ನಮಸ್ಕಾರ ಸ್ನೇಹಿತರೆ, ನೀವೇನಾದರೂ ವೈದ್ಯಕೀಯ ಕ್ಷೇತ್ರದಲ್ಲಿ ವೃತ್ತಿ ಜೀವನವನ್ನು ಪ್ರಾರಂಭಿಸಬೇಕೆಂದಿದ್ದೀರಾ? ಹಾಗಿದ್ದರೆ ನಿಮಗೊಂದು ಗುಡ್ ನ್ಯೂಸ್! ದೇಶದ ಅತ್ಯಂತ ಪ್ರತಿಷ್ಠಿತ ಹಾಗೂ ಜನಪ್ರಿಯ ಹೃದ್ರೋಗ ಸಂಸ್ಥೆಯಾಗಿರುವ ‘ಶ್ರೀ ಜಯದೇವ ಹೃದಯರಕ್ತನಾಳ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ’ಯು ಬೆಂಗಳೂರು ಮತ್ತು ಕಲಬುರಗಿ ಶಾಖೆಗಳಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಪ್ರೊಫೆಸರ್, ಅಸೋಸಿಯೇಟ್ ಪ್ರೊಫೆಸರ್, ಪ್ರೊಫೆಸರ್ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
SJICR Recruitment in Kannada
ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕಾರ್ಡಿಯಾಲಜಿ ವಿಭಾಗದಲ್ಲಿ ಡಿಎಂ, ಎಂ.ಸಿ.ಹೆಚ್, ಡಿ.ಏನ್.ಬಿ ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 79,800/- ದಿಂದ ರೂ. 2,18,200/- ವರೆಗೆ ವೇತನವನ್ನು ನೀಡಲಾಗುತ್ತದೆ.
ಕರ್ನಾಟಕದಲ್ಲಿ ವೃತ್ತಿಜೀವನವನ್ನು ಪ್ರಾರಂಭಿಸಬೇಕೆಂದಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶವಾಗಿದ್ದು, ಈ ಹುದ್ದೆಗೆ ಅರ್ಜಿ ಸಲ್ಲಿಸಲು 25-06-2026 ವರೆಗೂ ಅವಕಾಶ ಕಲ್ಪಿಸಲಾಗಿದೆ. ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಹುದ್ದೆಗೆ ಸಂಬಂಧಿಸಿದ ಎಲ್ಲ ಮಾಹಿತಿಯನ್ನು ಸಂಪೂರ್ಣವಾಗಿ ಓದಿಕೊಂಡು ನಂತರ ಅರ್ಜಿ ಸಲ್ಲಿಸಿ.

ಹುದ್ದೆಯ ಕಿರು ಪರಿಚಯ:
| ನೇಮಕಾತಿ ಸಂಸ್ಥೆ | ಶ್ರೀ ಜಯದೇವ ಹೃದಯರಕ್ತನಾಳ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ |
| ಹುದ್ದೆಯ ಹೆಸರು | ಅಸಿಸ್ಟೆಂಟ್ ಪ್ರೊಫೆಸರ್, ಪ್ರೊಫೆಸರ್, ಅಸೋಸಿಯೇಟ್ ಪ್ರೊಫೆಸರ್ |
| ಹುದ್ದೆಯ ಸಂಖ್ಯೆ | 40 ಹುದ್ದೆಗಳು |
| ಉದ್ಯೋಗ ಸ್ಥಳ | ಬೆಂಗಳೂರು, ಕಲಬುರಗಿ – ಕರ್ನಾಟಕ |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 26-06-2026 |
| ಅರ್ಜಿ ಸಲ್ಲಿಸುವ ವಿಧಾನ | ಆನ್ಲೈನ್ ಮೂಲಕ |
ಹುದ್ದೆಯ ವಿವರ:
ಶ್ರೀ ಜಯದೇವ ಹೃದಯರಕ್ತನಾಳ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯು ಪ್ರಸ್ತುತ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಹುದ್ದೆಗಳ ವಿವರ ಈ ಕೆಳಕಂಡಂತಿದೆ.
| ಹುದ್ದೆಯ ವಿವರ | ಹುದ್ದೆಗಳ ಸಂಖ್ಯೆ |
| ಪ್ರೊಫೆಸರ್ | 01 ಹುದ್ದೆ |
| ಅಸೋಸಿಯೇಟ್ ಪ್ರೊಫೆಸರ್ | 05 ಹುದ್ದೆಗಳು |
| ಅಸಿಸ್ಟೆಂಟ್ ಪ್ರೊಫೆಸರ್ | 34 ಹುದ್ದೆಗಳು |
ಶ್ರೀ ಜಯದೇವ ಹೃದಯರಕ್ತನಾಳ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯು ಒಟ್ಟು 40 ಅಸಿಸ್ಟೆಂಟ್ ಪ್ರೊಫೆಸರ್, ಪ್ರೊಫೆಸರ್, ಅಸೋಸಿಯೇಟ್ ಪ್ರೊಫೆಸರ್ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು ಈ ಹುದ್ದೆಗಳಲ್ಲಿ ಬೆಂಗಳೂರು ಶಾಖೆಗೆ 25 ಹುದ್ದೆಗಳನ್ನು ಹಾಗೂ ಕಲಬುರಗಿ ಶಾಖೆಗೆ 15 ಹುದ್ದೆಗಳನ್ನು ಹಂಚಿಕೆ ಮಾಡಲಾಗಿದೆ.
ಶೈಕ್ಷಣಿಕ ಅರ್ಹತೆ:
- ಅಸೋಸಿಯೇಟ್ ಪ್ರೊಫೆಸರ್:
ಅಸೋಸಿಯೇಟ್ ಪ್ರೊಫೆಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಿ.ಟಿ ಸರ್ಜರಿ ವಿಭಾಗದಲ್ಲಿ ಎಂ.ಸಿಹೆಚ್, ಡಾ.ಡಿಎಂಬಿ, ಡಿಎಂಬಿ ಪದವಿ ಪೂರ್ಣಗೊಳಿಸಿರಬೇಕು ಅಥವಾ ಕಾರ್ಡಿಯಾಕ್ ಅರವಳಿಕೆ ವಿಭಾಗದಲ್ಲಿ ಎಂ.ಸಿಹೆಚ್, ಡಾ.ಡಿಎಂಬಿ, ಡಿಎಂಬಿ ಪದವಿ ಪೂರ್ಣಗೊಳಿಸಿರಬೇಕು.
ಜೊತೆಗೆ ಮಾನ್ಯತೆ ಪಡೆದ ವೈದ್ಯಕೀಯ ಸಂಸ್ಥೆಯಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಎರಡು ವರ್ಷ ಕೆಲಸ ಮಾಡಿರಬೇಕು.
- ಪ್ರೊಫೆಸರ್:
ಪ್ರೊಫೆಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಿ.ಟಿ ಸರ್ಜರಿ ವಿಭಾಗದಲ್ಲಿ ಎಂ.ಸಿಹೆಚ್, ಡಾ.ಡಿಎಂಬಿ, ಡಿಎಂಬಿ ಪದವಿ ಪೂರ್ಣಗೊಳಿಸಿರಬೇಕು.
ಜೊತೆಗೆ ಮಾನ್ಯತೆ ಪಡೆದ ವೈದ್ಯಕೀಯ ಸಂಸ್ಥೆಯಲ್ಲಿ ಅಸೋಸಿಯೇಟ್ ಪ್ರೊಫೆಸರ್ ಆಗಿ ಮೂರು ವರ್ಷ ಕೆಲಸ ಮಾಡಿರಬೇಕು.
- ಅಸಿಸ್ಟೆಂಟ್ ಪ್ರೊಫೆಸರ್:
ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಿ.ಟಿ ಸರ್ಜರಿ ವಿಭಾಗದಲ್ಲಿ ಎಂ.ಸಿಹೆಚ್, ಡಾ.ಡಿಎಂಬಿ, ಡಿಎಂಬಿ ಪದವಿ ಪೂರ್ಣಗೊಳಿಸಿರಬೇಕು ಅಥವಾ ಕಾರ್ಡಿಯಾಲಜಿ ವಿಭಾಗದಲ್ಲಿ ಎಂ.ಸಿಹೆಚ್, ಡಾ.ಡಿಎಂಬಿ, ಡಿಎಂಬಿ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ ವಿವರ:
ಶ್ರೀ ಜಯದೇವ ಹೃದಯರಕ್ತನಾಳ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಈ ಕೆಳಗೆ ತಿಳಿಸಲಾದ ವಯೋಮಿತಿಯನ್ನು ಹೊಂದಿರಬೇಕು.
- ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಟ 40 ವರ್ಷ ವಯೋಮಿತಿಯನ್ನು ಹೊಂದಿರಬೇಕು.
- ಅಸೋಸಿಯೇಟ್ ಪ್ರೊಫೆಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಟ 45 ವರ್ಷ ವಯೋಮಿತಿಯನ್ನು ಹೊಂದಿರಬೇಕು.
- ಪ್ರೊಫೆಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಟ 50 ವರ್ಷ ವಯೋಮಿತಿಯನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ ವಿವರ:
ಸರ್ಕಾರದ ನಿಯಮಗಳ ಪ್ರಕಾರ ಮೀಸಲಾತಿ ವರ್ಗಗಳ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗಿದ್ದು ಅವುಗಳ ವಿವರ ಈ ಕೆಳಕಂಡಂತಿದೆ.
- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ: 5 ವರ್ಷ
- ಪ್ರವರ್ಗ -I, 2A ವರ್ಗಗಳ ಅಭ್ಯರ್ಥಿಗಳಿಗೆ: 3 ವರ್ಷ
ಅರ್ಜಿ ಶುಲ್ಕ:
ಶ್ರೀ ಜಯದೇವ ಹೃದಯರಕ್ತನಾಳ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವನ್ನು ನಿಗದಿಪಡಿಸಿಲ್ಲ. ಹಾಗಾಗಿ ಅಭ್ಯರ್ಥಿಗಳು ಉಚಿತವಾಗಿ ಸಂಬಂಧಿತ ಸಂಸ್ಥೆಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.
ವೇತನ ಶ್ರೇಣಿ:
| ಹುದ್ದೆಗಳ ಹೆಸರು | ವೇತನ ಶ್ರೇಣಿ (ಮಾಸಿಕ) |
| ಅಸಿಸ್ಟೆಂಟ್ ಪ್ರೊಫೆಸರ್ | ರೂ. 79,800/- ದಿಂದ ರೂ. 2,11,500/- |
| ಅಸೋಸಿಯೇಟ್ ಪ್ರೊಫೆಸರ್ | ರೂ. 1,31,400/- ದಿಂದ ರೂ. 2,17,100/- |
| ಪ್ರೊಫೆಸರ್ | ರೂ. 1,44,200/- ದಿಂದ ರೂ. 2,18,200/- |
ಅರ್ಜಿ ಸಲ್ಲಿಸುವ ವಿಧಾನ:
- ಅಭ್ಯರ್ಥಿಗಳು ಮೊದಲು ಶ್ರೀ ಜಯದೇವ ಹೃದಯರಕ್ತನಾಳ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಪ್ಲಿಕೇಶನ್ ಫಾರ್ಮ್ ಅನ್ನು ಡೌನ್ಲೋಡ್ ಮಾಡಿಕೊಳ್ಳಿ.
- ನಂತರ ಅಪ್ಲಿಕೇಶನ್ ಫಾರ್ಮ್ ನಲ್ಲಿ ಕೇಳಲಾದ ಎಲ್ಲ ವೈಯಕ್ತಿಕ ವಿವರ, ಶೈಕ್ಷಣಿಕ ವಿವರ, ಅನುಭವ ವಿವರಗಳನ್ನು ಭರ್ತಿ ಮಾಡಿ.
- ಅಪ್ಲಿಕೇಶನ್ ಫಾರ್ಮ್ ನಲ್ಲಿ ಪಾಸ್ ಪೋರ್ಟ್ ಅಳತೆ ಫೋಟೋ ಅಂಟಿಸಿ ಅಭ್ಯರ್ಥಿಯ ಸಹಿ ಮಾಡಿ ಶೈಕ್ಷಣಿಕ ದಾಖಲೆ, ವಯಸ್ಸಿನ ಪುರಾವೆ ಹಾಗೂ ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ.
- ಭರ್ತಿ ಮಾಡಿರುವ ಅರ್ಜಿಯನ್ನು ಸ್ಪೀಡ್ ಪೋಸ್ಟ್, ರೆಜಿಸ್ಟರ್ ಪೋಸ್ಟ್ ಮೂಲಕ ಅಥವಾ ನೇರವಾಗಿ ಈ ಕೆಳಗಿನ ವಿಳಾಸಕ್ಕೆ ಭೇಟಿ ನೀಡಿ ಸಲ್ಲಿಸಿ.
ಅರ್ಜಿ ಸಲ್ಲಿಸುವ ವಿಳಾಸ:
“ಶ್ರೀ ಜಯದೇವ ಹೃದಯರಕ್ತನಾಳ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ
ಬನ್ನೇರುಘಟ್ಟ ರಸ್ತೆ, ಬೆಂಗಳೂರು – 560069
ಆಯ್ಕೆ ಪ್ರಕ್ರಿಯೆ:
ಅಸಿಸ್ಟೆಂಟ್ ಪ್ರೊಫೆಸರ್, ಪ್ರೊಫೆಸರ್, ಅಸೋಸಿಯೇಟ್ ಪ್ರೊಫೆಸರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಪ್ರಮುಖ ದಿನಾಂಕಗಳು:
| ಪ್ರಮುಖ ಈವೆಂಟ್ | ದಿನಾಂಕ |
|---|---|
| ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ | 09-06-2026 |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 25-06-2026 |
ಪ್ರಮುಖ ಲಿಂಕುಗಳು:
| ಅಧಿಕೃತ ವೆಬ್ಸೈಟ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಹುದ್ದೆಗೆ ಸಂಬಂಧಿಸಿದ ಅಧಿಸೂಚನೆ ಪಿಡಿಎಫ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಅಪ್ಲಿಕೇಶನ್ ಫಾರ್ಮ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಅಂತಿಮ ತೀರ್ಮಾನ:
ಶ್ರೀ ಜಯದೇವ ಹೃದಯರಕ್ತನಾಳ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯು ಅಸಿಸ್ಟೆಂಟ್ ಪ್ರೊಫೆಸರ್, ಅಸೋಸಿಯೇಟ್ ಪ್ರೊಫೆಸರ್, ಪ್ರೊಫೆಸರ್ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಈನೀವೆನಾದರೂ ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸಿದರೆ ಹುದ್ದೆಗೆ ಸಂಬಂಧಿಸಿದ ಅರ್ಹತಾ ಮಾನದಂಡಗಳನ್ನು ಪೂರೈಸುತ್ತೇವೆಯೋ?ಇಲ್ಲವೋ? ಎಂದು ಖಚಿತಪಡಿಸಿಕೊಂಡು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಸಂಬಂಧಿತ ಸಂಸ್ಥೆಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ.
ಪ್ರಮುಖ ಲಿಂಕುಗಳು:
| Whatsapp Group Link | Click Here |
| Telegram Group Link | Click Here |
| Instagram Link | Click Here |
ಇತರೆ ಪ್ರಮುಖ ಲಿಂಕುಗಳು
- KMF SHIMUL: ರೂ. 1,55,200/- ವೇತನ! ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗದಲ್ಲಿ ಭರ್ಜರಿ ಉದ್ಯೋಗಾವಕಾಶ । ಜುಲೈ 14 ಕೊನೆಯ ದಿನಾಂಕ
- DC Office: ಹಾವೇರಿ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಸರ್ಕಾರಿ ಉದ್ಯೋಗವಕಾಶ! ಯಾವುದೇ ಅರ್ಜಿ ಶುಲ್ಕ + ಲಿಖಿತ ಪರೀಕ್ಷೆ ಇಲ್ಲ
- Central Bank : ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 2026: 4,500 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ!
- Paramedical : ರೂ. 92,300/- ವೇತನ! ಪ್ಯಾರಾ ಮೆಡಿಕಲ್ ಸ್ಟಾಫ್ ಹುದ್ದೆಗಳ ನೇಮಕಾತಿ 2026 । ಜುಲೈ 7 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
- KPCL: ರೂ. 65,000/- ವೇತನ! ಕರ್ನಾಟಕ ವಿದ್ಯುತ್ ನಿಗಮ ನಿಯಮಿತದಲ್ಲಿ ಭರ್ಜರಿ ನೇಮಕಾತಿ 2026 । ಜೂನ್ 22 ಕೊನೆಯ ದಿನಾಂಕ