SSC Application: ರೂ. 81,100/ ವೇತನ! ಸಿಬ್ಬಂದಿ ಆಯ್ಕೆ ಆಯೋಗದಲ್ಲಿ ಬೃಹತ್ ನೇಮಕಾತಿ 2026 । ಪದವೀಧರರಿಗೆ ಸುವರ್ಣಾವಕಾಶ!

ಡಿಗ್ರಿ ಮುಗಿಸಿ ಕೇಂದ್ರ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್! ಭಾರತ ಸರ್ಕಾರದ ಪ್ರತಿಷ್ಠಿತ ಸ್ಟಾಫ್ ಸೆಲೆಕ್ಷನ್ ಕಮಿಷನ್ ಸಂಸ್ಥೆಯು ಇಲ್ಲಿ ಖಾಲಿ ಇರುವ ಸೀನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್/ ಅಪ್ಪರ್ ಡಿವಿಷನ್ ಕ್ಲರ್ಕ್, ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್/ ಲೋವರ್ ಡಿವಿಷನ್ ಕ್ಲರ್ಕ್ ಹುದ್ದೆಗಳ ಭರ್ತಿಗೆ ಹೊಚ್ಚ ಹೊಸ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

SSC Recruitment 2026


SSC ಅಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ದಿನಾಂಕ 05-06-2026 ರಿಂದ ಆರಂಭಗೊಂಡಿದ್ದು, 26-06-2026 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಕೇಂದ್ರ ಸರ್ಕಾರದ ಅಡಿಯಲ್ಲಿ ಸ್ಥಿರ ಹಾಗೂ ಉತ್ತಮ ವೇತನವಿರುವ ವೃತ್ತಿಜೀವನವನ್ನು ಕಂಡುಕೊಳ್ಳಬೇಕೆಂದಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶವಾಗಿದೆ.

ಗರಿಷ್ಟ 45-50 ವರ್ಷ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಪ್ರಸ್ತುತ ಲೇಖನದಲ್ಲಿ ಹುದ್ದೆಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ನೀಡಲಾಗಿದೆ. ಅರ್ಹ ಅಭ್ಯರ್ಥಿಗಳು ಈ ಎಲ್ಲ ಮಾಹಿತಿಯನ್ನು ಕಂಪ್ಲೀಟ್ ಆಗಿ ಓದಿಕೊಂಡು ನಂತರ ಅರ್ಜಿ ಸಲ್ಲಿಸಬಹುದಾಗಿದೆ.

SSC Application

ಹುದ್ದೆಯ ಅವಲೋಕನ:

ನೇಮಕಾತಿ ಸಂಸ್ಥೆಯ ಹೆಸರು ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC)
ಹುದ್ದೆಯ ಹೆಸರು ಸೀನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್/ ಅಪ್ಪರ್ ಡಿವಿಷನ್ ಕ್ಲರ್ಕ್, ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್/ ಲೋವರ್ ಡಿವಿಷನ್ ಕ್ಲರ್ಕ್
ಹುದ್ದೆಯ ಸಂಖ್ಯೆ ಒಟ್ಟು 376 ಹುದ್ದೆಗಳು
ಉದ್ಯೋಗ ಸ್ಥಳ ಅಖಿಲ ಭಾರತ
ಅರ್ಜಿ ಸಲ್ಲಿಸುವ ವಿಧಾನ ಆನ್ಲೈನ್ ಮೂಲಕ

ಹುದ್ದೆಯ ಸಂಕ್ಷಿಪ್ತ ವಿವರ:

ಸ್ಟಾಫ್ ಸೆಲೆಕ್ಷನ್ ಕಮಿಷನ್ ಪ್ರಸ್ತುತ ನೇಮಕಾತಿ ಅಧಿಸೂಚನೆಯಲ್ಲಿ ಸೀನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್/ ಅಪ್ಪರ್ ಡಿವಿಷನ್ ಕ್ಲರ್ಕ್, ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್/ ಲೋವರ್ ಡಿವಿಷನ್ ಕ್ಲರ್ಕ್ ಸೇರಿದಂತೆ ಒಟ್ಟು 376 ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಪಿಯೂಸಿ ಅಥವಾ ಯಾವುದೇ ವಿಷಯದಲ್ಲಿ ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ. 25,500/- ರಿಂದ ರೂ. 81,100/- ವರೆಗೆ ವೇತನವನ್ನು ನೀಡಲಾಗುತ್ತದೆ.

ಹುದ್ದೆಯ ವಿವರ:

ಸಿಬ್ಬಂದಿ ಆಯ್ಕೆ ಆಯೋಗವು ಪ್ರಸ್ತುತ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಹುದ್ದೆಗಳ ವಿವರ ಈ ಕೆಳಕಂಡಂತಿದೆ,

ಹುದ್ದೆಗಳ ವಿವರ ಹುದ್ದೆಗಳ ಸಂಖ್ಯೆ
ಸೀನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್/ ಅಪ್ಪರ್ ಡಿವಿಷನ್ ಕ್ಲರ್ಕ್227 ಹುದ್ದೆಗಳು
ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್/ ಲೋವರ್ ಡಿವಿಷನ್ ಕ್ಲರ್ಕ್149 ಹುದ್ದೆಗಳು

ಶೈಕ್ಷಣಿಕ ಅರ್ಹತೆ:

  • ಸೀನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್/ ಅಪ್ಪರ್ ಡಿವಿಷನ್ ಕ್ಲರ್ಕ್:

ಸೀನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್/ ಅಪ್ಪರ್ ಡಿವಿಷನ್ ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪೂರ್ಣಗೊಳಿಸಿರಬೇಕು.

  • ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್/ ಲೋವರ್ ಡಿವಿಷನ್ ಕ್ಲರ್ಕ್:

ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್/ ಲೋವರ್ ಡಿವಿಷನ್ ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ PUC ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು.

ವಯೋಮಿತಿ ವಿವರ:

  • ಸೀನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್/ ಅಪ್ಪರ್ ಡಿವಿಷನ್ ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಟ 50 ವರ್ಷ ವಯೋಮಿತಿಯನ್ನು ಹೊಂದಿರಬೇಕು.
  • ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್/ ಲೋವರ್ ಡಿವಿಷನ್ ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಟ 45 ವರ್ಷ ವಯೋಮಿತಿಯನ್ನು ಹೊಂದಿರಬೇಕು.

ವಯೋಮಿತಿ ಸಡಿಲಿಕೆ:

  • ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ: 5 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ:

ಸ್ಟಾಫ್ ಸೆಲೆಕ್ಷನ್ ಕಮಿಷನ್ ಪ್ರಸ್ತುತ ನೇಮಕಾತಿ ಅಧಿಸೂಚನೆಯಲ್ಲಿ ಯಾವುದೇ ಅರ್ಜಿ ಶುಲ್ಕವನ್ನು ನಿಗದಿಪಡಿಸಿಲ್ಲ ಹಾಗಾಗಿ ಅಭ್ಯರ್ಥಿಗಳು ಉಚಿತವಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ವೇತನ ಶ್ರೇಣಿ:

  • ಸೀನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್/ ಅಪ್ಪರ್ ಡಿವಿಷನ್ ಕ್ಲರ್ಕ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ. 25,500/- ದಿಂದ ರೂ. 81,100/- ವರೆಗೆ ವೇತನವನ್ನು ನೀಡಲಾಗುತ್ತದೆ.
  • ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್/ ಲೋವರ್ ಡಿವಿಷನ್ ಕ್ಲರ್ಕ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 19,900/- ದಿಂದ ರೂ. 63,200/- ವರೆಗೆ ವೇತನವನ್ನು ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:

  • ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು SSC ಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ, ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಳ್ಳಿ.
  • ಸೀನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್/ ಅಪ್ಪರ್ ಡಿವಿಷನ್ ಕ್ಲರ್ಕ್, ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್/ ಲೋವರ್ ಡಿವಿಷನ್ ಕ್ಲರ್ಕ್ ಹುದ್ದೆಗಳಿಗೆ ಸಂಬಂಧಿಸಿದ ಆನ್ಲೈನ್ ಅಪ್ಲಿಕೇಶನ್ ಲಿಂಕ್ ಅನ್ನು ಕ್ಲಿಕ್ ಮಾಡಿ.
  • ಹೊಸ ಬಳಕೆದಾರರಾಗಿದ್ದರೆ, ರಿಜಿಸ್ಟ್ರೇಷನ್ ಪ್ರಕ್ರಿಯೆ ಪೂರ್ಣಗೊಳಿಸಿ.
  • ನಂತರ ಹುದ್ದೆಗೆ ಸಂಬಂಧಿಸಿದ ಅಫ್ಲಿಕೇಷನ್ ಫಾರ್ಮ್ ನಲ್ಲಿ ಶೈಕ್ಷಣಿಕ ವಿವರ, ವಯೋಮಿತಿ ವಿವರ, ಹಾಗೂ ಇನ್ನಿತರ ಅಗತ್ಯ ವಿವರಗಳನ್ನು ಭರ್ತಿ ಮಾಡಿ.
  • ನಂತರ ಅಭ್ಯರ್ಥಿಗಳ ಆಧಾರ್ ಕಾರ್ಡ್, ಶೈಕ್ಷಣಿಕ ಪ್ರಮಾಣಪತ್ರ, ಅಭ್ಯರ್ಥಿಗಳ ಸಹಿ, ಇತ್ತೀಚಿನ ಪಾಸ್ ಪೋರ್ಟ್ ಅಳತೆಯ ಫೋಟೋ ಸೇರಿದಂತೆ ಇನ್ನಿತರ ಎಲ್ಲಾ ದಾಖಲೆಗಳನ್ನು ಅಪ್ಲೋಡ್ ಮಾಡಿ.
  • ಭರ್ತಿ ಮಾಡಿರುವ ಎಲ್ಲಾ ವಿವರಗಳು ಸರಿ ಇದೆಯೇ ಎಂದು ಖಚಿತಪಡಿಸಿಕೊಂಡು ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.
  • ನಂತರ ಕಡ್ಡಾಯವಾಗಿ ಅರ್ಜಿ ನಮೂನೆಯ ಪ್ರಿಂಟ್ ತೆಗೆದುಕೊಳ್ಳಿ.

ಹಾರ್ಡ್ ಕಾಪಿ ಸಲ್ಲಿಸುವ ವಿಳಾಸ:

ಅರ್ಹ ಅಭ್ಯರ್ಥಿಗಳು ಯಶಸ್ವಿಯಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿದ ನಂತರ ಪ್ರಿಂಟ್ ತೆಗೆದುಕೊಂಡ ಅರ್ಜಿ ನಮೂನೆಯನ್ನು ಅಗತ್ಯ ಶೈಕ್ಷಣಿಕ ಪ್ರಮಾಣಪತ್ರಗಳೊಂದಿಗೆ ಈ ಕೆಳಗೆ ನೀಡಲಾದ ವಿಳಾಸಕ್ಕೆ ಸಲ್ಲಿಸಿ.

ಪ್ರಾದೇಶಿಕ ನಿರ್ದೇಶಕರು,

ಸಿಬ್ಬಂದಿ ಆಯ್ಕೆ ಆಯೋಗ, (ಉತ್ತರ ಪ್ರದೇಶ)

ಬ್ಲಾಕ್ ಸಂಖ್ಯೆ 12, ಸಿಜಿಒ ಕಾಂಪ್ಲೆಕ್ಸ್, ಲೋಧಿ ರಸ್ತೆ,

ನವದೆಹಲಿ – 110 003

ಆಯ್ಕೆ ಪ್ರಕ್ರಿಯೆ:

  • ಪತ್ರಿಕೆ -I (ಕಂಪ್ಯೂಟರ್ ಆಧಾರಿತ ಪರೀಕ್ಷೆ):

ಅಭ್ಯರ್ಥಿಗಳಿಗೆ ಮೊದಲ ಹಂತದಲ್ಲಿ ಕಂಪ್ಯೂಟರ್ ಆಧಾರಿತ ಆನ್ಲೈನ್ ಪರೀಕ್ಷೆಯನ್ನು ನಡೆಸಲಾಗುತ್ತದೆ. ಇದು ರೀಸನಿಂಗ್, ಮಾಥ್ಸ್, ಜೆನರಲ್ ನಾಲೆಜ್ ಹಾಗೂ ಇಂಗ್ಲಿಷ್ ಭಾಷೆಗಳನ್ನು ಒಳಗೊಂಡ ವಸ್ತುನಿಷ್ಠ ಪರೀಕ್ಷೆಯಾಗಿದೆ.

  • ಪತ್ರಿಕೆ -II (ಕಂಪ್ಯೂಟರ್ ಆಧಾರಿತ ಪರೀಕ್ಷೆ):

ಮೊದಲ ಪರಿಕ್ಷೆಯಲ್ಲಿ ಅರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಎರಡನೇ ಹಂತದ ಪರೀಕ್ಷೆಯನ್ನು ನಡೆಸಲಾಗುತ್ತದೆ. ಈ ಹಂತದಲ್ಲಿ ಸೇವಾ ಸಂಬಂಧಿತ ಪರಿಕಲ್ಪನೆಗಳು ಹಾಗೂ ಭಾಷಾ ಪ್ರಾವೀಣ್ಯತೆಯನ್ನು ಗುರಿಯಾಗಿಸಿಕೊಂಡು ಆನ್ಲೈನ್ ಪರೀಕ್ಷೆಯನ್ನು ನಡೆಸಲಾಗುತ್ತದೆ.

  • ದಾಖಲಾತಿ ಪರೀಶೀಲನೆ:

ಎರಡನೇ ಹಂತದಲ್ಲಿನ ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸಿ ಶಾರ್ಟ್ ಲಿಸ್ಟ್ ಪಟ್ಟಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳನ್ನು ಅಭ್ಯರ್ಥಿಗಳು ಹೊಂದಿರುವ ಶೈಕ್ಷಣಿಕ ಅರ್ಹತೆ ದಾಖಲೆಗಳು ಹಾಗೂ ಇನ್ನಿತರ ಅಗತ್ಯ ದಾಖಲೆಗಳನ್ನು ಪರಿಶೀಲಿಸಲು ಕರೆಯಲಾಗುತ್ತದೆ.

ಪ್ರಮುಖ ದಿನಾಂಕಗಳು:

ಪ್ರಮುಖ ಈವೆಂಟ್ ದಿನಾಂಕ
ಅಧಿಕೃತ ಅಧಿಸೂಚನೆ ಹೊರಡಿಸಿದ ದಿನಾಂಕ 05-06-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 26-06-2026

ಪ್ರಮುಖ ಲಿಂಕುಗಳು:

ಅಧಿಕೃತ ವೆಬ್‌ಸೈಟ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಅಧಿಸೂಚನೆ ಪಿಡಿಎಫ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸುವ ಲಿಂಕ್ಇಲ್ಲಿ ಕ್ಲಿಕ್ ಮಾಡಿ

ಅಂತಿಮ ತೀರ್ಮಾನ:

ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಒಟ್ಟು 376 ಅಪ್ಪರ್ ಡಿವಿಷನ್ ಕ್ಲರ್ಕ್ ಹಾಗೂ ಲೋವರ್ ಡಿವಿಷನ್ ಕ್ಲರ್ಕ್ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಕೇಂದ್ರ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಪದವೀಧರರು ಹಾಗೂ PUC ಪಾಸ್ ಅಭ್ಯರ್ಥಿಗಳಿಗೆ ಉತ್ತಮ ಅವಕಾಶವಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಹುದ್ದೆಗೆ ಸಂಬಂಧಿಸಿದ ಅರ್ಹತೆಗಳನ್ನು ಖಚಿತಪಡಿಸಿಕೊಂಡು ನಿಗದಿತ ದಿನಾಂಕದೊಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.


ಪ್ರಮುಖ ಲಿಂಕುಗಳು:

Whatsapp Group Link Click Here
Telegram Group Link Click Here
Instagram Link Click Here

ಇತರೆ ಪ್ರಮುಖ ಲಿಂಕುಗಳು:

Leave a Comment