ಯಾದಗಿರಿಯಲ್ಲಿ ಉದ್ಯೋಗ ಮಾಡಲು ಆಸಕ್ತಿ ಹೊಂದಿರುವ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್! ಕರ್ನಾಟಕ ಸರ್ಕಾರದ ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಅಡಿಯಲ್ಲಿ ಯಾದಗಿರಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿರುವ ವಿವಿಧ ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ ಮೇಲ್ವಿಚಾರಕ ಹುದ್ದೆಗಳ ಭರ್ತಿಗೆ ಹೊಚ್ಚ ಹೊಸ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
Zilla Panchayat Recruitment 2026
ಇಲ್ಲಿ ಒಟ್ಟು 12 ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಮೇಲ್ವಿಚಾರಕ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಮಾನ್ಯತೆ ಪಡೆದ ಮಂಡಳಿಯಿಂದ ದ್ವಿತೀಯ ಪಿಯುಸಿ ಪೂರ್ಣಗೊಳಿಸಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ವಿಶೇಷವಾಗಿ ಈ ಹುದ್ದೆಗೆ ಯಾವುದೇ ಅರ್ಜಿ ಶುಲ್ಕವನ್ನು ನಿಗದಿಪಡಿಸಿಲ್ಲ ಜೊತೆಗೆ ಯಾವುದೇ ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ಇರುವುದಿಲ್ಲ ಬದಲಾಗಿ ಅಭ್ಯರ್ಥಿಗಳು ಶೈಕ್ಷಣಿಕ ಅರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಇಲ್ಲಿ ಖಾಲಿ ಇರುವ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಮೇಲ್ವಿಚಾರಕ ಹುದ್ದೆಗೆ ಸಂಬಂಧಿಸಿದ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು 13-07-2026 ರಿಂದಲೇ ಆರಂಭಗೊಂಡಿದ್ದು ಅರ್ಜಿ ಸಲ್ಲಿಸಲು 27-07-2026 ಕೊನೆಯ ದಿನಾಂಕವಾಗಿರುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಯಾದಗಿರಿ ಜಿಲ್ಲಾ ಪಂಚಾಯಿತಿಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.

ಹುದ್ದೆಯ ವಿವರಣಾತ್ಮಕ ನೋಟ:
| ನೇಮಕಾತಿ ಸಂಸ್ಥೆಯ ಹೆಸರು | ಜಿಲ್ಲಾ ಪಂಚಾಯತ್ ಕಾರ್ಯಾಲಯ, ಯಾದಗಿರಿ |
| ಹುದ್ದೆಯ ಹೆಸರು | ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕ ಹುದ್ದೆಗಳು |
| ಹುದ್ದೆಯ ಸಂಖ್ಯೆ | ಒಟ್ಟು 12 ಹುದ್ದೆಗಳು |
| ಉದ್ಯೋಗ ಸ್ಥಳ | ಯಾದಗಿರಿ – ಕರ್ನಾಟಕ |
| ಅರ್ಜಿ ಸಲ್ಲಿಸುವ ವಿಧಾನ | ಆನ್ಲೈನ್ ಮೂಲಕ |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 27-07-2026 |
ಹುದ್ದೆಯ ವಿಶ್ಲೇಷಣೆ:
ಯಾದಗಿರಿ ಜಿಲ್ಲಾ ಪಂಚಾಯತಿಯ ವಿವಿಧ ತಾಲ್ಲೂಕುಗಳ ಗ್ರಾಮ ಪಂಚಾಯತಿಯಲ್ಲಿ ಖಾಲಿ ಇರುವ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ದ್ವಿತೀಯ ಪಿಯುಸಿ ಅಲ್ಲಿ ಪಾಸ್ ಆಗಿರುವ ಹಾಗೂ ಸರ್ಟಿಫಿಕೇಟ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ಪ್ರಮಾಣಪತ್ರವನ್ನು ಹೊಂದಿರುವ ಕನಿಷ್ಠ 18 ವರ್ಷದಿಂದ 45 ವರ್ಷದೊಳಗಿನ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಯ ಸಂಕ್ಷಿಪ್ತ ವಿವರ:
| ತಾಲ್ಲೂಕುವಾರು ಹುದ್ದೆಗಳ ವಿವರ | ಹುದ್ದೆಗಳ ಸಂಖ್ಯೆ |
| ಅರಕೇರ ಕೆ – ಬಿಜಾಸಪುರ ಗ್ರಾಮ ಪಂಚಾಯಿತಿ (ಸುರಪುರ ತಾಲ್ಲೂಕು) | 1 ಹುದ್ದೆ |
| ಅನಪುರ ಗ್ರಾಮ ಪಂಚಾಯಿತಿ (ಗುರುಮಿಠಕಲ್) | 1 ಹುದ್ದೆ |
| ವರ್ಕನಳ್ಳಿ ಗ್ರಾಮ ಪಂಚಾಯಿತಿ (ಯಾದಗಿರಿ ತಾಲ್ಲೂಕು) | 1 ಹುದ್ದೆ |
| ಠಾಣಾಗುಂಡಿ ಗ್ರಾಮ ಪಂಚಾಯಿತಿ (ಯಾದಗಿರಿ ತಾಲ್ಲೂಕು) | 1 ಹುದ್ದೆ |
| ವಡಗೇರಾ ಗ್ರಾಮ ಪಂಚಾಯಿತಿ (ವರಗೇರಾ ತಾಲ್ಲೂಕು) | 1 ಹುದ್ದೆ |
| ಬಂಡಳ್ಳಿ ಗ್ರಾಮ ಪಂಚಾಯಿತಿ (ಯಾದಗಿರಿ ತಾಲ್ಲೂಕು) | 1 ಹುದ್ದೆ |
| ಕಿಲ್ಲನಕೇರಾ ಗ್ರಾಮ ಪಂಚಾಯಿತಿ (ಯಾದಗಿರಿ ತಾಲ್ಲೂಕು) | 1 ಹುದ್ದೆ |
| ನಾರಾಯಣಪುರ ಗ್ರಾಮ ಪಂಚಾಯಿತಿ (ಹುಣಸೂರು ತಾಲ್ಲೂಕು) | 1 ಹುದ್ದೆ |
| ಅರಕೇರಾ ಜಿ ಗ್ರಾಮ ಪಂಚಾಯಿತಿ (ಹುಣಸಗಿ ತಾಲ್ಲೂಕು) | 1 ಹುದ್ದೆ |
| ಮುಡುನೂರು ಕೆ ಗ್ರಾಮ ಪಂಚಾಯಿತಿ (ಹುಣಸಗಿ ತಾಲ್ಲೂಕು) | 1 ಹುದ್ದೆ |
| ಪುಟಪಾಕ ಗ್ರಾಮ ಪಂಚಾಯಿತಿ (ಗುರುಮಿಠಕಲ್ ತಾಲ್ಲೂಕು) | 1 ಹುದ್ದೆ |
| ರಾಜನಕೊಳ್ಳೂರು ಗ್ರಾಮ ಪಂಚಾಯಿತಿ (ಹುಣಸಗಿ ತಾಲ್ಲೂಕು) | 1 ಹುದ್ದೆ |
ಶೈಕ್ಷಣಿಕ ಅರ್ಹತೆ:
- ಯಾದಗಿರಿ ಜಿಲ್ಲಾ ಪಂಚಾಯತಿ ವ್ಯಾಪ್ತಿಯಲ್ಲಿರುವ ವಿವಿಧ ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ ಆಯಾ ಗ್ರಾಮ ಪಂಚಾಯತಿ ವ್ಯಾಪ್ತಿಯ ನಿವಾಸಿ ಆಗಿರಬೇಕು.
- ಮಾನ್ಯತೆ ಪಡೆದ ಮಂಡಳಿಯಿಂದ ದ್ವಿತೀಯ ಪಿಯುಸಿ ಪಾಸ್ ಆಗಿರಬೇಕು.
- ಕಡ್ಡಾಯವಾಗಿ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆಯ ಯಾವುದೇ ಸಂಸ್ಥೆಯಿಂದ 3 ತಿಂಗಳ ಕಂಪ್ಯೂಟರ್ ತರಬೇತಿ ಕೋರ್ಸ್ ಪ್ರಮಾಣಪತ್ರವನ್ನು ಹೊಂದಿರಬೇಕು
- ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ ಸೆರ್ಟಿಫಿಕೇಟ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ಪ್ರಮಾಣಪತ್ರವನ್ನು ಹೊಂದಿರಬೇಕು.
ವಯೋಮಿತಿ ವಿವರ:
ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಮೇಲ್ವಿಚಾಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು. ಗರಿಷ್ಟ ವಯೋಮಿತಿ ವಿವರ ಈ ಕೆಳಕಂಡಂತಿದೆ.
- ಸಾಮಾನ್ಯ ವರ್ಗಗಳ ಅಭ್ಯರ್ಥಿಗಳು: 40 ವರ್ಷ
- ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು: 43 ವರ್ಷ
- ಪ್ರವರ್ಗ -I, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳು: 45 ವರ್ಷ
ವಯೋಮಿತಿ ಸಡಿಲಿಕೆ:
- ಮಾಜಿ ಸೈನಿಕ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.
- ಅಂಗವಿಕಲ ಹಾಗೂ ವಿಧವಾ ಅಭ್ಯರ್ಥಿಗಳಿಗೆ: 5 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ
- ಜೀತ ವಿಮುಕ್ತ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.
ಅರ್ಜಿ ಶುಲ್ಕ:
ಯಾದಗಿರಿ ಜಿಲ್ಲಾ ಪಂಚಾಯತಿ ವ್ಯಾಪ್ತಿಯ ವಿವಿಧ ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿಸಲ್ಲಿಸುವ ಯಾವುದೇ ವರ್ಗಗಳ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವನ್ನು ನಿಗದಿಪಡಿಸಿಲ್ಲ. ಹಾಗಾಗಿ ಎಲ್ಲ ವರ್ಗಗಳ ಅಭ್ಯರ್ಥಿಗಳು ಉಚಿತವಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ವೇತನ ಶ್ರೇಣಿ:
ಸರ್ಕಾರದ ನಿಯಮಾವಳಿಗಳ ಪ್ರಕಾರ ಮೇಲ್ವಿಚಾಕರ ಹುದ್ದೆಗಳಿಗೆ ಆಯ್ಕೆಯ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ಕನಿಷ್ಠ ವೇತನವನ್ನು ನೀಡಲಾಗುತ್ತದೆ ಹಾಗೂ ಇದರೊಂದಿಗೆ ಕಾರ್ಮಿಕ ಇಲಾಖೆಯು ಕಾಲ ಕಾಲಕ್ಕೆ ನಿಗದಿಪಡಿಸುವ ವ್ಯತ್ಯಯವಾಗುವ ತುಟ್ಟಿ ಭತ್ಯೆಯನ್ನು ಸಹ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:
- ಅಭ್ಯರ್ಥಿಗಳು ಮೊದಲು ಯಾದಗಿರಿ ಜಿಲ್ಲಾ ಪಂಚಾಯತಿಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ
- ಮುಖಪುಟಲ್ಲಿ ಕಾಣುವ ಗ್ರಂಥಾಲಯ ಮೇಲ್ವಿಚಾರಕ ನೇಮಕಾತಿ ಲಿಂಕ್ ಮೇಲೆ ಕ್ಲಿಕ್ ಮಾಡಿ.
- ನಂತರ ಹುದ್ದೆಗೆ ಸಂಬಂಧಿಸಿದ ಅಪ್ಲಿಕೇಶನ್ ಫಾರ್ಮ್ ನಲ್ಲಿ ಎಲ್ಲ ವೈಯಕ್ತಿಕ ವಿವರ, ಸಂಪರ್ಕ ವಿವರ, ಶೈಕ್ಷಣಿಕ ವಿವರಗಳನ್ನು, ಅನುಭವ ವಿವರ ಹಾಗೂ ಇನ್ನಿತರ ಅಗತ್ಯ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ.
- ವಯಸ್ಸಿನ ಪುರಾವೆ, ಶೈಕ್ಷಣಿಕ ಪ್ರಮಾಣಪತ್ರ ಹಾಗೂ ಪಾಸ್ ಪೋರ್ಟ್ ಅಳತೆಯ ಫೋಟೋ ಹಾಗೂ ಇನ್ನಿತರ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ
- ಭರ್ತಿ ಮಾಡಿರುವ ಎಲ್ಲ ವಿವರಗಳು ಸರಿ ಇದೆಯೇ ಎಂದು ಖಚಿತಪಡಿಸಿಕೊಂಡು ಸಬ್ಮೀಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.
ಆಯ್ಕೆ ಪ್ರಕ್ರಿಯೆ:
ಶೈಕ್ಷಣಿಕ ಅರ್ಹತೆಯಲ್ಲಿ ಅಭ್ಯರ್ಥಿಗಳು ಗಳಿಸಿದ ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿಯನ್ನು ಸಿದ್ದಪಡಿಸಿ, ಮೀಸಲಾತಿ ನಿಯಮಾವಳಿಗಳ ಪ್ರಕಾರ ಅರ್ಹ ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಇಬ್ಬರು ಅಭ್ಯರ್ಥಿಗಳು ಸಮಾನ ಅಂಕಗಳನ್ನು ಗಳಿಸಿದ್ದರೆ, ವಯಸ್ಸಿನಲ್ಲಿ ಹಿರಿಯ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಪ್ರಮುಖ ದಿನಾಂಕಗಳು:
| ಪ್ರಮುಖ ಈವೆಂಟ್ | ದಿನಾಂಕ |
|---|---|
| ನೇಮಕಾತಿ ಅಧಿಸೂಚನೆ ಹೊರಡಿಸಿದ ದಿನಾಂಕ | 12-07-2026 |
| ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ | 13-07-2026 |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 27-07-2026 |
ಪ್ರಮುಖ ಲಿಂಕುಗಳು:
| ಅಧಿಕೃತ ವೆಬ್ಸೈಟ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ನೇಮಕಾತಿ ಅಧಿಸೂಚನೆ ಪಿಡಿಎಫ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಅಂತಿಮ ತೀರ್ಮಾನ:
ಯಾದಗಿರಿ ಜಿಲ್ಲಾ ಪಂಚಾಯಿತಿಯು ಯಾದಗಿರಿಯ ವಿವಿಧ ತಾಲ್ಲೂಕುಗಳಲ್ಲಿ ಖಾಲಿ ಇರುವ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿದ್ದು, ದ್ವಿತಿಯ ಪಿಯುಸಿ ಪೂರ್ಣಗೊಳಿಸಿದ ಹಾಗೂ ಕಂಪ್ಯೂಟರ್ ಜ್ಞಾನವನ್ನು ಹೊಂದಿರುವ ಅಭ್ಯರ್ಥಿಗಳಿಗೆ ಹಾಗೂ ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಸವಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗಾಗಿ ಯಾದಗಿರಿ ಜಿಲ್ಲಾ ಪಂಚಾಯತಿಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ ಈ ಸರ್ಕಾರಿ ಉದ್ಯೋಗವನ್ನು ತಮ್ಮದಾಗಿಸಿಕೊಳ್ಳಿ.
ಪ್ರಮುಖ ಲಿಂಕುಗಳು:
| Whatsapp Group Link | Click Here |
| Telegram Group Link | Click Here |
| Instagram Link | Click Here |
ಇತರೆ ಪ್ರಮುಖ ಲಿಂಕುಗಳು:
- KPTCL: ಕರ್ನಾಟಕ ವಿದ್ಯುತ್ ಇಲಾಖೆಯಲ್ಲಿ 1200 ಹುದ್ದೆಗಳ ಬೃಹತ್ ನೇಮಕಾತಿ! SSLC ಪಾಸ್ ಅಭ್ಯರ್ಥಿಗಳಿಗೆ ಸರ್ಕಾರಿ ಉದ್ಯೋಗಾವಕಾಶ
- Forest Watcher: ಕರ್ನಾಟಕ ಅರಣ್ಯ ಇಲಾಖೆಯಲ್ಲಿ 750 ಅರಣ್ಯ ವೀಕ್ಷಕ ಹುದ್ದೆಗಳ ನೇಮಕಾತಿ! SSLC ಪಾಸ್ ಅಭ್ಯರ್ಥಿಗಳಿಗೆ ಸರ್ಕಾರಿ ಉದ್ಯೋಗಾವಕಾಶ
- Bank Application: ರೂ. 1.07 ಲಕ್ಷ ವೇತನ! ಶಿರಸಿ ಅರ್ಬನ್ ಬ್ಯಾಂಕ್ನಲ್ಲಿ ನೇಮಕಾತಿ । SSLC /ಡಿಗ್ರಿ ಅಭ್ಯರ್ಥಿಗಳಿಗೆ ಸುವರ್ಣಾವಕಾಶ । ಜುಲೈ 28 ಕೊನೆಯ ದಿನಾಂಕ
- Nurse Application: ಕರ್ನಾಟಕ ಆರೋಗ್ಯ ಇಲಾಖೆಯಲ್ಲಿ ಭರ್ಜರಿ ನೇಮಾಕಾತಿ! 400 ನರ್ಸಿಂಗ್ ಆಫೀಸರ್ ಹುದ್ದೆಗಳು । ಇಂದೇ ಅಪ್ಲೈ ಮಾಡಿ
- Clerk Application: ಕರ್ನಾಟಕ ಲೋಕಾಯುಕ್ತ ನೇಮಕಾತಿ 2026: ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ – PUC ಪಾಸ್ ಅಭ್ಯರ್ಥಿಗಳಿಗೆ ಸರ್ಕಾರಿ ಉದ್ಯೋಗದ ಸುವರ್ಣಾವಕಾಶ!