Revenue Department: ರೂ. 55,000/- ವೇತನ! ಕಂದಾಯ ಇಲಾಖೆಯಲ್ಲಿ ನೇಮಕಾತಿ ಪ್ರಕ್ರಿಯೆ ಆರಂಭ

ಸಾವಿರಾರು ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್! ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಕ್ಷಮ ಪ್ರಾಧಿಕಾರಿ ಹಾಗೂ ವಿಶೇಷಾಧಿಕಾರಿಗಳ ಕಾರ್ಯಾಲಯವು ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

Revenue Department Recruitment in Kannada

ಕಂದಾಯ ಇಲಾಖೆಯು ಐಟಿ ಪರ್ಸನಲ್ (ಫೋರೆನ್ಸಿಕ್ ಡೇಟಾ ಸೈಂಟಿಸ್ಟ್), ಲೀಗಲ್ ಟೈಪಿಸ್ಟ್, ಡೆಪ್ಯೂಟಿ ತಹಶೀಲ್ದಾರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು, ಉತ್ತಮ ವೇತನವನ್ನು ಒಳಗೊಂಡ ಸರ್ಕಾರಿ ಉದ್ಯೋಗದಲ್ಲಿ ತಮ್ಮ ವೃತ್ತಿ ಜೀವನವನ್ನು ಪ್ರಾರಂಭಿಸಬೇಕೆಂದಿರುವವರಿಗೆ ಇದೊಂದು ಸುವರ್ಣಾವಕಾಶವಾಗಿದೆ.

ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾದ ಅಭ್ಯರ್ಥಿಗಳು ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ, ವಯೋಮಿತಿ ವಿವರ, ಅರ್ಜಿ ಶುಲ್ಕ, ವೇತನ ಶ್ರೇಣಿ ಸೇರಿದಂತೆ ಇನ್ನಿತರ ಮಾಹಿತಿಯನ್ನು ಈ ಒಂದು ಲೇಖನದ ಮೂಲಕ ತಿಳಿದುಕೊಳ್ಳಬಹುದಾಗಿದೆ. ಇದೇ ರೀತಿಯ ಇನ್ನಷ್ಟು ಹುದ್ದೆಗಳ ಕುರಿತು ಮಾಹಿತಿಗಾಗಿ ನಮ್ಮ ವೆಬ್ಸೈಟ್ ಪಬ್ಲಿಕ್.ಸಲಹೆ.ಇನ್ ಗೆ ಭೇಟಿ ನೀಡಿ.

ಹುದ್ದೆಯ ಕಿರು ವಿಮರ್ಶೆ:

ನೇಮಕಾತಿ ಸಂಸ್ಥೆಯ ಹೆಸರು ವಿಶೇಷಾಧಿಕಾರಿ ಹಾಗೂ ಸಕ್ಷಮ ಪ್ರಾಧಿಕಾರಿಗಳ ಕಾರ್ಯಾಲಯ, ಕಂದಾಯ ಇಲಾಖೆ, ಬೆಂಗಳೂರು
ಹುದ್ದೆಯ ಹೆಸರು ಐಟಿ ಪರ್ಸನಲ್ (ಫೋರೆನ್ಸಿಕ್ ಡೇಟಾ ಸೈಂಟಿಸ್ಟ್), ಲೀಗಲ್ ಟೈಪಿಸ್ಟ್, ಡೆಪ್ಯೂಟಿ ತಹಶೀಲ್ದಾರ್
ಹುದ್ದೆಯ ಸಂಖ್ಯೆ ಒಟ್ಟು 3 ಹುದ್ದೆಗಳು
ಉದ್ಯೋಗ ಸ್ಥಳ ಬೆಂಗಳೂರು – ಕರ್ನಾಟಕ

ಹುದ್ದೆಯ ಸಂಕ್ಷಿಪ್ತ ವಿವರ:

ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 3 ಹುದ್ದೆಗಳನ್ನು ವಿಭಿನ್ನ ವಿಭಾಗಗಳ ಅಡಿಯಲ್ಲಿ ಭರ್ತಿಮಾಡಲಾಗುತ್ತಾರೆ. ಆ ಮೂರು ವಿಭಾಗಗಳು ಯಾವುವು ಎನ್ನುವುದನ್ನು ಈ ಕೆಳಗೆ ತಿಳಿದುಕೊಳ್ಳೋಣ.

ಹುದ್ದೆಯ ಹೆಸರು ಹುದ್ದೆಯ ಸಂಖ್ಯೆ
ಲೀಗಲ್ ಟೈಪಿಸ್ಟ್ 1 ಹುದ್ದೆ
ಐಟಿ ಪರ್ಸನಲ್ – ಫೋರೆನ್ಸಿಕ್ ಡೇಟಾ ಸೈಂಟಿಸ್ಟ್ 1 ಹುದ್ದೆ
ಶಿರಸ್ತೇದಾರ್ / ಡೆಪ್ಯೂಟಿ ತಹಶೀಲ್ದಾರ್ 1 ಹುದ್ದೆ

ಶೈಕ್ಷಣಿಕ ಅರ್ಹತೆ:

ಲೀಗಲ್ ಟೈಪಿಸ್ಟ್:

  • ಲೀಗಲ್ ಟೈಪಿಸ್ಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಲ್.ಎಲ್.ಬಿ ಪದವಿಯನ್ನು ಹೊಂದಿರಬೇಕು.
  • ಕನ್ನಡ ಮತ್ತು ಇಂಗ್ಲಿಷ್ ಭಾಷೆಯಲ್ಲಿ ನಿಮಿಷಕ್ಕೆ 40 ಪದಗಳನ್ನು ವೇಗವಾಗಿ ಟೈಪಿಂಗ್ ಮಾಡುವ ಸಾಮರ್ಥ್ಯವನ್ನು ಹೊಂದಿರಬೇಕು.
  • ಕರ್ನಾಟಕದ ಬಾರ್ ಕೌಂಸಿಲ್ ನಲ್ಲಿ ನೋಂದಣಿ ಆಗಿರಬೇಕು.
  • ಕನ್ನಡ ಭಾಷೆಯನ್ನು ಸಂವಹನ ನಡೆಸುವ ಕೌಶಲ್ಯ ಹೊಂದಿರಬೇಕು.

ಫೋರೆನ್ಸಿಕ್ ಡೇಟಾ ಸೈಂಟಿಸ್ಟ್

  • ಫೋರೆನ್ಸಿಕ್ ಡೇಟಾ ಸೈಂಟಿಸ್ಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಐಎಸ್, ಸಿಎಸ್ಇ ಹಾಗೂ ಬಿಇ ವಿಭಾಗದಲ್ಲಿ ಪದವಿಯನ್ನು ಪೂರ್ಣಗೊಳಿಸಿರಬೇಕು.
  • ಜೊತೆಗೆ ಸೈಬರ್ ಫೋರೆನ್ಸಿಕ್ ಹಾಗೂ ಸೈಬರ್ ಲಾ ನಲ್ಲಿ ಪ್ರಮಾಣಪತ್ರವನ್ನು ಹೊಂದಿರಬೇಕು.
  • ಡಾಟಾ ಸೈನ್ಟಿಸ್ಟ್ ಹಾಗೂ ಫೋರೆನ್ಸಿಕ್ ತಜ್ಞರಾಗಿ ಒಂದು ವರ್ಷದ ವೃತ್ತಿ ಅನುಭವವನ್ನು ಹೊಂದಿರಬೇಕು.

ಶಿರಸ್ತೇದಾರ್ / ಡೆಪ್ಯೂಟಿ ತಹಶೀಲ್ದಾರ್:

  • ಕಂದಾಯ ಇಲಾಖೆಯಲ್ಲಿ ವೃತ್ತಿ ಜೀವನವನ್ನು ನಡೆಸಿ ನಿವೃತ್ತರಾಗಿ ಅಭ್ಯರ್ಥಿಗಳು ಮಾತ್ರ ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ವಯೋಮಿತಿ ವಿವರ:

  • ಡೆಪ್ಯೂಟಿ ತಹಶೀಲ್ದಾರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಟ 65 ವರ್ಷ ವಯೋಮಿತಿಯನ್ನು ಹೊಂದಿರಬೇಕು.
  • ಇತರೆ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಸರ್ಕಾರದ ನಿಯಮಗಳ ಪ್ರಕಾರ ವಯೋಮತಿಯನ್ನು ನಿಗದಿಪಡಿಸಲಾಗುತ್ತದೆ.

ವಯೋಮಿತಿ ಸಡಿಲಿಕೆ ವಿವರ:

ಡೆಪ್ಯೂಟಿ ತಹಶೀಲ್ದಾರ್, ಫೋರೆನ್ಸಿಕ್ ಡೇಟಾ ಸೈಂಟಿಸ್ಟ್ ಹಾಗೂ ಲೀಗಲ್ ಟೈಪಿಸ್ಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಮೀಸಲಾತಿ ವರ್ಗಗಳ ಅಭ್ಯರ್ಥಿಗಳಿಗೆ ಸರ್ಕಾರದ ಕೆಲವು ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ:

ಕಂದಾಯ ಇಲಾಖೆಯ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವ ಅಗತ್ಯ ಇರುವುದಿಲ್ಲ. ನೇರವಾಗಿ ಸಂಬಂಧಪಟ್ಟ ಕಚೇರಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.

ವೇತನ ಶ್ರೇಣಿ:

  • ಲೀಗಲ್ ಟೈಪಿಸ್ಟ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳು ಮಾಸಿಕ ರೂ. 22000 ದಿಂದ ರೂ. 24000 ವೇತನವನ್ನು ಪಡೆದುಕೊಳ್ಳಬಹುದಾಗಿದೆ.
  • ಫೋರೆನ್ಸಿಕ್ ಡೇಟಾ ಸೈಂಟಿಸ್ಟ್ ಹುದ್ದೆಗೆ ಆಯ್ಕೆಯ ಅಭ್ಯರ್ಥಿಗಳಿಗೆ ಮಾಸಿಕ ರೂ. 50,000 ವೇತನವನ್ನು ನೀಡಲಾಗುತ್ತದೆ. ಅಭ್ಯರ್ಥಿಗಳು ಹೊಂದಿರುವ ಶೈಕ್ಷಣಿಕ ಅರ್ಹತೆ ಹಾಗೂ ಅನುಭವಗಳ ಆಧಾರದ ಮೇಲೆ ವೇತನದಲ್ಲಿ ಸ್ವಲ್ಪ ವ್ಯತ್ಯಾಸ ಇರಬಹುದು.
  • ಶಿರಸ್ತೇದಾರ್ / ಡೆಪ್ಯೂಟಿ ತಹಶೀಲ್ದಾರ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 55,000 ವೇತನವನ್ನು ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:

  • ಅಭ್ಯರ್ಥಿಗಳು ಮೊದಲು ತಮ್ಮ ರೆಸೂಮ್, ಶೈಕ್ಷಣಿಕ ದಾಖಲೆಗಳು, ವೈಯಕ್ತಿಕ ದಾಖಲೆಗಳು, ಅನುಭವ ಪ್ರಮಾಣಪತ್ರವನ್ನು ಸಿದ್ದಪಡಿಸಿಕೊಳ್ಳಿ.
  • ನಂತರ ಐಡಿ ಪ್ರೂಫ್, ಹಾಗೂ ಎಲ್ಲಾ ದಾಖಲೆಗಳನ್ನು ಈ ಕೆಳಗೆ ನೀಡಲಾದ ವಿಳಾಸಕ್ಕೆ ಭೇಟಿ ನೀಡಿ ಖುದ್ದಾಗಿ ಸಲ್ಲಿಸಿ.
” ಬೆಂಗಳೂರು ಪೋಡಿಯಂ ಬ್ಲಾಕ್, 3 ನೇ ಮಹಡಿ, ವಿಶ್ವೇಶ್ವರಯ್ಯ ಗೋಪುರದಲ್ಲಿರುವ ವಿಶೇಷಾಧಿಕಾರಿ ಹಾಗೂ ಸಕ್ಷಮ ಪ್ರಾಧಿಕಾರಿಗಳ ಕಾರ್ಯಾಲಯ.”
  • ಅಥವಾ ನೀವೇನಾದರೂ ಈ ಮೇಲ್ ಮೂಲಕ ಅರ್ಜಿ ಸಲ್ಲಿಸಲು ಬಯಸಿದರೆ [email protected] ಗೆ ಎಲ್ಲಾ ದಾಖಲೆಗಳನ್ನು ದಿನಾಂಕ 04-04-2026 ರೊಳಗೆ ಕಳುಹಿಸಿ.

ಆಯ್ಕೆ ಪ್ರಕ್ರಿಯೆ:

  • ಶಾರ್ಟ್ ಲಿಸ್ಟ್:

ಶೈಕ್ಷಣಿಕ ಅರ್ಹತೆ ಹಾಗೂ ಕೆಲಸದ ಅನುಭವಗಳ ಆಧಾರದ ಮೇಲೆ ಅಭ್ಯರ್ಥಿಗಳ ಶಾರ್ಟ್ ಲಿಸ್ಟ್ ತಯಾರಿಸಲಾಗುತ್ತದೆ.

  • ವೈಯಕ್ತಿಕ ಸಂದರ್ಶನ:

ಉತ್ತಮ ಶೈಕ್ಷಣಿಕ ಅರ್ಹತೆ ಹಾಗೂ ವೃತ್ತಿ ಅನುಭವವನ್ನು ಹೊಂದಿ ಶಾರ್ಟ್ ಲಿಸ್ಟ್ ನಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ವೈಯಕ್ತಿಕ ಸಂದರ್ಶನಕ್ಕೆ ಕರೆಯಲಾಗುತ್ತದೆ.

  • ಕೌಶಲ್ಯ ಪರೀಕ್ಷೆ:

ಲೀಗಲ್ ಟೈಪಿಸ್ಟ್ ಹಾಗೂ ಫೋರೆನ್ಸಿಕ್ ಡೇಟಾ ಸೈನ್ಟಿಸ್ಟ್ ಹುದ್ದೆಗೆ ಕೌಶಲ್ಯ ಪರೀಕ್ಷೆ ಹಾಗೂ ಪ್ರಾಯೋಗಿಕ ಪರೀಕ್ಷೆಯನ್ನು ನಡೆಸುವ ಸಾಧ್ಯತೆ ಇರುತ್ತದೆ.

  • ದಾಖಲಾತಿ ಪರಿಶೀಲನೆ:

ಅಂತಿಮವಾಗಿ ಆಯ್ಕೆಯಾದ ಅಭ್ಯರ್ಥಿಗಳ ದಾಖಲೆಗಳನ್ನು ಪರಿಶೀಲನೆ ನಡೆಸಲಾಗುತ್ತದೆ.

ಹುದ್ದೆಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು:

ಪ್ರಮುಖ ವಿವರಗಳು ಪ್ರಮುಖ ಲಿಂಕುಗಳು
ಅಧಿಕೃತ ಅಧಿಸೂಚನೆ ಪ್ರಕಟಗೊಂಡ ದಿನಾಂಕ 23-03-2026
ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ 23-03-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 04-04-2026

ಹುದ್ದೆಗೆ ಸಂಬಂಧಿಸಿದ ಪ್ರಮುಖ ಲಿಂಕುಗಳು:

ಪ್ರಮುಖ ವಿವರಗಳು ಪ್ರಮುಖ ಲಿಂಕುಗಳು
ಅಧಿಕೃತ ಅಧಿಸೂಚನೆ ಲಿಂಕ್ ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್ಸೈಟ್ ಲಿಂಕ್ ಇಲ್ಲಿ ಕ್ಲಿಕ್ ಮಾಡಿ

ಅಂತಿಮ ತೀರ್ಮಾನ:

ಕಂದಾಯ ಇಲಾಖೆಯು ಲೀಗಲ್ ಟೈಪಿಸ್ಟ್, ಫೋರೆನ್ಸಿಕ್ ಡೇಟಾ ಸೈಂಟಿಸ್ಟ್ ಹಾಗೂ ಡೆಪ್ಯೂಟಿ ತಹಶೀಲ್ದಾರ್ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ ಹಾಗೂ ವೃತ್ತಿ ಅನುಭವವನ್ನು ಹೊಂದಿರುವ ಅಭ್ಯರ್ಥಿಗಳು ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ನೀವೇನಾದರೂ ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸಿದರೆ ನಿಗದಿಪಡಿಸಿದ ಕೊನೆಯ ದಿನಾಂಕ 04-04-2026 ರೊಳಗೆ ಮೇಲೆ ನೀಡಲಾದ ವಿಳಾಸಕ್ಕೆ ಖುದ್ದಾಗಿ ಭೇಟಿ ನೀಡಿ ಅಥವಾ ಇಮೇಲ್ ಮೂಲಕ ಅರ್ಜಿ ಸಲ್ಲಿಸಿ.


ಇತರೆ ಪ್ರಮುಖ ಲಿಂಕುಗಳು:

Leave a Comment