PSB Job: ರೂ. 85920/- ವೇತನ! 1000 ಹುದ್ದೆಗಳ ಭರ್ಜರಿ ನೇಮಕಾತಿ 2026, ಏಪ್ರಿಲ್ 20 ಕೊನೆಯ ದಿನಾಂಕ

ನಮಸ್ಕಾರ ಸ್ನೇಹಿತರೆ, ನೀವೇನಾದರೂ ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿ ಜೀವನವನ್ನು ಪ್ರಾರಂಭಿಸಬೇಕೆಂಬ ಆಸಕ್ತಿಯನ್ನು ಹೊಂದಿದ್ದೀರಾ? ಹಾಗಿದ್ದರೆ ನಿಮಗೊಂದು ಗುಡ್ ನ್ಯೂಸ್! ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ 2026 ನೇ ಸಾಲಿನಲ್ಲಿ ಭರ್ಜರಿ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

PSB Job Recruitment in Kannada

ಪಂಜಾಬ್ ಸಿಂಧ್ ಬ್ಯಾಂಕ್ ಪ್ರಸ್ತುತ ಸಾಲಿನ ನೇಮಕಾತಿಯಲ್ಲಿ ಒಟ್ಟು 1,000 ಲೋಕಲ್ ಬ್ಯಾಂಕಿಂಗ್ ಆಫೀಸರ್ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶವಾಗಿದೆ.

ನೀವೇನಾದರೂ ಲೋಕಲ್ ಬ್ಯಾಂಕಿಂಗ್ ಆಫೀಸರ್ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸಿದರೆ, ಪ್ರಸ್ತುತ ಲೇಖನದಲ್ಲಿ ಈ ಒಂದು ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ, ವಯೋಮಿತಿ, ಹುದ್ದೆಗೆ ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಎಲ್ಲಾ ಮಾಹಿತಿಯನ್ನು ನೀಡಿರುತ್ತೇವೆ. ಅವುಗಳನ್ನು ಸಂಪೂರ್ಣವಾಗಿ ಓದಿಕೊಂಡು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.

ಹುದ್ದೆಯ ಅವಲೋಕನ:

ನೇಮಕಾತಿ ಸಂಸ್ಥೆ ಪಂಜಾಬ್ ಮತ್ತು ಸಿಂಧ್ ಬ್ಯಾಂಕ್
ಹುದ್ದೆಯ ಹೆಸರು ಲೋಕಲ್ ಬ್ಯಾಂಕ್ ಆಫೀಸರ್
ಹುದ್ದೆಯ ಸಂಖ್ಯೆ ಒಟ್ಟು 1000 ಹುದ್ದೆಗಳು
ಉದ್ಯೋಗ ಸ್ಥಳ ಅಖಿಲ ಭಾರತ
ಅರ್ಜಿ ಸಲ್ಲಿಸುವ ವಿಧಾನ ಆನ್ಲೈನ್

ಹುದ್ದೆಯ ಸಂಕ್ಷಿಪ್ತ ಮಾಹಿತಿ:

ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ 2026 ರ ನೇಮಕಾತಿ ಅಧಿಸೂಚನೆಯಲ್ಲಿ ದೇಶದ ವಿವಿಧ ರಾಜ್ಯಗಳಲ್ಲಿ ಒಟ್ಟು 1000 ಲೋಕಲ್ ಬ್ಯಾಂಕ್ ಆಫೀಸರ್ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಯಾವುದೇ ವಿಷಯದಲ್ಲಿ ಪದವಿಯನ್ನು ಪೂರ್ಣಗೊಳಿಸಿರುವ ಕನಿಷ್ಠ 20 ವರ್ಷದಿಂದ ಗರಿಷ್ಟ 30 ವರ್ಷ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಯ ಸಂಕ್ಷಿಪ್ತ ವಿವರ:

ಲೋಕಲ್ ಬ್ಯಾಂಕ್ ಆಫೀಸರ್ ಹುದ್ದೆಗಳನ್ನು ದೇಶದ ವಿವಿಧ ರಾಜ್ಯಗಳಿಗೆ ಹಂಚಿಕೆ ಮಾಡಲಾಗಿದ್ದು, ಅವುಗಳ ವಿವರ ಈ ಕೆಳಕಂಡಂತಿದೆ.

ಹುದ್ದೆಯ ಹೆಸರು ಹುದ್ದೆಯ ಸಂಖ್ಯೆ
ನಾಗಾಲ್ಯಾಂಡ್ 05 ಹುದ್ದೆಗಳು
ಜಾರ್ಕಂಡ್ 10 ಹುದ್ದೆಗಳು
ಕೇರಳ10 ಹುದ್ದೆಗಳು
ಅರುಣಾಚಲ ಪ್ರದೇಶ 15 ಹುದ್ದೆಗಳು
ಹಿಮಾಚಲ ಪ್ರದೇಶ 20 ಹುದ್ದೆಗಳು
ತೆಲಂಗಾಣ 30 ಹುದ್ದೆಗಳು
ಪಶ್ಚಿಮ ಬಂಗಾಳ 30 ಹುದ್ದೆಗಳು
ಅಸ್ಸಾಂ 50 ಹುದ್ದೆಗಳು
ಮಧ್ಯಪ್ರದೇಶ 60 ಹುದ್ದೆಗಳು
ಮಹಾರಾಷ್ಟ 60 ಹುದ್ದೆಗಳು
ಕರ್ನಾಟಕ 60 ಹುದ್ದೆಗಳು
ತಮಿಳುನಾಡು 65 ಹುದ್ದೆಗಳು
ಛತ್ತೀಸ್ ಗಢ 80 ಹುದ್ದೆಗಳು
ಒಡಿಶಾ 80 ಹುದ್ದೆಗಳು
ಪಂಜಾಬ್ 100 ಹುದ್ದೆಗಳು
ಗುಜರಾತ್ 125 ಹುದ್ದೆಗಳು
ಉತ್ತರ ಪ್ರದೇಶ 200 ಹುದ್ದೆಗಳು

ಹುದ್ದೆಗೆ ಸಂಬಂಧಿಸಿದ ಅರ್ಹತಾ ಮಾನದಂಡ:

ಶೈಕ್ಷಣಿಕ ಅರ್ಹತೆ:

  • ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಯಾವುದೇ ವಿಭಾಗದಲ್ಲಿ ಪದವಿಯನ್ನು ಪೂರ್ಣಗೊಳಿಸಿರಬೇಕು.
  • ಅಭ್ಯರ್ಥಿಗಳು ಆನ್ಲೈನ್ ಮೂಲಕ ನೋಂದಣಿ ಮಾಡಿಕೊಳ್ಳುವ ದಿನಾಂಕದಂದು ಪದವಿ ಅಂಕಪಟ್ಟಿ ಹಾಗೂ ಪದವಿ ಪ್ರಮಾಣಪತ್ರವನ್ನು ಹೊಂದಿರಬೇಕು.

ವೃತ್ತಿಪರ ಅರ್ಹತೆ:

  • ಅಭ್ಯರ್ಥಿಗಳು ಕನಿಷ್ಠ 1.5 ವರ್ಷಗಳ ಕಾಲ ಅಂದರೆ 18 ತಿಂಗಳುಗಳ ಕಾಲ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ ಅಥವಾ ಷೆಡ್ಯೂಲ್ಡ್ ಕಮರ್ಷಿಯಲ್ ಬ್ಯಾಂಕ್ಗಳಲ್ಲಿ ಅಧಿಕಾರಿ ಆಗಿ ಕೆಲಸ ಮಾಡಿದ ಅನುಭವವನ್ನು ಹೊಂದಿರಬೇಕು.

ಇತರೆ ಅರ್ಹತೆಗಳು:

  • ಲೋಕಲ್ ಬ್ಯಾಂಕ್ ಆಫೀಸರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ತಾವು ಅರ್ಜಿ ಸಲ್ಲಿಸುವ ರಾಜ್ಯದ ಸ್ಥಳೀಯ ಭಾಷೆಯಲ್ಲಿ ಪ್ರಾವೀಣ್ಯತೆಯನ್ನು ಹೊಂದಿರಬೇಕು.

ವಯೋಮಿತಿ ವಿವರ:

ಲೋಕಲ್ ಬ್ಯಾಂಕ್ ಆಫೀಸರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿಯನ್ನು 1- 03-2026 ಕ್ಕೆ ಅನ್ವಯವಾಗುವಂತೆ ಲೆಕ್ಕ ಹಾಕಲಾಗುತ್ತದೆ. ಹಾಗೆಯೇ ಅಭ್ಯರ್ಥಿಗಳು 02-03-1996 ರ ಒಳಗೆ ಹಾಗೂ 01-03-2006 ರ ನಂತರ ಜನಿಸಿರಬಾರದು.

  • ಅಭ್ಯರ್ಥಿಗಳು ಕನಿಷ್ಠ 20 ವರ್ಷ ಹಾಗೂ ಗರಿಷ್ಟ 30 ವರ್ಷ ವಯೋಮಿತಿಯನ್ನು ಹೊಂದಿರಬೇಕು.

ವಯೋಮಿತಿ ಸಡಿಲಿಕೆ:

ಸರ್ಕಾರದ ನಿಯಮಗಳ ಪ್ರಕಾರ ಕೆಲವು ವರ್ಗದ ಅಭ್ಯರ್ಥಿಗಳಿಗೆ ಮೀಸಲಾತಿ ಅನ್ವಯ ವಯೋಮಿತಿ ಸಡಿಲಿಕೆ ಇರುತ್ತದೆ.

  • ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ: 3 ವರ್ಷ
  • ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭ್ಯರ್ಥಿಗಳಿಗೆ: 5 ವರ್ಷ
  • 1984 ರ ದಂಗೆಯಲ್ಲಿ ಸಂತ್ರಸ್ತರಾದ ಅಭ್ಯರ್ಥಿಗಳಿಗೆ: 5 ವರ್ಷ
  • ವಿಕಲಚೇತನ ಅಭ್ಯರ್ಥಿಗಳಿಗೆ: 10 ವರ್ಷ

ಅರ್ಜಿ ಶುಲ್ಕ:

ಲೋಕಲ್ ಬ್ಯಾಂಕ್ ಆಫೀಸರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವರ್ಗವರು ಅರ್ಜಿ ಶುಲ್ಕವನ್ನು ನಿಗದಿಪಡಿಸಿದ್ದು, ಈ ಎಲ್ಲಾ ಅರ್ಜಿ ಶುಲ್ಕವನ್ನು ಅಭ್ಯರ್ಥಿಗಳು ಆನ್ಲೈನ್ ಮೂಲಕ ಪಾವತಿಸಬೇಕಾಗುತ್ತದೆ.

ವಿವಿಧ ವರ್ಗಗಳು ಅರ್ಜಿ ಶುಲ್ಕ
ಸಾಮಾನ್ಯ, ಇತರೆ ಹಿಂದುಳಿದ ಹಾಗೂ ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳು ರೂ. 850/-
ಪರಿಶಿಷ್ಟ ಜಾತಿ ಮತ್ತು ಪಂಗಡ ಹಾಗೂ ಅಂಗವಿಕಲ ಅಭ್ಯರ್ಥಿಗಳು ರೂ. 100/-

ಅಭ್ಯರ್ಥಿಗಳು ಈ ಅರ್ಜಿ ಶುಲ್ಕದ ಜೊತೆಗೆ ಅನ್ವಯವಾಗುವ ಪಾವತಿ ಗೇಟ್-ವೆ ಹಾಗೂ ತೆರಿಗೆಯನ್ನು ಪಾವತಿಸಬೇಕಾಗುತ್ತದೆ. ಒಮ್ಮೆ ಪಾವತಿಸಿದ ಅರ್ಜಿ ಶುಲ್ಕವನ್ನು ಯಾವುದೇ ಸಂದರ್ಭದಲ್ಲೂ ಹಿಂದಿರುಗಿಸುವುದಿಲ್ಲ.

ವೇತನ ಶ್ರೇಣಿ:

  • ಪಂಜಾಬ್ ಹಾಗೂ ಸಿಂಧ್ ಬ್ಯಾಂಕ್ ಗಳ ನಿಯಮಗಳ ಪ್ರಕಾರ ಲೋಕಲ್ ಬ್ಯಾಂಕ್ ಆಫೀಸರ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳು ಮಾಸಿಕ ರೂ. 48,480 ದಿಂದ ರೂ. 85920 ವೇತನವನ್ನು ಪಡೆದುಕೊಳ್ಳುತ್ತಾರೆ.
  • ತುಟ್ಟಿ ಭತ್ಯೆ, ಮನೆ ಬಾಡಿಗೆಯ ಭತ್ಯೆ, ನಗರ ಪರಿಹಾರ ಭತ್ಯೆಗಳನ್ನು ನಿಯಮಾನುಸಾರ ನೀಡಲಾಗುತ್ತದೆ. ಹಾಗೂ ಇವುಗಳ ಜೊತೆಗೆ ವೈದ್ಯಕೀಯ ಸೌಲಭ್ಯ ಸೇರಿದಂತೆ ಇನ್ನಿತರ ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ.

ಅರ್ಜಿ ಸಲ್ಲಿಸುವ ವಿಧಾನ:

  • ಲೋಕಲ್ ಬ್ಯಾಂಕ್ ಆಫೀಸರ್ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿಯನ್ನು ಹೊಂದಿರುವ ಅಭ್ಯರ್ಥಿಗಳು ಪಂಜಾಬ್ ಹಾಗೂ ಸಿಂಧ್ ಬ್ಯಾಂಕ್ ನ ಅಧಿಕೃತ ವೆಬ್ಸೈಟ್ https://punjabandsind.bank.in/ ಗೆ ಭೇಟಿ ನೀಡಿ.
  • ಮುಖಪುಟದಲ್ಲಿರುವ ನೇಮಕಾತಿ ವಿಭಾಗವನ್ನು ಆಯ್ಕೆ ಮಾಡಿ ನೇಮಕಾತಿ ಅಧಿಕೃತ ಅಧಿಸೂಚನೆ ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ನಿಮ್ಮ ಹೆಸರು, ಇಮೇಲ್ ಐಡಿ, ಹಾಗೂ ಮೊಬೈಲ್ ಸಂಖ್ಯೆಯನ್ನು ನಮೂದಿಸಿ ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸಿ.
  • ನಿಮ್ಮ ವೈಯಕ್ತಿಕ ವಿವರ, ಶೈಕ್ಷಣಿಕ ವಿವರ, ಅನುಭವ ವಿವರ ಹಾಗೂ ನಿಮ್ಮ ಆದ್ಯತೆಯ ರಾಜ್ಯವನ್ನು ಭರ್ತಿ ಮಾಡಿ.
  • ನಂತರ ನಿಮ್ಮ ಸಹಿ, ಪಾಸ್ಪೋರ್ಟ್ ಅಳತೆಯ ಫೋಟೋ, ಶೈಕ್ಷಣಿಕ ಪ್ರಮಾಣಪತ್ರ, ಅನುಭವ ಪ್ರಮಾಣಪತ್ರ, ಅಂಕಪಟ್ಟಿಗಳು ಹಾಗೂ ಇನ್ನಿತರ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.
  • ಭರ್ತಿ ಮಾಡಿರುವ ಹಾಗೂ ಅಪ್ಲೋಡ್ ಮಾಡಿರುವ ಎಲ್ಲಾ ದಾಖಲೆಗಳು ಸರಿ ಇದೆಯೇ ಎಂದು ಖಚಿತ ಪಡಿಸಿಕೊಂಡು ನಿಮ್ಮ ವರ್ಗಕ್ಕೆ ಸಂಬಂಧಿಸಿದ ಅರ್ಜಿ ಶುಲ್ಕವನ್ನು ಪಾವತಿಸಿ ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.

ಆಯ್ಕೆ ಪ್ರಕ್ರಿಯೆ:

  • ಆನ್ಲೈನ್ ಲಿಖಿತ ಪರೀಕ್ಷೆ:

ಈ ಆನ್ಲೈನ್ ಲಿಖಿತ ಪರೀಕ್ಷೆಯು ಒಟ್ಟು 120 ಅಂಕಗಳನ್ನು ಒಳಗೊಂಡಿದ್ದು, ಬ್ಯಾಂಕಿಂಗ್ ಜ್ಞಾನ ವಿಷಯಕ್ಕೆ 40 ಅಂಕಗಳು, ಸಾಮಾನ್ಯ ಜ್ಞಾನ ವಿಷಯಕ್ಕೆ 30 ಅಂಕ, ಇಂಗ್ಲಿಷ್ ಭಾಷೆಗೆ 30 ಅಂಕ ಹಾಗೂ ಕಂಪ್ಯೂಟರ್ ಅಪ್ಲಿಕೇಶನ್ ವಿಷಯಕ್ಕೆ 20 ಅಂಕಗಳನ್ನು ನಿಗದಿಪಡಿಸಲಾಗಿದೆ.

  • ಸಂದರ್ಶನ:

ಲಿಖಿತ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಸಂದರ್ಶನಕ್ಕೆ ಕರೆಯಲಾಗುತ್ತದೆ. ಈ ಒಂದು ಸಂದರ್ಶನವು 50 ಅಂಕಗಳನ್ನು ಒಳಗೊಂಡಿರುತ್ತದೆ.

  • ಮೆರಿಟ್ ಪಟ್ಟಿ:

ಅಭ್ಯರ್ಥಿಗಳು ಆನ್ಲೈನ್ ಲಿಖಿತ ಪರೀಕ್ಷೆಗಳಿಸಿದ ಅಂಕವನ್ನು 70% ಗೆ ಕನ್ವರ್ಟ್ ಮಾಡಿ ಹಾಗೂ ಸಂದರ್ಶನದಲ್ಲಿ ಗಳಿಸಿದ ಅಂಕವನ್ನು 30% ಗೆ ಕನ್ವರ್ಟ್ ಮಾಡಿ. ಈ ಎರಡರಲ್ಲೂ ಶೇಕಡಾವಾರು ಹೆಚ್ಚು ಅಂಕ ಗಳಿಸಿದ ಅಭ್ಯರ್ಥಿಗಳ ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ.

  • ಭಾಷಾ ಪ್ರಾವೀಣ್ಯತೆ ಪರೀಕ್ಷೆ:

ಅಭ್ಯರ್ಥಿಗಳು ಕಡ್ಡಾಯವಾಗಿ ತಮ್ಮ ಸ್ಥಳೀಯ ಭಾಷೆಯ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು

  • ದಾಖಲೆ ಪರಿಶೀಲನೆ:

ಅಂತಿಮವಾಗಿ ಆಯ್ಕೆಯಾದ ಅಭ್ಯರ್ಥಿಗಳ ದಾಖಲೆಗಳನ್ನು ಪರಿಶೀಲನೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು:

ಪ್ರಮುಖ ಈವೆಂಟ್ ದಿನಾಂಕ
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ31-03-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ20-04-2026
ಅರ್ಜಿ ಶುಲ್ಕ ಪಾವತಿಸುವ ಕೊನೆಯ ದಿನಾಂಕ 20-04-2026

ಪ್ರಮುಖ ಲಿಂಕುಗಳು:

ಅಧಿಕೃತ ವೆಬ್‌ಸೈಟ್ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಅಧಿಸೂಚನೆ ಪಿಡಿಎಫ್ಇಲ್ಲಿ ಕ್ಲಿಕ್ ಮಾಡಿ

ಅಂತಿಮ ತೀರ್ಮಾನ:

ಪಂಜಾಬ್ ಹಾಗೂ ಸಿಂಧ್ ಬ್ಯಾಂಕ್ ಒಟ್ಟು 1000 ಲೋಕಲ್ ಬ್ಯಾಂಕ್ ಆಫೀಸರ್ ಹುದ್ದೆಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಈ ಒಂದು ಹುದ್ದೆಗೆ ನೇಮಕಗೊಂಡ ಅಭ್ಯರ್ಥಿಗಳಿಗೆ ಅತ್ಯಾಕರ್ಷಕ ವೇತನಗಳನ್ನು ಹಾಗೂ ಇತರೆ ಭತ್ಯೆಗಳನ್ನು ನೀಡಲಾಗುತ್ತದೆ. ನೀವೇನಾದರೂ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹಾಗೂ ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆಯನ್ನು ಹೊಂದಿದ್ದರೆ ಇಂದೇ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.


ಇತರೆ ಪ್ರಮುಖ ಲಿಂಕುಗಳು:

Leave a Comment