SSP Application: ಕರ್ನಾಟಕ ಸರ್ಕಾರದ ಪ್ರಮುಖ ವಿದ್ಯಾರ್ಥಿವೇತನಗಳಲ್ಲಿ ಒಂದಾದ SSP ವಿದ್ಯಾರ್ಥಿವೇತನದ ಮೂಲಕ 2026-27 ನೇ ಸಾಲಿನಲ್ಲಿ ಮೆಟ್ರಿಕ್ ಪೂರ್ವ ಕೋರ್ಸ್ ಗಳಲ್ಲಿ ಅಂದರೆ ಒಂದನೇ ತರಗತಿಯಿಂದ 10 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಅಧಿಕೃತವಾಗಿ ಆರಂಭಗೊಂಡಿದ್ದು, ಅರ್ಹ ವಿದ್ಯಾರ್ಥಿಗಳಿಗೆ ಜೂನ್ 30 ರ ಒಳಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಬಡ ಮತ್ತು ಮಧ್ಯಮ ವರ್ಗಗಳ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವನ್ನು ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರವು ಈ ಒಂದು ವಿದ್ಯಾರ್ಥಿವೇತನ ಯೋಜನೆಯನ್ನು ಜಾರಿಗೊಳಿಸಿದ್ದು, ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವ ತರಗತಿಗೆ ಅನುಗುಣವಾಗಿ ವಿದ್ಯಾರ್ಥಿವೇತನವನ್ನು ನಿಗದಿಪಡಿಸಲಾಗಿದೆ.
ಅರ್ಹ ವಿದ್ಯಾರ್ಥಿಗಳು ಸರ್ವಸ್ ಸಮಸ್ಯೆಯಿಂದ ತಪ್ಪಿಸಿಕೊಳ್ಳಲು ಕೊನೆಯ ದಿನಾಂಕದ ಒಳಗೆ ಕಾಯದೆ ಇಂದೇ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ. ಪ್ರಸ್ತುತ ಲೇಖನದಲ್ಲಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ? ಅರ್ಜಿ ಸಲ್ಲಿಸಲು ಅಗತ್ಯವಾದ ದಾಖಲೆಗಳು ಯಾವುವು? ತರಗತಿವಾರು ವಿದ್ಯಾರ್ಥಿವೇತನದ ವಿವರವನ್ನು ನೀಡಲಾಗಿದ್ದು, ವಿದ್ಯಾರ್ಥಿಗಳು ಈ ಎಲ್ಲ ಮಾಹಿತಿಯನ್ನು ಓದಿಕೊಂಡು ನಂತರ ಅರ್ಜಿ ಸಲ್ಲಿಸಿ.

ಯೋಜನೆಯ ಅವಲೋಕನ:
| ಯೋಜನೆಯ ಹೆಸರು | SSP ವಿದ್ಯಾರ್ಥಿವೇತನ ಯೋಜನೆ |
| ಅರ್ಹ ವಿದ್ಯಾರ್ಥಿಗಳು | ಕರ್ನಾಟಕ ರಾಜ್ಯದ ಎಲ್ಲ ವಿದ್ಯಾರ್ಥಿಗಳು |
| ಸಿಗುವ ವಿದ್ಯಾರ್ಥಿವೇತನದ ಮೊತ್ತ | ತರಗತಿಗೆ ಅನುಗುಣವಾಗಿ ರೂ. 1000 ದಿಂದ ರೂ. 20,000 ದ ವರೆಗೆ |
| ಅರ್ಜಿ ಸಲ್ಲಿಸುವ ವಿಧಾನ | ಆನ್ಲೈನ್ ಮೂಲಕ |
| ಅಧಿಕೃತ ವೆಬ್ಸೈಟ್ | https://ssp.karnataka.gov.in/ |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 30-06-2026 |
ಏನಿದು SSP ವಿದ್ಯಾರ್ಥಿವೇತನ ಯೋಜನೆ?
SSP ವಿದ್ಯಾರ್ಥಿವೇತನ ಎನ್ನುವುದು, ರಾಜ್ಯ ಸರ್ಕಾರವು ವಿದ್ಯಾರ್ಥಿಗಳಿಗೆ ನೀಡುತ್ತಿರುವ ಶೈಕ್ಷಣಿಕ ನೆರವು ಯೋಜನೆಯಾಗಿದ್ದು, ರಾಜ್ಯದ ವಿವಿಧ ಇಲಾಖೆಗಳ ಅಡಿಯಲ್ಲಿ ನೀಡಲಾಗುವ ಎಲ್ಲ ವಿದ್ಯಾರ್ಥಿವೇತನವನ್ನು ಒಂದೇ ಆನ್ಲೈನ್ ವೇದಿಕೆ ಮೂಲಕ ನೀಡಲು SSP ಪೋರ್ಟಲ್ ಅನ್ನು ರೂಪಿಸಲಾಗಿದೆ.
ಪರಿಶಿಷ್ಟ ಜಾತಿಗಳ ಕಲ್ಯಾಣ ಇಲಾಖೆ, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ, ಹಿಂದುಳಿವ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸೇರಿದಂತೆ ಇನ್ನಿತರ ಇಲಾಖೆಗಳ ವಿದ್ಯಾರ್ಥಿವೇತನವನ್ನು ಈ ಒಂದು ಆನ್ಲೈನ್ ಪೋರ್ಟಲ್ ಮೂಲಕ ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ. ಈ ಯೋಜನೆಯ ಮುಖ್ಯ ಉದ್ದೇಶ ಆರ್ಥಿಕವಾಗಿ ಹಿಂದುಳಿದ, ಬಡ ಹಾಗೂ ಮಧ್ಯಮ ವರ್ಗಗಳ ವಿದ್ಯಾರ್ಥಿಗಳಿಗೆ ಶಿಕ್ಷಣವನ್ನು ಮುಂದುವರೆಸಲು ನೆರವು ನೀಡುವುದಾಗಿದೆ.
ಯೋಜನೆಯ ಉದ್ದೇಶ:
- ಆರ್ಥಿಕವಾಗಿ ದುರ್ಬಲ ವಿದ್ಯಾರ್ಥಿಗಳಿಗೆ ನೆರವು:
ಅನೇಕ ಕುಟುಂಬಗಳು ಮಕ್ಕಳ ಶಿಕ್ಷಣಕ್ಕೆ ಅಗತ್ಯವಾದ ವೆಚ್ಚವನ್ನು ಭರಿಸಲು ಕಷ್ಟಪಡುತ್ತವೆ. ಪುಸ್ತಕಗಳು, ಶಾಲಾ ಶುಲ್ಕ, ಸಮವಸ್ತ್ರ ಹಾಗೂ ಇತರ ಶೈಕ್ಷಣಿಕ ಅಗತ್ಯಗಳಿಗೆ ಹಣದ ಕೊರತೆ ಉಂಟಾಗುತ್ತದೆ. ಇಂತಹ ವಿದ್ಯಾರ್ಥಿಗಳಿಗೆ ಸರ್ಕಾರ ವಿದ್ಯಾರ್ಥಿವೇತನದ ಮೂಲಕ ಆರ್ಥಿಕ ನೆರವು ನೀಡಿ ಅವರ ಶಿಕ್ಷಣ ನಿರಂತರವಾಗಿರುವಂತೆ ನೋಡಿಕೊಳ್ಳುತ್ತದೆ.
- ಶಾಲೆ ತೊರೆಯುವ ಪ್ರಮಾಣ ಕಡಿಮೆ ಮಾಡುವುದು:
ಆರ್ಥಿಕ ಸಮಸ್ಯೆಗಳ ಕಾರಣದಿಂದ ಕೆಲವು ವಿದ್ಯಾರ್ಥಿಗಳು ಶಾಲೆಯನ್ನು ಅರ್ಧದಲ್ಲೇ ಬಿಟ್ಟುಬಿಡುವ ಪರಿಸ್ಥಿತಿ ಎದುರಾಗುತ್ತದೆ. ವಿದ್ಯಾರ್ಥಿವೇತನ ಯೋಜನೆಯ ಮೂಲಕ ಅವರಿಗೆ ಅಗತ್ಯ ಸಹಾಯ ದೊರೆಯುವುದರಿಂದ ಅವರು ತಮ್ಮ ಶಿಕ್ಷಣವನ್ನು ಮುಂದುವರಿಸಲು ಸಾಧ್ಯವಾಗುತ್ತದೆ.
- ಸಮಾನ ಶಿಕ್ಷಣದ ಅವಕಾಶ ಕಲ್ಪಿಸುವುದು:
ಸಮಾಜದ ವಿವಿಧ ವರ್ಗಗಳ ವಿದ್ಯಾರ್ಥಿಗಳು ಶಿಕ್ಷಣ ಪಡೆಯುವಲ್ಲಿ ಅಸಮಾನತೆ ಉಂಟಾಗದಂತೆ ನೋಡಿಕೊಳ್ಳುವುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ. ಎಲ್ಲ ವಿದ್ಯಾರ್ಥಿಗಳಿಗೂ ಸಮಾನ ಶಿಕ್ಷಣದ ಅವಕಾಶ ದೊರೆಯಬೇಕು ಎಂಬ ಉದ್ದೇಶದಿಂದ ಸರ್ಕಾರ ಈ ಯೋಜನೆಯನ್ನು ಜಾರಿಗೊಳಿಸಿದೆ.
- ಪ್ರತಿಭಾವಂತ ವಿದ್ಯಾರ್ಥಿಗಳನ್ನು ಉತ್ತೇಜಿಸುವುದು:
ಅನೇಕ ಪ್ರತಿಭಾವಂತ ವಿದ್ಯಾರ್ಥಿಗಳು ಆರ್ಥಿಕ ಕೊರತೆಯಿಂದ ತಮ್ಮ ವಿದ್ಯಾಭ್ಯಾಸದಲ್ಲಿ ಹಿನ್ನಡೆ ಅನುಭವಿಸುತ್ತಾರೆ. ಅಂತಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡುವ ಮೂಲಕ ಅವರ ಪ್ರತಿಭೆಯನ್ನು ಬೆಳೆಸಲು ಮತ್ತು ಉನ್ನತ ಶಿಕ್ಷಣದತ್ತ ಸಾಗಲು ನೆರವಾಗಲಾಗುತ್ತದೆ.
- ಪೋಷಕರ ಆರ್ಥಿಕ ಹೊರೆ ಕಡಿಮೆ ಮಾಡುವುದು:
ಮಕ್ಕಳ ಶಿಕ್ಷಣಕ್ಕಾಗಿ ಪೋಷಕರು ಸಾಕಷ್ಟು ಹಣ ವೆಚ್ಚ ಮಾಡಬೇಕಾಗುತ್ತದೆ. ವಿಶೇಷವಾಗಿ ಕಡಿಮೆ ಆದಾಯದ ಕುಟುಂಬಗಳಿಗೆ ಇದು ದೊಡ್ಡ ಸವಾಲಾಗಿರುತ್ತದೆ. ವಿದ್ಯಾರ್ಥಿವೇತನದ ಮೂಲಕ ಸರ್ಕಾರ ಪೋಷಕರ ಮೇಲಿರುವ ಶಿಕ್ಷಣ ವೆಚ್ಚದ ಹೊರೆ ಕಡಿಮೆ ಮಾಡಲು ಸಹಕಾರ ನೀಡುತ್ತದೆ.
ಯೋಜನೆಯ ಪ್ರಯೋಜನ:
- ವಿದ್ಯಾರ್ಥಿಗಳಿಗೆ SSP ಸ್ಕಾಲರ್ಷಿಪ್ ಯೋಜನೆಯಡಿಯಲ್ಲಿ ಶೈಕ್ಷಣಿಕ ನೆರವನ್ನು ನೀಡುವುದರಿಂದ ವಿದ್ಯಾರ್ಥಿಗಳು ನಿಶ್ಚಿಂತೆಯಿಂದ ತಮ್ಮ ಶೈಕ್ಷಣಿಕ ವೆಚ್ಚವನ್ನು ಭರಿಸಿ ಓದಿನ ಕಡೆ ಹೆಚ್ಚಿನ ಗಮನ ಹರಿಸಬಹುದಾಗಿದೆ.
- ವಿದ್ಯಾರ್ಥಿಗಳಿಗೆ ಆರ್ಥಿಕ ನೆರವನ್ನು ನೀಡುವುದರಿಂದ ಕುಟುಂಬದ ಮೇಲಿನ ಮಕ್ಕಳ ಶೈಕ್ಷಣಿಕ ವೆಚ್ಚದ ಹೊರೆಯನ್ನು ಕಡಿಮೆ ಆಗುತ್ತದೆ. ಇದರಿಂದ ಕುಟುಂಬದ ಆರ್ಥಿಕ ಒತ್ತಡವು ಕಡಿಮೆಯಾಗುತ್ತದೆ.
- ವಿದ್ಯಾರ್ಥಿಗಳಿಗೆ ಯೋಜನೆಯಡಿಯಲ್ಲಿ ಸಿಗುವ ವಿದ್ಯಾರ್ಥಿವೇತನದ ಮೊತ್ತವು ನೇರವಾಗಿ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಜಮಾ ಆಗುವುದರಿಂದ ಯಾವುದೇ ಮಧ್ಯವರ್ತಿಗಳ ಹಾವಳಿ ಇರುವುದಿಲ್ಲ.
- ಕರ್ನಾಟಕ ಸರ್ಕಾರವು ಎಲ್ಲ ಇಲಾಖೆಯಡಿಯಲ್ಲಿ ಬರುವ ವಿದ್ಯಾರ್ಥಿವೇತನವನ್ನು ಒಂದೇ SSP ಪೋರ್ಟಲ್ ಮೂಲಕ ವಿದ್ಯಾರ್ಥಿವೇತನವನ್ನು ಬಿಡುಗಡೆ ಮಾಡುವುದರಿಂದ ಎಲ್ಲ ವರ್ಗಗಳ ವಿದ್ಯಾರ್ಥಿಗಳು ಸುಲಭವಾಗಿ ತಮ್ಮ ಮನೆಯಲ್ಲೇ ಕುಳಿತು ಅಥವಾ ತಮ್ಮ ಹತ್ತಿರದ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ತರಗತಿವಾರು ವಿದ್ಯಾರ್ಥಿವೇತನದ ವಿವರ:
ಪ್ರಸ್ತುತ ಸಾಲಿನಲ್ಲಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ SSP ಸ್ಕಾಲರ್ಷಿಪ್ ಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿದ್ದು, ಹಾಗಾಗಿ 1 ನೇ ತರಗತಿಯಿಂದ SSLC ಅಲ್ಲಿ ವ್ಯಾಸಂಗ ಮಡುತ್ತಿರುವ ವಿದ್ಯಾರ್ಥಿಗಳಿಗೆ ಸಿಗುವ ವಿದ್ಯಾರ್ಥಿವೇತನದ ವಿವರ ಈ ಕೆಳಕಂಡಂತೆ ನೀಡಲಾಗಿದೆ.
- 1ನೇ ತರಗತಿಯಿಂದ 5 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ:
- ಬಾಲಕರಿಗೆ ರೂ. 1000/-
- ಬಾಲಕಿಯರಿಗೆ ರೂ. 1100/-
- 6 ನೇ ತರಗತಿಯಿಂದ 8 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ:
- ಬಾಲಕರಿಗೆ ರೂ. 1150/-
- ಬಾಲಕಿಯರಿಗೆ ರೂ. 1250/-
- 9 ನೇ ತರಗತಿಯಿಂದ 10 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ:
- ಡೇ ಸ್ಕಾಲರ್ ವಿದ್ಯಾರ್ಥಿಗಳಿಗೆ ರೂ. 3500/-
- ಹಾಸ್ಟೆಲರ್ ವಿದ್ಯಾರ್ಥಿಗಳಿಗೆ ರೂ. 7000/-
- 9 ನೇ ತರಗತಿಯಿಂದ 10 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ
- ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ರೂ. 4000/-
ಅರ್ಹತಾ ಮಾನದಂಡಗಳು:
- ವಿದ್ಯಾರ್ಥಿಗಳು ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕು.
- ಮೆಟ್ರಿಕ್ ಪೂರ್ವ ಸ್ಕಾಲರ್ಷಿಪ್ ಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿರುವುದರಿಂದ ವಿದ್ಯಾರ್ಥಿಗಳು 1 ನೇ ತರಗತಿಯಿಂದ 10 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರಬೇಕು.
- ವಿದ್ಯಾರ್ಥಿಗಳು ಸರ್ಕಾರಿ, ಅನುದಾನಿತ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಖಾಸಗಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರಬೇಕು.
- ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಆಧಾರ್ ಕಡ್ಡಾಯವಾಗಿ ಸೀಡಿಂಗ್ ಆಗಿರಬೇಕು.
- ವಿದ್ಯಾರ್ಥಿಗಳು ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಕನಿಷ್ಠ 60% ಅಂಕ ಗಳಿಸಿ ತೇರ್ಗಡೆ ಹೊಂದಿರಬೇಕು.
- ಕುಟುಂಬದ ವಾರ್ಷಿಕ ಆದಾಯವು ಸರ್ಕಾರ ನಿಗದಿಪಡಿಸಿದ ಮಿತಿಯೊಳಗೆ ಇರಬೇಕು.
ಅರ್ಜಿ ಸಲ್ಲಿಸಲು ಅಗತ್ಯವಾದ ದಾಖಲೆಗಳು:
- ವಿದ್ಯಾರ್ಥಿಗಳ ಆಧಾರ್ ಕಾರ್ಡ್
- ಪೋಷಕರ ಆಧಾರ್ ಕಾರ್ಡ್
- ರೇಷನ್ ಕಾರ್ಡ್
- ಚಾಲ್ತಿಯಲ್ಲಿರುವ ಆದಾಯ ಮತ್ತು ಜಾತಿ ಪ್ರಮಾಣಪತ್ರ
- ಪಾಸ್ಪೋರ್ಟ್ ಅಳತೆಯ ಫೋಟೋ
- ಹಿಂದಿನ ಶೈಕ್ಷಣಿಕ ವರ್ಷದ ಅಂಕಪಟ್ಟಿ
- ದಾಖಲಾತಿ ಪ್ರಮಾಣಪತ್ರ
- ವಾಸಸ್ಥಳ ದೃಢೀಕರಣ ಪತ್ರ
- ಬ್ಯಾಂಕ್ ಪಾಸ್ ಬುಕ್ ವಿವರ
- SATS ಐಡಿ
- ಇತರೆ ದಾಖಲೆಗಳು
ಅರ್ಜಿ ಸಲ್ಲಿಸುವ ವಿಧಾನ:
ವಿದ್ಯಾರ್ಥಿಗಳು SSP ವಿದ್ಯಾರ್ಥಿವೇತನ ಯೋಜನೆಗೆ ಆನ್ಲೈನ್ ಮೂಲಕ ಅರ್ಜಿಯನ್ನು ಈ ಕೆಳಗೆ ನೀಡಿರುವ ವಿಧಾನಗಳ ಮೂಲಕ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ.
- ಅರ್ಹ ವಿದ್ಯಾರ್ಥಿಗಳು ಮೊದಲು SSP ಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ.
- ಮುಖಪುಟದಲ್ಲಿರುವ ಅಪ್ಲಿಕೇಶನ್ ಕಾರ್ನರ್ ವಿಭಾಗಕ್ಕೆ ಹೋಗಿ, ನ್ಯೂ ರಿಜಿಸ್ಟ್ರೇಷನ್ ಮೇಲೆ ಕ್ಲಿಕ್ ಮಾಡಿ.
- ನಂತರ ಮೂಲ ವಿವರಗಳನ್ನು ಬಳಸಿ ರಿಜಿಸ್ಟ್ರೇಷನ್ ಪ್ರಕ್ರಿಯೆ ಪೂರ್ಣಗೊಳಿಸಿ.
- ನಂತರ ರಿಜಿಸ್ಟ್ರೇಷನ್ ನಂಬರ್ ಹಾಗೂ ಪಾಸ್ ವರ್ಡ್ ಬಳಸಿ ಲಾಗಿನ್ ಆಗಿ.
- ನಂತರ ಅಲ್ಲಿ ಕೇಳಲಾದ ಎಲ್ಲಾ ವಿದ್ಯಾರ್ಥಿಗಳ SATS ಐಡಿ, ವೈಯಕ್ತಿಕ ವಿವರ, ಶೈಕ್ಷಣಿಕ ವಿವರ ಹಾಗೂ ಇನ್ನಿತರ ಎಲ್ಲಾ ವಿವರಗಳನ್ನು ಭರ್ತಿ ಮಾಡಿ. ಎಲ್ಲ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ
- ನಂತರ ಅಪ್ಲಿಕೇಶನ್ ಫಾರ್ಮ್ ಮ ಪ್ರಿಂಟ್ ತೆಗೆದುಕೊಂಡು ಮೇಲೆ ನೀಡಲಾದ ಎಲ್ಲ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಒಂದು ಕಾಪಿಯನ್ನು ನಿನ್ನ ಶಾಲಾ ಮುಖ್ಯ ಶಿಕ್ಷಕರಿಗೆ ಸಲ್ಲಿಸಿ
ಪ್ರಮುಖ ದಿನಾಂಕಗಳು:
| ಪ್ರಮುಖ ಈವೆಂಟ್ | ದಿನಾಂಕ |
|---|---|
| ಎಲ್ಲ ಇಲಾಖೆಗಳ ಅಡಿಯಲ್ಲಿ ಸ್ಕಾಲರ್ಷಿಪ್ ಗೆ ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ | 01-06-2026 |
| ಎಲ್ಲ ಇಲಾಖೆಗಳ ಅಡಿಯಲ್ಲಿ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 30-06-2026 |
ಅಂತಿಮ ತೀರ್ಮಾನ:
ರಾಜ್ಯ ಸರ್ಕಾರವು 2026-27 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ SSP ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಜೂನ್ 1 ರಿಂದ ಜೂನ್ 30 ರ ವೆರೆಗೂ ಅವಕಾಶ ಕಲ್ಪಿಸಿದ್ದು, ನಂತರದ ದಿನಗಳಲ್ಲಾಗುವ ತಾಂತ್ರಿಕ ಸಮಸ್ಯೆಗಳಿಂದ ಪಾರಾಗಲು ಇಂದೇ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಪ್ರಸ್ತುತ ಸಾಲಿನಲ್ಲಿ ನೀಡಲಾಗುವ ವಿದ್ಯಾರ್ಥಿವೇತನವನ್ನು ಪಡೆದುಕೊಳ್ಳಿ.
ಪ್ರಮುಖ ಲಿಂಕುಗಳು:
| Whatsapp Group Link | Click Here |
| Telegram Group Link | Click Here |
| Instagram Link | Click Here |
ಇತರೆ ಪ್ರಮುಖ ಲಿಂಕುಗಳು:
- PM YASASVI: ₹20,000 ಸ್ಕಾಲರ್ಶಿಪ್! ಕೇಂದ್ರ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್! ಇಂದೇ ಅರ್ಜಿ ಸಲ್ಲಿಸಿ
- Naati Koli: ₹1,20,000 ಸಹಾಯಧನ! ನಾಟಿ ಕೋಳಿ ಸಾಕಾಣಿಕೆಗೆ ಸರ್ಕಾರದಿಂದ ಭಾರಿ ನೆರವು ಜೊತೆಗೆ ನಾಟಿ ಕೋಳಿ ಮರಿ ವಿತರಣೆ
- PUC Students: ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್! 26,000 ಪ್ರೋತ್ಸಾಹಧನ | ಅರ್ಜಿ ಹಾಕುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ
- SCSS: ಹಿರಿಯ ನಾಗರೀಕರಿಗೆ ಕೇಂದ್ರ ಸರ್ಕಾರದಿಂದ ಬಂಪರ್ ಗಿಫ್ಟ್! ನಿವೃತ್ತಿ ಹಣ ಹೂಡಿಕೆ ಮಾಡಿ, ಖಚಿತ ಆದಾಯ ಪಡೆಯಿರಿ!
- Application: CM ಘೋಷಣೆ, ಮನೆ ಇಲ್ಲದ ಬಡವರಿಗೆ ಉಚಿತ ಸೈಟ್ ಮತ್ತು ಮನೆ ಹಂಚಿಕೆ 2026 । ಇಂದೇ ಅರ್ಜಿ ಸಲ್ಲಿಸಿ