Scholarship: ರೂ.1,00,000 ವಿದ್ಯಾರ್ಥಿವೇತನ! ಗ್ರಾಮೀಣ ವಿದ್ಯಾರ್ಥಿಗಳಿಗೆ ಸರ್ಕಾರದ ವಿಶೇಷ ಯೋಜನೆ, ಇಂದೇ ಅಪ್ಲೈ ಮಾಡಿ

ನಮಸ್ಕಾರ ಸ್ನೇಹಿತರೆ, ನೀವು ಗ್ರಾಮೀಣ ಪ್ರದೇಶದಲ್ಲಿ ವಾಸವಿದ್ದು, ನಿಮ್ಮ ಮಕ್ಕಳಿಗೆ ಉನ್ನತ ಶಿಕ್ಷಣವನ್ನು ಕೊಡಿಸಬೇಕೆಂದಿದ್ದಿರಾ? ಇದಕ್ಕೆ ಹಣಕಾಸಿನ ನೆರವು ಅಗತ್ಯವಿದೆಯೇ? ನಿಮ್ಮ ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸಲು ಆರ್ಥಿಕ ನೆರವಿನ ನಿರೀಕ್ಷೆಯಲ್ಲಿದ್ದೀರಾ? ಹಾಗಿದ್ದರೆ ನಿಮಗೊಂದು ಗುಡ್ ನ್ಯೂಸ್!

RDPR Scholarship in Kannada

ಕರ್ನಾಟಕ ಸರ್ಕಾರವು ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ಗ್ರಾಮ ಪಂಚಾಯಿತಿ ವಿದ್ಯಾರ್ಥಿವೇತನ ಎನ್ನುವ ಒಂದೊಳ್ಳೆಯ ಯೋಜನೆಯನ್ನು ಜಾರಿಗೆ ತಂದಿದ್ದು, ವಿದ್ಯಾರ್ಥಿಗಳು ಈ ಒಂದು ಯೋಜನೆಯಡಿಯಲ್ಲಿ ವಿದ್ಯಾರ್ಥಿವೇತನವನ್ನು ಪಡೆದುಕೊಳ್ಳಲು ಗ್ರಾಮೀಣ ಪ್ರದೇಶದಲ್ಲಿ ವಾಸವಿದ್ದು, ಪ್ರಸ್ತುತ 10 ನೇ ತರಗತಿ, 12 ನೇ ತರಗತಿ, ಡಿಪ್ಲೊಮಾ ಅಥವಾ ಯಾವುದೇ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರಬೇಕು.

ಗ್ರಾಮೀಣ ಭಾಗದ ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ತಮ್ಮ ಉನ್ನತ ಶಿಕ್ಷಣವನ್ನು ಹಣಕಾಸಿನ ತೊಂದರೆಗಳಿಲ್ಲದೆ ಯಶಸ್ವಿಯಾಗಿ ಪೂರ್ಣಗೊಳಿಸಲು ಈ ಒಂದು ವಿದ್ಯಾರ್ಥಿವೇತನವು ಬಹಳಷ್ಟು ನೆರವಾಗಲಿದ್ದು, ಈ ಒಂದು ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ವಿದ್ಯಾರ್ಥಿಗಳು ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ? ಏನೆಲ್ಲಾ ಅರ್ಹತಾ ಮಾನದಂಡಗಳನ್ನು ಹೊಂದಿರಬೇಕು? ಅರ್ಜಿ ಸಲ್ಲಿಸಲು ಅಗತ್ಯವಾದ ದಾಖಲೆಗಳು ಯಾವುವು? ಎಂಬೆಲ್ಲಾ ಮಾಹಿತಿಯನ್ನು ಈ ಒಂದು ಲೇಖನದ ಮೂಲಕ ಪಡೆದುಕೊಳ್ಳಬಹುದಾಗಿದೆ.

RDPR Scholarship

ಇದೇ ರೀತಿಯ ಇನ್ನಷ್ಟು ಯೋಜನೆಗಳು, ಹುದ್ದೆಗಳು ಹಾಗೂ ಇನ್ನಿತರ ಹೊಸ ಹೊಸ ಅಪ್ಡೇಟ್ ಗಳಿಗಾಗಿ ನಮ್ಮ ವೆಬ್ಸೈಟ್ ಪಬ್ಲಿಕ್.ಸಲಹೆ.ಇನ್ ಗೆ ಭೇಟಿ ನೀಡಿ.

ಯೋಜನೆಯ ಕಿರು ವಿಮರ್ಶೆ:

ಇಲಾಖೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕರ್ನಾಟಕ ಸರ್ಕಾರ
ಯೋಜನೆಯ ಹೆಸರು ಗ್ರಾಮ ಪಂಚಾಯಿತಿ ವಿದ್ಯಾರ್ಥಿವೇತನ ಯೋಜನೆ
ಅರ್ಹ ಫಲಾನುಭವಿಗಳು ಗ್ರಾಮೀಣ ಭಾಗದ ವಿದ್ಯಾರ್ಥಿಗಳು
ಅರ್ಹ ಕೋರ್ಸ್ ಗಳು 10th, PUC, ಡಿಪ್ಲೊಮಾ ಅಥವಾ ಯಾವುದೇ ಪದವಿ
ವಿದ್ಯಾರ್ಥಿವೇತನದ ಮೊತ್ತ ₹10,000
ಅರ್ಜಿ ಸಲ್ಲಿಸುವ ವಿಧಾನ ಆನ್ಲೈನ್

ಏನಿದು ಗ್ರಾಮ ಪಂಚಾಯಿತಿ ವಿದ್ಯಾರ್ಥಿವೇತನ ಯೋಜನೆ?

ಗ್ರಾಮ ಪಂಚಾಯಿತಿ ವಿದ್ಯಾರ್ಥಿವೇತನ ಯೋಜನೆಯು ಕರ್ನಾಟಕ ಸರ್ಕಾರವು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಡಿಯಲ್ಲಿ ಜಾರಿಗೊಳಿಸಿದ ಮಹತ್ವಾಕಾಂಕ್ಷೆಯ ಶೈಕ್ಷಣಿಕ ಯೋಜನೆಯಾಗಿದೆ. ಗ್ರಾಮೀಣ ಭಾಗದ ಬಡ ಮತ್ತು ಪ್ರತಿಭಾವಂತ ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ ಈ ಒಂದು ಯೋಜನೆಯನ್ನು ಜಾರಿಗೊಳಿಸಿದ್ದು, ಈ ಒಂದು ಯೋಜನೆಯಡಿಯಲ್ಲಿ ಅರ್ಹ ವಿದ್ಯಾರ್ಥಿಗಳು ₹10,000 ವಿದ್ಯಾರ್ಥಿವೇತನವನ್ನು ಪಡೆದುಕೊಳ್ಳಬಹುದಾಗಿದೆ.

ಯೋಜನೆಯ ಉದ್ದೇಶ:

  • ಗ್ರಾಮೀಣ ಭಾಗದ ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳು ಹಣಕಾಸಿನ ಸಮಸ್ಯೆಯಿಂದಾಗಿ ಶಿಕ್ಷಣವನ್ನು ಅರ್ಧದಲ್ಲಿ ನಿಲ್ಲಿಸದೆ ಶಿಕ್ಷಣವನ್ನು ಮುಂದುವರೆಸಲು ಗ್ರಾಮ ಪಂಚಾಯಿತಿ ವಿದ್ಯಾರ್ಥಿವೇತನದಡಿಯಲ್ಲಿ ಸಹಾಯಧನವನ್ನು ಒದಗಿಸುವುದು.
  • ಗ್ರಾಮ ಪಂಚಾಯಿತಿ ವಿದ್ಯಾರ್ಥಿವೇತನ ಯೋಜನೆಯಡಿಯಲ್ಲಿ ಸಿಗುವ ಸಹಾಯಧನವನ್ನು ತಮ್ಮ ಶೈಕ್ಷಣಿಕ ವೆಚ್ಚಗಳಾದ, ಕಾಲೇಜು ಫೀಸ್, ಎಕ್ಷಮ ಫೀಸ್, ಪುಸ್ತಕಗಳು ಹಾಗೂ ಇನ್ನಿತರ ವೆಚ್ಚಗಳನ್ನು ಸ್ವತಃ ವಿದ್ಯಾರ್ಥಿಗಳೇ ಭರಿಸುವ ಮೂಲಕ ಶೈಕ್ಷಣಿಕ ವೆಚ್ಚಕ್ಕಾಗಿ ಕುಟುಂಬಸ್ಥರ ಮೇಲೆ ಅವಲಂಬಿತರಾಗುವುದನ್ನು ತಡೆಗಟ್ಟುವುದು
  • ನಗರ ಪ್ರದೇಶದಲ್ಲಿ ವಿದ್ಯಾರ್ಥಿಗಳು ಪಡೆದುಕೊಳ್ಳುವ ಶೈಕ್ಷಣಿಕ ಸೌಲಭ್ಯಗಳು ಹಾಗೂ ಪ್ರೋತ್ಸಾಹಗಳು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೂ ಸಿಗುವಂತೆ ಮಾಡುವುದು.
  • ಗ್ರಾಮೀಣ ಭಾಗದ ಹೆಚ್ಚು ಅಂಕವನ್ನು ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ, ಅವರು ಉನ್ನತ ಶಿಕ್ಷಣವನ್ನು ಪಡೆದುಕೊಳ್ಳುವಂತೆ ಪ್ರೇರೇಪಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.

ಯೋಜನೆಯ ಪ್ರಯೋಜನಗಳು:

  • ವಿದ್ಯಾರ್ಥಿಗಳು ಗ್ರಾಮ ಪಂಚಾಯಿತಿ ವಿದ್ಯಾರ್ಥಿವೇತನ ಯೋಜನೆಯಡಿಯಲ್ಲಿ ₹10,000 ವಿದ್ಯಾರ್ಥಿವೇತನವನ್ನು ಪಡೆದುಕೊಳ್ಳುವ ಮೂಲಕ ತಮ್ಮ ಶೈಕ್ಷಣಿಕ ವೆಚ್ಚಗಳನ್ನು ಸ್ವತಃ ತಾವೇ ಭರಿಸಿ ಸ್ವಾವಲಂಬಿಯಾಗಿ ತಮ್ಮ ಕನಸ್ಸಿನ ಉನ್ನತ ಶಿಕ್ಷಣವನ್ನು ಪಡೆದುಕೊಳ್ಳಬಹುದಾಗಿದೆ.
  • ವಿದ್ಯಾರ್ಥಿಗಳಿಗೆ ಸಿಗುವ ಸಹಾಯಧನವು ನೇರ ನಗದು ವರ್ಗಾವಣೆ ಮೂಲಕ ನೇರವಾಗಿ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಜಮಾ ಆಗುವುದರಿಂದ ಯಾವುದೇ ಮಧ್ಯವರ್ತಿಗಳ ಹಾವಳಿರಿರುವುದಿಲ್ಲ.
  • ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಪ್ರತಿಭಾವಂತರಾಗಿದ್ದರೂ ಕೂಡ ಹಣಕಾಸಿನ ಸಮಸ್ಯೆಯಿಂದಾಗಿ ತಮ್ಮ ಶಿಕ್ಷಣವನ್ನು ಅರ್ಧದಲ್ಲೇ ಮೊಟಕುಗೊಳಿಸುತ್ತಾರೆ. ಅಂತಹ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಈ ಒಂದು ವಿದ್ಯಾರ್ಥಿವೇತನವು ಅವರ ಆರ್ಥಿಕ ಸಮಸ್ಯೆಗಳನ್ನು ನೀಗಿಸಿ ಶೈಕ್ಷಣಿಕ ಪಯಣವನ್ನು ಮುಂದುವರೆಸಲು ನೆರವಾಗುತ್ತದೆ.

ವಿದ್ಯಾರ್ಥಿಗಳು ಹೊಂದಿರಬೇಕಾದ ಅರ್ಹತಾ ಮಾನದಂಡಗಳು:

  • ಅರ್ಜಿದಾರರು ಭಾರತೀಯ ನಾಗರೀಕತ್ವವನ್ನು ಹೊಂದಿರಬೇಕು.
  • ವಿದ್ಯಾರ್ಥಿಗಳು ಕಡ್ಡಾಯವಾಗಿ ಕರ್ನಾಟಕದ ಖಾಯಂ ನಿವಾಸಿ ಆಗಿದ್ದು, ಗ್ರಾಮೀಣ ಪ್ರದೇಶದಲ್ಲಿ ವಾಸಿಸುತ್ತಿರಬೇಕು.
  • ಕುಟುಂಬದ ವಾರ್ಷಿಕ ಆದಾಯವು ₹2.5 ಲಕ್ಷಕ್ಕಿಂತ ಕಡಿಮೆ ಇರಬೇಕು.
  • ವಿದ್ಯಾರ್ಥಿಗಳು ಪಸ್ತುತ ಶೈಕ್ಷಣಿಕ ವರ್ಷದಲ್ಲಿ 10th, PUC, ಡಿಪ್ಲೊಮಾ ಅಥವಾ ಯಾವುದೇ ಪದವಿ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರಬೇಕು.
  • ವಿದ್ಯಾರ್ಥಿಗಳು ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಕನಿಷ್ಠ 60% ಅಂಕವನ್ನು ಗಳಿಸಿ ಉತ್ತೀರ್ಣರಾಗಿರಬೇಕು.

ಅರ್ಜಿ ಸಲ್ಲಿಸಲು ಅಗತ್ಯವಾದ ದಾಖಲೆಗಳು:

  • ವಿದ್ಯಾರ್ಥಿಗಳ ಆಧಾರ್ ಕಾರ್ಡ್
  • ರೇಷನ್ ಕಾರ್ಡ್
  • ಚಾಲ್ತಿಯಲ್ಲಿರುವ ಆದಾಯ ಮತ್ತು ಜಾತಿ ಪ್ರಮಾಣಪತ್ರ
  • ಪಾಸ್ಪೋರ್ಟ್ ಅಳತೆಯ ಫೋಟೋ
  • ಹಿಂದಿನ ಶೈಕ್ಷಣಿಕ ವರ್ಷದ ಅಂಕಪಟ್ಟಿ
  • ದಾಖಲಾತಿ ಪ್ರಮಾಣಪತ್ರ
  • ವಾಸಸ್ಥಳ ದೃಢೀಕರಣ ಪತ್ರ
  • ಬ್ಯಾಂಕ್ ಪಾಸ್ ಬುಕ್ ವಿವರ
  • ಇತರೆ ದಾಖಲೆಗಳು

ಅರ್ಜಿ ಸಲ್ಲಿಸುವ ವಿಧಾನ:

ವಿದ್ಯಾರ್ಥಿಗಳು ಗ್ರಾಮ ಪಂಚಾಯಿತಿ ವಿದ್ಯಾರ್ಥಿವೇತನ ಯೋಜನೆಗೆ ಆನ್ಲೈನ್ ಮೂಲಕ ಅರ್ಜಿಯನ್ನು ಈ ಕೆಳಗೆ ನೀಡಿರುವ ವಿಧಾನಗಳ ಮೂಲಕ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ.

  • ಅರ್ಹ ವಿದ್ಯಾರ್ಥಿಗಳು ಕರ್ನಾಟಕ ಸರ್ಕಾರದ ಗ್ರಾಮೀಣಾಭಿವೃದ್ಧಿ ಹಾಗೂ ಗ್ರಾಮ ಪಂಚಾಯತ್ ರಾಜ್ ಇಲಾಖೆಯ ಅಧಿಕೃತ ವೆಬ್ಸೈಟ್ https://rdpr.karnataka.gov.in/ ಗೆ ಭೇಟಿ ನೀಡಿ.
  • ಮುಖಪುಟದಲ್ಲಿರುವ ಸ್ಟೂಡೆಂಟ್ ಸ್ಕಾಲರ್ಷಿಪ್ ಅಪ್ಲಿಕೇಶನ್ ಲಿಂಕ್ ಅನ್ನು ಕ್ಲಿಕ್ ಮಾಡಿ.
  • ನಂತರ ಅಲ್ಲಿ ಕೇಳಲಾದ ಎಲ್ಲಾ ವೈಯಕ್ತಿಕ ವಿವರ, ಶೈಕ್ಷಣಿಕ ವಿವರ ಹಾಗೂ ಇನ್ನಿತರ ಎಲ್ಲಾ ವಿವರಗಳನ್ನು ಭರ್ತಿ ಮಾಡಿ.
  • ಮೇಲೆ ನೀಡಲಾದ ಎಲ್ಲಾ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ. ಸ್ವೀಕೃತಿ ರಶೀದಿಯನ್ನು ಪ್ರಿಂಟ್ ತಗೆದುಕೊಳ್ಳಿ.

ಪ್ರಮುಖ ಸೂಚನೆ:

  • ನೀವು ಈ ಒಂದು ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವಾಗ ಎಲ್ಲ ವಿವರಗಳನ್ನು ಹಾಗೂ ದಾಖಲೆಗಳನ್ನು ಸರಿಯಾಗಿ ಅಪ್ಲೋಡ್ ಮಾಡಿ ತಪ್ಪು ಹಾಗೂ ಸುಳ್ಳು ದಾಖಲೆಗಳನ್ನು ನೀಡಿದರೆ ನಿಮ್ಮ ಅರ್ಜಿಯನ್ನು ತಿರಸ್ಕರಿಸಲಾಗುತ್ತದೆ.
  • ವಿದ್ಯಾರ್ಥಿಗಳು ಒಂದು ಯೋಜನೆಯ ಲಾಭವನ್ನು ಪಡೆದುಕೊಳ್ಳಲು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ.

ಅಂತಿಮ ಮಾತು:

ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಶಿಕ್ಷಣವನ್ನು ಅರ್ಧದಲ್ಲೇ ನಿಲ್ಲಿಸದೆ ಶಿಕ್ಷಣವನ್ನು ಮುಂದುವರೆಸಿ ನಗರ ಪ್ರದೇಶದ ವಿದ್ಯಾರ್ಥಿಗಳಂತೆ ಸಮಾನ ವಿದ್ಯಾಭ್ಯಾಸವನ್ನು ಪಡೆದುಕೊಳ್ಳಲು ಕರ್ನಾಟಕ ಸರ್ಕಾರವು ಗ್ರಾಮ ಪಂಚಾಯಿತಿ ವಿದ್ಯಾರ್ಥಿವೇತನ ಯೋಜನೆಯನ್ನು ಜಾರಿಗೊಳಿಸಿದ್ದು, ನೀವೇನಾದರೂ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹತೆಯನ್ನು ಹೊಂದಿದ್ದರೆ ಇಂದೇ ಅರ್ಜಿ ಸಲ್ಲಿಸಿ ನಿಮ್ಮ ಕನಸ್ಸಿನ ಉನ್ನತ ಶಿಕ್ಷಣವನ್ನು ಪಡೆದುಕೊಂಡು ಹಾಗಾಯೇ ಒಂದೊಳ್ಳೆಯ ಉದ್ಯೋಗವನ್ನು ಪಡೆದುಕೊಂಡು ಸಮಾಜದಲ್ಲಿ ಗೌರವಾನ್ವಿತ ವಕ್ತಿಯಾಗಿ ಬೆಳೆಯಿರಿ.


ಇತರೆ ಪ್ರಮುಖ ಲಿಂಕುಗಳು:

Leave a Comment