SDF: ವಿದ್ಯಾರ್ಥಿಗಳೇ, ನೀವೇನಾದರೂ ಜಸ್ಟ್ SSLC ಕಂಪ್ಲೀಟ್ ಮಾಡಿದೀರಾ? ಕುಟುಂಬದಲ್ಲಿನ ಆರ್ಥಿಕ ಸಮಸ್ಯೆಯಿಂದಾಗಿ ಮುಂದೆ ಓದಲು ಚಿಂತೆ ಮಾಡುತ್ತಿದ್ದೀರಾ? ಹಾಗಿದ್ದರೆ ನಿಮಗೊಂದು ಸಂತಸದ ಸುದ್ದಿ! ಸರೋಜಿನಿ ದಾಮೋದರನ್ ಫೌಂಡೇಷನ್ ವತಿಯಿಂದ SSLC ಪಾಸ್ ಆಗಿರುವ ವಿದ್ಯಾರ್ಥಿಗಳಿಗೆ ವಿದ್ಯಾಧನ್ ಸ್ಕಾಲರ್ಷಿಪ್ ಪ್ರೋಗ್ರಾಮ್ ಅಡಿಯಲ್ಲಿ ರೂ. 75,000/- ವಿದ್ಯಾರ್ಥಿವೇತನವನ್ನು ನೀಡಲಾಗುತ್ತಿದ್ದು, ಆರ್ಥಿಕವಾಗಿ ಹಿಂದುಳಿದ ಹಾಗೂ ಉನ್ನತ ಶಿಕ್ಷಣದಲ್ಲಿ ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಗೆ ಈ ಒಂದು ಯೋಜನೆ ಬಹಳಷ್ಟು ನೆರವಾಗಲಿದೆ.
ಸರೋಜಿನಿ ದಾಮೋದರನ್ ಫೌಂಡೇಷನ್ ಸಂಸ್ಥೆಯು ನೀಡುತ್ತಿರುವ ವಿದ್ಯಾಧನ್ ವಿದ್ಯಾರ್ಥಿವೇತನಕ್ಕೆ ಅರ್ಹ ವಿದ್ಯಾರ್ಥಿಗಳನ್ನು ನೇರವಾಗಿ ಆಯ್ಕೆ ಮಾಡಿಕೊಳ್ಳುವುದಿಲ್ಲ. ಬದಲಾಗಿ ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಪ್ರತಿ ಕೋರ್ಸ್ ಗಳಿಗೆ ಅನುಗುಣವಾಗಿ ವಿದ್ಯಾರ್ಥಿಗಳಿಗೆ ನೀಡುವ ಸ್ಕಾಲರ್ಷಿಪ್ ಗಳಲ್ಲಿ ವ್ಯತ್ಯಾಸ ಇರಲಿದ್ದು, ಯಾವ ಕೋರ್ಸ್ ಗಳಿಗೆ ಎಷ್ಟೆಷ್ಟು ವಿದ್ಯಾರ್ಥಿವೇತನ ಸಿಗಲಿದೆ? ಅರ್ಜಿ ಸಲ್ಲಿಸುವುದು ಹೇಗೆ? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ? ಲಿಖಿತ ಪರೀಕ್ಷೆಗೆ ಹಾಜರಾಗಲು ಕೊನೆಯ ದಿನಾಂಕ ಯಾವಾಗ ಎಂಬೆಲ್ಲ ಮಾಹಿತಿಯನ್ನು ಪ್ರಸ್ತುತ ಲೇಖನದಲ್ಲಿ ತಿಳಿದುಕೊಳ್ಳೋಣ.

ವಿದ್ಯಾರ್ಥಿವೇತನದ ಅವಲೋಕನ:
| ವಿದ್ಯಾರ್ಥಿವೇತನವನ್ನು ನೀಡುತ್ತಿರುವ ಸಂಸ್ಥೆಯ ಹೆಸರು | ಸರೋಜಿನಿ ದಾಮೋದರನ್ ಫೌಂಡೇಷನ್ |
| ವಿದ್ಯಾರ್ಥಿವೇತನದ ಹೆಸರು | ವಿದ್ಯಾಧಾನ್ ಸ್ಕಾಲರ್ಷಿಪ್ |
| ಅರ್ಹ ಫಲಾನುಭವಿಗಳು | ಜಸ್ಟ್ SSLC ಪಾಸ್ ಆಗಿರುವ ವಿದ್ಯಾರ್ಥಿಗಳು |
| ವಿದ್ಯಾರ್ಥಿವೇತನದ ಮೊತ್ತ | ರೂ. 10,000/- ರೂ. ದಿಂದ 75,000/- |
| ಅರ್ಜಿ ಸಲ್ಲಿಸುವ ವಿಧಾನ | ಆನ್ಲೈನ್ ಮೂಲಕ |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 5-07-2026 |
ವಿದ್ಯಾರ್ಥಿವೇತನದ ಸಂಕ್ಷಿಪ್ತ ಮಾಹಿತಿ:
ಸರೋಜಿನಿ ದಾಮೋದರನ್ ಫೌಂಡೇಷನ್ ಸಂಸ್ಥೆಯು 2026ನೇ ಸಾಲಿನಲ್ಲಿ ವಿದ್ಯಾಧನ್ ಸ್ಕಾಲರ್ಷಿಪ್ ಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿದ್ದು, ಮಾನ್ಯತೆ ಪಡೆದ ಮಂಡಳಿಯಲ್ಲಿ SSLC ಅಲ್ಲಿ ಪಾಸ್ ಆಗಿರುವ ಅಭ್ಯರ್ಥಿಗಳು ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಈ ಸಂಸ್ಥೆಯು ಈ ಒಂದು ಯೋಜನೆಯನ್ನು ಜಾರಿಗೊಳಿಸಿರುವುದರ ಹಿಂದಿನ ಉದ್ದೇಶ ಪ್ರತಿಭಾವಂತ ವಿದ್ಯಾರ್ಥಿಗಳು, ಬಡ ಮತ್ತು ಮಧ್ಯಮ ವರ್ಗಗಳ ಅಭ್ಯರ್ಥಿಗಳು ಹಣಕಾಸಿನ ಸಮಸ್ಯೆಯಿಂದ ಶಿಕ್ಷಣದಿಂದ ವಂಚಿತರಾಗಬಾರದು ಎನ್ನುವುದು.
ವಿದ್ಯಾಧನ್ ಸ್ಕಾಲರ್ಷಿಪ್ ಯೋಜನೆಯಡಿಯಲ್ಲಿ 1st PUC ಹಾಗೂ 2nd PUC ಅಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ರೂ. 10,000/- ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ ಹಾಗೂ ಮೆಡಿಕಲ್, ಪದವಿ, ಇಂಜಿನಿಯರಿಂಗ್ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ 25,000/- ದಿಂದ 75,000/- ಸ್ಕಾಲರ್ಷಿಪ್ ಹಣವನ್ನು ನೀಡಲಾಗುತ್ತದೆ.
ವಿದ್ಯಾಧನ ಸ್ಕಾಲರ್ಷಿಪ್ ಯೋಜನೆಯ ಉದ್ದೇಶ:
- ಭವಿಷ್ಯದಲ್ಲಿ ವಿದ್ಯಾರ್ಥಿಗಳನ್ನು ಸ್ವಾವಲಂಬಿಗಳನ್ನಾಗಿಸುವುದು:
ವಿದ್ಯಾಧನ್ ಸ್ಕಾಲರ್ಷಿಪ್ ಯೋಜನೆಯಡಿಯಲ್ಲಿ ಕೇವಲ PUC ಅಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮಾತ್ರ ವಿದ್ಯಾರ್ಥಿವೇತನವನ್ನು ನೀಡದೆ, ವಿದ್ಯಾರ್ಥಿಗಳು PUC ನಂತರ ತಮ್ಮ ಇಚ್ಛೆಯ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುವ ವರೆಗೂ ಕೂಡ ಈ ಒಂದು ವಿದ್ಯಾರ್ಥಿವೇತನವನ್ನು ನೀಡುವ ಮೂಲಕ ಯಾವುದೇ ಆರ್ಥಿಕ ಸಮಸ್ಯೆ ಇಲ್ಲದೆ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಮುಂದುವರೆಸಿ ಭವಿಷ್ಯದಲ್ಲಿ ಉತ್ತಮ ಉದ್ಯೋಗವನ್ನು ಪಡೆದುಕೊಳ್ಳಲು ಅವಕಾಶ ಕಲ್ಪಿಸುವುದು.
- ಶಿಕ್ಷಣವನ್ನು ಅರ್ಧದಲ್ಲೇ ಮೊಟಕುಗೊಳಿಸುವುದನ್ನು ತಪ್ಪಿಸುವುದು:
ಹತ್ತನೇ ತರಗತಿಯ ನಂತರ ಎಷ್ಟೋ ಪ್ರತಿಭಾವಂತ ಬಡ ಕುಟುಂಬಗಳ ವಿದ್ಯಾರ್ಥಿಗಳು ಹಣಕಾಸಿನ ಸಮಸ್ಯೆಯಿಂದಾಗಿ ಶಿಕ್ಷಣವನ್ನು ಅರ್ಧದಲ್ಲೇ ನಿಲ್ಲಿಸಿ ತಮ್ಮ ಪೋಷಕರೊಂದಿಗೆ ಕೂಲಿ ಕೆಲಸಕ್ಕೆ ಹೋಗುತ್ತಾರೆ ಅಥವಾ ಮನೆಯಲ್ಲೇ ಇರುತ್ತಾರೆ. ಇಂತಹ ಸಮಸ್ಯೆಗಳನ್ನು ತಡೆಗಟ್ಟುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ.
- ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವುದು:
SSLC ನಂತರ ವಿದ್ಯಾರ್ಥಿಗಳು PUC, ಪದವಿ, ಇಂಜಿನಿಯರಿಂಗ್, ಮೆಡಿಕಲ್ ಹಾಗೂ ಇತರ ಉನ್ನತ ಶಿಕ್ಷಣ ಕೋರ್ಸ್ಗಳನ್ನು ಆಯ್ಕೆ ಮಾಡಿಕೊಂಡು ಮುಂದುವರಿಯಲು ಪ್ರೋತ್ಸಾಹಿಸುವುದು. ಹಣದ ಕೊರತೆಯಿಂದ ವಿದ್ಯಾರ್ಥಿಗಳು ತಮ್ಮ ಕನಸಿನ ಶಿಕ್ಷಣವನ್ನು ಕೈಬಿಡದಂತೆ ಸಹಾಯ ಮಾಡುವುದು.
- ಸಮಾನ ಶಿಕ್ಷಣದ ಅವಕಾಶ ಕಲ್ಪಿಸುವುದು:
ಪ್ರತಿಯೊಬ್ಬ ವಿದ್ಯಾರ್ಥಿಗೂ ಆರ್ಥಿಕ ಸ್ಥಿತಿಯನ್ನು ಪರಿಗಣಿಸದೆ ಶಿಕ್ಷಣ ಪಡೆಯುವ ಸಮಾನ ಅವಕಾಶ ದೊರೆಯುವಂತೆ ಮಾಡುವುದು. ಶಿಕ್ಷಣದ ಮೂಲಕ ಸಮಾಜದಲ್ಲಿ ಉತ್ತಮ ಸ್ಥಾನ ಪಡೆಯಲು ಸಹಾಯ ಮಾಡುವುದು.
ವಿದ್ಯಾರ್ಥಿವೇತನದ ವಿವರ:
ಸರೋಜಿನಿ ದಾಮೋದರನ್ ಫೌಂಡೇಷನ್ ಸಂಸ್ಥೆಯು ವಿದ್ಯಾಧನ್ ಸ್ಕಾಲರ್ಷಿಪ್ ಯೋಜನೆಯಡಿಯಲ್ಲಿ ನೀಡುತ್ತಿರುವ ವಿದ್ಯಾರ್ಥಿವೇತನವು ಪ್ರತಿ ಕೋರ್ಸ್ ಗೆ ಅನುಗುಣವಾಗಿದ್ದು, ಯಾವ ಯಾವ ಕೋರ್ಸ್ ಗಳಿಗೆ ಎಷ್ಟೆಷ್ಟು ಸ್ಕಾಲರ್ಷಿಪ್ ಹಣ ನೀಡಲಾಗುತ್ತದೆ ಎನ್ನುವುದನ್ನು ಈ ಕೆಳಗಿನ ಹಂತದಲ್ಲಿ ತಿಳಿದುಕೊಳ್ಳೋಣ.
- 1st PUC ಹಾಗೂ 2nd PUC ಅಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರತಿ ವರ್ಷಕ್ಕೆ ರೂ. 10,000/- ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ
- ಮೆಡಿಕಲ್, ಪದವಿ, ಇಂಜಿನಿಯರಿಂಗ್ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರತಿ ವರ್ಷಕ್ಕೆ 25,000/- ದಿಂದ 75,000/- ಸ್ಕಾಲರ್ಷಿಪ್ ಹಣವನ್ನು ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ಅಗತ್ಯವಾದ ಅರ್ಹತಾ ಮಾನದಂಡಗಳು:
- ವಿದ್ಯಾರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಮಂಡಳಿಯಿಂದ SSLC ಅಲ್ಲಿ ಉತ್ತೀರ್ಣರಾಗಿರಬೇಕು.
- ವಿದ್ಯಾರ್ಥಿಗಳು 10ನೇ ತರಗತಿ ಪರೀಕ್ಷೆಯಲ್ಲಿ 90% ಅಂಕವನ್ನು ಗಳಿಸಿರಬೇಕು.
- ಕುಟುಂಬದ ವಾರ್ಷಿಕ ಆದಾಯವು 2 ಲಕ್ಷ ಮೀರಿರಬಾರದು.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:
- SSLC ಅಂಕಪಟ್ಟಿ
- ಆದಾಯ ಪ್ರಮಾಣ ಪತ್ರ
- ಜಾತಿ ಪ್ರಮಾಣ ಪತ್ರ
- ವಿದ್ಯಾರ್ಥಿಯ ಆಧಾರ್ ಕಾರ್ಡ್
- ಬ್ಯಾಂಕ್ ಖಾತೆಯ ವಿವರಗಳು
- ಪಾಸ್ಪೋರ್ಟ್ ಅಳತೆಯ ಫೋಟೋ
- ಪ್ರಸ್ತುತ ವ್ಯಾಸಂಗದ ದಾಖಲೆಗಳು
- ಹಾಗೂ ಇತರೆ ಅಗತ್ಯ ದಾಖಲೆಗಳು
ಅರ್ಜಿ ಸಲ್ಲಿಸುವ ವಿಧಾನ:
- ಅರ್ಹ ವಿದ್ಯಾರ್ಥಿಗಳು ಮೊದಲು ಸರೋಜಿನಿ ದಾಮೋದರನ್ ಫೌಂಡೇಷನ್ ಸಂಸ್ಥೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ.
- ನಂತರ ವೆಬ್ಸೈಟ್ ಮೇಲ್ಬಾಗದಲ್ಲಿ ನೀಡಲಾದ ಅಪ್ಲೈ ಫಾರ್ ಸ್ಕಾಲರ್ಷಿಪ್ ಲಿಂಕ್ ಮೇಲೆ ಕ್ಲಿಕ್ ಮಾಡಿ.
- ಸ್ಟೂಡೆಂಟ್ ರಿಜಿಸ್ಟ್ರೇಷನ್ ಮೇಲೆ ಕ್ಲಿಕ್ ಮಾಡಿ ಮೂಲ ವಿವರಗಳನ್ನು ಬಳಸಿ ರಿಜಿಸ್ಟ್ರೇಷನ್ ಪ್ರಕ್ರಿಯೆ ಪೂರ್ಣಗೊಳಿಸಿ.
- ನಂತರ ಮೊಬೈಲ್ ನಂಬರ್ ಹಾಗೂ ಪಾಸ್ ವರ್ಡ್ ಬಳಸಿ ಲಾಗಿನ್ ಆಗಿ.
- ನಂತರ ಅಲ್ಲಿ ಕೇಳಲಾದ ವಿದ್ಯಾರ್ಥಿಗಳ ವೈಯಕ್ತಿಕ ವಿವರ, ಶೈಕ್ಷಣಿಕ ವಿವರ ಹಾಗೂ ಇನ್ನಿತರ ಎಲ್ಲಾ ವಿವರಗಳನ್ನು ಭರ್ತಿ ಮಾಡಿ.
- ಮೇಲೆ ನೀಡಲಾದ ಎಲ್ಲ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.
- ಎಲ್ಲ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.
ಆಯ್ಕೆ ಪ್ರಕ್ರಿಯೆ:
- ಆನ್ಲೈನ್ ಅರ್ಜಿ ಪರಿಶೀಲನೆ
- ಲಿಖಿತ ಪರೀಕ್ಷೆ
- ಸಂದರ್ಶನ
- ಅಂತಿಮ ಆಯ್ಕೆ ಪಟ್ಟಿ
ಪ್ರಮುಖ ದಿನಾಂಕಗಳು:
| ಪ್ರಮುಖ ಈವೆಂಟ್ | ದಿನಾಂಕ |
|---|---|
| ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 05-07-2026 |
| ಆನ್ಲೈನ್ ಪರೀಕ್ಷೆ ನಡೆ ಕೊನೆಯ ದಿನಾಂಕ | 19-07-2026 |
| ಸಂದರ್ಶನ ನಡೆಯುವ ದಿನಾಂಕ | 08-08-2026 ರಿಂದ 30-08-2026 ವರೆಗೆ |
ಪ್ರಮುಖ ಲಿಂಕುಗಳು:
| ಅಧಿಕೃತ ವೆಬ್ಸೈಟ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಅಂತಿಮ ತೀರ್ಮಾನ:
ವಿದ್ಯಾಧನ್ ಸ್ಕಾಲರ್ಷಿಪ್ ಯೋಜನೆಯು ಆರ್ಥಿಕವಾಗಿ ಹಿಂದುಳಿದ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯಲು ಸಹಾಯ ಮಾಡುವ ಮಹತ್ವದ ಯೋಜನೆಯಾಗಿದೆ. ಹಣಕಾಸಿನ ಕೊರತೆಯಿಂದ ವಿದ್ಯಾರ್ಥಿಗಳ ಶಿಕ್ಷಣವು ಮಧ್ಯದಲ್ಲೇ ನಿಲ್ಲದಂತೆ ತಡೆಯುವುದು ಇದರ ಪ್ರಮುಖ ಉದ್ದೇಶವಾಗಿದೆ.
ಈ ಯೋಜನೆಯ ಮೂಲಕ ವಿದ್ಯಾರ್ಥಿಗಳು ತಮ್ಮ ಆಸಕ್ತಿಯ ಕ್ಷೇತ್ರಗಳಲ್ಲಿ ಹೆಚ್ಚಿನ ಶಿಕ್ಷಣ ಪಡೆದು ಉತ್ತಮ ಉದ್ಯೋಗ ಮತ್ತು ಸ್ವಾವಲಂಬಿ ಜೀವನವನ್ನು ರೂಪಿಸಿಕೊಳ್ಳಲು ಅವಕಾಶ ಪಡೆಯುತ್ತಾರೆ. ಆದ್ದರಿಂದ ಅರ್ಹ ವಿದ್ಯಾರ್ಥಿಗಳು ಈ ವಿದ್ಯಾರ್ಥಿವೇತನದ ಸದುಪಯೋಗ ಪಡೆದುಕೊಂಡು ತಮ್ಮ ಭವಿಷ್ಯವನ್ನು ಉತ್ತಮವಾಗಿ ರೂಪಿಸಿಕೊಳ್ಳಿ.
ಪ್ರಮುಖ ಲಿಂಕುಗಳು:
| Whatsapp Group Link | Click Here |
| Telegram Group Link | Click Here |
| Instagram Link | Click Here |
ಇತರೆ ಪ್ರಮುಖ ಲಿಂಕುಗಳು:
- Free ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಶೂ-ಸಾಕ್ಸ್, ಚಪ್ಪಲಿ, ಸ್ಟಡಿ ಕಿಟ್ ಹಾಗೂ ₹4,000/₹7,000 ಸಹಾಯಧನ ಯೋಜನೆ – ಸಂಪೂರ್ಣ ಮಾಹಿತಿ!
- SSP Application: ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್! SSP ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ । ಜೂನ್ 30 ಕೊನೆಯ ದಿನಾಂಕ
- PM YASASVI: ₹20,000 ಸ್ಕಾಲರ್ಶಿಪ್! ಕೇಂದ್ರ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್! ಇಂದೇ ಅರ್ಜಿ ಸಲ್ಲಿಸಿ
- Naati Koli: ₹1,20,000 ಸಹಾಯಧನ! ನಾಟಿ ಕೋಳಿ ಸಾಕಾಣಿಕೆಗೆ ಸರ್ಕಾರದಿಂದ ಭಾರಿ ನೆರವು ಜೊತೆಗೆ ನಾಟಿ ಕೋಳಿ ಮರಿ ವಿತರಣೆ