Railway Application: ರೂ. 60,000/- ವೇತನ! ರೈಲ್ವೆ ಇಲಾಖೆಯಲ್ಲಿ ಭರ್ಜರಿ ನೇಮಕಾತಿ 2026 । ಯಾವುದೇ ಪದವಿ ಸಾಕು । ಆಗಸ್ಟ್ 14 ಕೊನೆಯ ದಿನಾಂಕ

ನಮಸ್ಕಾರ ಸ್ನೇಹಿತರೆ, ರೈಲ್ವೆ ನೇಮಕಾತಿ ಮಂಡಳಿಯು ದೇಶದಾದ್ಯಂತ ಖಾಲಿ ಇರುವ 119 ಸೆಕ್ಷನ್ ಕಂಟ್ರೋಲರ್ ಹುದ್ದೆಗಳ ಭರ್ತಿಗೆ ಈಗಾಗಲೇ ಹೊಚ್ಚ ಹೊಸ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ರೈಲ್ವೆ ಇಲಾಖೆಯಲ್ಲಿ ಗೌರವಾನ್ವಿತ ಹಾಗೂ ಜವಾಬ್ದಾರಿಯುತ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದೊಂದು ಉತ್ತಮ ಅವಕಾಶವಾಗಿದೆ.

Railway Recruitment 2026


ರೈಲ್ವೆ ನೇಮಕಾತಿ ಮಂಡಳಿಯಲ್ಲಿ ಖಾಲಿ ಇರುವ ಸೆಕ್ಷನ್ ಕಂಟ್ರೋಲರ್ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಿದ್ದು, ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಜುಲೈ 15, 2026 ರಂದು ಅಧಿಕೃತವಾಗಿ ಆರಂಭವಾಗಲಿದ್ದು, 14 ಆಗಸ್ಟ್ 2026 ರ ವರೆಗೆ ಕಾಲಾವಕಾಶವನ್ನು ನೀಡಲಾಗಿದೆ.

ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪೂರ್ಣಗೊಳಿಸಿರುವ 20 ವರ್ಷದಿಂದ 33 ವರ್ಷ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಜೊತೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 7 ನೇ ವೇತನ ಆಯೋಗದ ಅನ್ವಯ ವೇತನವನ್ನು ನೀಡಲಾಗುತ್ತದೆ. ಈ ಹುದ್ದೆಗೆ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಪ್ರಸ್ತುತ ಲೇಖನದಲ್ಲಿ ನೀಡಲಾದ ಎಲ್ಲ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿಕೊಂಡು ನಂತರ ಅರ್ಜಿ ಸಲ್ಲಿಸಿ.

Railway

ಯೋಜನೆಯ ಕಿರು ವಿಮರ್ಶೆ:

ನೇಮಕಾತಿ ಸಂಸ್ಥೆ ರೈಲ್ವೆ ನೇಮಕಾತಿ ಮಂಡಳಿ
ಹುದ್ದೆಗಳ ಹೆಸರು ಸೆಕ್ಷನ್ ಕಂಟ್ರೋಲರ್
ಹುದ್ದೆಗಳ ಸಂಖ್ಯೆ ಒಟ್ಟು 119 ಹುದ್ದೆಗಳು
ಉದ್ಯೋಗ ಸ್ಥಳ ಅಖಿಲ ಭಾರತ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 14-08-2026
ಅರ್ಜಿ ಸಲ್ಲಿಸುವ ವಿಧಾನ ಆನ್ಲೈನ್ ಮೂಲಕ

ಹುದ್ದೆಯ ಸಂಕ್ಷಿಪ್ತ ಮಾಹಿತಿ:

ರೈಲ್ವೆ ನೇಮಕಾತಿ ಮಂಡಳಿಯು ಪ್ರಸ್ತುತ ಸಾಲಿನಲ್ಲಿ ಒಟ್ಟು 119 ಸೆಕ್ಷನ್ ಕಂಟ್ರೋಲರ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಭಾಗದಲ್ಲಿ ಪದವಿ ಪೂರ್ಣಗೊಳಿಸಿದ 20 ವರ್ಷದಿಂದ 33 ವರ್ಷ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಅಭ್ಯರ್ಥಿಗಳ ವಯೋಮಿತಿಯನ್ನು 1-07-2026 ಕ್ಕೆ ಅನ್ವಯವಾಗುವಂತೆ ಲೆಕ್ಕ ಹಾಕಲಾಗುತ್ತದೆ.

ಹುದ್ದೆಯ ವಿವರ:

ರೈಲ್ವೆ ನೇಮಕಾತಿ ಮಂಡಳಿಯು ಪ್ರಸ್ತುತ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ವಿವಿಧ ವಲಯಗಳಿಗೆ ಅನುಗುಣವಾಗಿ ಹಂಚಿಕೆ ಮಾಡಲಾಗಿದೆ. ಈ ಹುದ್ದೆಗಳ ವಿವರ ಈ ಕೆಳಕಂಡಂತಿದೆ.

ವಿವಿಧ ರೈಲ್ವೆ ವಲಯಗಳು ಹುದ್ದೆಗಳ ಸಂಖ್ಯೆ
ಉತ್ತರ ಮಧ್ಯ ರೈಲ್ವೆ 2 ಹುದ್ದೆಗಳು
ಆಗ್ನೇಯ ಮಧ್ಯ ರೈಲ್ವೆ 2 ಹುದ್ದೆಗಳು
ಈಶಾನ್ಯ ರೈಲ್ವೆ 5 ಹುದ್ದೆಗಳು
ದಕ್ಷಿಣ ಮಧ್ಯ ರೈಲ್ವೆ 5 ಹುದ್ದೆಗಳು
ಪಶ್ಚಿಮ ಮಧ್ಯ ರೈಲ್ವೆ 5 ಹುದ್ದೆಗಳು
ಪೂರ್ವ ಕರಾವಳಿ ರೈಲ್ವೆ 6 ಹುದ್ದೆಗಳು
ಈಶಾನ್ಯ ಗಡಿನಾಡು ರೈಲ್ವೆ 6 ಹುದ್ದೆಗಳು
ಪೂರ್ವ ರೈಲ್ವೆ 7 ಹುದ್ದೆಗಳು
ಕೇಂದ್ರ ರೈಲ್ವೆ 8 ಹುದ್ದೆಗಳು
ಉತ್ತರ ರೈಲ್ವೆ 8 ಹುದ್ದೆಗಳು
ನೈಋತ್ಯ ರೈಲ್ವೆ 8 ಹುದ್ದೆಗಳು
ದಕ್ಷಿಣ ರೈಲ್ವೆ 13 ಹುದ್ದೆಗಳು
ಪಶ್ಚಿಮ ರೈಲ್ವೆ 13 ಹುದ್ದೆಗಳು
ಆಗ್ನೇಯ ರೈಲ್ವೆ 14 ಹುದ್ದೆಗಳು
ಪೂರ್ವ ಮಧ್ಯ ರೈಲ್ವೆ 17 ಹುದ್ದೆಗಳು

ಶೈಕ್ಷಣಿಕ ಅರ್ಹತೆ:

  • ಸೆಕ್ಷನ್ ಕಂಟ್ರೋಲರ್:

ಸೆಕ್ಷನ್ ಕಂಟ್ರೋಲರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿಎ, ಬಿಕಾಂ, ಬಿಎಸ್ಸಿ ಸೇರಿದಂತೆ ಯಾವುದೇ ವಿಭಾಗದಲ್ಲಿ ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ವಯೋಮಿತಿ ವಿವರ:

ರೈಲ್ವೆ ನೇಮಕಾತಿ ಮಂಡಳಿಯಲ್ಲಿ ಖಾಲಿ ಇರುವ ಸೆಕ್ಷನ್ ಕಂಟ್ರೋಲರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿಯನ್ನು 01-07-2026 ಕ್ಕೆ ಅನ್ವಯವಾಗುವಂತೆ ಲೆಕ್ಕ ಹಾಕಲಾಗುತ್ತದೆ. ಇದರನ್ವಯ ಅಭ್ಯರ್ಥಿಗಳು ಕನಿಷ್ಠ 20 ವರ್ಷದಿಂದ ಗರಿಷ್ಟ 33 ವರ್ಷ ವಯೋಮಿತಿಯನ್ನು ಹೊಂದಿರಬೇಕು.

ವಯೋಮಿತಿ ಸಡಿಲಿಕೆ ವಿವರ:

ಸರ್ಕಾರದ ನಿಯಮಗಳ ಪ್ರಕಾರ ಮೀಸಲಾತಿ ವರ್ಗಗಳ ಅಭ್ಯರ್ಥಿಗಳಿಗೆ ಈ ಕೆಳಗೆ ತಿಳಿಸಿರುವಂತೆ ವಯೋಮಿತಿ ಸಡಿಲಿಕೆ ಇರುತ್ತದೆ.

  • ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ: 3 ವರ್ಷ
  • ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ: 5 ವರ್ಷ
  • PwBD ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ನಿಯಮಾನುಸಾರ ವಯೋಮಿತಿ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ:

ರೈಲ್ವೆ ನೇಮಕಾತಿ ಮಂಡಳಿಯ ಸೆಕ್ಷನ್ ಕಂಟ್ರೋಲರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ನೇಮಕಾತಿ ಅಧಿಸೂಚನೆಯಲ್ಲಿ ಯಾವುದೇ ಅರ್ಜಿ ಶುಲ್ಕದ ಬಗ್ಗೆ ಮಾಹಿತಿಯನ್ನು ನೀಡಿಲ್ಲ.

ವೇತನ ಶ್ರೇಣಿ:

ಸೆಕ್ಷನ್ ಕಂಟ್ರೋಲರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 7 ನೇ ವೇತನ ಆಯೋಗದ ಅನ್ವಯ ಪೇ ಲೆವೆಲ್ 6 ರ ಅಡಿಯಲ್ಲಿ ಮಾಸಿಕ ಅತ್ಯಾಕರ್ಷಕ ವೇತನವನ್ನು ನೀಡಲಾಗುತ್ತದೆ.

ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ಮೂಲ ವೇತನ ರೂ. 35,400/- ನೀಡಲಾಗುತ್ತದೆ. ಇವುಗಳ ಜೊತೆಗೆ ತುಟ್ಟಿ ಭತ್ಯೆ, ಮನೆ ಬಾಡಿಗೆಯ ಭತ್ಯೆ, ಸಾರಿಗೆ ಭತ್ಯೆ ಹಾಗೂ ನೈಟ್ ಡ್ಯೂಟಿ ಅಲೋವೆನ್ಸ್ ನೀಡಲಾಗುತ್ತದೆ. ಈ ಎಲ್ಲ ಭತ್ಯೆಗಳು ಸೇರಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 60,000/- ವೇತನ ದೊರೆಯುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:

  • ಅಭ್ಯರ್ಥಿಗಳು RRB ಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ
  • ನಂತರ ಸೆಕ್ಷನ್ ಕಂಟ್ರೋಲರ್ ನೇಮಕಾತಿ 2026 ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ಮೂಲ ವಿವರಗಳನ್ನು ಬಳಸಿ ರಿಜಿಸ್ಟ್ರೇಷನ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ.
  • ನಂತರ ಯೂಸರ್ ಐಡಿ ಹಾಗೂ ಪಾಸ್ವರ್ಡ್ ಬಳಸಿ ಲಾಗಿನ್ ಆಗಿ.
  • ನಂತರ ಅಪ್ಲಿಕೇಶನ್ ಫಾರ್ಮ್ ನಲ್ಲಿ ಕೇಳಲಾದ ಎಲ್ಲ ವೈಯಕ್ತಿಕ ವಿವರ, ಶೈಕ್ಷಣಿಕ ವಿವರ ಹಾಗೂ ಇನ್ನಿತರ ಅಗತ್ಯ ವಿವರಗಳನ್ನು ಭರ್ತಿ ಮಾಡಿ.
  • ನಂತರ ಪಾಸ್ ಪೋರ್ಟ್ ಅಳತೆಯ ಫೋಟೋ, ಅಭ್ಯರ್ಥಿಗಳ ಸಹಿ, ಆಧಾರ್ ಕಾರ್ಡ್, ಶೈಕ್ಷಣಿಕ ಪ್ರಮಾಣಪತ್ರ, ಶೈಕ್ಷಣಿಕ ಅಂಕಪಟ್ಟಿ ಹಾಗೂ ಇನ್ನಿತರ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.
  • ಭರ್ತಿ ಮಾಡಿರುವ ಎಲ್ಲ ವಿವರಗಳು ಸರಿ ಇದೆಯೇ ಎಂದು ಖಚಿತಪಡಿಸಿಕೊಂಡು ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.

ಆಯ್ಕೆ ಪ್ರಕ್ರಿಯೆ:

  • ಕಂಪ್ಯೂಟರ್ ಆಧಾರಿತ ಪರೀಕ್ಷೆ
  • ಸಾಮರ್ಥ್ಯ ಪರೀಕ್ಷೆ
  • ದಾಖಲೆ ಪರಿಶೀಲನೆ
  • ವೈದ್ಯಕೀಯ ಪರೀಕ್ಷೆ

ಪ್ರಮುಖ ದಿನಾಂಕಗಳು:

ಪ್ರಮುಖ ಈವೆಂಟ್ ದಿನಾಂಕ
ನೇಮಕಾತಿ ಅಧಿಸೂಚನೆ ಬಿಡುಗಡೆಗೊಂಡ ದಿನಾಂಕ 27-06-2026
ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ 15-07-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 14-08-2026

ಪ್ರಮುಖ ಲಿಂಕುಗಳು:

ಅಧಿಕೃತ ವೆಬ್‌ಸೈಟ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ

ಅಂತಿಮ ತೀರ್ಮಾನ:

ರೈಲ್ವೆ ನೇಮಕಾತಿ ಮಂಡಳಿಯು ಪ್ರಸ್ತುತ ಸಾಲಿನಲ್ಲಿ ಒಟ್ಟು 119 ಸೆಕ್ಷನ್ ಕಂಟ್ರೋಲರ್ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ನೀವೇನಾದರೂ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಮಾಡುವ ಕನಸು ಕಾಣುತ್ತಿದ್ದರೆ, ಹುದ್ದೆಗೆ ಸಂಬಂಧಿಸಿದ ಅರ್ಹತೆಗಳನ್ನು ಖಚಿತಪಡಿಸಿಕೊಂಡು ನಿಗದಿತ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಿ.


ಪ್ರಮುಖ ಲಿಂಕುಗಳು:

Whatsapp Group Link Click Here
Telegram Group Link Click Here
Instagram Link Click Here

ಇತರೆ ಪ್ರಮುಖ ಲಿಂಕುಗಳು

Leave a Comment