ನಮಸ್ಕಾರ ಸ್ನೇಹಿತರೆ, ನೀವೇನಾದರೂ ಜಸ್ಟ್ 10th ಪಾಸ್ ಆಗಿ ಸರ್ಕಾರಿ ಉದ್ಯೋಗ ಹುಡುಕುತ್ತಿದ್ದಿರಾ? ಅಥವಾ ನೀವೇನಾದರೂ ಭದ್ರತಾ ಪಡೆಯಲ್ಲಿ ವೃತ್ತಿ ಜೀವನವನ್ನು ಪ್ರಾರಂಭಿಸಬೇಕೆಂದಿದ್ದೀರಾ? ಹಾಗಿದ್ದರೆ ನಿಮಗೊಂದು ಸುವರ್ಣಾವಕಾಶ!
SSF Recruitment in Kannada
ಭಾರತ ಸರ್ಕಾರದ ಗೃಹಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಚಿವಾಲಯದ ಭದ್ರತಾ ಪಡೆಯಲ್ಲಿ ಖಾಲಿ ಇರುವ ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಕೇಂದ್ರ ಸರ್ಕಾರದಲ್ಲಿ ಉದ್ಯೋಗ ಮಾಡಬೇಕೆಂದು ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶವಾಗಿದೆ. ಕಾನ್ಸ್ಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಮಾರ್ಚ್ 30, 2026 ರಿಂದಲೇ ಆರಂಭಗೊಂಡಿದ್ದು, ನೀವೇನಾದರೂ ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸಿದರೆ ಆಗಸ್ಟ್ 28, 2026 ರಂದು ಅಥವಾ ಅದಕ್ಕಿಂತ ಮುಂಚಿತವಾಗಿ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.

ಹುದ್ದೆಯ ಅವಲೋಕನ:
| ನೇಮಕಾತಿ ಸಂಸ್ಥೆ | ಸಚಿವಾಲಯದ ಭದ್ರತಾ ಪಡೆ |
| ಹುದ್ದೆಯ ಹೆಸರು | ಕಾನ್ಸ್ಟೇಬಲ್ ಧೋಬಿ ಹಾಗೂ ಕಾನ್ಸ್ಟೇಬಲ್ ಕ್ಷೌರಿಕ ಹುದ್ದೆಗಳು |
| ಹುದ್ದೆಯ ಸಂಖ್ಯೆ | 10 ಹುದ್ದೆಗಳು |
| ಉದ್ಯೋಗ ಸ್ಥಳ | ಅಖಿಲ ಭಾರತ |
ಹುದ್ದೆಯ ಕಿರು ಪರಿಚಯ:
ಸಚಿವಾಲಯದ ಭದ್ರತಾ ಪಡೆಯು 2026 ನೇ ಸಾಲಿನ ನೇಮಕಾತಿ ಅಧಿಸೂಚನೆಯಲ್ಲಿ ಒಟ್ಟು 10 ಕಾನ್ಸ್ಟೇಬಲ್ ಕ್ಷೌರಿಕ ಹಾಗೂ ಕಾನ್ಸ್ಟೇಬಲ್ ಧೋಬಿ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಈ ಹುದ್ದೆಗಳನ್ನು ವರ್ಗವರು ಹಂಚಿಕೆ ಮಾಡಲಾಗಿದೆ. ಜಸ್ಟ್ 10 ಪಾಸ್ ಆಗಿ ಕನಿಷ್ಠ 18 ವರ್ಷದಿಂದ ಗರಿಷ್ಟ 23 ವರ್ಷದೊಳಗಿನ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಹುದ್ದೆಯ ಸಂಪೂರ್ಣ ವಿವರ:
| ಹುದ್ದೆಯ ಹೆಸರು | ಹುದ್ದೆಯ ಸಂಖ್ಯೆ |
| ಕಾನ್ಸ್ಟೇಬಲ್ – ಕ್ಷೌರಿಕ | 03 ಹುದ್ದೆಗಳು |
| ಕಾನ್ಸ್ಟೇಬಲ್ – ಧೋಬಿ | 07 ಹುದ್ದೆಗಳು |
ಕಾನ್ಸ್ಟೇಬಲ್ ಕ್ಷೌರಿಕ ಹಾಗೂ ಕಾನ್ಸ್ಟೇಬಲ್ ಧೋಬಿ ಹುದ್ದೆಗಳನ್ನು ವರ್ಗವರು ಹಂಚಿಕೆ ಮಾಡಿದ್ದು, ಅವುಗಳ ವಿವರ ಈ ಕೆಳಕಂಡಂತಿದೆ.
- 03 ಕಾನ್ಸ್ಟೇಬಲ್ ಕ್ಷೌರಿಕ ಹುದ್ದೆಗಳನ್ನು ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಮೀಸಲಿಡಲಾಗಿದೆ.
- 07 ಕಾನ್ಸ್ಟೇಬಲ್ ಧೋಬಿ ಹುದ್ದೆಗಳಲ್ಲಿ 5 ಹುದ್ದೆಗಳನ್ನು ಸಾಮಾನ್ಯ ವರ್ಗದವರಿಗೆ, 1 ಹುದ್ದೆಯನ್ನು ಇತರೆ ಹಿಂದುಳಿದ ವರ್ಗದವರಿಗೆ ಹಾಗೂ 1 ಹುದ್ದೆಯನ್ನು ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ಮೀಸಲಿಡಲಾಗಿದೆ.
| ಇಲ್ಲಿ ಗಮನಿಸಿ: “ಒಟ್ಟು ಕಾನ್ಸ್ಟೇಬಲ್ ಹುದ್ದೆಗಳಲ್ಲಿ 10% ಹುದ್ದೆಗಳನ್ನು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಕಾಯ್ದಿರಿಸಲಾಗಿದೆ. |
ಶೈಕ್ಷಣಿಕ ಅರ್ಹತೆ:
- ಕಾನ್ಸ್ಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಲ್ಲಿ 10 ನೇ ತರಗತಿ ಅಥವಾ ಮೆಟ್ರಿಕ್ಯುಲೇಷನ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
- ಅಭ್ಯರ್ಥಿಗಳು ಸಂಬಂಧಿತ ವೃತ್ತಿಗೆ ಅಗತ್ಯವಿರುವ ಕೌಶಲ್ಯವನ್ನು ಹೊಂದಿರಬೇಕು.
ವಯೋಮಿತಿ ವಿವರ:
ಕಾನ್ಸ್ಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿಯನ್ನು 28-04-2026 ಕ್ಕೆ ಅನ್ವಯವಾಗುವಂತೆ ಲೆಕ್ಕ ಹಾಕಲಾಗುತ್ತದೆ. ಹಾಗೂ ಅಭ್ಯರ್ಥಿಗಳು ಏಪ್ರಿಲ್ 29, 2003 ಕ್ಕಿಂತ ಮುಂಚೆ ಹಾಗೂ ಏಪ್ರಿಲ್ 28, 2008 ರ ನಂತರ ಜನಿಸಿರಬಾರದು.
- ಕಾನ್ಸ್ಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹಾಗೂ ಗರಿಷ್ಟ 23 ವರ್ಷವನ್ನು ಮೀರಿರಬಾರದು.
ವಯೋಮಿತಿ ಸಡಿಲಿಕೆ:
- ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷ
- ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ 5 ವರ್ಷ
- ಸಾಮಾನ್ಯ ವರ್ಗದ ಮಾಜಿ ಸೈನಿಕ ಅಭ್ಯರ್ಥಿಗಳಿಗೆ 3 ವರ್ಷ
- ಇತರೆ ಹಿಂದುಳಿದ ವರ್ಗಗಳ ಮಾಜಿ ಸೈನಿಕ ಅಭ್ಯರ್ಥಿಗಳಿಗೆ 6 ವರ್ಷ
- ಪರಿಶಿಷ್ಟ ಜಾತಿ ಮಾಜಿ ಸೈನಿಕ ಅಭ್ಯರ್ಥಿಗಳಿಗೆ 8 ವರ್ಷ
- ಇಲಾಖೆಯ ಅಭ್ಯರ್ಥಿಗಳಿಗೆ ವರ್ಗವರು 40 ರಿಂದ 45 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಕಾನ್ಸ್ಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವರ್ಗವಾರು ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದ್ದು, ಅಭ್ಯರ್ಥಿಗಳು ಈ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕವೇ ಪಾವತಿಸಬೇಕಾಗುತ್ತದೆ. ಒಮ್ಮೆ ಪಾವತಿಸಿದ ಅರ್ಜಿ ಶುಲ್ಕವನ್ನು ಯಾವುದೇ ಸಂದರ್ಭದಲ್ಲೂ ಹಿಂದಿರುಗಿಸುವುದಿಲ್ಲ.
- ಸಾಮಾನ್ಯ ಹಾಗೂ ಇತರೆ ಹಿಂದುಳಿದ ವರ್ಗಗಳ ಪುರುಷ ಅಭ್ಯರ್ಥಿಗಳಿಗೆ ರೂ. 100/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
- ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭ್ಯರ್ಥಿಗಳು ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವನ್ನು ನಿಗದಿಪಡಿಸಿಲ್ಲ.
ವೇತನ ಶ್ರೇಣಿ:
ಕಾನ್ಸ್ಟೇಬಲ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 7 ನೇ ವೇತನ ಆಯೋಗದ ವೇತನವನ್ನು ನಿಗದಿಪಡಿಸಲಾಗುತ್ತದೆ.
- ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 19,900/- ದಿಂದ ರೂ. 63,200/- ವೇತನವನ್ನು ನೀಡಲಾಗುತ್ತದೆ. ಅಭ್ಯರ್ಥಿಗಳು ಈ ವೇತನದ ಜೊತೆಗೆ ತುಟ್ಟಿ ಭತ್ಯೆ, ಮನೆ ಬಾಡಿಗೆಯ ಭತ್ಯೆ ಹಾಗೂ ಸಾರಿಗೆ ಭತ್ಯೆಯನ್ನು ಪಡೆದುಕೊಳ್ಳಲು ಅರ್ಹರಾಗಿರುತ್ತಾರೆ.
ಅಗತ್ಯ ದಾಖಲೆಗಳು:
- ಶೈಕ್ಷಣಿಕ ಪ್ರಮಾಣಪತ್ರ
- ಆಧಾರ್ ಕಾರ್ಡ್
- ಪಾಸ್ ಪೋರ್ಟ್ ಅಳತೆಯ ಫೋಟೋ
- ವಯಸ್ಸಿನ ಪುರಾವೆ
- ಜಾತಿ ಪ್ರಮಾಣಪತ್ರ
- ಹಾಗೂ ಇತರೆ ದಾಖಲೆಗಳು
ಅರ್ಜಿ ಸಲ್ಲಿಸುವ ವಿಧಾನ:
- ಕಾನ್ಸ್ಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ https://recruitment.itbpolice.nic.in/rect/index.php ಗೆ ಭೇಟಿ ನೀಡಿ.
- ಮುಖಪುಟದಲ್ಲಿರುವ ನೇಮಕಾತಿ ವಿಭಾಗವನ್ನು ಹೋಗಿ ಕಾನ್ಸ್ಟೇಬಲ್ ಹುದ್ದೆಗಳ ಅಧಿಸೂಚನೆಯನ್ನು ಕ್ಲಿಕ್ ಮಾಡಿ.
- ನಂತರ ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಂಡು ಅರ್ಹತಾ ಮಾನದಂಡಗಳನ್ನು ಪೂರೈಸಿದರೆ ಅಪ್ಲೈ ಆನ್ಲೈನ್ ಬಟನ್ ಕ್ಲಿಕ್ ಮಾಡಿ
- ಅಲ್ಲಿ ಕೇಳಲಾದ ನಿಮ್ಮ ವೈಯಕ್ತಿಕ ವಿವರ, ಶೈಕ್ಷಣಿಕ ವಿವರಳನ್ನು ಭರ್ತಿ ಮಾಡಿ.
- ನಂತರ ನಿಮ್ಮ ಸಹಿ, ಪಾಸ್ಪೋರ್ಟ್ ಅಳತೆಯ ಫೋಟೋ, ಶೈಕ್ಷಣಿಕ ಪ್ರಮಾಣಪತ್ರ, ಹಾಗೂ ಇನ್ನಿತರ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.
- ನಿಮ್ಮ ವರ್ಗಕ್ಕೆ ಸಂಬಂಧಿಸಿದ ಅರ್ಜಿ ಶುಲ್ಕವನ್ನು ಪಾವತಿಸಿ ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.
- ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿ ಪ್ರತಿಯನ್ನು ಪ್ರಿಂಟ್ ತಗೆದುಕೊಳ್ಳಿ.
ಆಯ್ಕೆ ಪ್ರಕ್ರಿಯೆ:
- ದೈಹಿಕ ಗುಣಮಟ್ಟ ಪರೀಕ್ಷೆ
- ದೈಹಿಕ ದಕ್ಷತೆ ಪರೀಕ್ಷೆ
- ಲಿಖಿತ ಪರೀಕ್ಷೆ
- ಕೌಶಲ್ಯ ಪರೀಕ್ಷೆ
- ದಾಖಲೆ ಪರೀಶೀಲನೆ
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು:
| ಪ್ರಮುಖ ಈವೆಂಟ್ | ದಿನಾಂಕ |
|---|---|
| ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 30-03-2026 |
| ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 28-04-2026 |
| ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ | 28-04-2026 |
ಪ್ರಮುಖ ಲಿಂಕ್:
| ಅಧಿಕೃತ ಅಧಿಸೂಚನೆ ಪಿಡಿಎಫ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ವೆಬ್ಸೈಟ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಅಂತಿಮ ತೀರ್ಮಾನ:
ಸಚಿವಾಲಯದ ಭದ್ರತಾ ಪಡೆಯು ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಕೇವಲ 10th ಪಾಸ್ ಆದ ಅಭ್ಯರ್ಥಿಗಳಿಗೆ ಇದೊಂದು ಉತ್ತಮ ವೇದಿಕೆ ಆಗಿದೆ. ಕೇಂದ್ರ ಸರ್ಕಾರದ ಅಡಿಯಲ್ಲಿ ಗೌರವಯುತ ಉದ್ಯೋಗವನ್ನು ಪಡೆದುಕೊಳ್ಳಬೇಕೆಂದಿರುವವರಿಗೆ ಇದೊಂದು ಸುವರ್ಣಾವಕಾಶವಾಗಿದೆ. ಈ ಒಂದು ಕಾನ್ಸ್ಟೇಬಲ್ ಹುದ್ದೆಗೆ ಸ್ಪರ್ಧೆ ಹೆಚ್ಚಿದ್ದು, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೊನೆಯ ದಿನಾಂಕದ ವರೆಗೂ ಕಾಯದೆ ಮುಂಚಿತವಾಗಿ ಅರ್ಜಿ ಸಲ್ಲಿಸಿ ಈ ಹುದ್ದೆಯನ್ನು ತಮ್ಮದಾಗಿಸಿಕೊಳ್ಳಿ.
ಇತರೆ ಪ್ರಮುಖ ಲಿಂಕುಗಳು:
- TA Rally: ರೂ. 69,400/- ವೇತನ! ಪ್ರಾದೇಶಿಕ ಸೇನಾ ನೇಮಕಾತಿ 2026 । 3806 ಹುದ್ದೆಗಳು
- ECIL: ₹55,000/- ವೇತನ! ಪರೀಕ್ಷೆ ಇಲ್ಲದೆ ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳ ಭರ್ಜರಿ ನೇಮಕಾತಿ
- KSRSS: ಸೈನಿಕ್ ಶಾಲೆಯಲ್ಲಿ ಭರ್ಜರಿ ಉದ್ಯೋಗಾವಕಾಶ! 10th + ಡಿಗ್ರಿ ಪಾಸ್, ಏಪ್ರಿಲ್ 6 ಕೊನೆಯ ದಿನಾಂಕ
- PSB Job: ರೂ. 85920/- ವೇತನ! 1000 ಹುದ್ದೆಗಳ ಭರ್ಜರಿ ನೇಮಕಾತಿ 2026, ಏಪ್ರಿಲ್ 20 ಕೊನೆಯ ದಿನಾಂಕ
- RRB ALP ನೇಮಕಾತಿ 2026 – 11,127 ಹುದ್ದೆಗಳಿಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ!
Ssf