SBI Link: ರೂ. 85,920/- ವೇತನ! ಎಸ್‌ಬಿಐಯಲ್ಲಿ 1500 PO ಹುದ್ದೆಗಳ ಭರ್ಜರಿ ನೇಮಕಾತಿ 2026 | ಜುಲೈ 8 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ

ಭಾರತದ ಪ್ರತಿಷ್ಠಿತ ಸಾರ್ವಜನಿಕ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಪ್ರಸ್ತುತ ಸಾಲಿನಲ್ಲಿ ಹೊಚ್ಚ ಹೊಸ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಇಲ್ಲಿ ಪ್ರೊಬೇಷನರಿ ಆಫೀಸರ್ಸ್ ಹುದ್ದೆಗಳ ಭರ್ತಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

SBI Recruitment 2026


ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನನ್ನು ಪ್ರಾರಂಭಿಸಬೇಕೆಂದಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶವಾಗಿದ್ದು, ಪ್ರೊಬೆಷನರಿ ಆಫೀಸರ್ಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿಯನ್ನು ಪೂರ್ಣಗೊಳಿಸಿರಬೇಕು.

ಇಲ್ಲಿ ಒಟ್ಟು 1,500/- ಪ್ರೊಬೇಷನರಿ ಆಫೀಸರ್ಸ್ ಹುದ್ದೆಗಳು ಖಾಲಿ ಇದ್ದು, ಈ ಹುದ್ದೆಗಳನ್ನು ನಿಯಮಿತ ಹುದ್ದೆಗಳು ಹಾಗೂ ಬ್ಯಾಕ್ಲಾಗ್ ಹುದ್ದೆಗಳು ಎಂದು ಹಂಚಿಕೆ ಮಾಡಲಾಗಿದೆ. ಯಾವ ವಿಭಾಗದಲ್ಲಿ ಎಷ್ಟೆಷ್ಟು ಹುದ್ದೆಗಳು ಖಾಲಿ ಇದೆ? ಅರ್ಹತಾ ಮಾನದಂಡಗಳೇನು? ಅರ್ಜಿ ಸಲ್ಲಿಸುವುದು ಹೇಗೆ? ಎನ್ನುವ ಸಂಪೂರ್ಣ ಮಾಹಿತಿಯನ್ನು ಪ್ರಸ್ತುತ ಲೇಖನದಲ್ಲಿ ತಿಳಿದುಕೊಳ್ಳೋಣ.

SBI Link

ಹುದ್ದೆಯ ಕಿರು ವಿಮರ್ಶೆ:

ನೇಮಕಾತಿ ಸಂಸ್ಥೆಯ ಹೆಸರು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ
ಹುದ್ದೆಯ ಹೆಸರು ಪ್ರೊಬೇಷನರಿ ಆಫೀಸರ್ಸ್ ಹುದ್ದೆಗಳು
ಹುದ್ದೆಯ ಸಂಖ್ಯೆ 1500 ಹುದ್ದೆಗಳು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ08-07-2026
ಅರ್ಜಿ ಸಲ್ಲಿಸುವ ವಿಧಾನಆನ್ಲೈನ್ ಮೂಲಕ

ಹುದ್ದೆಯ ಸಂಕ್ಷಿಪ್ತ ಮಾಹಿತಿ:

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಪ್ರಸ್ತುತ ನೇಮಕಾತಿ ಅಧಿಸೂಚನೆಯಲ್ಲಿ ಒಟ್ಟು 1500 ಪ್ರೊಬೇಷನರಿ ಆಫೀಸರ್ಸ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಅತ್ಯಾಕರ್ಷಕ ವೇತನವನ್ನು ನಿಗದಿಪಡಿಸಲಾಗಿದೆ.

ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ಪೂರ್ಣಗೊಳಿಸಿದ ಕನಿಷ್ಠ 21 ವರ್ಷದಿಂದ ಗರಿಷ್ಟ 30 ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಯ ವಿವರ:

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಪ್ರಸ್ತುತ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಪ್ರೊಬೇಷನರಿ ಆಫೀಸರ್ ಹುದ್ದೆಗಳನ್ನು ವಿವಿಧ ವರ್ಗಗಳಿಗೆ ಹಂಚಿಕೆ ಮಾಡಲಾಗಿದೆ.

ಹುದ್ದೆಯ ವಿವರ ಹುದ್ದೆಗಳ ಸಂಖ್ಯೆ
ಆರ್ಥಿಕವಾಗಿ ಹಿಂದುಳಿದ ವರ್ಗ 144 ಹುದ್ದೆಗಳು
ಪರಿಶಿಷ್ಟ ಪಂಗಡ 144 ಹುದ್ದೆಗಳು
ಪರಿಶಿಷ್ಟ ಜಾತಿ 234 ಹುದ್ದೆಗಳು
ಇತರೆ ಹಿಂದುಳಿದ ವರ್ಗ 390 ಹುದ್ದೆಗಳು
ಸಾಮಾನ್ಯ ವರ್ಗ 588 ಹುದ್ದೆಗಳು

ಒಟ್ಟು 1500 ಹುದ್ದೆಗಳಲ್ಲಿ 1446 ಹುದ್ದೆಗಳು ನಿಯಮಿತ ಹುದ್ದೆಗಲಾಗಿದ್ದು, 54 ಹುದ್ದೆಗಳು ಬ್ಯಾಕ್ಲಾಗ್ ಹುದ್ದೆಗಳಾಗಿವೆ.

ಶೈಕ್ಷಣಿಕ ಅರ್ಹತೆ:

  • ಪ್ರೊಬೇಷನರಿ ಆಫೀಸರ್ಸ್ :

ಪ್ರೊಬೆಷನರಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿಯನ್ನು ಪೂರ್ಣಗೊಳಿಸಿರಬೇಕು. ಪ್ರಸ್ತುತ ಅಂತಿಮ ವರ್ಷ ಅಥವಾ ಅಂತಿಮ ಸೆಮಿಸ್ಟರ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳು ಸಹ ಈ ಹುದ್ದೆಗೆ ತಾತ್ಕಾಲಿಕವಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ವೈದ್ಯಕೀಯ, ಚಾರ್ಟರ್ಡ್ ಅಕೌಂಟೆಂಟ್, ಇಂಜಿನಿಯರಿಂಗ್ ಹಾಗೂ ಇತರೆ ವೃತ್ತಿಪರ ಕೋರ್ಸ್ ಗಳಲ್ಲಿ ಪದವಿ ಪಡೆದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ವಯೋಮಿತಿ ವಿವರ:

ಪ್ರೊಬೇಷನರಿ ಆಫೀಸರ್ಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿಯನ್ನು ದಿನಾಂಕ 01-04-2026 ಕ್ಕೆ ಅನ್ವಯವಾಗುವಂತೆ ಲೆಕ್ಕ ಹಾಕಲಾಗುತ್ತದೆ.

ಅಭ್ಯರ್ಥಿಗಳು ಕನಿಷ್ಠ 21 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಟ 30 ವರ್ಷ ಮೀರಿರಬಾರದು. ಅಂದರೆ, ಅಭ್ಯರ್ಥಿಗಳು 02-04-1996 ಕ್ಕೆ ಮುಂಚಿತವಾಗಿ ಹಾಗೂ 01-04-2005 ರ ನಂತರ ಜನಿಸಿರಬಾರದು.

ವಯೋಮಿತಿ ಸಡಿಲಿಕೆ ವಿವರ:

ಸರ್ಕಾರದ ನಿಯಮಗಳ ಪ್ರಕಾರ ಮೀಸಲಾತಿ ವರ್ಗಗಳ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ.

  • ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ: 3 ವರ್ಷಗಳು
  • ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ: 5 ವರ್ಷಗಳು
  • ಮಾಜಿ ಸೈನಿಕ ಮತ್ತು ಕಮಿಷನ್ಡ್ ಅಧಿಕಾರಿಗಳಿಗೆ: 5 ವರ್ಷಗಳು
  • PwBD ಸಾಮಾನ್ಯ ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ: 10 ವರ್ಷಗಳು
  • PwBD ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ: 13 ವರ್ಷಗಳು
  • PwBD ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ: 15 ವರ್ಷಗಳು

ಅರ್ಜಿ ಶುಲ್ಕ:

  • ಸಾಮಾನ್ಯ, ಒಬಿಸಿ ಹಾಗೂ ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ: ರೂ. 750/-
  • ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, PwBD ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕದಲ್ಲಿ ನಿಗದಿಪಡಿಸಿಲ್ಲ.

ಅರ್ಹ ಅಭ್ಯರ್ಥಿಗಳು ತಮ್ಮ ವರ್ಗಕ್ಕೆ ಸಂಬಂಧಿಸಿದ ಅರ್ಜಿ ಶುಲ್ಕವನ್ನು ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಸೇರಿದಂತೆ ಇನ್ನಿತರ ಆನ್ಲೈನ್ ಪಾವತಿ ವಿಧಾನಗಳ ಮೂಲಕ ಪಾವತಿಸಬೇಕಾಗುತ್ತದೆ.

ವೇತನ ಶ್ರೇಣಿ:

ಪ್ರೊಬೇಷನರಿ ಆಫೀಸರ್ಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 48480/- ರೂ. 85,920/- ವೇತನವನ್ನು ನೀಡಲಾಗುತ್ತದೆ ಹಾಗೂ ಮೂಲ ವೇತನದೊಂದಿಗೆ ಮನೆ ಬಾಡಿಗೆಯ ಭತ್ಯೆ, ತುಟ್ಟಿ ಭತ್ಯೆ, ಪ್ರಾವಿಡೆಂಟ್ ಫಂಡ್, ನಗರ ಭತ್ಯೆ ಹಾಗೂ ವೈದ್ಯಕೀಯ ಸೌಲಭ್ಯ ಸೇರಿದಂತೆ ಇನ್ನಿತರ ಭತ್ಯೆಗಳನ್ನು ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:

  • ಅರ್ಹ ಮ್ ಅತ್ತು ಆಸಕ್ತ ಅಭ್ಯರ್ಥಿಗಳು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಳ್ಳಿ.
  • ನಂತರ ಕೆರಿಯರ್ ವಿಭಾಗದಲ್ಲಿ ಕಾಣುವ ಪ್ರೊಬೇಷನರಿ ಆಫೀಸರ್ಸ್ ಹುದ್ದೆಗಳಿಗೆ ಸಂಬಂಧಿಸಿದ ನೇಮಕಾತಿ ಲಿಂಕ್ ಅನ್ನು ಆಯ್ಕೆ ಮಾಡಿಕೊಳ್ಳಿ.
  • ನಂತರ ಆನ್ಲೈನ್ ನೋಂದಣಿ ಲಿಂಕ್ ಮೇಲೆ ಕ್ಲಿಕ್ ಮಾಡಿ, ನಿಮ್ಮ ಹೆಸರು, ಇಮೇಲ್ ಐಡಿ ಹಾಗೂ ಇನ್ನಿತರ ಮೂಲ ದಾಖಲೆಗಳನ್ನು ಬಳಸಿ ರಿಜಿಸ್ಟ್ರೇಷನ್ ಪ್ರಕ್ರಿಯೆ ಪೂರ್ಣಗೊಳಿಸಿ.
  • ರಿಜಿಸ್ಟರ್ ನಂಬರ್ ಹಾಗೂ ಪಾಸ್ ವರ್ಡ್ ಬಳಸಿ ಲಾಗಿನ್ ಆಗಿ
  • ನಂತರ ಅಪ್ಲಿಕೇಶನ್ ಫಾರ್ಮ್ ನಲ್ಲಿ ಕೇಳಲಾದ ಎಲ್ಲ ವೈಯಕ್ತಿಕ ವಿವರ, ಶೈಕ್ಷಣಿಕ ವಿವರ ಹಾಗೂ ಇನ್ನಿತರ ವಿವರಗಳನ್ನು ಭರ್ತಿ ಮಾಡಿ.
  • ನಂತರ ಪಾಸ್ ಪೋರ್ಟ್ ಅಳತೆಯ ಫೋಟೋ, ಅಭ್ಯರ್ಥಿಗಳ ಸಹಿ, ಆಧಾರ್ ಕಾರ್ಡ್, ಶೈಕ್ಷಣಿಕ ಪ್ರಮಾಣಪತ್ರ, ಅನುಭವ ಪ್ರಮಾಣಪತ್ರ ಹಾಗೂ ಇನ್ನಿತರ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.
  • ಭರ್ತಿ ಮಾಡಿರುವ ಎಲ್ಲ ವಿವರಗಳು ಸರಿ ಇದೆಯೇ ಎಂದು ಖಚಿತಪಡಿಸಿಕೊಂಡು ತಮ್ಮ ವರ್ಗಕ್ಕೆ ಸಂಬಂಧಿಸಿದ ಅರ್ಜಿ ಶುಲ್ಕವನ್ನು ಪಾವತಿಸಿ ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.

ಆಯ್ಕೆ ಪ್ರಕ್ರಿಯೆ:

  • ಪೂರ್ವಭಾವಿ ಪರೀಕ್ಷೆ:

ಅಭ್ಯರ್ಥಿಗಳಿಗೆ ಮೊದಲ ಹಂತದಲ್ಲಿ ಪೂರ್ವಭಾವಿ ಪರೀಕ್ಷೆಯನ್ನು ನಡೆಸಲಾಗುತ್ತದೆ. ಈ ಒಂದು ಪರೀಕ್ಷೆಯು ಒಟ್ಟು 100 ಅಂಕಗಳನ್ನು ಒಳಗೊಂಡಿದ್ದು, ಈ ಪರೀಕ್ಷೆಯಲ್ಲಿ ಕ್ವಾನ್ಟಿಟೇಟಿವ್ ಆಪ್ಟಿಟ್ಯೂಡ್, ಇಂಗ್ಲಿಷ್ ಭಾಷೆ, ರೀಸನಿಂಗ್ ಎಬಿಲಿಟಿ ಬಗ್ಗೆ ಪ್ರಶ್ನೆಗಳನ್ನು ಕೇಳಲಾಗುತ್ತದೆ.

  • ಮುಖ್ಯ ಪರೀಕ್ಷೆ:

ಪೂರ್ವಭಾವಿ ಪರೀಕ್ಷೆಯಲ್ಲಿ ಅರ್ಹತೆಯನ್ನು ಪಡೆದಿರುವ ಅಭ್ಯರ್ಥಿಗಳು ಮುಖ್ಯ ಪರೀಕ್ಷೆಯನ್ನು ಬರೆಯಲು ಅರ್ಹರಾಗಿರುತ್ತಾರೆ. ಈ ಹಂತದಲ್ಲಿ ಅಭ್ಯರ್ಥಿಗಳಿಗೆ 200 ಅಂಕಗಳ ಆಬ್ಜೆಕ್ಟಿವ್ ಪರೀಕ್ಷೆಯನ್ನು ಹಾಗೂ 30 ಅಂಕಗಳ ವಿಸ್ತರಣಾ ಪರೀಕ್ಷೆಯನ್ನು ಆನ್ಲೈನ್ ಮೂಲಕ ನಡೆಸಲಾಗುತ್ತದೆ.

  • ಸಂದರ್ಶನ ಮತ್ತು ಸೈಕೋಮೆಟ್ರಿಕ್ ಟೆಸ್ಟ್:

ಮುಖ್ಯ ಪರೀಕ್ಷೆಯಲ್ಲಿ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳನ್ನು ಸೈಕೋಮೆಟ್ರಿಕ್ ಟೆಸ್ಟ್ ಹಾಗೂ ಸಂದರ್ಶನಕ್ಕೆ ಕರೆಯಲಾಗುತ್ತದೆ.

ಅಂತಿಮವಾಗಿ ಮುಖ್ಯ ಪರೀಕ್ಷೆ ಮತ್ತು ಸೈಕೋಮೆಟ್ರಿಕ್ ಟೆಸ್ಟ್ ಹಾಗೂ ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಪ್ರಮುಖ ದಿನಾಂಕಗಳು:

ಪ್ರಮುಖ ಈವೆಂಟ್ ದಿನಾಂಕ
ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ 18-06-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 08-07-2026
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ 08-07-2026
ಆನ್ಲೈನ್ ಪೂರ್ವಭಾವಿ ಪರೀಕ್ಷೆ ನಡೆಯುವ ದಿನಾಂಕ ಆಗಸ್ಟ್ 2026
ಆನ್ಲೈನ್ ಮುಖ್ಯ ಪರೀಕ್ಷೆ ನಡೆಯುವ ದಿನಾಂಕ ಸೆಪ್ಟೆಂಬರ್ 2026
ಸೈಕೋಮೆಟ್ರಿಕ್ ಟೆಸ್ಟ್ ಮತ್ತು ಸಂದರ್ಶನ ನಡೆಯುವ ದಿನಾಂಕ ಅಕ್ಟೋಬರ್/ ನವೆಂಬರ್ 2026
ಅಂತಿಮ ಫಲಿತಾಂಶ ಪ್ರಕಟವಾಗುವ ದಿನಾಂಕ ನವೆಂಬರ್/ ಡಿಸೆಂಬರ್ 2026

ಪ್ರಮುಖ ಲಿಂಕುಗಳು:

ಅಧಿಕೃತ ವೆಬ್‌ಸೈಟ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಹುದ್ದೆಗೆ ಸಂಬಂಧಿಸಿದ ಅಧಿಸೂಚನೆ ಪಿಡಿಎಫ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ

ಅಂತಿಮ ತೀರ್ಮಾನ:

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಪ್ರಸ್ತುತ ನೇಮಕಾತಿ ಅಧಿಸೂಚನೆಯಲ್ಲಿ ನಿಯಮಿತ ಹುದ್ದೆಗಳು ಹಾಗೂ ಬ್ಯಾಕ್ಲಾಗ್ ಹುದ್ದೆಗಳು ಸೇರಿ ಒಟ್ಟು 1500 ಪ್ರೊಬೇಷನರಿ ಆಫೀಸರ್ಸ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ನೀವೇನಾದರೂ ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸಿದರೆ ಮೊದಲು ಹುದ್ದೆಗೆ ಸಂಬಂಧಿಸಿದ ಅರ್ಹತಾ ಮಾನದಂಡಗಳನ್ನು ಪೂರೈಸುತ್ತೇವೆಯೋ? ಇಲ್ಲವೋ? ಎಂದು ಖಚಿತಪಡಿಸಿಕೊಂಡು ನಂತರ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಿ.


ಪ್ರಮುಖ ಲಿಂಕುಗಳು:

Whatsapp Group Link Click Here
Telegram Group Link Click Here
Instagram Link Click Here

ಇತರೆ ಪ್ರಮುಖ ಲಿಂಕುಗಳು

Leave a Comment