ನಮಸ್ಕಾರ ಸ್ನೇಹಿತರೆ, ನೀವೇನಾದರೂ ಬೆಂಗಳೂರಿನಲ್ಲಿ ಉದ್ಯೋಗ ಮಾಡುವ ಆಸಕ್ತಿಯನ್ನು ಹೊಂದಿದ್ದೀರಾ? ಹಾಗಿದ್ದರೆ ನಿಮಗೊಂದು ಭರ್ಜರಿ ಗುಡ್ ನ್ಯೂಸ್! ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರವು ಬೆಂಗಳೂರು ತಾಂತ್ರಿಕ ಕೇಂದ್ರದಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಅಕೌಂಟ್ ಆಫೀಸರ್ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಅಭ್ಯರ್ಥಿಗಳಿಂದ ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
UIDAI Recruitment in Kannada
ಅಸಿಸ್ಟೆಂಟ್ ಅಕೌಂಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಈಗಾಗಲೇ ಆರಂಭಗೊಂಡಿದ್ದು, ಅರ್ಜಿ ಸಲ್ಲಿಸಲು ದಿನಾಂಕ 14-05-2026 ಕೊನೆಯ ದಿನಾಂಕವಾಗಿದೆ. ಕೇಂದ್ರ ಸರ್ಕಾರದ ಸ್ವಾಮ್ಯದ ಸಂಸ್ಥೆಯಡಿಯಲ್ಲಿ ಉದ್ಯೋಗ ಮಾಡಲು ಆಸಕ್ತಿ ಹೊಂದಿರುವ ಉದ್ಯೋಗಾಕಾಂಕ್ಷಿಗಳಿಗೆ ಇದೊಂದು ಸುವರ್ಣಾವಕಾಶವಾಗಿದೆ.
ಅಸಿಸ್ಟೆಂಟ್ ಅಕೌಂಟ್ ಆಫೀಸರ್ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ, ವಯೋಮಿತಿ, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಯನ್ನು ಪ್ರಸ್ತುತ ಈ ಒಂದು ಲೇಖನದ ಮೂಲಕ ಪಡೆದುಕೊಳ್ಳಬಹುದಾಗಿದೆ. ಇದೇ ರೀತಿಯ ಇನ್ನಷ್ಟು ಹುದ್ದೆಗಳ ಕುರಿತು ಮಾಹಿತಿಗಾಗಿ ನಮ್ಮ ವೆಬ್ಸೈಟ್ ಪಬ್ಲಿಕ್.ಸಲಹೆ.ಇನ್ ಗೆ ಭೇಟಿ ನೀಡಿ.

ಹುದ್ದೆಯ ಕಿರು ವಿಮರ್ಶೆ:
| ನೇಮಕಾತಿ ಸಂಸ್ಥೆ | ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ |
| ಹುದ್ದೆಯ ಹೆಸರು | ಅಸಿಸ್ಟೆಂಟ್ ಅಕೌಂಟ್ ಆಫೀಸರ್ |
| ಹುದ್ದೆಯ ಸಂಖ್ಯೆ | 1 ಹುದ್ದೆ |
| ಉದ್ಯೋಗ ಸ್ಥಳ | ಬೆಂಗಳೂರು – ಕರ್ನಾಟಕ |
| ಅರ್ಜಿ ಸಲ್ಲಿಸುವ ವಿಧಾನ | ಆಫ್ಲೈನ್ |
ಹುದ್ದೆಯ ಬಗ್ಗೆ:
ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ಸಂಸ್ಥೆಯು 2026 ನೇ ಸಾಲಿನ ನೇಮಕಾತಿಯಲ್ಲಿ ಅಸಿಸ್ಟೆಂಟ್ ಅಕೌಂಟ್ ಆಫೀಸರ್ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಚಾರ್ಟರ್ಡ್ ಅಕೌಂಟೆಂಟ್, ಕಾಸ್ಟ್ ಅಕೌಂಟೆಂಟ್ ಹಾಗೂ ಎಂಬಿಎ ಪದವಿಯನ್ನು ಹೊಂದಿದ್ದು ಗರಿಷ್ಟ 56 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಹುದ್ದೆಯ ಸಂಪೂರ್ಣ ವಿವರ:
| ಹುದ್ದೆಯ ಹೆಸರು | ಹುದ್ದೆಯ ಸಂಖ್ಯೆ |
| ಅಸಿಸ್ಟೆಂಟ್ ಅಕೌಂಟ್ ಆಫೀಸರ್ | 01 ಹುದ್ದೆ |
ಶೈಕ್ಷಣಿಕ ಅರ್ಹತೆ:
- ಅಭ್ಯರ್ಥಿಗಳು ಚಾರ್ಟರ್ಡ್ ಅಕೌಂಟೆಂಟ್, ಕಾಸ್ಟ್ ಅಕೌಂಟೆಂಟ್, ಅಥವಾ ಎಂಬಿಎ (ಫೈನಾನ್ಸ್) ಪದವಿ ಪೂರ್ಣಗೊಳಿಸಿರಬೇಕು.
- ಅಥವಾ ಅಭ್ಯರ್ಥಿಗಳು ಎಸ್.ಎ.ಎಸ್ ಅಥವಾ ಅದಕ್ಕೆ ಸಮಾನವಾದ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುಬೇಕು.
- ಅಥವಾ ಐ.ಎಸ್.ಟಿ.ಎಂ ಮೂಲಕ ನಗದು ಮತ್ತು ಲೆಕ್ಕಪತ್ರ ತರಬೇತಿಯನ್ನು ಪೂರ್ಣಗೊಳಿಸಿರಬೇಕು.
- ಅಥವಾ ಲೆಕ್ಕಪತ್ರ ನಿರ್ವಹಣೆಯಲ್ಲಿ ಕನಿಷ್ಠ 5 ವರ್ಷಗಳ ಕೆಲಸದ ಅನುಭವವನ್ನು ಹೊಂದಿರಬೇಕು.
- ಅಭ್ಯರ್ಥಿಗಳು ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರದಲ್ಲಿ ಈ ಒಂದು ಹುದ್ದೆಗೆ ಸಮಾನವಾದ ಹುದ್ದೆಯಲ್ಲಿ ಕೆಲಸ ಮಾಡುತ್ತಿರಬೇಕು.
- ಅಥವಾ ಪೆ ಮ್ಯಾಟ್ರಿಕ್ಸ್ ಲೆವೆಲ್ 7 ರಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿರಬೇಕು ಅಥವಾ ಲೆವೆಲ್ 6 ರಲ್ಲಿ 5 ವರ್ಷಗಳ ಕಾಲ ಕೆಲಸ ಮಾಡಿರಬೇಕು
ವಯೋಮಿತಿ ವಿವರ:
ಅಸಿಸ್ಟೆಂಟ್ ಅಕೌಂಟ್ ಆಫೀಸರ್ ಹುದ್ದೆಯು ಡೆಪ್ಯೂಟೇಷನ್ ಆಧಾರಿತ ಹುದ್ದೆಯಾದ್ದರಿಂದ, ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಟ 56 ವರ್ಷ ವಯೋಮಿತಿಯೊಳಗಿನವರಾಗಿರಬೇಕು.
ವಯೋಮಿತಿ ಸಡಿಲಿಕೆ:
ಅಸಿಸ್ಟೆಂಟ್ ಅಕೌಂಟ್ ಆಫೀಸರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ವಯೋಮಿತಿ ಸಡಿಲಿಕೆ ಇರುವುದಿಲ್ಲ.
ಅರ್ಜಿ ಶುಲ್ಕ:
ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ಸಂಸ್ಥೆಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಸಿಸ್ಟೆಂಟ್ ಅಕೌಂಟ್ ಆಫೀಸರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ. ಅಭ್ಯರ್ಥಿಗಳು ಉಚಿತವಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ವೇತನ ಶ್ರೇಣಿ:
ಅಸಿಸ್ಟೆಂಟ್ ಅಕೌಂಟ್ ಆಫೀಸರ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 7 ನೇ ವೇತನ ಆಯೋಗದ ಪೆ ಮ್ಯಾಟ್ರಿಕ್ ಲೆವೆಲ್ 8 ರ ಅಡಿಯಲ್ಲಿ ಅತ್ಯಾಕರ್ಷಕ ವೇತನವನ್ನು ನೀಡಲಾಗುತ್ತದೆ.
ಅಭ್ಯರ್ಥಿಗಳಿಗೆ ರೂ. 47,600 ಯಿಂದ ರೂ. 1,51,000 ವರೆಗೆ ನೀಡಲಾಗಿದೆ ಎಂದು ಅಂದಾಜಿಸಲಾಗಿದೆ. ಹಾಗೂ ಇವುಗಳ ಜೊತೆಗೆ ಅಭ್ಯರ್ಥಿಗಳು ಇತರೆ ಭತ್ಯೆಗಳನ್ನು ಪಡೆಯಲು ಅರ್ಹರಾಗಿರುತ್ತಾರೆ.
ಅಗತ್ಯ ದಾಖಲೆಗಳು:
- ಶೈಕ್ಷಣಿಕ ಪ್ರಮಾಣಪತ್ರ
- ಆಧಾರ್ ಕಾರ್ಡ್
- ಪಾಸ್ ಪೋರ್ಟ್ ಅಳತೆಯ ಫೋಟೋ
- ವಯಸ್ಸಿನ ಪುರಾವೆ
- APAR/ APR ಪ್ರತಿಗಳು
- ಕೇಡರ್ ಕ್ಲಿಯರೆನ್ಸ್ ಪ್ರಮಾಣಪತ್ರ
- ಹಾಗೂ ಇತರೆ ದಾಖಲೆಗಳು
ಅರ್ಜಿ ಸಲ್ಲಿಸುವ ವಿಧಾನ:
- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು UIDAI ಅಧಿಕೃತ ವೆಬ್ಸೈಟ್ https://uidai.gov.in/ ಗೆ ಭೇಟಿ ನೀಡಿ.
- ಅಧಿಕೃತ ಅಧಿಸೂಚನೆ ಹಾಗೂ ಅಸಿಸ್ಟೆಂಟ್ ಅಕೌಂಟ್ ಆಫೀಸರ್ ಹುದ್ದೆಗೆ ಸಂಬಂಧಿಸಿದ ಅಪ್ಲಿಕೇಶನ್ ಫಾರ್ಮ್ ಅನ್ನು ಪಡೆದುಕೊಳ್ಳಿ.
- ನಂತರ ಅಪ್ಲಿಕೇಶನ್ ಫಾರ್ಮ್ ನಲ್ಲಿ ಕೇಳಲಾದ ಶೈಕ್ಷಣಿಕ ವಿವರ, ವೈಯಕ್ತಿಕ ವಿವರ ಸೇರಿದಂತೆ ಎಲ್ಲಾ ಅಗತ್ಯ ವಿವರಗಳನ್ನು ಭರ್ತಿ ಮಾಡಿ.
- ನಂತರ ನಿಮ್ಮ ಸಹಿ, ಪಾಸ್ಪೋರ್ಟ್ ಅಳತೆಯ ಫೋಟೋ, ಶೈಕ್ಷಣಿಕ ಪ್ರಮಾಣಪತ್ರ, APAR/ APR ಪ್ರತಿಗಳು, ಕೇಡರ್ ಕ್ಲಿಯರೆನ್ಸ್ ಪ್ರಮಾಣಪತ್ರ ಹಾಗೂ ಇನ್ನಿತರ ಅಗತ್ಯ ದಾಖಲೆಗಳನ್ನು ಅಪ್ಲಿಕೇಶನ್ ಫಾರ್ಮ್ ಗೆ ಲಗತ್ತಿಸಿ
- ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಈ ಕೆಳಗೆ ನೀಡಿರುವ ವಿಳಾಸಕ್ಕೆ ಕಳುಹಿಸಿ.
| ನಿರ್ದೇಶಕರು, HR ಡಿಪಾರ್ಟ್ಮೆಂಟ್, ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ, ತಾಂತ್ರಿಕ ಕೇಂದ್ರ, ಆಧಾರ್ ಕಾಂಪ್ಲೆಕ್ಸ್, ಏನ್.ಟಿ.ಐ ಲೇಔಟ್, ಟಾಟಾ ನಗರ ಕೊಡಿಗೆ ಹಳ್ಳಿ, ಬೆಂಗಳೂರು – 560 092 |
ಆಯ್ಕೆ ಪ್ರಕ್ರಿಯೆ:
ಅಸಿಸ್ಟೆಂಟ್ ಅಕೌಂಟ್ ಆಫೀಸರ್ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆ, ವೃತ್ತಿ ಅನುಭವ ಹಾಗೂ ಸೇವಾ ದಾಖಲೆಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಐದು ವರ್ಷದ ಅವಧಿಗೆ ಡೆಪ್ಯೂಟೇಷನ್ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು:
| ಪ್ರಮುಖ ಈವೆಂಟ್ | ದಿನಾಂಕ |
|---|---|
| ಅಧಿಕೃತ ಅಧಿಸೂಚನೆ ಹೊರಡಿಸಿದ ದಿನಾಂಕ | 30-03-2026 |
| ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 30-03-2026 |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 14-05-2026 |
ಪ್ರಮುಖ ಲಿಂಕುಗಳು:
| ಅಧಿಕೃತ ಅಧಿಸೂಚನೆ ಪಿಡಿಎಫ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ವೆಬ್ಸೈಟ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಅಂತಿಮ ತೀರ್ಮಾನ:
ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ಸಂಸ್ಥೆಯು ಬೆಂಗಳೂರು ತಾಂತ್ರಿಕ ಕೇಂದ್ರದಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಅಕೌಂಟ್ ಆಫೀಸರ್ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಈಗಾಗಲೇ ಸರ್ಕಾರಿ ಸಂಸ್ಥೆಯಲ್ಲಿ ಸೇವೆ ಸಲ್ಲಿಸಿರುವ ನೌಕರರಿಗೆ ಇದೊಂದು ಸುವರ್ಣಾವಕಾಶವಾಗಿದೆ. ಈ ಒಂದು ನೇಮಕಾತಿಯು ಡೆಪ್ಯೂಟೇಷನ್ ಆಧಾರದ ಮೇಲೆ ಆಗಿರುವುದರಿಂದ, ಅಭ್ಯರ್ಥಿಗಳು ಇಲಾಖೆಯು ತಿಳಿಸಿರುವ ಅಗತ್ಯ ದಾಖಲೆಗಳನ್ನು ನಿಗದಿತ ದಿನಾಂಕದೊಳಗೆ ಸಲ್ಲಿಸುವುದು ಅಗತ್ಯವಾಗಿದೆ.
ಇತರೆ ಪ್ರಮುಖ ಲಿಂಕುಗಳು:
- SSF: ₹63,200/- ವೇತನ! ಕಾನ್ಸ್ಟೇಬಲ್ ನೇಮಕಾತಿ 2026 । 10th ಪಾಸ್ ಆದವರಿಗೆ ಸುವರ್ಣಾವಕಾಶ!
- TA Rally: ರೂ. 69,400/- ವೇತನ! ಪ್ರಾದೇಶಿಕ ಸೇನಾ ನೇಮಕಾತಿ 2026 । 3806 ಹುದ್ದೆಗಳು
- ECIL: ₹55,000/- ವೇತನ! ಪರೀಕ್ಷೆ ಇಲ್ಲದೆ ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳ ಭರ್ಜರಿ ನೇಮಕಾತಿ
- KSRSS: ಸೈನಿಕ್ ಶಾಲೆಯಲ್ಲಿ ಭರ್ಜರಿ ಉದ್ಯೋಗಾವಕಾಶ! 10th + ಡಿಗ್ರಿ ಪಾಸ್, ಏಪ್ರಿಲ್ 6 ಕೊನೆಯ ದಿನಾಂಕ
- PSB Job: ರೂ. 85920/- ವೇತನ! 1000 ಹುದ್ದೆಗಳ ಭರ್ಜರಿ ನೇಮಕಾತಿ 2026, ಏಪ್ರಿಲ್ 20 ಕೊನೆಯ ದಿನಾಂಕ
Vehicle