SBTSSN: ನಮಸ್ಕಾರ ಸ್ನೇಹಿತರೆ, ನೀವೇನಾದರೂ ಬಾಗಲಕೋಟೆ ಜಿಲ್ಲೆಯಲ್ಲಿ ಉದ್ಯೋಗ ಹುಡುಕುತಿದ್ದೀರಾ? ಹಾಗಿದ್ದರೆ ನಿಮಗೊಂದು ಸುವರ್ಣಾವಕಾಶ! ಬಾಗಲಕೋಟೆ ಜಿಲ್ಲೆಯ ಪ್ರತಿಷ್ಠಿತ ಎಸ್.ಬಿ ತಿಮ್ಮಾಪೂರ ಸೌಹಾರ್ದ ಸಹಕಾರ ಸಂಘವು ಮುಖ್ಯ ಕಾರ್ಯ ನಿರ್ವಾಹಕರು, ಜೂನಿಯರ್ ಅಸಿಸ್ಟೆಂಟ್, ಪಿಗ್ಮಿ ಏಜೆಂಟ್ ಸೇರಿದಂತೆ ಇನ್ನಿತರ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಪ್ರಾರಂಭಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶವಾಗಿದೆ. SSLC ಅಲ್ಲಿ ಉತ್ತೀರ್ಣರಾದ ಹಾಗೂ ಬಿಕಾಂ, ಎಂಕಾಂ ಅಥವಾ ಎಂಬಿಎ ಪದವಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು, ಅರ್ಹ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸಲು ದಿನಾಂಕ 30-04-2026 ಕೊನೆಯ ದಿನಾಂಕವಾಗಿದ್ದು, ಈ ದಿನದಂದು ಅಭ್ಯರ್ಥಿಗಳು ನೇರವಾಗಿ ಸಂಬಂಧಿಸಿದ ಕಚೇರಿಗೆ ಭೇಟಿ ನೀಡಿ ಸಂದರ್ಶನಕ್ಕೆ ಭಾಗವಹಿಸಬೇಕಾಗುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಗೆ ಈ ನೇಮಕಾತಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿ ಬೇಕಿದ್ದರೆ ಪ್ರಸ್ತುತ ಈ ಒಂದು ಲೇಖನದ ಮೂಲಕ ತಿಳಿದುಕೊಳ್ಳಬಹುದಾಗಿದೆ.

ಹುದ್ದೆಯ ಅವಲೋಕನ:
| ನೇಮಕಾತಿ ಸಂಸ್ಥೆಗಳ ಹೆಸರು | ಎಸ್. ಬಿ ತಿಮ್ಮಾಪೂರ ಸೌಹಾರ್ದ ಸಹಕಾರಿ ಸಂಘ ನಿಯಮಿತ, ಬಾಗಲಕೋಟೆ |
| ಹುದ್ದೆಗಳ ಹೆಸರು | ಮುಖ್ಯ ಕಾರ್ಯನಿರ್ವಾಹಕರು, ಜೂನಿಯರ್ ಅಸಿಸ್ಟೆಂಟ್, ಪಿಗ್ಮಿ ಏಜೆಂಟ್, ಅಟೆಂಡರ್ |
| ಹುದ್ದೆಗಳ ಸಂಖ್ಯೆ | ಒಟ್ಟು 04 ಹುದ್ದೆಗಳು |
| ಉದ್ಯೋಗ ಸ್ಥಳ | ನವನಗರ – ಬಾಗಲಕೋಟೆ |
| ಅರ್ಜಿ ಸಲ್ಲಿಸುವ ವಿಧಾನ | ಆಫ್ಲೈನ್ |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 30-04-2026 |
ಹುದ್ದೆಯ ವಿವರ:
ಎಸ್. ಬಿ ತಿಮ್ಮಾಪೂರ ಸೌಹಾರ್ದ ಸಹಕಾರಿ ಸಂಘ ನಿಯಮಿತ, ಬಾಗಲಕೋಟೆಯಲ್ಲಿ ಖಾಲಿ ಇರುವ ಹುದ್ದೆಗಳ ವಿವರ ಈ ಕೆಳಕಂಡಂತಿದೆ.
| ಹುದ್ದೆಗಳ ಹೆಸರು | ಹುದ್ದೆಗಳ ಸಂಖ್ಯೆ |
| ಮುಖ್ಯ ಕಾರ್ಯನಿರ್ವಾಹಕರು | 1 ಹುದ್ದೆ |
| ಜೂನಿಯರ್ ಅಸಿಸ್ಟೆಂಟ್ | 1 ಹುದ್ದೆ |
| ಪಿಗ್ಮಿ ಏಜೆಂಟ್ | 1 ಹುದ್ದೆ |
| ಅಟೆಂಡರ್ | 1 ಹುದ್ದೆ |
ಶೈಕ್ಷಣಿಕ ಅರ್ಹತೆ:
ಮುಖ್ಯ ಕಾರ್ಯನಿರ್ವಾಹಕ:
- ಮುಖ್ಯ ಕಾರ್ಯನಿರ್ವಾಹಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿಕಾಂ, ಎಂಕಾಂ ಅಥವಾ ಎಂಬಿಎ ಪದವಿ ಪಡೆದಿರಬೇಕು.
- ಜೊತೆಗೆ ಸಂಬಂಧಿತ ಕ್ಷೇತ್ರದಲ್ಲಿ ಕನಿಷ್ಠ 2 ರಿಂದ 5 ವರ್ಷಗಳ ಕಾಲ ಕೆಲಸದ ಅನುಭವ ಹೊಂದಿರಬೇಕು.
- ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ಜೂನಿಯರ್ ಅಸಿಸ್ಟೆಂಟ್:
- ಜೂನಿಯರ್ ಇಂಜಿನಿಯರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿಕಾಂ, ಎಂಕಾಂ ಅಥವಾ ಎಂಬಿಎ ಪದವಿ ಪಡೆದಿರಬೇಕು.
- ಅಭ್ಯರ್ಥಿಗಳು ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
- ಸಂಬಂಧಿತ ಕ್ಷೇತ್ರದಲ್ಲಿ ಅನುಭವ ಹೊಂದಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.
ಪಿಗ್ಮಿ ಏಜೆಂಟ್:
- ಪಿಗ್ನಿ ಏಜೆಂಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ SSLC ಅಲ್ಲಿ ಪಾಸ್ ಆಗಿರಬೇಕು.
- ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಅಟೆಂಡರ್:
- ಅಟೆಂಡರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ SSLC ಅಲ್ಲಿ ಪಾಸ್ ಆಗಿರಬೇಕು.
ವಯೋಮಿತಿ ವಿವರ:
ಮುಖ್ಯ ಕಾರ್ಯನಿರ್ವಾಹಕ, ಜೂನಿಯರ್ ಅಸಿಸ್ಟೆಂಟ್, ಪಿಗ್ಮಿ ಏಜೆಂಟ್ ಹಾಗೂ ಅಟೆಂಡರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷದಿಂದ ಗರಿಷ್ಟ 35 ವರ್ಷ ವಯೋಮಿತಿಯನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ ವಿವರ:
ಸರ್ಕಾರದ ನಿಯಮಗಳ ಪ್ರಕಾರ ಹಾಗೂ ಎಸ್. ಬಿ ತಿಮ್ಮಾಪೂರ ಸೌಹಾರ್ದ ಸಹಕಾರಿ ಸಂಘಗಳ ನಿಯಮಗಳ ಪ್ರಕಾರ ಮೀಸಲಾತಿ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ.
ಅರ್ಜಿ ಶುಲ್ಕ:
ಎಸ್. ಬಿ ತಿಮ್ಮಾಪೂರ ಸೌಹಾರ್ದ ಸಹಕಾರಿ ಸಂಘ ನಿಯಮಿತ ಹೊರಡಿಸಿದ ನೇಮಕಾತಿ ಅಧಿಸೂಚನೆಯಲ್ಲಿ ಯಾವುದೇ ಅರ್ಜಿ ಶುಲ್ಕದ ಬಗ್ಗೆ ನಿಖರವಾದ ಮಾಹಿತಿ ನೀಡಿಲ್ಲ. ಹಾಗಾಗಿ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದಂದು ಯಾವುದೇ ಅರ್ಜಿ ಶುಲ್ಕ ಪಾವತಿಸದೆ ನೇರವಾಗಿ ಕಚೇರಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ.
ವೇತನ ಶ್ರೇಣಿ:
ಎಸ್.ಬಿ. ತಿಮ್ಮಾಪೂರ ಸೌಹಾರ್ದ ಸಹಕಾರಿ ಸಂಘ ನಿಯಮಿತವು ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಅಭ್ಯರ್ಥಿಗಳು ಹೊಂದಿರವ ಶೈಕ್ಷಣಿಕ ಅರ್ಹತೆ, ಹುದ್ದೆಯ ಜವಾಬ್ದಾರಿಗೆ ಹಾಗೂ ಅನುಭವಗಳ ಆಧಾರದ ಮೇಲೆ ಅತ್ಯಾಕರ್ಷಕ ವೇತನವನ್ನು ನೀಡುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:
- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಮೊದಲು ಎಸ್.ಬಿ. ತಿಮ್ಮಾಪೂರ ಸೌಹಾರ್ದ ಸಹಕಾರಿ ಸಂಘ ನಿಯಮಿತದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಂಡು ಅರ್ಹತೆಯನ್ನು ಖಚಿತಪಡಿಸಿಕೊಳ್ಳಿ.
- ನಂತರ ಅಭ್ಯರ್ಥಿಗಳು ಶೈಕ್ಷಣಿಕ ಪ್ರಮಾಣಪತ್ರ, ಅನುಭವ ಪ್ರಮಾಣಪತ್ರ, ವಯಸ್ಸಿನ ಪುರಾವೆ ಹಾಗೂ ಇನ್ನಿತರ ಅಗತ್ಯ ದಾಖಲೆಗಳನ್ನು ಸಿದ್ದಪಡಿಸಿಕೊಳ್ಳಿ.
- ನಂತರ ಬಾಗಲಕೋಟೆಯ ನವನಗರದಲ್ಲಿ ಎಸ್. ಬಿ ತಿಮ್ಮಾಪೂರ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಪ್ರಧಾನ ಕಚೇರಿಗೆ ಭೇಟಿ ನೀಡಿ ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿ.
ಅರ್ಜಿ ಸಲ್ಲಿಸುವ / ಸಂದರ್ಶನ ನಡೆಯುವ ಸ್ಥಳ:
“ಸೆಕ್ಟರ್ ನಂ. 19, ನಗರಸಭೆ ಕಾಂಪ್ಲೆಕ್ಸ್, ಎ ಬ್ಲಾಕ್ ನಂ 1 ರಿಂದ 5, ಮೊದಲ ಮಹಡಿ, ಕೋರ್ಟ್ ಹತ್ತಿರ, ನವನಗರ – ಬಾಗಲಕೋಟೆ’
ಆಯ್ಕೆ ಪ್ರಕ್ರಿಯೆ:
- ಸಂದರ್ಶನ:
ಅರ್ಹ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿದ್ದು, ಇಲ್ಲಿ ಕಂಪ್ಯೂಟರ್ ಜ್ಞಾನ, ಹುದ್ದೆಗೆ ಸಂಬಂಧಿಸಿದ ವಿಷಯಗಳಲ್ಲಿ ಅಭ್ಯರ್ಥಿಗಳು ಹೊಂದಿರುವ ಜ್ಞಾನ, ಸಂವಹನ ಕಲೆ ಹಾಗೂ ಅಭ್ಯರ್ಥಿಗಳು ಹೊಂದಿರುವ ಅನುಭವವನ್ನು ಪರೀಕ್ಷಿಸಲಾಗುತ್ತದೆ.
ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ಬ್ಯಾಂಕಿಂಗ್ ವ್ಯವಹಾರಗಳಲ್ಲಿ ಅಭ್ಯರ್ಥಿಗಳು ಹೊಂದಿರುವ ತಿಳುವಳಿಕೆಯನ್ನು ಪರೀಕ್ಷಿಸಲಾಗುತ್ತದೆ. ಹಾಗೂ ಮುಖ್ಯ ಕಾರ್ಯನಿವಾಹಕ ಹುದ್ದೆಗೆ ಅಭ್ಯರ್ಥಿಗಳು ಹೊಂದಿರುವ ಆಡಳಿತಾತ್ಮಕ ಕೌಶಲ್ಯವನ್ನು ಅಳೆಯಲಾಗುತ್ತದೆ.
ಪ್ರಮುಖ ದಿನಾಂಕಗಳು:
| ಪ್ರಮುಖ ಈವೆಂಟ್ | ದಿನಾಂಕ |
|---|---|
| ನೇಮಕಾತಿ ಅಧಿಸೂಚನೆ ಹೊರಡಿಸಿದ ದಿನಾಂಕ | 24-01-2026 |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 30-04-2026 ಮಧ್ಯಾಹ್ನ 2 ಗಂಟೆ |
| ಸಂದರ್ಶನ ನಡೆಯುವ ದಿನಾಂಕ | 30-04-2026 |
| ಸಂದರ್ಶನದ ನಡೆಯುವ ಸಮಯ | ಮಧ್ಯಾಹ್ನ 2 ಗಂಟೆ ನಂತರ |
ಪ್ರಮುಖ ಲಿಂಕುಗಳು:
| ಅಧಿಕೃತ ವೆಬ್ಸೈಟ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ಅಧಿಸೂಚನೆ ಪಿಡಿಎಫ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಅಂತಿಮ ಮಾತು:
ಬಾಗಲಕೋಟೆಯ ಎಸ್. ಬಿ ತಿಮ್ಮಾಪೂರ ಸೌಹಾರ್ದ ಸಹಕಾರಿ ಸಂಘ ನಿಯಮಿತ ತಮ್ಮ ಸಂಸ್ಥೆಯಲ್ಲಿ ಖಾಲಿ ಇರುವ ಮುಖ್ಯ ಕಾರ್ಯ ನಿರ್ವಾಹಕ, ಜೂನಿಯರ್ ಅಸಿಸ್ಟೆಂಟ್, ಪಿಗ್ಮಿ ಏಜೆಂಟ್ ಹಾಗೂ ಅಟೆಂಡರ್ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಹುದ್ದೆಗೆ ಸಂಬಂಧಿಸಿದ ಅರ್ಹತೆಯನ್ನು ಖಚಿತಪಡಿಸಿಕೊಂಡು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಸಂಬಂಧಿತ ಕಚೇರಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ.
ಇತರೆ ಪ್ರಮುಖ ಲಿಂಕುಗಳು:
- Court Job : ₹69,100/- ವೇತನ! SSLC ಪಾಸ್ ಅಭ್ಯರ್ಥಿಗಳಿಗೆ ಸರ್ಕಾರಿ ಉದ್ಯೋಗಾವಕಾಶ । ಇಂದೇ ಅಪ್ಲೈ ಮಾಡಿ
- IFFCO: ₹65,000 ವೇತನ! ಗ್ರಾಜುಯೇಟ್ ಇಂಜಿನಿಯರ್ ಟ್ರೈನಿ ಹುದ್ದೆಗಳ ಭರ್ಜರಿ ನೇಮಕಾತಿ । ಏಪ್ರಿಲ್ 30 ಕೊನೆಯ ದಿನಾಂಕ
- NMPA: ₹2 ಲಕ್ಷ ವೇತನ! ನವ ಮಂಗಳೂರು ಬಂದರು ನೇಮಕಾತಿ 2026 | ಮೇ 4 ಕೊನೆಯ ದಿನ
- PACS: ಕೃಷಿ ಪತ್ತಿನ ಸಹಕಾರ ಸಂಘ ನೇಮಕಾತಿ 2026 । ಯಾವುದೇ ಲಿಖಿತ ಪರೀಕ್ಷೆ + ಅರ್ಜಿ ಶುಲ್ಕವಿಲ್ಲ! ಇಂದೇ ಅಪ್ಲೈ ಮಾಡಿ
- CUK: ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ!