ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿ ಜೀವನವನ್ನು ಪ್ರಾರಂಭಿಸಬೇಕು ಎಂದಿರುವ ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ! ಹೊಸಕೋಟೆಯ ವಿಕಾಸ ಸೌಹಾರ್ದ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
Vikas Bank Recruitment in Kannada
ವಿಕಾಸ ಸೌಹಾರ್ದ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಶಾಖಾ ವ್ಯವಸ್ಥಾಪಕರು, ಆಡಿಟರ್, ಜೂನಿಯರ್ ಅಸಿಸ್ಟೆಂಟ್, ಪ್ರೊಬೇಷನರಿ ಅಧಿಕಾರಿ, ಕಾನೂನು ಅಧಿಕಾರಿ ಸೇರಿದಂತೆ ಒಟ್ಟು 46 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳಿಗೆ ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಈ ಒಂದು ನೇಮಕಾತಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಪ್ರಸ್ತುತ ಈ ಒಂದು ಲೇಖನದ ಮೂಲಕ ತಿಳಿದುಕೊಳ್ಳಬಹುದಾಗಿದೆ.

ಹುದ್ದೆಯ ಸಂಕ್ಷಿಪ್ತ ನೋಟ:
| ನೇಮಕಾತಿ ಸಂಸ್ಥೆ | ವಿಕಾಸ ಸೌಹಾರ್ದ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್, ಹೊಸಕೋಟೆ |
| ಹುದ್ದೆಯ ಹೆಸರು | ಶಾಖಾ ವ್ಯವಸ್ಥಾಪಕರು, ಆಡಿಟರ್, ಕಾನೂನು ಅಧಿಕಾರಿ, ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳು |
| ಹುದ್ದೆಯ ಸಂಖ್ಯೆ | ಒಟ್ಟು 46 ಹುದ್ದೆಗಳು |
| ಉದ್ಯೋಗ ಸ್ಥಳ | ಹೊಸಕೋಟೆ ಮತ್ತು ಬ್ಯಾಂಕಿನ ವಿವಿಧ ಶಾಖೆಗಳು |
| ಅರ್ಜಿ ಸಲ್ಲಿಸುವ ವಿಧಾನ | ಆನ್ಲೈನ್ |
ಹುದ್ದೆಯ ಸಂಕ್ಷಿಪ್ತ ವಿವರ:
ವಿಕಾಸ್ ಸೌಹಾರ್ದ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ವಿವಿಧ ಹುದ್ದೆಗಳನ್ನು ಈ ಕೆಳಕಂಡಂತೆ ವಿಂಗಡಿಸಲಾಗಿದೆ.
| ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
| ಪ್ರೊಬೇಷನರಿ ಅಧಿಕಾರಿ | 20 ಹುದ್ದೆಗಳು |
| ಶಾಖಾ ವ್ಯವಸ್ಥಾಪಕ ಅಥವಾ ಹಿರಿಯ ಅಧಿಕಾರಿ | 10 ಹುದ್ದೆಗಳು |
| ರಿಕವರಿ ಅಸಿಸ್ಟೆಂಟ್ ಅಥವಾ ಜೂನಿಯರ್ ಅಸಿಸ್ಟೆಂಟ್ | 10 ಹುದ್ದೆಗಳು |
| ಆಡಿಟರ್ | 4 ಹುದ್ದೆಗಳು |
| ಕಾನೂನು ಅಧಿಕಾರಿ | 2 ಹುದ್ದೆಗಳು |
ಶೈಕ್ಷಣಿಕ ಅರ್ಹತೆ:
- ಪ್ರೊಬೇಷನರಿ ಅಧಿಕಾರಿ:
ಬ್ಯಾಂಕಿಂಗ್, ಅಕೌಂಟಿಂಗ್ ಅಥವಾ ವಾಣಿಜ್ಯ ವಿಷಯದಲ್ಲಿ ಪದವಿ ಹೊಂದಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದುದು. ಅನುಭವ ಹೊಂದಿರದ ಫ್ರೆಶರ್ ಅಭ್ಯರ್ಥಿಗಳಿಗೂ ಕೂಡ ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ
- ಶಾಖಾ ವ್ಯವಸ್ಥಾಪಕ:
ಮಾನ್ಯತೆ ಪಡದೆ ವಿಶ್ವವಿದ್ಯಾಲಯದಲ್ಲಿ ಯಾವುದೇ ವಿಷಯದಲ್ಲಿ ಪದವಿ ಹೊಂದಿರುವ ಅಭ್ಯರ್ಥಿಗಳು ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಮೃದು ಕೌಶಲ್ಯ ಹಾಗೂ ತಂತ್ರಜ್ಞಾನದಲ್ಲಿ ಜ್ಞಾನ ಹೊಂದಿರಬೇಕು. ಬ್ಯಾಂಕಿಂಗ್ ಮತ್ತು ಹಣಕಾಸು ಸಂಸ್ಥೆಯಲ್ಲಿ ಕನಿಷ್ಠ 5 ವರ್ಷಗಳ ಕೆಲಸದ ಅನುಭವವನ್ನು ಹೊಂದಿರಬೇಕು. ಬ್ಯಾಂಕಿಂಗ್ ಮತ್ತು ವಾಣಿಜ್ಯ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಹೊಂದಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು.
- ರಿಕವರಿ ಅಸಿಸ್ಟೆಂಟ್:
ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಲ್ಲಿ SSLC ಅಲ್ಲಿ ಉತ್ತೀರ್ಣರಾಗಿರಬೇಕು. ಸಾಲದ ವಸೂಲಾತಿ ಅಥವಾ ಹಣಕಾಸು ಸಂಸ್ಥೆಯಲ್ಲಿ ಕೆಲಸದ ಅನುಭವವನ್ನು ಹೊಂದಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು.
- ಆಡಿಟರ್:
ಅಕೌಂಟಿಂಗ್ ಅಥವಾ ವಾಣಿಜ್ಯ ವಿಷಯದಲ್ಲಿ ಪದವಿ ಹೊಂದಿರಬೇಕು. ಜೊತೆಗೆ ಚಾರ್ಟರ್ಡ್ ಅಕೌಂಟೆಂಟ್ಸ್ ಅಥವಾ ಸಿ.ಎ.ಎಂ.ಎಸ್ ಅರ್ಹತೆಯನ್ನು ಹೊಂದಿರಬೇಕು. ಟ್ಯಾಕ್ಸ್ ಕನ್ಸಲ್ಟೆನ್ಸಿ ಅಥವಾ ಬ್ಯಾಂಕ್ ಆಡಿಟ್ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷಗಳ ಅನುಭವವನ್ನು ಹೊಂದಿರಬೇಕು.
- ಕಾನೂನು ಅಧಿಕಾರಿ:
ಕಾನೂನು ವಿಷಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು. ಬ್ಯಾಂಕ್ ರಿಕವರಿ ಪ್ರಕರಣಗಳು ಹಾಗೂ ಸಿವಿಲ್ ಕೇಸ್ ಗಳನ್ನು ನಿರ್ವಹಿಸಿದ ಕನಿಷ್ಠ 5 ವರ್ಷಗಳ ಅನುಭವ ಇರಬೇಕು.
ವಯೋಮಿತಿ ವಿವರ:
ಏಪ್ರಿಲ್ 1, 2026 ಕ್ಕೆ ಅನ್ವಯವಾಗುವಂತೆ ಅಭ್ಯರ್ಥಿಗಳ ವಯೋಮಿತಿಯನ್ನು ಅಳಿಯಲಾಗುತ್ತದೆ.
- ಪ್ರೊಬೇಷನರಿ ಅಧಿಕಾರಿ ಅಥವಾ ರಿಕವರಿ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಟ 30 ವರ್ಷ ವಯೋಮಿತಿಯನ್ನು ಹೊಂದಿರಬೇಕು.
- ಶಾಖಾ ವ್ಯವಸ್ಥಾಪಕರು, ಆಡಿಟರ್ ಹಾಗೂ ಕಾನೂನು ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಟ 35 ವರ್ಷ ವಯೋಮಿತಿಯನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ ವಿವರ:
ಬ್ಯಾಂಕಿಂಗ್ ನ ಕೆಲವು ನಿಯಮಗಳ ಪ್ರಕಾರ, ಅರ್ಹ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುವುದು.
ಅರ್ಜಿ ಶುಲ್ಕ:
ವಿಕಾಸ್ ಸೌಹಾರ್ದ ಸಹಕಾರ ಬ್ಯಾಂಕ್ ನಿಯಮಿತ ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಎಲ್ಲಾ ವರ್ಗಗಳ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವನ್ನು ನಿಗದಿಪಡಿಸಿದ್ದು, ಯುಪಿಐ ಕ್ಯೂ ಆರ್ ಕೋಡ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.
- ಅರ್ಜಿ ಶುಲ್ಕಗಳ ಒಟ್ಟು ಮೊತ್ತ: ರೂ. 500/-
| ಇದನ್ನು ಗಮನಿಸಿ: ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿಸಿದ ನಂತರ ಕಡ್ಡಾಯವಾಗಿ ಯುಪಿಐ ರೆಫರೆನ್ಸ್ ನಂಬರ್ ಅನ್ನು ಆನ್ಲೈನ್ ಅರ್ಜಿಯಲ್ಲಿ ತಪ್ಪದೆ ನಮೂದಿಸಬೇಕು. |
ವೇತನ ಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಬ್ಯಾಂಕಿನ ವೇತನ ಶ್ರೇಣಿ ಮತ್ತು ನಿಯಮಗಳ ಪ್ರಕಾರ, ಆಕರ್ಷಕ ವೇತನವನ್ನು ನೀಡಲಾಗುವುದು. ಅಭ್ಯರ್ಥಿಗಳ ಕೌಶಲ್ಯ ಹಾಗೂ ಹುದ್ದೆಗಳ ಜವಾಬ್ದಾರಿಯ ಆಧಾರದ ಮೇಲೆ ಮಾಸಿಕ ಸಂಭಾವನೆಯನ್ನು ನಿಗದಿಪಡಿಸಲಾಗುವುದು.
ಅಗತ್ಯ ದಾಖಲೆಗಳು:
- ಆಧಾರ್ ಕಾರ್ಡ್
- ಪ್ಯಾನ್ ಕಾರ್ಡ್
- ಅನುಭವ ಪ್ರಮಾಣಪತ್ರ
- ಶೈಕ್ಷಣಿಕ ಪ್ರಮಾಣಪತ್ರ
- UPI ಪಾವತಿ ರಶೀದಿ
- ಪಾಸ್ ಪೋರ್ಟ್ ಅಳತೆಯ ಫೋಟೋ
- ಅಭ್ಯರ್ಥಿಗಳ ಸಹಿ
- ಹಾಗೂ ಇನ್ನಿತರ ಅಗತ್ಯ ದಾಖಲೆಗಳು
ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ಈ ಒಂದು ಹುದ್ದೆಗೆ ಆನ್ಲೈನ್ ಮೂಲಕ ಗೂಗಲ್ ಫಾರ್ಮ್ ಬಳಸಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
- ಬ್ಯಾಂಕಿನ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಂಡು ಅರ್ಹತೆಯನ್ನು ಖಚಿತಪಡಿಸಿಕೊಳ್ಳಿ.
- ನಂತರ ವೆಬ್ಸೈಟ್ ನಲ್ಲಿ ಲಭ್ಯವಿರುವ ಗೂಗಲ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ.
- ಅರ್ಜಿಯಲ್ಲಿ ನಿಮ್ಮ ವೈಯಕ್ತಿಕ ವಿವರ, ಶೈಕ್ಷಣಿಕ ವಿವರ ಹಾಗೂ ಅನುಭವ ವಿವರವನ್ನು ಭರ್ತಿಮಾಡಿ.
- ಅಲ್ಲಿ ನೀಡಲಾದ ಕ್ಯೂಆರ್ ಕೋಡ್ ಬಳಸಿ ರೂ. 500/- ಶುಲ್ಕವನ್ನು ಪಾವತಿಸಿ ರೆಫರೆನ್ಸ್ ಸಂಖ್ಯೆಯನ್ನು ನಮೂದಿಸಿ.
- ನಂತರ ಅರ್ಜಿಯನ್ನು ಸಲ್ಲಿಸಿ, ನಿಮ್ಮ ಇಮೇಲ್ ಐಡಿಗೆ ಬರುವ ದೃಢೀಕರಣ ಸಂದೇಶವನ್ನು ಉಳಿಸಿಕೊಳ್ಳಿ.
ಆಯ್ಕೆ ಪ್ರಕ್ರಿಯೆ:
- ಆನ್ಲೈನ್ ಪರೀಕ್ಷೆ:
ಆನ್ಲೈನ್ ಪರೀಕ್ಷೆಯು 150 ಅಂಕಗಳ ಬಹು ಆಯ್ಕೆಯ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಅಭ್ಯರ್ಥಿಗಳು ತಮ್ಮದೇ ಆದ ಸ್ಮಾರ್ಟ್ ಫೋನ್ ಅಥವಾ ಟ್ಯಾಬ್ಲೆಟ್ ಬಳಸಿ ಪರೀಕ್ಷೆಯನ್ನು ಬರೆಯಬಹುದಾಗಿದೆ. ಪರೀಕ್ಷೆಯಲ್ಲಿ ಒಳಗಂಡಿರುವ ವಿಷಯಗಳು ಈ ಕೆಳಕಂಡಂತಿದೆ.
- ಬ್ಯಾಂಕಿಂಗ್ ವಿಷಯ: 50 ಅಂಕಗಳು
- ಸಾಮಾನ್ಯ ಜ್ಞಾನ: 25 ಅಂಕಗಳು
- ತಂತ್ರಜ್ಞಾನ: 20 ಅಂಕಗಳು
- ಮಾನಸಿಕ ಸಾಮರ್ಥ್ಯ: 15 ಅಂಕಗಳು
- ಸಹಕಾರ ಕ್ಷೇತ್ರ: 10 ಪ್ರಶ್ನೆಗಳು
- ಅಕೌಂಟ್ಸ್: 10 ಪ್ರಶ್ನೆಗಳು
- ಇಂಗ್ಲಿಷ್ ಜ್ಞಾನ: 10 ಪ್ರಶ್ನೆಗಳು
- ಕನ್ನಡ ಭಾಷಾ ಪ್ರಾವೀಣ್ಯತೆ: 10 ಪ್ರಶ್ನೆಗಳು
- ಮೌಖಿಕ ಸಂದರ್ಶನ:
ಆನ್ಲೈನ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳನ್ನು 27 ಏಪ್ರಿಲ್ 2026 ರಂದು ಹೊಸಪೇಟೆಯಲ್ಲಿ ಸಂದರ್ಶನಕ್ಕೆ ಕರೆಯಲಾಗುತ್ತದೆ.
ಪ್ರಮುಖ ದಿನಾಂಕಗಳು:
| ಪ್ರಮುಖ ಈವೆಂಟ್ | ದಿನಾಂಕ |
|---|---|
| ಅಧಿಸೂಚನೆ ಪ್ರಕಟವಾದ ದಿನಾಂಕ | 09-04-2026 |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 24-04-2026 |
| ಆನ್ಲೈನ್ ಪರೀಕ್ಷೆ ನಡೆಯುವ ದಿನಾಂಕ | 26-04-2026 |
| ಮೌಖಿಕ ಸಂದರ್ಶನ ನಡೆಯುವ ದಿನಾಂಕ | 27-04-2026 |
ಪ್ರಮುಖ ಲಿಂಕುಗಳು:
| ಅಧಿಕೃತ ವೆಬ್ಸೈಟ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ಅಧಿಸೂಚನೆ ಪಿಡಿಎಫ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಅಂತಿಮ ಮಾತು:
ನೀವೇನಾದರೂ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಮಾಡಬೇಕೆನ್ನುವ ಆಸಕ್ತಿಯನ್ನು ಹಿಂದಿದ್ದರೆ, ಈ ನೇಮಕಾತಿಗೆ ಸಂಬಂಧಿಸಿದ ಅರ್ಹತಾ ಮಾನದಂಡವನ್ನು ಪೂರೈಸುತ್ತೀರೆಯೋ? ಇಲ್ಲವೋ? ಎಂದು ಖಚಿತಪಡಿಸಿಕೊಂಡು ಗೂಗಲ್ ಫಾರ್ಮ್ ಭರ್ತಿ ಮಾಡುವ ಮೂಲಕ ಅರ್ಜಿ ಸಲ್ಲಿಸಿ.
ಇತರೆ ಪ್ರಮುಖ ಲಿಂಕುಗಳು:
- Post Office: SSLC ಪಾಸ್ ಆದವರಿಗೆ ಕೇಂದ್ರ ಅಂಚೆ ಇಲಾಖೆಯಲ್ಲಿ ಜಾಬ್ ಅವಕಾಶ! ಅರ್ಜಿ ಶುಲ್ಕ ಇಲ್ಲ
- BMRCL: ರೂ. 2 ಲಕ್ಷ ವೇತನ! ಜನರಲ್ ಮ್ಯಾನೇಜರ್ ಹುದ್ದೆಗಳ ಭರ್ಜರಿ ನೇಮಕಾತಿ । ಯಾವುದೇ ಲಿಖಿತ ಪರೀಕ್ಷೆ + ಅರ್ಜಿ ಶುಲ್ಕವಿಲ್ಲ
- BEL: ರೂ. 1,80,000/- ವೇತನ! ಡೆಪ್ಯೂಟಿ ಮ್ಯಾನೇಜರ್ ಹಾಗೂ ಜೂನಿಯರ್ ಇಂಜಿನಿಯರ್ ಹುದ್ದೆಗಳು । ಏಪ್ರಿಲ್ 30 ಕೊನೆಯ ದಿನಾಂಕ
- CNP: ರೂ. 1,03,000/- ವೇತನ! ಕರೆನ್ಸಿ ನೋಟ್ ಪ್ರೆಸ್ನಲ್ಲಿ ಬೃಹತ್ ನೇಮಕಾತಿ । ಮೇ 19 ಕೊನೆಯ ದಿನಾಂಕ
- CRPF: ಕಾನ್ಸ್ಟೇಬಲ್ ಟ್ರೇಡ್ಸ್ ಮನ್ ಹುದ್ದೆಗಳ ಭರ್ಜರಿ ನೇಮಕಾತಿ! 10th ಪಾಸ್ ಆದ ಅಭ್ಯರ್ಥಿಗಳಿಗೆ ಸರ್ಕಾರಿ ಉದ್ಯೋಗವಕಾಶ