ನಮಸ್ಕಾರ ಸ್ನೇಹಿತರೆ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 2026 ನೇ ಸಾಲಿನಲ್ಲಿ ಹೊಸ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡುವ ಮೂಲಕ ಸಾಕಷ್ಟು ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ. ಪ್ರಸ್ತುತ ನೇಮಕಾತಿ ಅಧಿಸೂಚನೆಯಲ್ಲಿ ಒಟ್ಟು 7150 ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
SBI Recruitment 2026
ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿಯಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಕೇಂದ್ರ ಸರ್ಕಾರ ಪ್ರತಿಷ್ಠಿತ ಬ್ಯಾಂಕಿಂಗ್ ವಲಯಗಳಲ್ಲಿ ವೃತ್ತಿಪರ ತರಬೇತಿಯನ್ನು ಪಡೆದುಕೊಂಡು ನಂತರ ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನವನ್ನು ಪ್ರಾರಂಭಿಸಬೇಕೆಂದಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶವಾಗಿದೆ.
ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಆನ್ಲೈನ್ ಮೂಲಕ ನಡೆಯಲಿದ್ದು, ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ದಿನಾಂಕ 19-05-2026 ರಿಂದಲೇ ಆರಂಭಗೊಂಡಿದ್ದು , 08-06-2026 ಕ್ಕೆ ಕೊನೆಗೊಳ್ಳುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ SBI ನ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ.

ಹುದ್ದೆಯ ಅವಲೋಕನ:
| ನೇಮಕಾತಿ ಸಂಸ್ಥೆ ಹೆಸರು | ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ |
| ಹುದ್ದೆಗಳ ಹೆಸರು | ಅಪ್ರೆಂಟಿಸ್ |
| ಒಟ್ಟು ಖಾಲಿ ಹುದ್ದೆಗಳು | 7150 ಹುದ್ದೆಗಳು |
| ಶೈಕ್ಷಣಿಕ ಅರ್ಹತೆ | ಯಾವುದೇ ವಿಷಯದಲ್ಲಿ ಪದವಿ |
| ಉದ್ಯೋಗ ಸ್ಥಳ | ಭಾರತದಾದ್ಯಂತ |
| ತರಬೇತಿ ಅವಧಿ | ಒಂದು ವರ್ಷ |
| ಅರ್ಜಿ ಸಲ್ಲಿಸುವ ವಿಧಾನ | ಆನ್ಲೈನ್ ಮೂಲಕ |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 08-06-2026 |
ಹುದ್ದೆಯ ಸಂಕ್ಷಿಪ್ತ ಮಾಹಿತಿ:
ಭಾರತದ ಅತಿ ದೊಡ್ಡ ಸಾರ್ವಜನಿಕ ವಲಯಗಳ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಪ್ರಸ್ತುತ ನೇಮಕಾತಿ ಅಧಿಸೂಚನೆಯಲ್ಲಿ ಒಟ್ಟು 7150 ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಯಾವುದೇ ವಿಷಯದಲ್ಲಿ ಪದವಿ ಪೂರ್ಣಗೊಳಿಸಿರುವ 20-28 ವರ್ಷದೊಳಗಿನ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಯ ವಿವರ:
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಪ್ರಸ್ತುತ ನೇಮಕಾತಿ ಅಧಿಸೂಚನೆಯಲ್ಲಿ ಒಟ್ಟು 7150 ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಅವುಗಳ ವಿವರ ಈ ಕೆಳಕಂಡಂತಿದೆ.
| ಹುದ್ದೆಗಳ ವಿವರ | ಹುದ್ದೆಗಳ ಸಂಖ್ಯೆ |
| ಗುಜರಾತ್ | 217 ಹುದ್ದೆಗಳು |
| ಆಂಧ್ರಪ್ರದೇಶ | 709 ಹುದ್ದೆಗಳು |
| ಕರ್ನಾಟಕ | 276 ಹುದ್ದೆಗಳು |
| ಛತ್ತೀಸಗಡ | 93 ಹುದ್ದೆಗಳು |
| ಮಧ್ಯಪ್ರದೇಶ | 285 ಹುದ್ದೆಗಳು |
| ಒಡಿಶಾ | 229 ಹುದ್ದೆಗಳು |
| ಲಡಾಕ್ | 15 ಹುದ್ದೆಗಳು |
| ಹಿಮಾಚಲ ಪ್ರದೇಶ | 180 ಹುದ್ದೆಗಳು |
| ಚಂಡೀಗರ್ | 15 ಹುದ್ದೆಗಳು |
| ಪಂಜಾಬ್ | 345 ಹುದ್ದೆಗಳು |
| ಜಮ್ಮು ಕಶ್ಮೀರ | 300 ಹುದ್ದೆಗಳು |
| ಹರಿಯಾಣ | 320 ಹುದ್ದೆಗಳು |
| ಪಾಂಡಿಚೇರಿ | 18 ಹುದ್ದೆಗಳು |
| ತಮಿಳುನಾಡು | 396 ಹುದ್ದೆಗಳು |
| ಅರುಣಾಚಲ ಪ್ರದೇಶ | 26 ಹುದ್ದೆಗಳು |
| ನಾಗಾಲ್ಯಾಂಡ್ | 20 ಹುದ್ದೆಗಳು |
| ಮೇಘಾಲಯ | 8 ಹುದ್ದೆಗಳು |
| ತ್ರಿಪುರ | 88 ಹುದ್ದೆಗಳು |
| ಅಸ್ಸಾಂ | 368 ಹುದ್ದೆಗಳು |
| ಮಿಜೋರಾಂ | 54 ಹುದ್ದೆಗಳು |
| ಮಣಿಪುರ | 6 ಹುದ್ದೆಗಳು |
| ತೆಲಂಗಾಣ | 491 ಹುದ್ದೆಗಳು |
| ರಾಜಸ್ತಾನ | 350 ಹುದ್ದೆಗಳು |
| ಪಶ್ಚಿಮ ಬಂಗಾಳ | 460 ಹುದ್ದೆಗಳು |
| ಅಂಡಮಾನ್ ಮತ್ತು ನಿಕೋಬಾರ್ | 42 ಹುದ್ದೆಗಳು |
| ಸಿಕ್ಕಿಂ | 50 ಹುದ್ದೆಗಳು |
| ಉತ್ತರಪ್ರದೇಶ | 561 ಹುದ್ದೆಗಳು |
| ಮಹಾರಾಷ್ಟ್ರ | 504 ಹುದ್ದೆಗಳು |
| ಗೋವಾ | 16 ಹುದ್ದೆಗಳು |
| ಉತ್ತರಖಂಡ | 115 ಹುದ್ದೆಗಳು |
| ದೆಹಲಿ | 105 ಹುದ್ದೆಗಳು |
| ಬಿಹಾರ | 58 ಹುದ್ದೆಗಳು |
| ಜಾರ್ಕಂಡ್ | 27 ಹುದ್ದೆಗಳು |
| ಕೇರಳ | 403 ಹುದ್ದೆಗಳು |
ಶೈಕ್ಷಣಿಕ ಅರ್ಹತೆ:
- ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪೂರ್ಣಗೊಳಿಸಿರಬೇಕು ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ವಯೋಮಿತಿ ವಿವರ:
ಭಾರತೀಯ ಸ್ಟೆಂಟ್ ಬ್ಯಾಂಕ್ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 20 ವರ್ಷದಿಂದ ಗರಿಷ್ಟ 28 ವರ್ಷ ವಯೋಮಿತಿಯನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ ವಿವರ:
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮೀಸಲಾತಿ ವರ್ಗಗಳ ಅಭ್ಯರ್ಥಿಗಳಿಗೆ ಸರ್ಕಾರದ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ಇರುತ್ತದೆ.
ಅರ್ಜಿ ಶುಲ್ಕ:
ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವಿವಿಧ ವರ್ಗಗಳಿಗೆ ಅನುಗುಣವಾಗಿ ಅರ್ಜಿ ಶುಲ್ಕವನ್ನು ನಿಗದಿಪಡಿಸಿದ್ದು, ಅಭ್ಯರ್ಥಿಗಳು ತಮ್ಮ ವರ್ಗಕ್ಕೆ ಸಂಬಂಧಿಸಿದ ಅರ್ಜಿ ಶುಲ್ಕವನ್ನು ಆನ್ಲೈನ್ ಪಾವತಿ ವಿಧಾನಗಳ ಮೂಲಕ ಪಾವತಿಸಬೇಕಾಗುತ್ತದೆ. ಅರ್ಜಿ ಶುಲ್ಕಗಳ ವಿವರ ಈ ಕೆಳಕಂಡಂತಿದೆ.
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ.
- ಸಾಮಾನ್ಯ ವರ್ಗ, ಇತರೆ ಹಿಂದುಳಿದ ವರ್ಗ, ಆರ್ಥಿಕವಾಗಿ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ. 300/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ವೇತನ ಶ್ರೇಣಿ:
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಕೆಲವು ನಿಯಮಾವಳಿಗಳ ಪ್ರಕಾರ, ಒಂದು ವರ್ಷದ ಪ್ರಾಯೋಗಿಕ ತರಬೇತಿಯನ್ನು ಪಡೆದುಕೊಳ್ಳುವ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ. 15,000 ಸ್ಟೈಫಂಡ್ ನೀಡಲಾಗುತ್ತದೆ.
ಅಗತ್ಯ ದಾಖಲೆಗಳು:
- ಪಾಸ್ ಪೋರ್ಟ್ ಅಳತೆಯ ಫೋಟೋ
- ಅಭ್ಯರ್ಥಿಗಳ ಸಹಿ
- ಆಧಾರ್ ಕಾರ್ಡ್
- ಪ್ಯಾನ್ ಕಾರ್ಡ್
- ಪದವಿ ಅಂಕಪಟ್ಟಿ
- ಪದವಿ ಪ್ರಮಾಣಪತ್ರ
- ನಿವಾಸ ಪ್ರಮಾಣಪತ್ರ
- ಹಾಗೂ ಇನ್ನಿತರ ಅಗತ್ಯ ದಾಖಲೆಗಳು
ಅರ್ಜಿ ಸಲ್ಲಿಸುವ ವಿಧಾನ:
- ಆಸಕ್ತ ಅಭ್ಯರ್ಥಿಗಳು ಮೊದಲು SBI ನ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ.
- ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಂಡು ಅರ್ಹತೆಯನ್ನು ಖಚಿತಪಡಿಸಿಕೊಳ್ಳಿ.
- ನಂತರ ಅಲ್ಲಿ ಕಾಣುವ ಆನ್ಲೈನ್ ಅಪ್ಲಿಕೇಶನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಇಮೇಲ್ ಐಡಿ ಹಾಗೂ ಪಾಸ್ವರ್ಡ್ ಬಳಸಿ ರಿಜಿಸ್ಟ್ರೇಷನ್ ಪ್ರಕ್ರಿಯೆ ಪೂರ್ಣಗೊಳಿಸಿ.
- ನಂತರ ಅಪ್ಲಿಕೇಶನ್ ಫಾರ್ಮ್ ನಲ್ಲಿ ಕೇಳಲಾದ ಎಲ್ಲಾ ವೈಯಕ್ತಿಕ ವಿವರ, ಶೈಕ್ಷಣಿಕ ವಿವರ ಹಾಗೂ ಇನ್ನಿತರ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ.
- ಅಭ್ಯರ್ಥಿಗಳ ಆಧಾರ್ ಕಾರ್ಡ್, ಶೈಕ್ಷಣಿಕ ಪ್ರಮಾಣಪತ್ರ, ಅಭ್ಯರ್ಥಿಗಳ ಸಹಿ, ಇತ್ತೀಚಿನ ಪಾಸ್ ಪೋರ್ಟ್ ಅಳತೆಯ ಫೋಟೋ ಸೇರಿದಂತೆ ಇನ್ನಿತರ ಎಲ್ಲಾ ದಾಖಲೆಗಳನ್ನು ಅಪ್ಲೋಡ್ ಮಾಡಿ.
- ಭರ್ತಿ ಮಾಡಿರುವ ಎಲ್ಲಾ ವಿವರಗಳು ಸರಿ ಇದೆಯೇ ಎಂದು ಖಚಿತಪಡಿಸಿಕೊಂಡು ನಿಮ್ಮ ವರ್ಗಕ್ಕೆ ಸಂಬಂಧಿಸಿದ ಅರ್ಜಿ ಶುಲ್ಕವನ್ನು ಪಾವತಿಸಿ ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.
ಆಯ್ಕೆ ಪ್ರಕ್ರಿಯೆ:
- ಆನ್ಲೈನ್ ಲಿಖಿತ ಪರೀಕ್ಷೆ:
ಮೊದಲ ಹಂತದಲ್ಲಿ ಅಭ್ಯರ್ಥಿಗಳಿಗೆ ಆನ್ಲೈನ್ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ಈ ಒಂದು ಪರೀಕ್ಷೆಯಲ್ಲಿ ಸಾಮಾನ್ಯ ಜ್ಞಾನ, ಇಂಗ್ಲಿಷ್ ವಿಷಯ ಹಾಗೂ ಗಣಿತ ಸಾಮರ್ಥ್ಯದ ಕುರಿತು ಪ್ರಶ್ನೆಗಳನ್ನು ಕೇಳಲಾಗುತ್ತದೆ.
- ಪ್ರಾದೇಶಿಕ ಭಾಷಾ ಪರೀಕ್ಷೆ:
ಆನ್ಲೈನ್ ಪರೀಕ್ಷೆಯಲ್ಲಿ ನಿಗದಿತ ಅಂಕಗಳನ್ನು ಗಳಿಸಿ ಅರ್ಹತೆ ಪಡೆದಿರುವ ಅಭ್ಯರ್ಥಿಗಳಿಗೆ ಪ್ರಾದೇಶಿಕ ಭಾಷಾ ಪರೀಕ್ಷೆ ನಡೆಸಲಾಗುತ್ತದೆ.
- ನಂತರ ಅಭ್ಯರ್ಥಿಗಳನ್ನು ವೈಯಕ್ತಿಕ ಸಂದರ್ಶನ ಹಾಗೂ ವೈದ್ಯಕೀಯ ಪರೀಕ್ಷೆಗೆ ಕರೆಯಲಾಗುತ್ತದೆ.
- ಕೊನೆಯ ಹಂತದಲ್ಲಿ ಅಭ್ಯರ್ಥಿಗಳು ಈ ಎಲ್ಲಾ ಪರೀಕ್ಷೆಯಲ್ಲಿ ಉತ್ತಮ ಪ್ರದರ್ಶನವನ್ನು ತೋರಿದ ಅಭ್ಯರ್ಥಿಗಳ ಮೆರಿಟ್ ಪಟ್ಟಿಯನ್ನು ಸಿದ್ದಪಡಿಸಿ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಪ್ರಮುಖ ದಿನಾಂಕಗಳು:
| ಪ್ರಮುಖ ಈವೆಂಟ್ | ದಿನಾಂಕ |
|---|---|
| ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ | 19-05-2026 |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 08-06-2026 |
ಪ್ರಮುಖ ಲಿಂಕುಗಳು:
| ಅಧಿಕೃತ ವೆಬ್ಸೈಟ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ಅಧಿಸೂಚನೆ ಪಿಡಿಎಫ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಅಂತಿಮ ತೀರ್ಮಾನ:
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಒಟ್ಟು 7150 ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಈ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಿ
ಇತರೆ ಪ್ರಮುಖ ಲಿಂಕುಗಳು:
- KEA: ರೂ. 83,700/- ವೇತನ! SDA – FDA ಹುದ್ದೆಗಳ ಬೃಹತ್ ನೇಮಕಾತಿ 2026! ಕೊನೆಯ ದಿನಾಂಕ 03-06-2026
- BOB: 5,000 ಹುದ್ದೆಗಳು! ಬ್ಯಾಂಕಿಂಗ್ ಕ್ಷೇತ್ರದಲ್ಲಿ ಭರ್ಜರಿ ಉದ್ಯೋಗಾವಕಾಶ । ಪದವೀಧರರಿಗೆ ಗೋಲ್ಡನ್ ಚಾನ್ಸ್
- NHAI: ಭಾರತೀಯ ರಾಷ್ಟೀಯ ಹೆದ್ದಾರಿ ಪ್ರಾಧಿಕಾರದಲ್ಲಿ ಬೃಹತ್ ನೇಮಕಾತಿ 2026 | ಕೊನೆಯ ದಿನಾಂಕ ಜೂನ್ 15
- KSP: ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಭರ್ಜರಿ ಉದ್ಯೋಗಾವಕಾಶ! । ಕೊನೆಯ ದಿನಾಂಕ ಮೇ 24
- KRCL: ರೂ. 47,220/- ವೇತನ! ಕೊಂಕಣ ರೈಲ್ವೆಯಲ್ಲಿ ಬೃಹತ್ ನೇಮಕಾತಿ 2026 । ಯಾವುದೇ ಲಿಖಿತ ಪರೀಕ್ಷೆ + ಅರ್ಜಿ ಶುಲ್ಕವಿಲ್ಲ