ನಮಸ್ಕಾರ ಸ್ನೇಹಿತರೆ, ಉಡುಪಿ ಜಿಲ್ಲೆಯಲ್ಲಿ ವೃತ್ತಿ ಜೀವನವನ್ನು ಪ್ರಾರಂಭಿಸಬೇಕೆಂದಿರುವ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್! ಉಡುಪಿ ಕೊಚ್ಚಿನ್ ಶಿಪ್ಯಾರ್ಡ್ ಲಿಮಿಟೆಡ್ ಸಂಸ್ಥೆಯು ಉದ್ಯೋಗಪ್ರೀಯರಿಗೆ ಭರ್ಜರಿ ಉದ್ಯೋಗಾವಕಾಶವನ್ನು ಕಲ್ಪಿಸಿದ್ದು, ವಿವಿಧ ಅಸಿಸ್ಟೆಂಟ್ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದೆ.
Udupi CSL Recruitment in kannada
ಉಡುಪಿ ಕೊಚ್ಚಿನ್ ಶಿಪ್ಯಾರ್ಡ್ ಲಿಮಿಟೆಡ್ ಸಂಸ್ಥೆಯು ಮಲ್ಪೆ ಘಟಕದಲ್ಲಿ ಖಾಲಿ ಇರುವ ಆಫೀಸ್ ಅಸಿಸ್ಟೆಂಟ್ ಹಾಗೂ ಅಡ್ಮಿನ್ ಅಸಿಸ್ಟೆಂಟ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಗುತ್ತಿಗೆ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಉಡುಪಿ ಕೊಚ್ಚಿನ್ ಶಿಪ್ಯಾರ್ಡ್ ಲಿಮಿಟೆಡ್ ಸಂಸ್ಥೆಯು ಕೇಂದ್ರ ಸರ್ಕಾರದ ಸ್ವಾಮ್ಯದಲ್ಲಿರುವ ಸಂಸ್ಥೆಯಾಗಿದ್ದು, ಕೇಂದ್ರ ಸರ್ಕಾರದ ಉದ್ಯೋಗದ ಕನಸ್ಸನ್ನು ಹೊತ್ತಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶವಾಗಿದೆ. ನೀವೇನಾದರೂ ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಬೇಕೆಂದಿದ್ದರೆ ಪ್ರಸ್ತುತ ಲೇಖನದಲ್ಲಿ ನೀಡಲಾದ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಓದಿಕೊಂಡು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.

ಹುದ್ದೆಯ ಕಿರು ನೋಟ:
| ನೇಮಕಾತಿ ಸಂಸ್ಥೆ | ಉಡುಪಿ ಕೊಚ್ಚಿನ್ ಶಿಪ್ಯಾರ್ಡ್ ಲಿಮಿಟೆಡ್ |
| ಹುದ್ದೆಯ ಹೆಸರು | ಆಫೀಸ್ ಅಸಿಸ್ಟೆಂಟ್ ಹಾಗೂ ಅಡ್ಮಿನ್ ಅಸಿಸ್ಟೆಂಟ್ ಹುದ್ದೆಗಳು |
| ಹುದ್ದೆಗಳ ಸಂಖ್ಯೆ | ಒಟ್ಟು 04 ಹುದ್ದೆಗಳು |
| ಉದ್ಯೋಗ ಸ್ಥಳ | ಮಲ್ಪೆ – ಕರ್ನಾಟಕ |
| ಅರ್ಜಿ ಸಲ್ಲಿಸುವ ವಿಧಾನ | ಆನ್ಲೈನ್ |
ಹುದ್ದೆಯ ಸಂಕ್ಷಿಪ್ತ ಮಾಹಿತಿ:
ಉಡುಪಿ ಕೊಚ್ಚಿನ್ ಶಿಪ್ಯಾರ್ಡ್ ಲಿಮಿಟೆಡ್ ಸಂಸ್ಥೆಯು ಮಲ್ಪೆ ಘಟಕದಲ್ಲಿ ಖಾಲಿ ಇರುವ 4 ಅಡ್ಮಿನ್ ಅಸಿಸ್ಟೆಂಟ್ ಹಾಗೂ ಆಫೀಸ್ ಅಸಿಸ್ಟೆಂಟ್ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಈ ಹುದ್ದೆಗಳನ್ನು ವಿವಿಧ ವರ್ಗಗಳಿಗೆ ಹಂಚಿಕೆ ಮಾಡಲಾಗಿದೆ. ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಲ್ಲಿ ಪಿಯುಸಿ ಅಥವಾ ಪದವಿಯನ್ನು ಪೂರ್ಣಗೊಳಿಸಿದ ಗರಿಷ್ಟ 30 ರಿಂದ 40 ವರ್ಷ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಹುದ್ದೆಯ ಸಂಕ್ಷಿಪ್ತ ವಿವರ:
ಭಾರತ್ ಅರ್ಥ್ ಮೂವರ್ ಲಿಮಿಟೆಡ್ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಈ ಕೆಳಕಂಡಂತೆ ವಿಂಗಡಣೆ ಮಾಡಲಾಗಿದೆ.
| ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
| ಅಡ್ಮಿನ್ ಅಸಿಸ್ಟೆಂಟ್ | 02 ಹುದ್ದೆಗಳು |
| ಆಫೀಸ್ ಅಸಿಸ್ಟೆಂಟ್ | 02 ಹುದ್ದೆಗಳು |
ಈ ಹುದ್ದೆಗಳನ್ನು ವರ್ಗವರು ಹಂಚಿಕೆ ಮಾಡಿದ್ದು, ಅವುಗಳ ವಿವರ ಈ ಕೆಳಕಂಡಂತಿದೆ.
- ಅಡ್ಮಿನ್ ಅಸಿಸ್ಟೆಂಟ್: ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 1 ಹುದ್ದೆ ಹಾಗೂ ಪರಿಶಿಷ್ಟ ಜಾತಿಗೆ ಸೇರಿದ ಅಭ್ಯರ್ಥಿಗಳಿಗೆ 1 ಹುದ್ದೆಯನ್ನು ಮೀಸಲಿಡಲಾಗಿದೆ.
- ಆಫೀಸ್ ಅಸಿಸ್ಟೆಂಟ್: ಸಾಮಾನ್ಯ ವರ್ಗಗಳ ಅಭ್ಯರ್ಥಿಗಳಿಗೆ 1 ಹುದ್ದೆ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ 1 ಹುದ್ದೆಯನ್ನು ಮೀಸಲಿಡಲಾಗಿದೆ.
ಶೈಕ್ಷಣಿಕ ಅರ್ಹತೆ:
ಅಡ್ಮಿನ್ ಅಸಿಸ್ಟೆಂಟ್:
- ಅಡ್ಮಿನ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಲ್ಲಿ ಫಿಟ್ಟರ್, ಮಷಿನಿಸ್ಟ್, ಎಲೆಕ್ಟ್ರಾನಿಕ್ ಮೆಕ್ಯಾನಿಕ್, ಎಲೆಕ್ಟ್ರೀಶಿಯನ್ ಟ್ರೇಡ್ ಗಳಲ್ಲಿ ಐಟಿಐ ಉತ್ತೀರ್ಣರಾಗಿರಬೇಕು ಅಥವಾ PUC ಪಾಸ್ ಆಗಿರಬೇಕು.
- ಫೈಲ್ ನಿರ್ವಹಣೆ ಹಾಗೂ ಆಡಳಿತಾತ್ಮಕ ಕೆಲಸದಲ್ಲಿ ಕನಿಷ್ಠ ಒಂದು ವರ್ಷದ ಅನುಭವವನ್ನು ಹೊಂದಿರಬೇಕು.
ಆಫೀಸ್ ಅಸಿಸ್ಟೆಂಟ್:
- ಆಫೀಸ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಕಲೆ, ವಾಣಿಜ್ಯ, ವಿಜ್ಞಾನ, ಕಂಪ್ಯೂಟರ್ ಅಥವಾ ಬಿಸಿನೆಸ್ ಅಡ್ಮಿನಿಸ್ಟ್ರೇಷನ್ ವಿಷಯದಲ್ಲಿ ಪದವಿಯನ್ನು ಪೂರ್ಣಗೊಳಿಸಿರಬೇಕು.
- ಅಭ್ಯರ್ಥಿಗಳು ಕಡ್ಡಾಯವಾಗಿ ಕನಿಷ್ಠ 60% ಅಂಕಗಳೊಂದಿಗೆ ಪದವಿಯಲ್ಲಿ ಉತ್ತೀರ್ಣರಾಗಿರಬೇಕು.
- ಕಂಪ್ಯೂಟರ್ ನಲ್ಲಿ ಎಂಎಸ್ ಆಫೀಸ್ ಹಾಗೂ ಎಕ್ಸೆಲ್ ಜ್ಞಾನವನ್ನು ಹೊಂದಿರಬೇಕು.
- ಡೇಟಾ ಎಂಟ್ರಿ, ಕಚೇರಿ ಕೆಲಸ, ವರದಿ ತಯಾರಿಕೆ, ದಾಖಲೆಗಳ ನಿರ್ವಹಣೆಯಲ್ಲಿ ಕನಿಷ್ಠ 2 ವರ್ಷದ ಅನುಭವವನ್ನು ಹೊಂದಿರಬೇಕು.
| ಮುಖ್ಯ ಸೂಚನೆ: “ಅಭ್ಯರ್ಥಿಗಳು M.sc ಅಥವಾ B.Tech ನಂತಹ ಹೆಚ್ಚಿನ ವಿದ್ಯಾರ್ಹತೆ ಹೊಂದಿದ್ದರೆ ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಲ್ಲ.” |
ವಯೋಮಿತಿ ವಿವರ:
- ಅಡ್ಮಿನ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದಿನಾಂಕ 20-04-2026 ಕ್ಕೆ ಅನ್ವಯವಾಗುವಂತೆ ಗರಿಷ್ಟ 40 ವರ್ಷ ವಯೋಮಿತಿಯನ್ನು ಹೊಂದಿರಬೇಕು.
- ಅಡ್ಮಿನ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 21-04-1986 ರಂದು ಅಥವಾ ನಂತರ ಜನಿಸಿರಬೇಕು.
- ಆಫೀಸ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 20-04-2026 ಕ್ಕೆ ಅನ್ವಯವಾಗುವಂತೆ ಗರಿಷ್ಟ 30 ವರ್ಷ ವಯೋಮಿತಿಯನ್ನು ಹೊಂದಿರಬೇಕು.
- ಆಫೀಸ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 21-04-1996 ರಂದು ಅಥವಾ ನಂತರ ಜನಿಸಿರಬೇಕು.
ವಯೋಮಿತಿ ಸಡಿಲಿಕೆ ವಿವರ:
- ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭ್ಯರ್ಥಿಗಳಿಗೆ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ : 5 ವರ್ಷ
- ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ : 3 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.
ಅರ್ಜಿ ಶುಲ್ಕ:
ಅಡ್ಮಿನ್ ಅಸಿಸ್ಟೆಂಟ್ ಹಾಗೂ ಆಫೀಸ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಇಂಟರ್ನೆಟ್ ಬ್ಯಾಂಕಿಂಗ್, ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ
- ಸಾಮಾನ್ಯ ಮತ್ತು ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ: ರೂ. 300/-
- SC/ ST ಹಾಗೂ ಪಿ.ಡಬ್ಲ್ಯೂ.ಬಿ.ಡಿ ಅಭ್ಯರ್ಥಿಗಳಿಗೆ: ಯಾವುದೇ ಅರ್ಜಿ ಶುಲ್ಕವಿಲ್ಲ.
ವೇತನ ಶ್ರೇಣಿ:
- ಅಡ್ಮಿನ್ ಅಸಿಸ್ಟೆಂಟ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳು ಮಾಸಿಕ ರೂ. 23,500/- ವೇತನವನ್ನು ಪಡೆದುಕೊಳ್ಳಬಹುದಾಗಿದೆ.
- ಮಾಸಿಕ ವೇತನದಲ್ಲಿ ಮೂಲ ವೇತನ ರೂ. 15,500/-, ವಾಷಿಂಗ್ ಅಲೋವೆನ್ಸ್ ರೂ. 500, ಇಂಧನ ಮರುಪಾವತಿ ರೂ. 1,600 ಹಾಗೂ ವಿಶೇಷ ಭತ್ಯೆ ರೂ. 5,900/- ಒಳಗೊಂಡಿರುತ್ತದೆ.
- ಆಫೀಸ್ ಅಸಿಸ್ಟೆಂಟ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳು ಮಾಸಿಕ ರೂ. 25,000/- ವೇತನವನ್ನು ಪಡೆದುಕೊಳ್ಳಬಹುದಾಗಿದೆ.
- ಮಾಸಿಕ ವೇತನದಲ್ಲಿ ಮೂಲ ವೇತನ ರೂ. 17,000/-, ವಾಷಿಂಗ್ ಅಲೋವೆನ್ಸ್ ರೂ. 500, ಇಂಧನ ಮರುಪಾವತಿ ರೂ. 1,600 ಹಾಗೂ ವಿಶೇಷ ಭತ್ಯೆ ರೂ. 5,900/- ಒಳಗೊಂಡಿರುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:
- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಮೊದಲು ಕೊಚ್ಚಿನ್ ಶಿಪ್ಯಾರ್ಡ್ ನ ಅಧಿಕೃತ ವೆಬ್ಸೈಟ್ https://cochinshipyard.in/ ಗೆ ಭೇಟಿ ನೀಡಿ.
- ಅಲ್ಲಿರುವ ಕೆರಿಯರ್ ವಿಭಾಗವನ್ನು ಆಯ್ಕೆ ಮಾಡಿ ನಂತರ ಉಡುಪಿ CSL ವಿಭಾಗವನ್ನು ಆಯ್ಕೆಮಾಡಿ.
- ಮೊದಲ ಬಾರಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ರಿಜಿಸ್ಟರ್ ಮಾಡಿಕೊಳ್ಳಿ.
- ನಂತರ ಅಲ್ಲಿ ಕೇಳಲಾದ ವೈಯಕ್ತಿಕ ವಿವರಗಳನ್ನು, ಶೈಕ್ಷಣಿಕ ವಿವರಗಳನ್ನು ಹಾಗೂ ಅನುಭವ ವಿವರಗಳನ್ನು ಭರ್ತಿ ಮಾಡಿ.
- ನಂತರ ಶೈಕ್ಷಣಿಕ ಪ್ರಮಾಣಪತ್ರ, ಅನುಭವ ಪ್ರಮಾಣಪತ್ರ, ಅಭ್ಯರ್ಥಿಗಳ ಸಹಿ, ಪಾಸ್ಪೋರ್ಟ್ ಅಳತೆಯ ಫೋಟೋ, ವಯಸ್ಸಿನ ಪುರಾವೆ ಹಾಗೂ ಇನ್ನಿತರ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ ನಿಮ್ಮ ವರ್ಗಕ್ಕೆ ಸಂಬಂಧಿಸಿದ ಅರ್ಜಿ ಶುಲ್ಕವನ್ನು ಪಾವತಿಸಿ ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.
ಆಯ್ಕೆ ಪ್ರಕ್ರಿಯೆ:
- ಆಬ್ಜೆಕ್ಟಿವ್ ಪರೀಕ್ಷೆ:
ಅಭ್ಯರ್ಥಿಗಳಿಗೆ ಮೊದಲ ಹಂತದಲ್ಲಿ 70 ಅಂಕಗಳ ಆಬ್ಜೆಕ್ಟಿವ್ ಪರೀಕ್ಷೆಯನ್ನು ಮಾಡಲಾಗುವುದು. ಈ ಪರೀಕ್ಷೆಗೆ 90 ನಿಮಿಷ ಕಾಲಾವಕಾಶವನ್ನು ನೀಡಲಾಗುವುತ್ತದೆ. ಈ ಪರೀಕ್ಷೆಯಲ್ಲಿ ಸಾಮಾನ್ಯ ಜ್ಞಾನ, ಸಾಮಾನ್ಯ ಇಂಗ್ಲಿಷ್, ಕ್ವಾನ್ಟಿಟೇಟಿವ್ ಆಪ್ಟಿಟ್ಯೂಡ್ ಹಾಗೂ ರೀಸನಿಂಗ್ ವಿಷಯಕ್ಕೆ ಸಂಬಂಧಿಸಿದ ಪ್ರಶ್ನೆಗಳನ್ನು ಕೇಳಲಾಗುತ್ತದೆ.
- ಡಿಸ್ಕ್ರಿಪ್ಟಿವ್ ಪರೀಕ್ಷೆ:
ಅಭ್ಯರ್ಥಿಗಳ ಬರವಣಿಗೆ ಕೌಶಲ್ಯವನ್ನು ಪರೀಕ್ಷಿಸಲು ಕನ್ನಡ, ಇಂಗ್ಲಿಷ್ ಹಾಗೂ ಹಿಂದಿ ಭಾಷೆಯಲ್ಲಿ ಬರೆಯುವ ಪರೀಕ್ಷೆ ಮಾಡಲಾಗುತ್ತದೆ.
ಹುದ್ದೆಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು:
| ಪ್ರಮುಖ ವಿವರಗಳು | ಪ್ರಮುಖ ಲಿಂಕುಗಳು |
| ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ | 28-03-2026 |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 20-04-2026 |
| ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ | 20-04-2026 |
ಹುದ್ದೆಗೆ ಸಂಬಂಧಿಸಿದ ಪ್ರಮುಖ ಲಿಂಕುಗಳು:
| ಪ್ರಮುಖ ವಿವರಗಳು | ಪ್ರಮುಖ ಲಿಂಕುಗಳು |
| ಅಧಿಕೃತ ಅಧಿಸೂಚನೆ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ವೆಬ್ಸೈಟ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಕೊನೆಯ ಮಾತು:
ಉಡುಪಿ ಕೊಚ್ಚಿನ್ ಶಿಪ್ಯಾರ್ಡ್ ಲಿಮಿಟೆಡ್ ಸಂಸ್ಥೆಯು ಮಲ್ಪೆ ಘಟಕದಲ್ಲಿ ಖಾಲಿ ಇರುವ ಆಫೀಸ್ ಅಸಿಸ್ಟೆಂಟ್ ಹಾಗೂ ಅಡ್ಮಿನ್ ಅಸಿಸ್ಟೆಂಟ್ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಅಭ್ಯರ್ಥಿಗಳನ್ನು 5 ವರ್ಷಗಳ ಕಾಲ ಗುತ್ತಿಗೆ ಆಧಾರದ ಮೇಲೆ ನೇಮಕಮಾಡಿಕೊಳ್ಳಲಾಗುತ್ತದೆ. ನೀವೇನಾದರೂ ಈ ಒಂದು ಸಂಸ್ಥೆಯಲ್ಲಿ ವೃತ್ತಿಜೀವನವನ್ನು ಪ್ರಾರಂಭಿಸಬೇಕೆಂದಿದ್ದರೆ, ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಓದಿಕೊಂಡು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಇತರೆ ಹುದ್ದೆಗಳ ಪ್ರಮುಖ ಲಿಂಕುಗಳು:
- BEML: ರೂ. 43,000/- ವೇತನ! ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ, ಏಪ್ರಿಲ್ 7 ಕೊನೆಯ ದಿನಾಂಕ
- CSB: ಕೇಂದ್ರ ರೇಷ್ಮೆ ಮಂಡಳಿಯಲ್ಲಿ 80 ಹುದ್ದೆಗಳು, ಯಾವುದೇ ಅರ್ಜಿ ಶುಲ್ಕ ಹಾಗೂ ಲಿಖಿತ ಪರೀಕ್ಷೆ ಇಲ್ಲ!
- BGSSL: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ! 12ನೇ ತರಗತಿ ಪಾಸ್ +ನೇರ ಸಂದರ್ಶನ, ಏಪ್ರಿಲ್ 30 ಕೊನೆ ದಿನ
- Karnataka Court Job: ರೂ. 61,300/- ವೇತನ, SSLC ಪಾಸ್ ಆದ್ರೆ ಸಾಕು ಯಾದಗಿರಿ ನ್ಯಾಯಾಲಯದಲ್ಲಿ ಸರ್ಕಾರಿ ಉದ್ಯೋಗಾವಕಾಶ!
- SSMCT: ಕೊಪ್ಪಳ PU ಕಾಲೇಜಿನಲ್ಲಿ ವಿವಿಧ ಹುದ್ದೆಗಳ ನೇಮಕಾತಿ! ಉಚಿತ ಅರ್ಜಿ – 10 ಏಪ್ರಿಲ್ ಒಳಗೆ ಅಪ್ಲೈ ಮಾಡಿ
I need job sir