ನಮಸ್ಕಾರ ಸ್ನೇಹಿತರೆ, ನೀವೇನಾದರೂ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಭದ್ರವಾದ ನೆಲೆಯನ್ನು ಕಂಡುಕೊಳ್ಳಬೇಕೆಂದು ಕನಸ್ಸು ಕಾಣುತ್ತಿದ್ದೀರಾ? ಗೌರವಯುತ ವೃತ್ತಿಜೀವನದ ಜೊತೆಗೆ ಸಮಾಜದ ಮುಖ್ಯ ವಾಹಿನಿಯಲ್ಲಿ ಗುರುತಿಸಿಕೊಳ್ಳಬೇಕೆನ್ನುವ ಹಂಬಲ ನಿಮಗಿದೆಯಾ? ಹಾಗಿದ್ದರೆ ನಿಮ್ಮ ಕನ್ನಸ್ಸನ್ನು ನನಸ್ಸು ಮಾಡಿಕೊಳ್ಳಲು ಇದು ಸುವರ್ಣವಕಾಶ!
VS Bank Recruitment 2026
ಕರ್ನಾಟಕದ ಪ್ರತಿಷ್ಠಿತ ಸಹಕಾರಿ ಬ್ಯಾಂಕ್ ಗಳಲ್ಲಿ ಒಂದಾದ ವೀರಶೈವ ಸಹಕಾರಿ ಬ್ಯಾಂಕ್ ಲಿಮಿಟೆಡ್ 2026 ನೇ ಸಾಲಿನ ನೇಮಕಾತಿ ಅಧಿಸೂಚನೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಇಲ್ಲಿ ಜೂನಿಯರ್ ಅಸಿಸ್ಟೆಂಟ್ ಹಾಗೂ ಅಟೆಂಡರ್ ಹುದ್ದೆಗಳು ಖಾಲಿಯಿದ್ದು, ಈ ಹುದ್ದೆಗಳಿಗೆ ಸಂಬಂಧಿಸಿದ ನೇಮಕಾತಿ ಪ್ರಕ್ರಿಯೆಯು ಮೆರಿಟ್ ಆಧಾರದ ಮೇಲೆ ನಡೆಯಲಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು 27-05-2026 ರ ವರೆಗೂ ಅವಕಾಶ ಇರುತ್ತದೆ. ಆಸಕ್ತ ಅಭ್ಯರ್ಥಿಗಳು ಪ್ರಸ್ತುತ ಲೇಖನದಲ್ಲಿ ನೀಡಲಾದ ಹುದ್ದೆಯ ಬಗೆಗಿನ ಸಂಪೂರ್ಣ ಮಾಹಿತಿಯನ್ನು ಒಂದಿಕೊಂಡು ನಂತರ ಅರ್ಜಿ ಸಲ್ಲಿಸಿ.

ಹುದ್ದೆಯ ಅವಲೋಕನ:
| ನೇಮಕಾತಿ ಸಂಸ್ಥೆ | ವೀರಶೈವ ಸಹಕಾರಿ ಬ್ಯಾಂಕ್ ಲಿಮಿಟೆಡ್, ವಿಜಯನಗರ, ಬೆಂಗಳೂರು |
| ಹುದ್ದೆಯ ಹೆಸರು | ಜೂನಿಯರ್ ಅಸಿಸ್ಟೆಂಟ್, ಅಟೆಂಡರ್ |
| ಹುದ್ದೆಗಳ ಸಂಖ್ಯೆ | ಒಟ್ಟು 12 ಹುದ್ದೆಗಳು |
| ಅರ್ಜಿ ಸಲ್ಲಿಸುವ ವಿಧಾನ | ಆನ್ಲೈನ್ ಮೂಲಕ ಮಾತ್ರ |
| ಉದ್ಯೋಗ ಸ್ಥಳ | ಬೆಂಗಳೂರು – ಕರ್ನಾಟಕ |
ಹುದ್ದೆಯ ವಿವರ:
ವೀರಶೈವ ಸಹಕಾರಿ ಬ್ಯಾಂಕ್ ಲಿಮಿಟೆಡ್ ಪ್ರಸ್ತುತ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಹುದ್ದೆಗಳ ವಿವರ ಈ ಕೆಳಕಂಡಂತಿದೆ.
| ಹುದ್ದೆಗಳ ಹೆಸರು | ಹುದ್ದೆಗಳ ಸಂಖ್ಯೆ |
| ಅಟೆಂಡರ್ | 2 ಹುದ್ದೆಗಳು |
| ಜೂನಿಯರ್ ಅಸಿಸ್ಟೆಂಟ್ | 10 ಹುದ್ದೆಗಳು |
ವಿದ್ಯಾರ್ಹತೆ:
ವೀರಶೈವ ಸಹಕಾರಿ ಬ್ಯಾಂಕ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹೊಂದಿರಬೇಕಾದ ಶೈಕ್ಷಣಿಕ ಅರ್ಹತೆ ಈ ಕೆಳಕಂಡಂತಿದೆ.
ಅಟೆಂಡರ್:
- ಅಟೆಂಡರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ SSLC ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
- ಹಾಗೂ ಅಭ್ಯರ್ಥಿಗಳು ಕಡ್ಡಾಯವಾಗಿ SSLC ಅಲ್ಲಿ ಕನ್ನಡವನ್ನು ಒಂದು ಭಾಷೆಯಾಗಿ ಓದಿರಬೇಕು.
ಜೂನಿಯರ್ ಅಸಿಸ್ಟೆಂಟ್:
- ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪೂರ್ಣಗೊಳಿಸಿರಬೇಕು.
- ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
- ಅಭ್ಯರ್ಥಿಗಳಿಗೆ ಕನ್ನಡವನ್ನು ಕಡ್ಡಯಾಗಿ ಓದಲು, ಬರೆಯಲು ಹಾಗೂ ಮಾತನಾಡಲು ಬರಬೇಕು.
- ಜೊತೆಗೆ SSLC ಪರೀಕ್ಷೆಯಲ್ಲಿ ಕಡ್ಡಾಯವಾಗಿ ಕನ್ನಡವನ್ನು ಒಂದು ಐಚ್ಚಿಕ ಭಾಷೆಯಾಗಿ ಓದಿರಬೇಕು.
ವಯೋಮಿತಿ ವಿವರ:
ವೀರಶೈವ ಸಹಕಾರಿ ಬ್ಯಾಂಕ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ರಿಂದ 40 ವರ್ಷ ವಯೋಮಿತಿಯನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ ವಿವರ:
ಸರ್ಕಾರದ ನಿಯಮಗಳ ಪ್ರಕಾರ ವಿವಿಧ ವರ್ಗಗಳ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ, ಅವುಗಳ ವಿವರ ಈ ಕೆಳಕಂಡಂತಿದೆ.
- ಇತರೆ ಹಿಂದುಳಿದ ವರ್ಗಗಳ (2A, 2B, 3A, 3B) ಅಭ್ಯರ್ಥಿಗಳಿಗೆ: 3 ವರ್ಷ
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ -1 ರ ಅಭ್ಯರ್ಥಿಗಳಿಗೆ: 5 ವರ್ಷ
ಅರ್ಜಿ ಶುಲ್ಕ:
ಹುದ್ದೆಗಳಿಗೆ ಅನುಗುಣವಾಗಿ ಅರ್ಜಿ ಶುಲ್ಕವನ್ನು ನಿಗದಿಪಡಿಸಿದ್ದು, ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಇಂಟರ್ನೆಟ್ ಬ್ಯಾಂಕಿಂಗ್, ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್, ಯುಪಿಐ ಬಳಸಿ ಪಾವತಿಸಬೇಕಾಗುತ್ತದೆ.
ಅಟೆಂಡರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು:
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮಹಿಳೆಯರು ಹಾಗೂ ಪ್ರವರ್ಗ -1 ಅಭ್ಯರ್ಥಿಗಳಿಗೆ: ರೂ. 1,180 (1,000 ಶುಲ್ಕ + 180 GST)
- ಸಾಮಾನ್ಯ ಹಾಗೂ ಇತರೆ ಹಿಂದುಳಿದ ವರ್ಗಗಳ (2A, 2B, 3A, 3B) ಅಭ್ಯರ್ಥಿಗಳಿಗೆ: ರೂ. 2.360 (2,000 ಶುಲ್ಕ + 360 GST)
ಜೂನಿಯರ್ ಅಸಿಸ್ಟೆಂಟ್:
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮಹಿಳೆಯರು ಹಾಗೂ ಪ್ರವರ್ಗ -1 ಅಭ್ಯರ್ಥಿಗಳಿಗೆ: ರೂ. 590 (500 ಶುಲ್ಕ + 90 GST)
- ಸಾಮಾನ್ಯ ಹಾಗೂ ಇತರೆ ಹಿಂದುಳಿದ ವರ್ಗಗಳ (2A, 2B, 3A, 3B) ಅಭ್ಯರ್ಥಿಗಳಿಗೆ: ರೂ. 1,180 (1,000 ಶುಲ್ಕ + 180 GST)
ವೇತನ ಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಬ್ಯಾಂಕ್ ನ ನಿಯಮಾನುಸಾರ ವೇತನವನ್ನು ನಿಗದಿಪಡಿಸಿದ್ದು, ಇದರ ಜೊತೆಗೆ ಇತರೆ ಭತ್ಯೆಗಳು ಲಭ್ಯವಿರುತ್ತದೆ.
- ಅಟೆಂಡರ್: ರೂ. 34,100/ ದಿಂದ ರೂ. 67,600/-
- ಜೂನಿಯರ್ ಅಟೆಂಡರ್: ರೂ. 49,050/- ದಿಂದ ರೂ. 92,500/-
ಅರ್ಜಿ ಸಲ್ಲಿಸುವ ವಿಧಾನ:
- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳುಮೊದಲು ವೀರಶೈವ ಸಹಕಾರಿ ಬ್ಯಾಂಕ್ ಲಿಮಿಟೆಡ್ ನ ಅಧಿಕೃತ ವೆಬ್ಸೈಟ್ ಗೆ ಭೇಟಿ.
- ನಂತರ ಮುಖಪುಟದಲ್ಲಿರುವ ನೇಮಕಾತಿ ಲಿಂಕ್ ಮೇಲೆ ಕ್ಲಿಕ್ ಮಾಡಿ ಜಾಬ್ ನೋಟಿಫಿಕೇಶನ್ ಅನ್ನು ಸಂಪೂರ್ಣವಾಗಿ ಓದಿಕೊಳ್ಳಿ.
- ನಂತರ ಆನ್ಲೈನ್ ಅಪ್ಲಿಕೇಶನ್ ಲಿಂಕ್ ಅನ್ನು ಆಯ್ಕೆ ಮಾಡಿಕೊಳ್ಳಿ.
- ನಂತರ ನಿಗದಿತ ಅರ್ಜಿ ಫಾರ್ಮ್ ನಲ್ಲಿ ನಿಮ್ಮ ವೈಯಕ್ತಿಕ ವಿವರ, ಶೈಕ್ಷಣಿಕ ವಿವರದ ಬಗ್ಗೆ ಸ್ಪಷ್ಟ ಮಾಹಿತಿಯನ್ನು ಭರ್ತಿ ಮಾಡಿ.
- ಅಭ್ಯರ್ಥಿಗಳ ಪಾಸ್ ಪೋರ್ಟ್ ಅಳತೆಯ ಫೋಟೋ, ಸಹಿಯನ್ನು ಅಪ್ಲೋಡ್ ಮಾಡಿ.
- ಭರ್ತಿ ಮಾಡಿರುವ ಎಲ್ಲಾ ವಿವರಗಳು ಸರಿ ಇದೆಯೇ ಎಂದು ಖಚಿತಪಡಿಸಿಕೊಂಡು ನಿಮ್ಮ ವರ್ಗಕ್ಕೆ ಸಂಬಂಧಿಸಿದ ಅರ್ಜಿ ಶುಲ್ಕವನ್ನು ಪಾವತಿಸಿ ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.
ಆಯ್ಕೆ ಪ್ರಕ್ರಿಯೆ:
- ಅಟೆಂಡರ್:
ಇಲ್ಲಿ 100 ಅಂಕಗಳ ಲಿಖಿತ ಪರೀಕ್ಷೆ ನಡೆಯಲಿದ್ದು, ಈ ಪರೀಕ್ಷೆಯು ಕನ್ನಡ ಭಾಷೆ ಹಾಗೂ ಸಾಮಾನ್ಯ ಜ್ಞಾನ ವಿಷಯವನ್ನು ಒಳಗೊಂಡಿರುತ್ತದೆ. ಒಟ್ಟು ಪರೀಕ್ಷಾ ಅವಧಿ 1 ಗಂಟೆ
- ಜೂನಿಯರ್ ಅಸಿಸ್ಟೆಂಟ್:
ಇಲ್ಲಿ 200 ಅಂಕಗಳ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ಈ ಪರೀಕ್ಷೆಯಲ್ಲಿ ಕನ್ನಡ ಭಾಷೆ, ಸಾಮಾನ್ಯ ಇಂಗ್ಲಿಷ್ ಭಾರತೀಯ ಸಂವಿಧಾನ, ಸಹಕಾರಿ ವಿಷಯಗಳು, ಬ್ಯಾಂಕಿಂಗ್ ಚಟುವಟಿಕೆ ಹಾಗೂ ಸಾಮಾನ್ಯ ಜ್ಞಾನ ವಿಷಯಕ್ಕೆ ಸಂಬಂಧಿಸಿದ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಒಟ್ಟು ಪರೀಕ್ಷಾ ಅವಧಿ 2 ಗಂಟೆ
- ಸಂದರ್ಶನ:
ಅಭ್ಯರ್ಥಿಗಳು ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ 1:5 ಅನುಪಾತದಲ್ಲಿ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುತ್ತದೆ.
- ಅಂತಿಮ ಆಯ್ಕೆ;
ಅಭ್ಯರ್ಥಿಗಳು ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳಿಗೆ 85% ಹಾಗೂ ಸಂದರ್ಶನದಲ್ಲಿ ಗಳಿಸಿದ ಅಂಕಗಳಿಗೆ 15% ವೇಟೇಜ್ ನೀಡಿ ಅಂತಿಮವಾಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಪ್ರಮುಖ ದಿನಾಂಕಗಳು:
| ಪ್ರಮುಖ ಈವೆಂಟ್ | ದಿನಾಂಕ |
|---|---|
| ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ | 27-04-2026 |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 27-05-2026 |
ಪ್ರಮುಖ ಲಿಂಕುಗಳು:
| ಅಧಿಕೃತ ವೆಬ್ಸೈಟ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ಅಧಿಸೂಚನೆ ಪಿಡಿಎಫ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಅಂತಿಮ ತೀರ್ಮಾನ:
ವೀರಶೈವ ಸಹಕಾರಿ ಬ್ಯಾಂಕ್ ಲಿಮಿಟೆಡ್ ಒಟ್ಟು 12 ಅಟೆಂಡರ್ ಹಾಗೂ ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಹುದ್ದೆಗಳಿಗೆ ಅನುಗುಣವಾಗಿ ಶೈಕ್ಷಣಿಕ ಅರ್ಹತೆಯನ್ನು ಹೊಂದಿದ್ದು, ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿದ್ದರೆ ಇಂದೇ ನಿಮ್ಮ ಆಯ್ಕೆಯ ಹುದ್ದೆಗೆ ಅರ್ಜಿಯನ್ನು ಸಲ್ಲಿಸಿ ಹುದ್ದೆಗೆ ಹಾಗೂ ನಿಮ್ಮ ವರ್ಗಕ್ಕೆ ಸಂಬಂಧಿಸಿದ ಅರ್ಜಿ ಶುಲ್ಕವನ್ನು ಪಾವತಿಸಿ ಈ ಹುದ್ದೆಯನ್ನು ತಮ್ಮದಾಗಿಸಿಕೊಳ್ಳಿ. ನೆನಪಿರಲಿ 27-05-2026 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ.
ಇತರೆ ಪ್ರಮುಖ ಲಿಂಕುಗಳು:
- IRIDO: ₹2,15,900/- ವೇತನ! 6300+ ಹುದ್ದೆಗಳ ಬೃಹತ್ ನೇಮಕಾತಿ! ಮೇ 31 ಕೊನೆಯ ದಿನಾಂಕ
- DCC: ಬೆಳಗಾವಿ DCC ಬ್ಯಾಂಕ್ನಲ್ಲಿ ಭರ್ಜರಿ ಉದ್ಯೋಗಾವಕಾಶ! SDA, FDA, ಡ್ರೈವರ್ ಹುದ್ದೆಗಳು
- IPPB: ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ನೇಮಕಾತಿ 2026 | ಮೇ 21 ಕೊನೆಯ ದಿನಾಂಕ
- Mysore Court: ₹83,700 ವೇತನ! SSLC / PUC ಪಾಸ್ ಆದವರಿಗೆ ಸರ್ಕಾರಿ ಉದ್ಯೋಗ । ಇಂದೇ ಅಪ್ಲೈ ಮಾಡಿ
- HLL: SSLC ಪಾಸ್ ಆದವರಿಗೆ ಸರ್ಕಾರಿ ಡ್ರೈವರ್ ಜಾಬ್! ಮೇ 06 ಕೊನೆಯ ದಿನಾಂಕ । ಇಂದೇ ಅಪ್ಲೈ ಮಾಡಿ