ಸಾವಿರಾರು ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಉದ್ಯೋಗಾವಕಾಶ! ಕೇಂದ್ರ ಸರ್ಕಾರದ ಅಧೀನದಲ್ಲಿರುವ ಸ್ಟಾಫ್ ಸೆಲೆಕ್ಷನ್ ಕಮಿಷನ್ phase – 14 ರ ಅಡಿಯಲ್ಲಿ ಒಟ್ಟು 3003 ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
SSC Recruitment in Kannada
ಈ ನೇಮಕಾತಿ ಪ್ರಕ್ರಿಯೆಯು ಜೂನಿಯರ್ ಇಂಜಿನಿಯರ್, ಸ್ಟೈನೋಗ್ರಾಫರ್, ವೈಜ್ಞಾನಿಕ ಸಹಾಯಕರು, ಪ್ರಯೋಗಾಲಯ ಅಟೆಂಡೆಂಟ್ ಹಾಗೂ ಇನ್ನಿತರ ಹುದ್ದೆಗಳಿಗೆ ಸಂಬಂಧಿಸಿದ್ದು, ಪಿಯುಸಿ ಅಥವಾ ಪದವಿ ಪೂರೈಸಿದ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶವಾಗಿದೆ.
ಸ್ಟಾಫ್ ಸೆಲೆಕ್ಷನ್ ಕಮಿಷನ್ ಹುದ್ದೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು 13-04-2026 ರಿಂದ ಪ್ರಾರಂಭಗೊಂಡು 04-05-2026 ರಂದು ಕೊನೆಗೊಳ್ಳಲಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ? ಶೈಕ್ಷಣಿಕ ಅರ್ಹತೆ ಏನು? ವಯೋಮಿತಿ ಎಷ್ಟು? ಹಾಗೂ ಇನ್ನಿತರ ಎಲ್ಲಾ ಮಾಹಿತಿಯನ್ನು ಪ್ರಸ್ತುತ ಈ ಒಂದು ಲೇಖನದ ಮೂಲಕ ತಿಳಿದುಕೊಳ್ಳಬಹುದಾಗಿದೆ.

ಹುದ್ದೆಯ ಸಂಕ್ಷಿಪ್ತ ನೋಟ:
| ನೇಮಕಾತಿ ಸಂಸ್ಥೆ | ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) |
| ಹುದ್ದೆಯ ಹೆಸರು | ಸ್ಟೈನೋಗ್ರಾಫರ್, ಜೂನಿಯರ್ ಇಂಜಿನಿಯರ್, ಪ್ರಯೋಗಾಲಯ ಅಟೆಂಡೆಂಟ್, ವೈಜ್ಞಾನಿಕ ಸಹಾಯಕರು ಹಾಗೂ ಇನ್ನು ವಿವಿಧ ಹುದ್ದೆಗಳು |
| ಹುದ್ದೆಯ ಸಂಖ್ಯೆ | 3003 ಹುದ್ದೆಗಳು |
| ಉದ್ಯೋಗ ಸ್ಥಳ | ಅಖಿಲ ಭಾರತ |
| ಅರ್ಜಿ ಸಲ್ಲಿಸುವ ವಿಧಾನ | ಆನ್ಲೈನ್ |
ಹುದ್ದೆಯ ಸಂಕ್ಷಿಪ್ತ ವಿವರ:
ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಹುದ್ದೆಗಳ ವಿವರ ಈ ಕೆಳಕಂಡಂತಿದೆ.
- ಅಕೌಂಟೆಂಟ್
- ಜೂನಿಯರ್ ಇಂಜಿನಿಯರ್ (ಗುಣಮಟ್ಟ ಭರವಸೆ)
- ಟೆಕ್ನಿಕಲ್ ಆಪರೇಟರ್
- ಡ್ರಾಫ್ಟ್ಸ್ ಮನ್
- ಫೀಲ್ಡ್ ಅಸಿಸ್ಟೆಂಟ್
- ರಿಸರ್ಚ್ ಅಸಿಸ್ಟೆಂಟ್
- ಲ್ಯಾಬೋರೇಟರಿ ಅಟೆಂಡೆಂಟ್
- ಲೈಬ್ರರಿ ಅಂಡ್ ಇನ್ಫರ್ಮೇಷನ್ ಅಸಿಸ್ಟೆಂಟ್
- ಸ್ಟೈನೋಗ್ರಾಫರ್ ಗ್ರೇಡ್ 2
- ಸೈನ್ಟಿಫಿಕ್ ಅಸಿಸ್ಟೆಂಟ್
ಶೈಕ್ಷಣಿಕ ಅರ್ಹತೆ:
- ಜೂನಿಯರ್ ಇಂಜಿನಿಯರ್, ಸೈನ್ಟಿಫಿಕ್ ಅಸಿಸ್ಟೆಂಟ್ ಹಾಗೂ ಇನ್ನು ಉನ್ನತ ಮಟ್ಟದ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಿತ ವಿಷಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
- ಸ್ಟೈನೋಗ್ರಾಫರ್ ಹಾಗೂ ಇನ್ನಿತರ ತಾಂತ್ರಿಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಲ್ಲಿ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.
- ಮಲ್ಟಿ ಟಾಸ್ಕಿಂಗ್ ಹಾಗೂ ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ SSLC ಅಲ್ಲಿ ಉತ್ತೀರ್ಣರಾಗಿರಬೇಕು.
ವಯೋಮಿತಿ ವಿವರ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿಯನ್ನು ಜನವರಿ 1, 2026 ಕ್ಕೆ ಅನ್ವಯವಾಗುವಂತೆ ಲೆಕ್ಕ ಹಾಕಲಾಗುತ್ತದೆ.
- ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು.
- ವಿವಿಧ ಹುದ್ದೆಗಳಿಗೆ ಅನುಗುಣವಾಗಿ ಅಭ್ಯರ್ಥಿಗಳು ಗರಿಷ್ಟ 25 ರಿಂದ 30 ವರ್ಷ ವಯೋಮಿತಿಯನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ ವಿವರ:
ಸರ್ಕಾರದ ನಿಯಮಗಳ ಪ್ರಕಾರ ಮೀಸಲಾತಿ ವರ್ಗಗಳ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ.
- ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ
- ಮಾಜಿ ಸೈನಿಕ ಅಭ್ಯರ್ಥಿಗಳಿಗೆ: ಸೇವಾ ಅವಧಿ ಕಳೆದ ನಂತರ 3 ವರ್ಷಗಳು
- ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭ್ಯರ್ಥಿಗಳಿಗೆ 5 ವರ್ಷ
- ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ 10 ವರ್ಷ
- ಪಿಡಬ್ಲ್ಯೂಬಿಡಿ (ಒಬಿಸಿ) ಅಭ್ಯರ್ಥಿಗಳಿಗೆ 13 ವರ್ಷ
- ಪಿಡಬ್ಲ್ಯೂಬಿಡಿ (SC/ ST) ಅಭ್ಯರ್ಥಿಗಳಿಗೆ 15 ವರ್ಷ
ಅರ್ಜಿ ಶುಲ್ಕ:
ಸ್ಟಾಫ್ ಸೆಲೆಕ್ಷನ್ ಕಮಿಷನ್ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವನ್ನು ನಿಗದಿಪಡಿಸಿದ್ದು, ಅಭ್ಯರ್ಥಿಗಳು ಆನ್ಲೈನ್ ಮೂಲಕ ನೆಟ್ ಬ್ಯಾಂಕಿಂಗ್, ಮಾಸ್ಟರ್ ಕಾರ್ಡ್, ವೀಸಾ, ಯುಪಿಐ ಬಳಸಿ ಪಾವತಿಸಬೇಕಾಗುತ್ತದೆ.
- ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ. 100/-
- ಮಹಿಳೆಯರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮಾಜಿ ಸೈನಿಕ, ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ವೇತನ ಶ್ರೇಣಿ:
ಸ್ಟಾಫ್ ಸೆಲೆಕ್ಷನ್ ಕಮಿಷನ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಕೇಂದ್ರ ಸರ್ಕಾರದ 7 ನೇ ವೇತನ ಆಯೋಗದ ಅನ್ವಯ ವೇತನವನ್ನು ನೀಡಲಾಗುತ್ತದೆ.
ಅಭ್ಯರ್ಥಿಗಳು ಆಯ್ಕೆಯಾದ ಹುದ್ದೆಗಳಿಗೆ ಅನ್ವಯವಾಗಿ ಪೇ ಲೆವೆಲ್ 1 ರಿಂದ ಪೇ ಲೆವೆಲ್ 8 ರ ವರೆಗೆ ವೇತನವನ್ನು ನಿಗದಿಪಡಿಸಲಾಗುವುದು. ಮಾಸಿಕ ವೇತನವು ರೂ. 18,000/- ದಿಂದ ರೂ. 1,51,100/- ರ ವರೆಗೆ ವೇತನವನ್ನು ನೀಡಲಾಗುತ್ತದೆ. ಇವುಗಳ ಜೊತೆಗೆ ವಿವಿಧ ಭತ್ಯೆಗಳನ್ನು ನೀಡಲಾಗುವುದು.
ಅರ್ಜಿ ಸಲ್ಲಿಸುವ ವಿಧಾನ:
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಈ ಕೆಳಗಿನ ಹಂತವನ್ನು ಅನುಸರಿಸಿ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ.
- ಅಭ್ಯರ್ಥಿಗಳು ಮೊದಲು ಸ್ಟಾಫ್ ಸೆಲೆಕ್ಷನ್ ಕಮಿಷನ್ ಅಧಿಕೃತ ವೆಬ್ಸೈಟ್ ಗೆ ಭೇಟಿ.
- ಹೊಸ ಬಳಕೆದಾರರಾಗಿದ್ದರೆ, ಒನ್ ಟೈಮ್ ರೆಜಿಸ್ಟ್ರೇಷನ್ ಪ್ರಕ್ರಿಯೆಯೆನ್ನು ಪೂರ್ಣಗೊಳಿಸಿ.
- ಲಾಗಿನ್ ಆದ ನಂತರ Phase- XIV /2026/ selection post ಮೇಲೆ ಕ್ಲಿಕ್ ಮಾಡಿ.
- ನಂತರ ಫಾರ್ಮ್ ನಲ್ಲಿ ಕೇಳಲಾದ ಎಲ್ಲಾ ವೈಯಕ್ತಿಕ, ಶೈಕ್ಷಣಿಕ ವಿವರಗಳನ್ನು ಭರ್ತಿಮಾಡಿ.
- ನಂತರ ನಿಮ್ಮ ಲೈವ್ ಫೋಟೋವನ್ನು ಅಪ್ಲೋಡ್ ಮಾಡಿ. ಅಪ್ಲೋಡ್ ಮಾಡುವ ಫೋಟೋಗಳು ಕ್ಲಿಯರ್ ಆಗಿರಲಿ.
- ನಿಮ್ಮ ಸಹಿಯನ್ನು ಸ್ಕ್ಯಾನ್ ಮಾಡಿ ನಂತರ ನೀವು ಭರ್ತಿ ಮಾಡಿದ ಎಲ್ಲಾ ವಿವರಗಳು ಸರಿ ಇದೆಯೇ ಎಂದು ಪರಿಶೀಲಿಸಿ
- ನಿಮ್ಮ ವರ್ಗಕ್ಕೆ ಸಂಬಂಧಿಸಿದ ಅರ್ಜಿ ಶುಲ್ಕವನ್ನು ಪಾವತಿಸಿ ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.
- ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿ ಪ್ರತಿಯನ್ನು ಪ್ರಿಂಟ್ ತೆಗೆದುಕೊಳ್ಳಿ.
ಆಯ್ಕೆ ಪ್ರಕ್ರಿಯೆ:
- ಕಂಪ್ಯೂಟರ್ ಆಧಾರಿತ ಪರೀಕ್ಷೆ:
ಕಂಪ್ಯೂಟರ್ ಆಧಾರಿತ ಪರೀಕ್ಷೆಯು ಆಬ್ಜೆಕ್ಟಿವ್ ಮಾದರಿಯ ಪರೀಕ್ಷೆ ಆಗಿದ್ದು, ಈ ಒಂದು ಪರೀಕ್ಷೆಯಲ್ಲಿ ಕ್ವಾಂಟಿಟೇಟಿವ್ ಆಪ್ಟಿಟ್ಯೂಡ್, ಜನರಲ್ ಇಂಟಲಿಜೆನ್ಸ್, ಜನರಲ್ ಅವೇರ್ನೆಸ್ ಹಾಗೂ ಇಂಗ್ಲಿಷ್ ಭಾಷಾ ವಿಷಯಗಳು ಒಳಗೊಂಡಿರುತ್ತದೆ.
- ಕೌಶಲ್ಯ ಪರೀಕ್ಷೆ:
ಸ್ಟೈನೋಗ್ರಫಿ ಹಾಗೂ ಟೈಪಿಂಗ್ ಅಗತ್ಯವಿರುವ ಹುದ್ದೆಗಳಿಗೆ ಮಾತ್ರ ಈ ಒಂದು ಪರೀಕ್ಷೆ ಅನ್ವಯವಾಗುತ್ತದೆ.
- ದಾಖಲಾತಿ ಪರಿಶೀಲನೆ:
ಈ ಎಲ್ಲ ಹಂತಗಳಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳನ್ನು ಅಂತಿಮವಾಗಿ ದಾಖಲಾತಿ ಪರಿಶೀಲನೆಗೆ ಕರೆಯಲಾಗುತ್ತದೆ.
ಪ್ರಮುಖ ದಿನಾಂಕಗಳು:
| ಪ್ರಮುಖ ಈವೆಂಟ್ | ದಿನಾಂಕ |
|---|---|
| ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ | 13-04-2026 |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 04-05-2026 |
| ಅರ್ಜಿ ಶುಲ್ಕ ಪಾವತಿಸುವ ಕೊನೆಯ ದಿನಾಂಕ | 05-05-2026 |
ಪ್ರಮುಖ ಲಿಂಕುಗಳು:
| ಅಧಿಕೃತ ವೆಬ್ಸೈಟ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ಅಧಿಸೂಚನೆ ಪಿಡಿಎಫ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಅಂತಿಮ ಮಾತು:
ಸ್ಟಾಫ್ ಸೆಲೆಕ್ಷನ್ ಕಮಿಷನ್ ವಿವಿಧ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಹತಾ ಮಾನದಂಡವನ್ನು ಪೂರೈಸುತ್ತೇವೆಯೋ? ಇಲ್ಲವೋ? ಎಂದು ಖಚಿತಪಡಿಸಿಕೊಂಡು ನಿಗದಿಪಡಿಸಿದ ಕೊನೆಯ ದಿನಾಂಕ 04-05-2026 ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಕೇಂದ್ರ ಸರ್ಕಾರದ ಅಧೀನದಲ್ಲಿರುವ ಹುದ್ದೆಯನ್ನು ತಮ್ಮದಾಗಿಸಿಕೊಳ್ಳಿ.
ಇತರೆ ಪ್ರಮುಖ ಲಿಂಕುಗಳು:
- Vikas Bank: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಭರ್ಜರಿ ಉದ್ಯೋಗಾವಕಾಶ! ಏಪ್ರಿಲ್ 24 ಕೊನೆಯ ದಿನಾಂಕ
- Post Office: SSLC ಪಾಸ್ ಆದವರಿಗೆ ಕೇಂದ್ರ ಅಂಚೆ ಇಲಾಖೆಯಲ್ಲಿ ಜಾಬ್ ಅವಕಾಶ! ಅರ್ಜಿ ಶುಲ್ಕ ಇಲ್ಲ
- BMRCL: ರೂ. 2 ಲಕ್ಷ ವೇತನ! ಜನರಲ್ ಮ್ಯಾನೇಜರ್ ಹುದ್ದೆಗಳ ಭರ್ಜರಿ ನೇಮಕಾತಿ । ಯಾವುದೇ ಲಿಖಿತ ಪರೀಕ್ಷೆ + ಅರ್ಜಿ ಶುಲ್ಕವಿಲ್ಲ
- BEL: ರೂ. 1,80,000/- ವೇತನ! ಡೆಪ್ಯೂಟಿ ಮ್ಯಾನೇಜರ್ ಹಾಗೂ ಜೂನಿಯರ್ ಇಂಜಿನಿಯರ್ ಹುದ್ದೆಗಳು । ಏಪ್ರಿಲ್ 30 ಕೊನೆಯ ದಿನಾಂಕ
- CNP: ರೂ. 1,03,000/- ವೇತನ! ಕರೆನ್ಸಿ ನೋಟ್ ಪ್ರೆಸ್ನಲ್ಲಿ ಬೃಹತ್ ನೇಮಕಾತಿ । ಮೇ 19 ಕೊನೆಯ ದಿನಾಂಕ