Tumkur: ತುಮಕೂರು ಪೌರಕಾರ್ಮಿಕ ನೇಮಕಾತಿ 2026! ಯಾವುದೇ ಅರ್ಜಿ ಶುಲ್ಕವಿಲ್ಲದೆ ಭರ್ಜರಿ ಉದ್ಯೋಗಾವಕಾಶ

ತುಮಕೂರು ಮಹಾನಗರ ಪಾಲಿಕೆ, ತಿಪಟೂರು ನಗರ ಪುರಸಭೆ ಮತ್ತು ಶಿರಾ ನಗರ ಪುರಸಭೆಗಳಲ್ಲಿ ಖಾಲಿ ಇರುವ ವಿವಿಧ ಪೌರಕಾರ್ಮಿಕ ಹುದ್ದೆಗಳ ನೇಮಕಾತಿಗೆ ಭರ್ತಿ ಮಾಡಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅಧಿಸೂಚನೆಯಲ್ಲಿ ತಿಳಿಸಿರುವ ಎಲ್ಲಾ ಮಾಹಿತಿಯನ್ನು ಓದಿಕೊಂಡು ಅಗತ್ಯ ದಾಖಲೆಗಳೊಂದಿಗೆ ಆಫ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

Tumkur Recruitment in Kannada

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಗೆ ಈ ಒಂದು ಹುದ್ದೆಗೆ ನಿನ್ನೆಯಿಂದಲೇ ಅಂದರೆ 25-03-2026 ರಿಂದ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿದ್ದು, ಅರ್ಜಿ ಸಲ್ಲಿಸಲು ಏಪ್ರಿಲ್ 8, 2026 ಕೊನೆಯ ದಿನಾಂಕವಾಗಿದೆ. ತುಮಕೂರು ಜಿಲ್ಲೆಯ ವಿವಿಧ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿ ಇರುವ ಪೌರಕಾರ್ಮಿಕ ಹುದ್ದೆಗಳನ್ನು ಭರ್ತಿ ಮಾಡುತ್ತಿದ್ದು, ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹತೆಯನ್ನು ಹೊಂದಿದ್ದರೆ, ಇಂದೇ ಅರ್ಜಿ ಸಲ್ಲಿಸಿ.

ಈ ಒಂದು ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆಗಳು, ವಯೋಮಿತಿ, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಯನ್ನು ಪ್ರಸ್ತುತ ಈ ಒಂದು ಲೇಖನದ ಮೂಲಕ ತಿಳಿಸಲಾಗಿದೆ. ಈ ಎಲ್ಲಾ ಮಾಹಿತಿಯನ್ನು ಓದಿಕೊಳ್ಳಿ. ಇದೇ ರೀತಿಯ ಇನ್ನಷ್ಟು ಹುದ್ದೆಗಳ ಕುರಿತು ಮಾಹಿತಿ ಬೇಕಿದ್ದರೆ ನಮ್ಮ ವೆಬ್ಸೈಟ್ ಪಬ್ಲಿಕ್.ಸಲಹೆ.ಇನ್ ಗೆ ಭೇಟಿ ನೀಡಿ.

Tumkur

ಹುದ್ದೆಯ ಕಿರು ವಿಮರ್ಶೆ:

ನೇಮಕಾತಿ ಸಂಸ್ಥೆ ಹೆಸರು ತುಮಕೂರು ಮಹಾನಗರ ಪಾಲಿಕೆ
ಹುದ್ದೆಯ ಹೆಸರು ಪೌರಕಾರ್ಮಿಕರು (ನಾಗರೀಕ ಸೇವಕ)
ಹುದ್ದೆಗಳ ಸಂಖ್ಯೆ 238 ಹುದ್ದೆಗಳು
ಉದ್ಯೋಗ ಸ್ಥಳ ತುಮಕೂರು – ಕರ್ನಾಟಕ
ಅರ್ಜಿ ಸಲ್ಲಿಸುವ ವಿಧಾನ ಆಫ್ಲೈನ್

ಹುದ್ದೆಯ ಸಂಕ್ಷಿಪ್ತ ವಿವರ:

ತುಮಕೂರು ಜಿಲ್ಲೆಯ ವಿವಿಧ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿ ಇರುವ ಪೌರಕಾರ್ಮಿಕ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಯಾವ ಸಂಸ್ಥೆಯಲ್ಲಿ ಎಷ್ಟು ಹುದ್ದೆಗಳು ಖಾಲಿ ಇದೆ ಎನ್ನುವುದನ್ನು ಈ ಕೆಳಗಿನ ಹಂತದಲ್ಲಿ ತಿಳಿದುಕೊಳ್ಳೋಣ.

ನಗರ ಸ್ಥಳೀಯ ಸಂಸ್ಥೆಗಳು ಹುದ್ದೆಗಳ ಸಂಖ್ಯೆ
ತುಮಕೂರು ಮಹಾನಗರ ಪಾಲಿಕೆ 175 ಹುದ್ದೆಗಳು
ಶಿರಾ ನಗರಸಭೆ 39 ಹುದ್ದೆಗಳು
ತಿಪಟೂರು ನಗರಸಭೆ 24 ಹುದ್ದೆಗಳು

ಹುದ್ದೆಗೆ ಸಂಬಂಧಿಸಿದ ಅರ್ಹತಾ ಮಾನದಂಡಗಳು:

  • ಶೈಕ್ಷಣಿಕ ಅರ್ಹತೆ:

ತುಮಕೂರು ಮಹಾನಗರ ಪಾಲಿಕೆಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಪೌರಕಾರ್ಮಿಕ ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು.

  • ಇತರೆ ಅರ್ಹತೆಗಳು:

ಅಭ್ಯರ್ಥಿಗಳು ಸಂಬಂಧಪಟ್ಟರ ಸ್ಥಳೀಯ ಸಂಸ್ಥೆಯಲ್ಲಿ ದಿನಗೂಲಿ ಅಥವಾ ಗುತ್ತಿಗೆ ಅಥವಾ ಹೊರಗುತ್ತಿಗೆ ಆಧಾರದ ಮೇಲೆ ಕನಿಷ್ಠ ಒಂದು ವರ್ಷ ಅವಧಿಯ ಪೌರಕಾರ್ಮಿಕ, ಯುಜಿಡಿ ಹೆಲ್ಪರ್ಸ್, ಲೋಡರ್ಸ್, ತ್ಯಾಜ್ಯ ಸಂಸ್ಕರಣಾ ಘಟಕ, ಸಾರ್ವಜನಿಕ ಶೌಚಾಲಯ, ಕ್ಲಿನರ್ ಹಾಗೂ ಶೂನ್ಯ ತಾಜ್ಯ ನಿರ್ವಹಣಾ ಘಟಕದ ಕೆಲಸಗಾರರಾಗಿರಬೇಕು.

ವಯೋಮಿತಿ:

ತುಮಕೂರು ಮಹಾನಗರ ಪಾಲಿಕೆಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಪೌರಕಾರ್ಮಿಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷದಿಂದ ಗರಿಷ್ಟ 50 ವರ್ಷ ವಯೋಮಿತಿಯನ್ನು ಹೊಂದಿರಬೇಕು.

ಅರ್ಜಿ ಶುಲ್ಕ:

ತುಮಕೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಪೌರಕಾರ್ಮಿಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸದೇ ಉಚಿತವಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ವೇತನ ಶ್ರೇಣಿ:

ತುಮಕೂರು ಜಿಲ್ಲೆಯ ವಿವಿಧ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿ ಇರುವ ಪೌರಕಾರ್ಮಿಕ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನಿಯಮಾನುಸಾರ ವೇತನವನ್ನು ನೀಡಲಾಗುತ್ತದೆ.

ಹುದ್ದೆಗೆ ಅರ್ಜಿ ಸಲ್ಲಿಸಲು ಅಗತ್ಯವಾದ ದಾಖಲೆಗಳು:

  • ಆಧಾರ್ ಕಾರ್ಡ್
  • ಬ್ಯಾಂಕ್ ಪಾಸ್ ಬುಕ್
  • ಪಾಸ್ಪೋರ್ಟ್ ಅಳತೆಯ ಫೋಟೋ
  • ಅನುಭವ ಪ್ರಮಾಣಪತ್ರ
  • ವಯಸ್ಸಿನ ಪೂರವೆ
  • ನಿವಾಸ ದೃಢೀಕರಣ ಪತ್ರ
  • ಹಾಗೂ ಇತರೆ ದಾಖಲೆಗಳು

ಅರ್ಜಿ ಸಲ್ಲಿಸುವ ವಿಧಾನ:

ತುಮಕೂರು ಮಹಾನಗರ ಪಾಲಿಕೆಯ ಪೌರಕಾರ್ಮಿಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ.

  • ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ತುಮಕೂರು ಮಹಾನಗರ ಪಾಲಿಕೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಂಡು ನಂತರ ಅರ್ಜಿ ನಮೂನೆಯನ್ನು ಪಡೆದುಕೊಳ್ಳಿ.
  • ಅರ್ಜಿ ನಮೂನೆಯಲ್ಲಿ ಕೇಳಲಾದ ನಿಮ್ಮ ಎಲ್ಲಾ ವೈಯಕ್ತಿಕ ಹಾಗೂ ಶೈಕ್ಷಣಿಕ ವಿವರಗಳನ್ನು ಸ್ಪಷ್ಟವಾಗಿ ಭರ್ತಿ ಮಾಡಿ
  • ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೊದಲು ತಮ್ಮ ಶೈಕ್ಷಣಿಕ ದಾಖಲೆಗಳು, ವೈಯಕ್ತಿಕ ದಾಖಲೆಗಳು, ಅನುಭವ ಪ್ರಮಾಣಪತ್ರ, ಅರ್ಜಿದಾರರ ಸಹಿ, ಪಾಸ್ ಪೋರ್ಟ್ ಅಳತೆಯ ಫೋಟೋ ಹಾಗೂ ಇನ್ನಿತರ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಿ.
  • ನಂತರ ಭರ್ತಿ ಮಡಿದ ಅರ್ಜಿ ನಮೂನೆಯೊಂದಿಗೆ ಈ ಎಲ್ಲಾ ಅಗತ್ಯ ದಾಖಲೆಗಳನ್ನು ಲಗತ್ತಿಸಿ. ಈ ಕೆಳಗೆ ನೀಡಲಾದ ವಿಳಾಸಕ್ಕೆ ಕಳುಹಿಸಿ.
“ತುಮಕೂರು ಮಹಾನಗರ ಪಾಲಿಕೆ / ಪುರಸಭೆ, ಶಿರಾ/ ತಿಪಟೂರು ಕಚೇರಿಗೆ ಸಲ್ಲಿಸಿ”

ಆಯ್ಕೆ ಪ್ರಕ್ರಿಯೆ:

  • ಪೌರಕಾರ್ಮಿಕ ಹುದ್ದೆಗೆ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಾಗುತ್ತದೆ.

ಹುದ್ದೆಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು:

ಪ್ರಮುಖ ವಿವರಗಳು ಪ್ರಮುಖ ಲಿಂಕುಗಳು
ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ 25-03-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 08-04-2026
ಅರ್ಜಿ ಪ್ರತಿಯನ್ನು ಕಚೇರಿಗೆ ಸಲ್ಲಿಸಲು ಕೊನೆಯ ದಿನಾಂಕ 09-04-2026

ಹುದ್ದೆಗೆ ಸಂಬಂಧಿಸಿದ ಪ್ರಮುಖ ಲಿಂಕುಗಳು:

ಪ್ರಮುಖ ವಿವರಗಳು ಪ್ರಮುಖ ಲಿಂಕುಗಳು
ಅಧಿಕೃತ ಅಧಿಸೂಚನೆ PDF ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್ಸೈಟ್ ಲಿಂಕ್ ಇಲ್ಲಿ ಕ್ಲಿಕ್ ಮಾಡಿ

ಅಂತಿಮ ತೀರ್ಮಾನ:

ತುಮಕೂರು ಮಹಾನಗರ ಪಾಲಿಕೆಯು ಒಟ್ಟು 238 ಪೌರಕಾರ್ಮಿಕ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಕರ್ನಾಟಕದ ತುಮಕೂರು ಜಿಲ್ಲೆಯಲ್ಲಿ ವೃತ್ತಿ ಜೀವನವನ್ನು ಪ್ರಾರಂಭಿಸಬೇಕೆಂದಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶವಾಗಿದೆ. ನೀವೇನಾದರೂ ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸಿದರೆ ಹುದ್ದೆಗೆ ಸಂಬಂಧಿಸಿದ ಅರ್ಹತಾ ಮಾನದಂಡಗಳನ್ನು ಪೂರೈಸುತ್ತೇವೆಯೋ? ಇಲ್ಲವೋ? ಎಂದು ಖಚಿತಪಡಿಸಿಕೊಂಡು ಮೇಲೆ ನೀಡಿರುವ ವಿಳಾಸಕ್ಕೆ ಅರ್ಜಿ ಸಲ್ಲಿಸಿ.


ಇತರೆ ಪ್ರಮುಖ ಲಿಂಕುಗಳು:

Leave a Comment