RRB ALP: ರೈಲ್ವೆ ಇಲಾಖೆಯಲ್ಲಿ 11,127 ಹುದ್ದೆಗಳ ಭರ್ಜರಿ ನೇಮಕಾತಿ! 10th + ITI ಪಾಸ್ ಆಗಿರುವ ಅಭ್ಯರ್ಥಿಗಳಿಗೆ ಭಾರೀ ಉದ್ಯೋಗಾವಕಾಶ

ನಮಸ್ಕಾರ ಸ್ನೇಹಿತರೆ, ಉದ್ಯೋಗವನ್ನು ಪ್ರಾರಂಭಿಸಿದರೆ ರೈಲ್ವೆ ಇಲಾಖೆಯಲ್ಲೇ ಪ್ರಾರಂಭಿಸಬೇಕೆಂದಿರುವ ಸಾವಿರಾರು ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್! ಭಾರತೀಯ ರೈಲ್ವೆ ಇಲಾಖೆಯು 2026 ನೇ ಸಾಲಿನ ನೇಮಕಾತಿಯಲ್ಲಿ ವಿವಿಧ ವಲಯಗಳಲ್ಲಿ ಖಾಲಿ ಇರುವ ಸಾವಿರಾರು ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

RRB ALP Recruitment in Kannada

ಭಾರತೀಯ ರೈಲ್ವೆ ಇಲಾಖೆಯ ರೈಲ್ವೆ ನೇಮಕಾತಿ ಮಂಡಳಿಯು ಅಸಿಸ್ಟೆಂಟ್ ಲೋಕೋ ಪೈಲೆಟ್ ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದ್ದು, ಈ ಒಂದು ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ತಾಂತ್ರಿಕ ಶಿಕ್ಷಣವನ್ನು ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿಯನ್ನು ಹೊಂದಿರುವ ಅಭ್ಯರ್ಥಿಗಳು ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ, ವಯೋಮಿತಿ, ವೇತನ ಶ್ರೇಣಿ ಹಾಗೂ ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸುವುದು ಹೇಗೆ? ಎನ್ನುವ ಮಾಹಿತಿಯನ್ನು ಈ ಒಂದು ಲೇಖನದ ಮೂಲಕ ಪಡೆದುಕೊಳ್ಳಬಹುದಾಗಿದೆ. ಹಾಗೆಯೇ ಇದೇ ರೀತಿಯ ಇನ್ನಷ್ಟು ಹುದ್ದೆಗಳ ಕುರಿತು ಮಾಹಿತಿ ಬೇಕಿದ್ದರೆ ನಮ್ಮ ವೆಬ್ಸೈಟ್ ಪಬ್ಲಿಕ್.ಸಲಹೆ.ಇನ್ ಗೆ ಭೇಟಿ ನೀಡಿ.

RRB ALP

ಹುದ್ದೆಯ ಕಿರು ಚಿತ್ರಣ:

ನೇಮಕಾತಿ ಸಂಸ್ಥೆ ರೈಲ್ವೆ ನೇಮಕಾತಿ ಮಂಡಳಿ
ಹುದ್ದೆಯ ಹೆಸರು ಅಸಿಸ್ಟೆಂಟ್ ಲೋಕೋ ಪೈಲೆಟ್
ಹುದ್ದೆಗಳ ಸಂಖ್ಯೆ 11,127 ಹುದ್ದೆಗಳು
ಉದ್ಯೋಗ ಸ್ಥಳ ಅಖಿಲ ಭಾರತ
ಅರ್ಜಿ ಸಲ್ಲಿಸುವ ವಿಧಾನ ಆನ್ಲೈನ್

ಹುದ್ದೆಗೆ ಕಿರು ಪರಿಚಯ:

ರೈಲ್ವೆ ನೇಮಕಾತಿ ಮಂಡಳಿಯು ಒಟ್ಟು 11,127 ಅಸಿಸ್ಟೆಂಟ್ ಲೋಕೋ ಪೈಲೆಟ್ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, SSLC ಜೊತೆಗೆ ಐಟಿಐ ಹಾಗೂ ಡಿಪ್ಲೊಮಾ ಪೂರ್ಣಗೊಳಿಸಿದ 18 ರಿಂದ 30 ವರ್ಷ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಒಂದು ಹುದ್ದೆಯನ್ನು ವಿವಿಧ ವಲಯಗಳಿಗೆ ಅನುಗುಣವಾಗಿ ಹಂಚಿಕೆ ಮಾಡಲಾಗಿದೆ.

ಹುದ್ದೆ ಸಂಕ್ಷಿಪ್ತ ವಿವರ:

ರೇಲ್ವೆ ನೇಮಕಾತಿ ಮಂಡಳಿಯು ಒಟ್ಟು 11,127 ಅಸಿಸ್ಟೆಂಟ್ ಲೋಕೋ ಪೈಲೆಟ್ ಹುದ್ದೆಗಳನ್ನು ವಲಯವಾರು ಹಚಿಕೆ ಮಾಡಲಾಗಿದೆ. ಯಾವ ವಲಯಗಳಲ್ಲಿ ಎಷ್ಟೆಷ್ಟು ಹುದ್ದೆಗಳು ಖಾಲಿ ಇದೆ ಎನ್ನುವುದನ್ನು ಈ ಕೆಳಗೆ ತಿಳಿಸಲಾಗಿದೆ.

ವಿವಿಧ ವಲಯಗಳು ಹುದ್ದೆಗಳ ಸಂಖ್ಯೆ
ಚಿತ್ತರಂಜನ್ ಲೋಕೋಮೋಟಿವ್ ವರ್ಕ್ಸ್ 6 ಹುದ್ದೆಗಳು
ಪೂರ್ವ ರೈಲ್ವೆ 608 ಹುದ್ದೆಗಳು
ಪೂರ್ವ ಮಧ್ಯ ರೈಲ್ವೆ 700 ಹುದ್ದೆಗಳು
ಪೂರ್ವ ಕರಾವಳಿ ರೈಲ್ವೆ 1625 ಹುದ್ದೆಗಳು
ಪಶ್ಚಿಮ ರೈಲ್ವೆ 214 ಹುದ್ದೆಗಳು
ಪಶ್ಚಿಮ ಮಧ್ಯ ರೈಲ್ವೆ 541 ಹುದ್ದೆಗಳು
ಉತ್ತರ ರೈಲ್ವೆ 740 ಹುದ್ದೆಗಳು
ಉತ್ತರ ಮಧ್ಯ ರೈಲ್ವೆ 457 ಹುದ್ದೆಗಳು
ಉತ್ತರ ಪಶ್ಚಿಮ ರೈಲ್ವೆ 600 ಹುದ್ದೆಗಳು
ದಕ್ಷಿಣ ರೈಲ್ವೆ 250 ಹುದ್ದೆಗಳು
ದಕ್ಷಿಣ ಪೂರ್ವ ರೈಲ್ವೆ 1531 ಹುದ್ದೆಗಳು
ದಕ್ಷಿಣ ಪೂರ್ವ ಮಧ್ಯ ರೈಲ್ವೆ 200 ಹುದ್ದೆಗಳು
ದಕ್ಷಿಣ ಪಶ್ಚಿಮ ರೈಲ್ವೆ 200 ಹುದ್ದೆಗಳು
ಈಶಾನ್ಯ ರೈಲ್ವೆ 105 ಹುದ್ದೆಗಳು
ಈಶಾನ್ಯ ಗಡಿ ರೈಲ್ವೆ 1275 ಹುದ್ದೆಗಳು
ಮಧ್ಯ ರೈಲ್ವೆ 1400 ಹುದ್ದೆಗಳು

ಶೈಕ್ಷಣಿಕ ಅರ್ಹತೆ:

  • ಅಸಿಸ್ಟೆಂಟ್ ಲೋಕೋ ಪೈಲೆಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೆಟ್ರಿಕ್ಯುಲೇಷನ್ ಅಥವಾ SSLC ಜೊತೆಗೆ ಮಾನ್ಯತೆ ಪಡೆದ ಸಂಸ್ಥೆಯಲ್ಲಿ ಸಂಬಂಧಪಟ್ಟ ಟ್ರೇಡ್ ಗಳಲ್ಲಿ ಐಟಿಐ ಅಥವಾ ಡಿಪ್ಲೋಮಾ ಅಥವಾ ಎಂಜಿನೀರಿಂಗ್ ಪದವಿಯನ್ನು ಹೊಂದಿರಬೇಕು.
  • ಇವುಗಳ ಜೊತೆಗೆ ಅಭ್ಯರ್ಥಿಗಳು ಅಸಿಸ್ಟೆಂಟ್ ಲೋಕೋ ಪೈಲೆಟ್ ಹುದ್ದೆಗೆ ಸಂಬಂಧಿಸಿದ ವೈದ್ಯಕೀಯ ಮಾನದಂಡಗಳನ್ನು ಪೂರೈಸಿರಬೇಕಾಗುತ್ತದೆ.

ವಯೋಮಿತಿ ವಿವರ:

ಅಸಿಸ್ಟೆಂಟ್ ಲೋಕೋ ಪೈಲೆಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 01-07-2026 ರ ಅನ್ವಯ ಕನಿಷ್ಠ 18 ವರ್ಷ ಹಾಗೂ ಗರಿಷ್ಟ 30 ವರ್ಷಗಳನ್ನೊಳಗೊಂಡಿರಬೇಕು.

ವಯೋಮಿತಿ ಸಡಿಲಿಕೆ:

ಸರ್ಕಾರದ ಕೆಲವು ನಿಯಮಗಳ ಪ್ರಕಾರ, ಕೆಲವು ವರ್ಗಗಳ ಅಭ್ಯರ್ಥಿಗಳಿಗೆ ಮೀಸಲಾತಿ ಅನ್ವಯ ವಯೋಮಿತಿ ಸಡಿಲಿಕೆ ಇರುತ್ತದೆ.

  • ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭ್ಯರ್ಥಿಗಳಿಗೆ: 5 ವರ್ಷ
  • ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ: 3 ವರ್ಷ

ವೇತನ ಶ್ರೇಣಿ:

ಅಸಿಸ್ಟೆಂಟ್ ಲೋಕೋ ಪೈಲೆಟ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 7 ನೇ ವೇತನ ಆಯೋಗದ ಅನ್ವಯ ವೇತನವನ್ನು ನಿಗದಿಪಡಿಸಲಾಗುತ್ತದೆ. ಈ ಇಂದು ಹುದ್ದೆಯು ವೇತನ ಶ್ರೇಣಿ 2 ರ ಅಡಿಯಲ್ಲಿ ಬರುವುದರಿಂದ ಅಭ್ಯರ್ಥಿಗಳಿಗೆ ಪ್ರಾರಂಭಿಕ ಹಂತದಲ್ಲಿ ಮಾಸಿಕ ₹19,900 ವೇತನವನ್ನು ನಿಗದಿಪಡಿಸಲಾಗುತ್ತದೆ. ಅಭ್ಯರ್ಥಿಗಳು ಇವುಗಳ ಜೊತೆಗೆ ತುಟ್ಟಿ ಭತ್ಯೆ, ಮನೆ ಬಾಡಿಗೆಯ ಭತ್ಯೆ ಸೇರಿದಂತೆ ಇನ್ನಿತರ ಭತ್ಯೆಗಳನ್ನು ಪಡೆದುಕೊಳ್ಳಲು ಅರ್ಹರಾಗಿರುತ್ತಾರೆ.

ಅರ್ಜಿ ಶುಲ್ಕ:

ಅಸಿಸ್ಟೆಂಟ್ ಲೋಕೋ ಪೈಲೆಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವರ್ಗವರು ಅರ್ಜಿ ಶುಲ್ಕವನ್ನು ನಿಗದಿಪಸಲಾಗಿರುತ್ತದೆ. ಈ ವಿಷಯದ ಕುರಿತು ಹೆಚ್ಚಿನ ಮಾಹಿತಿಗಾಗಿ ನೇಮಕಾತಿ ಅಧಿಸೂಚನೆಯನ್ನು ಓದಿಕೊಳ್ಳಿ.

ಅರ್ಜಿ ಸಲ್ಲಿಸುವ ವಿಧಾನ:

ಅಭ್ಯರ್ಥಿಗಳು ಅಸಿಸ್ಟೆಂಟ್ ಲೋಕೋ ಪೈಲೆಟ್ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

  • ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ರೈಲ್ವೆ ನೇಮಕಾತಿ ಮಂಡಳಿಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ.
  • ನಿಮ್ಮ ಪ್ರಾಥಮಿಕ ವಿವರಗಳನ್ನು ಭರ್ತಿ ಮಾಡಿ ರಿಜಿಸ್ಟರ್ ಮಾಡಿಕೊಳ್ಳಿ.
  • ನಂತರ ಆನ್ಲೈನ್ ಅರ್ಜಿ ಫಾರ್ಮ್ ನಲ್ಲಿ ನಿಮ್ಮ ಎಲ್ಲಾ ವೈಯಕ್ತಿಕ ವಿವರ, ಶೈಕ್ಷಣಿಕ ವಿವರ, ವಯೋಮಿತಿ ವಿವರವನ್ನು ಭರ್ತಿ ಮಾಡಿ.
  • ನೀವು ಆಧಾರ್ ಕಾರ್ಡ್ ಬಳಸಿಕೊಂಡು ವಿವರಗಳನ್ನು ಪರಿಶೀಲನೆ ನಡೆಸುವುದು ಕಡ್ಡಾಯವಾಗಿದೆ.
  • ಜೊತೆಗೆ ನಿಮ್ಮ ಆಧಾರ್ ಕಾರ್ಡ್ ನಲ್ಲಿರುವ ಹೆಸರು ಮತ್ತು ಜನ್ಮ ದಿನಾಂಕವು ನಿಮ್ಮ SSLC ಅಂಕಪಟ್ಟಿಗೆ ಹೊಂದಾಣಿಕೆ ಆಗುತ್ತದೆಯೇ ಎಂದು ಖಚಿತಪಡಿಸಿಕೊಳ್ಳಿ.
  • ನಂತರ ನಿಮ್ಮ ವರ್ಗಕ್ಕೆ ಅನುಗುಣವಾದ ಅರ್ಜಿ ಶುಲ್ಕವನ್ನು ಪಾವತಿಸಿ.
  • ಫೋಟೋ, ಸಹಿ ಹಾಗೂ ಶೈಕ್ಷಣಿಕ ದಾಖಲೆಗಳು ಸೇರಿದಂತೆ ಎಲ್ಲಾ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ. ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿ ಪ್ರತಿಯನ್ನು ಪ್ರಿಂಟ್ ತಗೆದುಕೊಳ್ಳಿ.

ಆಯ್ಕೆ ಪ್ರಕ್ರಿಯೆ:

  • ಅಭ್ಯರ್ಥಿಗಳಿಗೆ ವಿವಿಧ ಹಂತಗಳಲ್ಲಿ ಕಂಪ್ಯೂಟರ್ ಆಧಾರಿತ ಪರೀಕ್ಷೆಯನ್ನು ನಡೆಸಲಾಗುತ್ತದೆ. ಮೊದಲ ಹಂತದಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಮುಂದಿನ ಹಂತಕ್ಕೆ ಆಯ್ಕೆಯಾಗುತ್ತಾರೆ.
  • ನಂತರ ದಾಖಲಾತಿ ಪರಿಶೀಲನೆ ಹಾಗೂ ವೈದ್ಯಕೀಯ ಪರೀಕ್ಷೆಗಳನ್ನು ನಡೆಸಲಾಗುತ್ತದೆ.

ಹುದ್ದೆಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು:

ಪ್ರಮುಖ ವಿವರಗಳು ಪ್ರಮುಖ ಲಿಂಕುಗಳು
ಅಧಿಕೃತ ಅಧಿಸೂಚನೆ ಪ್ರಕಟಗೊಂಡ ದಿನಾಂಕ 21-03-2026
ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ 15-05-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 14-06-2026

ಹುದ್ದೆಗೆ ಸಂಬಂಧಿಸಿದ ಪ್ರಮುಖ ಲಿಂಕುಗಳು:

ಪ್ರಮುಖ ವಿವರಗಳು ಪ್ರಮುಖ ಲಿಂಕುಗಳು
ಅಧಿಕೃತ ಅಧಿಸೂಚನೆ PDF ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್ಸೈಟ್ ಲಿಂಕ್ ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ

ಅಂತಿಮ ಮಾತು:

ಭಾರತೀಯ ರೈಲ್ವೆ ಮಂಡಳಿಯು ಒಟ್ಟು 11,127 ಅಸಿಸ್ಟೆಂಟ್ ಲೋಕೋ ಪೈಲೆಟ್ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಗೊಳ್ಳಲಿದೆ. ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಲು ಇನ್ನು ಟೈಮ್ ಇದೆ ಅಂತ ನಿಮ್ಮ ಅಮೂಲ್ಯವಾದ ಸಮಯವನ್ನು ಹಾಳುಮಾಡಿಕೊಳ್ಳದೆ ಹುದ್ದೆಗೆ ಸಂಬಂಧಿಸಿದ ಪರೀಕ್ಷೆಗೆ ಪೂರ್ವ ತಯಾರಿಯನ್ನು ಮಾಡಿಕೊಳ್ಳಿ.


ಇತರೆ ಪ್ರಮುಖ ಲಿಂಕುಗಳು:

Leave a Comment