದ್ಯಾರ್ಥಿವೇತನ ಯೋಜನೆಗೆ ಆನ್ಲೈನ್ ಮೂಲಕ ಅರ್ಜಿಯನ್ನು ಈ ಕೆಳಗೆ ನೀಡಿರುವ ವಿಧಾನಗಳ ಮೂಲಕ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ.

  • ಅರ್ಹ ವಿದ್ಯಾರ್ಥಿಗಳು ಮೊದಲು NSP ಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ.
  • ಮುಖಪುಟದಲ್ಲಿರುವ ಅಪ್ಲಿಕೇಶನ್ ಕಾರ್ನರ್ ವಿಭಾಗಕ್ಕೆ ಹೋಗಿ, ನ್ಯೂ ರಿಜಿಸ್ಟ್ರೇಷನ್ ಮೇಲೆ ಕ್ಲಿಕ್ ಮಾಡಿ.
  • ನಂತರ ಮೂಲ ವಿವರಗಳನ್ನು ಬಳಸಿ ರಿಜಿಸ್ಟ್ರೇಷನ್ ಪ್ರಕ್ರಿಯೆ ಪೂರ್ಣಗೊಳಿಸಿ.
  • ನಂತರ ರಿಜಿಸ್ಟ್ರೇಷನ್ ನಂಬರ್ ಹಾಗೂ ಪಾಸ್ ವರ್ಡ್ ಬಳಸಿ ಲಾಗಿನ್ ಆಗಿ.
  • ನಂತರ ಅಲ್ಲಿ ಕೇಳಲಾದ ಎಲ್ಲಾ ವೈಯಕ್ತಿಕ ವಿವರ, ಶೈಕ್ಷಣಿಕ ವಿವರ ಹಾಗೂ ಇನ್ನಿತರ ಎಲ್ಲಾ ವಿವರಗಳನ್ನು ಭರ್ತಿ ಮಾಡಿ.
  • ಮೇಲೆ ನೀಡಲಾದ ಎಲ್ಲಾ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ. ಸ್ವೀಕೃತಿ ರಶೀದಿಯನ್ನು ಪ್ರಿಂಟ್ ತಗೆದುಕೊಳ್ಳಿ.

ಅಂತಿಮ ತೀರ್ಮಾನ:

ಕೇಂದ್ರ ಸರ್ಕಾರವು ಪಿಎಂ ಯಶಸ್ವಿ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವ ಕೋರ್ಸ್ ಗಳಿಗೆ ಅನುಗುಣವಾಗಿ ಸ್ಕಾಲರ್ಷಿಪ್ ಗಳನ್ನು ನೀಡುತ್ತಿದ್ದು, ಈ ಯೋಜನೆಯಡಿಯಲ್ಲಿ ಸ್ಕಾಲರ್ಷಿಪ್ ಪಡೆಯಲು ಅರ್ಹವಾದ ಕೋರ್ಸ್ ಗಳಲ್ಲಿ ನೀವೇನಾದರೂ ವ್ಯಾಸಂಗ ಮಾಡುತ್ತಿದ್ದರೆ, ಇಂದೇ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಶೈಕ್ಷಣಿಕ ನೆರವನ್ನು ಪಡೆದುಕೊಳ್ಳಿ.


ಪ್ರಮುಖ ಲಿಂಕುಗಳು:

Whatsapp Group LinkClick Here
Telegram Group LinkClick Here
Instagram LinkClick Here

ಇತರೆ ಪ್ರಮುಖ ಲಿಂಕುಗಳು:

Leave a Comment