PMMVY: ಗರ್ಭಿಣಿಯರಿಗೆ ಗುಡ್ ನ್ಯೂಸ್! ₹11,000/- ಸಹಾಯಧನ, ಲಾಭವನ್ನು ಪಡೆದುಕೊಳ್ಳಲು ಈಗಲೇ ಅಪ್ಲೈ ಮಾಡಿ

ನಮಸ್ಕಾರ ಸ್ನೇಹಿತರೆ, ಗರ್ಭಿಣಿ ಮಹಿಳೆಯರಿಗೆ ಹಾಗೂ ಹಾಲುಣಿಸುವ ಮಹಿಳೆಯರಿಗೆ ಭಾರತ ಸರ್ಕಾರವು ಒಂದೊಳ್ಳೆಯ ಮಾತೃತ್ವ ಯೋಜನೆಯನ್ನು ಜಾರಿಗೊಳಿಸುವ ಮೂಲಕ ಭರ್ಜರಿ ಗುಡ್ ನ್ಯೂಸ್ ನೀಡಿದೆ. ಯಾವುದು ಆ ಯೋಜನೆ ಅಂತ ಯೋಜನೆಯೋಚನೆ ಮಾಡುತ್ತಿದ್ದೀರಾ? ಹಾಗಿದ್ದರೆ ಈ ಒಂದು ಲೇಖನವನ್ನು ಸಂಪೂರ್ಣವಾಗಿ ಓದಿಕೊಳ್ಳಿ.

PMMVY Scheme in Kannada

ಕರ್ನಾಟಕ ಸರ್ಕಾರವು ಗರ್ಭಿಣಿ ಮಹಿಳೆಯರಿಗೆ ಹಾಗೂ ಹಾಲುಣಿಸುವ ಮಹಿಳೆಯರಿಗೆ ಪೌಷ್ಟಿಕಾಂಶ ಯುಕ್ತ ಆಹಾರವನ್ನು ಒದಗಿಸಲು ಹಾಗೂ ಅವರ ಸುಧಾರಣೆಗೆ ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆಯನ್ನು ಜಾರಿ ಗೊಳಿಸಿದ್ದು, ಈ ಒಂದು ಯೋಜನೆಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದ ಅಡಿಯಲ್ಲಿ ಜಾರಿಗೆ ತರಲಾಗಿದೆ.

ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆಯಡಿಯಲ್ಲಿ ಗರ್ಭಿಣಿ ಮಹಿಳೆಯರಿಗೆ ಹಾಗೂ ಹಾಲುಣಿಸುವ ಮಹಿಳೆಯರಿಗೆ ಒಟ್ಟು 11,000 ಸಹಾಯಧನವನ್ನು ನೀಡಲಾಗುತ್ತಿದ್ದು, ಈ ಒಂದು ಸಹಾಯಧನವನ್ನು ಪಡೆದುಕೊಳ್ಳಲು ಯಾರು ಅರ್ಹರು? ಅಷ್ಟು ಹಣ ಒಟ್ಟಿಗೆ ಸಿಗುತ್ತದೆಯೇ? ಅಥವಾ ಹಂತ ಹಂತವಾಗಿ ಸಿಗುತ್ತದೆಯೇ? ಎನ್ನುವುದನ್ನು ಈ ಕೆಳಗಿನ ಹಂತದಲ್ಲಿ ತಿಳಿದುಕೊಳ್ಳೋಣ.

PMMVY

ಯೋಜನೆಯ ಅವಲೋಕನ:

ಯೋಜನೆಯನ್ನು ಅನುಷ್ಠಾನ ಗೊಳಿಸಿದ ಇಲಾಖೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ
ಯೋಜನೆಯ ಹೆಸರು ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆ
ಅರ್ಹ ಫಲಾನುಭವಿಗಳು ಗರ್ಭಿಣಿ ಹಾಗೂ ಹಾಲುಣಿಸುವ ಮಹಿಳೆಯರು
ಯೋಜನೆಯಡಿಯಲ್ಲಿ ಸಿಗುವ ಸಹಾಯಧನ ಮೊದಲ ಜೀವಂತ ಮಗುವಿಗೆ ರೂ. 5,000 ಹಾಗೂ ಎರಡನೇ ಜೀವಂತ ಮಗುವಿಗೆ ರೂ. 6000
ಅರ್ಜಿ ಸಲ್ಲಿಸುವ ವಿಧಾನ ಆನ್ಲೈನ್

ಯೋಜನೆಯ ಕಿರು ಪರಿಚಯ:

ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆಯನ್ನು ಭಾರತ ಸರ್ಕಾರವು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದ ಅಡಿಯಲ್ಲಿ ಜಾರಿಗೊಳಿಸಿದ ಮಹತ್ವಾಕಾಂಕ್ಷೆಯ ಮಾತೃತ್ವ ಯೋಜನೆಯಾಗಿದೆ. ಈ ಯೋಜನೆಯಡಿಯಲ್ಲಿ ಲಾಭವನ್ನು ಪಡೆದುಕೊಳ್ಳಲು ಗರ್ಭಿಣಿ ಮಹಿಳೆಯರು ಹಾಗೂ ಹಾಲುಣಿಸುವ ಮಹಿಳೆಯರು ಅರ್ಹರಾಗಿರುತ್ತಾರೆ.

ಈ ಯೋಜನೆಯಡಿಯಲ್ಲಿ ಗರ್ಭಿಣಿ ಮಹಿಳೆಯರು ತಮ್ಮ ಮೊದಲ ಜೀವಂತ ಮಗುವಿಗೆ ₹5,000 ಸಹಾಯಧನವನ್ನು ಎರಡು ಕಂತುಗಳ ಮೂಲಕ ಪಡೆದುಕೊಳ್ಳಬಹುದು ಹಾಗೂ ಎರಡನೇ ಮಗುವಿಗೆ ಈ ಒಂದು ಸಹಾಯಧನವು ಮಗುವಿನ ಲಿಂಗದ ಮೇಲೆ ಆಧಾರಿತವಾಗಿರುತ್ತದೆ ಹಾಗೂ ಇಲ್ಲಿ ಅರ್ಹ ಮಹಿಳೆಯರು ₹6000 ಸಹಾಯಧನವನ್ನು ಪಡೆದುಕೊಳ್ಳಬಹುದಾಗಿದೆ.

ಯೋಜನೆಯ ಉದ್ದೇಶ:

  • ಗರ್ಭಿಣಿ ಮಹಿಳೆಯರು ಹಾಗೂ ಹಾಲುಣಿಸುವ ಮಹಿಳೆಯರು ತಮ್ಮ ಆರೋಗ್ಯದ ಕಡೆಗೆ ಹೆಚ್ಚಿನ ಗಮನ ಹರಿಸುವಂತೆ ಮಾಡುವುದು ಹಾಗೂ ಅವರಿಗೆ ಅಗತ್ಯವಾದ ಪೌಷ್ಠಿಕಾಂಶಯುಕ್ತ ಆಹಾರವನ್ನು ಸೇವಿಸುವಂತೆ ಮಾಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.
  • ಗರ್ಭಿಣಿ ಮಹಿಳೆಯರು ನಿಯಮಿತವಾಗಿ ಮಗುವಿನ ಆರೋಗ್ಯದ ಕುರಿತು ತಪಾಸಣೆ ಮಾಡಿಸಲು ಹಾಗೂ ಆಸ್ಪತ್ರೆಯಲ್ಲಿ ಹೆರಿಗೆಯನ್ನು ಮಾಡಿಸಲು ಉತ್ತೇಜನ ನೀಡುವುದು.
  • ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆಯಡಿಯಲ್ಲಿ ಮಹಿಳೆಯರಿಗೆ ಸಹಾಯಧನವನ್ನು ನೀಡುವ ಮೂಲಕ ತಮ್ಮ ಗರ್ಭವಸ್ಥೆಯ ಸಮಯದಲ್ಲಿ ಹಾಗೂ ಹೆರಿಗೆಯ ನಂತರ ಕೂಲಿ ಕೆಲಸಕ್ಕೆ ಹೋಗಲಾರದೆ ಅನುಭವಿಸುವ ನಷ್ಟವನ್ನು ಭರಿಸುವುದು ಹಾಗೂ ಈ ಸಮಯದಲ್ಲಿ ಮಹಿಳೆಯರು ಯಾವುದೇ ಚಿಂತೆ ಇಲ್ಲದೆ ವಿಶ್ರಾಂತಿ ಪಡೆಯಲು ಅವಕಾಶ ಕಲ್ಪಿಸುವುದು ಈ ಯೋಜನೆಯ ಉದ್ದೇಶವಾಗಿದೆ.
  • ವಿಶೇಷವಾಗಿ ಈ ಒಂದು ಯೋಜನೆಯಡಿಯಲ್ಲಿ ಎರಡನೇ ಮಗುವು ಹೆಣ್ಣಾಗಿದ್ದರೆ ಮಾತ್ರ ಸಹಾಯಧನವನ್ನು ನೀಡುವ ಮೂಲಕ ಹೆಣ್ಣು ಭ್ರೂಣ ಹತ್ಯೆಯನ್ನು ತಡೆಗಟ್ಟುವುದು ಹಾಗೂ ಹೆಣ್ಣು ಮಗುವಿನ ಜನನಕ್ಕೆ ಪ್ರೋತ್ಸಾಹ ನೀಡುವ ಮೂಲಕ ಲಿಂಗ ಸಮಾನತೆಗೆ ಅವಕಾಶ ಕಲ್ಪಿಸುವುದು.

ಯೋಜನೆಯಡಿಯಲ್ಲಿ ಅರ್ಹ ಫಲಾನುಭವಿಗಳಿಗಾಗುವ ಪ್ರಯೋಜನ:

  • ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆಯಡಿಯಲ್ಲಿ ಅರ್ಹ ಫಲಾನುಭವಿಗಳು ಮೊದಲ ಜೀವಂತ ಮಗುವಿಗೆ ₹5,000 ಹಾಗೂ ಎರಡನೇ ಜೀವಂತ ಹೆಣ್ಣು ಮಗುವಿಗೆ ₹6000 ದಂತೆ ಒಟ್ಟು ₹11,000 ಸಹಾಯಧನವನ್ನು ಪಡೆದುಕೊಳ್ಳಬಹುದಾಗಿದೆ.
  • ಗರ್ಭಿಣಿ ಹಾಗೂ ಹಾಲುಣಿಸುವ ಮಹಿಳೆಯಾರಿಗೆ ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆಯಡಿಯಲ್ಲಿ ಸಿಗುವ ಸಹಾಯಧನವನ್ನು ಯಾವುದೇ ಮಧ್ಯವರ್ತಿಗಳ ನೆರವಿಲ್ಲದೆ ನೇರವಾಗಿ ಅವರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ.
  • ಈ ಒಂದು ಯೋಜನೆಯಡಿಯಲ್ಲಿ ಸಿಗುವ ಸಹಾಯಧನದಿಂದ ಗರ್ಭಿಣಿ ಹಾಗೂ ಹಾಲುಣಿಸುವ ಮಹಿಳೆಯರು ತಮಗೆ ಅಗತ್ಯವಾದ ಪೌಷ್ಠಿಕಾಂಶಯುಕ್ತ ಆಹಾರವನ್ನು ಖರೀದಿ ಮಾಡಲು ಸಹಾಯವಾಗುತ್ತದೆ. ಇದರಿಂದ ತಮ್ಮ ಹಾಗೂ ತಮ್ಮ ಮಗುವಿನ ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದು.

ಸಿಗುವ ಸಹಾಯಧನದ ಸಂಪೂರ್ಣ ವಿವರ:

ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆಯಡಿಯಲ್ಲಿ ಅರ್ಹ ಮಹಿಳೆಯರಿಗೆ ವಿವಿಧ ಕಂತುಗಳ ಮೂಲಕ ಸಹಾಯಧನವನ್ನು ನೀಡಲಾಗುತ್ತದೆ. ಅರ್ಹ ಫಲಾನುಭವಿಗಳು ಈ ಒಂದು ಸಹಾಯಧನವನ್ನು ತಮ್ಮ ಮೊದಲ ಎರಡು ಜೀವಂತ ಮಕ್ಕಳ ಹೆಸರಿನಲ್ಲಿ ಪಡೆದುಕೊಳ್ಳಬಹುದಾಗಿದೆ. ಅವುಗಳ ವಿವರ ಈ ಕೆಳಕಂಡಂತಿದೆ,

ಮೊದಲ ಜೀವಂತ ಮಗುವಿಗೆ:

ಭಾರತ ಸರ್ಕಾರವು ಅರ್ಹ ಫಲಾನುಭವಿಗಳ ಮೊದಲ ಜೀವಂತ ಮಗುವಿಗೆ ಒಟ್ಟು ₹5,000 ಸಹಾಯಧನವನ್ನು ನೀಡುತ್ತದೆ. ಮಹಿಳೆಯರು ಈ ಹಣವನ್ನು ಎರಡು ಕಂತುಗಳ ಮೂಲಕ ಪಡೆದುಕೊಳ್ಳಲು ಅರ್ಹರಾಗಿರುತ್ತಾರೆ.

  • ಮೊದಲ ಕಂತು: ಗರ್ಭಿಣಿ ಮಹಿಳೆಯರು ತಮ್ಮ ಗರ್ಭಧಾರಣೆಯ ನೋಂದಣಿ ಹಾಗೂ ಪ್ರಸವ ಪೂರ್ವ ತಪಾಸಣೆಯನ್ನು ಮಾಡಿಸಿಕೊಂಡ ನಂತರ ₹3,000 ಸಹಾಯಧನವನ್ನು ಪಡೆದುಕೊಳ್ಳಬಹುದಾಗಿದೆ.
  • ಎರಡೇ ಕಂತು: ಮಗುವಿನ ಜನನದ ನೋಂದಣಿ ಹಾಗೂ ಮಗುವಿಗೆ ಮೊದಲ ಲಸಿಕೆಯನ್ನು ಹಾಕಿಸಿದ ನಂತರ ₹2,000 ಸಹಾಯಧನವನ್ನು ಪಡೆದುಕೊಳ್ಳಬಹುದಾಗಿದೆ.

ಎರಡನೇ ಜೀವಂತ ಮಗುವಿಗೆ:

ಅರ್ಹ ಫಲಾನುಭವಿಗಳಿಗೆ ಜನಿಸಿದ ಎರಡನೇ ಮಗು ಹೆಣ್ಣಾಗಿದ್ದರೆ ಮಾತ್ರ ಎರಡನೇ ಬಾರಿಗೆ ಈ ಒಂದು ಯೋಜನೆಯ ಲಾಭವನ್ನು ಪಡೆದುಕೊಳ್ಳಬಹುದಾಗಿದೆ.

  • ಮಗುವಿನ ಜನನ ನಂತರ ಒಂದೇ ಕಂತಿನಲ್ಲಿ ಈ ಒಂದು ಸಹಾಯಧನವನ್ನು ಪಡೆದುಕೊಳ್ಳಬಹುದಾಗಿದೆ. ಈ ಹಂತದಲ್ಲಿ ಒಟ್ಟು ₹6000 ಸಹಾಯಧನವನ್ನು ಪಡೆದುಕೊಳ್ಳಬಹುದಾಗಿದೆ.

ಯೋಜನೆಗೆ ಸಂಬಂಧಿಸಿದ ಅರ್ಹತಾ ಮಾನದಂಡಗಳು:

  • ಫಲಾನುಭವಿಗಳು ಗರ್ಭಿಣಿಯರು ಹಾಗೂ ಹಾಲುಣಿಸುವ ಮಹಿಳೆಯರಾಗಿರಬೇಕು.
  • ಫಲಾನುಭವಿಗಳು ಕನಿಷ್ಠ 19 ವರ್ಷ ವಯೋಮಿತಿಯನ್ನು ಹೊಂದಿರಬೇಕು.
  • ಅರ್ಜಿದಾರರುಬಿಪಿಎಲ್ ಕಾರ್ಡ್ ಹೊಂದಿರಬೇಕು.
  • ಕುಟುಂಬದ ವಾರ್ಷಿಕ ಆದಾಯವು ₹8 ಲಕ್ಷ ಮೀರಿರಬಾರದು.
  • ಪರಿಶಿಷ್ಟ ಜಾತಿ ಹಾಗೂ ಪಂಗಡಕ್ಕೆ ಸೇರಿದ ಫಲಾನುಭವಿಗಳಿಗೆ ಈ ಒಂದು ಯೋಜನೆಯಡಿಯಲ್ಲಿ ಲಾಭವನ್ನು ಪಡೆದುಕೊಳ್ಳಲು ಮೊದಲ ಆದ್ಯತೆ ನೀಡಲಾಗುತ್ತದೆ.

ಅರ್ಜಿ ಸಲ್ಲಿಸಲು ಅಗತ್ಯವಾದ ದಾಖಲೆಗಳು:

  • ಆಧಾರ್ ಕಾರ್ಡ್
  • ಮಗುವಿನ ಜನನ ಪ್ರಮಾಣಪತ್ರ
  • ಲಸಿಕೆ ಕಾರ್ಡ್
  • ಬಿಪಿಎಲ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣಪತ್ರ
  • ಬ್ಯಾಂಕ್ ಪಾಸ್ ಬುಕ್ ವಿವರ
  • ಹಾಗೂ ಇತರೆ ದಾಖಲೆಗಳು

ಅರ್ಜಿ ಸಲ್ಲಿಸುವ ವಿಧಾನ:

ಫಲಾನುಭವಿಗಳು ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆಯಡಿಯಲ್ಲಿ ಲಾಭವನ್ನು ಪಡೆದುಕೊಳ್ಳಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ.

  • ಅರ್ಜಿದಾರರು PMMVY ಅಧಿಕೃತ ವೆಬ್ಸೈಟ್ https://pmmvy.wcd.gov.in/ ಗೆ ಭೇಟಿ ನೀಡಿ.
  • ಬೆನಿಫಿಶಿಯರಿ ಲಿಂಕ್ ಅನ್ನು ಕ್ಲಿಕ್ ಮಾಡಿ ಮೊಬೈಲ್ ಸಂಖ್ಯೆಯನ್ನು ಬಳಸಿ ಲಾಗಿನ್ ಆಗಿ.
  • ಅಪ್ಲಿಕೇಶನ್ ಫಾರ್ಮ್ ಅನ್ನು ಪಡೆದುಕೊಂಡು ಅಲ್ಲಿ ಕೇಳಲಾದ ಎಲ್ಲಾ ಅಗತ್ಯ ವಿವರಗಳನ್ನು ಭರ್ತಿ ಮಾಡಿ.
  • ಮೇಲೆ ನೀಡಲಾದ ಎಲ್ಲಾ ದಾಖಲೆಗಳನ್ನು ಅಪ್ಲೋಡ್ ಮಾಡಿ ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.

ಕೊನೆಯ ಮಾತು:

ಭಾರತ ಸರ್ಕಾರವು ಗರ್ಭಿಣಿ ಹಾಗೂ ಹಾಲುಣಿಸುವ ಮಹಿಳೆಯರ ಆರೋಗ್ಯ ಸುಧಾರಣೆಗೆ ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆಯನ್ನು ಜಾರಿಗೊಳಿಸಿದ್ದು, ಈ ಯೋಜನೆಯಡಿಯಲ್ಲಿ ಅರ್ಹ ಫಲಾನುಭವಿ ಮಹಿಳೆಯರು ತಮ್ಮ ಎರಡು ಜೀವಂತ ಮಗುವಿಗೆ ಮಾತ್ರ ಈ ಒಂದು ಸಹಾಯಧನವನ್ನು ಪಡೆದುಕೊಳ್ಳಬಹುದಾಗಿದೆ. ನೀವೇನಾದರೂ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಈ ಯೋಜನೆಯ ಲಾಭವನ್ನು ಪಡೆದುಕೊಳ್ಳಲು ಬಯಸಿದರೆ ಮೇಲೆ ನೀಡಿರುವಂತೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ಯೋಜನೆಯ ಲಾಭವನ್ನು ಪಡೆದುಕೊಳ್ಳಿ.

Leave a Comment