ನಮಸ್ಕಾರ ಸ್ನೇಹಿತರೆ, ಪ್ರತಿ ಶೈಕ್ಷಣಿಕ ವರ್ಷಕ್ಕೂ ಕೂಡ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವನ್ನು ಒದಗಿಸುವ ಉದ್ದೇಶದಿಂದ ಕೆಲವೊಂದು ಇಲಾಖೆಯ ಅಡಿಯಲ್ಲಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನವನ್ನು ನೀಡಲಾಗುತ್ತದೆ. ಇದೇ ರೀತಿಯಲ್ಲಿ ಈ ವರ್ಷವು ಕೂಡ ಸರ್ಕಾರವು ವಿದ್ಯಾರ್ಥಿಗಳಿಗೆ ಪ್ರೈಜ್ ಮನಿಯನ್ನು ನೀಡಲು ಮುಂದಾಗಿದ್ದು, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಭರ್ಜರಿ ನೆರವು ನೀಡಲಾಗುತ್ತಿದೆ.
Post Metric Scholarship for Students
ಈ ಯೋಜನೆಯ ಮುಖ್ಯ ಉದ್ದೇಶ ಆರ್ಥಿಕವಾಗಿ ಹಿಂದುಳಿದ ಹಾಗೂ ಬಡ ವರ್ಗಗಳ ವಿದ್ಯಾರ್ಥಿಗಳಿಗೆ ಉತ್ತೇಜನವನ್ನು ನೀಡುವುದು ಹಾಗೂ ಶಿಕ್ಷಣದಲ್ಲಿ ವಂಚಿತರಾಗುವುದನ್ನು ತೆಡೆಗಟ್ಟುವುದಾಗಿದೆ. ಈ ಯೋಜನೆಯಡಿಯಲ್ಲಿ ವಿಶೇಷವಾಗಿ ಪರಿಶಿಷ್ಟ ಜಾತಿಗೆ ಸೇರಿದ ವಿದ್ಯಾರ್ಥಿಗಳಿಗೆ ಭಾರಿ ಮೊತ್ತದ ಪ್ರೋತ್ಸಹಧನವನ್ನು ನೀಡಲಾಗುತ್ತಿದ್ದು, ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವ ಕೋರ್ಸ್ ಗೆ ಅನುಗುಣವಾಗಿ ರೂ. 20,000 ದಿಂದ ರೂ. 35,000 ದ ವರೆಗೆ ಪ್ರೋತ್ಸಹಧನವನ್ನು ನೀಡಲಾಗುತ್ತದೆ.
ಈ ಯೋಜನೆಯ ಲಾಭವನ್ನು ಪಡೆಯಲು ಯಾರು ಅರ್ಹರು? ಪ್ರತಿ ಕೋರ್ಸ್ ಗೆ ಅನುಗುಣವಾಗಿ ವಿದ್ಯಾರ್ಥಿಗಳಿಗೆ ಎಷ್ಟೆಷ್ಟು ಪ್ರೋತ್ಸಹಧನ ಸಿಗಲಿದೆ? ಈ ಪ್ರೈಜ್ ಮನಿ ಪಡೆಯಲು ಹೇಗೆ ಅರ್ಜಿ ಸಲ್ಲಿಸಬೇಕು? ಅರ್ಜಿ ಸಲ್ಲಿಸಲು ಅಗತ್ಯವಾದ ದಾಖಲೆಗಳು ಯಾವುದು? ಈ ಎಲ್ಲ ಮಾಹಿತಿಯನ್ನು ಪ್ರಸ್ತುತ ಲೇಖನದಲ್ಲಿ ತಿಳಿದುಕೊಳ್ಳೋಣ.

ಯೋಜನೆಯ ವಿಮರ್ಶೆ:
| ಇಲಾಖೆ | ಸಮಾಜ ಕಲ್ಯಾಣ ಇಲಾಖೆ |
| ಯೋಜನೆಯ ಹೆಸರು | ಪ್ರೋತ್ಸಾಹಧನ ಯೋಜನೆ |
| ಅರ್ಹ ವಿದ್ಯಾರ್ಥಿಗಳು | ಪೋಸ್ಟ್ ಮೆಟ್ರಿಕ್ ಕೋರ್ಸ್ ನಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿಗೆ ಸೇರಿದ ವಿದ್ಯಾರ್ಥಿಗಳು |
| ಸಿಗುವ ಪ್ರೋತ್ಸಾಹಧನದ ಮೊತ್ತ | ರೂ. 20,000 ದಿಂದ ರೂ. 35,000 ದ ವರೆಗೆ |
| ಅರ್ಜಿ ಸಲ್ಲಿಸುವ ವಿಧಾನ | ಆನ್ಲೈನ್ ಮೂಲಕ |
| ಶೈಕ್ಷಣಿಕ ವರ್ಷ | 2026-27 |
ಯೋಜನೆಯ ಬಗ್ಗೆ:
ಪ್ರೋತ್ಸಾಹಧನ ಯೋಜನೆಯು ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಶೈಕ್ಷಣಿಕ ಪ್ರೋತ್ಸಾಹಧನ ಯೋಜನೆಯಾಗಿದ್ದು, ಪ್ರತಿಭಾವಂತ ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣವನ್ನು ಮುಂದುವರೆಸಲು ಹಣಕಾಸಿನ ನೆರವನ್ನು ನೀಡುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ.
ಸಮಾಜಕಲ್ಯಾಣ ಇಲಾಖೆಯಡಿಯಲ್ಲಿ ಪ್ರೋತ್ಸಹಧನವನ್ನು ಪಡೆಯಲು ಪರಿಶಿಷ್ಟ ಜಾತಿಯ ಅಭ್ಯರ್ಥಿಗಳು ಅರ್ಹರಾಗಿದ್ದು, ಪೋಸ್ಟ್ ಮೆಟ್ರಿಕ್ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳು ಈ ಪ್ರೈಜ್ ಮನಿಯನ್ನು ಪಡೆಯಲು ಅರ್ಹರಾಗಿರುತ್ತಾರೆ.
ಯೋಜನೆಯ ಉದ್ದೇಶ:
- ಪ್ರತಿಯೊಬ್ಬ ಪ್ರತಿಭಾವಂತ ವಿದ್ಯಾರ್ಥಿಗಳು ಹಣಕಾಸಿನ ಸಮಸ್ಯೆಯಿಂದ SSLC ನಂತರ ಶಿಕ್ಷಣವನ್ನು ಅರ್ಧದಲ್ಲೇ ನಿಲ್ಲಿಸಬಾರದು ಎನ್ನುವ ಉದ್ದೇಶದಿಂದ ಎಲ್ಲ ವರ್ಗಗಳ ಅಭ್ಯರ್ಥಿಗಳಿಗೂ ಕೂಡ ಉನ್ನತ ಶಿಕ್ಷಣವನ್ನು ಪಡೆಯಲು ಅವಕಾಶ ಸಿಗಬೇಕು ಎನ್ನುವ ನಿಟ್ಟಿನಲ್ಲಿ ಈ ಯೋಜನೆಯನ್ನು ಜಾರಿಗೆ ತರಲಾಗಿದೆ.
- ಪರಿಶಿಷ್ಟ ಜಾತಿಗೆ ಸೇರಿದ ವಿದ್ಯಾರ್ಥಿಗಳಿಗೆ ವಿಶೇಷವಾಗಿ ಸಹಾಯಧನವನ್ನು ಒದಗಿಸುವ ಮೂಲಕ ಸಮಾಜದಲ್ಲಿನ ಎಲ್ಲ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೂ ಕೂಡ ಸಮಾನ ಶೈಕ್ಷಣಿಕ ಅವಕಾಶವನ್ನು ಕಲ್ಪಿಸುವ ಉದ್ದೇಶವನ್ನು ಹೊಂದಿದೆ.
- ವಿಶೇಷವಾಗಿ ಇಂಜಿನಿಯರಿಂಗ್, ವೆಟರ್ನರಿ, ಅಗ್ರಿಕಲ್ಚರ್ ಸೇರಿದಂತೆ ಇನ್ನಿತರ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿಶೇಷವಾಗಿ ಹೆಚ್ಚಿನ ಪ್ರೋತ್ಸಹಧನವನ್ನು ಒದಗಿಸುವ ಮೂಲಕ ತಾಂತ್ರಿಕ ಶಿಕ್ಷಣವನ್ನು ಪಡೆಯಲು ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವುದು.
ಯೋಜನೆಯ ಪ್ರಯೋಜನ:
- ಪ್ರಥಮ ಪ್ರಯತ್ನದಲ್ಲಿ ಪ್ರತಿ ಸೆಮಿಸ್ಟರ್ ಗಳಲ್ಲಿ ಪಾಸ್ ಆದ ಪರಿಶಿಷ್ಟ ಜಾತಿಗೆ ಸೇರಿದ ವಿದ್ಯಾರ್ಥಿಗಳಿಗೆ ಯೋಜನೆಯಡಿಯಲ್ಲಿ ಪ್ರೋತ್ಸಾಹಧನವನ್ನು ನೀಡುವ ಮೂಲಕ ಅಭ್ಯರ್ಥಿಗಳಲ್ಲಿ ಶಿಕ್ಷಣದಲ್ಲಿ ಹೆಚ್ಚಿನ ಆಸಕ್ತಿ ಮೂಡಿಸುತ್ತದೆ.
- ಪ್ರತಿಯೊಬ್ಬ ವಿದ್ಯಾರ್ಥಿಗಳು ಆಯ್ಕೆ ಮಾಡಿಕೊಂಡಿರುವ ಕೋರ್ಸ್ ಗಳಿಗೆ ಅನುಗುಣವಾಗಿ ರೂ. 20,000 ದಿಂದ ರೂ. 35,000 ದ ವರೆಗೆ ಪ್ರೋತ್ಸಾಹಧನವನ್ನು ನೀಡಲಾಗುತ್ತದೆ.
- ಪ್ರೋತ್ಸಾಹಧನ ಯೋಜನೆಯಡಿಯಲ್ಲಿ ಸಿಗುವ ಹಣವು ನೇರವಾಗಿ ಅರ್ಹ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಜಮಾ ಆಗುವುದರಿಂದ ಯಾವುದೇ ಮಧ್ಯವರ್ತಿಗಳ ಹಾವಳಿ ಇರುವುದಿಲ್ಲ.
- ಸರ್ಕಾರವು ಒದಗಿಸುವ ಈ ಒಂದು ಸಹಾಯಧನದಿಂದ ವಿದ್ಯಾರ್ಥಿಗಳು ಶಾಲಾ ಪ್ರವೇಶ ಶುಲ್ಕ, ಪರೀಕ್ಷಾ ಶುಲ್ಕ, ಅಗತ್ಯ ಪುಸ್ತಕಗಳ ಖರೀದಿ ಸೇರಿದಂತೆ ಇನ್ನಿತರ ಶೈಕ್ಷಣಿಕ ಖರ್ಚುಗಳನ್ನು ನಿಭಾಯಿಸಲು ಸಹಾಯವಾಗುತ್ತದೆ.
ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ಸಿಗುವ ಪ್ರೋತ್ಸಾಹಧನ ವಿವರ:
ಪೋಸ್ಟ್ ಮೆಟ್ರಿಕ್ ಕೋರ್ಸ್ ನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ತಾವು ಆಯ್ಕೆ ಮಾಡಿಕೊಂಡಿರುವ ಕೋರ್ಸ್ ಗೆ ಅನುಗುಣವಾಗಿ ಸಮಾಜ ಕಲ್ಯಾಣ ಇಲಾಖೆಯಡಿಯಲ್ಲಿ ಪ್ರೋತ್ಸಾಹಧನವನ್ನು ನಿಗದಿಪಡಿಸಲಾಗಿದ್ದು, ಅವುಗಳ ವಿವರ ಈ ಕೆಳಕಂಡಂತಿದೆ.
- ದ್ವಿತೀಯ PUC ಅಲ್ಲಿ ಹಾಗೂ 3 ವರ್ಷಗಳ ಪಾಲಿಟೆಕ್ನಿಕ್ ಡಿಪ್ಲೊಮಾದಲ್ಲಿ ವ್ಯಾಸಂಗ ಮಾಡುತ್ತಿಯುವ ವಿದ್ಯಾರ್ಥಿಗಳಿಗೆ: ರೂ. 20,000/-
- ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ: ರೂ. 25,000/-
- ಸ್ನಾತಕೋತ್ತರ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ: ರೂ. 30,000/-
- ವೃತ್ತಿಪರ ಕೋರ್ಸ್ ಗಳಲ್ಲಿ (ಇಂಜಿನಿಯರಿಂಗ್, ಅಗ್ರಿಕಲ್ಚರ್, ವೆಟರ್ನರಿ ಕೋರ್ಸ್) ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ: ರೂ. 35,000/-
ಯೋಜನೆಗೆ ಸಂಬಂಧಿಸಿದ ಅರ್ಹತಾ ಮಾನದಂಡಗಳೇನು?
- ವಿದ್ಯಾರ್ಥಿಗಳು ಕಡ್ಡಾಯವಾಗಿ ಪರಿಶಿಷ್ಟ ಜಾತಿಗೆ ಸೇರಿರಬೇಕು.
- ವಿದ್ಯಾರ್ಥಿಗಳು ಕಡ್ಡಾಯವಾಗಿ ಕರ್ನಾಟಕದ ಕಾಯಂ ನಿವಾಸಿ ಆಗಿರಬೇಕು.
- PUC, ಪದವಿ, ಸ್ನಾತಕೋತ್ತರ ಪದವಿ, ವೃತ್ತಿಪರ ಕೋರ್ಸ್ ಗಳಲ್ಲಿ ಹಾಗೂ ಪಾಲಿಟೆಕ್ನಿಕ್ ಡಿಪ್ಲೊಮಾದಲ್ಲಿ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳು ಕನಿಷ್ಠ 60% ಅಂಕಗಳಿಸಿ ತೇರ್ಗಡೆ ಹೊಂದಿರಬೇಕು.
- ವಿದ್ಯಾರ್ಥಿಗಳು ಮೊದಲ ಪ್ರಯತ್ನದಲ್ಲೇ ಎಲ್ಲ ವಿಷಯಗಳಲ್ಲಿ ತೇರ್ಗಡೆ ಹೊಂದಿರಬೇಕು.
- ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಸೀಡಿಂಗ್ ಆಗಿರಬೇಕು.
ಅರ್ಜಿ ಸಲ್ಲಿಸಲು ಅಗತ್ಯವಾದ ದಾಖಲೆಗಳು:
- ಆಧಾರ್ ಕಾರ್ಡ್
- ಬ್ಯಾಂಕ್ ಪಾಸ್ ಬುಕ್ ಪ್ರತಿ
- ಪಾಸ್ ಪೋರ್ಟ್ ಅಳತೆಯ ಫೋಟೋ
- ಹಿಂದಿನ ವರ್ಷ ವ್ಯಾಸಂಗ ಮಾಡಿದ ವಿಷಯಗಳ ಅಂಕಪಟ್ಟಿ
- ಜಾತಿ ಪ್ರಮಾಣಪತ್ರ
- ನಿವಾಸಿ ಪ್ರಮಾಣಪತ್ರ
- ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆ
- ಸ್ಟಡಿ ಸೆರ್ಟಿಫಿಕೇಟ್
ಅರ್ಜಿ ಸಲ್ಲಿಸುವ ವಿಧಾನ:
ಸಮಾಜಕಲ್ಯಾಣ ಇಲಾಖೆಯಡಿಯಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ವಿದ್ಯಾರ್ಥಿಗಳಿಗೆ ಸಹಾಯಧನ ಸಿಗುವುದರಿಂದ ವಿದ್ಯಾರ್ಥಿಗಳು ಈ ಒಂದು ಪ್ರೋತ್ಸಾಹಧನವನ್ನು ಪಡೆಯಲು ಈ ಕೆಳಗೆ ನೀಡಿರುವ ಹಂತವನ್ನು ಅನುಸರಿಸಬೇಕಾಗುತ್ತದೆ.
- ಅರ್ಹ ವಿದ್ಯಾರ್ಥಿಗಳು ಮೊದಲು ಸಮಾಜ ಕಲ್ಯಾಣ ಇಲಾಖೆಯ ಅಧಿಕೃತ ವೆಬ್ಸೈಟ್ https://swdservices.karnataka.gov.in/swprizemoney/ ಗೆ ಭೇಟಿ ನೀಡಿ.
- ನೀವು ಯಾವ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿದ್ದೀರಿ ಎನ್ನುವುದನ್ನು ಸರಿಯಾಗಿ ಆಯ್ಕೆ ಮಾಡಿಕೊಳ್ಳಿ.
- ನಂತರ ಮುಖಪುಟದಲ್ಲಿ ಕಾಣುವ ಆನ್ಲೈನ್ ಅಪ್ಲಿಕೇಶನ್ ಲಿಂಕ್ ಮೇಲೆ ಕ್ಲಿಕ್ ಮಾಡಿ.
- ನಂತರ ನಿಮ್ಮ ಆಧಾರ್ ಸಂಖ್ಯೆ ಹಾಗೂ ಹೆಸರನ್ನು ನಮೂದಿಸಿ ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆಯನ್ನು ನಮೂದಿಸಿ ನಂತರ ಅಲ್ಲಿ ಕೇಳಲಾದ ಒಟಿಪಿ ಯನ್ನು ನಮೂದಿಸಿ.
- ನಂತರ ನಿಗದಿತ ಅಪ್ಲಿಕೇಶನ್ ಫಾರ್ಮ್ ನಲ್ಲಿ ಕೇಳಲಾದ ತಂದೆ ಹೆಸರು, ತಾಯಿಯ ಹೆಸರು, ಕೋರ್ಸ್ ನೋಂದಣಿ ಸಂಖ್ಯೆ, ಜಾತಿ ಮತ್ತು ಆದಾಯ ಪ್ರಮಾಣಪತ್ರದ ಆರ್.ಡಿ ನಂಬರ್ ಹಾಗೂ ಮೊಬೈಲ್ ನಂಬರ್ ಅನ್ನು ಸರಿಯಾಗಿ ಭರ್ತಿಮಾಡಿ.
- ಪ್ರತಿ ಸೆಮಿಸ್ಟರ್ ನ ಅಂಕಪಟ್ಟಿಯನ್ನು ಹಾಗೂ ಮೇಲೆ ನೀಡಲಾದ ಎಲ್ಲ ಅಗತ್ಯ ದಾಖಲೆಗಳನ್ನು ಸರಿಯಾಗಿ ಅಪ್ಲೋಡ್ ಮಾಡಿ.
- ನಂತರ ಅರ್ಜಿಯನ್ನು ಪರಿಶೀಲಿಸಿ ಭರ್ತಿ ಮಾಡಿದ ವಿವರಗಳು ಸರಿ ಇದೆಯೇ ಎಂದು ಖಚಿತಪಡಿಸಿಕೊಂಡು ಸಬ್ಮಿಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.
ಪ್ರಮುಖ ದಿನಾಂಕಗಳು:
- ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯಡಿಯಲ್ಲಿ ಪ್ರೋತ್ಸಾಹಧನ ಯೋಜನೆಗೆ ಅರ್ಜಿ ಸಲ್ಲಿಸಲು ಜುಲೈ 2026 ರಿಂದ ಡಿಸೆಂಬರ್ 2026 ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಪ್ರಮುಖ ಲಿಂಕುಗಳು:
| ಅಧಿಕೃತ ವೆಬ್ಸೈಟ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಕೊನೆಯ ಮಾತು:
ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯಡಿಯಲ್ಲಿ ಪ್ರಸ್ತುತ 2026-27 ನೇ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಪೋಸ್ಟ್ ಮೆಟ್ರಿಕ್ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅವರು ಆಯ್ಕೆ ಮಾಡಿಕೊಂಡ ಕೋರ್ಸ್ ಗೆ ಅನುಗುಣವಾಗಿ ಪ್ರೋತ್ಸಾಹಧನವನ್ನು ಒದಗಿಸುತ್ತಿದ್ದು, ನಿಮಗೇನಾದರೂ ಉನ್ನತ ಶಿಕ್ಷಣವನ್ನು ಮುಂದುವರೆಸಲು ಆರ್ಥಿಕ ನೆರವಿನ ಅಗತ್ಯವಿದ್ದರೆ ನಿಗದಿಪಡಿಸಿದ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಿ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಿ.