ನಮಸ್ಕಾರ ಸ್ನೇಹಿತರೆ, ಉಡುಪಿ ಕೊಚ್ಚಿನ್ ಶಿಪ್ಯಾರ್ಡ್ ಲಿಮಿಟೆಡ್ 2026 ನೇ ಸಾಲಿನಲ್ಲಿ ಮತ್ತೊಮ್ಮೆ ಹೊಚ್ಚ ಹೊಸ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಇಲ್ಲಿ ಅಸಿಸ್ಟೆಂಟ್ ಜನರಲ್ ಮ್ಯಾನೇಜರ್, ಡೆಪ್ಯೂಟಿ ಮ್ಯಾನೇಜರ್ ಸೇರಿದಂತೆ ಒಟ್ಟು ಐದು ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಲಾಗಿದೆ.
UCSL Recruitment 2026
ಮೆಕ್ಯಾನಿಕಲ್, ನೇವಲ್ ಆರ್ಕಿಟೆಕ್ಚರ್, ಮೆರೈನ್ ಇಂಜಿನಿಯರಿಂಗ್ ಸೇರಿದಂತೆ ಇನ್ನಿತರ ವಿಭಾಗಗಳಲ್ಲಿ ಇಂಜಿನಿಯರಿಂಗ್ ಅಥವಾ ಡಿಪ್ಲೊಮಾ ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಉಡುಪಿ ಕೊಚ್ಚಿನ್ ಶಿಪ್ಯಾರ್ಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ದಿನಾಂಕ 5-06-2026 ರಿಂದ ಪ್ರಾರಂಭಗೊಂಡು ದಿನಾಂಕ 30-06-2026 ಕ್ಕೆ ಕೊನೆಗೊಳ್ಳುತ್ತದೆ. ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊಚ್ಚಿನ್ ಶಿಪ್ಯಾರ್ಡ್ ನ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಯ ಕಿರು ವಿಮರ್ಶೆ:
| ನೇಮಕಾತಿ ಸಂಸ್ಥೆ | ಉಡುಪಿ ಕೊಚ್ಚಿನ್ ಶಿಪ್ಯಾರ್ಡ್ ಲಿಮಿಟೆಡ್ |
| ಹುದ್ದೆಗಳ ಹೆಸರು | ಅಸಿಸ್ಟೆಂಟ್ ಜನರಲ್ ಮ್ಯಾನೇಜರ್, ಡೆಪ್ಯುಟಿ ಮ್ಯಾನೇಜರ್ |
| ಹುದ್ದೆಗಳ ಸಂಖ್ಯೆ | ಒಟ್ಟು 5 ಹುದ್ದೆಗಳು |
| ವೇತನ ಶ್ರೇಣಿ | ₹50,000/- ₹2,20,000/- |
| ಅರ್ಜಿ ಸಲ್ಲಿಸುವ ವಿಧಾನ | ಆನ್ಲೈನ್ ಮೂಲಕ |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 30-06-2026 |
ಹುದ್ದೆಯ ಸಂಕ್ಷಿಪ್ತ ವಿವರ:
ಉಡುಪಿ ಕೊಚ್ಚಿನ್ ಶಿಪ್ಯಾರ್ಡ್ ಲಿಮಿಟೆಡ್ ಪ್ರಸ್ತುತ ನೇಮಕಾತಿ ಅಧಿಸೂಚನೆಯಲ್ಲಿ ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಹಾಗೂ ಡೆಪ್ಯೂಟಿ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಮೆಕ್ಯಾನಿಕಲ್, ನೇವಲ್ ಆರ್ಕಿಟೆಕ್ಚರ್, ಮೆರೈನ್ ಇಂಜಿನಿಯರಿಂಗ್ ವಿಭಾಗದಲ್ಲಿ ಡಿಪ್ಲೊಮಾ ಹಾಗೂ ಇಂಜಿನಿಯರಿಂಗ್ ಪದವಿ ಪಡೆದ 35 – 50 ವರ್ಷ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಹುದ್ದೆಯ ವಿವರ:
ಉಡುಪಿ ಕೊಚ್ಚಿನ್ ಶಿಪ್ಯಾರ್ಡ್ ಲಿಮಿಟೆಡ್ ಪ್ರಸ್ತುತ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ, ಹುದ್ದೆಗಳ ವಿವರ ಈ ಕೆಳಕಂಡಂತಿದೆ.
| ಹುದ್ದೆಗಳ ವಿವರ | ಹುದ್ದೆಗಳ ಸಂಖ್ಯೆ |
| ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ (ಇಂಜಿನಿಯರಿಂಗ್) | 2 ಹುದ್ದೆಗಳು |
| ಡೆಪ್ಯೂಟಿ ಮ್ಯಾನೇಜರ್ (ಮೆಕ್ಯಾನಿಕಲ್) | 3 ಹುದ್ದೆಗಳು |
ವಿದ್ಯಾರ್ಹತೆ:
- ಅಸಿಸ್ಟೆಂಟ್ ಜನರಲ್ ಮ್ಯಾನೇಜರ್:
ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕನಿಷ್ಠ 60% ಅಂಕಗಳೊಂದಿಗೆ ನೇವಲ್ ಆರ್ಕಿಟೆಕ್ಟರ್ ಅಥವಾ ಮೆಕ್ಯಾನಿಕಲ್ ಅಥವಾ ಮೆರೈನ್ ಇಂಜಿನಿಯರಿಂಗ್ ಅಥವಾ ಪ್ರೊಡಕ್ಷನ್ ಇಂಜಿನಿಯರಿಂಗ್ ವಿಭಾಗದಲ್ಲಿ ಪದವಿ ಪೂರ್ಣಗೊಳಿಸಿರಬೇಕು.
ಪದವಿ ಪೂರ್ಣಗೊಂಡ ನಂತರ, ಸಂಬಂಧಿತ ಕ್ಷೇತ್ರದಲ್ಲಿ ಕನಿಷ್ಠ 15 ವರ್ಷಗಳ ಮನೇಜಿರಿಯಲ್ ಅನುಭವ ಕಡ್ಡಾಯವಾಗಿರುತ್ತದೆ.
MS ಪ್ರಾಜೆಕ್ಟ್ ಅಥವಾ MS ಆಫೀಸ್ ಅಥವಾ SAP ನಂತಹ ಕಂಪ್ಯೂಟರ್ ಜ್ಞಾನವನ್ನು ಹೊಂದಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.
- ಡೆಪ್ಯೂಟಿ ಮ್ಯಾನೇಜರ್:
ಡೆಪ್ಯೂಟಿ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಮೆಕ್ಯಾನಿಕಲ್ ಅಥವಾ ಮೆರೈನ್ ಅಥವಾ ನೇವಲ್ ಆರ್ಕಿಟೆಕ್ಚರ್ ಇಂಜಿನಿಯರಿಂಗ್ ನಲ್ಲಿ ಪದವಿ ಪೂರ್ಣಗೊಳಿಸಿರಬೇಕು. ಪದವಿ ಶಿಕ್ಷಣ ಮುಗಿದ ನಂತರ ಸಂಬಂಧಿತ ಕ್ಷೇತ್ರದಲ್ಲಿ ಕನಿಷ್ಠ 7 ವರ್ಷಗಳ ವೃತ್ತಿಪರ ಅನುಭವವನ್ನು ಹೊಂದಿರಬೇಕು.
ಅಥವಾ
ರಾಜ್ಯ ತಾಂತ್ರಿಕ ಶಿಕ್ಷಣ ಮಂಡಳಿಯಿಂದ ಮೆಕ್ಯಾನಿಕಲ್ ಅಥವಾ ಮೆರೈನ್ ಅಥವಾ ನೇವಲ್ ಅಥವಾ ಶಿಪ್ ಬಿಲ್ಡಿಂಗ್ ಇಂಜಿನಿಯರಿಂಗ್ ನಲ್ಲಿ ಕನಿಷ್ಠ 3 ವರ್ಷಗಳ ಡಿಪ್ಲೊಮಾವನ್ನು ಪೂರ್ಣಗೊಳಿಸಿರಬೇಕು. ಡಿಪ್ಲೊಮಾ ನಂತರ ಸಂಬಂಧಿತ ಕ್ಷೇತ್ರದಲ್ಲಿ ಕನಿಷ್ಠ 10 ವರ್ಷಗಳ ವೃತ್ತಿಪರ ಅನುಭವವನ್ನು ಹೊಂದಿರಬೇಕು.
ವಯೋಮಿತಿ ವಿವರ:
- ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಟ 50 ವರ್ಷ ವಯೋಮಿತಿಯನ್ನು ಹೊಂದಿರಬೇಕು
- ಡೆಪ್ಯೂಟಿ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಟ 35 ವರ್ಷ ವಯೋಮಿತಿಯನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ:
ಸರ್ಕಾರದ ನಿಯಮಗಳ ಪ್ರಕಾರ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಗರಿಷ್ಟ ವಯೋಮಿತಿಗಳಲ್ಲಿ ಸಡಿಲಿಕೆ ನೀಡಲಾಗುತ್ತದೆ. ಅವುಗಳ ವಿವರ ಈ ಕೆಳಕಂಡಂತಿದೆ.
- ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ: 3 ವರ್ಷ
- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ: 5 ವರ್ಷ
- ಮಾಜಿ ಸೈನಿಕ ಅಭ್ಯರ್ಥಿಗಳಿಗೆ: (ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ) 5 ವರ್ಷ ಹಾಗೂ (ಡೆಪ್ಯೂಟಿ ಮ್ಯಾನೇಜರ್ ಹುದ್ದೆಗಳಿಗೆ) 10 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.
ಅರ್ಜಿ ಶುಲ್ಕ:
- ಸಾಮಾನ್ಯ ಹಾಗೂ ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ: ₹1,000/-
- ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವನ್ನು ನಿಗದಿಪಡಿಸಿಲ್ಲ.
ವೇತನ ಶ್ರೇಣಿ:
- ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 80,000/- ದಿಂದ 2,20,000/- ವರೆಗೆ ವೇತನವನ್ನು ನೀಡಲಾಗುತ್ತದೆ.
- ಡೆಪ್ಯೂಟಿ ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 50,000/- ದಿಂದ 1,60,000/- ವರೆಗೆ ವೇತನವನ್ನು ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:
- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು UCSL ನ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ, ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಳ್ಳಿ.
- ನಂತರ ಹುದ್ದೆಗೆ ಸಂಬಂಧಿಸಿದ ಅಫ್ಲಿಕೇಷನ್ ಫಾರ್ಮ್ ನಲ್ಲಿ ಶೈಕ್ಷಣಿಕ ವಿವರ, ವಯೋಮಿತಿ ವಿವರ, ಹಾಗೂ ಇನ್ನಿತರ ಅಗತ್ಯ ವಿವರಗಳನ್ನು ಭರ್ತಿ ಮಾಡಿ.
- ನಂತರ ಅಭ್ಯರ್ಥಿಗಳ ಆಧಾರ್ ಕಾರ್ಡ್, ಶೈಕ್ಷಣಿಕ ಪ್ರಮಾಣಪತ್ರ, ಅಭ್ಯರ್ಥಿಗಳ ಸಹಿ, ಇತ್ತೀಚಿನ ಪಾಸ್ ಪೋರ್ಟ್ ಅಳತೆಯ ಫೋಟೋ ಸೇರಿದಂತೆ ಇನ್ನಿತರ ಎಲ್ಲಾ ದಾಖಲೆಗಳನ್ನು ಅಪ್ಲೋಡ್ ಮಾಡಿ.
- ಭರ್ತಿ ಮಾಡಿರುವ ಎಲ್ಲಾ ವಿವರಗಳು ಸರಿ ಇದೆಯೇ ಎಂದು ಖಚಿತಪಡಿಸಿಕೊಂಡು ತಮ್ಮ ವರ್ಗಕ್ಕೆ ಸಂಬಂಧಿಸಿದ ಅರ್ಜಿ ಶುಲ್ಕವನ್ನು ಪಾವತಿಸಿ ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.
ಆಯ್ಕೆ ಪ್ರಕ್ರಿಯೆ:
- ಪವರ್ ಪಾಯಿಂಟ್ ಪ್ರೆಸೆಂಟೇಷನ್
- ದಾಖಲಾತಿ ಪರಿಶೀಲನೆ
- ಗುಂಪು ಚರ್ಚೆ
- ವೈಯಕ್ತಿಕ ಸಂದರ್ಶನ
ಪ್ರಮುಖ ದಿನಾಂಕಗಳು:
| ಪ್ರಮುಖ ಈವೆಂಟ್ | ದಿನಾಂಕ |
|---|---|
| ಅಧಿಕೃತ ಅಧಿಸೂಚನೆ ಹೊರಡಿಸಿದ ದಿನಾಂಕ | 05-06-2026 |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 30-06-2026 |
ಪ್ರಮುಖ ಲಿಂಕುಗಳು:
| ಅಧಿಕೃತ ವೆಬ್ಸೈಟ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ಅಧಿಸೂಚನೆ ಪಿಡಿಎಫ್ ಲಿಂಕ್ (KK) | ಇಲ್ಲಿ ಕ್ಲಿಕ್ ಮಾಡಿ |
| ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಅಂತಿಮ ತೀರ್ಮಾನ:
ಉಡುಪಿ ಕೊಚ್ಚಿನ್ ಶಿಪ್ಯಾರ್ಡ್ ಲಿಮಿಟೆಡ್ ವತಿಯಿಂದ ಪ್ರಕಟಗೊಂಡಿರುವ ಈ ನೇಮಕಾತಿಯು ಮೆಕ್ಯಾನಿಕಲ್, ಮೆರೈನ್ ಹಾಗೂ ನೇವಲ್ ಆರ್ಕಿಟೆಕ್ಚರ್ ಕ್ಷೇತ್ರದಲ್ಲಿ ಅರ್ಹತೆ ಮತ್ತು ಅನುಭವ ಹೊಂದಿರುವ ಅಭ್ಯರ್ಥಿಗಳಿಗೆ ಉತ್ತಮ ಉದ್ಯೋಗಾವಕಾಶವಾಗಿದೆ. ಅರ್ಹ ಅಭ್ಯರ್ಥಿಗಳು ಜೂನ್ 30, 2026 ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಿ.
ಪ್ರಮುಖ ಲಿಂಕುಗಳು:
| Whatsapp Group Link | Click Here |
| Telegram Group Link | Click Here |
| Instagram Link | Click Here |
ಇತರೆ ಪ್ರಮುಖ ಲಿಂಕುಗಳು:
- DULT: ರೂ. 84,592/- ವೇತನ! ನಗರ ಭೂ ಸಾರಿಗೆ ನಿರ್ದೇಶನಾಲಯದಲ್ಲಿ ಬೃಹತ್ ನೇಮಕಾತಿ 2026! ಜೂನ್ 15 ಕೊನೆಯ ದಿನಾಂಕ
- BPCL: ರೂ. 2,80,000/- ವೇತನ! ಭಾರತ್ ಪೆಟ್ರೋಲಿಯಂನಲ್ಲಿ ಬೃಹತ್ ನೇಮಕಾತಿ । 20 ಜೂನ್ ಕೊನೆಯ ದಿನಾಂಕ
- Drivers Job: ಕೊಚ್ಚಿನ್ ಶಿಪ್ಯಾರ್ಡ್ ನಲ್ಲಿ ಡ್ರೈವರ್ ಹುದ್ದೆಗಳ ನೇಮಕಾತಿ! SSLC ಪಾಸ್ ಆದವರಿಗೆ ಸರ್ಕಾರಿ ಉದ್ಯೋಗಾವಕಾಶ
- IIMB: ರೂ. 14.72 ಲಕ್ಷ ವಾರ್ಷಿಕ ವೇತನ! ಅಸಿಸ್ಟೆಂಟ್ ಲೈಬ್ರರಿಯನ್ ಹುದ್ದೆಗಳ ಬೃಹತ್ ನೇಮಕಾತಿ 2026 | ಜೂನ್ 10 ಕೊನೆಯ ದಿನಾಂಕ