ಭಾರತದ ಅತಿದೊಡ್ಡ ಸಾರ್ವಜನಿಕ ವಲಯದ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 2026 ನೇ ಸಾಲಿನಲ್ಲಿ ಸಮಕಾಲೀನ ಲೆಕ್ಕಪರಿಶೋಧಕ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಬ್ಯಾಂಕಿಂಗ್ ಕ್ಷೇತ್ರದಲ್ಲಿ ಅನುಭವ ಹೊಂದಿರುವ ನಿವೃತ್ತಿ ಅಧಿಕಾರಿಗಳಿಗೆ ಇದೊಂದು ಸುವರ್ಣಾವಕಾಶವಾಗಿದೆ.
SBI Recruitment 2026
ಸಮಕಾಲೀನ ಲೆಕ್ಕಪರಿಶೋಧಕ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಒಪ್ಪಂದದ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ದಿನಾಂಕ 14-05-2026 ರಿಂದ ಆರಂಭಗೊಂಡು 11-06-2026 ಕ್ಕೆ ಕೊನೆಗೊಳ್ಳುತ್ತದೆ.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಪ್ರಸ್ತುತ ನೇಮಕಾತಿ ಅಧಿಸೂಚನೆಯಲ್ಲಿ ಒಟ್ಟು 821 ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹ ಅಭ್ಯರ್ಥಿಗಳು ಪ್ರಸ್ತುತ ಲೇಖನವನ್ನು ಸಂಪೂರ್ಣವಾಗಿ ಓದಿಕೊಂಡು ನಂತರ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.

ಹುದ್ದೆಯ ಕಿರು ಚಿತ್ರಣ:
| ನೇಮಕಾತಿ ಸಂಸ್ಥೆಯ ಹೆಸರು | ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ |
| ಹುದ್ದೆಯ ಹೆಸರು | ಸಮಕಾಲೀನ ಲೆಕ್ಕಪರಿಶೋಧಕ |
| ಒಟ್ಟು ಹುದ್ದೆಗಳ ಸಂಖ್ಯೆ | 821 ಹುದ್ದೆಗಳು |
| ಉದ್ಯೋಗ ಸ್ಥಳ | ಅಖಿಲ ಭಾರತ |
| ಉದ್ಯೋಗದ ಪ್ರಕಾರ | ಒಪ್ಪಂದ ಆಧಾರಿತ |
| ಅರ್ಜಿ ಸಲ್ಲಿಸುವ ವಿಧಾನ | ಆನ್ಲೈನ್ ಮೂಲಕ |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 11-06-2026 |
ಹುದ್ದೆಯ ವಿವರ:
SBI ಪ್ರಸ್ತುತ ನೇಮಕಾತಿ ಅಧಿಸೂಚನೆಯಲ್ಲಿ SBI ವೃತ್ತದಲ್ಲಿ ಖಾಲಿ ಇರುವ ಬ್ಯಾಕ್ ಲಾಗ್ ಹಾಗೂ ನಿಯಮಿತ ಹುದ್ದೆಗಳು ಸೇರಿ ಒಟ್ಟು 821 ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಅವುಗಳ ವಿವರ ಈ ಕೆಳಕಂಡಂತಿದೆ.
| SBI ವೃತ್ತ | ಹುದ್ದೆಗಳ ಸಂಖ್ಯೆ |
| ಬೆಂಗಳೂರು | 64 ಹುದ್ದೆಗಳು |
| ಅಮರಾವತಿ | 21 ಹುದ್ದೆಗಳು |
| ಭೋಪಾಲ್ | 38 ಹುದ್ದೆಗಳು |
| ಭುವನೇಶ್ವರಿ | 57 ಹುದ್ದೆಗಳು |
| ಚನೈ | 54 ಹುದ್ದೆಗಳು |
| ಚಂಡೀಗಢ | 47 ಹುದ್ದೆಗಳು |
| ಗುವಾಹಟಿ | 21 ಹುದ್ದೆಗಳು |
| ಹೈದರಾಬಾದ್ | 26 ಹುದ್ದೆಗಳು |
| ಗಾಂಧಿನಗರ | 36 ಹುದ್ದೆಗಳು |
| ಕೋಲ್ಕತ್ತಾ | 44 ಹುದ್ದೆಗಳು |
| ಜೈಪುರ | 95 ಹುದ್ದೆಗಳು |
| ಲಕ್ನೋ | 30 ಹುದ್ದೆಗಳು |
| ಮುಂಬೈ ಮೆಟ್ರೋ | 80 ಹುದ್ದೆಗಳು |
| ಮಹಾರಾಷ್ಟ್ರ | 61 ಹುದ್ದೆಗಳು |
| ಪಾಟ್ನಾ | 38 ಹುದ್ದೆಗಳು |
| ನವ ದೆಹಲಿ | 50 ಹುದ್ದೆಗಳು |
| ತಿರುವನಂತಪುರಂ | 59 ಹುದ್ದೆಗಳು |
ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ:
- ಸಮಕಾಲೀನ ಲೆಕ್ಕ ಪರಿಶೋಧಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬಿಡುಗಡೆ ಮಾಡಿದ ನೇಮಕಾತಿ ಅಧಿಸೂಚನೆ ಪ್ರಕಾರ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು.
- ಬ್ಯಾಂಕಿಂಗ್ ಕ್ಷೇತ್ರದಲ್ಲಿ ಅನುಭವ ಹೊಂದಿರುವ ನಿವೃತ್ತಿ ಅಧಿಕಾರಿಗಳು ಕ್ರೆಡಿಟ್, ಆಡಿಟ್ ಅಥವಾ ಫಾರೆಕ್ಸ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವ ಹೊಂದಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.
- ಅಭ್ಯರ್ಥಿಗಳು MMGS -III, SMGS -IV /V TEGS -IV ಹುದ್ದೆಗಳಲ್ಲಿ ನಿವೃತ್ತರಾಗಿರಬೇಕು.
ವಯೋಮಿತಿ ವಿವರ:
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಸಮಕಾಲೀನ ಲೆಕ್ಕಪರಿಶೋಧಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿಯನ್ನು 14-05-2026 ಕ್ಕೆ ಅನ್ವಯವಾಗುವಂತೆ ಲೆಕ್ಕ ಹಾಕಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಟ 65 ವರ್ಷ ವಯೋಮಿತಿಯನ್ನು ಮೀರಿರಬಾರದು.
ವಯೋಮಿತಿ ಸಡಿಲಿಕೆ ವಿವರ:
ಸಮಕಾಲೀನ ಲೆಕ್ಕಪರಿಶೋಧಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ ಯಾವುದೇ ವಯೋಮಿತಿ ಸಡಿಲಿಕೆ ಇರುವುದಿಲ್ಲ.
ಅರ್ಜಿ ಶುಲ್ಕ:
ಪ್ರಸ್ತುತ SBI ನೇಮಕಾತಿ ಅಧಿಸೂಚನೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವನ್ನು ನಿಗದಿಪಡಿಸಿಲ್ಲ. ಹಾಗಾಗಿ ಅಭ್ಯರ್ಥಿಗಳು ಯಾವುದೇ ಅರ್ಜಿಶುಲ್ಕವನ್ನು ಪಾವತಿಸದೇ ಉಚಿತವಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ವೇತನ ಶ್ರೇಣಿ:
ಸಮಕಾಲೀನ ಲೆಕ್ಕಪರಿಶೋಧಕ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಅವರು ನಿವೃತ್ತಿ ಹೊಂದಿರುವ ಗ್ರೇಡ್ ಗೆ ಅನುಗುಣವಾಗಿ ವೇತನವನ್ನು ನಿಗದಿಪಡಿಸಲಾಗುತ್ತದೆ. ಅವುಗಳ ವಿವರ ಹೀಗಿದೆ.
| ನಿವೃತ್ತಿ ಗ್ರೇಡ್ | ವೇತನ ಶ್ರೇಣಿ |
| MMGS -III | ರೂ. 45,000/- |
| SMGS -IV | ರೂ. 50,000/- |
| SMGS -V | ರೂ. 65,000/- |
| TEGS -IV | ರೂ. 80,000/- |
ಅಗತ್ಯ ದಾಖಲೆಗಳು:
- ಐಡಿ ಪ್ರೂಫ್
- ಜನ್ಮ ದಿನಾಂಕ ಪ್ರಮಾಣಪತ್ರ
- ಅನುಭವ ಪ್ರಮಾಣಪತ್ರ
- ಪಾಸ್ ಪೋರ್ಟ್ ಅಳತೆಯ ಫೋಟೋ
- ಅಭ್ಯರ್ಥಿಗಳ ಸಹಿ
- ಆಧಾರ್ ಕಾರ್ಡ್
- ಜನ್ಮ ದಿನಾಂಕ ಪ್ರಮಾಣಪತ್ರ
- ಹಾಗೂ ಇನ್ನಿತರ ಅಗತ್ಯ ದಾಖಲೆಗಳು
ಅರ್ಜಿ ಸಲ್ಲಿಸುವ ವಿಧಾನ:
- ಆಸಕ್ತ ಅಭ್ಯರ್ಥಿಗಳು ಮೊದಲು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ.
- ನಂತರ ಕಾಂಕರೆಂಟ್ ಆಡಿಟರ್ ರಿಕ್ರೂಟ್ಮೆಂಟ್ ವಿಭಾಗಕ್ಕೆ ಭೇಟಿ ನೀಡಿ ಜಾಬ್ ನೋಟಿಫಿಕೇಷನ್ ಅನ್ನು ಸಂಪೂರ್ಣವಾಗಿ ಓದಿಕೊಳ್ಳಿ
- ನಂತರ ಅಪ್ಲೈ ಆನ್ಲೈನ್ ಬಟನ್ ಇದೆ ಕ್ಲಿಕ್ ಮಾಡಿ. ಅಲ್ಲಿ ಕೇಳಲಾದ ಎಲ್ಲಾ ಅಗತ್ಯ ವಿವರಗಳನ್ನು ಭರ್ತಿ ಮಾಡಿ.
- ಮೇಲೆ ನೀಡಲಾದ ಎಲ್ಲ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.
- ಅಗತ್ಯವಿದ್ದರೆ ಅಪ್ಲಿಕೇಶನ್ ಫಾರ್ಮ್ ಪ್ರಿಂಟ್ ತೆಗೆದುಕೊಳ್ಳಿ.
ಆಯ್ಕೆ ಪ್ರಕ್ರಿಯೆ:
- ಶಾರ್ಟ್ ಲಿಸ್ಟ್:
ಅಭ್ಯರ್ಥಿಗಳು ಹೊಂದಿರುವ ಶೈಕ್ಷಣಿಕ ಅರ್ಹತೆ, ಅನುಭವ, ಸೂಕ್ತತೆ ಹಾಗೂ ಇನ್ನಿತರ ಅರ್ಹತಾ ಮಾನದಂಡಗಳಿಗೆ ಅನುಗುಣವಾಗಿ ಶಾರ್ಟ್ ಲಿಸ್ಟ್ ಸಿದ್ಧಪಡಿಸಲಾಗುತ್ತದೆ.
- ಸಂದರ್ಶನ:
ಶಾರ್ಟ್ ಲಿಸ್ಟ್ ನಲ್ಲಿ ಆಯ್ಕೆಯಾದ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುತ್ತದೆ. ಸಂದರ್ಶನವು ಒಟ್ಟು 100 ಅಂಕಗಳನ್ನು ಒಳಗೊಂಡಿರುತ್ತದೆ.
- ಮೆರಿಟ್ ಪಟ್ಟಿ:
ಅಭ್ಯರ್ಥಿಗಳು ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ. ಇಬ್ಬರು ಅಭ್ಯರ್ಥಿಗಳು ಸಮಾನ ಅಂಕಗಳನ್ನು ಗಳಿಸಿದ್ದರೆ, ವಯಸ್ಸಿನಲ್ಲಿ ಹಿರಿಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.
ಪ್ರಮುಖ ದಿನಾಂಕಗಳು:
| ಪ್ರಮುಖ ಈವೆಂಟ್ | ದಿನಾಂಕ |
|---|---|
| ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ | 14-05-2026 |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 11-06-2026 |
| ಸಂದರ್ಶನ ನಡೆಯುವ ದಿನಾಂಕ | ಶೀಘ್ರದಲ್ಲಿ ಪ್ರಕಟಿಸಲಾಗುತ್ತದೆ |
ಪ್ರಮುಖ ಲಿಂಕುಗಳು:
| ಅಧಿಕೃತ ವೆಬ್ಸೈಟ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ಅಧಿಸೂಚನೆ ಪಿಡಿಎಫ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಅಂತಿಮ ತೀರ್ಮಾನ:
SBI ಪ್ರಸ್ತುತ ಸಾಲಿನಲ್ಲಿ ಸಮಕಾಲೀನ ಲೆಕ್ಕಪರಿಶೋಧಕ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ನೀವೇನಾದರೂ ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದರೆ ಇಂದೇ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ಹುದ್ದೆಯನ್ನು ತಮ್ಮದಾಗಿಸಿಕೊಳ್ಳಿ. ನೆನಪಿರಲಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಅನುಭವ ಹೊಂದಿರುವುದು ಕಡ್ಡಾಯವಾಗಿದೆ ಹಾಗೆಯೇ ಈ ಹುದ್ದೆಗಳನ್ನು ಒಪ್ಪಂದದ ಆಧಾರದ ಮೇಲೆ ನೇಮಕಮಾಡಿಕೊಳ್ಳಲಾಗುತ್ತದೆ.
ಇತರೆ ಪ್ರಮುಖ ಲಿಂಕುಗಳು:
- GESCOM: ವಿದ್ಯುತ್ ಸರಬರಾಜು ಇಲಾಖೆಯಲ್ಲಿ ಅಪ್ರೆಂಟಿಸ್ ಹುದ್ದೆಗಳ ಬೃಹತ್ ನೇಮಕಾತಿ! ಜೂನ್ 5 ಕೊನೆಯ ದಿನಾಂಕ
- Udupi Cochin: ಉಡುಪಿ ಕೊಚ್ಚಿನ್ ಶಿಪ್ಯಾರ್ಡ್ನಲ್ಲಿ ಸ್ಟೋರ್ ಕೀಪರ್ ಹುದ್ದೆಗಳ ಬೃಹತ್ ನೇಮಕಾತಿ! ಜೂನ್ 4 ಕೊನೆಯ ದಿನಾಂಕ
- NIMHANS: ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳ ನೇಮಕಾತಿ 2026 | ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಸುವರ್ಣಾವಕಾಶ!
- DCC Bank: ಜನರಲ್ ಮ್ಯಾನೇಜರ್ ಹುದ್ದೆಗಳ ಬೃಹತ್ ನೇಮಕಾತಿ 2026! 19-05-2026 ಕೊನೆಯ ದಿನಾಂಕ । ಇಂದೇ ಅಪ್ಲೈ ಮಾಡಿ
- CIL: ರೂ. 1.8 ಲಕ್ಷ ವೇತನ! ಇಂಜಿನಿಯರಿಂಗ್ ಅಭ್ಯರ್ಥಿಗಳಿಗೆ ಸರ್ಕಾರಿ ಉದ್ಯೋಗವಕಾಶ । ಕೊನೆಯ ದಿನಾಂಕ 11-06-2026