Sahakari Bank Application: ಸಹಕಾರ ಬ್ಯಾಂಕ್‌ನಲ್ಲಿ ಹೊಸ ನೇಮಕಾತಿ 2026! SSLC, ಡಿಗ್ರಿ ಅಭ್ಯರ್ಥಿಗಳಿಗೆ ಉತ್ತಮ ಅವಕಾಶ । ಕೊನೆಯ ದಿನಾಂಕ ಜುಲೈ 15

ಸಹಕಾರ ಕ್ಷೇತ್ರ ಹಾಗೂ ಬ್ಯಾಂಕಿಂಗ್ ವಲಯದಲ್ಲಿ ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಬಯಸುವ ನೂರಾರು ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್! ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದ ಪ್ರತಿಷ್ಠಿತ ಯಡಗೆರೆ ಸೌಹಾರ್ದ ಕೋ- ಆಪರೇಟಿವ್ ಸೊಸೈಟಿ ಲಿಮಿಟೆಡ್ ಸಂಸ್ಥೆಯು ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

Sahakari Bank Recruitment 2026


ಇಲ್ಲಿ ಚೀಫ್ ಎಕ್ಸಿಕ್ಯೂಟಿವ್, ಅಸಿಸ್ಟೆಂಟ್ ಹಾಗೂ ಉಪಸಿಬ್ಬಂದಿ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, SSLC, ಪದವಿ ಹಾಗೂ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಜುಲೈ 15 ವರೆಗೆ ಕಾಲಾವಕಾಶ ಕಲ್ಪಿಸಿದ್ದು, ಅರ್ಹ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಇಲ್ಲಿ ಆಯ್ಕೆಯಾದ ಅಭ್ಯರ್ಥಿಗಳು ಕೊಪ್ಪ ಹಾಗೂ ಚಿಕ್ಕಮಗಳೂರು ಜಿಲ್ಲೆಯ ವಿವಿಧ ಶಾಖೆಗಳಲ್ಲಿ ಸೇವೆ ಸಲ್ಲಿಸಬಹುದಾಗಿದೆ. ಚೀಫ್ ಎಕ್ಸಿಕ್ಯೂಟಿವ್, ಅಸಿಸ್ಟೆಂಟ್ ಹಾಗೂ ಉಪಸಿಬ್ಬಂದಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಸಂಬಂಧಿತ ಕಚೇರಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ.

Sahakari Bank

ಹುದ್ದೆಯ ವಿವರಣಾತ್ಮಕ ನೋಟ:

ನೇಮಕಾತಿ ಸಂಸ್ಥೆಯ ಹೆಸರು ಯಡಗೆರೆ ಸೌಹಾರ್ದ ಕೋ- ಆಪರೇಟಿವ್ ಸೊಸೈಟಿ ಲಿಮಿಟೆಡ್, ಕೊಪ್ಪ
ಹುದ್ದೆಗಳ ವಿವರ ಚೀಫ್ ಎಕ್ಸಿಕ್ಯೂಟಿವ್, ಅಸಿಸ್ಟೆಂಟ್, ಉಪಸಿಬ್ಬಂದಿ ಹುದ್ದೆಗಳು
ಹುದ್ದೆಗಳ ಸಂಖ್ಯೆ ಒಟ್ಟು 4 ಹುದ್ದೆಗಳು
ಉದ್ಯೋಗ ಸ್ಥಳ ಕೊಪ್ಪ ಮತ್ತು ಚಿಕ್ಕಮಗಳೂರು ಜಿಲ್ಲೆಯ ವಿವಿಧ ಶಾಖೆಗಳು
ಅರ್ಜಿ ಸಲ್ಲಿಸುವ ವಿಧಾನ ಆಫ್ಲೈನ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 15-07-2026

ಹುದ್ದೆಯ ಸಂಕ್ಷಿಪ್ತ ಮಾಹಿತಿ:

ಕೊಪ್ಪದ ಯಡಗೆರೆ ಸೌಹಾರ್ದ ಕೋ- ಆಪರೇಟಿವ್ ಸೊಸೈಟಿ ಲಿಮಿಟೆಡ್ ನಲ್ಲಿ ಖಾಲಿ ಇರುವ ಚೀಫ್ ಎಕ್ಸಿಕ್ಯೂಟಿವ್, ಅಸಿಸ್ಟೆಂಟ್ ಹಾಗೂ ಉಪಸಿಬ್ಬಂದಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿದ್ದು, ವಿವಿಧ ಹುದ್ದೆಗಳಿಗೆ ಅನುಗುಣವಾಗಿ ಶೈಕ್ಷಣಿಕ ಅರ್ಹತೆ ಹಾಗೂ ವಯೋಮಿತಿಯನ್ನು ನಿಗದಿಪಡಿಸಲಾಗಿದೆ ಜೊತೆಗೆ ಅಭ್ಯರ್ಥಿಗಳು ಸಂಬಂಧಿತ ಕ್ಷೇತ್ರದಲ್ಲಿ ಕೆಲಸದ ಅನುಭವವನ್ನು ಸಹ ಹೊಂದಿರಬೇಕಾಗುತ್ತದೆ. ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ ಹಾಗೂ ಇಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಅತ್ಯಾಕರ್ಷಕವೇತನವನ್ನು ಸಹ ನೀಡಲಾಗುತ್ತದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನ ಹಂತದಲ್ಲಿ ತಿಳಿದುಕೊಳ್ಳೋಣ.

ಹುದ್ದೆಯ ವಿವರ:

ಯಡಗೆರೆ ಸೌಹಾರ್ದ ಕೋ- ಆಪರೇಟಿವ್ ಸೊಸೈಟಿ ಲಿಮಿಟೆಡ್ ಪ್ರಸ್ತುತ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಹುದ್ದೆಗಳ ವಿವರ ಈ ಕೆಳಕಂಡಂತಿದೆ.

ಹುದ್ದೆಗಳ ವಿವರ ಹುದ್ದೆಗಳ ಸಂಖ್ಯೆ
ಚೀಫ್ ಎಕ್ಸಿಕ್ಯೂಟಿವ್ 1 ಹುದ್ದೆ
ಅಸಿಸ್ಟೆಂಟ್ 1 ಹುದ್ದೆ
ಉಪಸಿಬ್ಬಂದಿ 2 ಹುದ್ದೆಗಳು

ಶೈಕ್ಷಣಿಕ ಅರ್ಹತೆ:

  • ಚೀಫ್ ಎಕ್ಸಿಕ್ಯೂಟಿವ್:

ಚೀಫ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ/ ಎಂಕಾಂ ಅಥವಾ ಎಂಬಿಎ ಪದವಿಯನ್ನು ಹೊಂದಿರಬೇಕು.

ಇದರೊಂದಿಗೆ ಸಹಕಾರ ಕ್ಷೇತ್ರದಲ್ಲಿ ಅಧಿಕಾರಿ ದರ್ಜೆಗಿಂತ ಮೇಲ್ಪಟ್ಟ ಹುದ್ದೆಯಲ್ಲಿ ಕನಿಷ್ಠ 1 ವರ್ಷಗಳ ಕೆಲಸದ ಅನುಭವವನ್ನು ಹೊಂದಿರಬೇಕು.

  • ಅಸಿಸ್ಟೆಂಟ್:

ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು.

ಜೊತೆಗೆ ಸಹಕಾರಿ ಕ್ಷೇತ್ರದ ಯಾವುದೇ ಹುದ್ದೆಯಲ್ಲಿ ಕನಿಷ್ಠ 1 ವರ್ಷಗಳ ಕೆಲಸದ ಅನುಭವವನ್ನು ಹೊಂದಿರಬೇಕು.

  • ಉಪಸಿಬ್ಬಂದಿ:

ಉಪಸಿಬ್ಬಂದಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು SSLC ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು. ಹಾಗೂ ಸಹಕಾರಿ ಕ್ಷೇತ್ರದಲ್ಲಿ ಒಂದು ವರ್ಷಗಳ ಕೆಲಸ ಮಾಡಿದ ಅನುಭವವನ್ನು ಹೊಂದಿರಬೇಕು.

ಈ ಎಲ್ಲ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ ಜೊತೆಗೆ ಬೇಸಿಕ್ ಟೈಪಿಂಗ್ ಹಾಗೂ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು ಜೊತೆಗೆ ಕನ್ನಡವನ್ನು ಓದಲು, ಬರೆಯಲು ಹಾಗೂ ಮಾತನಾಡಲು ಕಡ್ಡಾಯವಾಗಿ ಬರಬೇಕು.

ವಯೋಮಿತಿ ವಿವರ:

ಯಡಗೆರೆ ಸೌಹಾರ್ದ ಕೋ- ಆಪರೇಟಿವ್ ಸೊಸೈಟಿ ಲಿಮಿಟೆಡ್ ಸಂಸ್ಥೆಯು ವಿವಿಧ ಹುದ್ದೆಗಳಿಗೆ ಅನುಗುಣವಾಗಿ ಅಭ್ಯರ್ಥಿಗಳ ವಯೋಮಿತಿಯನ್ನು ನಿಗದಿಪಡಿಸಿದ್ದು, ಅವುಗಳ ವಿವರ ಈ ಕೆಳಕಂಡಂತಿದೆ.

  • ಚೀಫ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 25 ವರ್ಷದಿಂದ ಗರಿಷ್ಟ 30 ವರ್ಷ ವಯೋಮಿತಿಯನ್ನು ಹೊಂದಿರಬೇಕು.
  • ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷದಿಂದ ಗರಿಷ್ಟ 30 ವರ್ಷ ವಯೋಮಿತಿಯನ್ನು ಹೊಂದಿರಬೇಕು.
  • ಉಪಸಿಬ್ಬಂದಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷದಿಂದ ಗರಿಷ್ಟ 25 ವರ್ಷ ವಯೋಮಿತಿಯನ್ನು ಹೊಂದಿರಬೇಕು.

ವಯೋಮಿತಿ ಸಡಿಲಿಕೆ ವಿವರ:

ಸರ್ಕಾರದ ನಿಯಮಾವಳಿಗಳ ಹಾಗೂ ಸಂಸ್ಥೆಯ ನಿಯಮಾವಳಿಗಳ ಪ್ರಕಾರ ಮೀಸಲಾತಿ ವರ್ಗಗಳ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ:

ಚೀಫ್ ಎಕ್ಸಿಕ್ಯೂಟಿವ್, ಅಸಿಸ್ಟೆಂಟ್ ಹಾಗೂ ಉಪಸಿಬ್ಬಂದಿ ಹುದ್ದೆಗಳ ಭರ್ತಿಗೆ ಹೊರಡಿಸಿದ ನೇಮಕಾತಿ ಅಧಿಸೂಚನೆಯಲ್ಲಿ ಯಾವುದೇ ಅರ್ಜಿ ಶುಲ್ಕದ ಬಗ್ಗೆ ಉಲ್ಲೇಖಿಸಿಲ್ಲ. ಹೆಚ್ಚಿನ ಮಾಹಿತಿಗಾಗಿ ಸಂಬಂಧಿತ ಕಚೇರಿಗೆ ಭೇಟಿ ನೀಡಿ.

ವೇತನ ಶ್ರೇಣಿ:

ಕೊಪ್ಪದ ಯಡಗೆರೆ ಸೌಹಾರ್ದ ಕೋ- ಆಪರೇಟಿವ್ ಸೊಸೈಟಿ ಲಿಮಿಟೆಡ್ ನಲ್ಲಿ ಖಾಲಿ ಇರುವ ಚೀಫ್ ಎಕ್ಸಿಕ್ಯೂಟಿವ್, ಅಸಿಸ್ಟೆಂಟ್ ಹಾಗೂ ಉಪಸಿಬ್ಬಂದಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಅತ್ಯಾಕರ್ಷಕ ವೇತನವನ್ನು ನೀಡಲಾಗುತ್ತದೆ ಹಾಗೂ ಇತರೆ ಭತ್ಯೆಗಳನ್ನು ಸಹ ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:

  • ಅಭ್ಯರ್ಥಿಗಳು ಮೊದಲು ಯಡಗೆರೆ ಸೌಹಾರ್ದ ಕೋ- ಆಪರೇಟಿವ್ ಸೊಸೈಟಿ ಲಿಮಿಟೆಡ್ ಸಂಸ್ಥೆಯ ವಿವಿಧ ಶಾಖೆಗಳಾದ ಕೊಪ್ಪ, ನರಸಿಂಹರಾಜಪುರ, ಕುದುರೆಗುಂಡಿ ಅಥವಾ ಕಳಸಾ ಶಾಖಾ ಕಚೇರಿಗೆ ಭೇಟಿ ನೀಡಿ.
  • ಸಹಕಾರಿ ಶಾಖಾ ಕಚೇರಿಯಲ್ಲಿ ಹುದ್ದೆಗೆ ಸಂಬಂಧಿಸಿದ ಸಂಪೂರ್ಣ ನೇಮಕಾತಿ ಅಧಿಸೂಚನೆ ಹಾಗೂ ಅರ್ಜಿ ನಮೂನೆಯನ್ನು ಕೇಳಿ ಪಡೆಯಿರಿ.
  • ಅಪ್ಲಿಕೇಶನ್ ಫಾರ್ಮ್ ನಲ್ಲಿ ಎಲ್ಲ ವೈಯಕ್ತಿಕ ವಿವರ, ಶೈಕ್ಷಣಿಕ ವಿವರಗಳನ್ನು, ಅನುಭವ ವಿವರ ಹಾಗೂ ಇನ್ನಿತರ ಅಗತ್ಯ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ ನಿಗದಿತ ಸ್ಥಳಕ್ಕೆ ನಿಮ್ಮ ಇತ್ತೀಚಿನ ಪಾಸ್ ಪೋರ್ಟ್ ಅಳತೆಯ ಫೋಟೋವನ್ನು ಅಂಟಿಸಿ.
  • ವಯಸ್ಸಿನ ಪುರಾವೆ, ಶೈಕ್ಷಣಿಕ ಪ್ರಮಾಣಪತ್ರ ಹಾಗೂ ಅನುಭವ ಪ್ರಮಾಣಪತ್ರಗಳನ್ನು ಹಾಗೂ ಕಂಪ್ಯೂಟರ್ ಜ್ಞಾನದ ಪ್ರಮಾಣಪತ್ರವನ್ನು ಅಪ್ಲಿಕೇಶನ್ ಫಾರ್ಮ್ ನೊಂದಿಗೆ ಲಗತ್ತಿಸಿ.
  • ಈ ಎಲ್ಲ ಅಗತ್ಯ ದಾಖಲೆಗಳನ್ನು ಒಳಗೊಂಡ ಅಪ್ಲಿಕೇಶನ್ ಫಾರ್ಮ್ ಅನ್ನು ಒಂದು ಲಕೋಟೆಗೆ ಹಾಕಿ ಸಂಬಂಧಪಟ್ಟ ಸಹಕಾರಿ ಶಾಖಾ ಕಚೇರಿಗೆ ದಿನಾಂಕ 15-07-2026 ರ ಸಂಜೆ 5:00 ಗಂಟೆಯ ಒಳಗೆ ಸಲ್ಲಿಸಿ.

ಆಯ್ಕೆ ಪ್ರಕ್ರಿಯೆ:

  • ಅರ್ಜಿ ಪರಿಶೀಲನೆ:

ಮೊದಲ ಹಂತದಲ್ಲಿ ಅಭ್ಯರ್ಥಿಗಳನ್ನು ಸಲ್ಲಿಸಿದ ಅರ್ಜಿಯನ್ನು ಪರಿಶೀಲನೆ ನಡೆಸಿ, ಅಭ್ಯರ್ಥಿಗಳು ಹೊಂದಿರುವ ಶೈಕ್ಷಣಿಕ ಅರ್ಹತೆ ಹಾಗೂ ಅನುಭವಗಳ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಅನ್ನು ಸಿದ್ಧಪಡಿಸಲಾಗುತ್ತದೆ.

  • ಲಿಖಿತ ಪರೀಕ್ಷೆ:

ಶಾರ್ಟ್ ಲಿಸ್ಟ್ ನಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಯನ್ನು ನಡೆಸಲಾಗುತ್ತದೆ. ಈ ಒಂದು ಲಿಖಿತ ಪರೀಕ್ಷೆಯು ಸಾಮಾನ್ಯ ಜ್ಞಾನ, ಮೂಲ ಬ್ಯಾಂಕಿಂಗ್ ನಿಯಮಗಳು, ಕನ್ನಡ ಭಾಷಾ ಜ್ಞಾನ ಹಾಗೂ ಕಂಪ್ಯೂಟರ್ ಜ್ಞಾನಕ್ಕೆ ಸಂಬಂಧಿಸಿದಂತೆ ಪ್ರಶ್ನೆ ಕೇಳಲಾಗುತ್ತದೆ.

  • ವೈಯಕ್ತಿಕ ಸಂದರ್ಶನ:

ಲಿಖಿತ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಗಳಿಸಿ ತೇರ್ಗಡೆ ಹೊಂದಿರುವ ಅಭ್ಯರ್ಥಿಗಳನ್ನು ವೈಯಕ್ತಿಕ ಸಂದರ್ಶನಕ್ಕೆ ಕರೆಯಲಾಗುತ್ತದೆ. ಅಂತಿಮವಾಗಿ ಅಭ್ಯರ್ಥಿಗಳು ಲಿಖಿತ ಪರೀಕ್ಷೆ ಹಾಗೂ ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಪ್ರಮುಖ ದಿನಾಂಕಗಳು:

ಪ್ರಮುಖ ಈವೆಂಟ್ ದಿನಾಂಕ
ನೇಮಕಾತಿ ಅಧಿಸೂಚನೆ ಹೊರಡಿಸಿದ ದಿನಾಂಕ 01-07-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ15-07-2026

ಪ್ರಮುಖ ಲಿಂಕುಗಳು:

ನೇಮಕಾತಿ ಅಧಿಸೂಚನೆ ಪಿಡಿಎಫ್ ಲಿಂಕ್ ಇಲ್ಲಿ ಕ್ಲಿಕ್ ಮಾಡಿ

ಅಂತಿಮ ತೀರ್ಮಾನ:

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದ ಎಡಗೆರೆ ಸೌಹಾರ್ದ ಕೋ- ಆಪರೇಟಿವ್ ಸೊಸೈಟಿ ಲಿಮಿಟೆಡ್ ಸಂಸ್ಥೆಯು ಚೀಫ್ ಎಕ್ಸಿಕ್ಯೂಟಿವ್, ಅಸಿಸ್ಟೆಂಟ್ ಹಾಗೂ ಉಪಸಿಬ್ಬಂದಿ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, SSLC, ಪದವಿ ಶೈಕ್ಷಣಿಕ ಅರ್ಹತೆ ಹಾಗೂ ವೃತ್ತಿಪರ ಅನುಭವವನ್ನು ಹೊಂದಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗಾಗಿ ಸಂಬಂಧಿತ ಕಚೇರಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ


ಪ್ರಮುಖ ಲಿಂಕುಗಳು:

Whatsapp Group Link Click Here
Telegram Group Link Click Here
Instagram Link Click Here

ಇತರೆ ಪ್ರಮುಖ ಲಿಂಕುಗಳು:

Leave a Comment