SSC CGL: ರೂ. 1,51,100/- ವೇತನ! ಸ್ಟಾಫ್ ಸೆಲೆಕ್ಷನ್ ಕಮಿಷನ್ ಅಲ್ಲಿ 12,256 ಹುದ್ದೆಗಳ ಬೃಹತ್ ನೇಮಕಾತಿ । ಜೂನ್ 22 ಕೊನೆಯ ದಿನಾಂಕ

ನಮಸ್ಕಾರ ಸ್ನೇಹಿತರೆ, ಸ್ಟಾಫ್ ಸೆಲೆಕ್ಷನ್ ಕಮಿಷನ್ ಕೇಂದ್ರ ಸರ್ಕಾರದ ವಿವಿಧ ಇಲಾಖೆಯಲ್ಲಿ, ಸಚಿವಾಲಯದಲ್ಲಿ ಹಾಗೂ ಸಾಂವಿಧಾನಿಕ ಸಂಸ್ಥೆಯಲ್ಲಿ ಖಾಲಿ ಇರುವ ಒಟ್ಟು 12,256 ಗ್ರೂಪ್ ಬಿ ಹಾಗೂ ಗ್ರೂಪ್ ಸಿ ಹುದ್ದೆಗಳ ಭರ್ತಿಗೆ ಕಂಬೈನ್ಡ್ ಗ್ರ್ಯಾಜುಯೆಟ್ ಲೆವೆಲ್ ಪರೀಕ್ಷೆಯನ್ನು ನಡೆಸಲು ಮುಂದಾಗಿದ್ದು, ಹೊಚ್ಚ ಹೊಸ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ.

SSC CGL Recruitment in Kannada

ಇಲ್ಲಿ ಅಸಿಸ್ಟೆಂಟ್ ಆಡಿಟ್ ಆಫೀಸರ್, ಇನ್ಸ್ಪೆಕ್ಟರ್, ಸಬ್ ಇನ್ಸ್ಪೆಕ್ಟರ್, ಆಡಿಟರ್, ಟ್ಯಾಕ್ಸ್ ಅಸಿಸ್ಟೆಂಟ್, ಅಕೌಂಟೆಂಟ್ ಸೇರಿದಂತೆ ಇನ್ನಿತರ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಲಾಗಿದ್ದು, ಯಾವುದೇ ವಿಷಯದಲ್ಲಿ ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳಿಗೆ ಒಂದೊಂದು ಸುವರ್ಣಾವಕಾಶವಾಗಿದೆ.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಗೆ ದಿನಾಂಕ 22-06-2026 ರ ವರೆಗೂ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಒಟ್ಟು ಎಷ್ಟು ಹುದ್ದೆಗಳು ಖಾಲಿ ಇದೆ? ಈ ಹುದ್ದೆಗೆ ಅರ್ಜಿ ಸಲ್ಲಿಸುವುದು ಹೇಗೆ? ವಯೋಮಿತಿ ಎಷ್ಟು? ಎನ್ನುವುದನ್ನು ಈ ಕೆಳಗಿನ ಹಂತದಲ್ಲಿ ತಿಳಿದುಕೊಳ್ಳೋಣ.

SSC CGL

ಹುದ್ದೆಯ ಕಿರು ವಿಮರ್ಶೆ:

ನೇಮಕಾತಿ ಸಂಸ್ಥೆಯ ಹೆಸರು ಸ್ಟಾಫ್ ಸೆಲೆಕ್ಷನ್ ಕಮಿಷನ್
ಪರೀಕ್ಷೆಯ ಹೆಸರು ಕಂಬೈನ್ಡ್ ಗ್ರ್ಯಾಜುಯೆಟ್ ಲೆವೆಲ್ ಎಕ್ಸಾಮಿನೇಷನ್
ಹುದ್ದೆಗಳ ಹೆಸರು ಅಸಿಸ್ಟೆಂಟ್ ಆಡಿಟ್ ಆಫೀಸರ್, ಇನ್ಸ್ಪೆಕ್ಟರ್, ಸಬ್ ಇನ್ಸ್ಪೆಕ್ಟರ್, ಆಡಿಟರ್, ಟ್ಯಾಕ್ಸ್ ಅಸಿಸ್ಟೆಂಟ್, ಅಕೌಂಟೆಂಟ್ ಹಾಗೂ ವಿವಿಧ ಹುದ್ದೆಗಳು
ಹುದ್ದೆಗಳ ಸಂಖ್ಯೆ ಒಟ್ಟು 12,256 ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ ಆನ್ಲೈನ್ ಮೂಲಕ
ಉದ್ಯೋಗ ಸ್ಥಳ ಅಖಿಲ ಭಾರತ

ಹುದ್ದೆಯ ಸಂಕ್ಷಿಪ್ತ ಮಾಹಿತಿ:

ಸ್ಟಾಫ್ ಸೆಲೆಕ್ಷನ್ ಕಮಿಷನ್ ಕಂಬೈನ್ಡ್ ಗ್ರ್ಯಾಜುಯೆಟ್ ಲೆವೆಲ್ ಎಕ್ಸಾಮಿನೇಷನ್ ಮೂಲಕ ಒಟ್ಟು 12,256 ಅಸಿಸ್ಟೆಂಟ್ ಆಡಿಟ್ ಆಫೀಸರ್, ಇನ್ಸ್ಪೆಕ್ಟರ್, ಸಬ್ ಇನ್ಸ್ಪೆಕ್ಟರ್, ಆಡಿಟರ್, ಟ್ಯಾಕ್ಸ್ ಅಸಿಸ್ಟೆಂಟ್, ಅಕೌಂಟೆಂಟ್ ಹಾಗೂ ಇನ್ನು ವಿವಿಧ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪೂರ್ಣಗೊಳಿಸಿದ 18 ರಿಂದ 32 ವರ್ಷ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಯ ವಿವರ:

ಕೇಂದ್ರ ಸರ್ಕಾರದ ವಿವಿಧ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ವಿವರ ಈ ಕೆಳಕಂಡಂತಿದೆ.

  • ಅಸಿಸ್ಟೆಂಟ್ ಸೆಕ್ಷನ್ ಆಫೀಸರ್
  • ಅಸಿಸ್ಟೆಂಟ್ ಆಡಿಟ್ ಆಫೀಸರ್
  • ಅಸಿಸ್ಟೆಂಟ್ ಎನ್ಫೋರ್ಸ್ಮೆಂಟ್ ಆಫೀಸರ್
  • ಆಡಿಟರ್ ಮತ್ತು ಅಕೌಂಟೆಂಟ್
  • ಇನ್ಕಮ್ ಟ್ಯಾಕ್ಸ್ ಇನ್ಸ್ಪೆಕ್ಟರ್
  • ಇನ್ಸ್ಪೆಕ್ಟರ್ ಪೋಸ್ಟ್
  • ಡಿವಿಜನಲ್ ಅಕೌಂಟೆಂಟ್
  • ಟ್ಯಾಕ್ಸ್ ಅಸಿಸ್ಟೆಂಟ್
  • ಪ್ರಿವೆಂಟಿವ್ ಆಫೀಸರ್ ಇನ್ಸ್ಪೆಕ್ಟರ್
  • ಸೆಂಟ್ರಲ್ ಎಕ್ಸೈಸ್ ಇನ್ಸ್ಪೆಕ್ಟರ್
  • ಸಬ್ ಇನ್ಸ್ಪೆಕ್ಟರ್
  • ಪೋಸ್ಟಲ್ ಅಸಿಸ್ಟೆಂಟ್ / ಸರ್ಟಿನ್ಗ್ ಅಸಿಸ್ಟೆಂಟ್

ಶೈಕ್ಷಣಿಕ ಅರ್ಹತೆ:

  • ಕೇಂದ್ರ ಸರ್ಕಾರದ ವಿವಿಧ ವಿಭಾಗದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ಪೂರ್ಣಗೊಳಿಸಿರಬೇಕು.
  • ಸ್ಟ್ಯಾಟಿಸ್ಟಿಕಲ್ ಇನ್ವೆಸ್ಟಿಗೇಟರ್ ಗ್ರೇಡ್ II ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸ್ಟಾಟಿಸ್ಟಿಕ್ಸ್, ಗಣಿತ ಅರ್ಥಶಾಸ್ತ್ರ ಹಾಗೂ ಕಂಪ್ಯೂಟರ್ ಸೈನ್ಸ್ ವಿಷಯದಲ್ಲಿ ಪದವಿ ಪಡೆದಿರಬೇಕು.
  • ಜೂನಿಯರ್ ಸ್ಟ್ಯಾಟಿಸ್ಟಿಕಲ್ ಆಫಿಸರ್ ಹುದ್ದೆಗಳಿಗೆ ಯಾವುದೇ ಪದವಿಯೊಂದಿಗೆ ದ್ವಿತೀಯ PUC ಮಟ್ಟದಲ್ಲಿ ಗಣಿತ ವಿಷಯದಲ್ಲಿ ಕನಿಷ್ಠ 60% ಅಂಕಗಳನ್ನು ಪಡೆದಿರಬೇಕು ಅಥವಾ ಪದವಿ ಮಟ್ಟದಲ್ಲಿ ಸ್ಟಾಟಿಸ್ಟಿಕ್ ವಿಷಯವನ್ನು ಒಂದು ಐಚ್ಚಿಕ ವಿಷಯವಾಗಿ ಓದಿರಬೇಕು.

ವಯೋಮಿತಿ ಸಡಿಲಿಕೆ ವಿವರ:

ಕೇಂದ್ರ ಸರ್ಕಾರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅನುಗುಣವಾಗಿ ಕನಿಷ್ಠ 18 ವರ್ಷ ಹಾಗೂ ಗರಿಷ್ಟ 27 ರಿಂದ 32 ವರ್ಷ ವಯೋಮಿತಿಯನ್ನು ಹೊಂದಿರಬೇಕು. ಅಭ್ಯರ್ಥಿಗಳ ವಯೋಮಿತಿಯನ್ನು 01-08-2026 ಕ್ಕೆ ಅನ್ವಯವಾಗುವಂತೆ ಲೆಕ್ಕ ಹಾಕಲಾಗುತ್ತದೆ.

ವಯೋಮಿತಿ ಸಡಿಲಿಕೆ ವಿವರ:

ಸರ್ಕಾರದ ನಿಯಮಗಳ ಪ್ರಕಾರ ಮೀಸಲಾತಿ ವರ್ಗಗಳ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ.

  • ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ 5 ವರ್ಷ
  • ಇತರ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷ
  • PwBD ಸಾಮಾನ್ಯ ವರ್ಗಗಳ ಅಭ್ಯರ್ಥಿಗಳಿಗೆ 10 ವರ್ಷ
  • PwBD ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 12 ವರ್ಷ
  • PwBD ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ 15 ವರ್ಷ
  • ಮಾಜಿ ಸೈನಿಕ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ:

  • ಸಾಮಾನ್ಯ ಹಾಗೂ ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ. 100/-
  • ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮಾಜಿ ಸೈನಿಕ, ಅಂಗವಿಕಲ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
  • ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಆನ್ಲೈನ್ ಪಾವತಿ ಮೂಲಕ ನೆಟ್ ಬ್ಯಾಂಕಿಂಗ್, ಭೀಮ್ UPI, ರೂಪೇ ಡೆಬಿಟ್ ಕಾರ್ಡ್, ಮಾಸ್ಟರ್ ಕಾರ್ಡ್ ಬಳಸಿ ಪಾವತಿಸಬೇಕಾಗುತ್ತದೆ.

ವೇತನ ಶ್ರೇಣಿ:

ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ವೇತನವನ್ನು ನಿಗದಿಪಡಿಸಲಾಗುತ್ತದೆ. ಅವುಗಳ ವಿವರ ಈ ಕೆಳಕಂಡಂತಿದೆ.

ವಿವಿಧ ಪೇ ಲೆವೆಲ್ಸ್ ವೇತನ ಶ್ರೇಣಿ
ಪೇ ಲೆವೆಲ್ 4₹25,500 – ₹81,100
ಪೇ ಲೆವೆಲ್ 5₹29,200 – ₹92,300
ಪೇ ಲೆವೆಲ್ 6₹35,400 – ₹1,12,400
ಪೇ ಲೆವೆಲ್ 7₹44,900 – ₹1,42,400
ಪೇ ಲೆವೆಲ್ 8 ₹47,600 – ₹1,51,100

ಅರ್ಜಿ ಸಲ್ಲಿಸುವ ವಿಧಾನ:

  • ಆಸಕ್ತ ಅಭ್ಯರ್ಥಿಗಳು ಸ್ಟಾಫ್ ಸೆಲೆಕ್ಷನ್ ಕಮಿಷನ್ ನ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಮುಖಪುಟದಲ್ಲಿ ಕಾಣುವ ಬಟನ್ ಕ್ಲಿಕ್ ಮಾಡಿ ಒನ್ ಟೈಮ್ ರಿಜಿಸ್ಟ್ರೇಷನ್ ಪ್ರಕ್ರಿಯೆ ಪೂರ್ಣಗೊಳಿಸಿ.
  • ಒನ್ ಟೈಮ್ ರಿಜಿಸ್ಟ್ರೇಷನ್ ಪ್ರಕ್ರಿಯೆ ಪೂರ್ಣಗೊಳಿಸುವಾಗ ನಿಮ್ಮ ವೈಯಕ್ತಿಕ ವಿವರ ಹಾಗೂ ಮೊಬೈಲ್ ನಂಬರ್ ಹಾಗೂ ಇಮೇಲ್ ಐಡಿ ಬಳಸಿ ರಿಜಿಸ್ಟ್ರೇಷನ್ ಪ್ರೋಸೆಸ್ ಪೂರ್ಣಗೊಳಿಸಿ.
  • ನಂತರ ರಿಜಿಸ್ಟರ್ ನಂಬರ್ ಹಾಗೂ ಪಾಸ್ ವರ್ಡ್ ಬಳಸಿ ಲಾಗಿನ್ ಆಗಿ ಕಂಬೈನ್ಡ್ ಗ್ರ್ಯಾಜುಯೆಟ್ ಲೆವೆಲ್ ಎಕ್ಸಾಮಿನೇಷನ್ 2026 ವಿಭಾಗದಲ್ಲಿನ ಲಿಂಕ್ ಕ್ಲಿಕ್ ಮಾಡಿ.
  • ನಂತರ ಹುದ್ದೆಗೆ ಸಂಬಂಧಿಸಿದ ಅಪ್ಲಿಕೇಶನ್ ಫಾರ್ಮ್ ನಲ್ಲಿ ಅಗತ್ಯ ವಿವರಗಳನ್ನು ಭರ್ತಿ ಮಾಡಿ, ಅಭ್ಯರ್ಥಿಗಳ ಆಧಾರ್ ಕಾರ್ಡ್, ಶೈಕ್ಷಣಿಕ ಪ್ರಮಾಣಪತ್ರ, ಅಭ್ಯರ್ಥಿಗಳ ಸಹಿ, ಇತ್ತೀಚಿನ ಪಾಸ್ ಪೋರ್ಟ್ ಅಳತೆಯ ಫೋಟೋ ಸೇರಿದಂತೆ ಇನ್ನಿತರ ಎಲ್ಲಾ ದಾಖಲೆಗಳನ್ನು ಅಪ್ಲೋಡ್ ಮಾಡಿ.
  • ಭರ್ತಿ ಮಾಡಿರುವ ಎಲ್ಲಾ ವಿವರಗಳು ಸರಿ ಇದೆಯೇ ಎಂದು ಖಚಿತಪಡಿಸಿಕೊಂಡು ನಿಮ್ಮ ವರ್ಗಕ್ಕೆ ಸಂಬಂಧಿಸಿದ ಅರ್ಜಿ ಶುಲ್ಕವನ್ನು ಪಾವತಿಸಿ ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.

ಆಯ್ಕೆ ಪ್ರಕ್ರಿಯೆ:

  • ಟೈಯರ್ – I ಪರೀಕ್ಷೆ:

ಮೊದಲ ಹಂತದಲ್ಲಿ ಟೈಯರ್ I ಪರೀಕ್ಷೆಯನ್ನು ನಡೆಸಲಾಗುತ್ತದೆ. ಇದು ಕೇವಲ ಅರ್ಹತಾ ಪರೀಕ್ಷೆಯಾಗಿದ್ದು, ತಲಾ 25 ಅಂಕಗಳಂತೆ ಇದರಲ್ಲಿ ಜನರಲ್ ಅವೇರ್ನೆಸ್, ಕ್ವಾನ್ಟಿಟೇಟಿವ್ ಆಪ್ಟಿಟ್ಯೂಡ್, ಜನರಲ್ ಇಂಟಲಿಜೆನ್ಸ್ ಹಾಗೂ ಇಂಗ್ಲಿಷ್ ಕಾಂಪ್ರಹೆನ್ಷನ್ ವಿಷಯಗಳಿಂದ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಪ್ರತಿ ತಪ್ಪು ಉತ್ತರಕ್ಕೆ 0.50 ಅಂಕಗಳನ್ನು ಕಡಿತಗೊಳಿಸಲಾಗುತ್ತದೆ.

  • ಟೈಯರ್ – II ಪರೀಕ್ಷೆ:

ಈ ಹಂತದಲ್ಲಿ ಮ್ಯಾಥಮೆಟಿಕಲ್ ಎಬಿಲಿಟೀಸ್, ಇಂಗ್ಲಿಷ್ ಭಾಷೆ, ಜನರಲ್ ಅವೇರ್ನೆಸ್, ರೀಸನಿಂಗ್ ಹಾಗೂ ಕಂಪ್ಯೂಟರ್ ನಾಲೆಡ್ಜ್ ವಿಷಯಗಳ ಕುರಿತು ಪರೀಕ್ಷೆ ಇರುತ್ತದೆ. ಇವುಗಳೊಂದಿಗೆ ಡೇಟಾ ಎಂಟ್ರಿ ಹಾಗೂ ಸ್ಪೀಡ್ ಟೆಸ್ಟ್ ಕಡ್ಡಾಯವಾಗಿದೆ. ಅಭ್ಯರ್ಥಿಗಳು ಈ ಒಂದು ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿಯನ್ನು ಸಿಡ್ಡಪರಿಸಿ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಗಮನಿಸಿ: ಇನ್ಸ್ಪೆಕ್ಟರ್ ಹಾಗೂ ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಇಲಾಖೆಯ ವತಿಯಿಂದ ದೈಹಿಕ ದಕ್ಷತೆ ಹಾಗೂ ದೈಹಿಕ ಗುಣಮಟ್ಟ ಪರೀಕ್ಷೆಯನ್ನು ನಡೆಸಲಾಗುತ್ತದೆ.

ಪ್ರಮುಖ ದಿನಾಂಕಗಳು:

ಪ್ರಮುಖ ಈವೆಂಟ್ ದಿನಾಂಕ
ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ21-05-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ22-06-2026
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ 23-06-2026

ಪ್ರಮುಖ ಲಿಂಕುಗಳು:

ಅಧಿಕೃತ ವೆಬ್‌ಸೈಟ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಅಧಿಸೂಚನೆ PDF ಲಿಂಕ್ ಇಲ್ಲಿ ಕ್ಲಿಕ್ ಮಾಡಿ
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ

ಅಂತಿಮ ತೀರ್ಮಾನ:

ಸ್ಟಾಫ್ ಸೆಲೆಕ್ಷನ್ ಕಮಿಷನ್ ಕೇಂದ್ರ ಸರ್ಕಾರದ ವಿವಿಧ ಹುದ್ದೆಗಳ ಭರ್ತಿಗೆ ಕಂಬೈನ್ಡ್ ಗ್ರ್ಯಾಜುಯೆಟ್ ಲೆವೆಲ್ ಪರೀಕ್ಷೆಯನ್ನು ನಡೆಸಲು ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಒಟ್ಟು 12,256 ಗ್ರೂಪ್ ಬಿ ಹಾಗೂ ಗ್ರೂಪ್ ಸಿ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಲಾಗಿದೆ. ಕೇಂದ್ರ ಸರ್ಕಾರದ ಅಡಿಯಲ್ಲಿ ಉದ್ಯೋಗವನ್ನು ಪ್ರಾರಂಭಿಸಬೇಕೆಂದಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶವಾಗಿದೆ. ಅರ್ಹ ಅಭ್ಯರ್ಥಿಗಳು ದಿನಾಂಕ 22-06-2026ರಂದು ಅಥವಾ ಮುಂಚಿತವಾಗಿ ಅರ್ಜಿ ಸಲ್ಲಿಸಿ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಿ.


ಇತರೆ ಪ್ರಮುಖ ಲಿಂಕುಗಳು:

Leave a Comment