SSLC Prize Money: ₹10,000 ಪ್ರೋತ್ಸಾಹಧನ । SSLC ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್!

2025-26 ನೇ ಸಾಲಿನ SSLC ವಿದ್ಯಾರ್ಥಿಗಳಿಗೆ ಸರ್ಕಾರದ ಕಡೆಯಿಂದ ಭರ್ಜರಿ ಗುಡ್ ನ್ಯೂಸ್! ಪ್ರಸ್ತುತ ಸಾಲಿನಲ್ಲಿ ಈ ವರ್ಷದ 10th ವಿದ್ಯಾರ್ಥಿಗಳು ಯಶಸ್ವಿಯಾಗಿ SSLC ಪರೀಕ್ಷೆಯನ್ನು ಬರೆದು, ಇನ್ನೇನ್ನು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಅಂತಹ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ವರ್ಷದಲ್ಲಿ ಕೊನೆಯ ಹಂತದ ಪ್ರೈಜ್ ಮನಿ ಅನ್ನು ನೀಡುವುದಾಗಿ ಸರ್ಕಾರವು ನಿರ್ಧರಿಸಿದ್ದು, ವಿದಾರ್ಥಿಗಳ ಮುಂದಿನ ಶೈಕ್ಷಣಿಕ ಭವಿಷ್ಯಕ್ಕೆ ಆರ್ಥಿಕ ನೆರವನ್ನು ಒದಗಿಸುವ ಪ್ರಯತ್ನ ಮಾಡಿದೆ.

SSLC Prize Money Details in Kannada

SSLC ಫಲಿತಾಂಶವು ಪ್ರಕಟಗೊಂಡ ನಂತರ ವಿದ್ಯಾರ್ಥಿಗಳು ಗಳಿಸಿದ ಅಂಕಗಳ ಆಧಾರದ ಮೇಲೆ ಪ್ರೈಜ್ ಮನಿ ನಿರ್ಧಾರವಾಗಲಿದ್ದು, ಯಾವ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಎಷ್ಟೆಷ್ಟು ಪ್ರೈಜ್ ಮನಿ ಸಿಗಲಿದೆ ಎನ್ನುವುದನ್ನು ಈ ಕೆಳಗಿನ ಹಂತದಲ್ಲಿ ತಿಳಿದುಕೊಳ್ಳೋಣ.

ಈ ಒಂದು ಪ್ರೈಜ್ ಮನಿಯನ್ನು ಪಡೆಯಲು ಯಾರು ಅರ್ಹರು? ಅರ್ಜಿ ಸಲ್ಲಿಸಲು ಯಾವೆಲ್ಲ ದಾಖಲೆಗಳು ಅಗತ್ಯ? ಅರ್ಜಿ ಸಲ್ಲಿಸುವುದು ಹೇಗೆ? ಇನ್ನಿತರ ಎಲ್ಲಾ ಮಾಹಿತಿಯನ್ನು ಪ್ರಸ್ತುತ ಈ ಒಂದು ಲೇಖನದ ಮೂಲಕ ತಿಳಿದುಕೊಳ್ಳಬಹುದಾಗಿದೆ.

SSLC Prize Money

ಪ್ರಮುಖ ಹೈಲೈಟ್ಸ್:

* SSLC ವಿದ್ಯಾರ್ಥಿಗಳಿಗೆ ಪ್ರೈಜ್ ಮನಿ ನೀಡುವುದಾಗಿ ಸರ್ಕಾರವು ನಿರ್ಧರಿಸಿದೆ.
* ವಿದ್ಯಾರ್ಥಿಗಳ ಮುಂದಿನ ಶೈಕ್ಷಣಿಕ ಭವಿಷ್ಯಕ್ಕೆ ದೊಡ್ಡ ಆಸರೆ ಆಗಲಿರುವ ಪ್ರೈಜ್ ಮನಿ.
* ಉತ್ತಮ ಅಂಕವನ್ನು ಗಳಿಸಿದ ವಿದ್ಯಾರ್ಥಿಗಳಿಗೆ ಹೆಚ್ಚಿನ ಪ್ರೈಜ್ ಮನಿ ಪಡೆದುಕೊಳ್ಳಲು ಅವಕಾಶ.

ಏನಿದು ಪ್ರೈಸ್ ಮನಿ?

ವಿದ್ಯಾರ್ಥಿಗಳು 2025-26 ನೇ ಸಾಲಿನ SSLC ಪರೀಕ್ಷೆಯು ಮಾರ್ಚ್ 18 ರಿಂದ ಏಪ್ರಿಲ್ 2 ರ ವರೆಗೆ ಯಶಸ್ವಿಯಾಗಿ ನಡೆದಿದ್ದು, ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಏಪ್ರಿಲ್ 24 ಕ್ಕೆ SSLC ಫಲಿತಾಂಶವನ್ನು ಪ್ರಕಟಿಸುವುದಾಗಿ ತಿಳಿಸಿದೆ. ಈ ಒಂದು ಫಲಿತಾಂಶದಲ್ಲಿ ವಿದ್ಯಾರ್ಥಿಗಳು ಗಳಿಸಿದ ಅಂಕಗಳ ಆಧಾರದ ಮೇಲೆ ಪ್ರೈಜ್ ನೀಡಲಿದ್ದು, ಡಿಸ್ಟಿಂಕ್ಷನ್ ಅಲ್ಲಿ ಪಾಸ್ ಆದ ವಿದ್ಯಾರ್ಥಿಗಳಿಗೆ 10,000 ಹಾಗೂ 6,000 ಪ್ರೈಜ್ ಮನಿಯನ್ನು ನೀಡಲಾಗುತ್ತದೆ.

ಯಾರಿಗೆ ಸಿಗುತ್ತೆ ಈ ಪ್ರೈಜ್ ಮನಿ?

ಸರ್ಕಾರವು SSLC ಅಲ್ಲಿ ಉನ್ನತ ಶ್ರೇಣಿಯಲ್ಲಿ ಪಾಸ್ ಆದ ವಿದ್ಯಾರ್ಥಿಗಳಿಗೆ ಪ್ರೈಜ್ ಮನಿ ನೀಡುವುದಾಗಿ ತಿಳಿಸಿದ್ದು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಹಾಗೂ ಇತರೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಸೇರಿ ಆರ್ಥಿಕವಾಗಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಈ ಒಂದು ಸಹಾಯಧನವನ್ನು ಪಡೆದುಕೊಳ್ಳಲು ಅರ್ಹರಾಗಿರುತ್ತಾರೆ. ವಿದ್ಯಾರ್ಥಿಗಳು ಈ ಒಂದು ಪ್ರೈಜ್ ಮನಿಯನ್ನು ಪಡೆದುಕೊಳ್ಳಬೇಕಾದರೆ ಮೊದಲ ಪ್ರಯತ್ನದಲ್ಲೇ ಡಿಸ್ಟಿಂಕ್ಷನ್ ಅಥವಾ ಫಸ್ಟ್ ಕ್ಲಾಸ್ ನಲ್ಲಿ ಪಾಸ್ ಆಗಿರಬೇಕು.

ಪ್ರೈಜ್ ಮನಿ ನೀಡುವುದರ ಹಿಂದಿನ ಉದ್ದೇಶವೇನು?

  • ಆರ್ಥಿಕ ನೆರವನ್ನು ಒದಗಿಸುವುದು:

SSLC ಅಲ್ಲಿ ಉನ್ನತ ಅಂಕವನ್ನು ಗಳಿಸಿ ಉತ್ತೀರ್ಣರಾದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣವನ್ನು ಮುಂದುವರೆಸಲು ಆರ್ಥಿಕ ನೆರವನ್ನು ಒದಗಿಸುವುದು. ಉನ್ನತ ಶಿಕ್ಷಣಕ್ಕೆ ಆಗುವ ಶೈಕ್ಷಣಿಕ ವೆಚ್ಚವನ್ನು ಭರಿಸಲು ವಿದ್ಯಾರ್ಥಿಗಳಿಗೆ ಪ್ರೈಜ್ ಮನಿ ಮೂಲಕ ಹಣಕಾಸಿನ ನೆರವನ್ನು ಒದಗಿಸಿ ಪೋಷಕರ ಮೇಲಿನ ಆರ್ಥಿಕ ಹೊರೆಯನ್ನು ಕಡಿಮೆ ಮಾಡುವುದು.

  • ವಿದ್ಯಾರ್ಥಿಗಳಿಗೆ ಸ್ಪೂರ್ತಿಯನ್ನು ತುಂಬುವುದು:

ವಿದ್ಯಾರ್ಥಿಗಳಿಗೆ SSLC ಪರೀಕ್ಷೆಯು ಮೊದಲ ಹಂತದ ಬೋರ್ಡ್ ಎಕ್ಸಾಮ್ ಆಗಿದ್ದು, ಈ ಒಂದು ಹಂತವು ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯಕ್ಕೆ ಮೊದಲ ಮೆಟ್ಟಿಲಾಗಿದೆ. ಈ ಒಂದು ಹಂತದಲ್ಲಿ ಉನ್ನತ ಅಂಕವನ್ನು ಗಳಿಸಿದ ವಿದ್ಯಾರ್ಥಿಗಳಿಗೆ ಪ್ರೈಜ್ ಮನಿ ನೀಡುವ ಮೂಲಕ ವಿದ್ಯಾರ್ಥಿಗಳು PUC ಹಾಗೂ ಇನ್ನಿತರ ಉನ್ನತ ಶಿಕ್ಷಣವನ್ನು ಪಡೆದುಕೊಳ್ಳುವಾಗ ಇನ್ನು ಹೆಚ್ಚಿನ ಸಾಧನೆ ಮಾಡಬೇಕೆನ್ನುವ ಛಲ ಹಾಗೂ ಸಕಾರಾತ್ಮಕ ಮನೋಭಾವವನ್ನು ಹೆಚ್ಚಿಸುವುದು.

  • ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ:

ಸಾಕಷ್ಟು ಪ್ರತಿಭಾವಂತ ವಿದ್ಯಾರ್ಥಿಗಳು SSLC ಅಲ್ಲಿ ಉನ್ನತ ಅಂಕವನ್ನು ಗಳಿಸಿದರೂ ಕೂಡ ಶಿಕ್ಷಣವನ್ನು ಮುಂದುವರೆಸಲು ಹಣಕಾಸಿನ ಸಮಸ್ಯೆ ಅಡ್ಡಿಯಾಗುತ್ತದೆ. ಇದರಿಂದಾಗಿ ಸಾಕಷ್ಟು ವಿದ್ಯಾರ್ಥಿಗಳು ಡ್ರಾಪ್ ಔಟ್ ಆಗುತ್ತಾರೆ. ಇಂತಹ ಸಮಸ್ಯೆಗೆ ಪರಿಹಾರವನ್ನು ಒದಗಿಸುವ ಉದ್ದೇಶದಿಂದ ಸರ್ಕಾರವು ಈ ಒಂದು ಮಹತ್ವದ ನಿರ್ಧಾರವನ್ನು ಕೈಗೊಂಡಿದೆ.

ಪ್ರೈಜ್ ಮನಿ ಪಡೆದುಕೊಳ್ಳಲು ಇರಬೇಕಾದ ಅರ್ಹತಾ ಮಾನದಂಡಗಳು:

  • ವಿದ್ಯಾರ್ಥಿಗಳು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
  • ವಿದ್ಯಾರ್ಥಿಗಳು ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿಯ ಅಡಿಯಲ್ಲಿ SSLC ಪರೀಕ್ಷೆಯನ್ನು ಬರೆದಿರಬೇಕು.
  • ವಿದ್ಯಾರ್ಥಿಗಳು ಮಾನ್ಯತೆ ಪಡೆದ ಸರ್ಕಾರಿ ಅಥವಾ ಖಾಸಗಿ ಶಾಲೆಯಲ್ಲಿ ಪ್ರೌಢ ಶಿಕ್ಷಣವನ್ನು ಪಡೆದುಕೊಂಡಿರಬೇಕು.
  • ವಿದ್ಯಾರ್ಥಿಗಳು ಮೊದಲ ಪ್ರಯತ್ನದಲ್ಲೇ SSLC ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
  • ವಿದ್ಯಾರ್ಥಿಗಳು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಇತರೆ ಹಿಂದುಳಿದ ವರ್ಗ ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿರಬೇಕು.
  • ವಿದ್ಯಾರ್ಥಿಗಳ ಆಧಾರ್ ಕಾರ್ಡ್ ಗೆ ಬ್ಯಾಂಕ್ ಪಾಸ್ ಬುಕ್ ಲಿಂಕ್ ಆಗಿರಬೇಕು.

ಅರ್ಜಿ ಸಲ್ಲಿಸಲು ಅಗತ್ಯವಾದ ದಾಖಲೆಗಳು:

  • SSLC ಅಂಕಪಟ್ಟಿ
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಆಧಾರ್ ಕಾರ್ಡ್
  • ಬ್ಯಾಂಕ್ ಪಾಸ್ ಬುಕ್
  • ವಿದ್ಯಾರ್ಥಿಗಳ ಇತ್ತೀಚಿನ ಪಾಸ್ ಪೋರ್ಟ್ ಅಳತೆಯ ಫೋಟೋ
  • ಇತರೆ ದಾಖಲೆಗಳು

ಪ್ರೈಜ್ ಮನಿ ಪಡೆದುಕೊಳ್ಳಲು ಅರ್ಜಿ ಸಲ್ಲಿಸುವುದು ಹೇಗೆ?

2025-26 ನೇ ಸಾಲಿನ SSLC ಪರೀಕ್ಷೆಯಲ್ಲಿ ಡಿಸ್ಟಿಂಕ್ಷನ್ ಅಥವಾ ಪ್ರಥಮ ದರ್ಜೆಯಲ್ಲಿ ಪಾಸ್ ಆದ ವಿದ್ಯಾರ್ಥಿಗಳು ಪ್ರೈಸ್ ಮನಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ವಿದ್ಯಾರ್ಥಿಗಳು ಈ ಕೆಳಗೆ ನೀಡಿರುವ ಹಂತವನ್ನು ಅನುಸರಿಸಿ ಪ್ರೈಜ್ ಮನಿಗೆ ಅರ್ಜಿ ಸಲ್ಲಿಸಿ.

  • ವಿದ್ಯಾರ್ಥಿಗಳು ಮೊದಲು ಸಮಾಜ ಕಲ್ಯಾಣ ಇಲಾಖೆಯ ಅಧಿಕೃತ ವೆಬ್ಸೈಟ್ http://itgrc.karnataka.gov.in/ ಗೆ ಭೇಟಿ ನೀಡಿ.
  • ಮುಖಪುಟದಲ್ಲಿ ಕಾಣುವ ಆನ್ಲೈನ್ ಅಪ್ಲಿಕೇಶನ್ ಫಾರ್ SSLC ಪ್ರೈಜ್ ಮನಿ ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ನಂತರ ಅಲ್ಲಿ ನಿಮ್ಮ SSLC ರಿಜಿಸ್ಟರ್ ನಂಬರ್ ಅನ್ನು ನಮೂದಿಸಿ.
  • ಆಗ ನಿಮ್ಮ ಹೆಸರು, ನಿಮ್ಮ ತಂದೆಯ ಹೆಸರು ಹಾಗೂ ನೀವು SSLC ಪರೀಕ್ಷೆಯಲ್ಲಿ ಗಳಿಸಿದ ಅಂಕಗಳು ಬರುತ್ತದೆ.
  • ನೀವು SSLC ಅಲ್ಲಿ ಉನ್ನತ ಅಂಕವನ್ನು ಗಳಿಸಿ ಉತ್ತೀರ್ಣರಾಗಿದ್ದರೆ, ಅಲ್ಲಿ ಒಂದು ಅಪ್ಲಿಕೇಶನ್ ಫಾರ್ಮ್ ತೆರೆಯುತ್ತದೆ. ಅಲ್ಲಿ ನಿಮ್ಮ ಎಲ್ಲಾ ವೈಯಕ್ತಿಕ ವಿವರಗಳು, ನೀವು ಸ್ಕೋರ್ ಮಾಡಿದ ಮಾರ್ಕ್ಸ್ ಹಾಗೂ ಇನ್ನಿತರ ಎಲ್ಲಾ ವಿವರಗಳನ್ನು ಭರ್ತಿಮಾಡಿ.
  • ಮೇಲೆ ನೀಡಲಾದ ಎಲ್ಲಾ ದಾಖಲೆಗಳನ್ನು ಅಪ್ಲೋಡ್ ಮಾಡಿ, ಭರ್ತಿ ಮಾಡಿದ ಎಲ್ಲಾ ವಿವರಗಳು ಸರಿಯಾಗಿದೆಯೇ ಎಂದು ಮತ್ತೊಮ್ಮೆ ಪರಿಶೀಲಿಸಿ ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.

ವಿದ್ಯಾರ್ಥಿಗಳಿಗೆ ಪ್ರೈಜ್ ಮನಿಯನ್ನು ಪಡೆದುಕೊಳ್ಳುವುದು ಹೇಗೆ?

ವಿದ್ಯಾರ್ಥಿಗಳು 2025-26 ನೇ ಸಾಲಿನ SSLC ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಪ್ರಥಮ ದರ್ಜೆಯಲ್ಲಿ ಪಾಸ್ ಆದ ವಿದ್ಯಾರ್ಥಿಗಳಿಗೆ 6000 ಹಾಗೂ ಡಿಸ್ಟಿಂಕ್ಷನ್ ಅಲ್ಲಿ ಪಾಸ್ ಆದ ವಿದ್ಯಾರ್ಥಿಗಳಿಗೆ 10,000 ಪ್ರೈಜ್ ಮನಿಯನ್ನು ನೀಡಲಿದ್ದು, ವಿದ್ಯಾರ್ಥಿಗಳಿಗೆ ಈ ಒಂದು ಪ್ರೈಜ್ ಮನಿಯು ನೇರವಾಗಿ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಜಮಾ ಆಗುತ್ತದೆ.

ಅಂತಿಮ ತೀರ್ಮಾನ:

ವಿದ್ಯಾರ್ಥಿಗಳೇ ನೀವು ಯಶಸ್ವಿಯಾಗಿ ಬರೆದ SSLC ಪರೀಕ್ಷೆಯ ಫಲಿತಾಂಶವು ಏಪ್ರಿಲ್ 24 ರಂದು ಬಿಡುಗಡೆ ಅಗಲಿದ್ದು, ನೀವು ಯಾವ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದೀರಾ ಎನ್ನುವ ಅಧರಾದ ಮೇಲೆ ನೀವು ಪಡೆದುಕೊಳ್ಳುವ ಪ್ರೈಜ್ ಮನಿ ನಿರ್ಧಾರವಾಗಲಿದೆ. ಫಲಿತಾಂಶ ಬಂದ ನಂತರವಷ್ಟೇ ನೀವು ಪ್ರೈಜ್ ಮನಿ ಪಡೆದುಕೊಳ್ಳಲು ಅರ್ಜಿ ಸಲ್ಲಿಸಬಹುದಾಗಿದ್ದು, ಉನ್ನತ ಅಂಕವನ್ನು ಗಳಿಸಿದರೆ ಈ ಮೇಲಿನ ಎಲ್ಲಾ ಮಾಹಿತಿಯನ್ನು ಓದಿಕೊಂಡು ನಂತರ ಅರ್ಜಿ ಸಲ್ಲಿಸಿ.


ಇದನ್ನು ಓದಿ: ಕರ್ನಾಟಕ SSLC ಫಲಿತಾಂಶ 2026 । Karnataka Examination Results Website 2026

Leave a Comment