ಸ್ವಾವಲಂಬಿಯಾಗಿ ಬದುಕನ್ನು ಕಟ್ಟಿಕೊಳ್ಳಬೇಕೆಂದಿರುವ ಸಾವಿರಾರು ಮಹಿಳೆಯರಿಗೆ ಸಂತಸದ ಸುದ್ದಿ! ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಕಲಬುರಗಿ ಜಿಲ್ಲೆಯ ಅಫಜಲಪುರ ತಾಲ್ಲೂಕಿನಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
WCD Kalaburagi Recruitment in Kannada
ಜಸ್ಟ್ SSLC ಅಲ್ಲಿ ಪಾಸ್ ಆದ ಮಹಿಳಾ ಅಭ್ಯರ್ಥಿಗಳು ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹತೆಯನ್ನು ಹೊಂದಿದ್ದು, ಕಲಬುರಗಿ ಜಿಲ್ಲೆಯಲ್ಲಿ ಒಟ್ಟು 412 ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳನ್ನು ಭರ್ತಿಮಾಡಿಕೊಳ್ಳಲಾಗುತ್ತಿದ್ದು, ಅಭ್ಯರ್ಥಿಗಳನ್ನು ಯಾವುದೇ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭಗೊಂಡಿದ್ದು, ದಿನಾಂಕ 30-04-2026 ರ ವರೆಗೂ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ನೇಮಕಾತಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಗಾಗಿ ಈ ಒಂದು ಲೇಖನವನ್ನು ಸಂಕ್ಷಿಪ್ತವಾಗಿ ಓದಿಕೊಳ್ಳಿ.

ಹುದ್ದೆಯ ಅವಲೋಕನ:
| ನೇಮಕಾತಿ ಸಂಸ್ಥೆಗಳ ಹೆಸರು | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಲಬುರಗಿ |
| ಹುದ್ದೆಗಳ ಹೆಸರು | ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ |
| ಹುದ್ದೆಗಳ ಸಂಖ್ಯೆ | ಒಟ್ಟು 412 ಹುದ್ದೆಗಳು |
| ಉದ್ಯೋಗ ಸ್ಥಳ | ಕಲಬುರಗಿ ಜಿಲ್ಲೆಯ ಅಫಜಲಪುರ ತಾಲ್ಲೂಕಿನ ವಿವಿಧ ಗ್ರಾಮಗಳು |
| ಅರ್ಜಿ ಸಲ್ಲಿಸುವ ವಿಧಾನ | ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ |
ಹುದ್ದೆಯ ವಿವರ:
ಕಲಬುರಗಿ ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನೆಯಡಿ ಈ ಒಂದು ನೇಮಕಾತಿ ಪ್ರಕ್ರಿಯೆಯು ನಡೆಯಲಿದ್ದು, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರವೀಣ್ ಹೇರೂರ ತಿಳಿಸಿರುವಂತೆ ಹುದ್ದೆಗಳ ವಿವರ ಈ ಕೆಳಕಂಡಂತಿದೆ.
| ಹುದ್ದೆಗಳ ಹೆಸರು | ಹುದ್ದೆಗಳ ಸಂಖ್ಯೆ |
| ಅಂಗನವಾಡಿ ಕಾರ್ಯಕರ್ತೆ | 89 ಹುದ್ದೆಗಳು |
| ಅಂಗನವಾಡಿ ಸಹಾಯಕಿ | 323 ಹುದ್ದೆಗಳು |
ಹುದ್ದೆಗೆ ಸಂಬಂಧಿಸಿದ ಅರ್ಹತಾ ಮಾನದಂಡಗಳು:
ಶೈಕ್ಷಣಿಕ ಅರ್ಹತೆ:
- ಅಂಗನವಾಡಿ ಕಾರ್ಯಕರ್ತೆ:
- ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ ಕನಿಷ್ಠ 12 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. SSLC ಅಲ್ಲಿ ಕನ್ನಡ ಭಾಷೆಯಲ್ಲಿ ಓದಿರಬೇಕು.
- ಅಂಗನವಾಡಿ ಸಹಾಯಕಿ:
- ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ SSLC ಅಲ್ಲಿ ಉತ್ತೀರ್ಣರಾಗಿರಬೇಕು.
- ಇತರೆ ಅರ್ಹತೆಗಳು:
- ಅಭ್ಯರ್ಥಿಗಳು ಸ್ಥಳೀಯ ಗ್ರಾಮದ ನಿವಾಸಿ ಆಗಿರಬೇಕು.
- ಅಭ್ಯರ್ಥಿಗಳಿಗೆ ಕನ್ನಡವನ್ನು ಓದಲು ಹಾಗೂ ಬರೆಯಲು ಬರಬೇಕು.
ವಯೋಮಿತಿ ವಿವರ:
ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 19 ವರ್ಷದಿಂದ ಗರಿಷ್ಠ 35 ವರ್ಷ ವಯೋಮಿತಿಯನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ ವಿವರ:
- ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭ್ಯರ್ಥಿಗಳಿಗೆ: 5 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.
- ವಿಕಲಚೇತನ ಅಭ್ಯರ್ಥಿಗಳಿಗೆ ಸರ್ಕಾರದ ನಿಯಮಗಳ ಪ್ರಕಾರ 10 ವರ್ಷಗಳ ಕಾಲ ವಯೋಮಿತಿ ಸಡಿಲಿಕೆ ಇರುತ್ತದೆ.
ಅರ್ಜಿ ಶುಲ್ಕ:
ಕಲಬುರಗಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಅಥವಾ ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವ ಅಗತ್ಯವಿರುವುದಿಲ್ಲ. ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಸೈಬರ್ ಸೆಂಟರ್ ಮೂಲಕ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಪ್ಲಿಕೇಶನ್ ಅಪಡೇಟ್ ಮಾಡಿದ ಸೇವಾ ಶುಲ್ಕವನ್ನು ಮಾತ್ರ ಪಾವತಿಸಬೇಕಾಗುತ್ತದೆ.
ವೇತನ ಶ್ರೇಣಿ:
ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಸರ್ಕಾರ ನಿಯಮಗಳ ಪ್ರಕಾರ ಮಾಸಿಕ ವೇತನವನ್ನು ನೀಡಲಾಗುತ್ತದೆ.
- ಅಂಗನವಾಡಿ ಕಾರ್ಯಕರ್ತೆಯರಿಗೆ: ರೂ. 10,000 ದಿಂದ ರೂ. 11,500 ವರೆಗೆ ಮಾಸಿಕ ವೇತನವನ್ನು ನೀಡಲಾಗುತ್ತದೆ.
- ಅಂಗನವಾಡಿ ಸಹಾಯಕಿ: ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಮಾಸಿಕ ರೂ. 5000 ದಿಂದ ರೂ. 6500 ರ ವರೆಗೆ ವೇತನವನ್ನು ನೀಡಲಾಗುತ್ತದೆ.
ಈ ಒಂದು ಗೌರವ ಧನವು ಸರ್ಕಾರದ ನಿಯಮಗಳಂತೆ ಬದಲಾವಣೆ ಆಗುತ್ತಿದ್ದು, ಸೇವಾ ಹಿರಿತನದ ಆಧಾರದ ಮೇಲೆ ಇತರೆ ಭತ್ಯೆಗಳು ಲಭ್ಯವಿರುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:
- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ.
- ಹೋಂ ಪೇಜ್ ನಲ್ಲಿರುವ ಅಪ್ಲಿಕೇಶನ್ ಫಾರ್ಮ್ ವಿಭಾಗವನ್ನು ಆಯ್ಕೆ ಮಾಡಿ.
- ಕಲಬುರಗಿಯಲ್ಲಿ ವಾಸಿಸುತ್ತಿರುವ ಅಭ್ಯರ್ಥಿಗಳು ನಿಮ್ಮ ಜಿಲ್ಲೆ ಮತ್ತು ನಿಮ್ಮ ತಾಲ್ಲೂಕನ್ನು ಆಯ್ಕೆ ಮಾಡಿಕೊಳ್ಳಿ.
- ನೀವು ಯಾವ ಹುದ್ದೆಗೆ (ಅಂಗನವಾಡಿ ಸಹಾಯಕಿ ಅಥವಾ ಅಂಗನವಾಡಿ ಕಾರ್ಯಕರ್ತೆ) ಅರ್ಜಿ ಸಲ್ಲಿಸುತ್ತಿದ್ದೀರಾ ಎಂದು ಆಯ್ಕೆ ಮಾಡಿ.
- ನಂತರ ಫಾರ್ಮ್ ನಲ್ಲಿ ಕೇಳಲಾದ ಎಲ್ಲಾ ವೈಯಕ್ತಿಕ ವಿವರ, ಶೈಕ್ಷಣಿಕ ವಿವರಗಳನ್ನು, ಮೊಬೈಲ್ ಸಂಖ್ಯೆಯನ್ನು ಭರ್ತಿಮಾಡಿ.
- ಶೈಕ್ಷಣಿಕ ಪ್ರಮಾಣಪತ್ರ, ಆಧಾರ್ ಕಾರ್ಡ್, ವಾಸಸ್ಥಳ ದೃಢೀಕರಣ ಪತ್ರ ಹಾಗೂ ಪಾಸ್ಪೋರ್ಟ್ ಅಳತೆಯ ಫೋಟೋ ವನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ.
- ಎಲ್ಲಾ ವಿವರಗಳನ್ನು ಸರಿಯಾಗಿ ಭರ್ತಿಮಾಡಿರುವ ಕುರಿತು ಖಚಿತಪಡಿಸಿಕೊಂಡು ಸಬ್ಮಿಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.
- ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿ ಪ್ರತಿಯನ್ನು ಪ್ರಿಂಟ್ ತೆಗೆದುಕೊಳ್ಳಿ.
ಆಯ್ಕೆ ಪ್ರಕ್ರಿಯೆ:
ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ನೇಮಕಾತಿಯು ಮೆರಿಟ್ ಆಧಾರಿತವಾಗಲಿದ್ದು, ಯಾವುದೇ ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ಇರುವುದಿಲ್ಲ.
- ಮೆರಿಟ್ ಪಟ್ಟಿ:
- ಅಭ್ಯರ್ಥಿಗಳು SSLC ಹಾಗೂ PUC ಅಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿಯನ್ನು ಸಿದ್ದಪಡಿಸಲಾಗುತ್ತದೆ.
- ದಾಖಲಾತಿ ಪರೀಶೀಲನೆ:
- ಈ ಹಂತದಲ್ಲಿ ಅಭ್ಯರ್ಥಿಗಳು ಸಲ್ಲಿಸಿದ ದಾಖಲೆಗಳನ್ನು ಪರಿಶೀಲನೆ ನಡೆಸಲಾಗುತ್ತದೆ. ಅಂತಿಮವಾಗಿ ಯಾವುದೇ ಆಕ್ಷೇಪಣೆ ಇಲ್ಲದಿದ್ದರೆ ನೇಮಕಾತಿ ಆದೇಶವನ್ನು ಹೊರಡಿಸಲಾಗುತ್ತದೆ.
ಪ್ರಮುಖ ದಿನಾಂಕಗಳು:
| ಪ್ರಮುಖ ಈವೆಂಟ್ | ದಿನಾಂಕ |
|---|---|
| ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ | ಈಗಾಗಲೇ ಆರಂಭಗೊಂಡಿದೆ |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 30-04-2026 |
| ದಾಖಲೆಗಳ ಪರಿಶೀಲನೆ ದಿನಾಂಕ | ಶೀಘ್ರದಲ್ಲೇ ಪ್ರಕಟಿಸಲಾಗುತ್ತದೆ |
ಪ್ರಮುಖ ಲಿಂಕುಗಳು:
| ಅಧಿಕೃತ ವೆಬ್ಸೈಟ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ಅಧಿಸೂಚನೆ ಪಿಡಿಎಫ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಅಂತಿಮ ಮಾತು:
ಕಲಬುರಗಿ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಈಗಾಗಲೇ ಅವಕಾಶ ಕಲ್ಪಿಸಿದ್ದು, ನೀವೇನಾದರೂ ಈ ಹುದ್ದೆಗೆ ಸಂಬಂಧಿಸಿದ ಅರ್ಹತಾ ಮಾನದಂಡಗಳನ್ನು ಪೂರೈಸುವುದಾದರೆ ಇಂದೇ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಿ. ನೆನಪಿರಲಿ ಇನ್ನು ಅರ್ಜಿ ಸಲ್ಲಿಸಲು ಕೆಲವೇ ದಿನಗಳು ಅಂದರೆ 30-04-2026 ಕೊನೆಯ ದಿನಾಂಕವಾಗಿದೆ.
ಇತರೆ ಪ್ರಮುಖ ಲಿಂಕುಗಳು:
- DoA: ರೂ. 134200/- ವೇತನ! ಕರ್ನಾಟಕ ಕೃಷಿ ಇಲಾಖೆ ಭರ್ಜರಿ ನೇಮಕಾತಿ 2026 । ಮೇ 10 ಕೊನೆಯ ದಿನಾಂಕ । ಇಂದೇ ಅಪ್ಲೈ ಮಾಡಿ
- Court Job: ರೂ. 1,36,520/- ವೇತನ! ಕರ್ನಾಟಕ ಹೈಕೋರ್ಟ್ ನೇಮಕಾತಿ 2026 । ಮೇ 15 ಕೊನೆಯ ದಿನಾಂಕ
- Fireman: 1828 ಫೈರ್ ಆಪರೇಟರ್ ಹುದ್ದೆಗಳ ಬೃಹತ್ ನೇಮಕಾತಿ 2026 | SSLC ಪಾಸ್ ಅಭ್ಯರ್ಥಿಗಳಿಗೆ ಸುವರ್ಣಾವಕಾಶ!
- LIC HFL: ರೂ. 4,98,108/- ವೇತನ! ಹೌಸಿಂಗ್ ಫೈನಾನ್ಸ್ ಲಿಮಿಟೆಡ್ ನೇಮಕಾತಿ 2026 ।ಏಪ್ರಿಲ್ 30 ಕೊನೆಯ ದಿನಾಂಕ
- SSC: ರೂ. 1,51,100/- ವೇತನ! 3000+ ಹುದ್ದೆಗಳ ಬೃಹತ್ ನೇಮಕಾತಿ 2026 | ಇಂದೇ Apply ಮಾಡಿ